Author: main-admin

ಎರಡು ಲಾರಿಗಳ ನಡುವೆ ಉಂಟಾದ ಮುಖಾಮುಖಿ ಡಿಕ್ಕಿಯಲ್ಲಿ ಇಬ್ಬರು ಚಾಲಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿಯ ಕುಂಬಳೆ ಆರಿಕ್ಕಾಡಿಯಲ್ಲಿ ಸಂಭವಿಸಿದೆ. ಗಾಯ ಗೊಂಡ ಚಾಲಕರನ್ನು ಕುಂಬಳೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಬಳಿಕ ಮಂಗಳೂರು ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಅಡುಗೆ ಅನಿಲ ಸಿಲಿಂಡರ್ ಹೇರಿಕೊಂಡು ತೆರಳುತ್ತಿದ್ದ ಲಾರಿ ಮತ್ತು ಇನ್ನೊಂದು ಸರಕು ಲಾರಿ ನಡುವೆ ಅಪಘಾತ ನಡೆದಿದೆ ಎನ್ನಲಾಗಿದೆ. ಢಿಕ್ಕಿಯ ರಭಸಕ್ಕೆ ನಿಯಂತ್ರಣ ತಪ್ಪಿದ ಸಿಲಿಂಡರ್ ಲಾರಿಯು ರಾಷ್ಟ್ರೀಯ ಹೆದ್ದಾರಿ ಬದಿ ಫಿಲ್ಲರ್ ನಿರ್ಮಾಣಕ್ಕೆ ತೊಡಲಾದ ಹೊಂಡಕ್ಕೆ ಬಿದ್ದಿದೆ. ಅಪಘಾತದ ಹಿನ್ನಲೆಯಲ್ಲಿ ಕೆಲ ಸಮಯ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯಾಯಿತು. ಕುಂಬಳೆ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ.

Read More

ಬೆಂಗಳೂರು : ಮಾಣೆಕ್ ಷಾ ಮೈದಾನದಲ್ಲಿ ಗಣರಾಜ್ಯೋತ್ಸವ ಆಚರಣೆಗೆ ಸಕಲ ಸಿದ್ಧತೆ ನಡೆಸಲಾಗುತ್ತಿದ್ದ, ನಗರಾದ್ಯಂತ ಪೊಲೀಸರಿಂದ ಹೆಚ್ಚಿನ ಭದ್ರತೆಯೊಂದಿಗೆ ಹೈಅಲರ್ಟ್‌ ಘೋಷಣೆ ಮಾಡಲಾಗಿದೆ. ಬೆಂಗಳೂರಲ್ಲಿ ಭದ್ರತೆಗೆ 1200ಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ. 9 ಡಿಸಿಪಿ, 16 ಎಸಿಪಿ.45 ಇನ್ಸ್‌ಪೆಕ್ಟರ್‌ಗಳು , 101 ಪಿಎಸ್‌ಐ, 14 ಮಹಿಳಾ ಪಿಎಸ್‌ಐ,83 ಎಎಸ್‌ಐ, 577 ಹೆಡ್‌ ಕಾನ್ಸ್‌ಟೇಬಲ್‌ 77 ಮಹಿಲಾ ಸಿಬ್ಬಂದಿ, ಮಪ್ತಿಯಲ್ಲಿ 172 ಸಿಬ್ಬಂದಿ ನಿಯೋಜನೆ ಹೆಚ್ಚುವರಿ ಭದ್ರತೆಗಾಗಿ 10 ಕೆಎಸ್‌ಆರ್‌ಪಿ ತುಕುಡಿ, ಸಿಎಆರ್‌ ತುಕುಡಿ, ಮಾಣಿಕ್‌ ಷಾ ಮೈದಾನದ ಸುತ್ತಮುತ್ತ 56 ಸಿಸಿ ಕ್ಯಾಮೆರಾ ಅಳವಡಿಸುವ ಮೂಲಕ ನಗರಾದ್ಯಂತ ಪೊಲೀಸರಿಂದ ಹೈಅಲರ್ಟ್‌ ಮಾಡಲಾಗಿದೆ.

Read More

ನವದೆಹಲಿ: ಪ್ರಸ್ತುತ 40 ದಿನಗಳ ಪೆರೋಲ್ ಮೇಲೆ ಹೊರಗಿರುವ ಅತ್ಯಾಚಾರ ಅಪರಾಧಿ, ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಕತ್ತಿಯಿಂದ ಕೇಕ್ ಕತ್ತರಿಸಿ ಸಂಭ್ರಮಿಸುತ್ತಿರುವುದು ಕಂಡುಬಂದಿದೆ. ಅತ್ಯಾಚಾರ ಮತ್ತು ಕೊಲೆಗಾಗಿ 20 ವರ್ಷಗಳ ಜೈಲು ಶಿಕ್ಷೆ ಅನುಭವಿಸುತ್ತಿರುವ ರಾಮ್ ರಹೀಮ್ ಶನಿವಾರ ಹರಿಯಾಣದ ರೋಹ್ಟಕ್ ಜಿಲ್ಲೆಯ ಸುನಾರಿಯಾ ಜೈಲಿನಿಂದ 40 ದಿನಗಳ ಪೆರೋಲ್‌ ಮೇಲೆ ಹೊರ ಬಂದಿದ್ದಾನೆ. ಉತ್ತರ ಪ್ರದೇಶದ ಬಾಗ್‌ಪತ್‌ನಲ್ಲಿರುವ ಅವರ ಬರ್ನಾವಾ ಆಶ್ರಮಕ್ಕೆ ಆಗಮಿಸಿದ ರಾಮ್ ರಹೀಮ್ ಕೇಕ್ ಅನ್ನು ಕತ್ತಿಯಿಂದ ಕತ್ತರಿಸುವ ಮೂಲಕ ಜೈಲಿನಿಂದ ಹೊರ ಬಂದ ಖುಷಿಯನ್ನು ಸಂಭ್ರಮಿಸಿದ್ದಾನೆ. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ ರಾಮ್ ರಹೀಮ್ ‘ಐದು ವರ್ಷಗಳ ನಂತರ ಈ ರೀತಿ ಆಚರಿಸಲು ಅವಕಾಶ ಸಿಕ್ಕಿದೆ. ಹಾಗಾಗಿ, ಕನಿಷ್ಠ ಐದು ಕೇಕ್‌ಗಳನ್ನಾದರೂ ಕತ್ತರಿಸಬೇಕು. ಇದು ಮೊದಲ ಕೇಕ್’ ಎಂದು ಹೇಳುತ್ತಿರುವುದು ಕೇಳಿಬರುತ್ತಿದೆ. ವಾಸ್ತವವಾಗಿ, ಶಸ್ತ್ರಾಸ್ತ್ರಗಳ ಕಾಯಿದೆಯ ಅಡಿಯಲ್ಲಿ ಶಸ್ತ್ರಾಸ್ತ್ರಗಳ ಸಾರ್ವಜನಿಕ ಪ್ರದರ್ಶನವನ್ನು (ಕತ್ತಿಯಿಂದ ಕೇಕ್ ಕತ್ತರಿಸುವುದು)…

Read More

ಬೆಂಗಳೂರು : ಜನವರಿ 26 ರಂದು ನಡೆಯಲಿರುವ ಗಣರಾಜೋತ್ಸವ ಸಮಾರಂಭಗಳಲ್ಲಿ ಡಾ||ಬಿ.ಆರ್. ಅಂಬೇಡ್ಕರ್ ರವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಜನವರಿ 26 ರಂದು ರಾಜ್ಯದ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಆಚರಿಸಲಾಗುವ ಗಣರಾಜ್ಯೋತ್ಸವ ಸಮಾರಂಭಗಳಲ್ಲಿ ಸಂವಿಧಾನದ ಪಿತಾಮಹ, ಭಾರತರತ್ನ ಡಾ|| ಬಿ.ಆರ್. ಅಂಬೇಡ್ಕರ್ ರವರ ಭಾವ ಚಿತ್ರವನ್ನು ಕಡ್ಡಾಯವಾಗಿ ಇಟ್ಟು ಸಮಾರಂಭವನ್ನು ಆಚರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸರ್ಕಾರದ ಅಧೀನ ಕಾರ್ಯದರ್ಶಿ ಎಸ್.ಎಸ್.ಶಿವಲಿಂಗಯ್ಯ ಆದೇಶ ಹೊರಡಿಸಿದ್ದಾರೆ.

Read More

ಮಂಗಳೂರು: ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ783 ಮಂದಿಯ ರೌಡಿ ಶೀಟ್ ತೆರವು ಮಾಡಲಾಗಿದೆ ಎಂದು ಕಮಿಷನರ್ ಶಶಿಕುಮಾರ್ ಹೇಳಿದ್ದಾರೆ. ಮಂಗಳೂರಿನ ರೋಶನಿ ನಿಲಯ ಕಾಲೇಜಿನಲ್ಲಿ ನಡೆದ ಪರಿವರ್ತನಾ ಸಭೆಯಲ್ಲಿ ಮಾತನಾಡಿದ ಕಮಿಷನರ್ ಎನ್.ಶಶಿಕುಮಾರ್, ಕಮಿಷನರೇಟ್ ವ್ಯಾಪ್ತಿಯಲ್ಲಿ ಒಟ್ಟು 2305 ಮಂದಿ ರೌಡಿಗಳಿದ್ದಾರೆ. ಅದರಲ್ಲಿ 783 ಮಂದಿಯ ರೌಡಿ ಶೀಟ್ ತೆರವು ಮಾಡಲಾಗಿದೆ. ಇನ್ನೂ 1522 ಮಂದಿ ರೌಡಿ ಶೀಟರ್ ಗಳಿದ್ದಾರೆ ಎಂದು ಹೇಳಿದ್ದಾರೆ. ಕಳೆದ ವರ್ಷ ಒಂದು ಸಾವಿರಕ್ಕೂ ಅಧಿಕ ಮಂದಿಯ ರೌಡಿ ಶೀಟ್ ತೆರವುಗೊಳಿಸಲಾಗಿತ್ತು.ಮುಂದೆ ಸಮಾಜದಲ್ಲಿ ಉತ್ತಮ‌ ವ್ಯಕ್ತಿಗಳಾಗಿ ಬದುಕಲು ಹಾಗೂ ಪೊಲೀಸ್ ಇಲಾಖೆಯೊಂದಿಗೆ ಸಂಪರ್ಕದಲ್ಲಿದ್ದು ಅಪರಾಧ ಪ್ರಕರಣಗಳನ್ನು ತಡೆಯಲು ನೆರವಾಬೇಕು ಎಂದು ಕಮಿಷನರ್ ಹೇಳಿದರು.

Read More

ನವದೆಹಲಿ : ರಾಜ್ಯ ಸರಕಾರದ ತರಗತಿಗಳಲ್ಲಿ ಹಿಜಬ್ ಧರಿಸುವುದನ್ನು ನಿರ್ಬಂಧಿಸಿ ಕೋರ್ಟ್ ಮೆಟ್ಟಿಲೇರಿರುವ ವಿಧ್ಯಾರ್ಥಿಗಳ ಪ್ರಕರಣವನ್ನು ಇತ್ಯರ್ಥಗೊಳಿಸಲು ಶೀಘ್ರದಲ್ಲಿ ತ್ರಿಸದಸ್ಯ ಪೀಠದಲ್ಲಿ ಆರಂಭಿಸಲಾಗುವುದು. ಅದಕ್ಕೆ ದಿನಾಂಕವನ್ನು ನಿಗದಿಪಡಿಸಲಾಗುವುದು ಎಂದು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಭರವಸೆ ನೀಡಿದ್ದಾರೆ ಮುಂದಿನ ತಿಂಗಳಿನಿಂದ ಪರೀಕ್ಷೆಗಳು ಪ್ರಾರಂಭವಾಗುವ ಹಿನ್ನಲೆ ಹಿಜಬ್ ವಿವಾದದ ಪ್ರಕರಣದ ವಿಚಾರಣೆಯನ್ನು ಶೀಘ್ರ ಆರಂಭಿಸುವಂತೆ ವಿದ್ಯಾರ್ಥಿನಿಯರ ಪರ ವಕೀಲೆ ಮೀನಾಕ್ಷಿ ಅರೋರಾ ಮನವಿ ಮಾಡಿದ ಹಿನ್ನೆಲೆ ಸಿಜೆಐ ಈ ಭರವಸೆ ನೀಡಿದ್ದಾರೆ. ಇಂದು ಕಲಾಪ ಆರಂಭವಾಗುತ್ತಿದ್ದಂತೆ ಈ ಬಗ್ಗೆ ಕೋರ್ಟ್ ಗಮನಕ್ಕೆ ತರಲಾಯಿತು. ಮುಂದಿನ ತಿಂಗಳು ಪ್ರಾಯೋಗಿಕ ಪರೀಕ್ಷೆಗಳನ್ನು ನಿಗದಿಪಡಿಸಲಾಗಿದ್ದು, ಪರೀಕ್ಷೆಗೆ ಮುಸ್ಲಿಂ ವಿದ್ಯಾರ್ಥಿನಿಯರು ಹಾಜರಾಗಲು ನಿರ್ಧರಿಸಿದ್ದಾರೆ. ಸಂತ್ರಸ್ತ ವಿದ್ಯಾರ್ಥಿನಿಯರು ಪರೀಕ್ಷೆಗೆ ಹಾಜರಾಗಲು ಮಧ್ಯಂತರ ನಿರ್ದೇಶನದ ಅಗತ್ಯವಿದೆ ಈ ಹಿನ್ನೆಲೆ ವಿಚಾರಣೆ ಆರಂಭಿಸಬೇಕು ಎಂದು ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಜೆಐ ಡಿವೈ ಚಂದ್ರಚೂಡ್, ಈ ಬಗ್ಗೆ ರಿಜಿಸ್ಟ್ರಾರ್ ನಲ್ಲಿ ಪ್ರಸ್ತಾಪಿಸುವಂತೆ ಸೂಚನೆ ನೀಡಿದರು ಮತ್ತು ಶೀಘ್ರದಲ್ಲಿ ತ್ರಿಸದಸ್ಯ ಪೀಠ ರಚಿಸಿ…

Read More

ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಬಾಳ ಒಟ್ಟೆ ಕಾಯರ್ ಎಂಬಲ್ಲಿ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಉಳ್ಳಾಲ ಕೋಟೆಕಾರ್ ಮಾಡೂರು ನಿವಾಸಿ ಚಂದ್ರಶೇಖರ-ಗಿರಿಜಾ ದಂಪತಿ ಪುತ್ರಿ ದಿವ್ಯಾ(26) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಈಕೆ ಒಂದೂವರೆ ವರ್ಷದ ಹಿಂದಷ್ಟೇ ಒಟ್ಟೆಕಾಯರ್ ನಿವಾಸಿ ಹರೀಶ್ ಎಂಬವರನ್ನು ಮದುವೆಯಾಗಿದ್ದರು.ದಂಪತಿ ಶನಿವಾರ ನೆರೆಮನೆಯಲ್ಲಿ ಜರುಗಿದ ಕಾರ್ಯಕ್ರಮವೊಂದಕ್ಕೆ ತೆರಳಿದ್ದರು. ಈ ವೇಳೆ ಜಗಳ ನಡೆದಿದ್ದು ದಿವ್ಯಾ ಬೇಸರಗೊಂಡು ವಾಪಸ್ ಮನೆಗೆ ಬಂದಿದ್ದರು. ಇದರಿಂದ ನೊಂದಿದ್ದ ದಿವ್ಯಾ ನಿನ್ನೆ ಸಂಜೆ ಬೆಡ್ ರೂಮ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸುರತ್ಕಲ್ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Read More

ಕರಾಚಿ: ಇಸ್ಲಾಂ ಧರ್ಮವನ್ನು ಸ್ವೀಕರಿಸಲು ನಿರಾಕರಿಸಿದ್ದಕ್ಕಾಗಿ ವಿವಾಹಿತ ಹಿಂದೂ ಮಹಿಳೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ ಘಟನೆ ಪಾಕಿಸ್ತಾನದ ದಕ್ಷಿಣ ಸಿಂಧ್ ಪ್ರಾಂತ್ಯದಲ್ಲಿ ನಡೆದಿದೆ. ಉಮರ್ಕೋಟ್ ಜಿಲ್ಲೆಯ ಸಮರೋ ಪಟ್ಟಣದಲ್ಲಿ ತನ್ನ ಮೇಲೆ ಅತ್ಯಾಚಾರವೆಸಗಲಾಗಿದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಅಪ್‌ಲೋಡ್ ಮಾಡಲಾದ ವೀಡಿಯೊದಲ್ಲಿ ಮಹಿಳೆ ಹೇಳಿದ್ದಾಳೆ. ಸ್ಥಳೀಯ ಹಿಂದೂ ಮುಖಂಡರೊಬ್ಬರು ಮಾತನಾಡಿ, ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸುವಲ್ಲಿ ಮಿರ್ಪುರ್ಖಾಸ್ ಪೊಲೀಸರು ವಿಫಲರಾಗಿದ್ದಾರೆ. ಸಂತ್ರಸ್ತ ಮಹಿಳೆ ಹಾಗೂ ಆಕೆಯ ಕುಟುಂಬದವರು ಠಾಣೆಯ ಹೊರಗೆ ಕುಳಿತಿದ್ದಾರೆ. ಆದರೆ, ಇದುವರೆಗೆ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ಆರೋಪಿಸಿದ್ದಾರೆ. ವರದಿಯ ಪ್ರಕಾರ, ಸಂತ್ರಸ್ತೆ ತನ್ನನ್ನು ಇಬ್ರಾಹಿಂ ಮ್ಯಾಂಗ್ರಿಯೊ, ಪುನ್ಹೋ ಮ್ಯಾಂಗ್ರಿಯೊ ಮತ್ತು ಅವರ ಸಹಚರರು ಅಪಹರಿಸಿದ್ದಾರೆ. ಅಪಹರಣಕಾರರು ನನ್ನನ್ನು ಇಸ್ಲಾಂಗೆ ಮತಾಂತರಗೊಳ್ಳುವಂತೆ ಒತ್ತಡ ಹೇರಿದರು. ಇದಕ್ಕೆ ಒಪ್ಪದಿದ್ದಕ್ಕೆ ನನ್ನ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಸಂತ್ರಸ್ತೆ ಹೇಳಿಕೊಂಡಿದ್ದಾರೆ.

Read More

ಕಾಸರಗೋಡು: ತಾಯಿ ಮತ್ತು ಮಗಳು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಬೇಡಡ್ಕ ಕುಂಡಂಗುಯಿಯಲ್ಲಿ ನಡೆದಿದೆ. ಕುಂಡಂಗುಯಿ ಚಂದ್ರ ಎಂಬವರ ಪತ್ನಿ ನಾರಾಯಣಿ (46) ಮತ್ತು ಪುತ್ರಿ ಶ್ರೀನಂದಾ (12)ಮೃತದೇಹ ಪತ್ತೆಯಾಗಿದೆ.ಘಟನೆ ಬಗ್ಗೆ ಅನುಮಾನ ವ್ಯಕ್ತವಾಗಿದೆ. ನಾರಾಯಣಿರವರ ಮೃತದೇಹ ನೇಣು ಬಿಗಿದು ಹಾಗೂ ಶ್ರಿನಂದಾಳ ಮೃತದೇಹ ಮನೆಯ ಕೋಣೆಯಲ್ಲಿ ಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ.ಈ ಕುರಿತು ಹೆಚ್ಚಿನ‌ ಮಾಹಿತಿ ನಿರೀಕ್ಷಿಸಲಾಗಿದೆ.

Read More

ಸುರತ್ಕಲ್: ಅಪರಿಚಿತ ಯುವಕನೊಬ್ಬನ ಮೃತದೇಹವು ಕುಳಾಯಿಗುಡ್ಡೆ ರೈಲ್ವೆ ಸೇತುವೆಯಿಂದ ಸುರತ್ಕಲ್ ಕಡೆಗೆ 200 ಮೀಟರ್ ದೂರದಲ್ಲಿರುವ ರೈಲ್ ಹಳಿಗಳ ಮೇಲೆ ಪತ್ತೆಯಾಗಿದೆ. ವ್ಯಕ್ತಿಯ ವಯಸ್ಸು ಸುಮಾರು 30 ವರ್ಷ ಎಂದು ಅಂದಾಜಿಸಲಾಗಿದ್ದು, ಈತ ರೈಲಿಗೆ ಸಿಲುಕಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಮೃತ ವ್ಯಕ್ತಿಯು ಕಪ್ಪು ನೈಟ್ ಪ್ಯಾಂಟ್, ಹಳದಿ ಬಣ್ಣದ ಪೂರ್ಣ ತೋಳಿನ ಶರ್ಟ್ ಮತ್ತು ಕಪ್ಪು ಜರ್ಕಿನ್ ಧರಿಸಿರುತ್ತಾರೆ. ಮೃತ ವ್ಯಕ್ತಿಯ ಸಂಬಂಧಿಕರು ಸುರತ್ಕಲ್ ಪೊಲೀಸ್ ಠಾಣೆಯನ್ನು 0824-2220540 ಗೆ ಸಂಪರ್ಕಿಸಲು ಕೋರಲಾಗಿದೆ.

Read More