ಬೆಳ್ತಂಗಡಿ: ತಾಲೂಕಿನ ಮದ್ದಡ್ಕ ಬಳಿ ಅಕ್ರಮವಾಗಿ ಗೋ ಮಾಂಸ ತಯಾರಿಸುತ್ತಿದ್ದ ಅಡ್ಡೆಗೆ ಪೊಲೀಸರು ದಾಳಿ ನಡೆಸಿದ ಘಟನೆ ಜ.20 ರಾತ್ರಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಮದ್ದಡ್ಕದ ಅನಿಲ ಎಂಬಲ್ಲಿಯ ಮನೆಯೊಂದರಲ್ಲಿ ಗೋ ವಧೆ ಮಾಡಿ ಅಕ್ರಮವಾಗಿ ಮಾಂಸ ತಯಾರಿಸುತ್ತಿರುವ ಬಗ್ಗೆ ಸ್ಥಳೀಯರಿಂದ ಬೆಳ್ತಂಗಡಿ ಪೊಲೀಸರಿಗೆ ಮಾಹಿತಿ ಲಭಿಸಿದ್ದು. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ರಾತ್ರಿ ವೇಳೆ ದಾಳಿ ನಡೆಸಿ ಸುಮಾರು 55 ಕೆಜಿ ಯಷ್ಟು ಗೋ ಮಾಂಸ ಹಾಗೂ ಮಾಂಸ ತಯಾರಿಸುತಿದ್ದ ಸೊತ್ತುಗಳು ಸೇರಿದಂತೆ ಆರೋಪಿಗಳನ್ನು ಬಂಧಿಸಿದ್ದಾರೆ. ಹಮೀದ್ , ಇಸ್ಮಾಯಿಲ್ ಮತ್ತು ಹಾರಿಸ್ ಎಂಬವರು ಬಂಧಿತ ಆರೋಪಿಗಳಾಗಿದ್ದಾರೆ. ಇವರ ವಿರುದ್ಧ ಕರ್ನಾಟಕ ಗೋವಧೆ ಪ್ರತಿಬಂಧಕ ಮತ್ತು ಜಾನುವಾರು ಸಂರಕ್ಷಣ ಅಧಿನಿಯಮದಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Author: main-admin
ಮಂಗಳೂರು; ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಗೆ ಸಾರ್ವಜನಿಕರು ಥಳಿಸಿ ಆತನನ್ನು ಪೊಲೀಸರಿಗೆ ಒಪ್ಪಿಸಿದ ಘಟನೆ ಕಂಕನಾಡಿ ಬಳಿ ನಡೆದಿದೆ. ಉಳ್ಳಾಲದ ನಿವಾಸಿ ನವಾಜ್ (35)ಗೆ ಥಳಿಸಲಾಗಿದೆ. ಬಾಲಕಿ ಗಿಡವೊಂದರಿಂದ ಹಣ್ಣು ಕೀಳುತ್ತಿದ್ದಾಗ ಅಲ್ಲಿಯೇ ಸಮೀಪ ಗಾರೆ ಕೆಲಸ ಮಾಡುತ್ತಿದ್ದ ನವಾಜ್ ಲೈಂಗಿಕ ಕಿರುಕುಳ ನೀಡಿದ್ದು, ಈ ವೇಳೆ ಬಾಲಕಿ ಬೊಬ್ಬೆ ಹಾಕಿದ್ದಳು. ಇದನ್ನು ಕೇಳಿ ಅಲ್ಲಿದ್ದವರು ಬಂದು ನವಾಜ್ ಗೆ ಥಳಿಸಿದ್ದಾರೆಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ವರದಿಯಾಗಿದೆ.
ಮಂಗಳೂರು: ಹಣಕ್ಕಾಗಿ ಯುವಕನೊಬ್ಬನ ಅಪಹರಣ ಮತ್ತು ಪೊಲೀಸರ ಮೇಲೆ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣಕ್ಕೆ ಸಂಬಂಧಿಸಿ ಐವರು ಆರೋಪಿಗಳನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಅಬೂಬಕರ್ ಸಿದ್ದೀಕ್ ಯಾನೆ ಕರ್ವೆಲ್ ಸಿದ್ದಿಕ್ (39), ಕಲಂದರ ಶಾಫಿ ಗಡಿಯಾರ(22), ದೇರಳಕಟ್ಟೆಯ ಇರ್ಫಾನ್(38), ಪಾಂಡೇಶ್ವರದ ಮುಹಮ್ಮದ್ ರಿಯಾಝ್(33) ಮತ್ತು ಬೆಳ್ತಂಗಡಿಯ ಮುಹಮ್ಮದ್ ಇರ್ಷಾದ್(28) ಎಂದು ಗುರುತಿಸಲಾಗಿದೆ. ಆರೋಪಿಗಳು ಗೃಹಬಂಧನದಲ್ಲಿರಿಸಿದ್ದ ಕಡಬ ತಾಲೂಕಿನ ಕೊಯಿಲ ಗ್ರಾಮದ ಶಾರೂಕ್‌ನ್ನು ಪೊಲೀಸರು ರಕ್ಷಿಸಿದ್ದಾರೆ. ಶುಕ್ರವಾರ ಬೆಳಗ್ಗಿನ ಜಾವ ಗಸ್ತಿನಲ್ಲಿದ್ದ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯ ಸಿಬ್ಬಂದಿ ಮಲ್ಲಿಕಾರ್ಜುನ ಅಂಗಡಿ ಮತ್ತು ಪ್ರದೀಪ್ ಎಂಬವರು ಅರ್ಕುಳ ಗ್ರಾಮದ ತುಪ್ಪೆಕಲ್ಲು ಎಂಬಲ್ಲಿ ಕಾರೊಂದನ್ನು ನಿಲ್ಲಿಸಿ ಅನುಮಾನಾಸ್ಪದವಾಗಿ ನಿಂತಿದ್ದವರನ್ನು ಐವರನ್ನು ಪ್ರಶ್ನಿಸಿದ್ದರು. ಈ ವೇಳೆ ಐವರು ಪೊಲೀಸರತ್ತ ಕಲ್ಲು ತೂರಾಟ ನಡೆಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿ ಪರಾರಿಯಾಗಿದ್ದರು. ಈ ಸಂಬಂಧ ಮಂಗಳೂರು ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಕೊಂಡು ಕಾರ್ಯಾಚರಣೆ ನಡೆಸಿ ಐವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಬೆಂಗಳೂರಿನ ರೌಡಿ ಶೀಟರ್…
ಬಿಹಾರ;ಇಬ್ಬರು ಮಹಿಳಾ ಪೊಲೀಸರು ರಸ್ತೆಯಲ್ಲೇ ವೃದ್ಧರೊಬ್ಬರಿಗೆ ಲಾಟಿಯಿಂದ ಥಳಿಸಿರುವ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಡಿಯೋವನ್ನು ಪತ್ರಕರ್ತ ಮುಖೇಶ್ ಸಿಂಗ್ ಟ್ವಿಟ್ಟರ್ನಲ್ಲಿ ಹಂಚಿಕೊಂಡಿದ್ದು, ವೃದ್ಧನನ್ನು ಇಬ್ಬರು ಪೊಲೀಸರು ಪಬ್ಲಿಕ್ ನಲ್ಲಿ ಥಳಿಸುವುದು ವಿಡಿಯೋದಲ್ಲಿ ಸೆರೆಯಾಗಿದೆ. ಈ ವಿಡಿಯೊವನ್ನು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿರುವ ಸಿಂಗ್, ಈ ಇಬ್ಬರು ಮಹಿಳಾ ಪೊಲೀಸ್ ಆಧಿಕಾರಿಗಳು ಹೊಡೆಯುತ್ತಿರುವ 70 ವರ್ಷದ ವೃದ್ಧ ಹೆಸರು ಪಾಂಡೆ ಜಿ ಎಂದು ಹೇಳಿದ್ದಾರೆ. ಅವರು ನಿವೃತ್ತ ಶಿಕ್ಷಕರಾಗಿದ್ದರು. ಬೈಸಿಕಲ್ ನಲ್ಲಿ ಬಿದ್ದಾಗ ಎದ್ಧೇಳಲು ತಡವಾಗಿದ್ದಕ್ಕೆ ಹಲ್ಲೆ ನಡೆಸಿದ್ದಾರೆಂದು ಆರೋಪಿಸಲಾಗಿದೆ. https://twitter.com/Mukesh_Journo/status/1616634771102388225?ref_src=twsrc%5Etfw%7Ctwcamp%5Etweetembed%7Ctwterm%5E1616634771102388225%7Ctwgr%5Ebe200da8310e5c2bd8ed7c87e7a549fb35107e27%7Ctwcon%5Es1_&ref_url=http%3A%2F%2Fkannadadainika.com%2Fbihara-police-teacher%2F
ಕಾಸರಗೋಡು:ನಾಪತ್ತೆಯಾಗಿದ್ದ ಅನ್ಯಕೋಮಿನ ಜೋಡಿ ಲಾಡ್ಜ್‌ವೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ರಾಜಾಪುರ ಕಲ್ಲಾರು ಒಕ್ಲಾವು ನಿವಾಸಿ ಮಹಮ್ಮದ್ ಶರೀಫ್ (40) ಮತ್ತು ಕಲ್ಲಾರು ಅಡಕಂ ಪುಲಿಕುಳಿಯ ಸಿಂಧು (36)ಮೃತರು ಎಂದು ಗುರುತಿಸಲಾಗಿದೆ. ಜನವರಿ 7ರಂದು ಇಬ್ಬರೂ ನಾಪತ್ತೆಯಾಗಿದ್ದರು.ಈ ಕುರಿತು ನಾಪತ್ತೆ ಪ್ರಕರಣ ದಾಖಲಿಸಿ ಪೊಲೀಸರು ಹುಡುಕಾಟ ನಡೆಸುತ್ತಿದ್ದರು. ಇದೀಗ ಗುರುವಾಯೂರು ಪಡಿಯಾರ ನಾಡೆಯ ಲಾಡ್ಜ್‌ನ ಕೊಠಡಿಯೊಳಗೆ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಇಬ್ಬರೂ ಪತ್ತೆಯಾಗಿದ್ದಾರೆ ಎಂದು ವರದಿ ತಿಳಿಸಿದೆ.
ಬೆಂಗಳೂರು: ರಾಜ್ಯದಲ್ಲಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪ್ರತಿಪಕ್ಷ ಕಾಂಗ್ರೆಸ್ 108 ರಿಂದ 114 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆ ಇದೆ ಎಂದು ಸಮೀಕ್ಷೆಯೊಂದು ತಿಳಿಸಿದೆ. ಐಪಿಎಸ್‌ಎಸ್ ತಂಡದ ಸಹಯೋಗದೊಂದಿಗೆ ಹೈದರಾಬಾದ್ ನ ಎಸ್‌ಎಎಸ್ ಗುಂಪು ನಡೆಸಿದ ಸಮೀಕ್ಷೆಯಲ್ಲಿ ಈ ಅಂಶಗಳು ಬಹಿರಂಗವಾಗಿದ್ದು, ಕಾಂಗ್ರೆಸ್ ನ ಮತಗಳಿಕೆಯಲ್ಲೂ ಹೆಚ್ಚಳದ ಸಾಧ್ಯತೆ ಇದೆ ಎನ್ನಲಾಗಿದೆ. ರಾಜ್ಯದಲ್ಲಿ ಆಡಳಿತಾರೂಢ ಬಿಡೆಪಿ 65 ರಿಂದ 75 ಮತ್ತು ಜೆಡಿಎಸ್ 24 ರಿಂದ 34 ಸ್ಥಾನಗಳನ್ನು ಗೆಲ್ಲಲಿದೆ ಎಂದು ಸಮೀಕ್ಷೆ ತಿಳಿಸಿದೆ. ಇದಲ್ಲದೆ ಸಣ್ಣ ಪಕ್ಷಗಳು ಮತ್ತು ಸ್ವತಂತ್ರರು ಏಳು ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ ಎಂದು ಸಮೀಕ್ಷೆ ಹೇಳಿದೆ.
ಮಂಗಳೂರು: ತಿಂಗಳ ಮೂರನೇ ಶನಿವಾರವಾದ ಜ.21ರ ಬೆಳಿಗ್ಗೆ 11 ಗಂಟೆಯಿಂದ ಬಂಟ್ವಾಳ ತಾಲೂಕಿನ ಮಾಣಿಲ ಗ್ರಾಮದ ಮುರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ಗ್ರಾಮ ವಾಸ್ತವ್ಯ ಮಾಡಲಿದ್ದಾರೆ. ಅಲ್ಲಿನ ಗ್ರಾಮಸ್ಥರಿಂದ ಅಹವಾಲು ಸ್ವೀಕರಿಸಿ, ಕೆಲವೊಂದು ಸಮಸ್ಯೆಗಳನ್ನು ಸ್ಥಳದಲ್ಲಿಯೇ ಬಗೆಹರಿಸಲಿದ್ದಾರೆ. ಆದಕಾರಣ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ಅಲ್ಲಿ ಹಾಜರಿರುವಂತೆ ಅಪರ ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಂಗಳೂರು: ಗಸ್ತು ನಿರತ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿ ಅವರ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ ಆರೋಪದಡಿ ಐವರ ವಿರುದ್ಧ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಾಗಿದೆ. ಮಂಗಳೂರು ಗ್ರಾಮಾಂತರ ಠಾಣೆಯ ಮಲ್ಲಿಕಾರ್ಜುನ ಅಂಗಡಿ ಎಂಬವರು ಪೊಲೀಸ್ ಕಾನ್‌ಸ್ಟೇಬಲ್ ಪ್ರದೀಪ್ ನಾಗನ ಗೌಡರೊಂದಿಗೆ ಜ.20ರ ಮುಂಜಾವ 2ಕ್ಕೆ ಅರ್ಕುಳ ಜಂಕ್ಷನ್‌ನಿಂದ ತುಪ್ಪೆಕಲ್ಲು ಕಡೆಗೆ ಹೋಗುತ್ತಿದ್ದರು. ಈ ವೇಳೆ ರೈಲ್ವೆ ಹಳಿಯ ಪಕ್ಕದಲ್ಲಿರುವ ಕಾಂಕ್ರಿಟ್ ರಸ್ತೆಯ ಬಳಿಯ ಖಾಲಿ ಸ್ಥಳದಲ್ಲಿ ಬಿಳಿ ಬಣ್ಣದ ಆಲ್ಟೋ ಕಾರೊಂದರ ಬಳಿ ಇಬ್ಬರು ಮತ್ತು ಕಾರಿನೊಳಗೆ ಮೂವರಿದ್ದರು ಎನ್ನಲಾಗಿದೆ. ಗಸ್ತುನಲ್ಲಿದ್ದ ಮಲ್ಲಿಕಾರ್ಜುನ ಅಂಗಡಿಯವರು ‘ನೀವು ಇಲ್ಲಿ ಏನು ಮಾಡುತ್ತಿದ್ದೀರಿ? ಎಂದು ಕೇಳಿ ಅವರ ಕಡೆಗೆ ಟಾರ್ಚ್ ಹಾಯಿಸಿದ್ದಾರೆ. ಆಗ ಕಾರಿನ ಹೊರಗಡೆ ನಿಂತಿದ್ದ ಇಬ್ಬರು ಪೊಲೀಸರತ್ತ ಕಲ್ಲುಗಳನ್ನು ಎತ್ತಿ ಎಸೆದಿದ್ದಾರೆ ಎನ್ನಲಾಗಿದೆ. ಅವರು ಎಸೆದ ಕಲ್ಲುಗಳು ಇಬ್ಬರು ಪೊಲೀಸರ ಕೈಗೆ ತಾಗಿ ತರಚಿದ ಗಾಯಗಳಾಗಿವೆ. ಕಾರಿನ ಹೊರಗಡೆ ಇದ್ದ ಇಬ್ಬರು ಕಾರಿಗೆ…
ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಅಧಿಕಾರಿಗಳು ಬೆಂಗಳೂರಿನ ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ಶುಕ್ರವಾರ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದಾರೆ. 1,500 ಪುಟಗಳ ಚಾರ್ಜ್‌ಶೀಟ್‌ನಲ್ಲಿ 240 ಸಾಕ್ಷಿಗಳ ಹೇಳಿಕೆಗಳು ಒಳಗೊಂಡಿದ್ದು, ಒಟ್ಟು 20 ಆರೋಪಿಗಳನ್ನು ಉಲ್ಲೇಖೀಸಲಾಗಿದೆ ಎನ್ನಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 14 ಆರೋಪಿಗಳನ್ನು ಬಂಧಿಸಲಾಗಿದ್ದು, 6 ಮಂದಿಗಾಗಿ ಹುಡುಕಾಟ ನಡೆದಿದೆ. ಎನ್‌ಐಎ ಪರ ವಕೀಲರಾದ ಪಿ. ಪ್ರಸನ್ನ ಕುಮಾರ್ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ. ಈ ನಡುವೆ ಪ್ರಕರಣದ ಆರೋಪಿಗಳಾಗಿ ತಲೆಮರೆಸಿಕೊಂಡಿರುವ ಬಂಟ್ವಾಳ ತಾಲೂಕಿನ ಕೊಡಾಜೆಯ ಮೊಹಮ್ಮದ್ ಷರೀಫ್, ನೆಕ್ಕಿಲಾಡಿಯ ಅಗ್ನಾಡಿ ಹೌಸ್‌ನ ಮಸೂದ್ ಕೆ.ಎ. ಅವರ ಸುಳಿವು ನೀಡಿದವರಿಗೆ ಎನ್‌ಐಎ ತಲಾ 10 ಲಕ್ಷ ರೂ. ಬಹುಮಾನ ಘೋಷಿಸಿದೆ. ಪ್ರವೀಣ್ ನೆಟ್ಟಾರು ಅವರನ್ನು 2022ರ ಜು. 26 ರಂದು ಬೆಳ್ಳಾರೆಯಲ್ಲಿರುವ ಅವರ ಕೋಳಿ ಅಂಗಡಿ ಬಳಿ ಹತ್ಯೆ ಮಾಡಲಾಗಿತ್ತು.
ವಾಹನಗಳಿಂದ ಉಂಟಾಗುವ ಮಾಲಿನ್ಯವನ್ನು ಕಡಿಮೆ ಮಾಡಲು ಮತ್ತು ವಾಹನಗಳ ಇಂಧನ ಕ್ಷಮತೆಯನ್ನು ಹೆಚ್ಚಿಸಲು, ಭಾರತ ಸರ್ಕಾರವು ‘ವಾಹನ ಸ್ಕ್ರ್ಯಾಪ್ ನೀತಿ’ಯನ್ನು ಪರಿಚಯಿಸಿದೆ. ಈ ನೀತಿಯಡಿ ದೇಶದಲ್ಲಿ 15 ವರ್ಷ ಹಳೆಯ ನೋಂದಣಿಯನ್ನು ಕಡ್ಡಾಯವಾಗಿ ರದ್ದುಗೊಳಿಸಲಾಗುತ್ತದೆ. ನೋಂದಣಿಯನ್ನು ನವೀಕರಿಸಿದ (15 ವರ್ಷಗಳ ನಂತರ) ವಾಹನಗಳನ್ನು ಸ್ವಯಂಚಾಲಿತವಾಗಿ ರದ್ದುಗೊಳಿಸಲಾಗಿದೆ ಎಂದು ಪರಿಗಣಿಸಲಾಗುತ್ತದೆ. ಅಂತಹ ಎಲ್ಲಾ ಹಳೆಯ ವಾಹನಗಳನ್ನು ನೋಂದಾಯಿತ ಸ್ಕ್ರ್ಯಾಪ್ ಕೇಂದ್ರದಲ್ಲಿ ವಿಲೇವಾರಿ ಮಾಡಬೇಕಾಗುತ್ತದೆ. ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಅಧಿಸೂಚನೆಯ ಪ್ರಕಾರ, 15 ವರ್ಷಕ್ಕಿಂತ ಹಳೆಯದಾದ ಎಲ್ಲಾ ಸರ್ಕಾರಿ ವಾಹನಗಳನ್ನು ಏಪ್ರಿಲ್ 1 ರಿಂದ ರದ್ದುಗೊಳಿಸಲಾಗುವುದು. ಈ ನಿಯಮವು ದೇಶದ ರಕ್ಷಣೆಗಾಗಿ ಮತ್ತು ಕಾನೂನು ಮತ್ತು ಸುವ್ಯವಸ್ಥೆ ಮತ್ತು ಆಂತರಿಕ ಭದ್ರತೆಯ ನಿರ್ವಹಣೆಗಾಗಿ ಕಾರ್ಯಾಚರಣೆ ಉದ್ದೇಶಗಳಿಗಾಗಿ ಬಳಸುವ ವಿಶೇಷ ಉದ್ದೇಶದ ವಾಹನಗಳಿಗೆ (ಶಸ್ತ್ರಸಜ್ಜಿತ ಮತ್ತು ಇತರ ವಿಶೇಷ ವಾಹನಗಳಿಗೆ) ಅನ್ವಯಿಸುವುದಿಲ್ಲ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅಧಿಸೂಚನೆಯ ಪ್ರಕಾರ, ‘ವಾಹನದ ಆರಂಭಿಕ ನೋಂದಣಿ ದಿನಾಂಕದಿಂದ 15 ವರ್ಷಗಳು ಪೂರ್ಣಗೊಂಡ ನಂತರ ಅಂತಹ ವಾಹನಗಳನ್ನು…










