ಬಂಟ್ವಾಳ : ಭಾರೀ ಗಾಳಿ ಮಳೆಗೆ ಕೋಳಿ ಸಾಕಣೆ ಮಾಡುವ ಶೆಡ್ ಏಕಾಏಕಿ ಕುಸಿದು ಬಿದ್ದ ಪರಿಣಾಮ ಸುಮಾರು ಒಂದುವರೆ ಸಾವಿರ ಕೋಳಿಗಳು ಸಾವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕು ಕುಳ ಗ್ರಾಮದ ಸೇಕೆಹಿತ್ಲು ಎಂಬಲ್ಲಿ ಗುರುವಾರ ತಡರಾತ್ರಿ ನಡೆದಿದೆ. ಬಂಟ್ವಾಳ ತಾಲೂಕು ಕುಳ ಗ್ರಾಮದ ಸೇಕೆಹಿತ್ಲು ನಿವಾಸಿ ರಾಘವ ಅವರ ಮಾಲಕತ್ವದ ಶೆಡ್ ಇದಾಗಿದೆ. ಸುಮಾರು 2,200 ಕೋಳಿಗಳನ್ನು ಅವರು ಸಾಕಣೆ ಮಾಡುತ್ತಿದ್ದರು. ಈ ಪೈಕಿ 700 ಕೋಳಿಗಳು ದೊಡ್ಡದಾಗಿದ್ದವು. ಈ ಹಿನ್ನೆಲೆ 700 ಕೋಳಿಗಳನ್ನು ಮಾರಾಟ ಮಾಡಲಾಗಿತ್ತು. ಶೆಡ್ಡಿನ ಮೇಲ್ಛಾವಣಿ ಏಕಾಏಕಿ ಕುಸಿದು ಬಿದ್ದ ಹಿನ್ನೆಲೆ ಸುಮಾರು 1,500 ಕೋಳಿಗಳು ಅದರಡಿಗೆ ಬಿದ್ದು ಮೃತಪಟ್ಟಿದೆ. ಘಟನೆಯಿಂದಾಗಿ ಶೆಡ್ ಸಂಪೂರ್ಣ ನಾಶವಾಗಿದ್ದು, ಅಪಾರ ನಷ್ಟ ಸಂಭವಿಸಿದೆ ಎಂದು ಹೇಳಲಾಗಿದೆ.
Author: main-admin
ಮಂಗಳೂರು: ಮಂಗಳೂರಿನ ಕೋಡಿಕಲ್ ವಿವೇಕಾನಂದ ನಗರದಲ್ಲಿ ನಡೆದ ಮನೆಗಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಗಂಗೌಡನಹಳ್ಳಿ ಎಂಬಲ್ಲಿ ಬಂಧಿಸಿದ್ದಾರೆ. ವೆಂಕಟೇಶ್ ಅಲಿಯಾಸ್ ವೆಂಕಿ(21), ಸಾಗರ್ (21), ರಂಜಿತ್(20) ಬಂಧಿತ ಆರೋಪಿಗಳು. ಜುಲೈ 6ರಂದು ಉರ್ವ ಠಾಣಾ ವ್ಯಾಪ್ತಿಯ ಕೋಡಿಕಲ್ ವಿವೇಕಾನಂದ ನಗರ ಎಂಬಲ್ಲಿ ಮನೆಗೆ ನುಗ್ಗಿ ಕಳ್ಳರು 80 ಗ್ರಾಂನಷ್ಟು ಚಿನ್ನಾಭರಣ ಕಳವು ಮಾಡಿದ್ದರು. ಸದ್ಯ ಪೊಲೀಸರು ಆರೋಪಿಗಳನ್ನು ಬೆಂಗಳೂರಿನಲ್ಲಿ ವಶಕ್ಕೆ ಪಡೆದು ಕಳವುಗೈದ ಸುಮಾರು 4,64,750 ರೂ. ಮೌಲ್ಯದ ಚಿನ್ನಾಭರಣಗಳನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೆ ಕೃತ್ಯಕ್ಕೆ ಬಳಸಿದ ಸ್ಕೂಟರ್ ಅನ್ನು ಸ್ವಾಧೀನ ಪಡಿಸಿಕೊಳ್ಳಲಾಗಿದೆ. ಆರೋಪಿಗಳನ್ನು ದಸ್ತಗಿರಿ ಮಾಡಿ ಘನ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿರುತ್ತದೆ.
ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ ಕುಂಟಿಕಾನದಲ್ಲಿ ನಡೆದಿದೆ. ಕಾರಿನಲ್ಲಿ ತಂದೆ, ಮಗಳು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ವೇಗವಾಗಿ ಚಲಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅಪಘಾತ ರಭಸಕ್ಕೆ ಕಾರು ನಜ್ಜುಗುಜ್ಜಾಗಿದ್ದು ಕಾರಿನಲ್ಲಿದ್ದವರು ಪ್ರಾಣಪಾಯದಿಂದ ಪಾರಾಗಿದ್ದಾರೆ. ಸಣ್ಣ ಪುಟ್ಟ ಗಾಯವಾಗಿದ್ದು ಇಬ್ಬರನ್ನೂ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದು ಕೆಲ ದಿನಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆ ಸುರಿಯುತ್ತಿದ್ದು, ವೇಗ ಹಾಗೂ ಅಜಾರುಕತೆಯ ಚಾಲನೆಯಿಂದ ರಸ್ತೆ ಅಪಘಾತಗಳು ಹೆಚ್ಚಾಗುತ್ತಿವೆ.
ಬಜಪೆ: ಗಾಂಜಾ ಸೇವನೆ ಮಾಡುತ್ತಿದ್ದ ಮೂವರನ್ನು ಬಜಪೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮಂಗಳೂರು ಬಲ್ಮಠದ ಆರ್ಯ ಸಮಾಜ ರಸ್ತೆ, ಸನ್ಯಾಸಿಗುಡ್ಡೆಯ ನಿವಾಸಿ ನೌಫಾಲ್ (38), ಕುಪ್ಪೆಪದವಿನ ಕಿಲೆಂಜಾರು ಗ್ರಾಮದ ನಿವಾಸಿ ಹಂಝು(59) ಹಾಗೂ ಚಿಕ್ಕಮಗಳೂರು ಜಿಲ್ಲೆಯ ಎನ್ .ಅರ್ ಪುರ ತಾಲೂಕಿನ ಬಂಡಿಹೊಳೆ ಗ್ರಾಮದ ನಿವಾಸಿ ಸುದಾರ್ಶನ್ (25) ಈ ಮೂವರನ್ನು ಬಜಪೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಗಳು ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕಿನ್ನಿಪದವು, ತಾರಿಕಂಬ್ಳ ಮತ್ತು ಶಾಂತಿಗುಡ್ಡೆ ಕಡೆಗಳಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದರು ಎಂಬುದು ಪೊಲೀಸ್ ಮೂಲಗಳು ತಿಳಿಸಿದೆ. ಬಜಪೆ ಪೊಲೀಸ್ ನಿರೀಕ್ಷಕರಾದ ಸಂದೀಪ್ ಜಿ.ಎಸ್ ಅವರ ತಂಡ ಆರೋಪಿಗಳನ್ನು ಪತ್ತೆಹಚ್ಚಿದ್ದು, ಆರೋಪಿಗಳ ವಿರುದ್ದ ಕಾನೂನು ಕ್ರಮವನ್ನು ಕೈಗೊಂಡಿದ್ದಾರೆ.
ಮಂಗಳೂರು : ಮಹಾನಗರ ಪಾಲಿಕೆ ಆಯುಕ್ತರ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಿದ್ದು, ಬೆಳ್ಳಂಬೆಳಗ್ಗೆ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ನೀಡಿದೆ. ಪಾಲಿಕೆ ಆಯುಕ್ತ ಕೆಎ ಎಸ್ ಗ್ರೇಡ್ ಅಧಿಕಾರಿ ಆನಂದ್ ಎಂಬವರ ನಿವಾಸದ ಮೇಲೆ ದಾಳಿ ನಡೆಸಿದ್ದು, ಕಮಿಷನರ್ ಕಚೇರಿ ಹಾಗೂ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರು, ಶಿವಮೊಗ್ಗ, ಯಾದಗಿರಿ, ತುಮಕೂರು, ಬೆಂಗಳೂರು ಗ್ರಾಮಾಂತರ ಸಹಿತ 52 ಕಡೆಗಳಲ್ಲಿ ಏಕಕಾಲಕ್ಕೆ ನೂರಕ್ಕೂ ಅಧಿಕ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ನಡೆಸಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ನಾಳೆ ಅಂದರೆ ಜು.19ರಂದು ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕುಗಳ ಶಾಲಾ-ಕಾಲೇಜುಗಳಿಗೆ ಮಾತ್ರ ರಜೆ ಘೋಷಣೆ ಮಾಡಿಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಇದೀಗ ಆದೇಶ ಹೊರಡಿಸಿದ್ದಾರೆ. ಅದರಂತೆ ಈ ಐದು ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ & ಪಿಯು ಕಾಲೇಜುಗಳಿಗೆ ಶುಕ್ರವಾರ ರಜೆಯನ್ನು ನೀಡಲಾಗಿದೆ. ಆದರೆ, ಮಂಗಳೂರು, ಉಳ್ಳಾಲ, ಮೂಡಬಿದಿರೆ, ಮೂಲ್ಕಿ ತಾಲೂಕಿನ ಶಾಲಾ-ಕಾಲೇಜುಗಳಿಗೆ ಶುಕ್ರವಾರ ರಜೆ ಇರುವುದಿಲ್ಲ.
ಮಾಣಿ: ಶಿರಾಡಿ ಘಾಟ್ ನಲ್ಲಿ ಗುಡ್ಡ ಕುಸಿದಿರುವುದರಿಂದ ಸಕಲೇಶಪುರ, ಹಾಸನ, ಬೆಂಗಳೂರು ತೆರಳುವ ವಾಹನಗಳು ಬದಲಿ ರಸ್ತೆಯಲ್ಲಿ ಸಂಚಾರ ನಡೆಸುವಂತೆ ಮಾಣಿಯಲ್ಲಿ ಬ್ಯಾರಿಕೇಡ್ ಅಳವಡಿಸಿರುವ ಪೊಲೀಸರು ಆ ದಾರಿಯಾಗಿ ಬರುವ ವಾಹನ ಸವಾರರಿಗೆ ಮಾಹಿತಿ ನೀಡಿ ಬದಲಿ ರಸ್ತೆಯನ್ನು ಬಳಸುವಂತೆ ತಿಳಿಸುತ್ತಿದ್ದಾರೆ. ಕಳೆದ ಕೆಲ ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿರಾಡಿ ಘಾಟ್ ನಲ್ಲಿ ಗುಡ್ಡ ಕುಸಿದು ವಾಹನ ಸಂಚಾರಕ್ಕೆ ಸಮಸ್ಯೆಯಾಗಿದೆ. ಶಿರಾಡಿ ಘಾಟ್ ನಲ್ಲಿ ಗುಡ್ಡ ಕುಸಿದಿದ್ದು, ಈ ಹಿನ್ನಲೆ ಸಕಲೇಶಪುರ, ಹಾಸನ, ಬೆಂಗಳೂರು ತೆರಳುವ ವಾಹನಗಳು ಮಡಿಕೇರಿ, ಮೈಸೂರು ಮಾರ್ಗವಾಗಿ ತೆರಳುವಂತೆ ಅಧಿಕಾರಿಗಳು ತಿಳಿಸಿದ್ದಾರೆ. ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಮಾಣಿಯಲ್ಲಿ ಬ್ಯಾರಿಕೇಡ್ ಅಳವಡಿಸಿದ್ದು, ಸಕಲೇಶಪುರ, ಹಾಸನ, ಬೆಂಗಳೂರು ತೆರಳುವ ವಾಹನಗಳನ್ನು ಬದಲಿ ರಸ್ತೆ ಮೂಲಕ ಚಲಿಸುವಂತೆ ಸೂಚಿಸಲಾಗುತ್ತಿದೆ.
ಉಡುಪಿ: ನಗರದ ಸಗ್ರಿ ರೈಲು ಸೇತುವೆ ಸಮೀಪದ ರೈಲು ಹಳಿಯ ಬಳಿ ವ್ಯಕ್ತಿಯೊಬ್ಬರ ಮೃತದೇಹ ಬುಧವಾರ ತಡರಾತ್ರಿ ಪತ್ತೆಯಾಗಿದೆ. ಮೃತವ್ಯಕ್ತಿಯನ್ನು ಉಡುಪಿ ಮೂಡಬೆಟ್ಟು ನಿವಾಸಿ ಪ್ರಸಾದ್ ಆಚಾರ್ಯ ಎಂದು ಗುರುತಿಸಲಾಗಿದೆ. ವ್ಯಕ್ತಿಯ ತಲೆ ಭಾಗ ಛಿದ್ರಗೊಂಡಿದ್ದು, ರೈಲು ಬಡಿದು ಅಥವಾ ರೈಲು ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಮಣಿಪಾಲ ಠಾಣೆಯ ಎಸ್ ಐ ರಾಘವೇಂದ್ರ ಸಿ ಹಾಗೂ ತಂಡ ಮಹಜರು ಪ್ರಕ್ರಿಯೆ ನಡೆಸಿದರು. ಬಳಿಕ ಸಮಾಜಸೇವಕ ನಿತ್ಯಾನಂದ ಒಳಕಾಡು ಅವರ ಸಹಕಾರದಿಂದ ಮೃತದೇಹವನ್ನು ಮಣಿಪಾಲದ ಶವಗಾರಕ್ಕೆ ರವಾನಿಸಲಾಯಿತು. ಸ್ಥಳದಲ್ಲಿ ಆಧಾರ್ ಚೀಟಿ ಪತ್ತೆಯಾಗಿದೆ. ಮಣಿಪಾಲ ಪೋಲಿಸರು ಮತ್ತು ರೈಲ್ವೆ ಪೋಲಿಸರು ಕಾನೂನು ಪ್ರಕ್ರಿಯೆ ನಡೆಸಿದರು.
ಪುತ್ತೂರು: ಐರಾವತ್ ಬಸ್ ಗೆ ಬೆಂಕಿ ಹತ್ತಿಕೊಂಡ ಘಟನೆ ಉಪ್ಪಿನಂಗಡಿಯ ಹಳೆಗೇಟು ಬಳಿ ಇಂದು ನಡೆದಿದೆ. ಸ್ಥಳೀಯರ ನೆರವಿನಿಂದ ಬೆಂಕಿ ನಂದಿಸಲಾಗಿದ್ದು, ಈ ವೇಳೆ ರಸ್ತೆಯ ಗುಂಡಿಯಲ್ಲಿದ್ದ ನೀರು ನೆರವಿಗೆ ಬಂದಿದೆ. ಬೆಂಗಳೂರಿನಿಂದ – ಮಂಗಳೂರಿಗೆ ಆಗಮಿಸುತ್ತಿದ್ದ ಐರಾವತ ಬಸ್ಸಿನ ಹಿಂಬದಿ ಎಂಜಿನ್ ಬಳಿ ಬೆಂಕಿ ಹತ್ತಿಕೊಂಡಿದ್ದು, ಇದನ್ನು ಗಮನಿಸಿದ ಚಾಲಕ ಹಳೆಗೇಟು ಬಳಿ ಬಸ್ಸನ್ನು ನಿಲ್ಲಿಸಿದ್ದಾನೆ. ಆಗ ಪ್ರಯಾಣಿಕರೆಲ್ಲರೂ ಬಸ್ಸಿನಿಂದ ಇಳಿದಿದ್ದಾರೆ. ಕೂಡಲೇ ಸ್ಥಳದಲ್ಲಿದ್ದ ಜನರು ರಸ್ತೆಯಲ್ಲಿದ್ದ ಕೆಸರು, ಮಣ್ಣು, ನೀರನ್ನು ಬಸ್ಸಿಗೆ ಎರಚಿ ಬೆಂಕಿಯನ್ನು ಹತೋಟಿಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ.
ಮಂಗಳೂರು: ನಗರದ ಕಾವೂರು ಠಾಣಾ ವ್ಯಾಪ್ತಿಯ ‘ದಿಯಾ ಸಿಸ್ಟಮ್ಸ್’ ಸಾಫ್ಟ್ವೇರ್ ಕಂಪನಿಯ ಚಾಲಕರ ನಡುವೆ ಬುಧವಾರ ರಾತ್ರಿ ಜಗಳ ನಡೆದಿದ್ದು, ಒಬ್ಬ ಚಾಲಕನಿಗೆ ನಾಲ್ವರ ಗುಂಪು ಗಂಭೀರವಾಗಿ ಹಲ್ಲೆ ನಡೆಸಿದೆ. ಸಂದೀಪ್ ಹಲ್ಲೆಗೊಳಗಾದ ಚಾಲಕ. ಅದೇ ಕಂಪನಿಯ ಇನ್ನೊಬ್ಬ ಕಾರು ಚಾಲಕ ತೇಜಸ್ ಶೆಟ್ಟಿ, ಆತನ ಸೋದರ ಭವಿತ್ ಶೆಟ್ಟಿ, ಗೆಳೆಯರಾದ ಪ್ರೀತಮ್ ಹಾಗೂ ಪುನೀತ್ ದೇವಾಡಿಗ ಹಲ್ಲೆ ನಡೆಸಿದ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ತೇಜಸ್ ಶೆಟ್ಟಿ ಸಂದೀಪ್ ವಿರುದ್ಧ ಹಳೆ ವೈಷನ್ಯ ಹೊಂದಿದ್ದ. ಬುಧವಾರ ರಾತ್ರಿ ತನ್ನ ಪಾಳಿಯ ಕೆಲಸ ಮುಗಿದ ಬಳಿಕ ಆತ ಸೋದರ ಭವಿತ್ ಶೆಟ್ಟಿ, ಗೆಳೆಯರಾದ ಪ್ರೀತಮ್, ಪುನೀತ್ ದೇವಾಡಿಗ ಜೊತೆ ಸೇರಿ, ಕೆಲಸ ಮುಗಿಸಿ ತೆರಳುತ್ತಿದ್ದ ಸಂದೀಪ್ ಜೊತೆ ಜಗಳವಾಡಿದ್ದ. ನಾಲ್ವರು ಸೇರಿ ಮಾರಕ ಆಯುಧದಿಂದ ಸಂದೀಪ್ ಮೇಲೆ ಹಲ್ಲೆ ನಡೆಸಿದ್ದು. ತಲೆ ಮತ್ತಿತರ ಭಾಗಗಳಿಗೆ ಗಂಭೀರವಾದ ಗಾಯಗಳಾಗಿವೆ. ಗಾಯಾಳುವನ್ನು ಎ.ಜೆ. ಆಸ್ಪತ್ರೆಗೆ ದಾಖಲಿಸಲಾಗಿದೆ. ಜಗಳಕ್ಕೆ ಕಾರಣಗಳೇನು ಎಂಬುದು ಇನ್ನೂ ತಿಳಿದಿಲ್ಲ.…