Author: main-admin

ಉಳ್ಳಾಲ: ಉಳ್ಳಾಲ ಠಾಣಾಧಿಕಾರಿ ಸಂದೀಪ್ ಅವರ ಹೆಸರಿನಲ್ಲಿ ಇನ್ಸ್ಟಾಗ್ರಾಂ ನಕಲಿ ಖಾತೆಯನ್ನು ತೆರೆದಿರುವ ಹ್ಯಾಕರ್ ಗಳು ಹಲವರಲ್ಲಿ ಹಣಕ್ಕಾಗಿ ಬೇಡಿಕೆಯನ್ನು ಇಡುತ್ತಿದ್ದಾರೆ. ಈ ಕುರಿತು ಠಾಣಾಧಿಕಾರಿ ತನ್ನ ಇನ್ಸ್ಟಾಗ್ರಾಂ ಹಾಗೂ ಫೇಸ್ ಬುಕ್ ಮುಖಪುಟದಲ್ಲಿ ದೂರು ಹಂಚಿಕೊಂಡಿದ್ದಾರೆ. ಕಳೆದ ಎರಡು ದಿನಗಳಿಂದ ನಕಲಿ ಇನ್ಸ್ಟಾಗ್ರಾಂ ಖಾತೆ ತೆರೆದು ಸಂದೀಪ್ ಅವರ ಸ್ನೇಹಿತರಲ್ಲಿ ಹಣಕ್ಕಾಗಿ ಬೇಡಿಕೆ ಇಡಲಾಗಿದೆ. ಎಲ್ಲಾ ಸ್ನೇಹಿತರಲ್ಲಿ ಕಷ್ಟದಲ್ಲಿರುವ ಕಾರಣ ಹೇಳಿ 7,500 ರೂ ಕೊಡುವಂತೆ ಸಂದೇಶ ಹಾಕಲಾಗುತ್ತಿದೆ. ಇದು ಠಾಣಾಧಿಕಾರಿ ಗಮನಕ್ಕೆ ಬಂದು ಸಾಮಾಜಿಕ ಜಾಲತಾಣಗಳಲ್ಲಿ ಹಣ ನೀಡದಂತೆ ಸಂದೇಶ ಹಾಕಿದ್ದಾರೆ.ಮಂಗಳೂರು ಪೊಲೀಸ್ ಕಮೀಷನರ್ ಶಶಿಕುಮಾರ್ ಸೇರಿದಂತೆ ಗಣ್ಯರು, ಪತ್ರಕರ್ತರ ಫೇಸ್ ಬುಕ್ ಅಕೌಂಟ್ ಗಳನ್ನು ಹ್ಯಾಕ್ ಮಾಡಿ ಸ್ನೇಹಿತರನ್ನು ಮತ್ತೆ ತನ್ನ ಖಾತೆಗೆ ಸೇರಿಸಿಕೊಂಡು ಹಣವನ್ನು ಕೇಳುವ ಜಾಲ ದ.ಕ ಜಿಲ್ಲೆಯಾದ್ಯಂತ ಹಲವು ತಿಂಗಳಿನಿಂದ ನಡೆಯುತ್ತಿದೆ. ಈ ಕುರಿತು ಸೈಬರ್ ಸೆಲ್‍ನಲ್ಲಿ ಹಲವು ಪ್ರಕರಣಗಳು ದಾಖಲಾಗಿದ್ದು, ಹ್ಯಾಕರ್ ಗಳ ಪತ್ತೆ ಅಸಾಧ್ಯವಾಗುತ್ತಿದೆ. ಮೂಲವೊಂದರ ಪ್ರಕಾರ ಉತ್ತರಭಾರತ ಮೂಲದ ರೈತರುಗಳ…

Read More

ಉಪ್ಪಿನಂಗಡಿ: ಟಯರ್ ರಿಸೋಲ್‌ ಸಂಸ್ಥೆಯೊಂದರಲ್ಲಿ ಏರ್‌ ಕಂಪ್ರೈಸರ್‌ ಸ್ಫೋಟಗೊಂಡು ಓರ್ವ ಮೃತಪಟ್ಟ ಘಟನೆಉಪ್ಪಿನಂಗಡಿಯ ಗಾಂಧಿಪಾರ್ಕ್‌ ಬಳಿ ನಡೆದಿದೆ. ಆಲಂಕಾರು ನಿವಾಸಿ ರಾಜೇಶ್ ಪೂಜಾರಿ (43) ಮೃತ ವ್ಯಕ್ತಿ. ಏರ್ ಕಂಪ್ರೆಸರ್ ಸ್ಫೋಟಗೊಂಡು ಗಂಭೀರ ಗಾಯಗೊಂಡಿದ್ದ ರಾಜೇಶ್ ಅವರನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ಕರೆತರಲಾಗಿದೆ ಆದರೆ ಅವರು ಮೃತಪಟ್ಟಿದ್ದರು. ಇನ್ನು ಸ್ಫೋಟದಿಂದಾಗಿ ಅಂಗಡಿಯಲ್ಲೆ ಹೊಗೆ ಕಾಣಿಸಿದೆ. ಅಂಗಡಿಗೂ ಹಾನಿಯಾಗಿದೆ. ಸ್ಥಳಕ್ಕೆ ಉಪ್ಪಿನಂಗಡಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More

ಮಂಗಳೂರು: ನಗರದ ಮಣಪ್ಪುರಂ ಫೈನಾನ್ಸ್‌ನ ಉದ್ಯೋಗಿಯಾಗಿದ್ದ ಯುವತಿಯೊಬ್ಬಳು ನಾಪತ್ತೆಯಾದ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಮಲಾಕ್ಷ ಎಂಬವರ ಪುತ್ರಿ ಶಿವಾನಿ (20) ಕಾಣೆಯಾದ ಯುವತಿ. ಈಕೆ ಜ.16ರಂದು ಬೆಳಗ್ಗೆ 7ಕ್ಕೆ ಕೆಲಸಕ್ಕೆ ತೆರಳಿದ್ದು, ಸಂಜೆ 6 ಗಂಟೆಯಾದರೂ ಮರಳಿ ಬಂದಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ. ಮೊಬೈಲ್ ಸ್ವಿಚ್ ಆಫ್ ಆಗಿದ್ದು ಸಂಸ್ಥೆಯ ಸಿಬ್ಬಂದಿಯವರಲ್ಲಿ ವಿಚಾರಿಸಿದಾಗಲೂ ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ 5.6 ಅಡಿ ಎತ್ತರದ, ಬಿಳಿ ಮೈಬಣ್ಣದ, ದಪ್ಪಮುಖದ, ಸಾಧಾರಣ ಮೈಕಟ್ಟಿನ ಈಕೆ ತುಳು ಮತ್ತು ಕನ್ನಡ ಭಾಷೆ ಮಾತನಾಡುತ್ತಾರೆ.ಮನೆಯಿಂದ ಹೊರಟು ಹೋದಾಗ ಹಸಿರು ಬಣ್ಣದ ಟಾಪ್ ಹಾಗೂ ಗೋಲ್ಡನ್ ಕಲರ್ ಪ್ಯಾಂಟ್ ಧರಿಸಿರುತ್ತಾರೆ. ಈಕೆಯನ್ನು ಕಂಡವರು ಸುರತ್ಕಲ್ ಠಾಣೆ (0824-2220540, 9480805360, 9480802345) ಅಥವಾ ಮಂಗಳೂರು ನಗರ ಕಂಟ್ರೋಲ್ ರೂಮ್ (0824-2220800) ಮಾಹಿತಿ ನೀಡಬಹುದು ಎಂದು ಪ್ರಕಟನೆ ತಿಳಿಸಿದೆ.

Read More

ಲಾರಿ ಹಾಗೂ ಬೈಕ್ ಮಧ್ಯೆ ಉಡುಪಿಯ ಬ್ರಹ್ಮಾವರ ಮಂಜುನಾಥ್ ಪೆಟ್ರೋಲ್ ಬಂಕ್ ಬಳಿಯ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಮಂಗಳವಾರ ರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಕೋಟದ ಸಮಿತ್ ಕುಮಾರ್ ಹಾಗೂ ವಾಗೀಶ್ ಎಂದು ಗುರುತಿಸಲಾಗಿದೆ ಇವರು ಉಡುಪಿಯ ಪೂರ್ಣ ಪ್ರಜ್ಜ ಸಂಧ್ಯಾ ಕಾಲೇಜಿನ ವಿದ್ಯಾರ್ಥಿಗಳಾಗಿದ್ದರು. ಇವರು ಕಾಲೇಜು ಮುಗಿಸಿ ರಾತ್ರಿ ಮನೆಗೆ ಬೈಕಿನಲ್ಲಿ ವಾಪಸ್ ಹೋಗುತ್ತಿದ್ದ ವೇಳೆ ಎದುರಿನಲ್ಲಿದ್ದ ಲಾರಿಯನ್ನು ಓವರ್ ಟೇಕ್ ಮಾಡುವ ಭರದಲ್ಲಿ ಲಾರಿಗೆ ಹಿಂದಿನಿಂದ ಬೈಕ್ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡ ಇವರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮಡಿಕೇರಿ : ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ನಾಂಗಲ ಗ್ರಾಮದಲ್ಲಿ ಯುವತಿಯನ್ನು ಬರ್ಬರವಾಗಿ ಹತ್ಯೆ ಮಾಡಿ ಕೆರೆಗೆ ಹಾರಿದ್ದ ತಿಮ್ಮಯ್ಯನ ಶವ ಪತ್ತೆಯಾಗಿದೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ನಾಂಗಲ ಗ್ರಾಮದಲ್ಲಿ ಸೋಮವಾರ 23 ವರ್ಷದ ಆರತಿ ಎಂಬ ಯುವತಿಯನ್ನು ಬರ್ಬರವಾಗಿ ಹತ್ಯೆಗೈದು ಯುವತಿ ಮನೆಯ ಬಳಿಯ ಇರುವ ಕೆರೆಗೆ ಹಾರಿದ್ದ ಆರೋಪಿ ತಿಮ್ಮಯ್ಯ ಶವ 3 ದಿನಗಳ ಬಳಿಕ ಪತ್ತೆಯಾಗಿದೆ. ವಿರಾಜಪೇಟೆ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Read More

ಬೆಂಗಳೂರು : ಅತ್ಯಾಚಾರಕ್ಕೊಳಗಾಗಿದ್ದ ಸಂತ್ರಸ್ತೆಯನ್ನು ಮದುವೆಯಾಗಿ ಬಾಳು ನೀಡಿದ ಆರೋಪಿ ವಿರುದ್ಧದ ಪ್ರಕರಣವನ್ನು ರದ್ದು ಮಾಡಿ ಹೈಕೋರ್ಟ್ ಆದೇಶ ಹೊರಡಿಸಿದೆ. ಬೆಂಗಳೂರಿನ ಯುವತಿಯೊಬ್ಬರು ಅ.2022 ರಲ್ಲಿ ಪೊಲೀಸರಿಗೆ ಅತ್ಯಾಚಾರದ ದೂರು ನೀಡಿದ್ದರು. ಹುಟ್ಟು ಹಬ್ಬದ ಆಚರಣೆಗಾಗಿ ಮನೆಗೆ ಕರೆದು ಮದ್ಯಪಾನ ಮಾಡಿ ತನ್ನ ಮೇಲೆ ಅತ್ಯಾಚಾರ ಎಸಗಿದ್ದನು ಎಂದು ಆರೋಪಿಸಿದ್ದರು. ನಂತರ ಪೊಲೀಸರು ಆರೋಪಿ ವಿರುದ್ಧ ಅತ್ಯಾಚಾರ , ಜೀವ ಬೆದರಿಕೆ ಆರೋಪಗಳಡಿ ಎಫ್ ಐ ಆರ್ ದಾಖಲಿಸಿದ್ದರು. ನಂತರ ಸಂತ್ರಸ್ತೆಯನ್ನು ಆರೋಪಿ ವಿವಾಹವಾದರೂ ಕೂಡ ಪೊಲೀಸರು ಆರೋಪಿಯನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದರು. ಇದನ್ನು ಪ್ರಶ್ನಿಸಿ ಆರೋಪಿ ಪ್ರಕರಣವನ್ನು ರದ್ದುಮಾಡುವಂತೆ ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದನು. ಈ ಕುರಿತು ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಅರ್ಜಿದಾರರ ಪರ ವಕೀಲರ ವಾದ ಆಲಿಸಿ ಸಂತ್ರಸ್ತೆಯನ್ನು ಚೆನ್ನಾಗಿ ನೋಡಿಕೊಳ್ಳಬೇಕೆಂದು ಸೂಚಿಸಿ ಪ್ರಕರಣವನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ.

Read More

ಹೈದರಾಬಾದ್​: ನನ್ನಿಂದ ನನ್ನ ಮಗುವಿನ ಸಾವನ್ನು ನೋಡಲಾರೆ ಅಂತಾ ತಾಯಿಯೊಬ್ಬಳು ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಹೈದರಾಬಾದ್​ನ ಕೆಪಿಎಚ್​ಬಿ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸ್ವಾತಿ (38) ಮೃತ ದುರ್ದೈವಿ. ವೃತ್ತಿಯಲ್ಲಿ ಸಾಫ್ಟ್​ವೇರ್​ ಇಂಜಿನಿಯರ್​ ಆಗಿದ್ದಳು. ಸ್ವಾತಿ ಮತ್ತು ಆಕೆಯ ಪತಿ ಶ್ರೀಧರ್​ 8 ವರ್ಷದ ಓರ್ವ ಮಗನಿದ್ದಾನೆ. ಈ ವಯಸ್ಸಿನಲ್ಲಿ ಆಡಿ ನಲಿಯಬೇಕಾಗಿದ್ದ ಮಗ ಅಂಗವೈಕಲ್ಯದಿಂದ ಬಳಲುತ್ತಿದ್ದಾನೆ. ಆದರೂ ಸ್ವಾತಿಗೆ ತನ್ನ ಮಗನೆಂದರೆ ಎಲ್ಲಿಲ್ಲದ ಪ್ರೀತಿ. ಆದರೆ, ಪತಿಗೆ ಮಾತ್ರ ಮಗನ ಮೇಲೆ ಒಂಚೂರು ಪ್ರೀತಿ ಇಲ್ಲ. ಹೀಗಾಗಿ ಶ್ರೀಧರ್​ ಕುಟುಂಬ, ಸ್ವಾತಿಗೆ ಕಿರುಕುಳ ನೀಡಲು ಆರಂಭಿಸಿತು. ಮಗನಿಗೆ ದಯಾಮರಣ ಕೋರಿ ರಾಷ್ಟ್ರಪತಿಗೆ ಅರ್ಜಿ ಸಲ್ಲಿಸುವಂತೆ ಸ್ವಾತಿಯನ್ನು ಶ್ರೀಧರ್​ ಒತ್ತಾಯಿಸುತ್ತಿದ್ದ. ಆದರೆ, ಸ್ವಾತಿ ಮಾತ್ರ ಇದಕ್ಕೆ ಒಪ್ಪಿಗೆ ಸೂಚಿಸಲಿಲ್ಲ. ಆದ್ದರಿಂದ ಆಕೆಯ ಮೇಲಿನ ಕಿರುಕುಳ ಇನ್ನಷ್ಟು ಹೆಚ್ಚಾಯಿತು. ಅದನ್ನು ತಾಳಲಾರದೇ ಮತ್ತು ಮುಂದೊಂದು ದಿನ ಹೇಗಾದರೂ ಮಾಡಿ ನನ್ನ ಮಗನನ್ನು ಇವರೆಲ್ಲ ಸೇರಿ ಸಾಯಿಸುತ್ತಾರೆ. ನನ್ನಿಂದತೂ ಮಗ ಸಾಯುವುದನ್ನು…

Read More

ಪುತ್ತೂರು:ಮನೆಗೆ ನುಗ್ಗಿ ಯುವತಿಯನ್ನು‌ ಚೂರಿಯಿಂದ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಪುತ್ತೂರಿ‌ನ ಮಂಡೂರು ಬಳಿ ನಡೆದಿದೆ. ಕಂಪದ ಎಂಬಲ್ಲಿನ 23 ವರ್ಷದ ಜಯಶ್ರೀಗೆ ಚೂರಿಯಿಂದ ಇರಿಯಲಾಗಿದೆ.ಆಕೆಯನ್ನು ಆಸ್ಪತ್ರೆಗೆ ಸಾಗಿಸುವ ದಾರಿ‌ ಮಧ್ಯೆಮೃತಪಟ್ಟಿದ್ದಾಳೆ. ಯುವತಿಯ ಮೃತದೇಹ ಪುತ್ತೂರಿನ ಆಸ್ಪತ್ರೆಯಲ್ಲಿದೆ. ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Read More

ಕೊಟ್ಟಿಗೆಹಾರ: ಕಾಫಿನಾಡಿನ ದಿಟ್ಟ ಪ್ರತಿಭೆ ಸುಷ್ಮಾ ಎಸ್. ಶೆಟ್ಟಿ ‘ಮಿಸ್ ಮಂಗಳೂರು’ ಕಿರೀಟ ಮುಡಿಗೇರಿಸುವ ಮೂಲಕ ಪ್ರತಿಭಾವಂತೆಯಾಗಿ ಹೊರ ಹೊಮ್ಮಿದ್ದಾರೆ. ಮೂಡಿಗೆರೆಯ ಸಂತ ಮಾರ್ಥಾಸ್ ಶಾಲೆಯಲ್ಲಿ ಪ್ರೌಢಶಾಲೆ ವ್ಯಾಸಂಗ ಮುಗಿಸಿದ ವಿದ್ಯಾರ್ಥಿನಿ ಸುಷ್ಮಾ ಹಲವು ಕನಸುಗಳನ್ನು ಕಂಡಾಕೆ. ಪಿಯುಸಿ ವ್ಯಾಸಂಗವನ್ನು ಮಡಂತ್ಯಾರು ಸೆಕ್ರೇಡ್ ಹಾರ್ಟ್ ಕಾಲೇಜಿನಲ್ಲಿ ಮುಗಿಸಿದ್ದಾರೆ. ಇವರಿಗೆ ವಿದ್ಯಾಭ್ಯಾಸದೊಂದಿಗೆ ನೃತ್ಯ, ಭರತನಾಟ್ಯ, ಮಾಡೆಲಿಂಗ್, ಆಂಕರಿಂಗ್, ಭಾಷಣ ಕಲೆಯಲ್ಲಿ ತುಂಬಾ ಆಸಕ್ತಿ ಹೊಂದಿದ್ದಾರೆ. ಅದರೊಂದಿಗೆ ಕೆಡೆಟ್ ಎನ್.ಸಿ.ಸಿ. ಏರ್ ವಿಂಗ್ ನಲ್ಲಿ ಸಕ್ರೀಯವಾಗಿ ಭಾಗವಹಿಸಿದ್ದರು. ಶಾಲಾ ಹಂತದಲ್ಲಿ ನೃತ್ಯ ಸ್ಪರ್ಧೆಗಳಲ್ಲಿ ಹಲವು ಬಹುಮಾನಗಳನ್ನು ಪಡೆದು ಸಾಧನೆ ಮಾಡಿದ್ದಾರೆ. ಕಲಿಕೆಯಲ್ಲೂ ಮುಂದಿದ್ದ ಸುಷ್ಮಾ ಹಲವು ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಂಡ ಪ್ರತಿಭೆ. ಸಂತ ಆಗ್ನೇಸ್ ಕಾಲೇಜಿನಲ್ಲಿ ಬಿಬಿಎ ಮುಗಿಸಿದರು. ಶ್ರೀದೇವಿ ಇನ್ಸ್ ಟ್ಯೂಟ್ ಆಫ್ ಟೆಕ್ನಾಲಿಜಿ ಕೆಂಜಾರು ಕಾಲೇಜಿನಲ್ಲಿ ಎಂಬಿಎ ಪದವಿ ಮುಗಿಸಿದ ಇವರಿಗೆ ಏನಾದರೂ ಜೀವನದಲ್ಲಿ ಸಾಧಿಸಬೇಕೆಂಬ ಛಲ ಮನೆ ಮಾಡಿತ್ತು. ಇವರ ತಂದೆ ಬಿ.ಸುರೇಶ್ ಶೆಟ್ಟಿ ಬಣಕಲ್ ಕನ್ನಡ ಸಾಹಿತ್ಯ ಪರಿಷತ್ತಿನ…

Read More

ಬೆಂಗಳೂರು: ತನ್ನ ತಂದೆಯ ಸಾಲಕ್ಕೆ ಖಾತ್ರಿಯಾಗಿ ಪುತ್ರ ಚೆಕ್ ನೀಡಿದ್ದರೇ, ಆತ ಕೂಡ ಸಾಲಕ್ಕೆ ಜವಾಬ್ದಾರನಾಗಲಿದ್ದು, ಮಗ ಮರುಪಾವತಿ ಮಾಡಬೇಕು ಎಂಬುದಾಗಿ ಕರ್ನಾಟಕ ಹೈಕೋರ್ಟ್ ಆದೇಶಿಸಿದೆ. ಈ ಸಂಬಂಧ ದಾವಣಗೆರೆಯ ಪ್ರಸಾದ್ ರಾಯ್ಕರ್ ಎಂಬುವರು ಸಲ್ಲಿಸಿದ್ದಂತ ಕ್ರಿಮಿನಲ್ ಮೇಲ್ಮನವಿ ವಿಚಾರಣೆ ನಡೆಸಿದಂತ ನ್ಯಾಯಮೂರ್ತಿ ಕೆ.ನಟರಾಜನ್ ಅವರನ್ನೊಳಗೊಂಡ ಏಕಸದಸ್ಯ ನ್ಯಾಯಪೀಠವು, ನೆಗೋಷಿಯಬಲ್ ಇನ್ಸ್ಟ್ರುಮಂಟ್ ಕಾಯಿದೆಯ ಪ್ರಕಾರ, ತಂದೆಯ ಸಾಲಕ್ಕೆ ಭದ್ರತೆಯಾಗಿ ಮಗ ಚೆಕ್ ನೀಡಿದ್ದರೇ, ಆತ ಕೂಡ ಸಾಲಕ್ಕೆ ಜವಾಬ್ದಾರನಾಗುತ್ತಾನೆ. ಮಗ ಮರು ಪಾವತಿ ಮಾಡಬೇಕು ಎಂಬುದಾಗಿ ತಿಳಿಸಿದೆ. ಇನ್ನೂ ಮೃತ ವ್ಯಕ್ತಿಯ ಮಗನಾಗಿದ್ದರೇ, ಮೃತ ತಂದೆಯು ದೂರುದಾರನಿಂದ ಸಾಲ ಪಡೆದಿದ್ರೇ, ಮರು ಪಾವತಿಯ ಒಪ್ಪಿ, ಪುತ್ರ ಅದಕ್ಕೆ ಖಾತ್ರಿಯನ್ನು ನೀಡಿದ್ದರೇ, ಮಗ ತಂದೆಯ ಸಾಲದ ಹಣವನ್ನು ಮರುಪಾವತಿ ಮಾಡಲೇಬೇಕು ಎಂದು ಆದೇಶದಲ್ಲಿ ನ್ಯಾಯಪೀಠವು ತಿಳಿಸಿದೆ. ಅಂದಹಾಗೇ ದಾವಣಗೆರೆಯ ಆರೋಪಿ ದಿನೇಶ್ ತಂದೆ ಭರಮಪ್ಪ, ಮಾರ್ಚ್ 7, 2003ರಂದು 2.6 ಲಕ್ಷ ಹಣವನ್ನು ಪ್ರಸಾದ್ ರಾಯ್ಕರ್ ಎಂಬುವರಿಂದ ಶೇ.2ರ ಬಡ್ಡಿ ದರದಲ್ಲಿ ಪಡೆದಿದ್ದರು.…

Read More