ಬಂಟ್ವಾಳ: ಪಾಟ್ನಾ ಬಾಂಬ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಮೂಲದ ನಾಲ್ವರು ಆರೋಪಿಗಳ ಮನೆಗೆ ಎನ್.ಐ.ಎ ತಂಡ ದಾಳಿ ನಡೆಸಿದೆ. ನಂದಾವರ ನಿವಾಸಿಗಳಾದ ಮಹಮ್ಮದ್ ಸಿನಾನ್, ಇಕ್ಬಾಲ್, ಸರ್ಪಾಜ್ ನವಾಜ್, ನೌಫಲ್ ಮನೆಗೆ ದಾಳಿ ನಡೆದಿದ್ದು, ಈ ಆರೋಪಿಗಳು ಪಾಟ್ನಾದ ಪ್ರಧಾನಿ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಭಯೋತ್ಪಾದಕರ ಜೊತೆ ಸಂಪರ್ಕ ಹೊಂದಿ ಹಣಕಾಸಿನ ನೆರವು ಒದಗಿಸಿದ್ದರು ಎನ್ನಲಾಗಿದೆ.ಈ ಕೃತ್ಯಕ್ಕೆ ಸಂಬಂಧಿಸಿದಂತೆ ಭಯೋತ್ಪಾದಕರ ವಿವಿಧ ಖಾತೆಗಳಿಗೆ ಕೋಟ್ಯಾಂತರ ರೂಪಾಯಿ ಹಣದ ವರ್ಗಾವಣೆ ಮಾಡಲಾಗಿದೆ ಎಂಬ ಆರೋಪ ಇವರ ಮೇಲಿದೆ ಎನ್ನಲಾಗಿದೆ.ಈ ಹಿನ್ನೆಲೆಯಲ್ಲಿ ಎನ್.ಐ.ಎ ತಂಡ ನಿನ್ನೆ ಸಂಜೆ ವೇಳೆ ದಾಳಿ ನಡೆದಿದೆ ಎನ್ನಲಾಗಿದೆ.
Author: main-admin
ಚೆನ್ನೈ : ಇತ್ತೀಚೆಗಷ್ಟೇ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆಯಾಗಿ ನೇಮಕಗೊಂಡ ಬಹುಭಾಷಾ ನಟಿ ಹಾಗೂ ರಾಜಕಾರಣಿ ಖುಷ್ಬೂ ಸುಂದರ್ ಅವರು ತಾವು ಬಾಲ್ಯದಲ್ಲಿ ಅನುಭವಿಸಿದ ನೋವನ್ನು ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಹೊರಹಾಕಿದ್ದಾರೆ. “ನಾನು ತಂದೆಯಿಂದಲೇ ಲೈಂಗಿಕ ಮತ್ತು ದೈಹಿಕವಾಗಿ ಕಿರುಕುಳಕ್ಕೊಳಗಾಗಿದ್ದೆ. ನನಗೆ ಆಗ 8 ವರ್ಷ ವಯಸ್ಸಾಗಿತ್ತು. ಒಂದು ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ನಡೆದ ಬಳಿಕ ಆ ಗಾಯದ ಗುರುತು ಜೀವನ ಪರ್ಯಂತ ಉಳಿಯುತ್ತದೆ. ಮಗು ಗಂಡೋ ಅಥವಾ ಹೆಣ್ಣೋ ಎಂಬುದಿಲ್ಲಿ ಮುಖ್ಯವಲ್ಲ” ಎಂದು ಹೇಳಿದ್ದಾರೆ. “ನನ್ನ ತಾಯಿ ಅತ್ಯಂತ ಅಸಹನೀಯ ದಾಂಪತ್ಯ ಜೀವನ ಅನುಭವಿಸಿದ್ದರು. ಹೆಂಡತಿ ಮತ್ತು ಮಕ್ಕಳಿಗೆ ಹೊಡೆಯುವುದು ಹಾಗು ತನ್ನದೇ ಏಕೈಕ ಮಗಳನ್ನು ಲೈಂಗಿಕವಾಗಿ ಬಳಸಿಕೊಳ್ಳುವುದನ್ನು ನನ್ನ ತಂದೆ ಜನ್ಮಸಿದ್ಧ ಹಕ್ಕು ಎಂದು ಭಾವಿಸಿದ್ದರು. ನನ್ನ ಮೇಲೆ ನಡೆದ ದೌರ್ಜನ್ಯದ ನೋವು ನನ್ನನ್ನೂ ಕಾಡುತ್ತಲೇ ಇತ್ತು. ನನಗೆ 15 ವರ್ಷ ತುಂಬಿದಾಗ ತಂದೆ ನಡೆಸಿದ ದೌರ್ಜನ್ಯ, ನಿಂದನೆಯ ವಿರುದ್ಧ ಮಾತನಾಡುವ ಧೈರ್ಯ ಮಾಡಿದೆ” ಎಂದು ಖುಷ್ಬೂ…
ಮಂಗಳೂರು: ಕೆಲ ತಿಂಗಳ ಹಿಂದೆ ನಡೆದಿದ್ದಂತ ಮಂಗಳೂರಿನಲ್ಲಿ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಪೋಟಕ ಪ್ರಕರಣ ಸಂಬಂಧ, ಇಂದು ಕೊನೆಗೂ ಪ್ರಕರಣದ ಹೊಣೆಗಾರಿಕೆಯನ್ನು ಐಎಸ್‌ಐಎಸ್ ತಾನೇ ನಡೆದಿರೋದಾಗಿ ಒಪ್ಪಿಕೊಂಡಿದೆ. ಈ ಕುರಿತಂತೆ ಮಾಹಿತಿಯನ್ನು ಬಿಡುಗಡೆ ಮಾಡಿರುವಂತ ಐಸಿಸ್ ಸಂಘಟನೆಯು, ಮಂಗಳೂರು ಮತ್ತು ಕೊಯಮತ್ತೂರು ಸ್ಪೋಟಕವನ್ನು ಮಾಡಿದ್ದು ತಾನೇ ಎಂಬುದಾಗಿ ಹೊಣೆ ಹೊತ್ತುಕೊಂಡಿದೆ. ಈ ಬಗ್ಗೆ ಐಎಸ್ ಕೆಪಿ ನಿಯತಕಾಲಿಕ ವಾಯ್ಸ್ ಆಫ್ ಕೋರಸನ್ ನಲ್ಲಿ ಪ್ರಕಟಿಸಲಾಗಿದೆ. ಇದರಲ್ಲಿ ಐಸಿಸ್ ವಕ್ತಾರರೊಬ್ಬರುಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಮಾಡಿಸಿದ್ದು ತಾವೇ ಎಂಬುದಾಗಿ ಹೇಳಿದ್ದಾರೆ ಎನ್ನಲಾಗಿದೆ. ಅಂದಹಾಗೇ ಮಂಗಳೂರಿನಲ್ಲಿ ನಡೆದಿದ್ದಂತ ಕುಕ್ಕಲ್ ಬಾಂಬ್ ಬ್ಲಾಸ್ಟ್ ಪ್ರಕರಣದಲ್ಲಿ ಆಟೋ ಚಾಲಕ ಸೇರಿದಂತೆ ಆರೋಪಿ ಕೂಡ ಗಾಯಗೊಂಡಿದ್ದನು. ಚಿಕಿತ್ಸೆಯ ಬಳಿಕ ಚೇತರಿಸಿಕೊಂಡಿದ್ದರು.
ಪುತ್ತೂರು: ಪುತ್ತೂರಿನಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ ( ಎನ್.ಐ.ಎ) (NIA) ತಂಡ ಸಂಚರಿಸುತಿದ್ದ ಪೊಲೀಸ್ ವಾಹನ ಹಾಗೂ ಬೈಕ್ ಅಪಘಾತ ನಡೆದು ಬೈಕ್ ಸವಾರ ಮೃತಪಟ್ಟ ಘಟನೆ ಮಾ.5 ರಂದು ನಡೆದಿದೆ. ಮಾಣಿ ಮೈಸೂರು ರಸ್ತೆಯ ಸಂಪ್ಯ ಪೊಲೀಸ್ ಠಾಣೆಯ ಮುಂಭಾಗದಲ್ಲಿ ಭಾನುವಾರ ರಾತ್ರಿ ವಿಶೇಷ ತನಿಖೆಯ ದೃಷ್ಠಿಯಿಂದ ಸಂಚರಿಸುತ್ತಿದ್ದ ಎನ್. ಐ. ಎ. ತಂಡದ ಪೊಲೀಸ್ ವಾಹನಕ್ಕೆ ಬೈಕ್ ಡಿಕ್ಕಿಯಾಗಿದೆ. ಪಾಣಾಜೆ ಕೃಷಿ ಪತ್ತಿನ ಸಹಕಾರಿ ಸಂಘದ ಕಾರ್ಯನಿರ್ವಹಣಾಧಿಕಾರಿ ಲಕ್ಷ್ಮಣ ನಾಯ್ಕ ಬಿ. (50) ಮೃತ ವ್ಯಕ್ತಿಯಾಗಿದ್ದಾರೆ. ಪೊಲೀಸ್ ವಾಹನ ಜಿಲ್ಲೆಯ ಡಿ. ಆರ್. ಗೆ ಸೇರಿದ್ದಾಗಿದ್ದು, ಸುಳ್ಯ ಕಡೆಯಿಂದ ಪುತ್ತೂರಿಗೆ ಆಗಮಿಸುತ್ತಿದ್ದ ಸಂದರ್ಭ ಪುತ್ತೂರಿನಿಂದ ಆರ್ಲಪದವು ಕಡೆಗೆ ಹೋಗುತ್ತಿದ್ದ ಬೈಕ್ ಪೊಲೀಸ್ ವಾಹನಕ್ಕೆ ಡಿಕ್ಕಿಯಾಗಿದೆ. ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣ ಸಂಬಂಧ ಎನ್ಐಎ ಅಧಿಕಾರಿಗಳ ತಂಡ ಪುತ್ತೂರಿಗೆ ಆಗಾಗ ಆಗಮಿಸುತ್ತದೆ. ಆಗ ರಾಜ್ಯ ಪೊಲೀಸ್ ವಾಹನವನ್ನು ಅವರ ಸಂಚಾರಕ್ಕೆ ಬಳಸಿಕೊಳ್ಳಲಾಗುತ್ತದೆ ಎಂದು ಮಾಹಿತಿ ಲಬಿಸಿದೆ. ಪುತ್ತೂರು ಗ್ರಾಮಾಂತರ ಪೊಲೀಸರು…
ಮಂಗಳೂರು; ಹಾಡುಹಗಲೇ ಹಂಪನಕಟ್ಟೆಯ ಮಂಗಳೂರು ಜ್ಯುವೆಲ್ಲರಿ ಶಾಪ್ ಗೆ ನುಗ್ಗಿ ಸಿಬ್ಬಂದಿ ರಾಘವೇಂದ್ರ ಆಚಾರ್ಯ ಎಂಬವರನ್ನು ಕೊಲೆಗೈದ ಆರೋಪಿ ಶಿಫಾಸ್(30) ನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ವಿಚಾರಣೆಗೆ ಒಳಪಡಿಸಿದಾಗ ಹಲವು ಸ್ಫೋಟಕ ವಿಚಾರಗಳು ಗೊತ್ತಾಗಿವೆ. ಶಿಫಾಸ್ ಒಬ್ಬರೇ ಇರುವ ಚಿನ್ನಾಭರಣ ಅಂಗಡಿಗಳನ್ನು ಗುರಿಯಾಗಿಟ್ಟುಕೊಂಡು ಹೊಂಚು ಹಾಕುತ್ತಿದ್ದ ಎಂದು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಆರ್. ಜೈನ್ ತಿಳಿಸಿದ್ದಾರೆ. ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಆರೋಪಿ ಮಂಗಳೂರು ಮಾತ್ರವಲ್ಲದೆ ತಮಿಳುನಾಡು, ಕೇರಳ, ಗೋವಾದಲ್ಲಿಯೂ ಇದೇ ರೀತಿಯ ಕೃತ್ಯ ನಡೆಸುವ ಉದ್ದೇಶದಿಂದ ಓಡಾಡಿರುವುದು ತನಿಖೆ ವೇಳೆ ಗೊತ್ತಾಗಿದೆ. ಇಲ್ಲಿ ನಡೆದಿರುವ ಕೃತ್ಯದ ಮಾದರಿಯಲ್ಲಿ ಬೇರೆ ರಾಜ್ಯಗಳಲ್ಲಿ ನಡೆದಿದ್ದರೆ ಅದರ ಮಾಹಿತಿ ನೀಡುವಂತೆ ಅಲ್ಲಿನ ಪೊಲೀಸರಿಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ. ಆರೋಪಿ ಪತ್ತೆಯಾಗಿದ್ದು ಹೇಗೆ? ಆರೋಪಿಯ ಪತ್ತೆಗೆ ಪೊಲೀಸರು ನಿರಂತರ ಒಂದು ತಿಂಗಳಿಂದ ಹುಡುಕಾಟ ನಡೆಸುತ್ತಿದ್ದರು.ಆದರೆ ಆರೋಪಿ ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿ ಪರಾರಿಯಾಗುತ್ತಿದ್ದ. ಆತನ ಮುಖಚರ್ಯೆ ಸ್ಪಷ್ಟವಾಗಿ ಯಾವುದೇ ಸಿಸಿ ಕೆಮರಾದಲ್ಲಿ ದಾಖಲಾಗಿರಲಿಲ್ಲ.…
ಕಾಸರಗೋಡು : ಸುಟ್ಟಗಾಯಗಳಿಂದ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿದ್ಯಾರ್ಥಿನಿಯೊಬ್ಬರು ಮೃತಪಟ್ಟಿದ್ದಾರೆ. ಮೃತರನ್ನು ಕಾಞಂಗಾಡ್ ಪಡನಕ್ಕಾಡ್ ನೆಹರೂ ಕಾಲೇಜಿನ ಪದವಿ ವಿದ್ಯಾರ್ಥಿನಿ ಪಿ.ರಶ್ಮಿ (23) ಎಂದು ಗುರುತಿಸಲಾಗಿದೆ. ಕೆ ರತ್ನಾಕರನ್ ಮತ್ತು ಪಿ ಪುಷ್ಪಾ ಅವರ ಪುತ್ರಿ ಯಾಗಿರುವ ರಶ್ಮಿ ಜನವರಿ 21 ರಂದು ಮುಳಿಯಾರು ಬರ್ಕಾದಲ್ಲಿರುವ ತನ್ನ ಚಿಕ್ಕಪ್ಪನ ಮನೆಯಲ್ಲಿ ಅಡುಗೆ ಮಾಡುವಾಗ ಸುಟ್ಟಗಾಯಗಳಿಗೆ ಒಳಗಾಗಿದ್ದರು. ಗಂಭೀರ ಗಾಯಗೊಂಡ ರಶ್ಮಿ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಮತ್ತು ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.
ನವದೆಹಲಿ: ಆಸ್ಪತ್ರೆಗೆ ಬಂದ ಹಲವಾರು ರೋಗಿಗಳಿಗೆ ಒಂದೇ ಸಿರಿಂಜ್‌ನಿಂದ ಇಂಜೆಕ್ಷನ್ ಕೊಟ್ಟ ಪರಿಣಾಮ ಬಾಲಕಿಗೆ HIV ಪಾಸಿಟಿವ್ ಬಂದಿರುವ ಘಟನೆ ಇಟಾಹ್‌ನಲ್ಲಿ ನಡೆದಿದೆ. ಮಗುವಿಗೆ ಎಚ್‌ಐವಿ ಪಾಸಿಟಿವ್ ಎಂದು ವರದಿಯಾದ ವರದಿಗಳ ಕುರಿತು ಇಟಾಹ್‌ನಲ್ಲಿರುವ ರಾಣಿ ಅವಂತಿ ಬಾಯಿ ಲೋಧಿ ಸರ್ಕಾರಿ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರಿಂದ ವಿವರಣೆಯನ್ನು ಕೇಳಲಾಗಿದೆ ಎಂದು ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಶನಿವಾರ ಹೇಳಿದ್ದಾರೆ. ಈ ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು. ಒಂದೇ ಸಿರಿಂಜ್‌ನಿಂದ ಹಲವಾರು ಮಕ್ಕಳಿಗೆ ಚುಚ್ಚುಮದ್ದು ನೀಡಲಾಗಿದೆ ಎಂದು ಶನಿವಾರ ಆಸ್ಪತ್ರೆಗೆ ದಾಖಲಾದ ಬಾಲಕಿಯ ಪೋಷಕರು ಜಿಲ್ಲಾ ಮ್ಯಾಜಿಸ್ಟ್ರೇಟ್ ಅಂಕಿತ್ ಕುಮಾರ್ ಅಗರ್ವಾಲ್ ಅವರಿಗೆ ದೂರು ನೀಡಿದ್ದಾರೆ. ಫೆಬ್ರವರಿ 20 ರಂದು ಆಸ್ಪತ್ರೆಗೆ ದಾಖಲಾದ ಬಾಲಕಿಯ ಸಂಬಂಧಿಕರು, ಮಗುವಿಗೆ ಎಚ್‌ಐವಿ ಪಾಸಿಟಿವ್ ಎಂದು ಪತ್ತೆಯಾದಾಗ ಆರೋಗ್ಯ ಕಾರ್ಯಕರ್ತರು ರಾತ್ರಿಯಲ್ಲಿ ಆಸ್ಪತ್ರೆಯಿಂದ ಬಲವಂತವಾಗಿ ಹೊರಹಾಕಿದ್ದಾರೆ ಎಂದು ಆರೋಪಿಸಿದರು. ಆಪಾದಿತ ಘಟನೆಯ ಬಗ್ಗೆ ತನಗೆ ತಿಳಿದು ಬಂದಿದೆ ಮತ್ತು ಜಿಲ್ಲಾ ಮ್ಯಾಜಿಸ್ಟ್ರೇಟ್…
ಬೆಂಗಳೂರು : ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ ಸಂಬಂಧ ಬೆಂಗಳೂರಿನ ದಾಸರಹಳ್ಳಿಯಲ್ಲಿ ಎನ್ ಐಎ ತಂಡ ಮತ್ತೊಬ್ಬ ಆರೋಪಿಯನ್ನು ಬಂಧಿಸಲಾಗಿದೆ. ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎನ್ ಐಎ ಅಧಿಕಾರಿಗಳು ಕೊಲೆ ಆರೋಪಿ ತೌಫೀಲ್ ಪತ್ತೆಗಾಗಿ 5 ಲಕ್ಷ ರೂ. ಬಹುಮಾನ ಘೋಷಣೆ ಮಾಡಿದ್ದರು. ಬೆಂಗಳೂರಿನ ದಾಸರಹಳ್ಳಿಯಲ್ಲಿ ನಿನ್ನೆ ರಾತ್ರಿ ಎನ್ ಐಎ ಅಧಿಕಾರಿಗಳು ಆರೋಪಿ ತೌಫೀರ್ ನನ್ನು ಬಂಧಿಸಿದ್ದಾರೆ. ದಕ್ಷಿಣ ಕನ್ನಡ ಬಿಜೆಪಿ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯರಾಗಿದ್ದ ಪ್ರವೀಣ್ ನೆಟ್ಟಾರು ಅವರನನ್ನು ಜುಲೈ 26 ರಂದು ಬೆಳ್ಳಾರೆಯಲ್ಲಿರವ ಅವರ ಕೋಳಿ ಅಂಗಡಿ ಬಳಿಯೇ ಹಂತಕರು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದರು. ಈ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಿತ್ತು.
ಮಂಗಳೂರು: 33 ವರ್ಷದ ಮಹಿಳೆ ಹಾಗೂ ಆಕೆಯ ನಾಲ್ಕು ವರ್ಷದ ಮಗಳ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣದಲ್ಲಿ ಆರೋಪಿ ಕೇಶವ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡಿಯಾಲಗುತ್ತು ಪರಿಸರದ ಮನೆಯೊಂದರಲ್ಲಿ ಮಾರ್ಚ್ 1 ರಂದು ತನ್ನ ಪುತ್ರಿಯೊಂದಿಗೆ ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿತ್ತು. ಮಹಿಳೆ ಮತ್ತು ಆಕೆಯ ಮಗಳ ಆತ್ಮಹತ್ಯೆಯ ನಂತರ ಪೊಲೀಸರು ಕೇಶವ ಸೇರಿದಂತೆ ಮೂವರ ವಿರುದ್ಧ ಐಪಿಸಿ ಸೆಕ್ಷನ್ 306 (‘ಆತ್ಮಹತ್ಯೆಗೆ ಪ್ರಚೋದನೆ’) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು. ಇನ್ನು ಪೊಲೀಸರು ಆತನನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಪ್ರಕರಣದಲ್ಲಿ ಇತರ ಇಬ್ಬರು ಆರೋಪಿಗಳಾದ ಬಾಬು ಮತ್ತು ಮಮತಾ ಪಾತ್ರದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಜೈನ್ ಬಂಧನವನ್ನು ಖಚಿತಪಡಿಸಿದ್ದಾರೆ. ವಿಜಯಾ ಎಂದು ಗುರುತಿಸಲಾಗಿರುವ ಮಹಿಳೆ ತನ್ನ ಮಗಳು ಶೋಬಿಕಾ ಮತ್ತು 12 ವರ್ಷದ ಮಗುವಿನೊಂದಿಗೆ ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು…
ಮನೆ ಕೆಲಸಕ್ಕೆಂದು ಬಂದ ಇಬ್ಬರು ವ್ಯಕ್ತಿಗಳು ಮನೆಯನ್ನೇ ದರೋಡೆ ಮಾಡಿ ಮನೆಯವರನ್ನು ಕೊಲೆಗೈಯಲು ಯತ್ನಿಸಿದ ಘಟನೆ ಸುಳ್ಯ ತಾಲೂಕಿನ ಪಂಬೆತ್ತಾಡಿ ಗ್ರಾಮದ ಕರಿಕ್ಕಳ ಎಂಬಲ್ಲಿ ನಡೆದಿದೆ. ಪಂಬೆತ್ತಾಡಿ ಗ್ರಾಮದ ಕರಿಕ್ಕಳ ವಿಶ್ವನಾಥ ಮತ್ತು ಗಾಯತ್ರಿ ದಂಪತಿ ಮನೆಗೆ ಕೆಲಸಕ್ಕೆ ಬಂದವರು ಆಕ್ರಮಣ ನಡೆಸಿ ಕೊಲೆಗೆ ಯತ್ನಿಸಿದ್ದು, ಘಟನೆಗೆ ಸಂಬಂಧಿಸಿದಂತೆ ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಘಟನೆಯಲ್ಲಿ ಗಾಯತ್ರಿಯವರ ಕುತ್ತಿಗೆಗೆ ಇರಿದ ಗಾಯವಾಗಿದ್ದು ಅವರು ಕಡಬದ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ. ಮನೆ ಕೆಲಸಕ್ಕೆ ಬಂದಿದ್ದ ಸೈಫನ್ ಮತ್ತು ವರದರಾಜ್ ಬಂಧಿತರು. ಇವರಿಬ್ಬರು ಮನೆಯ ಮಹಡಿ ಮೇಲೆ ಏರಿ ಕೃತ್ಯ ಎಸಗಿದ್ದಾರೆ. ಕಟ್ಟಡ ಕಾಮಗಾರಿ ನಡೆಯುತ್ತಿದ್ದು ಮನೆಯಲ್ಲಿ ಹಣವಿರುವ ವಿಚಾರ ಆರೋಪಿಗಳ ತಿಳಿದಿತ್ತು. ಮನೆಯವರನ್ನು ಮುಗಿಸಿದರೋಡೆ ನಡೆಸುವ ಆರೋಪಿಗಳ ಯೋಜನೆ ಆಗಿತ್ತು ಎನ್ನಲಾಗಿದೆ. ಸೈಫನ್ ಧರ್ಮಸ್ಥಳ ಹೊಸ ಬಸ್ ತಂಗುದಾಣ ಬಳಿ ನಿವಾಸಿಯಾಗಿದ್ದು, ವರದರಾಜ್ ಚಿತ್ರದುರ್ಗದ ಹಿರಿಯೂರು ನಿವಾಸಿ. ಇವರಿಬ್ಬರು ಕೆಲವು ತಿಂಗಳ ಹಿಂದೆಯಷ್ಟೇ ಮನೆ ಕೆಲಸಕ್ಕಾಗಿ ಬಂದಿದ್ದರು. ಘಟನೆ…










