Author: main-admin

ಭಾರತದಲ್ಲಿ ಸಂಪೂರ್ಣ ಕ್ಷೀಣವಾಗಿದ್ದ ಮಾರಕ ಕೋವಿಡ್ ಸೋಂಕು 97 ದಿನಗಳ ಬಳಿಕ ಮತ್ತೆ ಸುದ್ದಿಗೆ ಗ್ರಾಸವಾಗಿದ್ದು, ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 300ಕ್ಕೂ ಅಧಿಕ ಸೋಂಕು ಪ್ರಕರಣಗಳು ವರದಿಯಾಗಿವೆ. ಕೇಂದ್ರ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ದೈನಂದಿನ ಕೋವಿಡ್ ಅಂಕಿ-ಅಂಶಗಳ ಪ್ರಕಾರ ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 334 ಹೊಸ ಸೋಂಕು ಪ್ರಕರಣಗಳು ವರದಿಯಾಗಿವೆ. ಆ ಮೂಲಕ ದೇಶದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 2,686ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ. ಅಂತೆಯೇ ಇದೇ ಅವಧಿಯಲ್ಲಿ ಮೂರು ಕೋವಿಡ್ ಸಾವುಗಳು ದಾಖಲಾಗಿದ್ದು, 2 ಮಹಾರಾಷ್ಟ್ರದಲ್ಲಿ ಮತ್ತು ಒಂದು ಕೇರಳದಲ್ಲಿ ವರದಿಯಾಗಿದೆ. ಆ ಮೂಲಕ ಕೋವಿಡ್ ಗೆ ಬಲಿಯಾದವರ ಸಂಖ್ಯೆ 5,30,775ಕ್ಕೆ ಏರಿಕೆಯಾಗಿದೆ. ದೇಶದಲ್ಲಿನ ಒಟ್ಟಾರೆ ಸೋಂಕಿತರ ಸಂಖ್ಯೆ 4,46,87,496ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

Read More

ಮಂಗಳೂರು: ನಗರದ ಸೌಂದರ್ಯವರ್ಧನೆಗೆ ವಿವಿಧ ಯೋಜನೆಗಳನ್ನು ಹಾಕಿಕೊಳ್ಳಲಾಗುತ್ತದೆ‌. ಇಂತಹ ಸೌಂದರ್ಯ ಪ್ರಜ್ಞೆಯಿಂದಲೇ ನಿರ್ಮಾಣವಾಗಿರುವುದು ಮಂಗಳೂರಿನ ಹೃದಯಭಾಗದಲ್ಲಿರುವ ಕ್ಲಾಕ್ ಟವರ್. ಆದರೆ ಇದೀಗ ಈ ಕ್ಲಾಕ್ ಟವರ್ ಸೂಕ್ತ ನಿರ್ವಹಣೆಯಿಲ್ಲದೆ ದುಃಸ್ಥಿತಿ ತಲುಪಿದೆ. ಇಲ್ಲಿ ಕಾಣುತ್ತಿರುವುದೇ ಕ್ಲಾಕ್ ಟವರ್. ಮಂಗಳೂರಿನ ಸೌಂದರ್ಯಕ್ಕೆ ಹಿಡಿದ ಕನ್ನಡಿಯಂತಿರುವ ಇದು 2018ರಲ್ಲಿ ನಿರ್ಮಾಣಗೊಂಡಿತು. ಸ್ಮಾರ್ಟ್ ಸಿಟಿ ಕಾಮಗಾರಿಯಡಿಯಲ್ಲಿ ಅತ್ಯಂತ ದುಬಾರಿ ವೆಚ್ಚದಲ್ಲಿ ನಿರ್ಮಾಣಗೊಂಡಿತು. ಇತ್ತೀಚೆಗಷ್ಟೇ ಇದರ ಕಾಮಗಾರಿ ಪೂರ್ಣಗೊಂಡಿದ್ದು, ಇನ್ನು ಅಧಿಕೃತವಾಗಿ ಲೋಕಾರ್ಪಣೆಯೂ ಆಗಿಲ್ಲ. ಆದರೆ ಅದಾಗಲೇ ಕ್ಲಾಕ್ ಟವರ್ ಸರಿಯಾದ ನಿರ್ವಹಣೆಯಿಲ್ಲದೆ ದುಃಸ್ಥಿತಿಯನ್ನು ತಲುಪಿದೆ. ಕ್ಲಾಕ್‌ ಟವರ್‌ನ ಕಾರಂಜಿ ಚಾಲನೆಯಲ್ಲಿಲ್ಲ. ಸುತ್ತಲಿನ ಗಾರ್ಡನ್‌ಗೂ ನೀರು ಸರಬರಾಜು ಇಲ್ಲದೆ ಗಿಡಗಳು ಸೊರಗಿ ಹೋಗಿದೆ. 75 ಅಡಿ ಎತ್ತರದ ಕ್ಲಾಕ್‌ ಟವರ್‌ನ ಸುತ್ತಲೂ ನಾಲ್ಕು ಬೃಹತ್ ಗಡಿಯಾರಗಳಿವೆ. ರಾತ್ರಿ ವೇಳೆ ಸುಂದರ ವಿದ್ಯುತ್ ವ್ಯವಸ್ಥೆ ಹಾಗೂ ವರ್ಣ ರಂಜಿತ ಕಾರಂಜಿ ಕ್ಲಾಕ್‌ ಟವರ್‌ನ ಮೆರುಗನ್ನು ಮತ್ತಷ್ಟು ಹೆಚ್ಚಿಸುತ್ತಿತ್ತು. ಕಾಮಗಾರಿ ಬಳಿಕ ಸ್ಮಾರ್ಟ್ ಸಿಟಿ ನಿರ್ವಹಣೆಗೆ ಮಹಾನಗರ ಪಾಲಿಕೆಗೆ ಹಸ್ತಾಂತರಮಾಡಿತ್ತು.…

Read More

ಕಾರ್ಕಳ: ನಿಟ್ಟೆ ಕಾಲೇಜಿನಲ್ಲಿ ಅಂತಿಮ ವರ್ಷದ ಎಂಜಿನಿಯರಿಂಗ್ ಕಲಿಯುತ್ತಿದ್ದ ಸೀಮಾ (22) ಹಾಸ್ಟೆಲ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ. ಕುಂದಾಪುರದ ಶಿರೂರು ಮೂಲದ ಅವರು ಅಂತಿಮ ವರ್ಷದ ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದರು. ಹಾಸ್ಟೆಲ್‌ನಲ್ಲಿ ವಾಸವಾಗಿದ್ದ ಅವರು ನರ, ಚರ್ಮದ ಸಮಸ್ಯೆಯಿಂದ ಬಳಲುತ್ತಿದ್ದರು. ಹಲವು ಕಡೆಗಳಲ್ಲಿ ಚಿಕಿತ್ಸೆ ಪಡೆದಿದ್ದರೂ ಗುಣವಾಗಿರಲಿಲ್ಲ. ಇದರಿಂದ ಮನನೊಂದು 4-5 ತಿಂಗಳ ಹಿಂದೆಯೂ ಒಮ್ಮೆ ನಿದ್ರೆ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದರು. ಇದೇ ಕಾರಣವನ್ನೇ ಮುಂದಿಟ್ಟುಕೊಂಡು ಮಾರ್ಚ್ 2 ರಂದು ಅಪರಾಹ್ನ ಹಾಸ್ಟೆಲ್‌ನ ಕೊಠಡಿಯಲ್ಲಿನ ಫ್ಯಾನ್‌ಗೆ ಚೂಡಿದಾರ್ ಶಾಲ್‌ನಿಂದ ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಉಡುಪಿ: ದ.ಕ., ಉಡುಪಿ ಸಹಿತ ಕರಾವಳಿ ಕರ್ನಾಟಕದಲ್ಲಿ ಮುಂದಿನ 48 ಗಂಟೆಗಳಲ್ಲಿ ಬಲವಾದ ಬಿಸಿ ಗಾಳಿ ಬೀಸುವ ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಸಿದೆ. ಅಲ್ಲದೆ ಈ ಅವಧಿಯಲ್ಲಿ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ಮೀರುವ ಸಾಧ್ಯತೆಗಳಿದ್ದು, ಜನರ ಆರೋಗ್ಯದ ಮೇಲೂ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ವಿಶೇಷ ನಿಗಾ ವಹಿಸಲು ಸೂಚನೆ ನೀಡಲಾಗಿದೆ. ಮುಂದಿನ 48 ಗಂಟೆಗಳಲ್ಲಿ ಕರ್ನಾಟಕ ಕರಾವಳಿಯ ಕೆಲವು ಕಡೆಗಳಲ್ಲಿ ಬಿಸಿಗಾಳಿಯ ವಾತಾವರಣ ಕಂಡು ಬರಲಿದೆ. ಹಾಗಾಗಿ ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆಯು ಹೊರಡಿಸಿರುವ ಪ್ರಕಟನೆಯಲ್ಲಿ ತಿಳಿಸಿದೆ. ದ.ಕ. ಮತ್ತು ಉಡುಪಿ ಜಿಲ್ಲೆಗಳಲ್ಲಿ ಕಳೆದೊಂದು ವಾರದಿಂದ ತೀವ್ರ ಬಿಸಿಲಿನ ವಾತಾವರಣವಿದೆ. ಬಲವಾದ ಗಾಳಿಯೂ ಬೀಸುತ್ತಿದೆ. ಇದರಿಂದ ತಾಪಮಾನದಲ್ಲಿ ಏರಿಕೆಯೂ ಆಗಿದೆ. ತಾಪಮಾನದಲ್ಲಿ ನಿರಂತರ ಏರಿಕೆಯ ಪರಿಣಾಮ ಬಿಸಿಗಾಳಿ ಸೃಷ್ಟಿಯಾಗಲಿದೆ. ಹಾಗಾಗಿ ಹಿಟ್‌ಸ್ಟ್ರೋಕ್, ಕಣ್ಣಿನ ಉರಿ, ತಲೆಸುತ್ತು ಸಹಿತ ನಾನಾ ಆರೋಗ್ಯ ಸಮಸ್ಯೆಗಳು ತಲೆದೋರುವ ಅಪಾಯವಿದೆ ಎಂದು ತಿಳಿಸಿದೆ.

Read More

ಮಂಗಳೂರು: ಪೆಟ್ರೋಲ್‌ ಚಾಲಿತ ಆಟೋ ರಿಕ್ಷಾ ಚಾಲಕರು ಹಾಗೂ ಇ-ಆಟೋ ಚಾಲಕರ ನಡುವೆ ಪಾರ್ಕಿಂಗ್‌ ವಿಚಾರಕ್ಕೆ ಗಲಾಟೆ ನಡೆದ ಘಟನೆ ನಗರದಲ್ಲಿ ನಡೆದಿದೆ.   ನಂತರ ಹಿರಿಯ ಪೊಲೀಸ್‌ ಅಧಿಕಾರಿಗಳು ಇತ್ತಂಡಗಳ ಪ್ರಮುಖರನ್ನು ಕರೆದು ರಾಜಿ ಸಂಧಾನ ನಡೆಸಿ ಗೊಂದಲ ಬಗೆಹರಿಸಿದ್ದಾರೆಂದು ತಿಳಿದುಬಂದಿದೆ. ಅಲ್ಲದೇ ಇನ್ನೊಂದು ವಾರದೊಳಗೆ ಇ-ಆಟೋಗಳಿಗೆ ವಲಯ ಸಂಖ್ಯೆ ನಮೂದಿಸುವ ಪ್ರಕ್ರಿಯೆ ನೆರವೇರಲಿದೆ ಎಂದು ತಿಳಿದುಬಂದಿದೆ.

Read More

ಮಂಗಳೂರು: ಇಬ್ಬರು ಪುತ್ರಿಯರೇ ತಮ್ಮ ತಂದೆಯ ಮೇಲೆ ಮಾಡಿದ ಅತ್ಯಾಚಾರ ಆರೋಪದ ಪೈಕಿ ಒಂದು ಪ್ರಕರಣ ನಗರದ ಪೋಕ್ಸೋ ನ್ಯಾಯಾಲಯದಲ್ಲಿ ಖುಲಾಸೆಗೊಂಡಿದೆ. 2021ರ ಜೂನ್‌ ತಿಂಗಳಿನಲ್ಲಿ ಕಾಟಿಪಳ್ಳದ ನಿವಾಸಿ ಅಬ್ದುಲ್‌ ಹಕೀಂ (48) ಅವರ ಮೇಲೆ ಅವರ ಇಬ್ಬರು ಅಪ್ರಾಪ್ತ ವಯಸ್ಕ ಹೆಣ್ಣು ಮಕ್ಕಳು ತಂದೆ ನಮ್ಮ ಮೇಲೆ ಅತ್ಯಾಚಾರ ಎಸಗಿದ್ದಾರೆಂದು ಆರೋಪಿಸಿದ್ದರು. ಪ್ರಕರಣದ ಕುರಿತು ಮಂಗಳೂರಿನ ಮಹಿಳಾ ಠಾಣೆಯಲ್ಲಿ 2 ಪ್ರತ್ಯೇಕ ಪ್ರಕರಣ ಪೋಕ್ಸೋ ಕಾಯ್ದೆಯಡಿ ದಾಖಲಾಗಿತ್ತು. ಕಿರಿಯ ಮಗಳು ತನ್ನ ತಂದೆಯು ಸತತ ಮೂರು ವರ್ಷಗಳಿಂದ ಅತ್ಯಾಚಾರ ಮಾಡಿದ್ದಾರೆಂದು ಆರೋಪಿಸಿದ್ದಳು. ಈ ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಂಡ ಮಂಗಳೂರಿನ ಹೆಚ್ಚುವರಿ ಸತ್ರ ಮತ್ತು ಎರಡನೇ ಎಫ್‌ಟಿಎಸ್‌ಸಿ ಪೋಕ್ಸೋ ನ್ಯಾಯಾಲಯ ಪ್ರಕರಣದಲ್ಲಿ ಆರೋಪಿಯ ಮೇಲೆ ಆರೋಪ ಸಾಬೀತು ಮಾಡಲು ಯಾವುದೇ ಸರಿಯಾದ ಸಾಕ್ಷಾಧಾರಗಳು ಇಲ್ಲ ಎಂದು ನಿರ್ಧರಿಸಿತು. ಈ ಹಿನ್ನೆಲೆಯಲ್ಲಿ ನ್ಯಾಯಾಧೀಶ ಕೆ.ಎಂ. ರಾಧಾಕೃಷ್ಣ ಅವರು ಆರೋಪಿಯನ್ನು ಬಿಡುಗಡೆ ಮಾಡಲು ಆದೇಶ ಮಾಡಿದ್ದಾರೆ. ಆರೋಪಿ ಕಳೆದ ಒಂದೂವರೆ ವರ್ಷಗಳಿಂದ ಜೈಲುವಾಸ ಅನಭವಿಸಿದ್ದರು.…

Read More

ಬೆಂಗಳೂರು: ಚನ್ನಗಿರಿ ಕ್ಷೇತ್ರದ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಮಾಡಾಳ್ ಪ್ರಶಾಂತ್ ಅವರ ಮೇಲಿನ ಲೋಕಾಯುಕ್ತ ದಾಳಿಗೆ ಮತ್ತಷ್ಟು ತಿರುವು ಸಿಕ್ಕಿದೆ. ಮಾಡಾಳ್ ಪ್ರಶಾಂತ್ ಮನೆಯಲ್ಲಿ ಆರು ಕೋಟಿ ರೂ ನಗದು ವಶಪಡಿಸಿಕೊಳ್ಳಲಾಗಿದೆ ಎಂದು ವರದಿಯಾಗಿದೆ. ಪುತ್ರ ಪ್ರಶಾಂತ್ ಮಾಡಾಳ್ ಅವರ ಮನೆ ಮೇಲೆ ಲೋಕಾಯುಕ್ತದ ಭ್ರಷ್ಟಾಚಾರ ನಿಗ್ರಹ ದಳ ಗುರುವಾರ ದಾಳಿ ನಡೆಸಿದ್ದು, ಅಪಾರ ಪ್ರಮಾಣದ ಹಣದ ರಾಶಿ ಪತ್ತೆಯಾಗಿದೆ. ತಡರಾತ್ರಿಯವರೆಗೂ ಹುಡುಕಾಟ ನಡೆದಿದೆ. ದಾವಣಗೆರೆ ಜಿಲ್ಲೆಯ ಚನ್ನಗಿರಿಯ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರು ಮೈಸೂರು ಸ್ಯಾಂಡಲ್ ಸೋಪ್ ತಯಾರಿಸುವ ಸರ್ಕಾರಿ ಸ್ವಾಮ್ಯದ ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ (ಕೆಎಸ್‌ಡಿಎಲ್) ಅಧ್ಯಕ್ಷರಾಗಿದ್ದಾರೆ. ಅವರ ಮಗ ಪ್ರಶಾಂತ್ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿ (ಬಿಡಬ್ಲ್ಯೂಎಸ್‌ಎಸ್ ಬಿ) ಮುಖ್ಯ ಅಕೌಂಟೆಂಟ್ ಆಗಿದ್ದಾರೆ. ಗುತ್ತಿಗೆದಾರನೊಬ್ಬನ ಬಳಿ 80 ಲಕ್ಷ ರೂ.ಗೂ ಹೆಚ್ಚು ಲಂಚಕ್ಕೆ ಬೇಡಿಕೆ ಇಟ್ಟಿದ್ದು, ಕ್ರೆಸೆಂಟ್ ರಸ್ತೆಯಲ್ಲಿರುವ ಕಚೇರಿಯಲ್ಲಿ ಮುಂಗಡವಾಗಿ 40 ಲಕ್ಷ ರೂ. ಹಣ ಪಡೆದುಕೊಳ್ಳುತ್ತಿದ್ದ ವೇಳೆ…

Read More

ಉಡುಪಿ: ಕಾರ್ಕಳದ ಸಚಿವ ವಿ. ಸುನಿಲ್ ಕುಮಾರ್ ವಿರುದ್ಧ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಬೇನಾಮಿ ಆಸ್ತಿ ಆರೋಪ ಮಾಡಿದ್ದಾರೆ. ಈ ಸಂಬಂಧ ಜಿಲ್ಲಾಧಿಕಾರಿಗಳು ಹಾಗೂ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಚುನಾವಣೆ ಘೋಷಣೆ ಆಗುವ ಮೊದಲೇ ಕಾರ್ಕಳದಲ್ಲಿ ಮುತಾಲಿಕ್ ಮತ್ತು ಸುನಿಲ್ ಕುಮಾರ್ ನಡುವೆ ಆರೋಪ ಪ್ರತ್ಯಾರೋಪಗಳು ಶುರುವಾಗಿದೆ. ಎರಡು ತಿಂಗಳಿನಿಂದ ಮುತಾಲಿಕ್ ನಿರಂತರವಾಗಿ ಸುನಿಲ್ ಕುಮಾರ್ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ನಕಲಿ ಹಿಂದುತ್ವ, ಭ್ರಷ್ಟಾಚಾರ ಅಂತಾ ಆರೋಪಿಸುತ್ತಿದ್ದವರು ಇದೀಗ ಬೇನಾಮಿ ಆಸ್ತಿ ಸಂಪಾದಿಸಿದ್ದಾರೆ ಎಂಬ ಆರೋಪ ಮಾಡಿದ್ದಾರೆ.  ಉಡುಪಿ ಜಿಲ್ಲೆ ಹೆಬ್ರಿ ತಾಲೂಕಿನ ಶಿವಪುರ ಕೆರೆಕಟ್ಟೆ ಗ್ರಾಮದಲ್ಲಿ 67 ಎಕರೆ ಕೃಷಿ ಭೂಮಿಯನ್ನು ಬೇನಾಮಿ ಹೆಸರಿನಲ್ಲಿ ಬೇರೆ ಬೇರೆ ರೈತರಿಂದ ಖರೀದಿ ಮಾಡಿದ್ದಾರೆ. ಮುಂದೆ ಅದು ಕೈಗಾರಿಕಾ ಪ್ರದೇಶವಾಗಿ ಭೂ ಪರಿವರ್ತನೆ ಮಾಡಿ 4-5 ಪಟ್ಟು ಹೆಚ್ಚಿನ ಬೆಲೆಗೆ ಸರ್ಕಾರ ಖರೀದಿ ಮಾಡುತ್ತದೆ. 4 ಚಿಲ್ಲರೆ ಕೋಟಿಗೆ ಖರೀದಿಸುವ ಮೂಲಕ ಜಮೀನು ಹೊಂದಿರುವ ಬಡ ರೈತರಿಗೂ ಅನ್ಯಾಯ ಆಗಿದೆ. ಇದರಲ್ಲಿ ಶಾಸಕ,…

Read More

ಮಂಗಳೂರು:ಹಂಪನಕಟ್ಟೆಯಲ್ಲಿನ ಜ್ಯುವೆಲ್ಲರಿಗೆ ನುಗ್ಗಿ ದರೋಡೆ- ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 1 ತಿಂಗಳ ಬಳಿಕ ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೋಝಿಕ್ಕೋಡ್ ಕೊಯಿಲಾಂಡಿಯ ಶಿಫಾಝ್ (33) ಬಂಧಿತ ಆರೋಪಿ.ಈತನನ್ನು ಕಾಸರಗೋಡಿನಲ್ಲಿ ಬಂಧಿಸಲಾಗಿದೆ. ಫೆ.3ರಂದು ಹಂಪನಕಟ್ಟೆ ಸಮೀಪ ಜ್ಯುವೆಲ್ಲರಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಅತ್ತಾವರದ ನಿವಾಸಿ ರಾಘವ(50) ಎಂಬವರನ್ನು ಚೂರಿಯಿಂದ ಇರಿದು ಕೊಲೆಗೈದು ದರೋಡೆ ಮಾಡಿಕೊಂಡು ಮುಸುಕುದಾರಿ ಪರಾರಿಯಾಗಿದ್ದ. ಆರೋಪಿಯ ಬಂಧನ ಪೊಲೀಸರಿಗೆ ದೊಡ್ಡ ತಲೆನೋವಾಗಿತ್ತು.ಇದೀಗ ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ಪೊಲೀಸರು ಆರೋಪಿಯ ಬಂಧನಕ್ಕೆ ಬಲೆ ಬೀಸಿದ್ದರು.

Read More

ಬಂಟ್ವಾಳ: ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿ ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ 19 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಾರ್ಚ್ 1 ರಂದು ಇಲ್ಲಿನ ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ. ಉಜಿರೆ ಹಳೇಪೇಟೆ ನಿವಾಸಿ ಮಣಿ ಅಲಿಯಾಸ್ ಮಣಿಕಂಠ (41) ಬಂಧಿತ ಆರೋಪಿ.ಪ್ರಸ್ತುತ ಈತ ಕುಂಬಳೆಯ ನೀರಜಾಲ್‌ನಲ್ಲಿ ನೆಲೆಸಿದ್ದು, ನೆಲ್ಯಾಡಿ ಸಮೀಪದ ಶಿಬಾಜೆ ಎಂಬಲ್ಲಿ ಮಣಿಯನ್ನು ಬಂಧಿಸಲಾಗಿದೆ.ಖಚಿತ ಸುಳಿವಿನ ಮೇರೆಗೆ ನಗರ ಠಾಣೆಯ ವಾರಂಟ್ ಸಿಬ್ಬಂದಿ ಗಣೇಶ್, ರಾಜೇಶ್ ಮತ್ತು ಪ್ರವೀಣ್ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Read More