Author: main-admin

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿರ್ಭುಮ್ ಜಿಲ್ಲೆಯಲ್ಲಿ ಆಹಾರವನ್ನು ಸೇವಿಸಿದ ಹಲವಾರು ಶಾಲಾ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜಿಲ್ಲೆಯ ಮಯೂರೇಶ್ವರ ಬ್ಲಾಕ್‌ ನ ಪ್ರಾಥಮಿಕ ಶಾಲೆಯ ಸುಮಾರು 30 ವಿದ್ಯಾರ್ಥಿಗಳು ಸೋಮವಾರ ಮಧ್ಯಾಹ್ನದ ಊಟದಲ್ಲಿ ಬಡಿಸಿದ ಆಹಾರವನ್ನು ಸೇವಿಸಿದ ನಂತರ ಅಸ್ವಸ್ಥರಾಗಿದ್ದಾರೆ ಎಂದು ಅವರು ಹೇಳಿದ್ದಾರೆ. ಭೋಜನ ಸಿದ್ಧಪಡಿಸಿದ್ದ ಶಾಲೆಯ ಸಿಬ್ಬಂದಿಯೊಬ್ಬರು, ಬೇಳೆ ತುಂಬಿದ ಕಂಟೈನರ್ ಒಂದರಲ್ಲಿ ಹಾವು ಕಂಡುಬಂದಿದೆ ಎಂದು ಹೇಳಿಕೊಂಡಿದ್ದಾರೆ. ಮಕ್ಕಳು ಅಸ್ವಸ್ಥರಾಗಲು ಇದೇ ಕಾರಣ ಎನ್ನಲಾಗಿದೆ. “ಮಕ್ಕಳು ವಾಂತಿ ಮಾಡಲು ಪ್ರಾರಂಭಿಸಿದ್ದರಿಂದ ನಾವು ಅವರನ್ನು ರಾಂಪುರಹತ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಸಾಗಿಸಬೇಕಾಯಿತು” ಎಂದು ಅವರು ಹೇಳಿದರು. ಮಧ್ಯಾಹ್ನದ ಊಟ ತಿಂದು ಮಕ್ಕಳು ಅಸ್ವಸ್ಥರಾಗುತ್ತಿರುವ ಬಗ್ಗೆ ಹಲವಾರು ಗ್ರಾಮಸ್ಥರಿಂದ ದೂರುಗಳು ಬಂದಿವೆ ಎಂದು ಬ್ಲಾಕ್ ಅಭಿವೃದ್ಧಿ ಅಧಿಕಾರಿ ದೀಪಾಂಜನ್ ಜನಾ ಸುದ್ದಿಗಾರರಿಗೆ ತಿಳಿಸಿದರು. ಓರ್ವ ವಿದ್ಯಾರ್ಥಿಯನ್ನು ಹೊರತು ಪಡಿಸಿ, ಅಸ್ವಸ್ಥರಾದ ಉಳಿದೆಲ್ಲಾ ವಿದ್ಯಾರ್ಥಿಗಳನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಆ ವಿದ್ಯಾರ್ಥಿಯೂ ಅಪಾಯದಿಂದ ಪಾರಾಗಿದ್ದಾನೆ ಎಂದು…

Read More

ಬೆಂಗಳೂರು: ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್‌ ರಾಡುಗಳು ರಸ್ತೆಗೆ ಉರುಳಿದ ಪರಿಣಾಮ ಗಂಭೀರ ಗಾಯಗೊಂಡಿದ್ದ ತಾಯಿ, ಮಗು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ನಾಗವಾರ ರಿಂಗ್ ರೋಡ್‍ನ ಎಚ್‍ಬಿಆರ್ ಲೇಔಟ್ ಬಳಿ ನಡೆದಿದೆ. ಎಚ್‍ಬಿಆರ್ ಲೇಔಟ್ ಬಳಿ ಮೆಟ್ರೋ ಕಾಮಗಾರಿ ನಡೆಯುತ್ತಿತ್ತು. ಆದರೆ ರಸ್ತೆಯಲ್ಲಿ ಪತಿ, ಪತ್ನಿ ಹಾಗೂ ಮಗು ಬೈಕ್‍ನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಮೇಲೆ ಕಬ್ಬಿಣದ ಪಿಲ್ಲರ್‌ಗಳು ಬಿದ್ದಿದೆ . ಇದರ ಪರಿಣಾಮವಾಗಿ ಮಗು ಹಾಗೂ ಪತ್ನಿಯ ಸ್ಥಿತಿ ಗಂಭೀರವಾಗಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ತಾಯಿ, ಮಗು ಸಾವನ್ನಪ್ಪಿದ್ದಾರೆ. ಮೃತರನ್ನು ತೇಜಸ್ವಿನಿ (28) ಎರಡೂವರೆ ವರ್ಷದ ವಿಹಾನ್ ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More

ಸಾಗರ : ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಬಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ ಪ್ರಕರಣ ಸಂಬಂಧ ಸಾಗರ ಪೊಲೀಸರು ಆರೋಪಿ ಸಮೀರ್ ನನ್ನು ಬಂಧಿಸಿದ್ದಾರೆ. ಸೋಮವಾರ ಸಾಗರ ಪಟ್ಟಣ ಬಿ.ಎಚ್ ರಸ್ತೆಯಲ್ಲಿ ನೆಹರು ನಗರ ನಿವಾಸಿ ಸುನೀಲ್ ಎಂಬಾತ ಬೈಕ್ ನಲ್ಲಿ ಬರುತ್ತಿದ್ದ ವೇಳೆ ಮಚ್ಚಿನಿಂದ ಹಲ್ಲೆ ನಡೆಸಲು ಯತ್ನಿಸಲಾಗಿದೆ. ಕಿಡಿಗೇಡಿಗಳ ಈ ಕೃತ್ಯ ಸಿಸಿ ಟಿವಿ ಕ್ಯಾಮರಾದಲ್ಲಿ ಸೆರೆಯಾಗಿತ್ತು. ಆರೋಪಿ ಸಮೀರ್ ನನ್ನು ಬಂಧಿಸಲು ಪೊಲೀಸರು ಮೂರು ವಿಶೇಷ ತಂಡ ರಚಸಿಸಲಾಗಿತ್ತು. ತಡರಾತ್ರಿ ಶಿವಮೊಗ್ಗದಲ್ಲಿ ಆರೋಪಿ ಸಮೀರ್ ನನ್ನು ಬಂಧಿಸಲಾಗಿದೆ. ಘಟನೆಯಿಂದ ಆಕ್ರೋಶಗೊಂಡಿರುವ ಹಿಂದೂಪರ ಸಂಘಟನೆಗಳು ಜನವರಿ 10 ರ ಇಂದು ಸಾಗರ್ ಬಂದ್ ಗೆ ಕರೆ ನೀಡಿವೆ.

Read More

ಮಂಗಳೂರು;ಶಾಲೆಗೆ ಹೊರಟಿದ್ದ 9ನೇ ತರಗತಿಯ ವಿದ್ಯಾರ್ಥಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಜ.10ರಂದು ನಡೆದಿದೆ. ಕೃಷ್ಣಾಪುರ 7ನೇ ಬ್ಲಾಕ್‌ ನಿವಾಸಿ ಮೊಹಮ್ಮದ್‌ ಹಸೀಮ್‌ (17) ಮೃತ ಬಾಲಕ. ಶಾಲೆಗೆ ಹೋಗಲು ಬೆಳಗ್ಗೆ ಸಿದ್ದನಾಗಿದ್ದ ಹಸೀಮ್‌ಗೆ ಏಕಾಏಕಿ ತಲೆ ಸುತ್ತಿ ಬಿದ್ದಿದ್ದಾನೆ ಮನೆಯವರು ತಕ್ಷಣ ಸಮೀಪದ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ವೈದ್ಯರು‌ ಪರೀಕ್ಷಿಸಿ ಮೃತಪಟ್ಟಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಆದರೂ ಬದುಕಿಸುವ ಆಸೆಯಿಂದ ಪೋಷಕರು ಮುಕ್ಕದ ಖಾಸಗಿ ಆಸ್ಪತ್ರೆಗೆ ಕರೆತಂದಿದ್ದರು.ಅಲ್ಲಿ ವೈದ್ಯರು ಮರಣೋತ್ತರ ಪರೀಕ್ಷೆಗೆ ಪಟ್ಟು ಹಿಡಿದ ಹಿನ್ನೆಲೆ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.ಬಳಿಕ ಮಾಜಿ ಶಾಸಕ ಮೊಯ್ದೀನ್ ಬಾವ ಮಧ್ಯಸ್ಥಿಕೆಯಿಂದ ಪರಿಸ್ಥಿತಿ ತಿಳಿಗೊಳಿಸಲಾಗಿದೆ.

Read More

ಮೈಸೂರು: ವಿವಿಧ ಪ್ರಕರಣದಲ್ಲಿ ಭಾಗಿಯಾಗಿದ್ದಂತ ಸ್ಯಾಂಟ್ರೋ ರವಿ ಪತ್ತೆಗೆ ಮೈಸೂರು ಪೊಲೀಸರು ಮುಂದಾಗಿದ್ದು, . ಆತನ ಬಂಧನಕ್ಕೆ 11 ವಿಶೇಷ ತಂಡಗಳನ್ನು ರಚನೆ ಮಾಡಲಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಯಾಂಟ್ರೊ ರವಿ ವಿರುದ್ಧ ದಾಖಲಾಗಿರುವ ದೂರಿನ ತನಿಖೆ ನಡೆಸಲು ಮೈಸೂರು ಪೊಲೀಸ್ ಆಯುಕ್ತರಿಗೆ ಸೂಚನೆ ನೀಡಿದ್ದಾರೆ. ದೂರು ದಾಖಲಾದ ಬಳಿಕ ಸ್ಯಾಂಟ್ರೊ ರವಿ ನಾಪತ್ತೆಯಾಗಿದ್ದು, ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ. ಸ್ಯಾಂಟ್ರೋ ರವಿ ವಿಚಾರ ರಾಜಕೀಯ ವಾಕ್ಸಮರಕ್ಕೂ ಕಾರಣವಾಗಿದೆ. ಬೆಂಗಳೂರಿನಲ್ಲಿ ‘ಸ್ಯಾಂಟ್ರೋ ರವಿ’ 3 ಫ್ಲಾಟ್ ಗಳ ಮೇಲೆ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.ಮೈಸೂರಿನ ವಿಜಯನಗರ ಠಾಣೆ ಪೊಲೀಸರು ಬೆಂಗಳೂರಿನ ಶೇಷಾದ್ರಿಪುರಂ, ಬಸವನಗುಡಿ, ಟ್ರಿನಿಟಿ ಸರ್ಕಲ್ ನಲ್ಲಿರುವ ಫ್ಲಾಟ್ ಗಳ ಮೇಲೆ ದಾಳಿನಡೆಸಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಮಂಜುನಾಥ್ ಆಲಿಯಾಸ್ ಸ್ಯಾಂಟ್ರೋ ರವಿ ಕಳೆದ ನಾಲ್ಕು ತಿಂಗಳ ಹಿಂದೆಯೇ ಫ್ಲಾಟ್ ಖಾಲಿ ಮಾಡಿದ್ದನು, ಫ್ಲ್ಯಾಟ್ ನಲ್ಲಿ…

Read More

ಮಂಗಳೂರು: ಸಚಿವ ವಿ. ಸುನಿಲ್ ಕುಮಾರ್ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಇಬ್ಬರು ಸ್ಥಳೀಯ ಮುಖಂಡರಿಗೆ ಕೋರ್ಟ್ ದಂಢ ವಿಧಿಸಿದೆ. ಸಚಿವ ವಿ. ಸುನಿಲ್ ಕುಮಾರ್ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ್ದ ಕಾರ್ಕಳದ ಇಬ್ಬರು ಸ್ಥಳೀಯ ಮುಖಂಡರಿಗೆ ಬೆಂಗಳೂರಿನ 12ನೇ ಸಿಟಿ ಸಿವಿಲ್ ಕೋರ್ಟ್ 25,000 ದಂಡ ವಿಧಿಸಿ ಕ್ಷಮೆಯಾಚನೆಗೆ ಸೂಚನೆ ನೀಡಿದೆ. ಕೆಲವು ತಿಂಗಳ ಹಿಂದೆ ಕಾರ್ಕಳದ ಯೋಗೇಶ್ ನಯನಾ ಇನ್ನಾ ಹಾಗೂ ರಾಧಾಕೃಷ್ಣ ನಾಯಕ್ ಎಂಬುವರು ಸಚಿವ ಸುನಿಲ್ ಕುಮಾರ್ ವಿರುದ್ಧ ಫೇಸಬುಕ್ ಸೇರಿದಂತೆ ಇತರೆ ಜಾಲತಾಣದಲ್ಲಿ ಅವಹೇಳನಕಾರಿ ಬರಹವನ್ನು ಪ್ರಕಟಿಸಿದ್ದರು.ನಂತರ ಸುನೀಲ್ ಕುಮಾರ್ ಇಬ್ಬರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಇದೀಗ ಕೋರ್ಟ್ ಈ ಬಗ್ಗೆ ಆದೇಶ ಹೊರಡಿಸಿದೆ.

Read More

ಉಡುಪಿ : ಬ್ರೈನ್ ಟ್ಯೂಮರ್‌ನಿಂದಾಗಿ ರಾಜ್ಯ ಮಟ್ಟದ ಕ್ರಿಕೆಟ್ ಆಟಗಾರನೊಬ್ಬ ಸಾವನ್ನಪ್ಪಿದ ಘಟನೆ ಹೆಬ್ರಿಯಲ್ಲಿ ನಡೆದಿದೆ. ಮೃತಪಟ್ಟವರನ್ನು ಪೆಡೂ೯ರು ಬುಕ್ಕಿಗುಡ್ಡೆ ರಕ್ಷಿತ್ ಶೆಟ್ಟಿ (29) ಎಂದು ಗುರುತಿಸಲಾಗಿದೆ. ಗೆಳೆಯರ ಬಳಗ ಪೆರ್ಡೂರು ತಂಡದ ಮೂಲಕ ರಕ್ಷಿತ್ ಶೆಟ್ಟಿ ಕ್ರಿಕೆಟ್ ಆಟವನ್ನು ಪ್ರಾರಂಭಿಸಿದ್ದರು. ಬಳಿಕ ವಿವಿಧ ಜಿಲ್ಲಾ ಮಟ್ಟದ ತಂಡಗಳಲ್ಲಿ ಆಡಿ ಕ್ರಿಕೆಟ್‌ನಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು. ರಾಜ್ಯ ಮಟ್ಟದಲ್ಲಿಯೂ ರಕ್ಷಿತ್ ಗುರುತಿಸಿಕೊಂಡಿದ್ದರು. ಬೌಲಿಂಗ್‌ನಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದ ಅವರು, ತಮ್ಮ ಆಕರ್ಷಕ ಶೈಲಿಯ ಬೌಲಿಂಗ್ ಮೂಲಕ ಕ್ರಿಕೆಟ್ ಅಭಿಮಾನಿಗಳಿಂದ ಪ್ರಶಂಸೆ ಗಿಟ್ಟಿಸಿಕೊಂಡಿದ್ದರು. ಎಸ್.ಝಡ್‌‌.ಸಿ.ಸಿ ಮತ್ತು ಎಮ್‌.ಬಿ.ಸಿ.ಸಿ ತಂಡಗಳ ಪರವಾಗಿ ಆಡಿದ್ದರು.

Read More

ದೇಶದಲ್ಲಿ ರಣಹದ್ದುಗಳ ಸಂಖ್ಯೆ ತೀರಾ ಕಡಿಮೆಯಾಗುತ್ತಿದ್ದು, ಇದೀಗ ಅಪರೂಪದ ಬಿಳಿಯ ರಣಹದ್ದುವೊಂದನ್ನು ಉತ್ತರ ಪ್ರದೇಶದ ಕಾನ್ಪುರದ ಸ್ಥಳೀಯರು ಸೆರೆ ಹಿಡಿದಿದ್ದಾರೆ. ಹಿಮಾಲಯನ್​ ಗ್ರಿಫನ್​ ಎಂಬ ಜಾತಿಗೆ ಸೇರಿದ ರಣಹದ್ದು ಇದಾಗಿದ್ದು, ಕರ್ನಲ್​ಗಂಜ್​ನ ಈದ್ಗಾ ಸ್ಮಶಾನದಲ್ಲಿ ಸಿಕ್ಕಿದೆ. ಸುಮಾರು ಒಂದು ವಾರದಿಂದ ಈ ಪ್ರದೇಶದಲ್ಲಿ ಓಡಾಡುತ್ತಿತ್ತು ಎಂದು ಹೇಳಲಾಗುತ್ತಿದೆ. ಸ್ಥಳೀಯರೊಬ್ಬರು ಈ ಬಗ್ಗೆ ಮಾತನಾಡಿದ್ದು, ‘ರಣಹದ್ದು, ಒಂದು ವಾರದಿಂದ ಇಲ್ಲಿತ್ತು. ನಾವು ಅದನ್ನು ಹಿಡಿಯಲು ಪ್ರಯತ್ನಿಸಿದೆವು, ಆದರೆ ಯಶಸ್ವಿಯಾಗಲಿಲ್ಲ. ಆದರೆ ಅದು ಹಾರುತ್ತಾ ಕೆಳಗೆ ಬಂದಂತೆ ಸೆರೆ ಹಿಡಿದಿದ್ದೇವೆ. ಬಳಿಕ ಅರಣ್ಯ ಇಲಾಖೆಗೆ ಮಾಹಿತಿ ನೀಡಿ ಹಸ್ತಾಂತರಿಸಿದ್ದೇವೆ‘ ಎಂದರು. ಸ್ಥಳೀಯರು ಸಿಕ್ಕ ಅಪರೂಪದ ಹಿಮಾಲನ್​​ ಗ್ರಿಫನ್​ ರಣಹದ್ದುವಿನ ಜೊತೆಗೆ ವಿಡಿಯೋ ಮಾಡಿರುವುದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

Read More

ಮಂಗಳೂರು : ಇತ್ತೀಚೆಗಷ್ಟೆ ಅಧಿಕಾರ ವಹಿಸಿಕೊಂಡ ಕರ್ನಾಟಕ ಲೋಕಾಯುಕ್ತದ ಮಂಗಳೂರು ಪೊಲೀಸ್ ಅಧೀಕ್ಷಕ ಲಕ್ಷ್ಮೀಗಣೇಶ್ ವರ್ಗಾವಣೆಯಾಗಿದ್ದಾರೆ. ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ಬೆಂಗಳೂರಿನ ಕರ್ನಾಟಕ ಲೋಕಾಯುಕ್ತದ ಪ್ರಧಾನ ಕಚೇರಿಯಲ್ಲಿ ಖಾಲಿ ಇರುವ ಪೊಲೀಸ್ ಅಧೀಕ್ಷಕರ ಹುದ್ದೆಗೆ ಆಡಳಿತದ ಹಿತದೃಷ್ಟಿಯಿಂದ ಆಂತರಿಕ ವರ್ಗಾವಣೆಗೆ ಆದೇಶಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. ಸದರಿ ಹುದ್ದೆ ಪ್ರಭಾರವನ್ನು ಕರ್ನಾಟಕ ಲೋಕಾಯುಕ್ತದ ಪೊಲೀಸ್ ಉಪಾಧೀಕ್ಷಕರ ಚಲುವರಾಜು ಅವರಿಗೆ ನೀಡಲಾಗಿದೆ. ನೂತನ ಅಧೀಕ್ಷಕರಾಗಿ ಸಿ ಎ ಸೈಮನ್ ಕರ್ತವ್ಯಕ್ಕೆ ನಿಯೋಜನೆಗೊಂಡ ಬಳಿಕ ಹುದ್ದೆಯ ಪ್ರಭಾರವನ್ನು ಅವರಿಗೆ ಹಸ್ತಾಂತರಿಸಲು ಸೂಚಿಸಲಾಗಿದೆ.

Read More

ಹಿಂದೂ ಹುಡುಗಿಯ ಜೊತೆ ತಿರುಗಾಟ ನಡೆಸಿದ ಆರೋಪದಲ್ಲಿ ಮುಸ್ಲಿಂ ಯುವಕನೋರ್ವನಿಗೆ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಬ್ರಹ್ಮಣ್ಯ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ರಾಧಾಕೃಷ್ಣ (45), ವಿಶ್ವಾಸ್ ಎನ್. (19) ಎಂದು ಗುರುತಿಸಲಾಗಿದೆ. ಯುವತಿಯ ಜೊತೆ ತಿರುಗಾಡುತ್ತಿದ್ದ ಎಂದು ಆರೋಪಿಸಿ ಯುವಕನೋರ್ವನಿಗೆ ಹಿಂದೂ ಸಂಘಟನೆಗಳ ಕಾರ್ಯಕರ್ತರೆಂದು ಹೇಳಲಾದ ವ್ಯಕ್ತಿಗಳು ಮಾರಣಾಂತಿಕ ಹಲ್ಲೆ ನಡೆಸಿದ್ದಾಗಿ ಆರೋಪಿಸಲಾಗಿತ್ತು. ಜ.5ರಂದು ಕಲ್ಲುಗುಂಡಿಯ ಹಫೀದ್ ಎಂಬಾತ ಸುಬ್ರಹ್ಮಣ್ಯಕ್ಕೆ ಬಂದಿದ್ದ ವೇಳೆ ಕುಮಾರಧಾರ ಬಳಿಯ ಹಳೆ ಕಟ್ಟಡದ ಕೋಣೆಯೊಳಗೆ ಕೂಡಿ ಹಾಕಿ ಮಾರಣಾಂತಿಕ ಹಲ್ಲೆ ನಡೆಸಿದ್ದರು. ಘಟನೆಯಿಂದ ಗಾಯಗೊಂಡ ಹಫೀದ್ ಸುಳ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಸುಬ್ರಹ್ಮಣ್ಯ ಠಾಣೆಯಲ್ಲಿ ಹಫೀದ್ ದೂರು ನೀಡಿದ್ದು, ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

Read More