ಮಣಿಪಾಲ: ಅಪಘಾತದಲ್ಲಿ ಮೆದುಳು ನಿಷ್ಕ್ರಿಯಗೊಂಡಿದ್ದ ಕೊಡೇರಿ ಶಿಲ್ಪಾ ಮಾಧವ ಅವರು ಅಂಗಾಂಗ ದಾನದ ಮೂಲಕ 6 ಜೀವಗಳಿಗೆ ಬೆಳಕಾಗಿದ್ದಾರೆ. ಫೆಬ್ರವರಿ 25ರಂದು ಬೈಂದೂರು ತಾಲೂಕಿನ ಮರವಂತೆ ಬಳಿಯಲ್ಲಿ ಶಿಲ್ಪಾ ಮಾಧವ ಅವರಿಗೆ ಅಪಘಾತವಾಗಿತ್ತು. ಅವರನ್ನು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆ, ದಾಖಲಿಸಲಾಗಿತ್ತು. ಅಪಘಾತದ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ ಅವರ ಮೆದುಳು ನಿಷ್ಕ್ರಿಯವಾಗಿತ್ತು. ಆಸ್ಪತ್ರೆಯ ನುರಿತ ವೈದ್ಯರು ಶಿಲ್ಪಾ ಅವರನ್ನು ಉಳಿಸಲು ಸಾಕಷ್ಟು ಪ್ರಯತ್ನ ನಡೆಸಿದರೂ ಅವರು ಚೇತರಿಸಿಕೊಳ್ಳಲಿಲ್ಲ. ಕೊನೆಗೆ ಪರಿಣತ ವೈದ್ಯರು ಶಿಲ್ಪಾ ಅವರ ಮೆದುಳು ನಿಷ್ಕ್ರಿಯಗೊಂಡಿರುವುದಾಗಿ ಘೋಷಿಸಿದರು. ಶಿಲ್ಪಾ ಅವರ ಜೀವ ಉಳಿಸಲು ಸಾಧ್ಯವಾಗದ ವೇಳೆ ಶಿಲ್ಪಾ ಅವರ ಪತಿ ಪ್ರಸನ್ನ ಕುಮಾರ್ ಮತ್ತು ಕುಟುಂಬದ ಸದಸ್ಯರು ಅಂಗಾಂಗ ದಾನಕ್ಕೆ ಮುಂದಾದರು. ಅಂತೆಯೇ ಎರಡು ಮೂತ್ರಪಿಂಡಗಳು, ಯಕೃತ್ತು, ಚರ್ಮ ಮತ್ತು ಎರಡು ಕಾರ್ನಿಯಾಗಳನ್ನು ದಾನ ಮಾಡಲಾಯಿತು. ಈ ಮೂಲಕ ಶಿಲ್ಪಾ ಮಾಧವ ಅವರು 6 ಜೀವಗಳನ್ನು ಉಳಿಸುವ ಮೂಲಕ ತಮ್ಮ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಯಕೃತ್ ಅನ್ನು ಬೆಂಗಳೂರಿನ ಅಸ್ಟರ್ ಸಿ…
Author: main-admin
ಮಂಗಳೂರು: ಹಗ್ಗಜಗ್ಗಾಟದಲ್ಲಿ ಗೆದ್ದ ಖುಷಿಯಲ್ಲಿದ್ದಾಗಲೇ ಹೃದಯಾಘಾತವಾಗಿ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಮಂಗಳೂರಿನ ಜೆಪ್ಪುವಿನಲ್ಲಿ ನಡೆದಿದೆ. ಕುಶಲನಾಥ ಶೆಟ್ಟಿ(50) ಮೃತ ದುರ್ದೈವಿ. ಜೆಪ್ಪು ಬಂಟರ ಸಂಘದ ವತಿಯಿಂದ ಏರ್ಪಡಿಸಿದ್ದ ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ಕುಶಲನಾಥ ಶೆಟ್ಟಿ(50) ಪಾಲ್ಗೊಂಡಿದ್ದರು. ಸ್ಪರ್ಧೆಯಲ್ಲಿ ಅವರಿದ್ದ ತಂಡ ಗೆಲುವು ಸಾಧಿಸಿತ್ತು, ಸ್ಪರ್ಧೆಯ ಬಳಿಕ ಕುಳಿತಿದ್ದ ಅವರಿಗೆ ಎದೆನೋವು ಕಾಣಿಸಿಕೊಂಡಿತು, ಹಾಗೂ ವಾಂತಿ ಮಾಡಿಕೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಅವರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.
ಗೂಗಲ್ ಇದೀಗ ತನ್ನ ಕಚೇರಿಯ ಕ್ಯಾಂಟೀನ್‌ಗಳನ್ನ ಕ್ಲೀನ್ ಮಾಡ್ತಿದ್ದ ರೊಬೊಟ್‌ಗಳನ್ನು ಕೆಲಸದಿಂದ ತೆಗೆದು ಹಾಕಿದೆ ಎಂದು ವರದಿ ತಿಳಿಸಿದೆ. ಕಂಪನಿಯ ವೆಚ್ಚವನ್ನು ಬ್ಯಾಲೆನ್ಸ್ ಮಾಡಲು ರೊಬೊಟ್ ಸಾಧನಗಳ ಬಳಕೆಯನ್ನು ಗೂಗಲ್ ಸ್ಥಗಿತಗೊಳಿಸಿದೆ ಎಂದು ವರದಿಯಾಗಿದೆ. ರೊಬೊಟ್‌ಗಳ ನಿರ್ವಹಣೆಗೆ ಹೆಚ್ಚು ವೆಚ್ಚ ತಗುಳಲಿದೆ. ಪ್ರತಿ ರೊಬೊಟ್‌ನ ನಿರ್ವಹಣಾ ವೆಚ್ಚ ಲಕ್ಷಾಂತರ ರೂಪಾಯಿ ಆಗಿದ್ದು, ಬಜೆಟ್ ಕಡಿತ ಮಾಡಲು ಗೂಗಲ್ ತೀರ್ಮಾನಿಸಿದೆ. ಇದರ ಬೆನ್ನಲ್ಲೇ ಹೀಗಾಗಿ ಗೂಗಲ್ ರೊಬೊಟ್‌ಗಳನ್ನ ಸಹ ಕೆಲಸದಿಂದ ತೆಗೆದು ಹಾಕಿದೆ ಅಂತ ವರದಿಯಾಗಿದೆ.ಈ ಮೊದಲು ಸಾವಿರಾರು ಉದ್ಯೋಗಿಗಳನ್ನು ಗೂಗಲ್ ಕೆಲಸದಿಂದ ತೆಗೆದು ಹಾಕಿತ್ತು.
ವಿಟ್ಲ: ಇಡ್ಕಿದು ಕುಮೇರು ನಿವಾಸಿ ಅರವಿಂದ ಭಾಸ್ಕರ(39) ಅವರನ್ನು ಪತ್ನಿ ಹಾಗೂ ಪತ್ನಿಯ ಪರಿಚಯಸ್ಥ ಸೇರಿಕೊಂಡು ಕುತ್ತಿಗೆ ಹಿಸುಕಿ ಕೊಲೆ ಮಾಡಿರುವುದು ಪೊಲೀಸ್ ತನಿಖೆಯಿಂದ ದೃಢ ಪಟ್ಟಿದ್ದು, ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.ಅರವಿಂದ ಪತ್ನಿ ಆಶಾ ಹಾಗೂ ಮನೆಯ ಸೆಂಟ್ರಿಂಗ್ ಕೆಲಸ ನಿರ್ವಹಿಸಿದ ಯೋಗೀಶ ಗೌಡ ಆರೋಪಿಗಳಾಗಿದ್ದಾರೆ. ಅರವಿಂದ ಭಾಸ್ಕರ ಅವರು ಸುಮಾರು 2 ವರ್ಷಗಳಿಂದ ಹೊಸ ಮನೆಯನ್ನು ಕಟ್ಟಲು ಆರಂಭಿಸಿದ್ದು, ಅದರ ಸೆಂಟ್ರಿಂಗ್ ಕೆಲಸವನ್ನು ಯೋಗೀಶ ಗೌಡ ನಿರ್ವಹಿಸುತ್ತಿದ್ದು, ಆತ ಅರವಿಂದ ಭಾಸ್ಕರನ ಪತ್ನಿ ಆಶಾಳೊಂದಿಗೆ ತುಂಬಾ ಅನ್ಯೋನ್ಯವಾಗಿದ್ದ. ಅರವಿಂದ ಭಾಸ್ಕರ ಅವರು ಅಡಿಕೆ ಮಾರಾಟ ಮಾಡಿ ಬಂದ ಹಣವನ್ನು ದುಂದುವೆಚ್ಚ ಮಾಡುತ್ತಿದ್ದ ಬಗ್ಗೆ ಆತನ ಪತ್ನಿ ಆಕ್ಷೇಪಿಸುತ್ತಿದ್ದುದಲ್ಲದೇ, ಯೋಗೀಶ ಆಶಾಳೊಂದಿಗೆ ಸೇರಿಕೊಂಡು ಅರವಿಂದ ಭಾಸ್ಕರನಿಗೆ ಹಲ್ಲೆ ನಡೆಸುತ್ತಿದ್ದರು.ಇದರಿಂದ ಹೆದರಿ ರಾತ್ರಿ ವೇಳೆಯಲ್ಲಿ ಮನೆಯ ಕೋಣೆಯ ಬಾಗಿಲಿನ ಚಿಲಕವನ್ನು ಹಾಕಿ ಮಲಗುತ್ತಿರುವ ಬಗ್ಗೆ ಸುಮಾರು 1 ತಿಂಗಳ ಹಿಂದೆ ತಿಳಿಸಿದ್ದರು. ಫೆ. 26ರಂದು ಬೆಳಿಗ್ಗೆ 8ಗಂಟೆ ಸುಮಾರಿಗೆ ತಂದೆಯವರಿಗೆ ಫೋನು ಕರೆ ಮಾಡಿದ…
ವಿಟ್ಲ: ಇಡ್ಕಿದು ಗ್ರಾಮದ ಚೈತನ್ಯ ಕುಮೇರು ನಿವಾಸಿ ಅರವಿಂದ ಭಾಸ್ಕರ್ (39) ಅನುಮಾನಾಸ್ಪದ ಸಾವಿನ ವಿಚಾರಕ್ಕೆ ಸಂಬಂಧಿಸಿದಂತೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅರವಿಂದ ಭಾಸ್ಕರ ರವರ ಸಂಬಂಧಿ ನೀಡಿದ ದೂರಿನ ಮೇರೆಗೆ ಅರವಿಂದ ಭಾಸ್ಕರ್ ರವರ ಪತ್ನಿ ಹಾಗೂ ಯೋಗೀಶ್ ಗೌಡ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿರುತ್ತದೆ. ಮೃತ ಅರವಿಂದ ಭಾಸ್ಕರ ರವರ ಮೃತದೇಹದ ಸ್ಥಿತಿಗತಿಯನ್ನು ನೋಡಿದಾಗ ಅರವಿಂದ ಭಾಸ್ಕರನ ಕುತ್ತಿಗೆಯನ್ನು ಅಮುಕಿ ಹಿಡಿದು ಉಸಿರುಗಟ್ಟಿಸಿ ಕೊಲೆ ಮಾಡಿರುವ ಸಂಶಯವಿರುವುದಾಗಿ ಹಾಗೂ ಫೆ. 25 ರಂದು ರಾತ್ರಿಯಿಂದ ಫೆ.26 ರ ಬೆಳಿಗ್ಗೆಯ ಮಧ್ಯ ಸಮಯದಲ್ಲಿ ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮದ ಚೈತನ್ಯಕುಮೇರು ಎಂಬಲ್ಲಿ ಮೃತರ ವಾಸದ ಮನೆಯಲ್ಲಿ ಆರೋಪಿಗಳಾದ ಯೋಗೀಶ ಗೌಡ ಹಾಗೂ ಅರವಿಂದ ಭಾಸ್ಕರನ ಪತ್ನಿ ಆಶಾ ರವರು ಒಟ್ಟು ಸೇರಿಕೊಂಡು ಕೊಲೆ ಮಾಡುವ ಸಮಾನ ಉದ್ದೇಶದಿಂದ ಕುತ್ತಿಗೆಯನ್ನು ಅಮುಕಿ ಹಿಡಿದು ಉಸಿರುಗಟ್ಟಿಸಿ ಕೊಲೆ ಮಾಡಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ 30/2023…
ಬಂಟ್ವಾಳ : ಕೆಂಪುಗುಡ್ಡೆಯ ಮನೆಯೊಂದರ ಅಂಗಳದಲ್ಲಿ ಚಿರತೆ ಪತ್ಯಕ್ಷವಾಗಿದೆ. ಚಿರತೆಯ ಚಲನವಲನ ಸಿಸಿಟಿವಿಯಲ್ಲಿ ಗ್ರಾಮಸ್ಥರು ಭಯಗೊಂಡಿದ್ದಾರೆ. ಅಬ್ರಹಾಂ ವರ್ಗೀಸ್ ಎಂಬುವವರ ಮನೆಯಂಗಳದಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ಚಿರತೆ ಸೆರೆಹಿಡಿಯುವಂತೆ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮನವಿ ಮಾಡಿದ್ದಾರೆ.
ಭಟ್ಕಳ;ತಾಲೂಕಿನ ಹಾಡವಳ್ಳಿಯ ಓಣಿಬಾಗಿಲು ಗ್ರಾಮದಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಭಟ್ಕಳ ಪೊಲೀಸರು ಶಿವಮೊಗ್ಗದಲ್ಲಿ ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಮೊದಲು ಕೊಲೆಯಾದವರ ಸೊಸೆ ವಿದ್ಯಾ ಭಟ್ ಹಾಗೂ ಶ್ರೀಧರ್ ಭಟ್ರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು. ಆರೋಪಿ ವಿನಯ್ ಭಟ್ ಪರಾರಿಯಾಗಿದ್ದ. ನಿನ್ನೆ ಆತ ಇರುವ ಖಚಿತ ಮಾಹಿತಿ ಮೇರೆಗೆ ಆರೋಪಿ ವಿನಯ್ ಭಟ್ನನ್ನು ಭಾನುವಾರ ಶಿವಮೊಗ್ಗದಲ್ಲಿ ಬಂಧಿಸಿ ಭಟ್ಕಳಕ್ಕೆ ಕರೆತಂದಿದ್ದಾರೆ. ಫೆಬ್ರವರಿ 24ರಂದು ಆಸ್ತಿ ವಿಚಾರಕ್ಕಾಗಿ ಹಾಡವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು.ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿತ್ತು.
ಸುರತ್ಕಲ್: ಸುರತ್ಕಲ್ ನ ಚಿತ್ರಾಪುರ ಸಮೀಪದ ಪಣಂಬೂರು ಮೋಗವೀರ ಮಹಾಸಭಾ ವ್ಯಾಪ್ತಿಯ ಸಮುದ್ರ ತೀರದಲ್ಲಿ ಇಬ್ಬರ ತಂಡವೊಂದು ರಿಕ್ಷಾ ಚಾಲಕ ಸೇರಿ ಗ್ರಾಮಸ್ಥರಿಗೆ ತಲವಾರು ಝಳಪಿಸಿ ಹಲ್ಲೆ ನಡೆಸಿ, ಬೆದರಿಕೆ ಹಾಕಿದ ಘಟನೆ ಭಾನುವಾರ ಸಂಜೆ ನಡೆದಿದೆ. ಗಾಂಜಾ ಸೇವಿಸಿದ ಅಮಲಿನಲ್ಲಿ ಈ ಕೃತ್ಯ ಎಸಗಿದ್ದು, ಸುನಿಲ್ ಎಂಬ ರಿಕ್ಷಾ ಚಾಲಕ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ರಿಕ್ಷಾ ಪುಡಿಗೈಯಲಾಗಿದೆ. ಹಲ್ಲೆ ನಡೆಸಿದ ಆರೋಪಿಯನ್ನು ಪೊಲೀಸರು ಸ್ಥಳೀಯರ ಸಹಕಾರದಿಂದ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನೋರ್ವ ಸ್ಥಳದಿಂದ ಪರಾರಿಯಾಗಿದ್ದು ಆತನಿಗಾಗಿ ಶೋಧ ನಡೆಸಲಾಗುತ್ತಿದೆ.ಕಡಲು ಕೊರೆತ ತಡೆಗೆ ಹಾಕಲಾಗಿದ್ದ ಕಲ್ಲುಗಳಲ್ಲಿ ಕಳೆದ ಹಲವು ತಿಂಗಳಿನಿಂದ ಮಾದಕ ವ್ಯಸನಿಗಳು ಅನೈತಿಕ ಚಟುವಟಿಕೆ ನಡೆಸುತ್ತಿದ್ದು, ಈ ಕುರಿತು ಗ್ರಾಮಸ್ಥರು ಎಚ್ಚರಿಕೆ ನೀಡಿದ್ದರು ಎಂದು ತಿಳಿದು ಬಂದಿದೆ. ಇದೇ ದ್ವೇಷದಿಂದ ಈ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ ಎಂದು ಹೇಳಲಾಗಿದೆ.ಸುರತ್ಕಲ್ ಠಾಣಾ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬೆಂಗಳೂರು: ಅಪಾರ್ಟ್‌ಮೆಂಟ್‌ನ 11ನೇ ಮಹಡಿಯಿಂದ ಜಿಗಿದು ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಚಾಲುಕ್ಯ ಸರ್ಕಲ್ ಬಳಿ ನಡೆದಿದೆ. ಸೋಫಿಯ ಕಾಲೇಜಿನ ವಿದ್ಯಾರ್ಥಿನಿ ಪ್ರಕೃತಿ (18) ಸಾವನ್ನಪ್ಪಿದವಳು ಎಂದು ತಿಳಿದುಬಂದಿದೆ. ಹೈ ಪಾಯಿಂಟ್ ಅಪಾರ್ಟ್‌ಮೆಂಟ್‌ನ 11ನೇ ಮಹಡಿಯಿಂದ ಕಳೆಗೆ ಹಾರಿದ ಯುವತಿ ಕೆಂಪು ಬಣ್ಣದ ಕಾರಿನ ಮೇಲೆ ಅಪ್ಪಳಿಸಿ ನೆಲಕ್ಕೆ ಬಿದ್ದು ಸಾವನ್ನಪ್ಪಿದ್ದಾಳೆ.ಯುವತಿ ಮೇಲಿನಿಂದ ಬಿದ್ದಿದ್ದರಿಂದ ಕಾರಿನ ಹಿಂಭಾಗದ ಗಾಜು ಪುಡಿಪುಡಿಯಾಗಿದೆ. ಸದ್ಯ ಘಟನಾ ಸ್ಥಳಕ್ಕೆ ಹೈಗ್ರೌಂಡ್ಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯಲ್ಲಿ ಯುವತಿ ಮೊಬೈಲ್ ಒಡೆದು ಹೋಗಿದ್ದು, ಆಕೆಯ ಜೇಬಲ್ಲಿ 300 ರೂಪಾಯಿ ಪತ್ತೆಯಾಗಿದೆ.
ಮಂಗಳೂರು :ಸಾಮಾಜಿಕ ಜಾಲತಾಣದಲ್ಲಿ ಬಾಲಕನೊಬ್ಬನಿಗೆ ಥಳಿಸುತ್ತಿರುವ ಹಳೆಯ ವಿಡಿಯೋ ಒಂದು ವೈರಲ್ ಆಗಿದ್ದು, ಈ ಕುರಿತಂತೆ ಇದೀಗ ದಕ್ಷಿಣ ಕನ್ನಡ ಎಸ್ಪಿ ಡಾ. ಅಮಟೆ ವಿಕ್ರಂ ಸ್ಪಷ್ಟನೆ ನೀಡಿದ್ದು, ಹಳೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹಬ್ಬಿಸಿ ಸಮಾಜದ ಸ್ವಾಸ್ಥ್ಯ ಕೆಡಿಸುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ದಕ್ಷಿಣ ಕನ್ನಡ ಎಸ್ಪಿ ಡಾ. ಅಮಟೆ ವಿಕ್ರಂ ತಿಳಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮೂಲಕ ಸ್ಟಷ್ಟನೆ ನೀಡಿರುವ ಎಸ್ಪಿ ಡಾ. ಅಮಟೆ ವಿಕ್ರಂ, ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಗೆ ಸಂಬಂಧಿಸಿದಂತೆ ಬಾಲಕನೋರ್ವನಿಗೆ ಕೆಲ ಯುವಕರು ಥಳಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ಘಟನೆಯು ದಿನಾಂಕ 27/10/2021ರಂದು ಸುಬ್ರಮಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಈ ಬಗ್ಗೆ ಸುಬ್ರಮಣ್ಯ ಪೊಲೀಸ್ ಠಾಣೆಯಲ್ಲಿ ಅ.ಕ್ರ 77/2021 ರಂತೆ ಪ್ರಕರಣ ದಾಖಲಿಸಿಕೊಂಡು 10 ಜನ ಆರೋಪಿಗಳ ವಿರುದ್ಧ ದೋಷಾರೋಪಣಾ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ. ಪ್ರಸ್ತುತ ಈ ಪ್ರಕರಣವು ನ್ಯಾಯಾಂಗ ವಿಚಾರಣೆಯಲ್ಲಿರುತ್ತದೆ. ಈ ರೀತಿಯ…









