Author: main-admin

ಬಂಟ್ವಾಳ : ಒಣ ಹುಲ್ಲು ಸಾಗಾಟದ ಲಾರಿಯೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಘಟನೆ ಶನಿವಾರ ಕಲ್ಲಡ್ಕ ಸಮೀಪದ ದಾಸಕೋಡಿಯಲ್ಲಿ ನಡೆದಿದೆ. ಹಾಸನದಿಂದ ಮಂಗಳೂರು ಕಡೆಗೆ ಆಗಮಿಸುತ್ತಿದ್ದ ಲಾರಿಯು ಹೆದ್ದಾರಿಯಲ್ಲಿ ಆಗಮಿಸುತ್ತಿರುವ ವೇಳೆ ಹೊತ್ತಿ ಉರಿದಿದ್ದು, ಬ್ಯಾಟರಿ ಶಾರ್ಟ್ ಸರ್ಕ್ಯೂಟ್ ನಿಂದ ಉರಿದಿದೆ ಎನ್ನಲಾಗಿದ್ದು, ಬಂಟ್ವಾಳ ಅಗ್ನಿಶಾಮಕ ಠಾಣೆಯವರು ಬೆಂಕಿ ನಂದಿಸಿದ್ದಾರೆ. ಜತೆಗೆ ಶನಿವಾರ ತಾಲೂಕಿನ ಸಜೀಪಮೂಡದ ಬೊಳ್ಳಾಯಿ, ಮೊಡಂಕಾಪು ಸಮೀಪದ ಬಂಟಗುರಿ, ಪಲ್ಲಮಜಲಿನಲ್ಲೂ ಗುಡ್ಡ ಪ್ರದೇಶಕ್ಕೆ ಬೆಂಕಿ ಹಿಡಿದಿದೆ. ಬಂಟಗುರಿ, ಪಲ್ಲಮಜಲಿಗೆ ಬಂಟ್ವಾಳ ಅಗ್ನಿಶಾಮಕ ದಳ, ಬೊಳ್ಳಾಯಿಗೆ ಮಂಗಳೂರು ಅಗ್ನಿಶಾಮಕ ದಳದವರು ತೆರಳಿ ಬೆಂಕಿ ನಂದಿಸುವ ಕಾರ್ಯ ನಿರ್ವಹಿಸಿದ್ದಾರೆ.

Read More

ವಿಜಯಪುರ: ಗುಡಿಸಲಿಗೆ ಬೆಂಕಿ ಬಿದ್ದು ಇಬ್ಬರು ಸಜೀವ ದಹನವಾಗಿದ್ದಾರೆ. ಅಗ್ನಿ ಅವಘಡದಲ್ಲಿ ವೃದ್ಧ ದಂಪತಿ ಸಜೀವ ದಹನವಾಗಿದ್ದಾರೆ. ವಿಜಯಪುರ ಜಿಲ್ಲೆ ಚಡಚಣದ ಹೊರವಲಯದ ಜಮೀನಿನಲ್ಲಿ ಘಟನೆ ನಡೆದಿದೆ. 82 ವರ್ಷದ ಕರೀಂ ಸಾಬ್ ಟಪಾಲ ಮತ್ತು ಸಾಜನಬೀ ಟಪಾಲ(72) ಮೃತಪಟ್ಟವರು ಎಂದು ಹೇಳಲಾಗಿದೆ. ಜಮೀನಿನಲ್ಲಿರುವ ಗುಡಿಸಲಿನಲ್ಲಿ ಕರೀಂಸಾಬ್ ಮತ್ತು ಸಾಜನಬೀ ವಾಸವಾಗಿದ್ದರು. ಆಕಸ್ಮಿಕವಾಗಿ ಬೆಂಕಿ ತಗುಲಿ ಇಬ್ಬರೂ ಸಜೀವ ದಹನವಾಗಿದ್ದಾರೆ ಎನ್ನಲಾಗಿದೆ. ಘಟನೆ ಚಡಚಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Read More

ಉಪ್ಪಿನಂಗಡಿ: ಇ- ಸಿಗರೇಟ್ ಮಾರಾಟ ಮಾಡುತ್ತಿದ್ದ ಮೊಬೈಲ್ ಅಂಗಡಿಯೊಂದಕ್ಕೆ ಉಪ್ಪಿನಂಗಡಿ ಪೊಲೀಸರು ದಾಳಿ ನಡೆಸಿದ ಘಟನೆ ಶನಿವಾರ ನಡೆದಿದೆ. ಇಲ್ಲಿನ ಪೃಥ್ವಿ ಕಾಂಪ್ಲೆಕ್ಸ್ ನ ಹಿಂಬದಿಯ ಒಳಸಂದಿನಲ್ಲಿರುವ ಮೊಬೈಲ್ ಅಂಗಡಿಯೊಂದರಲ್ಲಿ ಇ- ಸಿಗರೇಟ್ ಮಾರಲಾಗುತ್ತಿದೆ ಅನ್ನುವ ಖಚಿತ ಮಾಹಿತಿ ಪಡೆದ ಪುತ್ತೂರು ಗ್ರಾಮಾಂತರ ವೃತ್ತ ನಿರೀಕ್ಷಕ ರವಿ ಹಾಗೂ ಉಪ್ಪಿನಂಗಡಿ ಪೊಲೀಸ್ ಠಾಣಾ ಉಪನಿರೀಕ್ಷಕ ರಾಜೇಶ್ ಕೆ.ವಿ. ಅವರ ತಂಡ ಮೊಬೈಲ್ ಅಂಗಡಿಯಿಂದ ಇ- ಸಿಗರೇಟ್ ಗೆ ಬಳಸಲಾಗುವ ಅಮಲು ಪದಾರ್ಥ, ಸ್ಮೋಕ್ ಮಾಡಲು ಬೇಕಾದ ಟ್ಯೂಬ್ ಗಳನ್ನು ವಶಕ್ಕೆ ತೆಗೆದುಕೊಂಡಿದೆ. ಯುವ ಜನತೆಯನ್ನು ಆಕರ್ಷಿಸುವ ಇ- ಸಿಗರೇಟ್ ಮಾರಾಟ ಕಾನೂನು ಬಾಹಿರವಾಗಿದ್ದು, ಇದು ರಾಜ್ಯದಲ್ಲೇ ಅಪರೂಪದ ಪ್ರಕರಣವಾಗಿದೆ. ತನಿಖೆ ಪ್ರಗತಿಯಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Read More

ಬೆಳ್ತಂಗಡಿ: ಉಜಿರೆಯ ಲಾಡ್ಜ್ ಗಳಲ್ಲಿ ಬೆಳ್ತಂಗಡಿ ಇನ್ಸ್ ಪೆಕ್ಟರ್ ಸತ್ಯನಾರಾಯಣ ಅವರ ನೇತೃತ್ವದಲ್ಲಿ ಪೊಲೀಸರು ಶನಿವಾರ ರಾತ್ರಿ ಪರಿಶೀಲನೆ ನಡೆಸಿ ವಸತಿಗೃಹದ ಮಾಲಕರುಗಳಿಗೆ ಎಚ್ಚರಿಕೆ ನೀಡಿದ್ದಾರೆ. ಕೆಲ ದಿನಗಳ ಹಿಂದೆ ಪೊಲೀಸರು ಪರಿಶೀಲನೆ ನಡೆಸಿದಾಗ ಉಜಿರೆಯ ಒಂದು ವಸತಿ ಗೃಹದಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವುದು ಕಂಡು ಬಂದಿತ್ತು. ಐವರು ಮಹಿಳೆಯರನ್ನು ರಕ್ಷಿಸಲಾಗಿತ್ತು ಇಬ್ಬರನ್ನು ಪೊಲೀಸರು ಬಂಧಿಸಿದ್ದರು. ಇದೀಗ ಇಂದು ಮತ್ತೆ ಪೊಲೀಸರು ಪರಿಶೀಲನೆ ನಡೆಸಿ ಎಚ್ಚರಿಕೆ ನೀಡಿದ್ದಾರೆ. ಪರಿಶೀಲನೆಯ ವೇಳೆ ಯಾವುದೇ ಅಕ್ರಮಗಳು ಕಂಡು ಬಂದಿಲ್ಲ ಎನ್ನಲಾಗಿದೆ.

Read More

ರಾಯಪುರ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ರಾಜಕೀಯ ನಿವೃತ್ತಿಯ ಸುಳಿವು ನೀಡಿದ್ದಾರೆ. ರಾಯ್ ಪುರದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಸಮಾವೇಶದಲ್ಲಿ ಅವರು ತಮ್ಮ ಮನದಾಳದ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ. ಭಾರತ್ ಜೋಡೋ ಯಾತ್ರೆಯೊಂದಿಗೆ ನನ್ನ ರಾಜಕೀಯ ಇನ್ನಿಂಗ್ಸ್ ಅಂತ್ಯಗೊಂಡಿದೆ ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ. 2024ರ ಲೋಕಸಭೆ ಚುನಾವಣೆಯಲ್ಲಿ ಸೋನಿಯಾ ಗಾಂಧಿ ಸ್ಪರ್ಧಿಸುವ ಸಾಧ್ಯತೆ ಕಡಿಮೆ ಎಂಬ ಅಭಿಪ್ರಾಯ ಈ ಮೂಲಕ ವ್ಯಕ್ತವಾಗಿದೆ.ಈ ಹಿಂದಿನ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸಾಧನೆ ತೃಪ್ತಿ ತಂದಿದೆ ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ.

Read More

ಮಧ್ಯಪ್ರದೇಶ: ಅಂಕಪಟ್ಟಿ ಕೊಡಲು ವಿಳಂಬ ಮಾಡಿದ್ರು ಎಂಬ ಕಾರಣಕ್ಕೆ ವಿದ್ಯಾರ್ಥಿಯೊಬ್ಬ ಮಹಿಳಾ ಪ್ರಾಂಶುಪಾಲರ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಂದಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ನಡೆದಿದೆ. ಫೆಬ್ರವರಿ 20 ರಂದು ಬಿಎಂ ಫಾರ್ಮಸಿ ಕಾಲೇಜಿನ ಪ್ರಾಂಶುಪಾಲರಾದ ವಿಮುಕ್ತ ಶರ್ಮಾ ಮೇಲೆ ಮಾಜಿ ವಿದ್ಯಾರ್ಥಿ ಅಶುತೋಷ್ ಶ್ರೀವಾಸ್ತವ (24) ಎಂಬಾತ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದ. ಈ ವೇಳೆ, ವಿಮುಕ್ತಾರ ದೇಹ ಶೇ. 90ರಷ್ಟು ಸುಟ್ಟ ಗಾಯಗಳಾಗಿತ್ತು. ಕೂಡಲೇ ಅವರನ್ನು ಚೋಯಿತ್ರಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ, ವಿಮುಕ್ತ ಇಂದು (ಶನಿವಾರ) ಮುಂಜಾನೆ 4 ಗಂಟೆ ಸುಮಾರಿಗೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಅವರ ಸಹೋದರ ಅರವಿಂದ್ ತಿವಾರಿ ತಿಳಿಸಿದ್ದಾರೆ. ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕರ್ತವ್ಯ ನಿರ್ಲಕ್ಷ್ಯದ ಆರೋಪದ ಮೇಲೆ ಮಧ್ಯಪ್ರದೇಶದ ಇಂದೋರ್‌ನಲ್ಲಿ ಪೊಲೀಸ್ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ವರದಿಯಾಗಿದೆ. ಏತನ್ಮಧ್ಯೆ, ಇಂದೋರ್ ಆಡಳಿತವು ಅಶುತೋಷ್ ಶ್ರೀವಾಸ್ತವ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಮೂಲಕ ವಿಚಾರಣೆ ಪ್ರಾರಂಭಿಸಿದೆ.…

Read More

ಮೂಡುಬಿದಿರೆ:ಮಹಿಳೆಯ ಹೆಸರಿನಲ್ಲಿ ಧ್ವನಿ ಅನುಕರಿಸಿ ವ್ಯಕ್ತಿಗೆ ಕರೆ ಮಾಡಿ ಹಣ ವಸೂಲಿ ಮಾಡಿದ್ದ ಆರೋಪಿಯನ್ನು ಸುರತ್ಕಲ್‌ ಪೊಲೀಸರು ಬಂಧಿಸಿದ್ದಾರೆ. ಮೂಡುಬಿದಿರೆ ನಿವಾಸಿ ಧನಂಜಯ ಬಂಧಿತ.ಈತ ಬೈಕಂಪಾಡಿಯ ಕಂಪೆನಿಯೊಂದರ ಉದ್ಯೋಗಿಗೆ, ಉಷಾ ಎಂದು ಪರಿಚಯಿಸಿಕೊಂಡು ಹೆಣ್ಣಿನ ಸ್ವರದಲ್ಲಿ ಕರೆ, ವೀಡಿಯೋ ಕಾಲ್‌ ಮಾಡಿ ಹುಡುಗಿಯರ ಖಾಸಗಿ ಅಂಗಗಳನ್ನು ತೋರಿಸಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡಿದ್ದಾನೆ ಎನ್ನಲಾಗಿದೆ. ಧನಂಜಯ್ ವಿಡಿಯೋ ಇಟ್ಟುಕೊಂಡು 25 ಸಾವಿರ ಹಣ ಕೊಡಬೇಕು, ಇಲ್ಲವಾದಲ್ಲಿ ಈ ವೀಡಿಯೋ ಕ್ಲಿಪ್ಪಿಂಗನ್ನು ಬೇರೆಯವರಿಗೆ ಕಳುಹಿಸುವುದಾಗಿ ಬೆದರಿಸಿದ್ದ.ಈ ಕುರಿತು ಸುರತ್ಕಲ್ ಪೊಲೀಸರಿಗೆ ದೂರು ನೀಡಲಾಗಿತ್ತು.ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

Read More

ಕೇರಳ: ಭಾರತದಲ್ಲಿ ಹಿಂದೂ ದೇವರುಗಳಿಗೆ ಒಂದೊಂದು ರೀತಿಯ ನೈವೇದ್ಯಗಳು ಅಚ್ಚುಮೆಚ್ಚು. ಉದಾಹರಣೆಗೆ ಅಯ್ಯಪ್ಪಸ್ವಾಮಿಗೆ ತುಪ್ಪ, ಕೃಷ್ಣನಿಗೆ ಬೆಣ್ಣೆ, ಗಣಪತಿಗೆ ಕಡುಬು, ಲಡ್ಡು ನೈವೇದ್ಯ ಅಂದರೆ ಹೆಚ್ಚು ಪ್ರೀತಿ. ಆದರೆ ಕೇರಳದ ಅಳಪ್ಪುಳದ ಬಾಲಮುರುಗನ್ ದೇವರಿಗೆ “ಮಂಚ್” ಚಾಕೋಲೇಟ್ ಅತ್ಯಂತ ಪ್ರಿಯವಾದ ಹರಕೆಯಾಗಿದೆಯಂತೆ!ಕೇರಳದ ಅಳಪ್ಪುಳದ ಚೆಮ್ಮೋತ್ ನ ಶ್ರೀಸುಬ್ರಹ್ಮಣ್ಯ ಸ್ವಾಮಿ ದೇವಾಲಯವೇ ಕಳೆದ ಆರು ವರ್ಷಗಳಿಂದ “ಮಂಚ್ ಮುರುಗನ್” ದೇವಾಲಯ ಎಂದೇ ಜನಪ್ರಿಯಗೊಂಡಿದೆ. ಚೆಮ್ಮೋತ್ ನ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕೆಲವು ವರ್ಷಗಳ ಹಿಂದೆ ಪುಟ್ಟ ಬಾಲಕನೊಬ್ಬ ಮಂಚ್ ಚಾಕೊಲೇಟ್ ಅನ್ನು ಬಾಲಮುರುಗನ್ ದೇವರಿಗೆ ಅರ್ಪಿಸಿದ ನಂತರ ಅದನ್ನು ಇಷ್ಟಪಟ್ಟಿದ್ದಾನೆ ಎಂಬುದನ್ನು ಗ್ರಹಿಸಲಾಗಿತ್ತು. ಚೆಮ್ಮೋತ್ ನ ಶ್ರೀಸುಬ್ರಹ್ಮಣ್ಯ ಸ್ವಾಮಿ(ಬಾಲಮುರುಗನ್) ದೇವಸ್ಥಾನಕ್ಕೆ ಮೊದಲು ಹಣ್ಣು, ಕಾಯಿ-ಹಂಪಲು, ದ್ರಾಕ್ಷಿ, ಗೋಡಂಬಿ ಸೇರಿದಂತೆ ಇನ್ನಿತರ ನೈವೇದ್ಯ ಅರ್ಪಿಸುತ್ತಿದ್ದರಂತೆ. ಆದರೆ ದೇವಾಲಯದ ಆಡಳಿತ ನಡೆಸುತ್ತಿರುವ ಅನೂಪ್ ಎ.ಚೆಮ್ಮೋತ್ ಅವರ ಹೇಳಿಕೆಯ ಪ್ರಕಾರ, ಕಳೆದ ಆರು ವರ್ಷಗಳ ಹಿಂದೆ ನಡೆದ ಒಂದು ಘಟನೆಯಿಂದ. ಈ ಮಂಚ್ ಮುರುಗನ್ ಹೆಸರು…

Read More

ಭಟ್ಕಳ;ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸುವ ಘಟ‌ನೆ ಭಟ್ಕಳದಿಂದ ವರದಿಯಾಗಿದೆ. ಆಸ್ತಿಗಾಗಿ ಒಂದೇ ಮನೆಯ ನಾಲ್ವರ ಕೊಲೆ ನಡೆದಿದೆ. ಭಟ್ಕಳ ತಾಲೂಕಿನ ಹಾಡುವಳ್ಳಿಯಲ್ಲಿ ಶಂಭು ಭಟ್ (65), ಅವರ ಪತ್ನಿ ಮಾದೇವಿ ಭಟ್ (40), ಪುತ್ರ ರಾಜೀವ್ ಭಟ್ (34) ಹಾಗೂ ಸೊಸೆ ಕುಸುಮಾ ಭಟ್ (30) ಕೊಲೆಯಾದವರು. ಮನೆಯ ಹೊರಗಡೆ ನಾಲ್ವರ ಶವ ಚೆಲ್ಲಾಪಿಲ್ಲಿಯಾಗಿ ಕಂಡು ಬಂದಿದೆ. ನಾಲ್ವರನ್ನು ಅಟ್ಟಾಡಿಸಿ ಕತ್ತಿಯಿಂದ ಕಡಿದು ಕೊಲೆ ಮಾಡಲಾಗಿದೆ. ಕೊಲೆಯ ವೇಳೆ ನಾಲ್ಕು ವರ್ಷದ ಮಗು ಮಲಗಿದ್ದರಿಂದ ಹಾಗೂ ಇನ್ನೊಂದು ಮಗು ಪಕ್ಕದ ಮನೆಯಲ್ಲಿ ಆಟವಾಡುತ್ತಿದ್ದುದರಿಂದ ಬದುಕುಳಿದಿದೆ. ಶಂಭು ಭಟ್ ಅವರ ಹಿರಿಯ ಸೊಸೆ ವಿದ್ಯಾ ಭಟ್​ ಕುಟುಂಬಸ್ಥರಿಂದ ಈ ಕೊಲೆ ನಡೆದಿರುವ ಶಂಕೆ ಇದೆ. ಈಕೆಯ ಪತಿ ಶ್ರೀಧರ್ ಭಟ್​ ಕೆಲವು ತಿಂಗಳ ಹಿಂದೆ ಮೂತ್ರಪಿಂಡ ವೈಫಲ್ಯದಿಂದ ಮೃತಪಟ್ಟಿದ್ದರು. ಆ ಬಳಿಕ ಶಂಭು ಭಟ್ ಬಳಿ ಜೀವನಾಂಶಕ್ಕೆ ಆಸ್ತಿಯಲ್ಲಿ ಪಾಲು ಕೊಡುವಂತೆ ವಿದ್ಯಾ ಭಟ್​ ಕುಟುಂಬಸ್ಥರು ಕೇಳಿದ್ದರು. ಇದೇ ವಿಚಾರವಾಗಿ ಹಲವು ಬಾರಿ ಎರಡೂ…

Read More

ಬೆಂಗಳೂರು : ವಿಧಾನಸೌಧದಲ್ಲಿ ಮೈಕ್ ಆನ್ ಮಾಡುವಾಗ ಇಂಧನ ಸಚಿವ ಸುನೀಲ್ ಕುಮಾರ್ ಗೆ ವಿದ್ಯುತ್ ಶಾಕ್ ತಗುಲಿದೆ. ಇಂದು ವಿಧಾನಸೌಧದಲ್ಲಿ ಮೈಕ್ ಸ್ವಿಚ್ ಆನ್ ಮಾಡುವಾಗ ಶಾಕ್ ಹೊಡೆದಿದ್ದು, ಸುನೀಲ್ ಕುಮಾರ್ ಒಂದು ಕ್ಷಣ ಬೆಚ್ಚಿ ಬಿದ್ದಿದ್ದಾರೆ. ಈ ಹಿನ್ನೆಲೆ ಕಾನೂನು ಸಚಿವ ಜೆ.ಸಿ ಮಾಧುಸ್ವಾಮಿ ಪವರ್ ಮಿನಿಸ್ಟರ್ ಗೆ ಶಾಕ್ ಹೊಡೆಯತಲ್ವಾ..? ಎಂದು ಹಾಸ್ಯ ಚಟಾಕಿ ಹಾರಿಸಿದ್ದಾರೆ. ಸದನದಲ್ಲಿ ಬಿಲ್ ಮಂಡಿಸಲು ಸುನೀಲ್ ಕುಮಾರ್ ನಿಂತಿದ್ದಾಗ ಮೈಕ್ ಆನ್ ಮಾಡಲು ಹೋಗಿ ಕರೆಂಟ್ ತಗಲಿಸಿಕೊಂಡಿದ್ದಾರೆ ಎನ್ನಲಾಗಿದೆ.

Read More