ಮಂಗಳೂರು: ನಗರ ಪೊಲೀಸ್ ಕಮಿಷನರ್ ಆಗಿ ಕುಲದೀಪ್ ಜೈನ್ ಶುಕ್ರವಾರ ಅಧಿಕಾರ ಸ್ವೀಕರಿಸಿದರು. ಮಂಗಳೂರು ನಗರ ಪೊಲೀಸ್ ಕಮಿಷನರ್ ಆಗಿದ್ದ ಎನ್. ಶಶಿಕುಮಾರ್ ಅವರನ್ನು ರೈಲ್ಚೆ ಡಿಐಜಿ ಹುದ್ದೆಗೆ ವರ್ಗಾವಣೆಯಾಗಿದ್ದಾರೆ. ಈ ವೇಳೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ನೂತನ ಕಮಿಷನರ್ ಭ್ರಷ್ಟಾಚಾರವನ್ನು ಸಹಿಸಲಾಗದು. ಅಧಿಕಾರಿಗಳ ವಿರುದ್ಧಯಾವುದೇ ರೀತಿಯ ಭ್ರಷ್ಟಾಚಾರದ ದೂರುಗಳು ಬಂದರೆ ಅವರ ಮೇಲೆ ಕ್ರಮ ಕೈಗೊಳ್ಳಲಾಗುವುದು. ಜನರಿಗೆ ಅನುಕೂಲವಾಗುವಂತೆ ಸಿಬ್ಬಂದಿ ಕೆಲಸ ಮಾಡಬೇಕು ಎಂದು ಸೂಚಿಸಲಾಗಿದೆ. ಮಂಗಳೂರು ಒಳ್ಳೆ ಯ ನಗರವಾಗಿದ್ದು, 10 ವರ್ಷಗಳ ಹಿಂದೆ ಇಲ್ಲಿ ಪ್ರೊಬೆಷನರಿ ಅಧಿಕಾರಿಯಾಗಿ ಕೆಲಸ ಮಾಡಿದ್ದೆ. ಮಂಗಳೂರಿನ ಜನರು ಸಹಕಾರ ನೀಡಬೇಕು, ಸಂಚಾರ ನಿಯಮವನ್ನು ಪಾಲಿಸಬೇಕು ಎಂದರು. ಕುಲದೀಪ್ ಜೈನ್ ಅವರು 2011ನೇ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿದ್ದಾರೆ.
Author: main-admin
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಾಲ್ಕು ವರ್ಷಗಳ ಹಿಂದೆ ನಡೆದ ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪಿಗೆ ಮಂಗಳೂರು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಪೊಕ್ಸೊ) ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪಿತ್ತಿದೆ. ಬಂಟ್ವಾಳ ತಾಲೂಕಿನ ಗ್ರಾಮವೊಂದರ ಪರಿಶಿಷ್ಟ ಪಂಗಡಕ್ಕೆ ಸೇರಿದ ಅಪ್ರಾಪ್ತ ವಯಸ್ಸಿನ ಬಾಲಕಿಯ ಇಚ್ಚೆಗೆ ವಿರುದ್ಧವಾಗಿ 2019ರ ಫೆ.11ರಂದು ಮಧ್ಯಾಹ್ನ 1ಕ್ಕೆ ಆರೋಪಿ ಉಳಿ ಗ್ರಾಮದ ಪುಲ್ಲೇರಿ ಮನೆಯ ಸತೀಶ್ ಪೂಜಾರಿ (35) ಎಂಬಾತ ಲೈಂಗಿಕ ದೌರ್ಜನ್ಯ ಎಸಗಿದ್ದ ಎಂದು ಆರೋಪಿಸಲಾಗಿತ್ತು. ಈ ಬಗ್ಗೆ 2019ರ ಮಾರ್ಚ್ 22ರಂದು ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಂದಿನ ತನಿಖಾಧಿಕಾರಿಯಾಗಿದ್ದ ಬಂಟ್ವಾಳ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕ ಸೈದುಲ್ ಅಡಾವತ್ ಆರೋಪಿ ಸತೀಶ್ ಪೂಜಾರಿಯನ್ನು ಬಂಧಿಸಿ ಸೂಕ್ತ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ, ತನಿಖೆ ನಡೆಸಿ, ಆರೋಪಿಯ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ್ದರು. ಉಪವಿಭಾಗಧಿಕಾರಿ ಕಚೇರಿಯ ಹೆಚ್‌ಸಿ ಸೀತರಾಮ ಹಾಗೂ ಪಿಸಿ ಸಫೀನಾ…
ಕಾಸರಗೋಡು: ಕೆಂಪು ಕಲ್ಲು ಸಾಗಿಸುತ್ತಿದ್ದ ಲಾರಿ ಚಾಲಕರಿಗೆ ರಿವಾಲ್ವರ್ ತೋರಿಸಿ ಎರಡು ಲಾರಿಗಳನ್ನು ಅಪಹರಿಸಿದ ಘಟನೆ ಬುಧವಾರ ಕರ್ನಾಟಕ ಕೇರಳ ಗಡಿಯ ಮೀಯಪದವಿನಲ್ಲಿ ನಡೆದಿದ್ದು, ಪ್ರಕರಣವನ್ನು ಕೆಲವೇ ಗಂಟೆಗಳಲ್ಲಿ ಮಂಜೇಶ್ವರ ಪೊಲೀಸರು ಬೇಧಿಸಿ ನಾಲ್ವರನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಮಹಾರಾಷ್ಟ್ರ ನಾಸಿಕ್ ನ ರಾಕೇಶ್ ಕಿಶೋರ್ (25), ಸೋಂಕಾಲಿನ ಹೈದರ್ ಅಲಿ (22), ಪೈವಳಿಕೆ ಕಳಾಯಿಯ ಸಯಾಫ್ (22), ಮೀಯಪದವು ಮುಹಮ್ಮದ್ ಸಫ್ವಾನ್ (23) ಬಂಧಿತರು. ಈ ವೇಳೆ ಮತ್ತಿಬ್ಬರು ಪರಾರಿಯಾಗಿದ್ದು, ಅವರಿಗಾಗಿ ಶೋಧ ಆರಂಭವಾಗಿದೆ. ಬಂಧಿತರಿಂದ ಅಪಹರಣಗೊಂಡ ಎರಡು ಲಾರಿ, ಪಿಸ್ತೂಲ್, ನಾಲ್ಕು ಸಜೀವ ಗುಂಡುಗಳು, ಕಾರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆ ವಿವರ ಬುಧವಾರ ಸಂಜೆ 6 ಗಂಟೆಯ ವೇಳೆ ಮೀಯಪದವು ಬೆಜ್ಜದಲ್ಲಿ ಬರುತ್ತಿದ್ದ ಎರಡು ಲಾರಿಯನ್ನು ಪಿಸ್ತೂಲು ತೋರಿಸಿ ಅಡ್ಡಗಟ್ಟಿ ಕೆಳಗಿಳಿಸಿ ಮೊಬೈಲ್, ಹಣವನ್ನು ದೋಚಿ ಲಾರಿಗಳನ್ನು ಅಪಹರಿಸಿದ್ದರು. ಈ ಬಗ್ಗೆ ತಕ್ಷಣ ಮಾಹಿತಿ ಪಡೆದ ಮಂಜೇಶ್ವರ ಪೊಲೀಸರು ಲಾರಿಗಳನ್ನು ಬೆನ್ನಟ್ಟಿದ್ದಾಗ ಪೈವಳಿಕೆ ಕೊಮ್ಮಂಗಳ ಬಳಿ ಎರಡು…
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯಿಂದ 5 ಮತ್ತು 8ನೇ ತರಗತಿಯ ವಾರ್ಷಿಕ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಪ್ರಕಟಿತ ವೇಳಾಪಟ್ಟಿಯಂತೆ ಮಾರ್ಚ್ 13ರಿಂದ 5 ಮತ್ತು 8ನೇ ತರಗತಿಯ ಪರೀಕ್ಷೆಗಳು ಆರಂಭಗೊಳ್ಳಲಿವೆ. ದಿನಾಂಕ 06-03-2023ಯ ಸೋಮವಾರದಿಂದ ದಿನಾಂಕ 10-03-2023ರ ಶುಕ್ರವಾರದವರೆಗೆ ವಿದ್ಯಾರ್ಥಿಗಳಿಗೆ ಮೌಖಿಕ ಪರೀಕ್ಷೆಗಳನ್ನು ಆಯಾ ಶಾಲೆಗಳಲ್ಲಿ ನಿರ್ವಹಿಸಲಾಗುತ್ತದೆ. ವಿಶೇಷ ಶಾಳೆಗಳ ವಿದ್ಯಾರ್ಥಿಗಳಿಗೆ ಮಂಡಲಿಯಿಂದ ಸರಬರಾಜು ಮಾಡುವ ಪ್ರಶ್ತೋತ್ತರ ಪತ್ರಿಕೆಗಳನ್ನೇ ಬಳಸಿ, ಶಾಲಾ ಹಂತದಲ್ಲಿ ಹಿಂದಿನ ಸಾಲುಗಳಲ್ಲಿ ನಡೆಸಿದಂತೆ ಮೌಲ್ಯಾಂಕನ ನಡೆಸುವುದು ದು ತಿಳಿಸಿದೆ. ಉಳಿದಂತೆ ಮಾ.13ರಿಂದ 18ರವರೆಗೆ ವಿಷಯವಾರು ಪರೀಕ್ಷೆಗಳು ನಡೆಯಲಿವೆ ಎಂದು ಮಂಡಳಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ನೈಲ ಎಂಬಲ್ಲಿ ಇಬ್ಬರನ್ನು ಬಲಿ ಪಡೆದಿದ್ದ ನರಹಂತಕ ಕಾಡಾನೆಯನ್ನು ಸೆರೆ ಹಿಡಿಯಲು ಕಳೆದ ಮೂರು ದಿನಗಳಿಂದ ನಡೆದ ಕಾರ್ಯಾಚರಣೆ ಕೊನೆಗೂ ಯಶಸ್ಸು ಕಂಡಿದೆ. ಕಡಬ ಬಳಿಯ ಮೂಜೂರು ರಕ್ಷಿತಾರಣ್ಯದ ಕೊಂಬಾರು(ಮಂಡೆಕರ) ಎಂಬಲ್ಲಿ ಆನೆಯನ್ನು ಪತ್ತೆ ಹಚ್ಚಿ ಗನ್ ಮೂಲಕ ಆನೆಗೆ ಅರಿವಳಿಕೆ ನೀಡಲಾಗಿದೆ. ಫೆ.20 ಬೆಳಿಗ್ಗೆ ಕಾಡಾನೆ ದಾಳಿಯಿಂದ ಸ್ಥಳೀಯ ನಿವಾಸಿಗಳಾದ ರಂಜಿತಾ (21) ಮತ್ತು ರಮೇಶ್ ರೈ (52 ವ) ಮೃತಪಟ್ಟಿದ್ದರು. ಅಂದು ರಾತ್ರಿಯೇಮೈಸೂರು ದುಬಾರೆಯಿಂದ ಅಭಿಮನ್ಯು ಸೇರಿ 5ಆನೆಗಳನ್ನು ತರಲಾಗಿದ್ದು, ಫೆ.21 ರಂದು ಡ್ರೋನ್ ಕ್ಯಾಮರಾ ಬಳಸಿ ನರಹಂತಕ ಆನೆಯನ್ನು ಪತ್ತೆ ಹಚ್ಚಿದ್ದು, ದುಬಾರೆಯ ಆನೆಗಳ ಮೂಲಕ ಸೆರೆಹಿಡಿಯುವ ಕಾರ್ಯಾಚರಣೆಯು ರೆಂಜಲಾಡಿ ಗ್ರಾಮದ ತುಂಬೆ ರಕ್ಷಿತಾರಣ್ಯದಲ್ಲಿ ಆರಂಭಗೊಂಡಿತ್ತು. ಆದರೆ ನಿನ್ನೆ ಆನೆಗೆ ಅರಿವಳಿಕೆ ನೀಡುವ ಪ್ರಯತ್ನ ವಿಫಲಗೊಂಡಿತ್ತು. ಇಂದು ಸಂಜೆ ಮತ್ತೆ ಆನೆಯನ್ನು ಪತ್ತೆ ಹಚ್ಚಿ ಅರಿವಳಿಕೆ ಮದ್ದು ಶೂಟ್ ಮಾಡಿ ಆನೆಯನ್ನು ಸೆರೆ ಹಿಡಿಯುವ ಕಾರ್ಯಾಚರಣೆ ಯಶಸ್ವಿಯಾಗಿದೆ ಎಂದು ತಿಳಿದುಬಂದಿದೆ.
ಮಂಗಳೂರು;ಮಂಗಳೂರು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಸೇರಿ 6 ಮಂದಿ ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶಿಸಿದೆ. ಶಶಿಕುಮಾರ್ ಅವರನ್ನು ರೈಲ್ವೇ ಇಲಾಖೆಯ ಡಿಐಜಿಯಾಗಿ ವರ್ಗಾವಣೆ ಮಾಡಲಾಗಿದೆ. ಇದರ ಜೊತೆಗೆ ಬೆಂಗಳೂರು ಪಶ್ವಿಮ ಸಂಚಾರ ವಿಭಾಗದ ಡಿಸಿಪಿ ಕುಲದೀಪ್ ಕುಮಾರ್ ಆರ್.ಜೈನ್ ಅವರನ್ನು ಮಂಗಳೂರು ಪೊಲೀಸ್ ಆಯುಕ್ತರಾಗಿ ನೇಮಕ ಮಾಡಲಾಗಿದೆ. ಬೆಂಗಳೂರು ವೈರ್ಲೆಸ್ ಎಸ್.ಪಿಯಾಗಿದ್ದ ಡಿ.ಕಿಶೋರ್ ಬಾಬು ಅವರನ್ನು ಗುಪ್ತದಳ ಪೊಲೀಸ್ ವರಿಷ್ಠಾಧಿಕಾರಿ ಹುದ್ದೆಗೆ, ಕೆಎಸ್ ಆರ್ ಪಿ ಬೆಂಗಳೂರು ಕಮಾಂಡೆಂಟ್ ಆಗಿರುವ ಕೆ.ವಂಶಿಕೃಷ್ಣ ಅವರನ್ನು ಬೆಂಗಳೂರು ವೈರ್ಲೆಸ್ ಎಸ್.ಪಿಯಾಗಿ ವರ್ಗಾವಣೆ ಮಾಡಲಾಗಿದೆ. ಮುಹಮ್ಮದ್ ಸುಜೀತಾ ಎಂ.ಎಸ್. ಅವರನ್ನು ಬೆಂಗಳೂರು ಸಿಎಆರ್ ಡಿಸಿಪಿಯಿಂದ ಬೆಂಗಳೂರು ದಕ್ಷಿಣ ಸಂಚಾರ ವಿಭಾಗದ ಡಿಸಿಪಿಯಾಗಿ ವರ್ಗಾವಣೆ ಮಾಡಲಾಗಿದೆ.ಕೊಪ್ಪಳ ಪೊಲೀಸ್ ವರಿಷ್ಠಾಧಿಕಾರಿಯಾಗಿರುವ ಅರುಣಾಂಶುಗಿರಿ ಅವರನ್ನು ಸಿಎಆರ್ ಬೆಂಗಳೂರು ಡಿಸಿಪಿಯಾಗಿ ವರ್ಗಾವಣೆ ಮಾಡಲಾಗಿದೆ.ಬೆಳಗಾವಿ ಲೋಕಾಯುಕ್ತ ಎಸ್.ಪಿ. ಯಶೋಧಾ ವಂಟಗೋಡಿ ಅವರನ್ನು ಮಂಡ್ಯ ಪೊಲೀಸ್ ವರಿಷ್ಠಾಧಿಕಾರಿಯಾಗಿ ವರ್ಗಾವಣೆಗೊಳಿಸಲಾಗಿದೆ.
ಮಂಗಳೂರು : ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಗ್ರ ಕೃತ್ಯಗಳಿಗೆ ಬಳಸುತ್ತಿದ್ದ ಕಮ್ಯುನಿಟಿ ಹಾಲ್ ಅನ್ನು ಎಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಎನ್ ಐಎ ಅಧಿಕಾರಿಗಳು ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಿತ್ತೂರಿನ ಫ್ರೀಡಂ ಕಮ್ಯುನಿಟಿ ಹಾಲ್ ಅನ್ನು ಎನ್ ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರುವಾಜೆ ಕ್ರಾಸ್ ಬಳಿ ಅಕ್ಷಯ್ ಹೆಸರಿನ ಕೋಳಿ ಮಾಂಸದ ಅಂಗಡಿ ಹೊಂದಿದ್ದ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರು ಜುಲೈ 26ರಂದು ಹತ್ಯೆ ಮಾಡಲಾಗಿತ್ತು.
ಉಳ್ಳಾಲ:ಕೆಟ್ಟು ನಿಂತಿದ್ದ ಲಾರಿಗೆ ಎರಡು ಸ್ಕೂಟರ್ ಗಳು ಢಿಕ್ಕಿ ಹೊಡೆದು ಒಂದು ಸ್ಕೂಟರಿನಲ್ಲಿದ್ದ ಸವಾರ ಸಾವನ್ನಪ್ಪಿ ಸಹಸವಾರ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಅಂಗರಗುಂಡಿ ನಿವಾಸಿ ಮೊಹಮ್ಮದ್ ನೌಫಾಲ್ (26)ಮೃತ ಯುವಕ.ಸಹಸವಾರ ಉಮ್ಮರ್ ಫಾರುಕ್ ಎಂಬವರು ಗಾಯಗೊಂಡಿದ್ದಾರೆ. ಕಲ್ಲಾಪು ಮಾರುಕಟ್ಟೆಗೆ ಪಂಪ್ವೆಲ್ ಕಡೆಯಿಂದ ತೆರಳುತ್ತಿದ್ದ ವೇಳೆ ಘಟನೆ ಸಂಭವಿಸಿದೆ.ಈ ಕುರಿತು ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಮಂಗಳೂರು: ನಂತೂರು ಜಂಕ್ಷನ್‌ನಲ್ಲಿ ಪಿಕ್-ಅಪ್ ವಾಹನದಲ್ಲಿ ಸಾಗಿಸಲಾಗುತ್ತಿದ್ದ ಅಲ್ಯೂಮಿನಿಯಂ ಪಟ್ಟಿಗಳು ಜಾರಿ ಕಾರಿನ ಒಳಗೆ ಹೊಕ್ಕು ಕಾರು ಚಾಲಕ ಪವಾಡ ಸದೃಶವಾಗಿ ಪಾರಾದ ಘಟನೆ ನಗರದ ಬುಧವಾರ ಸಂಜೆ ಸಂಭವಿಸಿದೆ. ಅಲ್ಯೂಮಿನಿಯಂ ಪಟ್ಟಿಗಳನ್ನು ಹೊತ್ತ ಪಿಕ್-ಅಪ್ ಕಾರಿನ ಹಿಂದೆ ಇತ್ತು. ಎರಡೂ ವಾಹನಗಳು ಕೆಪಿಟಿಯಿಂದ ಪಂಪ್‌ವೆಲ್ ಕಡೆಗೆ ಚಲಿಸುತ್ತಿದ್ದವು.ನಂತೂರು ಜಂಕ್ಷನ್‌ನಲ್ಲಿ ಕಾರು ಚಾಲಕ ಬ್ರೇಕ್ ಹಾಕಿದಾಗ ಪಿಕ್‌ಅಪ್‌ನಲ್ಲಿದ್ದ ಪಟ್ಟಿಗಳು ಕಾರಿನ ಹಿಂಭಾಗದಿಂದ ಒಳಗೆ ಹೊಕ್ಕಿವೆ. ಕಾರಿನಲ್ಲಿ ಚಾಲಕ ಮಾತ್ರವಿದ್ದರು. ಪಟ್ಟಿಗಳು ಹಿಂಭಾಗದ ಸೀಟುಗಳನ್ನು ದಾಟಿ ಬಂದು ಚಾಲಕನ ಸೀಟಿಗೆ ತಾಗಿ ನಿಂತಿವೆ. ಕಾರಿಗೆ ಹಾನಿಯಾಗಿದೆ. ಪಿಕ್‌ಅಪ್ ವಾಹನದ ಚಾಲಕನ ನಿರ್ಲಕ್ಷ್ಯದ ಬಗ್ಗೆ ಸಂಚಾರ ಪೂರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸೋಷಿಯಲ್ ಮೀಡಿಯಾದಲ್ಲಿ ಬರುವ ಜಾಹಿರಾತುಗಳನ್ನು ನಂಬಿ ಕೆಲಸಕ್ಕೆ ಅರ್ಜಿ ಹಾಕುವ ಹುಷಾರ್ ಆಗಿರುವುದು ಮುಖ್ಯವಾಗಿದೆ. ಕರಾವಳಿಯ ಯುವಕನೊಬ್ಬ ಇಂತಹ ಜಾಲಕ್ಕೆ ಬಲಿಯಾಗಿ ಲಕ್ಷಾಂತರ ಹಣವನ್ನು ಕಳೆದುಕೊಂಡ ಘಟನೆ ಬೆಳಕಿಗೆ ಬಂದಿದೆ. ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವೀರಕಂಬ ಗ್ರಾಮದ ನಿವಾಸಿ ಯುವನೊಬ್ಬ ವರ್ಕಫ್ರಮ್ ಹೋಂನಲ್ಲಿ ಕಂಪನಿಯ ಉದ್ಯೋಗದಲ್ಲಿದ್ದು, ಮತ್ತೊಂದು ಹೊಸ ಉದ್ಯೋಗ ಪಡೆಯುವ ಆಸೆಯಲ್ಲಿ ಆತ ಫೇಸ್ಬುಕ್ ಕಂಡ ಜಾಹಿರಾತು ನಂಬಿ ಅದಕ್ಕೆ ವಾಟ್ಸ್‌ಆಪ್ ಮೂಲಕ ಸಂಪರ್ಕಿಸಿದ್ದಾನೆ. ಆರೋಪಿ ಕೆಲಸದ ಫಾರ್ಮ್ನ್ನು ತುಂಬುವಂತೆ ಸಂತ್ರಸ್ತನಿರಿಗೆ ಕಳುಹಿಸಿದ್ದಾರೆ. ಯುವಕನಿಂದ ವಿವಿಧ ಬ್ಯಾಂಕ್ ಅಕೌಂಟ್ಗಳಿಗೆ ವೀಸಾ ಕೆಲಸಕ್ಕಾಗಿ ಹಣ ಹಾಕಿಸಿಕೊಂಡಿದ್ದಾನೆ. ಕಸ್ಟಮ್ಸ್ ಕ್ಲಿಯರೆನ್ಸ್ ಮತ್ತು ಇತರ ಬದಲಾವಣೆಗಾಗಿ ಎಟಿಎಂ ಮೂಲಕ, ಫೋನ್ ಪೇ ಮೂಲಕ ಹಣ ಹಾಕಿಸಿಕೊಂಡಿದ್ದು ಬರೊಬ್ಬರಿ 9.79 ಲಕ್ಷ ರೂ. ಪಡೆದು ವಂಚನೆ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಈ ವಂಚನೆ ಬಗ್ಗೆ ಸಿಇಎನ್ ಪೊಲೀಸ್ ಠಾಣೆಯಲ್ಲಿ ಐಟಿ ಕಾಯ್ದೆಯ ಸೆಕ್ಷನ್ 66 (ಡಿ) ಮತ್ತು ಐಪಿಸಿಯ ಸೆಕ್ಷನ್ 419…










