Author: main-admin

ಮಂಗಳೂರು: ನಗರದ ಕಾವೂರು ಠಾಣಾ ವ್ಯಾಪ್ತಿಯ ‘ದಿಯಾ ಸಿಸ್ಟಮ್ಸ್’ ಸಾಫ್ಟ್ವೇರ್ ಕಂಪನಿಯ ಚಾಲಕರ ನಡುವೆ ಬುಧವಾರ ರಾತ್ರಿ ಜಗಳ ನಡೆದಿದ್ದು, ಒಬ್ಬ ಚಾಲಕನಿಗೆ ನಾಲ್ವರ ಗುಂಪು ಗಂಭೀರವಾಗಿ ಹಲ್ಲೆ ನಡೆಸಿದೆ. ಸಂದೀಪ್ ಹಲ್ಲೆಗೊಳಗಾದ ಚಾಲಕ. ಅದೇ ಕಂಪನಿಯ ಇನ್ನೊಬ್ಬ ಕಾರು ಚಾಲಕ ತೇಜಸ್ ಶೆಟ್ಟಿ, ಆತನ ಸೋದರ ಭವಿತ್ ಶೆಟ್ಟಿ, ಗೆಳೆಯರಾದ ಪ್ರೀತಮ್ ಹಾಗೂ ಪುನೀತ್ ದೇವಾಡಿಗ ಹಲ್ಲೆ ನಡೆಸಿದ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ತೇಜಸ್ ಶೆಟ್ಟಿ ಸಂದೀಪ್ ವಿರುದ್ಧ ಹಳೆ ವೈಷನ್ಯ ಹೊಂದಿದ್ದ. ಬುಧವಾರ ರಾತ್ರಿ ತನ್ನ ಪಾಳಿಯ ಕೆಲಸ ಮುಗಿದ ಬಳಿಕ ಆತ ಸೋದರ ಭವಿತ್ ಶೆಟ್ಟಿ, ಗೆಳೆಯರಾದ ಪ್ರೀತಮ್, ಪುನೀತ್ ದೇವಾಡಿಗ ಜೊತೆ ಸೇರಿ, ಕೆಲಸ ಮುಗಿಸಿ ತೆರಳುತ್ತಿದ್ದ ಸಂದೀಪ್ ಜೊತೆ ಜಗಳವಾಡಿದ್ದ. ನಾಲ್ವರು ಸೇರಿ ಮಾರಕ ಆಯುಧದಿಂದ ಸಂದೀಪ್ ಮೇಲೆ ಹಲ್ಲೆ ನಡೆಸಿದ್ದು. ತಲೆ ಮತ್ತಿತರ ಭಾಗಗಳಿಗೆ ಗಂಭೀರವಾದ ಗಾಯಗಳಾಗಿವೆ. ಗಾಯಾಳುವನ್ನು ಎ.ಜೆ. ಆಸ್ಪತ್ರೆಗೆ ದಾಖಲಿಸಲಾಗಿದೆ. ಜಗಳಕ್ಕೆ ಕಾರಣಗಳೇನು ಎಂಬುದು ಇನ್ನೂ ತಿಳಿದಿಲ್ಲ.…

Read More

ಬೆಂಗಳೂರು : ಬಡವ ಮತ್ತು ಬಡಗಿ ಎಂಬ ಕಾರಣ ಪರಿಗಣಿಸಿ ಗಂಧದ ಮರ ಕಡಿದು ಕಳವಿಗೆ ಯತ್ನಿಸಿದ ಪ್ರಕರಣದಲ್ಲಿ ಆರೋಪಿಗೆ 10 ಸಾವಿರ ರು. ದಂಡ ವಿಧಿಸಿದ್ದ ವಿಚಾರಣಾ ನ್ಯಾಯಾಲಯದ ಆದೇಶ ಒಪ್ಪದ ಹೈಕೋರ್ಟ್, ದಂಡದ ಮೊತ್ತವನ್ನು ಒಂದು ಲಕ್ಷಕ್ಕೆ ಹೆಚ್ಚಿಸಿರುವ ಜೊತೆಗೆ 5 ವರ್ಷ ಜೈಲು ಶಿಕ್ಷೆಯನ್ನು ಕಾಯಂಗೊಳಿಸಿದೆ. ಹೌದು ಪ್ರಕರಣದ ಆರೋಪಿ ಮಂಡ್ಯ ಜಿಲ್ಲೆಯ ಬಲ್ಲೇನಹಳ್ಳಿ ಗ್ರಾಮದ ನಿವಾಸಿ ದೇವರಾಜಾಚಾರಿ ಎಂಬುವರಿಗೆ ಐದು ವರ್ಷ ಜೈಲು ಶಿಕ್ಷೆ ವಿಧಿಸಿದ್ದ ವಿಚಾರಣಾ ನ್ಯಾಯಾಲಯ, 10 ಸಾವಿರ ರು. ದಂಡ ವಿಧಿಸಿರುವುದನ್ನು ಆಕ್ಷೇಪಿಸಿ ರಾಜ್ಯ ಸರ್ಕಾರ (ಅಶೋಕಪುರ ಠಾಣಾ ಪೊಲೀಸರು) ಹೈಕೋರ್ಟ್‌ಗೆ ಕ್ರಿಮಿನಲ್ ಮೇಲ್ಮನವಿ ಸಲ್ಲಿಸಿದ್ದರು. ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಶಿವಶಂಕರ ಅಮರಣ್ಣನವ‌ರ್ ಅವರ ನ್ಯಾಯಪೀಠ, ಗಂಧದ ಮರ ಕಳವು ಆರೋಪ ಹಾಗೂ ಆಕ್ರಮವಾಗಿ ಸಂಗ್ರಹಿಸಿದ ಅಪರಾಧ ಮೊದಲ ಬಾರಿ ಸಾಬೀತಾದಲ್ಲಿ ಕೃತ್ಯ ಎಸಗಿದವರಿಗೆ 5 ವರ್ಷಕ್ಕಿಂತ ಕಡಿಮೆ ಶಿಕ್ಷೆ ಮತ್ತು 50 ಸಾವಿರಕ್ಕಿಂತಲೂ ಕಡಿಮೆ ದಂಡ ವಿಧಿಸುವಂತಿಲ್ಲ ಎಂದು…

Read More

ಬೆಂಗಳೂರು: ಡಿಜಿ ಆ್ಯಂಡ್​​ ಐಜಿಪಿ (DG and IGP) ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮತ್ತು ಗೃಹಮಂತ್ರಿ ಡಾ. ಜಿ. ಪರಮೇಶ್ವರ್ (G Parmeshwara) ಅವರ ಜೊತೆ ಸಭೆ ನಡೆಸಿದ ಬಳಿಕ ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಡಿಜಿ ಆ್ಯಂಡ್ ಐಜಿಪಿ ಆಲೋಕ್ ಮೋಹನ್ (Alok Mohan) 20 ಅಂಶಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಿದ್ದಾರೆ. ಜಿಲ್ಲಾ ಪೊಲೀಸ್ ಅಧೀಕ್ಷಕರು ಹಾಗೂ ಬೆಂಗಳೂರು ನಗರ ಸೇರಿದಂತೆ ಇತರೆ ನಗರಗಳ ಪೊಲೀಸ್ ಕಮಿಷನರೇಟ್​ಗಳ ವ್ಯಾಪ್ತಿಗೆ ಬರುವ ಡೆಪ್ಯುಟಿ ಪೊಲೀಸ್ ಕಮೀಷನರ್‌ಗಳು ಪ್ರತಿದಿನ ಕನಿಷ್ಠ ಒಂದು ಪೊಲೀಸ್ ಠಾಣೆಗೆ ಭೇಟಿ ನೀಡಬೇಕು. ಭೇಟಿಯ ಸಮಯದಲ್ಲಿ, ಅವರು ಪೊಲೀಸ್ ಠಾಣೆಗಳಲ್ಲಿರುವ ಸಾರ್ವಜನಿಕರು ಮತ್ತು ಪೊಲೀಸ್ ಸಿಬ್ಬಂದಿಯೊಂದಿಗೆ ನಿರಂತರವಾಗಿ ಸಂವಹನ ನಡೆಸಬೇಕು ಮತ್ತು ಅವರ ಕುಂದುಕೊರತೆಗಳನ್ನು ಸಹ ಪರಿಶೀಲಿಸಬೇಕು. ಎಲ್ಲ ವಲಯ ಐ.ಜಿ.ಪಿ.ಗಳು/ಡಿ.ಐ.ಜಿ.ಪಿ.ಗಳು ಮತ್ತು ಹೆಚ್ಚುವರಿ ಪೊಲೀಸ್ ಆಯುಕ್ತರು, ಬೆಂಗಳೂರು ನಗರದವರು ಪ್ರತಿನಿತ್ಯ ಪೊಲೀಸ್ ಠಾಣೆಗಳಿಗೆ ಭೇಟಿ ನೀಡಬೇಕು. ಅವರು ಪೊಲೀಸ್ ಠಾಣೆಗಳಿಗೆ ಭೇಟಿ ನೀಡಿದ ಸಮಯದಲ್ಲಿ ಠಾಣೆಯ…

Read More

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಕೋಟ್ಯಾಂತರ ರೂಪಾಯಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಬಿ ನಾಗೇಂದ್ರ ಪತ್ನಿ ಮಂಜುಳಾರನ್ನು ಇಡಿ ಅಧಿಕಾರಿಗಳು ಇದು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ಡಾಲರ್ಸ್ ಕಾಲೋನಿ ನಿವಾಸದಲ್ಲಿ ಮಂಜುಳಾರನ್ನು ಅಧಿಕಾರಿಗಳು ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮಂಜುಳಾರನ್ನು ವಶಕ್ಕೆ ಪಡೆದ ಬಳಿಕ ಅವರನ್ನು ಅಧಿಕಾರಿಗಳು ಶಾಂತಿನಗರದಲ್ಲಿರುವ ಇಡಿ ಕಚೇರಿಗೆ ಕರೆದೊಯ್ದಿದ್ದಾರೆ. ಇನ್ನು ಮಂಜುಳಾ ಅವರಿಗೆ ಬಂಧನ ಭೀತಿ ಎದುರಾಗಿದೆ.ವಾಲ್ಮೀಕಿ ನಿಗಮದ 187 ಕೋಟಿ ಅಕ್ರಮ ವ್ಯವಹಾರಲ್ಲಿ ಹಲವಾರು ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆಯಾಗಿದೆ. ಬಂಧನಕ್ಕೆ ಒಳಗಾದ ನಾಗೇಂದ್ರ ಅವರ ಬ್ಯಾಂಕ್ ಖಾತೆ ಜೊತೆ ಕುಟುಂಬಸ್ಥರ ಬ್ಯಾಂಕ್ ಖಾತೆಯನ್ನು ಪರಿಶೀಲಿಸಿದಾಗ ಪತ್ನಿಯ ಖಾತೆಯಿಂದ ಹೆಚ್ಚು ಹಣ ವರ್ಗಾವಣೆಯಾಗಿರುವ ವಿಚಾರ ಬೆಳಕಿಗೆ ಬಂದಿದೆ. ಹೀಗಾಗಿ ಇಡಿ ಅಧಿಕಾರಿಗಳು ಮಂಜುಳಾ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

Read More

ಮಂಗಳೂರು: ನಗರದ ನಿವಾಸಿಯೊಬ್ಬರು ಷೇರು ಖರೀದಿಸಿ ಲಾಭ ಗಳಿಸುವ ಯತ್ನದಲ್ಲಿ ಬರೋಬ್ಬರಿ 1.50 ಕೋಟಿ ರೂ. ಕಳೆದುಕೊಂಡ ಬಗ್ಗೆ ನಗರದ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಣಕಳೆದುಕೊಂಡ ವ್ಯಕ್ತಿ ಸಾಮಾಜಿಕ ಜಾಲತಾಣವಾದ ಫೇಸ್‌ಬುಕ್ ನೋಡುವಾಗ ‘Jefferies wealth multiplication Plan’ ಎಂಬ ಪೋಸ್ಟ್ ನೋಡಿ ಅದರಲ್ಲಿದ್ದ ಪ್ರಶ್ನೆಗಳಿಗೆ ಉತ್ತರಿಸಿದ್ದರು. ಷೇರ್‌ಗಳನ್ನು ಖರೀದಿಸಿ ಲಾಭಗಳಿಸುವ ಇರಾದೆಯಿಂದ ಅಪರಿಚಿತ ವ್ಯಕ್ತಿಯು ನೀಡಿದ ಮಾಹಿತಿಯಂತೆ ಮೇ 28ರಿಂದ 2024 ಜೂ.28ರ ತನಕ ಹಂತ ಹಂತವಾಗಿ ತನ್ನ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮಲ್ಲಿಕಟ್ಟೆ ಶಾಖೆಯಿಂದ 73,00,000 ರೂ. ಮತ್ತು ಗುರುಪುರ ವ್ಯವಸಾಯ ಸಹಕಾರಿ ಸಂಘ ನಿಯಮಿತ ವಾಮಂಜೂರು ಶಾಖೆ ಖಾತೆಯಿಂದ 77,00,000 ರೂ. ಒಟ್ಟು 1.50 ಕೋಟಿ ರೂ. ಗಳನ್ನು ಅಪರಿಚಿತ ವ್ಯಕ್ತಿಯ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿ ವಂಚನೆಗೊಳಗಾಗಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ. ಈ ಸಂಬಂಧ ಸೆನ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Read More

ಕಟಪಾಡಿ: ಮಂಗಳೂರು-ಉಡುಪಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಟಪಾಡಿ ಜಂಕ್ಷನ್ ಬಳಿ ಭೀಕರ ಅಪಘಾತ ನಡೆದ ಪರಿಣಾಮ ಹೈವೆ ಬಳಿ ಇದ್ದ ಪೊಲೀಸ್ ಹಾಗೂ ಕಾರಿನ ಪ್ರಯಾಣಿಕರು ಗಾಯಗೊಂಡ ಘಟನೆ ಜು.16 ರಂದು ನಡೆದಿದೆ.ಹರೀಶ್ ನಾರಾಯಣ ಪೂಜಾರಿ ಎಂಬವರು ತಮ್ಮ ಕಾರಿನಲ್ಲಿ ಉದ್ಯಾವರದಿಂದ ಪಡುಬಿದ್ರಿಗೆ ತೆರಳಿದ್ದರು. ಈ ವೇಳೆ ಹೈವೇ ಬಳಿ ಇದ್ದ ಪೊಲೀಸರು ತಪಾಸಣೆಗೆ ಕಾರು ನಿಲ್ಲಿಸುವಂತೆ ಸೂಚಿಸಿದರು. ಹರೀಶ್ ತಮ್ಮ ಕಾರನ್ನು ನಿಲ್ಲಿಸಿದ ವೇಳೆ, ಹಿಂದಿನಿಂದ ಬಂದ ಸ್ವಿಫ್ಟ್ ಕಾರಿನ ಚಾಲಕ ಸುಶಾಂತ್ ತಮ್ಮ ವಾಹನವನ್ನು ದುಡುಕುತನದಿಂದ ಹಾಗೂ ನಿರ್ಲಕ್ಷ್ಯದಿಂದ ಚಲಾಯಿಸಿ, ಹರೀಶ್ ನಾರಾಯಣ ಪೂಜಾರಿ ಅವರ ಕಾರಿನ ಹಿಂಬದಿಗೆ ಡಿಕ್ಕಿ ಹೊಡೆದಿದ್ದಾರೆ ಎನ್ನಲಾಗಿದೆ.ಈ ಅಪಘಾತದಲ್ಲಿ ಮತ್ತೊಂದು ಕಾರಿಗೂ ಹಾನಿಯಾಗಿದೆ. ಈ ಪರಿಣಾಮವಾಗಿ, ಹರೀಶ್ ನಾರಾಯಣ ಪೂಜಾರಿ ಅವರ ಕಾರು ಮುಂದೆ ನಿಂತಿದ್ದ ಪೊಲೀಸ್ ಅಧಿಕಾರಿ ರಾಮ ಅವರ ಮೇಲೆ ಹತ್ತಿದೆ. ರಾಮ ಅವರು ರಸ್ತೆಗೆ ಬಿದ್ದು ತಲೆಗೆ ತೀವ್ರ ಗಾಯಗೊಂಡಿದ್ದಾರೆ. ತಕ್ಷಣ ಅವರನ್ನು ಉಡುಪಿ ಆಸ್ಪತ್ರೆಗೆ ದಾಖಲಿಸಲಾಯಿತು.ಅಪಘಾತದಲ್ಲಿ ಸ್ವಿಪ್ಟ್…

Read More

ಕಾರವಾರ : ಉತ್ತರ ಕನ್ನಡ ಜಿಲ್ಲೆಯಲ್ಲಿ ಅಂಕೋಲಾ ತಾಲೂಕಿನ ಶಿರೂರು ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ ಪ್ರಕರಣದಲ್ಲಿ , ಇದುವರೆಗೂ 6 ಜನರ ಮೃತದೇಹ ಗಳು ಪತ್ತೆಯಾಗಿದ್ದು, ಉಳಿದವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಇನ್ನು ಈ ಘಟನೆಯಲ್ಲಿ ಹೆದ್ದಾರಿ ಪಕ್ಕದಲ್ಲಿ ಹೋಟೆಲ್ ಇಟ್ಟುಕೊಂಡಿದ್ದ ಒಂದೇ ಕುಟುಂಬದ ಲಕ್ಷ್ಮಣ್​ ನಾಯ್ಕ್, ಪತ್ನಿ ಶಾಂತಿ, ಪುತ್ರಿ ಆವಾತಿಕಾ ಹಾಗೂ ಪುತ್ರ ರೋಷನ್(11) ಸೇರಿ ಟ್ರಕ್​​​​ ಚಾಲಕನ ಶವ ಪತ್ತೆಯಾಗಿದೆ. ಈ ನಾಲ್ವರ ಮೃತದೇಹಗಳು ಗೋಕರ್ಣ ಸಮೀಪ ಸಿಕ್ಕಿದೆ. ಇನ್ನು ಕುಮಟಾ ಸರ್ಕಾರಿ ಅಸ್ಪತ್ರೆಯ ಶವಾಗಾರದಲ್ಲಿ ಮೃತ ದೇಹ ಇಡಲಾಗಿದೆ. ಇನ್ನು ಈ ಗುಡ್ಡ ಕುಸಿತ ಸ್ಥಳದಲ್ಲಿ ಮೊದಲು ಓರ್ವ ಮಹಿಳೆ ಶವ ಪತ್ತೆಯಾಗಿತ್ತು. ಬಳಿಕ ಐದು ಜನರ ಮೃತದೇಹ ಸಿಕ್ಕಿತ್ತು. ಇದರಲ್ಲಿ ಒಂದೇ ಕುಟುಂಬದ ನಾಲ್ವರು ಮೃತರಾದರೆ, ಇನ್ನುಳಿದ ಇರ್ವರು ಯಾರು ಎಂಬುವುದು ಗುರುತು ಸಿಗುತ್ತಿಲ್ಲ. ಇದೀಗ ಕೊನೆಗೂ ದರ್ಘಟನಾ ಸ್ಥಳಕ್ಕೆ ಹಿಟಾಚಿ ಬಂದಿದ್ದು, ಮಣ್ಣು ತೆರವು ಕಾರ್ಯ ಮಾಡುತ್ತಿದೆ.

Read More

ಮಂಗಳೂರು: ಹಿರಿಯ ರಂಗನಿರ್ದೇಶಕ ಹಾಗೂ ರಾಷ್ಟ್ರಪ್ರಶಸ್ತಿ ಸಿನಿಮಾ ನಿರ್ಮಾಪಕ, ನಿರ್ದೇಶಕ ಸದಾನಂದ ಸುವರ್ಣ (93) ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ನಿಧನರಾಗಿದ್ದಾರೆ. ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ನಾಳೆ ಮಧ್ಯಾಹ್ನ 1ರಿಂದ 3ರವರೆಗೆ ಪುರಭವನದಲ್ಲಿ ವ್ಯವಸ್ಥೆ ಮಾಡಲಾಗುವುದು. ಬಳಿಕ ಅವರ ಬಯಕೆಯಂತೆ ದೇಹದಾನವನ್ನು ಮಾಡಲಾಗುವುದು ಎಂದು ಮೂಲಗಳಿಂದ ತಿಳಿದು ಬಂದಿದೆ. ಕನ್ನಡದಲ್ಲಿ ಅತ್ಯಂತ ಯಶಸ್ವಿ ರಂಗಭೂಮಿ ನಿರ್ದೇಶಕರಾಗಿ ನೂರಾರು ನಾಟಕಗಳನ್ನು ನಿರ್ದೇಶಿಸಿದ ಇವರು ಕೋರ್ಟ್‌ಮಾರ್ಷಲ್, ಉರುಳು, ಮಳೆನಿಲ್ಲುವವರೆಗೆ, ಗುಡ್ಡದ ಭೂತ, ಸುಳಿ ಮುಂತಾದವು ಪ್ರಯೋಗಾತ್ಮಕ, ಸದಭಿರುಚಿಯ ನಾಟಕಗಳು. ಸದಾನಂದ ಸುವರ್ಣ ಅವರು ಗಿರೀಶ್ ಕಾಸರವಳ್ಳಿಯವರ ಘಟಶ್ರಾದ್ಧ ಸಿನಿಮಾಕ್ಕೆ ನಿರ್ಮಾಪಕರಾಗುವ ಮೂಲಕ ಸಿನಿಮಾ ರಂಗಕ್ಕೆ ಪ್ರವೇಶ ಮಾಡಿದವರು. ಈ ಸಿನಿಮಾಕ್ಕೆ ಅತ್ಯುತ್ತಮ ಸಿನಿಮಾವೆಂದು ಸ್ವರ್ಣಕಮಲ ಪ್ರಶಸ್ತಿ ಲಭಿಸಿತ್ತು. ಬಳಿಕ ಕಾಸರವಳ್ಳಿಯವರ ತಬರನ ಕತೆ, ಮನೆ, ಕ್ರೌರ‌್ಯ ಮುಂತಾದ ಸಿನಿಮಾಗಳಿಗೆ ಕಾರ್ಯನಿರ್ವಾಹಕ ನಿರ್ಮಾಪಕರಾಗಿ ಅನುವಭವ ಪಡೆದವರು. ಬಳಿಕ ಕುಬಿ ಮತ್ತು ಇಯಾಲ ಎಂಬ ಸದಭಿರುಚಿಯ ಚಿತ್ರ ನಿರ್ದೇಶಿಸಿ ಉತ್ತಮ ನಿರ್ದೇಶಕ ಪ್ರಶಸ್ತಿ ಪಡೆದರು.…

Read More

ಉಡುಪಿ: ಉಡುಪಿ ನಗರದ ಮನೆಯೊಂದರಲ್ಲಿ ನಡೆದಿದ್ದ ಭಾರೀ ಬೆಂಕಿ ಅವಘಡದಲ್ಲಿ ಗಂಭೀರ ಗಾಯಗೊಂಡಿದ್ದ ಬಾರ್ ಮಾಲೀಕ ರಮಾನಂದ್ ಶೆಟ್ಟಿ ಅವರ ಪತ್ನಿ ಅಶ್ವಿನಿ (45) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ನಿನ್ನೆ ಮುಂಜಾನೆ ನಡೆದಿದ್ದ ಅಗ್ನಿ ಅವಘಡದಲ್ಲಿ ಅಶ್ವಿನಿ ಅವರ ಪತಿ ರಮಾನಂದ್ ಶೆಟ್ಟಿ ಮೃತಪಟ್ಟಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಪತ್ನಿ ಕೂಡ ಮೃತಪಟ್ಟಿದ್ದು ಕುಟುಂಬದಲ್ಲಿ ಶೋಕ ಮುಗಿಲು ಮುಟ್ಟಿದೆ. ಉಡುಪಿ ನಗರದಲ್ಲಿ ವಾಸ ಮಾಡುತ್ತಿದ್ದ ಶೆಟ್ಟಿ ಬಾರ್ ಅಂಡ್ ರೆಸ್ಟೋರೆಂಟ್ ಮಾಲೀಕ ರಮಾನಂದ್ ಶೆಟ್ಟಿ ಮನೆಯಲ್ಲಿ ನಿನ್ನೆ ಮುಂಜಾನೆ ಶಾರ್ಟ್ ಸರ್ಕ್ಯುಟ್ ನಿಂದ ಅಗ್ನಿ ಅವಘಡ ಸಂಭವಿಸಿತ್ತು. ಈ ಅವಘಡದಲ್ಲಿ ಮನೆಯ ಒಳಭಾಗ ಸಂಪೂರ್ಣ ಸುಟ್ಟು ಕರಕಲಾಗಿತ್ತು. ಮನೆಯಲ್ಲಿದ್ದ ರಮಾನಂದ್ ಶೆಟ್ಟಿ – ಅಶ್ವಿನಿ ದಂಪತಿಯ ಮಕ್ಕಳಿಬ್ಬರನ್ನು ರಕ್ಷಣೆ ಮಾಡಲಾಗಿತ್ತು. ಅಗ್ನಿ ಅವಘಡದಿಂದ ಮನೆಯೊಳಗೆ ದಟ್ಟ ಹೊಗೆ ಆವರಿಸಿ ದಂಪತಿ ಅಸ್ವಸ್ಥಗೊಂಡಿದ್ದರು.ರಮಾನಂದ್ ಶೆಟ್ಟಿ ಆಸ್ಪತ್ರೆಯಲ್ಲಿ ನಿನ್ನೆಯೇ ಮೃತಪಟ್ಟಿದ್ದರೆ, ಪತ್ನಿ ಅಶ್ವಿನಿ ಕೆಎಂಸಿ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದರು. ಬೆಂಕಿಯ ಕೆನ್ನಾಲೆಗೆಗೆ ಅವರಿಗೆ…

Read More

ಉಪ್ಪಿನಂಗಡಿ: ಉಪ್ಪಿನಂಗಡಿ ಹತ್ತಿರ ವೃದ್ಧೆಯೋರ್ವರ ಚಿನ್ನದ ಸರ ಕಸಿಯಲು ಯತ್ನಿಸಿದ ಘಟನೆ ಶಿರಾಡಿ ಗ್ರಾಮದ ಅಡ್ಡಹೊಳೆ ಎಂಬಲ್ಲಿ ನಡೆದಿದೆ. ಮಂಗಳೂರು ಕಡೆಯಿಂದ ಬೆಂಗಳೂರು ಕಡೆ ಬೈಕ್‌ನಲ್ಲಿ ಸಾಗುತ್ತಿದ್ದ ಇಬ್ಬರು ಅಡ್ಡಹೊಳೆ ಸಮೀಪದ ಮಿನಿ ಕ್ಯಾಂಟಿನ್‌ಗೆ ತೆರಳಿ ಚಹಾ ಕೇಳುವ ನೆಪದಲ್ಲಿ ತ್ರೇಸಿಯಮ್ಮ (65) ಅವರ ಕತ್ತಿನಲ್ಲಿದ್ದ ಸರ ಎಳೆದಾಗ ಬೊಬ್ಬೆ ಹಾಕಿದರು ಎನ್ನಲಾಗಿದೆ. ಕಳ್ಳರು ಓಡುವ ವೇಳೆ ಸರ ಬಿದ್ದಿದ್ದು, ಬಳಿಕ ಗುಂಡ್ಯ ಚೆಕ್‌ ಪೋಸ್ಟ್‌ಗೆ ಮಾಹಿತಿ ನೀಡಲಾಗಿದ್ದು, ಅಲ್ಲಿ ಪೊಲೀಸರು ಮತ್ತು ಸಾರ್ವ ಜನಿಕರು ಯುವಕರನ್ನು ಹಿಡಿದು ನೆಲ್ಯಾಡಿ ಠಾಣೆಗೆ ಹಸ್ತಾಂತರಿಸಿದರು. ಬಂಧಿತರು ಯಶವಂತಪುರದ ರೋಹಿತ್‌ ಮತ್ತು ಅಶೋಕ್‌ ಎಂದು ತಿಳಿದು ಬಂದಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Read More