ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು(ಫೆ.17) ರಾಜ್ಯ ಸರ್ಕಾರದ ಕೊನೆಯ ಬಜೆಟ್ ಅನ್ನು ಮಂಡಿಸಲಿದ್ದಾರೆ. ಮೇ ತಿಂಗಳಿನಲ್ಲಿ ರಾಜ್ಯದಲ್ಲಿ ಚುನಾವಣೆ ನಡೆಯಲಿದ್ದು, ಈ ನಿಟ್ಟಿನಲ್ಲಿ ಅವರು ತಮ್ಮ ಬಜೆಟ್ ನಲ್ಲಿ ಹಲವು ಜನಪ್ರಿಯ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಇಂದು ಬೆಳಗ್ಗೆ 10.15ಕ್ಕೆ ವಿಧಾನಮಂಡಲದಲ್ಲಿ ಸಿಎಂ ಬೊಮ್ಮಾಯಿ ಬಜೆಟ್ ಮಂಡಿಸಲಿದ್ದಾರೆ. ಈ ಬಜೆಟ್ ನಲ್ಲಿ ಹಾಲಿನ ಪ್ರೋತ್ಸಾಹಧನ ಹೆಚ್ಚಳ, ಸ್ತ್ರೀಶಕ್ತಿ ಸಂಘಗಳ ಸಾಲ ಮನ್ನಾ, ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ಸೇರಿದಂತೆ ಮಹತ್ವದ ಯೋಜನೆಗಳನ್ನು ಘೋಷಿಸುವ ನಿರೀಕ್ಷೆ ಇದೆ. ಈ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಯ ಹೊಸ್ತಿಲಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಮಂಡಿಸಲಿರುವ ಕೊನೆಯ ಬಜೆಟ್ ರಾಜ್ಯದ ಜನತೆಯಲ್ಲಿ ಕುತೂಹಲ ಮೂಡಿಸಿದೆ. ಮಹಿಳಾ ಸ್ವಸಹಾಯ ಸಂಘಗಳಿಗೆ ಶೂನ್ಯ ಬಡ್ಡಿ ದರದಲ್ಲಿ ಅಥವಾ ಕಡಿಮೆ ಬಡ್ಡಿ ದರದಲ್ಲಿ ಹೆಚ್ಚು ಅನುದಾನ, ಇಲ್ಲವೇ ಮಹಿಳಾ ಸ್ವಸಹಾಯ ಸಂಘಗಳ ಸಾಲಮನ್ನಾ ಮಾಡುವ ಬಗ್ಗೆ ಕೂಡ ತಿಳಿಸುವ ಸಾಧ್ಯತೆ ಇದೆ. ಗಾಣಿಗ, ಮಡಿವಾಳ, ಮೇದಾರ, ನೇಕಾರ,…
Author: main-admin
ಉಡುಪಿ: ಗೂಡ್ಸ್ ವಾಹನವೊಂದರಲ್ಲಿ ವ್ಯಕ್ತಿಯೊಬ್ಬರ ಮೃತದೇಹವನ್ನು ತಂದು ರಸ್ತೆ ಬದಿಯ ಕಸದ ಕೊಂಪೆಗೆ ಎಸೆದು ಹೋದ ಅಮಾನವೀಯ ಘಟನೆ ಕೆಮ್ಮಣ್ಣು ಸಂತೆ ಮಾರುಕಟ್ಟೆಯ ಬಳಿ ಇಂದು ಮಧ್ಯಾಹ್ನ ನಡೆದಿದೆ. ಮೃತ ವ್ಯಕ್ತಿಯನ್ನು ಹನುಮಂತ ಎಂದು ಗುರುತಿಸಲಾಗಿದೆ. ಈತ ವಾರದ ಸಂತೆ ಹಿನ್ನೆಲೆಯಲ್ಲಿ ಕೆಮ್ಮಣ್ಣು ಮಾರುಕಟ್ಟೆಗೆ ವ್ಯಾಪಾರ ನಡೆಸಲು ಬಂದಿದ್ದ ಎನ್ನಲಾಗಿದೆ. ಆದರೆ ವಿಪರೀತ ಮದ್ಯಪಾನ ಮಾಡಿ ಅಲ್ಲೆ ಮೃತಪಟ್ಟಿದ್ದನು. ಇದನ್ನು ಕಂಡು ಇತರ ಇಬ್ಬರು ವ್ಯಾಪಾರಿಗಳು ಹನುಮಂತನ ಮೃತದೇಹವನ್ನು ಗೂಡ್ಸ್ ವಾಹನದಲ್ಲಿ ಸಾಗಿಸಿಕೊಂಡು ಹೋಗಿ ಕೆಮ್ಮಣ್ಣು ಸಂತೆಮಾರುಕಟ್ಟೆ ಬಳಿಯ ರಸ್ತೆಬದಿ ಕಸದ ಕೊಂಪೆಯಲ್ಲಿ ಎಸೆದು ಹೋಗಿದ್ದಾರೆ. ಮಾಹಿತಿ ತಿಳಿದ ಸಮಾಜ ಸೇವಕ ಈಶ್ವರ್ ಮಲ್ಪೆ ಅವರು ಮೃತದೇಹವನ್ನು ಉಡುಪಿ ಅಜ್ಜರ ಕಾಡು ಆಸ್ಪತ್ರೆಗೆ ಸಾಗಿಸಿದ್ದಾರೆ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೊಪ್ಪಳ;ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಕುಕನೂರು ಪೊಲೀಸ್ ಠಾಣೆ ವ್ಯಾಪ್ತಿಯ ಬನ್ನಿಕೊಪ್ಪದ ಬಳಿ ನಡೆದಿದೆ. ಹೈದರಾಬಾದ್ ಮೂಲದವರು ಗದಗಕ್ಕೆ ಸಂಚರಿಸುತ್ತಿದ್ದ ಕಾರು ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗವಾಗಿ ಬಂದು ಸೇತುವೆಗೆ ಢಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಸಂಪೂರ್ಣವಾಗಿ ಜಖಂಗೊಂಡಿದೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಪೇಶಾವರ : ಪಂಜಾಬ್‌ನ ಚಿಚಾವಟ್ನಿಯಲ್ಲಿ ಗುರುವಾರ ಬೆಳಗ್ಗೆ ಕ್ವೆಟ್ಟಾಗೆ ಹೋಗುವ ಜಾಫರ್ ಎಕ್ಸ್‌ಪ್ರೆಸ್‌ನಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ ಕನಿಷ್ಠ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ಡಾನ್ ವರದಿ ಮಾಡಿದೆ. ಕ್ವೆಟ್ಟಾಗೆ ಹೋಗುವ ಜಾಫರ್ ಎಕ್ಸ್‌ಪ್ರೆಸ್ ಚಿಚಾವಟ್ನಿ ರೈಲು ನಿಲ್ದಾಣದಿಂದ ಹಾದು ಹೋಗುತ್ತಿದ್ದಾಗ ಸ್ಫೋಟ ಸಂಭವಿಸಿದೆ. ಸ್ಥಳೀಯ ಮಾಧ್ಯಮ ವರದಿಗಳ ಪ್ರಕಾರ ಜಾಫರ್ ಎಕ್ಸ್‌ಪ್ರೆಸ್, ಪೇಶಾವರದಿಂದ ಬರುತ್ತಿತ್ತು. ಫೋನ್‌ನಲ್ಲಿ ಡಾನ್‌ನೊಂದಿಗೆ ಮಾತನಾಡಿದ ಪಾಕಿಸ್ತಾನ ರೈಲ್ವೇಸ್ ವಕ್ತಾರ ಬಾಬರ್ ಅಲಿಗೆ ಸಣ್ಣ ಪುಟ್ಟ ಗಾಯ ಸಂಭವಿಸಿದೆ ಎಂದು ವರದಿಯಾಗಿದೆ. ಕ್ವೆಟ್ಟಾದಿಂದ ಪೇಶಾವರಕ್ಕೆ ಪ್ರಯಾಣಿಸುತ್ತಿದ್ದವೇಲೆ ರೈಲಿನ ನಾಲ್ಕನೇ ಸಂಖ್ಯೆಯ ಬೋಗಿಯೊಳಗೆ ಸಿಲಿಂಡರ್ ಸ್ಫೋಟ ಸಂಭವಿಸಿದೆ ಎಂದಿದ್ದಾರೆ. ಎಸ್‌ಪಿ ರೈಲ್ವೇಸ್ ಸ್ಫೋಟದ ಸ್ಥಳಕ್ಕೆ ಆಗಮಿಸಿದ್ದು, ಶೀಘ್ರದಲ್ಲೇ ಘಟನೆಯ ಬಗ್ಗೆ ವಿವರಗಳನ್ನು ನೀಡಿದ್ದಾರೆ
ಕಡಬ: ಮೊಟ್ಟೆ ಸಾಗಾಟ ಲಾರಿಯೊಂದು ಚಾಲನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಘಟನೆ ದಕ್ಷಿಣ ಕನ್ನಡದ ಕಡಬ ತಾಲೂಕಿನ ಆಲಂಕಾರು ಶರವೂರು ದೇವಾಲಯದ ಬಳಿ ನಡೆದಿದೆ. ಮೊಟ್ಟೆಗಳನ್ನು ತುಂಬಿಸಿಕೊಂಡು ಹೋಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಕ್ಕದ ಚರಂಡಿಗೆ ಉರುಳಿ ಬಿದ್ದಿದೆ. ಘಟನೆಯಲ್ಲಿ ಲಾರಿಯಲ್ಲಿದ್ದ ಇಬ್ಬರಿಗೆ ಗಾಯಗಳಾಗಿದ್ದು ಇನ್ನಿಬ್ಬರು ಅಪಾಯದಿಂದ ಪಾರಾಗಿದ್ದಾರೆ. ಮೈಸೂರಿನಿಂದ ನೆಟ್ಟಣಕ್ಕೆ ಮೊಟ್ಟೆ ತಲುಪಿಸಿ ಉಳಿದ ಮೊಟ್ಟೆಗಳನ್ನು ಪುತ್ತೂರಿಗೆ ಕೊಂಡೊಯ್ಯುತ್ತಿರುವಾಗ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಉಡುಪಿ: ಫೆ. 5ರಂದು ಪಾಂಗಾಳದಲ್ಲಿ ನಡೆದ ಶರತ್ ಶೆಟ್ಟಿ (39) ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಇಬ್ಬರು ಆರೋಪಿಗಳನ್ನು ಪೊಲೀಸರು ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆರೋಪಿಗಳಾದ ಸುರತ್ಕಲ್‌ನ ಆಕಾಶ್ ಕರ್ಕೇರ (24) ಮತ್ತು ಪ್ರಸನ್ನ ಶೆಟ್ಟಿ (40) ಯನ್ನು ಪ್ರಕರಣದ ತನಿಖಾಧಿಕಾರಿ, ಕಾಪು ಪೊಲೀಸ್ ವೃತ್ತ ನಿರೀಕ್ಷಕ ಕೆ.ಸಿ. ಪೂವಯ್ಯ ನೇತೃತ್ವದಲ್ಲಿ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.ಇನ್ನು ಆಕಾಶ್ ಕರ್ಕೇರನನ್ನು ಒಂದು ವಾರಗಳ ಪೊಲೀಸ್ ಕಸ್ಟಡಿಗೆ ಹಾಗೂ ಪ್ರಸನ್ನ ಶೆಟ್ಟಿಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ನ್ಯಾಯಾಲಯ ಆದೇಶಿಸಿದೆ.
ಲಿವಿಂಗ್ ಟುಗೆದರ್ ನಲ್ಲಿದ್ದ ಗೆಳತಿಯನ್ನು ಕೊಲೆ ಮಾಡಿ ಫಿಡ್ಜ್‌ನಲ್ಲಿಟ್ಟ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಕಳೆದ ವರ್ಷ ಇದೇ ರೀತಿ Shraddha Wakar ಎಂಬಾಕೆಯ ಕೊಲೆ ನಡೆದಿತ್ತು. ಆಕೆಯ ಶವವನ್ನು ಕತ್ತರಿಸಿ 35 ಭಾಗ ತುಂಡರಿಸಿ ಫ್ರಿಡ್ಜ್‌ನಲ್ಲಿರಿಸಿ ಬಳಿಕ ವಿಲೇವಾರಿ ಮಾಡಲಾಗಿತ್ತು. ಇದೀಗ ಅಂತದ್ದೇ ಇನ್ನೊಂದು ಪ್ರಕರಣ ಬೆಳಕಿಗೆ ಬಂದಿದೆ. ಆರೋಪಿಯನ್ನು ಈಗ ಪೊಲೀಸರು ಬಂಧಿಸಿದ್ದಾರೆ. ಲೀವ್ ಇನ್ ರಿಲೇಷನ್‌ನಲ್ಲಿದ್ದ ತನ್ನ ಗೆಳತಿ ನಿಕ್ಕಿ ಯಾದವ್‌ಳನ್ನು ಸಾಹಿಲ್ ಗೆಹ್ಲೋಟ್ (24) ಕೊಲೆ ಮಾಡಿದ್ದ. ನಂತರ ಮೊಬೈಲ್ ಡೇಟಾ ಕೇಬಲ್ ಅನ್ನು ಆಕೆಯ ಕತ್ತಿಗೆ ಸುತ್ತಿ ಉಸಿರುಗಟ್ಟಿಸಿ ಸಾಯಿಸಿದ್ದ. ಬಳಿಕ ಆ ಶವವನ್ನು ಫ್ರಿಡ್ಜ್‌ನಲ್ಲಿಟ್ಟಿದ್ದ. ರಸ್ತೆ ಬದಿಯ ಡಾಬಾ ಕಂ ರೆಸ್ಟೂರೆಂಟ್‌ನ ಫ್ರಿಡ್ಜ್‌ನಲ್ಲಿ ಆಕೆಯ ಶವವು ಪತ್ತೆಯಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಇಂದು ಈತನನ್ನು ಕೋರ್ಟ್ ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. 24 ವರ್ಷದ ಸಾಹಿಲ್ ಗೆಹ್ಲೋಟ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ತನ್ನ ಗೆಳತಿಯನ್ನು ಕೊಂದು ಆಕೆಯ…
ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಓರ್ವ ಆರೋಪಿ ಹೊರತುಪಡಿಸಿ ಉಳಿದ 14 ಆರೋಪಿಗಳನ್ನು ಎನ್‌ಐಎ ಅಧಿಕಾರಿಗಳ ನಿರ್ದೇಶನ ಮೇರೆಗೆ ಪರಪ್ಪನ ಅಗ್ರಹಾರ ಜೈಲಿನಿಂದ ಬೇರೆ ಬೇರೆ ಸೆಂಟ್ರಲ್ ಜೈಲಿಗೆ ಶಿಫ್ಟ್ ಮಾಡಲಾಗಿದೆ. ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರುವಾಜೆ ಕ್ರಾಸ್ ಬಳಿ ಅಕ್ಷಯ್ ಹೆಸರಿನ ಕೋಳಿ ಮಾಂಸದ ಅಂಗಡಿ ಹೊಂದಿದ್ದ ಬಿಜೆಪಿ ಯುವ ಮೋರ್ಚಾ ಸದಸ್ಯ 31 ವರ್ಷದ ಪ್ರವೀಣ್ ಕುಮಾರ್ ನೆಟ್ಟಾರು ಅವರನ್ನು ಜುಲೈ 26 ರಂದು ರಾತ್ರಿ 8 ಗಂಟೆ ಸುಮಾರಿಗೆ ಅಂಗಡಿ ಮುಚ್ಚಿ ಮನೆ ಕಡೆ ಹೊರಟಿದ್ದರು. ಈ ವೇಳೆ ಬೈಕಿನಲ್ಲಿ ಬಂದಿದ್ದ ಮೂವರು ತಲ್ವಾರ್‌ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ತಕ್ಷಣವೇ ಪುತ್ತೂರು ಆಸ್ಪತ್ರೆಗೆ ದಾಖಲಿಸಿದರೂ ಕುತ್ತಿಗೆಯ ಭಾಗಕ್ಕೆ ತೀವ್ರ ಏಟು ಬಿದ್ದಿದ್ದ ಕಾರಣ ಪ್ರವೀಣ್ ಮೃತಪಟ್ಟಿದ್ದರು.
ಕೇರಳದಲ್ಲೊಂದು ತೃತೀಯಲಿಂಗಿ ಜೋಡಿಯ ಮದುವೆ ನಡೆದಿದೆ.ವಿಶೇಷ ಅಂದರೆ ಈ ಜೋಡಿ ಪ್ರೇಮಿಗಳ ದಿನದಂದೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕೇರಳದ ಪಾಲಕ್ಕಾಡ್ ಜಿಲ್ಲೆಯ ಎಲವಚ್ಚೇರಿಯ ಪ್ರವೀಣ್ ನಾಥ್ ಹಾಗೂ ಮಲಪ್ಪುರಂ ಜಿಲ್ಲೆಯ ಕೊಟ್ಟೈಕಲ್‌ನ ರಿಶಾನಾ ಐಶು ಪ್ರೀತಿಸಿ ವಿವಾಹವಾಗಿದ್ದಾರೆ. ಕುಟುಂಬ ಸದಸ್ಯರ ಸಮ್ಮುಖದಲ್ಲಿ ಪ್ರೇಮಿಗಳ ದಿನದಂದೇ ಇವರಿಬ್ಬರ ಮದುವೆ ನಡೀತು. ತೃತೀಯಲಿಂಗಿಗಳಾಗಿರುವ ಇವರ ಮದುವೆಗೆ ಆರಂಭದಲ್ಲೇ ಮನೆ ಮಂದಿ ವಿರೋಧ ವ್ಯಕ್ತಪಡಿಸಿದ್ದರು. ನಂತರ ಎರಡೂ ಕುಟುಂಬದವರ ಒಪ್ಪಿಗೆಯಿಂದಲೇ ಪ್ರೇಮಿಗಳ ಮದುವೆ ನಡೆದಿದೆ. ಬಾಡಿಬಿಲ್ಡರ್ ಆಗಿರುವ ಪ್ರವೀಣ್, 2021ರಲ್ಲಿ ಮಿಸ್ಟರ್ ಕೇರಳ ಎಂಬ ಬಿರುದನ್ನು ಪಡೆದುಕೊಂಡಿದ್ದಾರೆ. 2022ರಲ್ಲಿ ಮುಂಬೈನಲ್ಲಿ ನಡೆದ ಇಂಟರ್‌ನ್ಯಾಷನಲ್ ಬಾಡಿ ಬಿಲ್ಡಿಂಗ್‌ನಲ್ಲಿ ತೃತೀಯ ಲಿಂಗಿ ವಿಭಾಗದಲ್ಲಿ ಭಾಗವಹಿಸಿದ್ದಾರೆ. ರಿಶಾನ ಐಶು ತೃತೀಯ ಲಿಂಗಿ ವಿಭಾಗದಲ್ಲಿ ಮಿಸ್ ಮಲಬಾರ್ ಅವಾರ್ಡ್ ಗೆದ್ದಿದ್ದಾರೆ. ರಿಶಾನಾ ಮಾಡೆಲ್ ಆಗಿಯೂ ಫೇಮಸ್ ಆಗಿದ್ದು, ತ್ರಿಶ್ಯೂರ್‌ನ ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಪಾಲಕ್ಕಾಡ್‌ನಲ್ಲಿ ನಡೆದ ಮದುವೆ ಕಾರ್ಯಕ್ರಮದಲ್ಲಿ ಟ್ರಾನ್ಸ್ ಸಮುದಾಯದ ಅನೇಕ ಜನರು ಭಾಗವಹಿಸಿದ್ದರು. ತೃತೀಯಲಿಂಗಿಗಳಿಗಾಗಿ ಸಹಯಾತ್ರಿಕ ಎಂಬ…
ಕಾರ್ಕಳ: ಗ್ರಾಹಕರನ್ನು ವಂಚಿಸಿದ ಚಿನ್ನಾಭರಣ ಅಂಗಡಿಯೊಂದರ ಮಾಲಕನಿಗೆ ಮತ್ತೊಂದು ಪ್ರಕರಣಕ್ಕೆ ಸಂಬಧಿಸಿದಂತೆ ಕಾರ್ಕಳ ಪ್ರಧಾನ ಸಿವಿಲ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಧೀಶೆ ಚೇತನಾ ಎಸ್.ಎಫ್ ಅವರು ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ಹೊರಡಿಸಿದ್ದಾರೆ. ಕಾರ್ಕಳ ನಗರದ ಮಾರ್ಕೆಟ್ ರಸ್ತೆಯಲ್ಲಿ ಶ್ರೀದುರ್ಗಾ ಜುವೆಲ್ಲರ್‍ಸ್ ವ್ಯವಹಾರ ನಡೆಸುತ್ತಿದ್ದ ರವೀಂದ್ರ ಆಚಾರ್ಯ ಯಾನೆ ರವೀಂದ್ರ ಶಿಕ್ಷೆಗೊಳಗಾದವನು.2009 ಅಕ್ಟೋಬರ್ 30ರಂದು ಸುರೇಶ್ ಕೆ ಸಾಲ್ಯಾನ್ ಇವರಿಂದ 8.580 ಗ್ರಾಂ ತೂಕದ ರೂ 17,160 ಮೌಲ್ಯದ ಹಳೆಯ ರೇಡಿಯೋ ಚೈನನ್ನು ಪಡೆದುಕೊಂಡು ಇದರಿಂದ ಹೊಸ ರೋಪ್ ಚೈನನ್ನು ಮಾಡಿಕೊಡುವುದಾಗಿ ನಂಬಿಸಿ ವಂಚನೆಗೈದಿದ್ದನು.2010 ಆಗಸ್ಟ್ ೨೦ರಂದು ಪ್ರೇಮಾ ಎಂಬವರಿಂದ 8.500 ಗ್ರಾಂ ತೂಕದ ರೂ. 17,000 ಮೌಲ್ಯದ ಹಳೆ ಡಿಸೈನಿನ ಚಿನ್ನದ ಚೈನನ್ನು ಪಡೆದುಕೊಂಡು ಇದರಿಂದ ೨೪ ಇಂಚು ಉದ್ದದ ಕಟ್ಟಿಂಗ್ ಹವಳದ ಹೊಸ ಸರವನ್ನು ಮಾಡಿಕೊಡುವುದಾಗಿ ನಂಬಿಸಿ ವಂಚನೆಗೈದಿದ್ದನು.2010 ಆಗಸ್ಟ್ 20ರಂದು ವಸಂತಿ ಎಂಬವರಿಂದ 8 ಗ್ರಾಂ ತೂಕದ ರೂ. 16,000 ಮೌಲ್ಯದ ಹಳೆಯ ಚಿನ್ನದ ಚಕ್ರಸರವನ್ನು ಪಡೆದುಕೊಂಡು ಅದರಿಂದ ಹೊಸ ರೇಡಿಯೋ ಚೈನ್ ಮಾಡಿಕೊಡುವುದಾಗಿ ನಂಬಿಸಿ…










