ಕುದುರೆಯೊಂದಕ್ಕೆ ಸರ್ಕಾರಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಕುದುರೆ ಸಾವನ್ನಪ್ಪಿದ್ದು, ಕುದುರೆ ಸವಾರ ಗಂಭೀರ ಗಾಯಗೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಇಳಂತಿಲ ಗ್ರಾಮದ ಪದುಮಲೆ ಎಂಬಲ್ಲಿ ಡಿ.25 ರ ಭಾನುವಾರ ನಡೆದಿದೆ. ಸಚಿನ್ ಪೆಲಪ್ಪಾರು ಗಾಯಗೊಂಡ ಕುದುರೆ ಸವಾರ. ಉಪ್ಪಿನಂಗಡಿಯಲ್ಲಿ ಸಚಿನ್ ಕುದುರೆ ಸವಾರಿ ಮಾಡುತ್ತಿದ್ದ ವೇಳೆ ಬೆಳ್ತಂಗಡಿ ಕಡೆಗೆ ಬರುತಿದ್ದ ಸರ್ಕಾರಿ ಬಸ್ ಕುದುರೆಗೆ ಢಿಕ್ಕಿ ಹೊಡೆದ ಪರಿಣಾಮ ಕುದುರೆ ಹಾಗೂ ಸವಾರ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಉಪ್ಪಿನಂಗಡಿ ಸಮೀಪ ಪಿಲಿಗೂಡಿನ ಮೋನು ಎಂಬವರಿಗೆ ಸೇರಿದ ಕುದುರೆ ಇದಾಗಿದ್ದು, ಅಪಘಾತದ ಬಳಿಕ ಚಿಕಿತ್ಸೆ ಫಲಿಸದೆ ಕುದುರೆ ಸಾವನ್ನಪ್ಪಿದೆ ಎಂದು ತಿಳಿದು ಬಂದಿದೆ.
Author: main-admin
ಉಪ್ಪಿನಂಗಡಿ: ಕುದುರೆಯೊಂದಕ್ಕೆ ಸರ್ಕಾರಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಕುದುರೆ ಸಾವನ್ನಪ್ಪಿದ್ದು, ಕುದುರೆ ಸವಾರ ಗಂಭೀರ ಗಾಯಗೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಇಳಂತಿಲ ಗ್ರಾಮದ ಪದುಮಲೆ ಎಂಬಲ್ಲಿ ಡಿ.25 ರ ಭಾನುವಾರ ನಡೆದಿದೆ. ಸಚಿನ್ ಪೆಲಪ್ಪಾರು ಗಾಯಗೊಂಡ ಕುದುರೆ ಸವಾರ. ಉಪ್ಪಿನಂಗಡಿಯಲ್ಲಿ ಸಚಿನ್ ಕುದುರೆ ಸವಾರಿ ಮಾಡುತ್ತಿದ್ದ ವೇಳೆ ಬೆಳ್ತಂಗಡಿ ಕಡೆಗೆ ಬರುತಿದ್ದ ಸರ್ಕಾರಿ ಬಸ್ ಕುದುರೆಗೆ ಢಿಕ್ಕಿ ಹೊಡೆದ ಪರಿಣಾಮ ಕುದುರೆ ಹಾಗೂ ಸವಾರ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಉಪ್ಪಿನಂಗಡಿ ಸಮೀಪ ಪಿಲಿಗೂಡಿನ ಮೋನು ಎಂಬವರಿಗೆ ಸೇರಿದ ಕುದುರೆ ಇದಾಗಿದ್ದು, ಅಪಘಾತದ ಬಳಿಕ ಚಿಕಿತ್ಸೆ ಫಲಿಸದೆ ಕುದುರೆ ಸಾವನ್ನಪ್ಪಿದೆ ಎಂದು ತಿಳಿದು ಬಂದಿದೆ.
ಮಂಗಳೂರು ಪ್ರಯಾಣಿಕರಿಗೆ ಮಹತ್ವದ ಮಾಹಿತಿ ಇದಾಗಿದ್ದು, ಡಿ. 26 ರಿಂದ 28 ರವರೆಗೆ ಸರ್ಕಾರಿ ಬಸ್ಸುಗಳ ಸಂಚಾರ ವ್ಯತ್ಯಯವಾಗಿದೆ ಎಂದು ಮಾಹಿತಿ ಲಭ್ಯವಾಗಿದೆ ಮೂಡಬಿದರೆಯಲ್ಲಿ ಇದೇ ಡಿ.21 ರಿಂದ 27ರ ವರೆಗೆ ನಡೆಯುತ್ತಿರುವ ಅಂತರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಗೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಹಾಗೂ ಹೊರ ರಾಜ್ಯಗಳಿಂದ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್‌ನ ಸುಮಾರು 50,000 ಕ್ಕಿಂತಲೂ ಹೆಚ್ಚಿನ ವಿದ್ಯಾರ್ಥಿಗಳು/ಪೋಷಕರು/ಶಿಕ್ಷಕರು ಆಗಮಿಸಿದ್ದಾರೆ. ಅಂತರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಗೆ ರಾಜ್ಯ ರಸ್ತೆ ಸಾರಿಗೆ ನಿಗಮದ ಇತರೆ ವಿಭಾಗಗಳಿಂದ ಹಾಗೂ ವಾ.ಕರಸಾ.ನಿಗಮ, ಕ.ಕ.ರ.ಸಾ.ನಿಗಮಗಳಿಂದ ವಿದ್ಯಾರ್ಥಿಗಳನ್ನು ಕರೆದುಕೊಂಡು ಬಂದಿದ್ದು, ಆ ವಿದ್ಯಾರ್ಥಿಗಳು/ಪೋಷಕರು/ಶಿಕ್ಷಕರು ಡಿ. 27 ರಂದು ಕಾರ್ಯಕ್ರಮ ಮುಕ್ತಾಯಗೊಂಡು ಹಿಂತಿರುಗುವ ವೇಳೆಗೆ ಮೂಡಬಿದಿರೆಯಿಂದ ರಾಜ್ಯದ ವಿವಿಧ ಸ್ಥಳಗಳಿಗೆ/ರೈಲ್ವೇ ನಿಲ್ದಾಣಗಳಿಗೆ ಹೆಚ್ಚುವರಿ ಸಾರಿಗೆಗಳ ವ್ಯವಸ್ಥೆ ಮಾಡಿ ವಾಹನಗಳನ್ನು ನಿಯೋಜಿಸಬೇಕಾಗಿರುತ್ತದೆ. ಆದ್ದರಿಂದ ಧರ್ಮಸ್ಥಳ, ಉಪ್ಪಿನಂಗಡಿ, ಸುಬ್ರಹ್ಮಣ್ಯ, ಕಾಸರಗೋಡು ವಲಯಗಳಲ್ಲಿ ಕಾರ್ಯಾಚರಣೆಯಲ್ಲಿರುವ ಸಾರಿಗೆಗಳಲ್ಲಿ ಡಿ. 26 ರಿಂದ 28 ರವರೆಗೆ ದೈನಂದಿನ ಮಾರ್ಗ ಕಾರ್ಯಾಚರಣೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಪ್ರಯಾಣಿಕರು ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಗಳು…
ಮಂಗಳೂರು:ಸುರತ್ಕಲ್ ನಲ್ಲಿ ಜಲೀಲ್ ಕೊಲೆ ಬೆನ್ನಲ್ಲೇ ಪಣಂಬೂರು, ಬಜ್ಪೆ, ಕಾವೂರು, ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೆಕ್ಷನ್ 144 ಜಾರಿಗೊಳಿಸಿ ಕಮಿಷನರ್ ಆದೇಶಿಸಿದ್ದಾರೆ. ಈ ಬಗ್ಗೆ ಮಂಗಳೂರು ನಗರ ಪೊಲೀಸ್ ಕಮೀಷನರ್ ಶಶಿಕುಮಾರ್ ಈ ಕುರಿತು ಆದೇಶ ಹೊರಡಿಸಿದ್ದಾರೆ. ಡಿ.25 ರ ಬೆಳಗ್ಗೆ 6 ಗಂಟೆಯಿಂದ ಡಿ.27 ರ ಬೆಳಗ್ಗೆ 6 ಗಂಟೆಯವರೆಗೆ ಅನ್ವಯವಾಗುವಂತೆ ಈ ಆದೇಶ ಹೊರಡಿಸಲಾಗಿದೆ. ಈ ನಿಷೇಧಾಜ್ಞೆ ಕ್ರಿಸ್ ಮಸ್ ಆಚರಣೆ, ತುರ್ತು ಸೇವೆ ಹಾಗೂ ಇತರ ಧಾರ್ಮಿಕ ಕಾರ್ಯಕ್ರಮಗಳಿಗೆ ಅನ್ವಯಿಸುವುದಿಲ್ಲ ಎಂದು ಹೇಳಿದ್ದಾರೆ. ಇದಲ್ಲದೆ ಸುರತ್ಕಲ್, ಬಜಪೆ ಕಾವೂರು, ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ.
ಕಾಸರಗೋಡು: ನೀರು ತುಂಬಿದ್ದ ಬಕೆಟ್ ನೊಳಗೆ ಬಿದ್ದು 11 ತಿಂಗಳ ಮಗು ಮೃತಪಟ್ಟ ದಾರುಣ ಘಟನೆ ಅಂಬಲತ್ತರದ ಏಳನೇ ಮೈಲ್ ನಲ್ಲಿ ನಡೆದಿದೆ. ಅಬ್ದುಲ್ ಜಬ್ಬಾರ್ ರವರ ಪುತ್ರ ಮುಹಮ್ಮದ್ ರಿಸಾಯ್ ಮೃತಪಟ್ಟ ಮಗು.ಮನೆಯ ಜಗಲಿಯಲ್ಲಿ ನೀರು ತುಂಬಿಸಿಟ್ಟಿದ್ದ ಬಕೆಟ್ ನೊಳಗೆ ಬಿದ್ದು ಈ ದುರ್ಘಟನೆ ನಡೆದಿದೆ.ಜಗಲಿಯಲ್ಲಿ ಆಟವಾಡುತ್ತಿದ್ದ ಮಗು ತಾಯಿ ಅಡುಗೆ ಕೋಣೆಗೆ ತೆರಳಿ ಮರಳಿದಾಗ ನಾಪತ್ತೆಯಾಗಿದ್ದು, ಹುಡುಕಾಡಿದಾಗ ಬಕೆಟ್ ನಲ್ಲಿ ಬಿದ್ದಿರುವುದು ಕಂಡು ಬಂದಿದೆ.ಕೂಡಲೇ ಸಮೀಪದ ಆಸ್ಪತ್ರೆಗೆ ತಲಪಿಸಿದರೂ ಜೀವ ಉಳಿಸಲಾಗಲಿಲ್ಲ.
ನವದೆಹಲಿ : ಕೇಂದ್ರೀಯ ತನಿಖಾ ದಳ (CBI) ಶನಿವಾರ ಐಸಿಐಸಿಐ (ICIC) ಬ್ಯಾಂಕ್ ಮಾಜಿ ಸಿಇಒ ಚಂದಾ (Chanda Kochhar) ಕೊಚ್ಚರ್ ಮತ್ತು ಅವರ ಪತಿ ದೀಪಕ್ ಕೊಚ್ಚರ್ ಅವರನ್ನು ಮುಂಬೈನ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿತ್ತು. ಈ ವೇಳೆ ಮೂರು ದಿನಗಳ ಕಾಲ ಕಸ್ಟಡಿಗೆ ಕೋರಿದೆ. ಸಾಲ ವಂಚನೆ ಪ್ರಕರಣದಲ್ಲಿ ಚಂದಾ ಕೊಚ್ಚರ್ ಮತ್ತು ಆಕೆಯ ಪತಿಯನ್ನು ನಿನ್ನೆ ಬಂಧಿಸಲಾಗಿತ್ತು. ಅವರಿಬ್ಬರೂ ತನಿಖೆಗೆ ಸಹಕರಿಸಲಿಲ್ಲ ಹೀಗಾಗಿ ಬಂಧಿಸಲಾಗಿದೆ ಎಂದು ಕೇಂದ್ರ ತನಿಖಾ ಸಂಸ್ಥೆ ನ್ಯಾಯಾಲಯಕ್ಕೆ ತಿಳಿಸಿದೆ. 2012ರಲ್ಲಿ ವಿಡಿಯೋಕಾನ್ ಗ್ರೂಪ್‌ಗೆ ಐಸಿಐಸಿಐ ಬ್ಯಾಂಕ್ ಮಂಜೂರು ಮಾಡಿದ ಸಾಲದಲ್ಲಿ ವಂಚನೆ ಮತ್ತು ಅಕ್ರಮಗಳಿಗೆ ಸಂಬಂಧಿಸಿದಂತೆ ಚಂದಾ ಕೊಚ್ಚರ್ ಮತ್ತು ಅವರ ಪತಿ ದೀಪಕ್ ಕೊಚ್ಚಾರ್ ಅವರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ. ಕ್ರಿಮಿನಲ್ ಪಿತೂರಿ ಮತ್ತು ನಿಬಂಧನೆಗಳಿಗೆ ಸಂಬಂಧಿಸಿದಂತೆ ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ದಾಖಲಾಗಿರುವ ಎಫ್‌ಐಆರ್‌ನಲ್ಲಿ ಚಂದಾ ಕೊಚ್ಚರ್, ಅವರ ಪತಿ ಮತ್ತು ವಿಡಿಯೋಕಾನ್ ಗ್ರೂಪ್‌ನ ವೇಣುಗೋಪಾಲ್ ಧೂತ್, ನುಪವರ್ ರಿನ್ಯೂಬಲ್ಸ್, ಸುಪ್ರೀಮ್ ಎನರ್ಜಿ,…
ಬೆಳ್ತಂಗಡಿ; ಗೂಡ್ಸ್ ರಿಕ್ಷಾಗೆ ಶಾಲಾ ಬಸ್ ಢಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟು ಇಬ್ಬರು ಗಾಯಗೊಂಡ ಘಟನೆ ಬೆಳ್ತಂಗಡಿ ಮಲೆಬೆಟ್ಟು ಬಳಿ ನಡೆದಿದೆ. ಬೆಳ್ತಂಗಡಿ ಸುನ್ನತ್ ಕೆರೆ ನಿವಾಸಿ ಅಬ್ದುಲ್ ರಝಾಕ್ ಮೃತರು. ಹನೀಫ್ ಎಂಬವರಿಗೆ ಗಂಭೀರ ಗಾಯವಾಗಿದ್ದು ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಹಮ್ಮದ್ ಎಂಬವರಿಗೆ ಸ್ವಲ್ಪ ಗಾಯಗಳಾಗಿದೆ. ಮಲೆಬೆಟ್ಟು ಬಳಿ ಗುಜಿರಿ ಸಂಗ್ರಹಿಸಲು ತೆರಳುತ್ತಿದ್ದ ಗೂಡ್ಸ್ ರಿಕ್ಷಾ ಗೆ ಧರ್ಮಸ್ಥಳದ ಸ್ಕೂಲ್ ಬಸ್ ಅಜಾಗರೂಕತೆಯಿಂದ ವೇಗವಾಗಿ ಸಂಚರಿಸಿ ಢಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ರಝಾಕ್ ಅವರ ಮೃತದೇಹ ಬೆಳ್ತಂಗಡಿ ಆಸ್ಪತ್ರೆಯಲ್ಲಿದೆ. ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ.
ಮಂಗಳೂರು: ಮಂಗಳೂರು ನಗರದಲ್ಲಿ ಪೇಯಿಂಗ್ ಗೆಸ್ಟ್ (ಪಿಜಿ), ಹಾಸ್ಟೆಲ್, ಹೋಮ್ ಸ್ಟೇ ಇತ್ಯಾದಿಗೆ ಸಂಬಂಧಿಸಿದ ನಿಯಮಗಳನ್ನು ಕಟ್ಟುನಿಟ್ಟುಗೊಳಿಸಿ ಪೊಲೀಸ್ ಆಯುಕ್ತರಾದ ಎನ್ ಶಶಿ ಕುಮಾರ್ ಆದೇಶ ಹೊರಡಿಸಿದ್ದಾರೆ. ಹಾಸ್ಟೆಲ್, ಹೋಂ ಸ್ಟೇ, ಪೇಯಿಂಗ್ ಗೆಸ್ಟ್, ಸರ್ವಿಸ್ ಅಪಾರ್ಟ್‌ಮೆಂಟ್, ವಾಣಿಜ್ಯ ಉದ್ದೇಶದ ಗೆಸ್ಟ್ ಹೌಸ್, ಶಿಕ್ಷಣ ಸಂಸ್ಥೆಗಳು ನಡೆಸುತ್ತಿರುವ ವಸತಿ ಗೃಹಗಳ ಮಾಲಕರು/ಪಾಲುದಾರರು, ಆಡಳಿತ ಮಂಡಳಿಯ ಮುಖ್ಯಸ್ಥರು ಸಂಬಂಧಿಸಿದ ಇಲಾಖೆಗಳಿಂದ ಕಡ್ಡಾಯವಾಗಿ ಅನುಮತಿ ಪಡೆದುಕೊಳ್ಳಬೇಕು. ಮಾಲಕರ ಹೆಸರು, ವಿಳಾಸ, ದೂರವಾಣಿ ಸಂಖ್ಯೆ, ಗುರುತಿನ ಚೀಟಿಯನ್ನು ಹಾಗೂ ಸಂಸ್ಥೆಯ ರಿಜಿಸ್ಟರ್ ಪುಸ್ತಕವನ್ನು ಕಡ್ಡಾಯವಾಗಿ ಪ್ರತೀ ವರ್ಷ ಪೊಲೀಸ್ ಆಯುಕ್ತರ ಕಚೇರಿಗೆ ಹಾಜರುಪಡಿಸಬೇಕು. ಅಲ್ಲದೆ ಮಾಲಕರ ಹೆಸರು, ವಿಳಾಸ, ದೂರವಾಣಿ ಸಂಖ್ಯೆ, ಗುರುತಿನ ಚೀಟಿಯನ್ನು ವ್ಯಾಪ್ತಿಯ ಪೊಲೀಸ್ ಠಾಣೆಗೆ ನೀಡಬೇಕು. ವಿದೇಶಿ ವಿದ್ಯಾರ್ಥಿಗಳು ವಾಸ್ತವ್ಯ ಹೂಡಿದ 24 ಗಂಟೆಗಳೊಳಗೆ ಅವರ ಪೂರ್ಣ ಮಾಹಿತಿಯನ್ನು ಪಾಸ್‌ಪೋರ್ಟ್, ವೀಸಾದ ವಿವರ ಸಹಿತವಾಗಿ ನೀಡಬೇಕು. ಅವರು ವಾಸ್ತವ್ಯ ತೆರವುಗೊಳಿಸಿದಾಗಲೂ ಮಾಹಿತಿ ನೀಡಬೇಕು ಎಂದು ಸೂಚಿಸಿದ್ದಾರೆ. ಉತ್ತಮ ಗುಣಮಟ್ಟದ ಸಿಸಿ ಕೆಮರಾಗಳನ್ನು…
ಹಾಸನ : ಜಿಲ್ಲೆಯ ಸಕಲೇಶಪುರ ತಾಲೂಕಿನ ದೊಡ್ಡಕಲ್ಲೂರು ಗ್ರಾಮದ ಅಂಗನವಾಡಿ ಕೇಂದ್ರದ ಆವರಣದಲ್ಲಿ ʻಹಾವು ಕಚ್ಚಿ ಬಾಲಕ ʼಸಾವನ್ನಪ್ಪಿದ ದುರಂತ ಘಟನೆ ಬೆಳಕಿಗೆ ಬಂದಿದೆ ದೊಡ್ಡಕಲ್ಲೂರು ಗ್ರಾಮದ ಯಶವಂತ್-ಗೌರಿ ಎಂಬುವವರ ಪುತ್ರ ರೋಷನ್ ಎಂಬ ಪುಟ್ಟ ಬಾಲಕನಿಗೆ ಹಾವು ಕಚ್ಚಿದೆ ಎಂದು ಗುರುತಿಸಲಾಗಿದೆ. ಅಂಗನವಾಡಿ ಸಹಾಯಕಿ ಮಕ್ಕಳನ್ನು ಕರೆ ತರಲು ಮನೆಗಳಿಗೆ ಹೋದಾಗ ಈ ಘಟನೆ ನಡೆದಿದೆ. ಕೂಡಲೇ ಕುಟುಂಬಸ್ಥರು ಬಾಲಕನನ್ನು ಹೆತ್ತೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬೈಕ್‍ನಲ್ಲಿ ಕರೆ ತಂದಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಸಕಲೇಶಪುರ ಪಟ್ಟಣ್ಣದ ಆಸ್ಪತ್ರೆಗೆ ತೆರಳುವಂತೆ ತಿಳಿಸಿದ್ದಾರೆ. ಈ ಬಳಿಕ ಅಂಬುಲೆನ್ಸ್‌ಗೆ ಕರೆ ಮಾಡಿದ್ದಾರೆ. ಸರಿಯಾದ ಸಮಯಕ್ಕೆ ಅಂಬುಲೆನ್ಸ್ ಬಂದಿಲ್ಲ ಅಷ್ಟರಲ್ಲೇ ಮಗುವಿನ ಪ್ರಾಣ ಪಕ್ಷಿ ಹಾರಿಹೋಗಿತ್ತು ಎಂದು ಮಾಹಿತಿ ಲಭ್ಯವಾಗಿದೆ
ಮಾದಕ ನಿದ್ರಾಜನಕ ವಸ್ತುವಾದ ಎಂ.ಡಿ.ಎಂ.ಎ. ಸಾಗಾಟ ಮಾಡುತ್ತಿದ್ದ ಪ್ರಕರಣವೊಂದರಲ್ಲಿ ಗುರುವಾರ ಬಂಟ್ವಾಳ ನಗರ ಠಾಣಾ ಪೊಲೀಸರು ಇಬ್ಬರನ್ನು ಬಿ.ಸಿ.ರೋಡ್ ರೈಲ್ವೆ ನಿಲ್ದಾಣದ ಬಳಿ ಗೂಡಿನಬಳಿಗೆ ಹೋಗುವ ರಸ್ತೆಯಲ್ಲಿ ಬಂಧಿಸಿದ್ದಾರೆ. ಬಿಕಸ್ಟಾ ಗ್ರಾಮದ ಬಾರೆಕಾಡು ನಿವಾಸಿ ಇರ್ಷಾದ್ (25) ಮತ್ತು ಕಾಸರಗೋಡು ಮಂಜೇಶ್ವರ ತಾಲೂಕಿನ ದೀಕ್ಷಿತ್ ಯಾನೆ ಅಪ್ಪೂಸ್ (19) ಎಂಬಿಬ್ಬರು ಬಂಧಿತರು. ಬಂಟ್ವಾಳ ನಗರ ಠಾಣಾಧಿಕಾರಿ ಅವಿನಾಶ್ ಅವರು ಸಿಬ್ಬಂದಿ ಜೊತೆ ಗಸ್ತಿನಲ್ಲಿದ್ದ ವೇಳೆ ಸಂಜೆ ಸುಮಾರು ಸಂಜೆ 5 ಗಂಟೆಯ ವೇಳೆಗೆ ಬಿ,ಮೂಡ ಗ್ರಾಮದ ಗೂಡಿನಬಳಿಗೆ ಹೋಗುವ ರಸ್ತೆಯಲ್ಲಿ ವಾಹನಗಳನ್ನು ತಪಾಸಣೆ ಮಾಡಿಕೊಂಡಿರುವಾಗ ನಾರಾಯಣಗುರು ವೃತ್ತದ ಕಡೆಯಿಂದ ಬಂದ ಆರೋಪಿಗಳಿಬ್ಬರು ಪ್ರಯಾಣಿಸುತ್ತಿದ್ದ ಆಟೋರಿಕ್ಷಾವನ್ನು ನಿಲ್ಲಿಸಲು ಸೂಚಿಸಿ ದಾಖಲಾತಿ ಕೇಳಿದಾಗ ಚಾಲಕನ ವರ್ತನೆಯಲ್ಲಿ ಅನುಮಾನ ಕಂಡು ವಿಚಾರಣೆ ನಡೆಸಿದ್ದಾರೆ. ಈ ಸಂದರ್ಭ ಎಂಡಿಎಂಎ ನಿದ್ರಾಜನಕ ಸೊತ್ತನ್ನು ಸೇವಿಸಿರುವುದು ಗಮನಕ್ಕೆ ಬಂದಿದೆ. ಇರ್ಷಾದ್ ಬಳಿಯಿಂದ 4 ಗ್ರಾಮ್ ತೂಕ ಹಾಗೂ ದೀಕ್ಷಿತ್ ಬೆಳೆಯಿಂದ 5 ಗ್ರಾಮ್ ತೂಕದ ನಿದ್ರಾಜನಕ ಸೊತ್ತಾದ ಎಂಡಿಎಂಎ ಮಾತ್ರೆ…









