ಕಾರಿಗೆ ಪಿಕಪ್ ಡಿಕ್ಕಿ ಹೊಡೆದು ಪರಾರಿಯಾದ ಪಿಕಪ್ ನ್ನು ಸ್ಥಳೀಯರ ನೆರವಿನಿಂದ ಪತ್ತೆ ಹಚ್ಚಿದ ಘಟನೆ ಆ. 16. ಬಾಳಿಲದಿಂದ ವರದಿಯಾಗಿದೆ. ಬೆಳ್ಳಾರೆ ಕಡೆಗೆ ಹೋಗುತ್ತಿದ್ದ ಪುರುಷೋತ್ತಮ ಎಂಬವರ ಕಾರಿಗೆ ಬಾಳಿಲದ ಅಗಲ್ಪಾಡಿ ಎಂಬಲ್ಲಿ ಎದುರಿನಿಂದ ಬಂದ ಪಿಕಪ್ ವಾಹನ ಡಿಕ್ಕಿ ಹೊಡೆದು ಕಾರಿನ ಒಂದು ಬದಿ ಜಖಂ ಗೊಂಡಿತು. ಆದರೆ ಪಿಕಪ್ ವಾಹನದವರು ನಿಲ್ಲಿಸದೆ ಅಲ್ಲಿಂದ ಪರಾರಿಯಾಗಿದ್ದರು. ಈ ವಿಚಾರ ತಿಳಿದ ಕೂಡಲೇ ಸ್ಥಳೀಯರು ವಾಹನವನ್ನು ಹುಡುಕಾಟ ನಡೆಸಿದ್ದು, ಈ ವೇಳೆ ಬಾಳಿಲದ ಉರುಂಬಿ ಎಂಬಲ್ಲಿ ವಾಹನ ಪತ್ತೆಯಾಗಿದೆ. ಪರಾರಿಯಾದ ಪಿಕಪ್ ಹಾಸನದ ಸಚಿನ್ ಎಂಬವರುದು ಎಂದು ತಿಳಿದು ಬಂದಿದೆ. ಬಳಿಕ ಪ್ರಕರಣವನ್ನು ರಾಜಿಯಲ್ಲಿ ಮುಗಿಸಲಾಯಿತು.
Author: main-admin
ಉಡುಪಿ: ಶಿವಮೊಗ್ಗ ಜಿಲ್ಲೆಯಲ್ಲಿ ಚಾಕು ಇರಿತ ಪ್ರಕರಣ ಸಂಬಂಧಿಸಿ ಉಡುಪಿ ಜಿಲ್ಲೆಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ನಗರದ ಪೊಲೀಸರು ವಾಹನಗಳ ತಪಾಸಣೆ ನಡೆಸುತ್ತಿದ್ದಾರೆ. ಜಿಲ್ಲೆಯಾದ್ಯಂತ ಹೆಚ್ಚುವರಿಯಾಗಿ 20 ಚೆಕ್‌ಪೋಸ್ಟ್ ಗಳನ್ನು ತೆರೆಯಲಾಗಿದೆ. ವಾಹನಗಳನ್ನು ತಡೆದು ನಿಲ್ಲಿಸಿ ಮಾಹಿತಿ ಪಡೆಯುವ ಜತೆಗೆ ಮೊಬೈಲ್ ಸಂಖ್ಯೆಯನ್ನೂ ನಮೂದಿಸಿ ಕೊಳ್ಳಲಾಗುತ್ತಿದೆ. ಎಸ್ಪಿ, ಹೆಚ್ಚು ವರಿ ಪೊಲೀಸ್ ವರಿಷ್ಠಾಧಿಕಾರಿ, ಡಿವೈ ಎಸ್ಪಿ, ಇನ್‌ಸ್ಪೆಕ್ಟರ್‌ಗಳು, ಪಿಸಿಗಳು ತಪಾಸಣೆ ಕಾರ್ಯದಲ್ಲಿ ತೊಡಗಿದ್ದಾರೆ. ಬ್ರಹ್ಮಗಿರಿ ಸರ್ಕಲ್‌ನಲ್ಲಿ ಸಾವರ್ಕರ್ ಹಾಗೂ ಸುಭಾಷ್ ಚಂದ್ರ ಬೋಸ್ ಭಾವಚಿತ್ರಗಳಗೊಂಡ ಫ್ಲೆಕ್ಸ್ ಹಾಕಲಾಗಿದ್ದು, ಪೊಲೀಸ್ ಭದ್ರತೆ ಒದಗಿಸಲಾಗಿದೆ. ಬಂದೋ ಬಸ್ತ್ ಮಂಗಳವಾರವೂ ಮುಂದುವರಿಯಲಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿ ಕಾರಿಗಳು ತಿಳಿಸಿದ್ದಾರೆ. ಬೆಳ್ಳಾರೆ, ಸುರತ್ಕಲ್‌ನಲ್ಲಿ ನಡೆದಿರುವ ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗಾಗಲೇ ಬಿಗು ಬಂದೋಬಸ್ತು ಜಾರಿಯಲ್ಲಿದ್ದು, ಪೊಲೀಸರು ಜಾಗೃತ ಸ್ಥಿತಿಯಲ್ಲಿದ್ದಾರೆ. ಶಿವಮೊಗ್ಗ ಘಟನೆಯ ಹಿನ್ನೆಲೆಯಲ್ಲಿ ಹೆಚ್ಚುವರಿಯಾಗಿ ಯಾವುದೇ ಕ್ರಮಗಳನ್ನು ಜಿಲ್ಲೆಯಲ್ಲಿ ಕೈಗೊಂಡಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಕಡಬ: ಕ್ಷುಲಕ ವಿಚಾರಕ್ಕೆ ಇತ್ತಂಡಗಳ ನಡುವೆ ವಾಗ್ವಾದ ಬೆಳೆದು ಇಬ್ಬರು ಗಾಯಗೊಂಡಿರುವ ಘಟನೆ ಕಡಬ ತಾಲೂಕಿನ ಆತೂರಿನಲ್ಲಿ ಸೋಮವಾರ ಸಂಜೆ ನಡೆದಿದೆ. ಹಲ್ಲೆಗೊಳಗಾದ ಯುವಕರನ್ನು ಆತೂರು ಜನತಾ ಕಾಲೊನಿ ನಿವಾಸಿ ನವಾಝ್ ಹಾಗೂ ಆತೂರಿನ ನೌಫಲ್ ಎಂದು ಗುರುತಿಸಲಾಗಿದೆ.ಕ್ಷುಲ್ಲಕ ಕಾರಣಕ್ಕೆ ಇತ್ತಂಡಗಳ ಮಧ್ಯೆ ಮಾತಿನ ಚಕಮಕಿ ಉಂಟಾಗಿ ಈ ಕೃತ್ಯ ನಡೆದಿದೆ ಎನ್ನಲಾಗಿದೆ. ನವಾಝ್ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ನೌಫಲ್ ಸರ್ಕಾರಿ ಆಸ್ಪತೆಗೆ ದಾಖಲಾಗಿದ್ದಾರೆ.ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೆತ್ತಿಕೊಂಡಿದ್ದಾರೆ.
ಮಂಗಳೂರು: ಭದ್ರತೆ ಬಗ್ಗೆ ಸಂದೇಹ ಮತ್ತು ಆತಂಕ ಮೂಡಿಸುವಂತಹ ವಾಟ್ಸ್ ಆಯಪ್ ಚಾಟಿಂಗ್ ನಡೆಸಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗೊಂದಲ ಸೃಷ್ಟಿಸಿದ್ದ ಯುವಕ ಮತ್ತು ಯುವತಿಯ ವಿರುದ್ಧ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅವರಿಬ್ಬರಿಗೆ ವಿಮಾನಯಾನಕ್ಕೆ ನಿಷೇಧ ಹೇರುವ ಸಾಧ್ಯತೆ ಇದೆ ಎನ್ನಲಾಗಿದೆ. ಇಂಡಿಗೋ ವಿಮಾನಯಾನ ಸಂಸ್ಥೆಯ ಮ್ಯಾನೇಜರ್ ನೀಡಿರುವ ದೂರಿನಂತೆ ದಿಪಯಾನ್ ಮಾಜಿ (23) ಮತ್ತು ಸಿಮ್ರಾನ್ ಟಾಮ್ (23) ವಿರುದ್ಧ ಭಾರತೀಯ ದಂಡ ಸಂಹಿತೆ 505 (1)(ಬಿ) ಮತ್ತು (ಸಿ)ಯಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಯುವತಿವಿಮಾನದೊಳಗಿದ್ದ ತನ್ನ ಗೆಳೆಯ ದಿಪಯಾನ್ ಮಾಜಿ ಎನ್ನುವಾತನಿಗೆ ಕಳುಹಿಸಿದ್ದ ವಾಟ್ಸ್ ಆಯಪ್ ಸಂದೇಶದಲ್ಲಿ ‘ಬಾಂಬರ್’ ಎನ್ನುವ ಶಬ್ದವನ್ನು ಉಲ್ಲೇಖೀಸಿದ್ದು, ನಿರ್ದಿಷ್ಟ ಸಮುದಾಯದ ಬಗ್ಗೆಯೂ ಚಾಟ್ ಮಾಡಿದ್ದರು ಎಂದು ಮ್ಯಾನೇಜರ್ ದೂರಿನಲ್ಲಿ ತಿಳಿಸಿದ್ದಾರೆ. ಇನ್ನು ಆತಂಕ ಮತ್ತು ಗೊಂದಲ ಸೃಷ್ಟಿಸಿ ವಿಮಾನ ಪ್ರಯಾಣ ಮತ್ತು ಪ್ರಯಾಣಿಕರಿಗೆ ತೊಂದರೆ ಉಂಟು ಮಾಡಿದ ಹಿನ್ನೆಲೆಯಲ್ಲಿ ಯುವತಿ ಮತ್ತು ಯುವಕನಿಗೆ ವಿಮಾನಯಾನಕ್ಕೆ ನಾಗರಿಕ ವಿಮಾನಯಾನ ನಿರ್ದೇಶನಾಲಯವು ನಿಷೇಧ ಹೇರುವ…
ಶಿವಮೊಗ್ಗ:ಶಿವಮೊಗ್ಗದಲ್ಲಿ ಪ್ರೇಮ್ ಸಿಂಗ್ ಗೆ ಚಾಕು ಇರಿತ ಪ್ರಕರಣದ ಪ್ರಮುಖ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿರುವ ಬಗ್ಗೆ ವರದಿಯಾಗಿದೆ. ಪ್ರೇಮ್ ಸಿಂಗ್ ಚಾಕು ಇರಿತ ಪ್ರಕರಣದ ಪ್ರಮುಖ ಆರೋಪಿ ಜಬೀವುಲ್ಲಾ ಬಂಧನಕ್ಕೆ ತೆರಳಿದ್ದ ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ್ದ ಆರೋಪಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಶಿವಮೊಗ್ಗದ ತೀರ್ಥಹಳ್ಳಿ ರಸ್ತೆಯಲ್ಲಿರುವ ನಮೋ ಶಂಕರ ಲೇಔಟ್ ನಲ್ಲಿ ಪೊಲೀಸರು ಫೈರಿಂಗ್ ಮಾಡಿದ್ದಾರೆ.ಸದ್ಯ ಆರೋಪಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಶಿವಮೊಗ್ಗದಲ್ಲಿ ಸಾವರ್ಕರ್ ಫ್ಲೆಕ್ಸ್ ವಿವಾದದಿಂದಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಬಂಟ್ವಾಳ: ಇರಾ ಜೈಶಕ್ತಿ ಮಿತ್ರ ಮಂಡಳಿ ಮತ್ತು ಸ್ಥಳೀಯ ನಾಗರೀಕರು 75 ನೇ ಸ್ವಾತಂತ್ರ್ಯೋತ್ಸವದ ಸಂಭ್ರಮವನ್ನು ಊರಿನ ಹಿರಿಯರು ಶತಾಯುಷಿ ಶ್ರೀಮತಿ ಕಲ್ಯಾಣಿ ಇವರ ದಿವ್ಯ ಹಸ್ತದಿಂದ ಧ್ವಜಾರೋಹಣ ಮಾಡಲಾಯಿತು. ಈ ಸಂದರ್ಭದಲ್ಲಿ ಪಂಚಾಯತ್ ಸದಸ್ಯರುಗಳಾದ ರಮೇಶ್ ಪೂಜಾರಿ,ಶರ್ಮಿಳಾ,ಮತ್ತು ಭಾನುಮತಿ ರೈ ಯವರು ಉಪಸ್ಥಿತರಿದ್ದರು. ಮುಖ್ಯ ಅತಿಥಿಗಳಾಗಿ ವಿಠಲ್ ಶೆಟ್ಟಿ, ಕುಶಿ ಜಯರಾಜ್,ಉಮ್ಮರ್ ಸೈಟ್, ಹರೀಶ್ ಪಿ ಇರಾ, ಮನೋಜ್ ಸೈಟ್, ಅಂಗನವಾಡಿ ಪ್ರೇರಕಿ ಕವಿತಾ ಗೋಪಾಲ್, ಗೋಪಾಲ್ ನಾಯಕ್ ಇರಾ,ಸುಕೇಶ್ ಪೂಜಾರಿ ಇವರು ಭಾಗವಹಿಸಿದ್ದರು.ಹರೀಶ್ ಇರಾ ಧ್ವಜವಂದನೆಗೈದರು
ಹಳೆಯಂಗಡಿ: ರಾಷ್ಟ್ರೀಯ ಹೆದ್ದಾರಿ 66ರ ಹಳೆಯಂಗಡಿ ಜಂಕ್ಷನ್ ಬಳಿ ಸ್ಕಾರ್ಪಿಯೋ ಕಾರು ಪಲ್ಟಿಯಾಗಿ ಪ್ರಯಾಣಿಕರು ಪವಾಡ ಸದೃಶ ಪಾರಾಗಿದ್ದಾರೆ. ಬಾಗಲಕೋಟೆ ಕಡೆಯಿಂದ ಮಂಗಳೂರು ಕಡೆಗೆ ಸೋಮವಾರ ಮುಂಜಾನೆ ಬರುತ್ತಿದ್ದ ಸ್ಕಾರ್ಪಿಯೊ ಕಾರು ಹಳೆಯಂಗಡಿ ಜಂಕ್ಷನ್ ತಲುಪುತ್ತಿದ್ದಂತೆ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ಪಲ್ಟಿಯಾಗಿದೆ. ಅಪಘಾತದಿಂದ ಕಾರು ಜಖಂಗೊಂಡಿದ್ದು ಕಾರಿನಲ್ಲಿದ್ದವರು ಅಲ್ಪ ಸ್ವಲ್ಪ ಗಾಯಗಳೊಂದಿಗೆ ಪಾರಾಗಿದ್ದಾರೆ. ಚಾಲಕ ನಿದ್ರೆ ಮಂಪರ್‌ನಲ್ಲಿದ್ದ ಕಾರಣ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ಪಲ್ಟಿಯಾಗಿದೆ ಎಂದು ತಿಳಿದು ಬಂದಿದೆ. ಬಳಿಕ ಕ್ರೇನ್ ಮೂಲಕ ಕಾರನ್ನು ತೆರವುಗೊಳಿಸಲಾಯಿತು.
ಮಂಗಳೂರು: ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ನೆಹರು ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸುನಿಲ್ ಕುಮಾರ್ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿದರು. ಬಳಿಕ ಮಾತನಾಡಿದ ಅವರು ನಗರವನ್ನು ಕನಸಿನ , ಆಕರ್ಷಣೀಯ ಮತ್ತು ಅಭಿವೃದ್ದಿ ಪಥದ ಮಂಗಳೂರು ಎಂಬ ಮೂರು ಪ್ರಮುಖ ಅಂಶಗಳೊಂದಿಗೆ ಅಭಿವೃದ್ದಿ ಮಾಡಲು ಯೋಜನೆ ಹಮ್ಮಿಕೊಳ್ಳಲಾಗಿದೆ ಎಂದರು. ಈ ಸಂದರ್ಭದಲ್ಲಿ ಸ್ಥಳೀಯ ಶಾಸಕರಾದ ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ, ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಕುಮಾರ್, ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ಸೇರಿದಂತೆ ಜನಪ್ರತಿನಿಧಿಗಳು, ಅಧಿಕಾರಿಗಳು ಮತ್ತು ಅಪಾರ ಸಂಖ್ಯೆಯ ಸಾರ್ವಜನಿಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ನವದೆಹಲಿ: ಸ್ವಾತಂತ್ರ್ಯೋತ್ಸವದ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯ ಐತಿಹಾಸಿಕ ಕೆಂಪುಕೋಟೆಯಲ್ಲಿ ಧ್ವಜಾರೋಹಣ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಸತತ 9ನೇ ಬಾರಿಗೆ ತ್ರಿವರ್ಣ ಧ್ವಜಾರೋಹಣ ಮಾಡಿದ್ದು, ಹಿರಿಯ ಸಚಿವರು, ಅಧಿಕಾರಿಗಳು ಮತ್ತು ಲಕ್ಷಾಂತರ ಪ್ರೇಕ್ಷಕರ ಉಪಸ್ಥಿತಿಯಲ್ಲಿ ಪ್ರಧಾನಿ ಮೋದಿ ಧ್ವಜಾರೋಹಣ ನೆರವೇರಿಸಿದರು. ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದಂತೆಯೇ ಭಾರತೀಯ ಸೇನೆಯ ವಿಶೇಷ ಪಡೆಗಳಿಂದ ಅವರು ಗಾರ್ಡ್ ಆಫ್ ಹಾನರ್ ಸ್ವೀಕರಿಸಿದರು. ಬಳಿಕ ಪ್ರಧಾನಿ ಮೋದಿ ಧ್ವಜಾರೋಹಣ ನೆರವೇರಿಸುತ್ತಲೇ ವಾಯುಸೇನೆಯ ಹೆಲಿಕಾಪ್ಟರ್ ಗಳಿಂದ ಧ್ವಜಕ್ಕೆ ಪುಷ್ಪವೃಷ್ಟಿ ಸುರಿಸಿ ಗೌರವ ಸಲ್ಲಿಸಲಾಯಿತು. ಧ್ವಜಾರೋಹಣಕ್ಕೂ ಮುನ್ನ ಪ್ರಧಾನಿ ಮೋದಿ ಅವರು ರಾಷ್ಟ್ರಪಿತ ಮಹಾತ್ಮಾಗಾಂಧಿ ಅವರ ಸ್ಮಾರಕ ರಾಜ್ ಘಾಟ್ ಗೆ ತೆರಳಿ ಪುಷ್ಪನಮನ ಸಲ್ಲಿಸಿದರು. ಸ್ವಾತಂತ್ರ್ಯ ದಿನದಂದು ನಾನು ಎಲ್ಲಾ ಭಾರತೀಯರು ಮತ್ತು ಭಾರತವನ್ನು ಪ್ರೀತಿಸುವವರನ್ನು ಅಭಿನಂದಿಸುತ್ತೇನೆ. ಹೊಸ ಸಂಕಲ್ಪದೊಂದಿಗೆ ಹೊಸ ದಿಕ್ಕಿನತ್ತ ಹೆಜ್ಜೆ ಹಾಕುವ ದಿನ. ಈ ಕರ್ತವ್ಯದ ಹಾದಿಯಲ್ಲಿ ಜೀವ ನೀಡಿದ ಬಾಪು, ನೇತಾಜಿ ಸುಭಾಷ್ ಚಂದ್ರ ಬೋಸ್,…
ನವದೆಹಲಿ : ದೇಶದ 75 ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕೆಂಪುಕೋಟೆ ಮೇಲೆ ಸತತ 9 ನೇ ಬಾರಿಗೆ ಧ್ವಜಾರೋಹಣ ನೆರವೇರಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಧ್ವಜಾರೋಹಣದ ಬಳಿಕ ದೇಶವನ್ನು ಉದ್ದೇಶಿಸಿ ಮಾತನಾಡುತ್ತಿದ್ದು, ಸ್ವಾತಂತ್ರ್ಯ ಬಂದು 75 ವರ್ಷ ಪೂರೈಸಿದ ದೇಶವಾಸಿಗಳಿಗೆ ಶುಭಾಶಯಗಳು. ಅನೇಕ ಅಭಿನಂದನೆಗಳು. ಸ್ವಾತಂತ್ರ್ಯದ ಈ ಅಮೃತ ಮಹೋತ್ಸವಕ್ಕಾಗಿ ನಾನು ವಿಶ್ವದಾದ್ಯಂತ ಹರಡಿರುವ ಭಾರತದ ಪ್ರೇಮಿಗಳನ್ನು, ಭಾರತೀಯರನ್ನು ಅಭಿನಂದಿಸುತ್ತೇನೆ. ಇಂದು ಐತಿಹಾಸಿಕ ದಿನವಾಗಿದ್ದು, ಜಗತ್ತಿನಾದ್ಯಂತ ತ್ರಿವರ್ಣಧ್ವಜ ಹಾರಾಡುತ್ತಿದೆ. ಇಡೀ ದೇಶ ಇಂದು ಹೊಸ ಸಂಕಲ್ಪ ಮಾಡುತ್ತಿದೆ. ಗುಲಾಮಗರಿಯಿಂದ ಹೊರ ಬರಲು ಒಟ್ಟಾಗಿ ಹೋರಾಟ ಮಾಡಲಾಗಿತ್ತು. ದೇಶದ ಮೂಲೆ ಮೂಲೆಯಲ್ಲೂ ಹೋರಾಟ ನಡೆದಿತ್ತು. ಮಂಗಲ್ ಪಾಂಡೆ, ವೀರ ಸಾವರ್ಕರ್, ಭಗತ್ ಸಿಂಗ್, ಗಾಂಧೀಜಿ, ಜವಹಾರ್ ಲಾಲ್ ನೆಹರೂ ಸೇರಿದಂತೆ ಹಲವರು ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದರು. ದೇಶದ ನಾರಿ ಶಕ್ತಿ ಏನ್ನು ಅನ್ನೋದು ಸ್ವಾತಂತ್ರ್ಯ ಹೋರಾಟದಲ್ಲಿ ಸಾಬೀತಾಗಿದೆ. ಭಾರತದ ಮೇಲಿನ ಪ್ರೀತಿಗಾಗಿ ತ್ಯಾಗ…










