ಉಡುಪಿ: ನಿಂತಿದ್ದ ಬಸ್ಸಿನ ಹಿಂಬದಿಗೆ ಸ್ಕೂರ್ ಢಿಕ್ಕಿ ಹೊಡೆದ ಪರಿಣಾಮ ಸವಾರ ಗುಂಡಿಬ್ಯೆಲು ನಿವಾಸಿ ಲಕ್ಷ್ಮಣ (60)ಗಂಭೀರ ಗಾಯಗೊಂಡಿದ್ದು ಅವರನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಲ್ಪೆ ಸಿಟಿಜನ್ ಸರ್ಕಲ್ ಸಮೀಪದ ನೆರ್ಗಿ ಎಂಬಲ್ಲಿ ಈ ಘಟನೆ ನಡೆದಿದೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲು ಸಮಾಜಸೇವಕ ಈಶ್ವರ ಮಲ್ಪೆ ಮತ್ತು ತಂಡದವರು ಸಹಕರಿಸಿದರು. ಇವರಿಗೆ ಗುಂಡಿಬ್ಯೆಲಿನಲ್ಲಿ ವರ್ಕ್ ಶಾಪ್ ಇದೆ ಎನ್ನಲಾಗುತ್ತಿದೆ. ಮಲ್ಪೆ ಠಾಣೆಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಢಿಕ್ಕಿಯ ರಭಸಕ್ಕೆ ಬಸ್ ನ ಹಿಂಭಾಗ ಜಖಂಗೊಂಡಿದೆ.
Author: main-admin
ಸುಳ್ಯ: ಸರಕಾರಿ ಶಾಲೆಯಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವತಿಯಿಂದ ಗುರುಪೂಜೆ ನಡೆಸಿದ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಇಲಾಖೆಗೆ ದೂರು ನೀಡಿರುವ ಘಟನೆ ನಡೆದಿದ್ದು, ಕಾರ್ಯಕ್ರಮದ ಫೋಟೋ ವೈರಲ್ ಆಗಿದೆ. ಕಡಬ ತಾಲೂಕಿನ ಎಡಮಂಗಲ ಗ್ರಾಮದ ಕರಿಂಬಿಲ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುಪೂಜೆ ನಡೆಸಲಾಗಿರುವ ಆರೋಪ ಕೇಳಿಬಂದಿದೆ. ಶಾಲಾ ಕೊಠಡಿಯೊಳಗೆ ಕಾರ್ಯಕ್ರಮ ನಡೆಸಿದ್ದು, ಎದುರಿನ ಕಪ್ಪು ಹಲಗೆ(ಬ್ಲಾಕ್ ಬೋರ್ಡ್)ಯಲ್ಲಿ ಶಾಲೆಯ ಹೆಸರು ಕಂಡುಬಂದಿದೆ. ಕಾರ್ಯಕ್ರಮದಲ್ಲಿ ಭಾಗವಹಿಸಿದ ಕೆಲವರು ಕಾರ್ಯಕ್ರಮ ಫೋಟೋವನ್ನು ವಾಟ್ಸಾಪ್ ಸ್ಟೇಟಸ್ ಹಾಕಿದ್ದರಿಂದ ಬಹಿರಂಗವಾಗಿದೆ. ಸರಕಾರಿ ಶಾಲೆಯ ಆವರಣದೊಳಗೆ ಅಥವಾ ಮೈದಾನದಲ್ಲಿ ಸಾರ್ವಜನಿಕ ಕಾರ್ಯಕ್ರಮಗಳಿಗೆ ಅವಕಾಶ ನೀಡಬಾರದೆಂಬ ಸರಕಾರದ ಸುತ್ತೋಲೆ ಇದ್ದರೂ ಶಾಲೆಯ ಒಳಗೆ ಆರೆಸ್ಸೆಸ್ ಕಾರ್ಯಕ್ರಮ ನಡೆದಿರುವ ಬಗ್ಗೆ ಶಿಕ್ಷಣ ಇಲಾಖೆ, ಹಾಗೂ ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಲಾಗಿದೆ ಎಂದು ತಿಳಿದುಬಂದಿದ್ದು, ಮುಖ್ಯ ಶಿಕ್ಷಕರಿಂದ ವಿವರಣೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ.
ಉಪ್ಪಿನಂಗಡಿ: ಮನೆಯಲ್ಲಿ ವಿದ್ಯುತ್ ಇಲ್ಲವೆಂದು ವಿದ್ಯುತ್ ಪರಿವರ್ತಕದ ಬಳಿ ಫ್ಯೂಸ್ ಹಾಕಲು ತೆರಳಿದ ಯುವಕನೋರ್ವ ವಿದ್ಯುತ್ ಆಘಾತಕ್ಕೆ ಬಲಿಯಾದ ಘಟನೆ ಜು.15ರಂದು ಇಳಂತಿಲ ಗ್ರಾಮದ ಗೋಳಿತ್ತಡಿ ಎಂಬಲ್ಲಿ ನಡೆದಿದೆ. ತಿಮ್ಮಪ್ಪ ಗೌಡ ಎಂಬವರ ಪುತ್ರ ಹರೀಶ (32) ಮೃತ ಯುವಕ. ಅಡಿಕೆ ಸುಲಿಯುವ ಕೆಲಸ ಮಾಡುತ್ತಿದ್ದ ಈತ ಉತ್ತಮ ಕಬಡ್ಡಿ ಆಟಗಾರನೂ ಆಗಿದ್ದು, ತನ್ನ ಮನೆಗೆ ವಿದ್ಯುತ್ ಬರುತ್ತಿಲ್ಲವೆಂದು ವಿದ್ಯುತ್ ಪರಿವರ್ತಕದ ಬಳಿ ತೆರಳಿ ಫ್ಯೂಸ್ ಹಾಕಲು ನೋಡಿದ್ದು, ಈ ಸಂದರ್ಭ ವಿದ್ಯುತ್ ಪ್ರವಹಿಸಿ ಈತ ಮೃತಪಟ್ಟಿದ್ದಾರೆ.
ಮಂಗಳೂರು : ಭಾನುವಾರ ಸಂಜೆ ಮಹಾರಾಷ್ಟ್ರದ ರಾಯಗಢ ಮತ್ತು ರತ್ನಗಿರಿ ಜಿಲ್ಲೆಗಳಲ್ಲಿ ಭಾರೀ ಮಳೆಯ ನಡುವೆ ಭೂಕುಸಿತದಿಂದಾಗಿ ಕೊಂಕಣ ರೈಲ್ವೆ ಮಾರ್ಗದಲ್ಲಿ ರೈಲು ಸೇವೆಗಳು ಸ್ಥಗಿತಗೊಂಡಿವೆ. ಸಂಜೆ 5 ಗಂಟೆ ಸುಮಾರಿಗೆ ವಿನ್ಹೆರೆ (ರಾಯಗಡ) ಮತ್ತು ದಿವಾನ್ ಖವಾಟಿ (ರತ್ನಗಿರಿ) ನಿಲ್ದಾಣಗಳ ನಡುವಿನ ಸುರಂಗದ ಹೊರಗೆ ಭೂಕುಸಿತ ಸಂಭವಿಸಿದೆ ಎಂದು ವಕ್ತಾರರು ಕೊಂಕಣ ರೈಲ್ವೇ ಎಕ್ಸ್‌ನಲ್ಲಿ ಪೋಸ್ಟ್ ಮಾಡಿ ತಿಳಿಸಿದ್ದಾರೆ. ಮಂಗಳೂರು ಎಕ್ಸ್‌ಪ್ರೆಸ್, ಕೊಂಕಣ ಕನ್ಯಾ ಎಕ್ಸ್‌ಪ್ರೆಸ್, ತುಟಾರಿ ಎಕ್ಸ್‌ಪ್ರೆಸ್, ಜನಶತಾಬ್ದಿ ಎಕ್ಸ್‌ಪ್ರೆಸ್, ದಿವಾ ಸಾವಂತವಾಡಿ ಎಕ್ಸ್‌ಪ್ರೆಸ್, ಸಾವಂತವಾಡಿ ಮಡಗಾಂವ್ ಪ್ಯಾಸೆಂಜರ್ ರೈಲು ಸೇವೆ ನಿಂತಿದೆ. ಇನ್ನು ಕರಾವಳಿ ಭಾಗದ 12134 ಸೂಪರ್ ಎಕ್ಸ್‌ಪ್ರೆಸ್ ಛತ್ರಪತಿ ಶಿವಾಜಿ ಮುಂಬೈ ಟರ್ಮಿನಲ್ ರೈಲು ಕ್ಯಾನ್ಸಲ್ ಆಗಿದೆ. 12620 ಮತ್ಸ್ಯ ಗಂಧ ಮಂಗಳೂರು ಟು ಮುಂಬೈ ರೈಲು ಕ್ಯಾನ್ಸಲ್ ಆಗಿದೆ. ಬೋಗ್ದ್ಯಾದಲ್ಲಿ ಹಳಿಗಳ ಮೇಲೆ ಗುಡ್ಡ ಕುಸಿದ ಪರಿಣಾಮ ರೈಲು ಸಂಚಾರ ಸ್ಥಗಿತಗೊಂಡಿದೆ. ಇದರಿಂದ ಪ್ರಯಾಣಿಕರು ರೈಲ್ವೆ ಪ್ಲಾಟ್‌ಫಾರ್ಮ್‌ನಲ್ಲೇ ರಾತ್ರಿ ಕಳೆಯುವಂತಾಗಿತ್ತು. ನೂರಾರು ಪ್ರಯಾಣಿಕರು ಕೊಂಕಣ…
ಮಂಗಳೂರು : ನಿವೃತ್ತ ಪೊಲೀಸ್ ಅದಿಕಾರಿ ಎಂ. ಎನ್ . ರಾವ್ ಅವರು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಇನ್ಸ್ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸಿ 6 ತಿಂಗಳ ಹಿಂದೆಯಷ್ಟೆ ಎಂ. ಎನ್ . ರಾನ್ ನಿವೃತ್ತಿ ಹೊಂದಿದ್ದರು. ಎಂ ಎನ್ ರಾವ್ ಅವರು ಮಂಗಳೂರು ನಗರ ಸೇರಿಂತೆ ಆನೇಕ ಕಡೆ ಕರ್ತವ್ಯವನ್ನು ಮಾಡಿದ್ದು, ಜನಪರ ಅಧಿಯಾಗಿ ಗುರ್ತಿಸಿಕೊಂಡಿದ್ದರು.
ಉಡುಪಿ: ನಗರದ ಬಾರ್ ಮಾಲೀಕರೊಬ್ಬರ ಮನೆಯಲ್ಲಿ ನಡೆದ ಬೆಂಕಿ ಅವಘಡದಲ್ಲಿ ಬಾರ್ ಮಾಲೀಕ ಸಾವನ್ನಪ್ಪಿದ್ದು, ಅವರ ಪತ್ನಿ ಗಂಭೀರ ಗಾಯಗೊಂಡ ಘಟನೆ ಇಂದು ಮುಂಜಾನೆ ಸಂಭವಿಸಿದೆ. ನಗರದ ಅಂಬಲಪಾಡಿಯ ಶೆಟ್ಟಿ ಬಾರ್ & ರೆಸ್ಟೋರೆಂಟ್‌ನ ಮಾಲೀಕರ ಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಬೆಂಕಿಯ ಕೆನ್ನಾಲಿಗೆಗೆ ಸಿಲುಕಿದ ಬಾರ್ ಮಾಲೀಕ ರಮಾನಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ ಅವರ ಪತ್ನಿ ಅಶ್ವಿನಿ ಅವರಿಗೂ ಗಂಭೀರ ಗಾಯವಾಗಿದ್ದು, ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಆಗಮಿಸಿದ್ದಾರೆ. ಮನೆಯೊಳಗೆ ಮತ್ತಿಬ್ಬರು ಸಿಲುಕಿಕೊಂಡಿದ್ದು ಅವರ ರಕ್ಷಣೆ ಮಾಡಲಾಗಿದೆ. ಈ ದುರ್ಘಟನೆಗೆ ಕಾರಣ ತಿಳಿದು ಬಂದಿಲ್ಲ.
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜುಲೈ 15ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ. ಆದ್ದರಿಂದ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ , ಪ್ರೌಢಶಾಲೆ, ಪಿಯು ಕಾಲೇಜಿಗಳಿಗೆ ಇಂದು ರಜೆ ಘೋಷಿಸಲಾಗಿದೆ. ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ, ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದೆ. ಆದ್ದರಿಂದ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಶಾಲಾ – ಕಾಲೇಜುಗಳಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಾಜರಾತಿಯನ್ನು ಕಡ್ಡಾಯ ಮಾಡುವಂತಿಲ್ಲ, ದುರ್ಬಲ / ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠ ಪ್ರವಚನಗಳಿಗೆ ಬಳಸುವಂತಿಲ್ಲ. ಶಾಲಾ ಕಾಲೇಜು ಮುಖ್ಯಸ್ಥರುಗಳು ಕಟ್ಟಡಗಳ ಸುಸ್ಥಿತಿಯ ಬಗ್ಗೆ ಗಮನಹರಿಸಬೇಕು ಎಂದು ಸೂಚನೆ ನೀಡಲಾಗಿದೆ.
ಸುರತ್ಕಲ್: ಇಲ್ಲಿನ ಕೈಗಾರಿಕಾ ವಲಯ(ಎಂಎಸ್‌ಇಝಡ್)ದಲ್ಲಿ ಕಾರ್ಯಾಚರಣೆ ನಡೆಸುತ್ತಿರುವ ಅಥೆಂಟಿಕ್ ಓಷನ್ ಟ್ರಶರ್‌ನಲ್ಲಿ ರವಿವಾರ ಮಧ್ಯಾಹ್ನ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದೆ. ಅದೃಷ್ಟವಶಾತ್ ಕಂಪೆನಿಯಲ್ಲಿ ದುರಸ್ತಿ ಕಾರ್ಯ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ನೌಕರರು ಯಾರು ಇರಲಿಲ್ಲ. ಪರಿಣಾಮ ಯಾವುದೇ ಸಾವು-ನೋವು ಸಂಭವಿಸಿಲ್ಲ. ಅಥೆಂಟಿಕ್ ಓಷನ್ ಟ್ರೆಶರ್ ಕಂಪೆನಿ ಮೀನನ್ನು ಸ್ವಚ್ಚಗೊಳಿಸಿ ಮಾಂಸದ ರೂಪಕ್ಕೆ ಪರಿವರ್ತಿಸಿ 10 ಕೆ.ಜಿ. ಯ ಪ್ಯಾಕೆಟ್‌ಗಳನ್ನಾಗಿ ಮಾಡಿ ವಿದೇಶಗಳಿಗೆ ರಫ್ತು ಮಾಡುವ ಕಂಪೆನಿ. ಈ ಸಂಸ್ಥೆಯ ಕೋಲ್ಡ್ ಸ್ಟೋರ್ ಸೆಕ್ಷನ್ ಹಾಗೂ ಕಟ್ಟಿಂಗ್ ಸೆಕ್ಷನ್‌ಗಳಲ್ಲಿ ದುರಸ್ತಿ ಕಾರ್ಯನಡೆಯುತ್ತಿತ್ತು. ಈ ವೇಳೆ ಕೋಲ್ಡ್ ಸ್ಟೋರೆಜ್ ಸೆಕ್ಷನ್‌ಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಈ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ. ಬೆಂಕಿಯ ಕೆನ್ನಾಲಿಗೆಗೆ ಆಕಾಶದೆತ್ತರಕ್ಕೆ ಹೊಗೆ ಉಗುಳುತ್ತಿರುವ ದೃಶ್ಯ ವೀಡಿಯೋದಲ್ಲಿ ಸೆರೆಯಾಗಿದೆ. ಆದರೆ ಅಗ್ನಿ ಅವಘಡದಿಂದ ಸುಮಾರು 10 ಕೋಟಿ ರೂ. ಮೌಲ್ಯದ ಮೀನಿನ ಉತ್ಪನ್ನಗಳು ಬೆಂಕಿಗಾಹುತಿಯಾಗಿವೆ ಎಂದು ತಿಳಿದು ಬಂದಿದೆ. ಸದ್ಯ ಕೈಗಾರಿಕಾವಲಯ ಎಂಆರ್ ಪಿಎಲ್, ಗೇಲ್ ಇಂಡಿಯಾ ಕಂಪೆನಿಗಳ ಅಗ್ನಿಶಾಮಕ…
ಬಂಟ್ವಾಳ: ತಾಲೂಕಿನ ಶಂಭೂರು ಗ್ರಾಮದ ನಿವಾಸಿಯಾಗಿದ್ದು, ಪ್ರಸ್ತುತ ಪುತ್ತೂರಿನಲ್ಲಿ ವಾಸವಾಗಿರುವ ವ್ಯಕ್ತಿಯೊಬ್ಬರು ಡೆಂಗ್ಯೂ ಜ್ವರಕ್ಕೆ ಬಲಿಯಾಗಿರುವ ಘಟನೆ ದ.ಕ.ಜಿಲ್ಲೆಯಲ್ಲಿ ನಡೆದಿದೆ. ಅತಿಯಾದ ಜ್ವರದಿಂದ ಬಳಲುತ್ತಿದ್ದ ಯತೀಶ್ ( 52) ಎಂಬಾತನನ್ನು ಡೆಂಗ್ಯೂ ಜ್ವರ ಬಲಿ ತೆಗೆದುಕೊಂಡಿದೆ. ಇವರು ಜುಲೈ 10 ರಂದು ಬುಧವಾರ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಅದಾಗಲೇ ತೀವ್ರ ಜ್ವರಕ್ಕೆ ಈಡಾಗಿರುವ ಈತನನ್ನು ಐಸಿಯು ನಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು ಎಂದು ಇಲ್ಲಿನ ವೈದ್ಯಾಧಿಕಾರಿಗಳು ತಿಳಿಸಿದ್ದಾರೆ. ಆದರೆ ಅದಾಗಲೇ ಪರಿಸ್ಥಿತಿ ಕೈ ಮೀರಿಹೋಗಿದ್ದು ಈತ ಚಿಕಿತ್ಸೆಗೆ ಸ್ಪಂದಿಸದ ಕಾರಣ ದೇರಳೆಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಸಲಾಗಿತ್ತು. ಆದರೆ ಅಲ್ಲಿಯೂ ಚಿಕಿತ್ಸೆಗೆ ಸ್ಪಂದಿಸದೆ ಯತೀಶ್ ಕೊನೆಯುಸಿರೆಳೆದಿದ್ದಾನೆ ಎಂದು ಮೂಲಗಳು ತಿಳಿಸಿವೆ. ಮೂಲತಃ ಶಂಭೂರು ಗರಡಿ ನಿವಾಸಿಯಾಗಿರುವ ಯತೀಶ್ ಅವರು ಇತ್ತೀಚಿಗೆ ಪತ್ನಿಯ ತವರೂರು ಪುತ್ತೂರಿನಲ್ಲಿ ಮನೆ ಮಾಡಿ ಅಲ್ಲಿ ವಾಸವಾಗಿದ್ದರು. ಭಾರತ್ ಬೀಡಿ ಕಂಪೆನಿಯ ಬಿಸಿರೋಡಿನ ಶಾಖೆಯಲ್ಲಿ ಸಿಬ್ಬಂದಿಯಾಗಿದ್ದ ಇವರು ಜ್ವರದ ಸಂಧರ್ಭದಲ್ಲಿ ಅಲ್ಲಿಯ ಜೊತೆಗಾರ ಸಿಬ್ಬಂದಿ ಜೊತೆ ಬಂಟ್ವಾಳ ಆಸ್ಪತ್ರೆಗೆ…
ಬಂಟ್ವಾಳ : ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳರು ನುಗ್ಗಿ ಮನೆಯಲ್ಲಿದ್ದ ಸುಮಾರು 4.14 ಲಕ್ಷ ರೂ. ಮೌಲ್ಯದ 69 ಗ್ರಾಂ. ಚಿನ್ನಾಭರಣ ಕಳವುಗೈದ ಘಟನೆ ಬಂಟ್ವಾಳದ ಇರಾ ಗ್ರಾಮದ ಕಿನ್ನಿಮಜಲುವಿನಲ್ಲಿ ನಡೆದಿದೆ. ಕಿನ್ನಿಮಜಲು ನಿವಾಸಿ ವನಿತಾ ಅವರ ಮನೆಯಲ್ಲಿ ಈ ಕಳ್ಳತನ ಕೃತ್ಯ ನಡೆದಿದೆ. ಅವರ ಮನೆ ಮಂದಿ ಕೆಲಸಕ್ಕೆ ಹೋಗಿದ್ದರು ಈ ವೇಳೆ ಕಳ್ಳರು ಒಳ ನುಗ್ಗಿ ಚಿನ್ನಾಭರಣ ದೋಚಿದ್ದಾರೆ ಎಂದು ತಿಳಿದುಬಂದಿದೆ.ಕಳ್ಳರು ಮುಂಬಾಗಿಲ ಬೀಗ ಮುರಿದಿರುವುದನ್ನು ಕಂಡ ವನಿತಾ ಅವರ ಅಕ್ಕ ಸುಜಾತ ಅವರು, ಕರೆ ಮಾಡಿ ಈ ಬಗ್ಗೆ ತಿಳಿಸಿದ್ದಾರೆ. ತಕ್ಷಣ ಮನೆಗೆ ಬಂದ ವನಿತಾ ಅವರು ಒಳಗೆ ಹೋಗಿ ನೋಡಿದಾಗ, ರೂಮಿನಲ್ಲಿದ್ದ ಕಪಾಟು ಖಾಲಿಯಾಗಿದ್ದು, ಅದರಲ್ಲಿದ್ದ ಬಟ್ಟೆಗಳ್ಳೆಲ್ಲಾ ನೆಲದ ಮೇಲೆ ಚೆಲ್ಲಾಪಿಲ್ಲಿಯಾಗಿ ಬಿದ್ದಿತ್ತು. ಜೊತೆಗೆ ಕಪಾಟಿನಲ್ಲಿದ್ದ ಚಿನ್ನಾಭರಣವನ್ನು ಕಳ್ಳರು ದೋಚಿರುವುದು ಬೆಳಕಿಗೆ ಬಂದಿದೆ.ಘಟನಾ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಇನ್ಸ್ಪೆಕ್ಟರ್ ಶಿವಕುಮಾರ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಸ್ಥಳ ಪರಿಶೀಲಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.