Author: main-admin

ಮಂಗಳೂರು : ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಡೆಯುವ ಕಂಬಳ, ಜಾತ್ರೆ ಯಕ್ಷಗಾನ ಹಾಗೂ ಇನ್ನಿತರ ಧಾರ್ಮಿಕ ಆಚರಣೆಗಳಿಗೆ ಯಾವುದೇ ರೀತಿ ಅಡ್ಡಿಪಡಿಸುವುದಿಲ್ಲ ಎಂದು ಜಿಲ್ಲಾಡಳಿತ ಭರವಸೆ ನೀಡಿದೆ. ಆದರೆ, ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಾಗ ಆಸುಪಾಸಿನ ನಿವಾಸಿಗಳಿಗೆ ಕಿರಿಕಿರಿಯಾಗದಂತೆ ಎಚ್ಚರ ವಹಿಸಬೇಕು ಎಂದೂ ಜಿಲ್ಲಾಡಳಿತ ಸೂಚಿಸಿದೆ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್‌ ಅಧ್ಯಕ್ಷತೆಯಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಈ ವಿಚಾರದ ಬಗ್ಗೆ ಚರ್ಚೆ ನಡೆಯಿತು. ಧ್ವನಿವರ್ಧಕ ಬಳಕೆಯ ನೆಪ ಹೇಳಿ ರಾತ್ರಿ ವೇಳೆ ಕಂಬಳಕ್ಕೆ ಅಡ್ಡಿಪಡಿಸದಂತೆ ಪೊಲೀಸರಿಗೆ ಸೂಚನೆ ನೀಡಬೇಕು ಎಂದು ಶಾಸಕ ಅಶೋಕ್‌ ಕುಮಾರ್‌ ರೈ ಒತ್ತಾಯಿಸಿದರು. ರಾತ್ರಿ ವೇಳೆ ನಡೆಯುವ ಜಾತ್ರೆಗಳಿಗೂ ಅಡ್ಡಿಪಡಿಸಬಾರದು ಎಂದು ಶಾಸಕಿ ಭಾಗಿರಥಿ ಮುರುಳ್ಯ ಒತ್ತಾಯಿಸಿದರು. ಯಕ್ಷಗಾನಕ್ಕೆ ಅಡ್ಡಿಪಡಿಸಿ ಜನರ ಧಾರ್ಮಿಕ ನಂಬಿಕೆಗಳಿಗೆ ಚ್ಯುತಿ ಉಂಟುಮಾಡಬೇಡಿ ಎಂದು ಶಾಸಕ ಡಿ.ವೇದವ್ಯಾಸ ಕಾಮತ್ ಕೋರಿದರು. ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ದರ್ಶನ್‌ ಎಚ್‌.ವಿ ಜಿಲ್ಲಾಡಳಿತವು ಇಂತಹ ಯಾವುದೇ ಕಾರ್ಯಕ್ರಮಗಳಿಗೆ ನಿರ್ಬಂಧ ಹೇರಿಲ್ಲ ಎಂದು ಸ್ಪಷ್ಟಪಡಿಸಿದರು. ಅಕ್ಕಪಕ್ಕದವರಿಗೆ…

Read More

ಒಂದು ವಾರದಲ್ಲಿ ಹಣವನ್ನು ಡಬಲ್ ಮಾಡಿ ಕೊಡುವುದಾಗಿ ಆಮಿಷವೊಡ್ಡಿ ಕೋಟ್ಯಂತರ ರೂ. ವಂಚಿಸಿ ಆಂಧ್ರಪ್ರದೇಶ ಮೂಲದ ದಂಪತಿ ಪರಾರಿಯಾಗಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಆಂಧ್ರಪ್ರದೇಶದ ಅನಂತಪುರ ನಿವಾಸಿಗಳಾದ ಬೊಗ್ಗು ಶ್ರೀರಾಮಲು- ಪುಷ್ಪಾ ವಂಚಿಸಿ ಎಸ್ಕೇಪ್ ಆಗಿರುವ ದಂಪತಿ. ಈ ದಂಪತಿ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ವಿವಿಧ ಗ್ರಾಮಗಳ ಮಹಿಳೆಯರಿಗೆ ವಂಚಿಸಿ ಪರಾರಿಯಾಗಿದ್ದಾರೆ. ಡಬ್ಲಿಂಗ್ ಆಸೆಗೆ ರೇಣುಕಮ್ಮ ಎಂಬವರು ಜಮೀನು ಮಾರಾಟ ಮಾಡಿ 33 ಲಕ್ಷ ರೂ. ನೀಡಿದ್ದರು. ಅಲ್ಲದೇ ಮೀನಾ 40 ಲಕ್ಷ ರೂ., ಪ್ರಿಯಾಂಕ 50 ಲಕ್ಷ ರೂ. ನೀಡಿದ್ದಾರೆ. ಇನ್ನು ಟಿ ತಿರುಮಲೇಶ್ ಎಂಬವರು 17 ಲಕ್ಷ ರೂ. ನೀಡಿ ಮೋಸ ಹೋಗಿದ್ದಾರೆ. ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಹಣ ಹಾಕಿ, ಡಬಲ್ ಮಾಡುವ ಎಂದು ವಂಚಕ ದಂಪತಿ ನಂಬಿಸಿದ್ದರು. ಅಲ್ಲದೇ ಅವರ ಮನೆಯ ರೂಂನಲ್ಲಿ ಹಣದ ಕಂತೆಗಳನ್ನು ಜೋಡಿಸಿ ವೀಡಿಯೋ ಮಾಡಿ ಕಳಿಸಿ ನಂಬಿಸಿದ್ದರು. ಸದ್ಯ 17 ಲಕ್ಷ ರೂ. ಕಳೆದುಕೊಂಡ ಟಿ. ತಿರುಮಲೇಶ್ ಜಗಳೂರು ಠಾಣೆಗೆ…

Read More

ಕಾಸರಗೋಡು: ಇದೊಂದು ವಿಚಿತ್ರ ಘಟನೆ ಕೇರಳದಲ್ಲಿ ನಡೆದಿದೆ. ಕರೆಂಟ್ ಬಿಲ್ ಕಟ್ಟದ ಕಾರಣಕ್ಕೆ ವಿದ್ಯುತ್ ನಿಗಮದ ಅಧಿಕಾರಿಗಳು ಮನೆಯ ಕರೆಂಟ್ ಕಟ್ ಮಾಡಿದ್ದಕ್ಕೆ ಸಿಟ್ಟುಕೊಂಡು ಯುವಕನೊಬ್ಬ ತನ್ನ ಮನೆಯ ಸುತ್ತಮುತ್ತಲಿರುವ ಬರೋಬ್ಬರಿ 30 ಟ್ರಾನ್ಸಫಾರ್ಮರ್ ಗಳ ಫ್ಯೂಸ್ ನ್ನು ಕಿತ್ತು ಬಿಸಾಕಿದ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಇದರಿಂದಾಗಿ ಬರೋಬ್ಬರಿ 6 ಸಾವಿರ ಮನೆಗೆ ಕರೆಂಟ್ ಇಲ್ಲದಂತಾಗಿತ್ತು. ಮದ್ದೂರು ಪಂಚಾಯತ್‌ನ ಚೂರಿ ನಿವಾಸಿಯಾದ ಯುವಕನಿಗೆ ಸಾಮಾನ್ಯವಾಗಿ ಎರಡು ತಿಂಗಳಿಗೆ ₹18,000 ರಿಂದ ₹20,000 ಬಿಲ್ ಬರುತ್ತಿತ್ತು. ಆದರೆ ಈ ಬಾರಿ ಬಿಲ್ ₹22,000 ಕ್ಕೆ ತಲುಪಿತು. ವಿದ್ಯುತ್ ನಿಗಮದ ಅಧಿಕಾರಿಗಳು ಬಿಲ್ ಪಾವತಿಸುವಂತೆ ಕೇಳಿಕೊಂಡರು ಆತ ಕಟ್ಟದೆ ಗಲಾಟೆ ಮಾಡಿದ್ದ. ಇದರಿಂದಾಗಿ ಅಧಿಕಾರಿಗಳು ಶುಕ್ರವಾರ ಬೆಳಿಗ್ಗೆ ಆತನ ಮನೆಯ ಕರೆಂಟ್ ನ್ನು ಕಟ್ ಮಾಡಿದ್ದರು. ಬಳಿಕ ಯುವಕ ಸಂಜೆ ನೆಲ್ಲಿಕ್ಕುನ್ನು ವಿಭಾಗ ಕಚೇರಿಗೆ ಆಗಮಿಸಿ ಅಲ್ಲಿ ಗಲಾಟೆ ಮಾಡಿದ್ದಾನೆ. ಬಳಿಕ ಆತನ ಮಾಡಿದ ಕೆಲಸವನ್ನು ಕೇರಳ ವಿದ್ಯುತ್ ನಿಗಮದ ಯಾವ ಅಧಿಕಾರಿಯೂ ಉಹಿಸಿರಲಿಲ್ಲ.…

Read More

ಬಂಟ್ವಾಳ: ಇನ್ನೋವಾ ಕಾರು ಅಪಘಾತಕ್ಕೀಡಾದ ಬಂಟ್ವಾಳದ ನಾರಾಯಣ ಗುರು ವೃತ್ತಕ್ಕೆ  ಎಸ್ಪಿ ಡಾ. ಅರುಣ್ ಅವರು ಭೇಟಿ ನೀಡಿದರು.  ಈ ವೇಳೆ ಘಟನಾಸ್ಥಳದಲ್ಲಿ ಪರಿಶೀಲನೆ ನಡೆಸಿದ ಎಸ್ಪಿ ಅವರು, ಘಟನೆ ಕುರಿತಂತೆ ಮಾಹಿತಿ ಪಡೆದುಕೊಂಡರು. ಬಳಿಕ ಪೊಲೀಸರಿಗೆ ಸಲಹೆ ಸೂಚನೆಗಳನ್ನು ನೀಡಿದರು. ಇಂದು ಮುಂಜಾನೆ ನಾರಾಯಣ ಗುರು ವೃತ್ತಕ್ಕೆ ಇನ್ನೋವಾ ಕಾರು ಡಿಕ್ಕಿಯಾಗಿ ಮೂವರು ಸಾವನ್ನಪ್ಪಿದ್ದರು. ನಾಲ್ವರು ಗಂಭೀರ ಗಾಯಗೊಂಡಿದ್ದು, ಮತ್ತಿಬ್ಬರು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದರು.

Read More

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66ರ ಪಣಂಬೂರು ಸಿಗ್ನಲ್ ಬಳಿ ಶನಿವಾರ ಬೆಳಗ್ಗೆ ಸಂಭವಿಸಿದ ಸರಣಿ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ವರದಿಯಾಗಿದೆ. ಪಣಂಬೂರು ಸಿಗ್ನಲ್ ಬಳಿ ಈ ಅಪಘಾತ ಸಂಭವಿಸಿದೆ. ಸಿಗ್ನಲ್ ನಲ್ಲಿ ಸರತಿಯಲ್ಲಿದ್ದ ವೇಳೆ ಎರಡು ಟ್ಯಾಂಕರ್, ಆಟೊ ರಿಕ್ಷಾ ಮತ್ತು ಕಾರು ಅಪಘಾತಕ್ಕೀಡಾಗಿವೆ. ಸಿಗ್ನಲ್ ನಲ್ಲಿ ನಿಂತಿದ್ದ ಟ್ಯಾಂಕರ್ ವೊಂದರ ಹಿಂಭಾಗದಲ್ಲಿ ಕಾರು ಮತ್ತು ಆಟೊ ರಿಕ್ಷಾ ನಿಂತಿತ್ತು. ಈ ವೇಳೆ ಹಿಂದಿನಿಂದ ಬಂದ ಇನ್ನೊಂದು ಟ್ಯಾಂಕರ್ ರಿಕ್ಷಾಕ್ಕೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ರಿಕ್ಷಾ ಎದುರಿನಲ್ಲಿ ನಿಂತಿದ್ದ ಕಾರಿಗೆ ಅಪ್ಪಳಿಸಿ ಬಳಿಕ ಅದರ ಮುಂದೆ ನಿಂತಿದ್ದ ಮತ್ತೊಂದು ಟ್ಯಾಂಕರ್ ಗೆ ಢಿಕ್ಕಿ ಹೊಡೆದಿದೆ. ಈ ವೇಳೆ ಆಟೊ ರಿಕ್ಷಾ ಎರಡು ಟ್ಯಾಂಕರ್ ಗಳ ಮಧ್ಯೆ ಸಿಲುಕಿ ಅಪ್ಪಚ್ಚಿಯಾಗಿದೆ. ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಪ್ರಯಾಣಿಕರು ಮತ್ತು ರಿಕ್ಷಾ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಮಂಗಳೂರು ಉತ್ತರ ಸಂಚಾರ ಪೊಲೀಸರು ಭೇಡಿ…

Read More

ಮಲ್ಪೆ : ಉಡುಪಿ ಜಿಲ್ಲೆಯ ಮಲ್ಪೆ ಸಮೀಪ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಅಂದರ್ ಬಾಹರ್ ಜುಗಾರಿ ಆಟ ಆಡುತ್ತಿರುವ ಮಾಹಿತಿ ಮೇರೆಗೆ ಮಲ್ಪೆ ಪೊಲೀಸರು ದಾಳಿ ನಡೆಸಿ 8 ಮಂದಿಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಬಂಧಿತ ಆರೋಪಿಗಳು 1.ಉಮೇಶ್‌, 2.ಸಿದ್ರಾಮೇಶ,3.ಹನುಮೇಶ, 4.ಮಲ್ಲಿಕಾರ್ಜುನ ಹಡಪದ, 5.ಶಿವಪ್ಪ ಸರದಾರ, 6.ವಿರೂಪಾಕ್ಷ, 7.ಬಸವರಾಜ, 8.ಜಗದೀಶ ಎಂದು ಗುರುತಿಸಲಾಗಿದೆ. ಪೊಲೀಸರು ಬಂಧಿತ ಆರೋಪಿಗಳಿಂದ ಸೊತ್ತುಗಳನ್ನು ವಶಪಡಿಸಿಕೊಂಡು, ವಿಚಾರಣೆ ನಡೆಸಿದ್ದಾರೆ. ದಿನಾಂಕ: 13/11/2025 ರಂದು 17:00 ಗಂಟೆಗೆ ಉಡುಪಿ ತಾಲೂಕು ಕೊಡವೂರು ಗ್ರಾಮದ ಮಲ್ಪೆ ಹನುಮಾನ್‌ ನಗರ ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಹಣವನ್ನು ಪಣವಾಗಿಟ್ಟು ಅಂದರ್-ಬಾಹರ್‌ ಜುಗಾರಿ ಆಟವನ್ನು ಆಡುತ್ತಿರುವುದಾಗಿ ಖಚಿತ ಮಾಹಿತಿ ಬಂದಿದ್ದು, ಅದರಂತೆ ಅನೀಲ್‌ ಕುಮಾರ್‌ ಡಿ ಪೊಲೀಸ್‌ ಉಪನಿರೀಕ್ಷಕರು ಮಲ್ಪೆ ಪೊಲೀಸ್‌ ಠಾಣೆ ಇವರು ಠಾಣಾ ಸಿಬ್ಬಂದಿಯವರೊಂದಿಗೆ ಸ್ಥಳಕ್ಕೆ ತೆರಳಿ ನೋಡಲಾಗಿ ಅಲ್ಲಿನ ಇರುವ ಸಾರ್ವಜನಿಕ ಖಾಲಿ ಸ್ಥಳದಲ್ಲಿ 7-8 ಜನರು ನ್ಯೂಸ್‌ ಪೇಪರ್‌ ಹಾಸಿಕೊಂಡು ಕುಳಿತುಕೊಂಡಿದ್ದು, ಅಂದರ್ ಬಾಹರ್ ಎಂಬ ಇಸ್ಪೀಟ್ ಆಟ ಆಡುತ್ತಾ…

Read More

ಬಂಟ್ವಾಳ: ಚೆಕ್ ಅಮಾನ್ಯ ಪ್ರಕರಣವೊಂದರಲ್ಲಿ ಪ್ರಾಥಮಿಕ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕನಿಗೆ ಜೈಲು ಶಿಕ್ಷೆ ವಿಧಿಸಿ ಮಂಗಳೂರಿನ ಒಂಭತ್ತನೇ ಜೆಎಂಎಫ್‌ಸಿ ನ್ಯಾಯಾಲಯ ತೀರ್ಪು ನೀಡಿದೆ. ಬಂಟ್ವಾಳದ ಕಾವಳಕಟ್ಟೆಯಲ್ಲಿರುವ ಕಲೈ ಚಂದ್ರಮೌಳಿ ಪ್ರಾಥಮಿಕ ಶಾಲೆಯ ಶಿಕ್ಷಕ ಚಂದ್ರಶೇಖರ್ ಎಸ್. ನಾಯಕ್ ಅವರು ಶಿಕ್ಷೆಗೊಳಗಾದವರು. ಮಂಗಳೂರಿನ ದಿವ್ಯಶ್ರೀ ಡಿ.ಕೆ. ಎಂಬವರು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಕೊಡಿಯಾಲ್‌ಬೈಲ್ ಶಾಖೆಯಿಂದ ಸಾಲ ಪಡೆದಿದ್ದರು. ಈ ಸಾಲಕ್ಕೆ ಚಂದ್ರಶೇಖರ್ ಎಸ್. ನಾಯಕ್ ಜಾಮೀನುದಾರರಾಗಿದ್ದರು. ದಿವ್ಯಶ್ರೀ ಪಡೆದ ಸಾಲವನ್ನು ಸಕಾಲಕ್ಕೆ ತೀರಿಸದೆ ಸುಸ್ತಿಯಾಗಿತ್ತು. ಈ ಬಗ್ಗೆ ಸಾಲ ವಸೂಲಾತಿಗಾಗಿ ಸಹಕಾರಿ ಕಾಯ್ದೆಯನ್ವಯ ಬ್ಯಾಂಕ್ ಕಾನೂನು ಪ್ರಕ್ರಿಯೆಯನ್ನು ಜರುಗಿಸಲಾಗಿತ್ತು. ಈ ಮಧ್ಯೆ, ಬ್ಯಾಂಕ್‌ನ್ನು ಸಂಪರ್ಕಿಸಿದ ಕಾವಳಕಟ್ಟೆ ಶಾಲೆಯ ಹೆಡ್ ಮಾಸ್ಟರ್ ಚಂದ್ರಶೇಖರ್ ನಾಯಕ್ ಸಾಲದ ಮರುಪಾವತಿಗಾಗಿ ಚೆಕ್ ನೀಡಿದ್ದರು. ಈ ಚೆಕ್ ಅಮಾನ್ಯಗೊಂಡ ಹಿನ್ನೆಲೆಯಲ್ಲಿ ಚಂದ್ರಶೇಖರ್ ನಾಯಕ್ ವಿರುದ್ಧ ಬ್ಯಾಂಕ್ ಕಾನೂನು ಪ್ರಕ್ರಿಯೆ ಆರಂಭಿಸಿತ್ತು. ಬ್ಯಾಂಕ್ ಸೂಕ್ತ ಕಾನೂನು ಪ್ರಕ್ರಿಯೆಯನ್ನು ಪೂರೈಸಿದ ಬಳಿಕ ಮಂಗಳೂರಿನ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ…

Read More

ಸಾವಿರಾರು ಮರಗಳನ್ನು ನೆಟ್ಟು ‘ವೃಕ್ಷಮಾತೆ’ ಎಂದೇ ಹೆಸರುವಾಸಿಯಾಗಿರುವ ಪರಿಸರವಾದಿ, ಪದ್ಮಶ್ರೀ ಪುರಸ್ಕೃತ ಶತಾಯುಷಿ ಸಾಲುಮರದ ತಿಮ್ಮಕ್ಕ ನಿಧನರಾಗಿದ್ದಾರೆ. ಮರಗಳನ್ನೇ ತಮ್ಮ ಮಕ್ಕಳೆಂದು ತಮ್ಮ ಪತಿಯೊಂದಿಗೆ ರಾಮನಗರ ಜಿಲ್ಲೆಯ ಹುಲಿಕಲ್ ಮತ್ತು ಕುದೂರು ನಡುವೆ 4.5 ಕಿಲೋಮೀಟರ್ ಹೆದ್ದಾರಿಯ ಉದ್ದಕ್ಕೂ 385 ಆಲದ ಮರಗಳನ್ನು ನೆಟ್ಟು ಬೆಳೆಸಿದ ತಿಮ್ಮಕ್ಕ ಅವರು ಈವರೆಗೆ 8,000ಕ್ಕೂ ಹೆಚ್ಚು ಮರಗಳನ್ನು ನೆಟ್ಟು ಬೆಳೆಸಿದ್ದಾರೆ. ಇದನ್ನು ಓದಿದ್ದೀರಾ? ಸಾಲು ಮರದ ತಿಮ್ಮಕ್ಕ ಅವರಿಗೆ ಸಂಪುಟ ದರ್ಜೆ ಸ್ಥಾನಮಾನ ಮುಂದುವರಿಸಿ ಸಿಎಂ ಆದೇಶ ನಿಸ್ವಾರ್ಥ ಸೇವೆಯನ್ನು ಗುರುತಿಸಿ ಸರ್ಕಾರ ಸಾಲುಮರದ ತಿಮ್ಮಕ್ಕ ಅವರಿಗೆ 2019ರಲ್ಲಿ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಜತೆಗೆ ರಾಷ್ಟ್ರೀಯ ಪೌರ ಪ್ರಶಸ್ತಿ, ಇಂದಿರಾ ಪ್ರಿಯದರ್ಶಿನಿ ವೃಕ್ಷ ಮಿತ್ರ ಪ್ರಶಸ್ತಿ, ಮತ್ತು ಕರ್ನಾಟಕ ಕಲ್ಪವಲ್ಲಿ ಪ್ರಶಸ್ತಿಗಳೂ ತಿಮ್ಮಕ್ಕ ಅವರಿಗೆ ಲಭಿಸಿದೆ.

Read More

ಬಂಟ್ವಾಳ ತಾಲೂಕಿನ ಕುರ್ನಾಡು ಗ್ರಾಮದ ಮುಡಿಪು ಎಂಬಲ್ಲಿ “ಗುರುಲೀಲಾ” ಎಂಬ ಹೆಸರಿನ ಚಿಕನ್ ಸೆಂಟರ್ ನಡೆಸುತ್ತಿದ್ದ ಶ್ರೀಧರ್ (48) ಎಂಬ ವ್ಯಕ್ತಿ ಕಳೆದ ಹಲವು ವರ್ಷಗಳಿಂದ ಕಾಣೆಯಾಗಿರುವ ಘಟನೆ ಬೆಳಕಿಗೆ ಬಂದಿದೆ.ಪಿರ್ಯಾದುದಾರರ ಹೇಳಿಕೆಯ ಪ್ರಕಾರ, ಶ್ರೀಧರ್ ಅವರು 2019ರ ಮಾರ್ಚ್ 18ರಂದು ಬೆಳಿಗ್ಗೆ 6.00 ಗಂಟೆಗೆ ಎಂದಿನಂತೆ ತಮ್ಮ ಚಿಕನ್ ಸೆಂಟರ್ ಅಂಗಡಿಗೆ ತೆರಳಿ ವ್ಯಾಪಾರ ಪ್ರಾರಂಭಿಸಿದ್ದರು. ಬೆಳಿಗ್ಗೆ 8.30 ಗಂಟೆ ವೇಳೆಗೆ ಅಂಗಡಿ ಬಾಗಿಲು ಮುಚ್ಚಿಕೊಂಡು ಎಲ್ಲಿಗೋ ತೆರಳಿ, ಬಳಿಕ ಅಂಗಡಿಗೂ ಮನೆಗೂ ಮರಳದೇ, ಅವರ ಮೊಬೈಲ್ ಫೋನ್ ಸಹ ಸ್ವಿಚ್ ಆಫ್ ಆಗಿರುವುದಾಗಿ ತಿಳಿದುಬಂದಿದೆ.ಕಾಣೆಯಾದವರ ವಿವರಗಳು: ಹೆಸರು: ಶ್ರೀಧರ್ ವಯಸ್ಸು: 48 ವರ್ಷ ಎತ್ತರ: ಸುಮಾರು 175 ಸೆ.ಮೀ ಮೈಬಣ್ಣ: ಗೋಧಿ ಬಣ್ಣ ಚಹರೆ: ದುಂಡು ಮುಖ, ಸಾಧಾರಣ ಮೈಕಟ್ಟು ಧರಿಸಿದ ಉಡುಗೆ: ಕಪ್ಪು ಬಣ್ಣದ ಪ್ಯಾಂಟ್ ಹಾಗೂ ಬೂದು ಬಣ್ಣದ ಉದ್ದತೋಳಿನ ಶರ್ಟ್ ತಿಳಿದಿರುವ ಭಾಷೆಗಳು: ಕನ್ನಡ, ಹಿಂದಿ, ಮಲಯಾಳಂ, ತುಳು ಪೊಲೀಸರು ಸಾರ್ವಜನಿಕರಿಗೆ ಮನವಿ ಮಾಡಿಕೊಂಡಿದ್ದು — ಕಾಣೆಯಾದ ಶ್ರೀಧರ್ ಎಂಬವರ ಬಗ್ಗೆ ಯಾವುದೇ ಮಾಹಿತಿ…

Read More

ಮಂಗಳೂರು:ಮೂಡಬಿದಿರೆಯ ಕಾಲೇಜೊಂದರಲ್ಲಿ ಕ್ಯಾಂಟೀನ್‌ ಕೆಲಸ ಮಾಡುತ್ತಿದ್ದ ಚೇತನ್‌ ಎಂಬವರನ್ನು ಕೊಲೆ ಮಾಡಿದ ಆರೋಪಿ ಚಿದಾನಂದ ಪರಶು ನಾಯ್ಕನಿಗೆ ನ್ಯಾಯಾಲಯವು ಜೀವಾವಧಿ ಶಿಕ್ಷೆಯನ್ನು ವಿಧಿಸಿದೆ. ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ವಿಶೇಷ ನ್ಯಾಯಾಲಯ ಈ ತೀರ್ಪು ನೀಡಿದೆ.ಮೂಡಬಿದಿರೆಯ ಕಾಲೇಜೊಂದರ ಕ್ಯಾಂಟೀನ್‌ನಲ್ಲಿ ಜೊತೆಗೆ ಕೆಲಸ ಮಾಡಿಕೊಂಡಿರುವ ಚೇತನ್ (22) ಮತ್ತು ಚಿದಾನಂದ ಎಂಬವರಿಗೆ ಗೆ ಕ್ಯಾಂಟೀನ್ ನಲ್ಲಿ ಕೆಲಸದ ವಿಚಾರದಲ್ಲಿ ಮತ್ತು ವೈಯುಕ್ತಿಕ ವಿಚಾರದಲ್ಲಿ ಪರಸ್ಪರ ತಕರಾರು ನಡೆದಿತ್ತು. ಆರೋಪಿ ಚಿದಾನಂದ ಪರಶು ನಾಯ್ಕ ಎಂಬಾತನು 2020 ರ ಅ. 10 ರಂದು ಮಧ್ಯರಾತ್ರಿ ಚೇತನ್‌ನನ್ನು ಕೊಲೆ ಮಾಡುವ ಉದ್ದೇಶದಿಂದ ಕಬ್ಬಿಣದ ರಾಡ್‌ ಹಿಡಿದುಕೊಂಡು ಚೇತನ್‌ ವಿಶಾಂತ್ರಿ ಕೊಠಡಿಗೆ ಅಕ್ರಮ ಪ್ರವೇಶ ಮಾಡಿದ್ದನು. ಅಲ್ಲಿ ರಾಜೇಶ್‌ ಪೂಜಾರಿ ಮತ್ತು ಶಂಕ್ರಪ್ಪ ಜತೆ ನಿದ್ರಿಸುತ್ತಿದ್ದ ಚೇತನ್‌ನನ್ನು ಅವಾಚ್ಯ ಶಬ್ದಗಳಿಂದ ಬೈದು ರಾಡ್‌ನಿಂದ ತಲೆಗೆ, ಮುಖಕ್ಕೆ ಹಲ್ಲೆ ಮಾಡಿದ್ದಲ್ಲದೇ ಮೊಬೈಲ್‌ ಫೋನ್‌ ಜಖಂಗೊಳಿಸಿದ್ದ. ಗಂಭೀರ ಗಾಯಗೊಂಡಿದ್ದ ಚೇತನ್‌ ನ. 9 ರಂದು ಮೃತಪಟ್ಟಿದ್ದರು. ಈ…

Read More