ವಿಟ್ಲ:ಮನೆಗೆ ನುಗ್ಗಿ ತಂದೆ-ಮಗನಿಗೆ ಇಬ್ಬರು ದುಷ್ಕರ್ಮಿಗಳು ಹಲ್ಲೆ ನಡೆಸಿದ ಘಟನೆ ವಿಟ್ಲ ಚಂದಳಿಕೆ ಸಮೀಪದ ಕುರುಂಬಲ ಎಂಬಲ್ಲಿ ನಡೆದಿದೆ. ಹಲ್ಲೆಗೊಳಗಾದವರನ್ನು ವಿಟ್ಲ ಚಂದಳಿಕೆ ಸಮೀಪದ ಕುರುಂಬಲ ನಿವಾಸಿ ಲೋಕನಾಥ್ ಜೋಗಿ ಮತ್ತು ಅವರ ಮಗಹೃದಯ್ ಜೋಗಿ ಎಂದು ಗುರುತಿಸಲಾಗಿದೆ.ಹೃದಯ್ ಗೆ ಗಂಭೀರ ಗಾಯಗಳಾಗಿದೆ ಎನ್ನಲಾಗಿದೆ. ಜಾಗದ ವಿಷಯವಾಗಿ ಜಗಳ ನಡೆದಿದ್ದು,ಈ ಹಿನ್ನೆಲೆ ಮನೆಗೆ ಅಕ್ರಮ ಪ್ರವೇಶ ಮಾಡಿ ಪುನೀತ್ ಜೋಗಿ ಮತ್ತು ತ್ಯಾಗರಾಜ್ ಎಂಬವರು ಲೋಕನಾಥ್ ಜೋಗಿ ಮತ್ತು ಅವರ ಮಗ ಹೃದಯ್ ಜೋಗಿರವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದು,ಗಾಯಗೊಂಡ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
Author: main-admin
ಮಂಗಳೂರು: ಈ ಬಾರಿ ನಾವು ದೇಶ ಸ್ವಾತಂತ್ರ್ಯ ಅಮೃತೋತ್ಸವದ ಸಡಗರದಲ್ಲಿದೆ. ಗಲ್ಲಿಗಲ್ಲಿಗಳಲ್ಲಿ ತಿರಂಗ ರಾರಾಜಿಸುತ್ತಿದೆ. ಶ್ರೀಕ್ಷೇತ್ರ ಕುದ್ರೋಳಿಯ ರಾಜಗೋಪುರದ ಮುಂಭಾಗದ ನೆಲದಲ್ಲಿ ಮೂಡಿರುವ 900 ಕೆಜಿ ಧಾನ್ಯಗಳ ಬೃಹತ್ ತಿರಂಗ ಭಕ್ತರ ಗಮನಸೆಳೆಯಿತು. ಈ ಬೃಹತ್ ತಿರಂಗ 38 ಫೀಟ್ ಅಗಲವನ್ನು ಹೊಂದಿದೆ. ತಲಾ 300 ಕೆಜಿ ಮಸ್ಸೂರು ದಾಲ್, ಸಬ್ಬಕ್ಕಿ, ಹೆಸರು ಕಾಳುಗಳನ್ನು ಬಳಸಲಾಗಿದೆ. ಫೋಮ್ ನಲ್ಲಿ ರಚಿಸಿರುವ ಅಶೋಕ ಚಕ್ರ 8 ಫೀಟ್ ಅಗಲವಿದೆ. ಅಲ್ಲದೆ ತಿರಂಗದ ಅಲಂಕಾರಕ್ಕೆ 54 ಕಲಶ, 138 ಬಾಳೆ ಎಲೆಯಲ್ಲಿ ಅಕ್ಕಿ ಎಲೆಯಡಿಕೆ, ಚೆಂಡು ಹೂಗಳನ್ನು ಬಳಸಲಾಗಿದೆ. ಜೊತೆಗೆ ಕ್ಯಾರೆಟ್, ಮೂಲಂಗಿ, ಬೆಂಡೆಯಿಂದ ಮಾಡಿರುವ 75 ಅಕ್ಷರದಲ್ಲೂ ತಿರಂಗದ ಕಲ್ಪನೆಯನ್ನು ಮೂಡಿಸಲಾಗಿದೆ. ಫೋಟೋ ಜರ್ನಲಿಸ್ಟ್ ಸತೀಶ್ ಇರಾ ಅವರ ಪರಿಕಲ್ಪನೆ ಹಾಗೂ ಖ್ಯಾತ ಫೋಟೋ ಗ್ರಾಫರ್, ಕಲಾವಿದ ಪುನೀತ್ ಶೆಟ್ಟಿಯವರ ಕೈಚಳದಲ್ಲಿ ಈ ಬೃಹತ್ ತಿರಂಗವು ಅದ್ಭುತವಾಗಿ ಮೂಡಿ ಬಂದಿದೆ. ಶ್ರೀಕ್ಷೇತ್ರದ ಗುರು ಬೆಳದಿಂಗಳು ಹಾಗೂ ಗೋಕರ್ಣನಾಥ ಸೇವಾದಳ ತಂಡ ಸಹಕರಿಸಿದೆ. ಆ.13ರ…
ಮಳೆಗಾಲ ಬಂತೆಂದರೆ ಏನಾದರೂ ಬಿಸಿ ಬಿಸಿ ತಿನ್ನಬೇಕೆನಿಸುತ್ತದೆ. ಮಲೆನಾಡಿನಲ್ಲಿ ಮಳೆ ಹೆಚ್ಚು. ಹಾಗಾಗಿಯೇ ಇಲ್ಲಿನವರು ಮಳೆಗಾಲಕ್ಕೆಂದೇ ಕೆಲವು ಅಡಿಗೆಗಳನ್ನು ಮಾಡುತ್ತಾರೆ. ಅಂತಹ ಅಡಿಗೆಯಲ್ಲಿ ಕೆಸುವಿನ ಸೊಪ್ಪಿನ ಕರಕಲಿಯೂ ಒಂದು. ಬೇಕಾಗುವ ಸಾಮಗ್ರಿ : 10-15 ಕೆಸುವಿನ ಸೊಪ್ಪು, ಬೆಳ್ಳುಳ್ಳಿ, ಓಮು, ಉಪ್ಪು, ಹುಳಿಗೆ ಅಮಟೆಕಾಯಿ, ಹಸಿಮೆಣಸು ಮಾಡುವ ವಿಧಾನ : ಮೊದಲು ಕೆಸುವಿನ ಸೊಪ್ಪನ್ನು ತೊಳೆದು ಒಣಗಿಸಿಕೊಳ್ಳಿ. ಹಸಿ ಇರುವಾಗ ಕತ್ತರಿಸಿದರೆ ತುರಿಕೆ ಉಂಟಾಗುವ ಸಾಧ್ಯತೆ ಇರುತ್ತದೆ. ನಂತರ ಸೊಪ್ಪನ್ನು ಉಪ್ಪು, ಅಮಟೆಕಾಯಿ, ಹಸಿಮೆಣಸಿನ ಪೇಸ್ಟ್ ಹಾಕಿ ಬೇಯಿಸಿ. ಅಮಟೆಕಾಯಿ ಲಭ್ಯವಿರದಿದ್ದಲ್ಲಿ ಲಿಂಬು ಕೂಡ ಬಳಸಬಹುದು. ಕೆಸುವಿನ ಸೊಪ್ಪು ಚೆನ್ನಾಗಿ ಬೆಂದ ನಂತರ ಅದಕ್ಕೆ ಓಮು, ಬೆಳ್ಳುಳ್ಳಿಯ ಒಗ್ಗರಣೆ ಹಾಕಿ. ಒಗ್ಗರಣೆಗೆ ಎಣ್ಣೆ ತುಸು ಜಾಸ್ತಿ ಇದ್ದಲ್ಲಿ ಕರಕಲಿಯ ರುಚಿ ಹೆಚ್ಚು. ಬೇಸಿಗೆಯಲ್ಲಿ ಈ ಕರಕಲಿ ತಯಾರಿಸುವುದು ಒಳಿತಲ್ಲ. ಏಕೆಂದರೆ ಬೇಸಿಗೆಯಲ್ಲಿ ಇದನ್ನು ಸೇವಿಸಿದರೆ ಗಂಟಲಿನ ತುರಿಕೆ ಉಂಟಾಗುವ ಸಾಧ್ಯತೆ ಹೆಚ್ಚು.
ಮುಂಬೈ: ಷೇರು ಮಾರುಕಟ್ಟೆಯ ಕಿಂಗ್ ಎಂದೇ ಖ್ಯಾತಿ ಪಡೆದಿದ್ದ, ಬಿಲಿಯನೇರ್ ಉದ್ಯಮಿ ರಾಕೇಶ್ ಜುಂಜುನ್ ವಾಲಾ (62) ಇಂದು ಭಾನುವಾರ ಬೆಳಿಗ್ಗೆ ನಿಧನರಾದರು.ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರು ಇಂದು ಇಹಲೋಕ ತೇಜಿಸಿದ್ದಾರೆ. 1960ರಲ್ಲಿ ಹೈದರಾಬಾದ್ ನಲ್ಲಿ ಜನಿಸಿದ ರಾಕೇಶ್ ಜುಂಜುನ್ವಾಲಾ, 1985ರಲ್ಲಿ ಶೇರು ಮಾರುಕಟ್ಟೆಗೆ ಕಾಲಿಟ್ಟರು. 5000 ರೂ ನಿಂದ ವಹಿವಾಟು ಆರಂಭಿಸಿದ್ದ ರಾಕೇಶ್ 11 ಸಾವಿರ ಕೋಟಿ ರೂ. ವಹಿವಾಟು ನಡೆಸುವಷ್ಟು ಬೆಳೆದಿದ್ದರು. ಸಕ್ರಿಯ ಹೂಡಿಕೆದಾರರಾಗಿರುವ ಜುಂಜುನ್ ವಾಲಾ ಅವರು ಆಪ್ಟೆಕ್ ಲಿಮಿಟೆಡ್ ಮತ್ತು ಹಂಗಾಮಾ ಡಿಜಿಟಲ್ ಮೀಡಿಯಾ ಎಂಟರ್ ಟೈನ್ ಮೆಂಟ್ ಪ್ರೈವೇಟ್ ನ ಅಧ್ಯಕ್ಷರಾಗಿದ್ದಾರೆ. ಷೇರು ಮಾರುಕಟ್ಟೆಯ ತನ್ನ ಹಿಡಿತದ ಕಾರಣದಿಂದ ರಾಕೇಶ್ ಜುಂಜುನ್ ವಾಲಾ ಅವರನ್ನು ‘ಬಿಗ್ ಬುಲ್ ಆಫ್ ಇಂಡಿಯಾ’ ಮತ್ತು ‘ಕಿಂಗ್ ಆಫ್ ಬುಲ್ ಮಾರ್ಕೆಟ್’ ಎಂದು ಕರೆಯಲಾಗುತ್ತದೆ. ಇತ್ತೀಚೆಗಷ್ಟೇ ಅವರು ಆಕಾಶ ಏರ್ ಎಂಬ ವಿಮಾನಯಾನ ಸಂಸ್ಥೆಯನ್ನು ಆರಂಭಿಸಿದ್ದರು. ಆಗಸ್ಟ್ 7ರಂದು ಇದರ ಮೊದಲ ಹಾರಾಟ ನಡೆದಿತ್ತು.
ಪಡುಬಿದ್ರಿ : ಮೂಡು ಪಲಿಮಾರು ನಿವಾಸಿ ಶೋಭಾ ಅವರ ಮನೆಗೆ ಮೇ 6ರಂದು ಬಂದಿದ್ದ ಅಪರಿಚಿತ ವ್ಯಕ್ತಿಯೊಬ್ಬ ತನ್ನನ್ನು ಹರೀಶ್ ಪುತ್ತೂರು ಹಾಗೂ ತಾನು ವಿಶ್ವಕರ್ಮ ಕುಲದವನೆಂದು ಪರಿಚಯಿಸಿಕೊಂಡು ಶೋಭಾ ಅವರಿಂದ 1.65 ಲಕ್ಷ ರೂ.ಗಳ ಚಿನ್ನಾಭರಣವನ್ನು ಪಡೆದು ಮೋಸ ಮಾಡಿರುವುದಾಗಿ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯು ಕುಂದಾಪುರದಲ್ಲಿ ಇದ್ದ ತನ್ನ 80 ಲಕ್ಷ ರೂ. ಮೌಲ್ಯದ ಜಾಗವು ಮಾರಾಟವಾಗಿದ್ದು, ಅದರ ದಾಖಲೆಗಳು ಬ್ಯಾಂಕಿನಲ್ಲಿ ಇರುವುದರಿಂದ ಅವುಗಳನ್ನು ಬಿಡಿಸಿಕೊಳ್ಳಲು ತನಗೆ ಸಹಾಯ ಮಾಡುವಂತೆ ಕೇಳಿಕೊಂಡಿದ್ದ. ಶೋಭಾ ಅವರು ತನ್ನಲ್ಲಿ ಹಣ ಇಲ್ಲವೆಂದರೂ ಅವರ ಅಕ್ಕ ಶ್ಯಾಮಲಾ ಹಾಗೂ ಶೋಭಾರನ್ನು ಆರೋಪಿಯು ನಂಬಿಸಿ, ಅಕ್ಕ ಶ್ಯಾಮಲಾ ಅವರಿಂದ 6 ಗ್ರಾಂ ತೂಕದ ಚಿನ್ನದ ಉಂಗುರ, ಶೋಭಾ ಅವರಿಂದ ಎರಡೂವರೆ ಪವನ್ ತೂಕದ ಪವನ್ ಸರ, ಒಂದೂಕಾಲು ಪವನ್‌ನ ಚಿನ್ನದ ಬೆಂಡೋಲೆ ಮತ್ತು ಜುಮ್ಕಿಯನ್ನು ತೆಗೆದುಕೊಂಡು ಹೋಗಿದ್ದ. ಚಿನ್ನದ ಹಣವನ್ನು ತನ್ನ ಜಾಗ ಮಾರಾಟ ಮಾಡಿ ಬಂದಿರುವ ಹಣದಲ್ಲಿ ಮೇ 16ರಂದು ನಿಮ್ಮ…
ಹಾಸನ: ದಂಪತಿಗಳ ನಡುವೆ ವೈಮನಸ್ಸು ಉಂಟಾಗಿ, ಆ ಬಳಿಕ ಕೋರ್ಟ್ ಆವರಣದಲ್ಲಿ ನಡೆದಂತ ಲೋಕ ಅಧಾಲತ್ ನಲ್ಲಿ ಒಟ್ಟಿಗೆ ಜೊತೆಯಾಗಿದ್ದು, ಇಬ್ಬರು ಸಂಸಾರ ಮಾಡುತ್ತೇವೆ ಎಂಬುದಾಗಿ ಪತಿ ಒಪ್ಪಿಕೊಂಡಿದ್ದರು. ಆದ್ರೇ.. ಕೋರ್ಟ್ ಆವರಣದ ಶೌಚಾಲಯದಲ್ಲೇ ಪತ್ನಿಯ ಕತ್ತು ಕೊಯ್ದು, ಮಗುವನ್ನು ಕೊಲ್ಲಲು ಯತ್ನಿಸಿದಂತ ಘಟನೆ ನಡೆದಿತ್ತು. ಇದೀಗ ಪತಿಯಿಂದ ಹತ್ಯೆ ಯತ್ನದಲ್ಲಿ ಗಾಯಗೊಂಡಿದ್ದಂತ ಪತ್ನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ತಟ್ಟೆಕೆರೆ ಗ್ರಾಮದ ಶಿವಕುಮಾರ್ ಹಾಗೂ ಚೈತ್ರಾ ಕಳೆದ 6 ವರ್ಷಗಳ ಹಿಂದೆ ವಿವಾಹವಾಗಿದ್ದರು. ಕೆಲ ವರ್ಷಗಳಿಂದ ದಂಪತಿಗಳ ನಡುವೆ ವೈಮನಸ್ಸು ಮೂಡಿ, ದೂರಾಗಿದ್ದರು. ಇದೇ ಕಾರಣದಿಂದಾಗಿ ಪತ್ನಿ ಚೈತ್ರಾ ಡೈವೋರ್ಸ್ ಗಾಗಿ ನ್ಯಾಯಾಲಯಕ್ಕೆ ಅರ್ಜಿಯನ್ನು ಸಲ್ಲಿಸಿದ್ದರು. ಹೊಳೆನರಸೀಪುರದ ಹಿರಿಯ ಸಿವಿಲ್ ಕೋರ್ಟ್ ನಲ್ಲಿ ನಡೆದಿದ್ದಂತ ಲೋಕ ಅಧಾಲತ್ ನಲ್ಲಿ ಭಾಗವಹಿಸಿದ್ದಂತ ಶಿವಕುಮಾರ್ ಹಾಗೂ ಚೈತ್ರ ಅವರನ್ನು ಒಟ್ಟಿಗೆ ಇರೋದಕ್ಕೆ ಮನವೊಲಿಸಲಾಗಿತ್ತು. ಅಂತಿಮವಾಗಿ ಶಿವಕುಮಾರ್ ಒಟ್ಟಿಗೆ ಇರುತ್ತೇವೆ. ಇನ್ಮುಂದೆ ಪತ್ನಿ ಚೈತ್ರಾಳನ್ನು ಹಾಗೂ ಮಗುವನ್ನು ಚೆನ್ನಾಗಿ…
ಉಳ್ಳಾಲ: ಸಂಚಾರಿ ಠಾಣಾ ಎಎಸ್ ಐ ಸಿಟಿ ಬಸ್ ನಿರ್ವಾಹಕನಿಗೆ ಹಲ್ಲೆ ನಡೆಸಿರುವ ಘಟನೆ ತಲಪಾಡಿಯಲ್ಲಿ ಇಂದು ಬೆಳಿಗ್ಗೆ ನಡೆದಿದ್ದು, ಕೃತ್ಯ ಖಂಡಿಸಿ ಬಸ್ ಸಿಬ್ಬಂದಿ ತಲಪಾಡಿ- ಸ್ಟೇಟ್ ಬ್ಯಾಂಕ್ ಚಲಿಸುವ ಬಸ್ ಬಂದ್ ನಡೆಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಉಷಾ ಹೆಸರಿನ ಸಿಟಿ ಬಸ್ ನಿರ್ವಾಹಕ ರಾಜು ಎಂಬಾತನನ್ನು ಉಳ್ಳಾಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.ಜೆಪ್ಪು ಸಂಚಾರಿ ಠಾಣೆಯ ಎಎಸ್‌ಐ ಆಲ್ಬರ್ಟ್ ಲಸ್ರಾದೊ ಇಂದು ಬೆಳಿಗ್ಗೆ ತಲಪಾಡಿ ಬಳಿ ಸಿಟಿ ಬಸ್ಸುಗಳ ವಿರುದ್ಧ ಕೇಸುಗಳನ್ನು ಹಾಕುತ್ತಿದ್ದರು. ಈ ನಡುವೆ ನಿರ್ವಾಹಕನೋರ್ವನಿಗೆ ಹಲ್ಲೆ ನಡೆಸಿದ್ದಾರೆ. ಕೃತ್ಯ ಖಂಡಿಸಿದ ಬಸ್ ಸಿಬ್ಬಂದಿ ಬೆಳಗ್ಗಿನಿಂದ ಮಧ್ಯಾಹ್ನವರೆಗೂ ಬಸ್ ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ.ಕೆಲ ತಿಂಗಳುಗಳ ಹಿಂದೆ ಪ್ರಕರಣಕ್ಕೆ ಸಂಬಂಧಿಸಿದ ಎಎಸ್‌ಐ ಆಲ್ಬರ್ಟ್ ಲಸ್ರಾದೋ ತೊಕ್ಕೊಟ್ಟು ಫ್ಲೈಓವರಿನಡಿ ಕಾರೊಂದರಲ್ಲಿ ಸ್ಟಿಕರ್ ಇರುವುದರ ವಿರುದ್ಧ ದಂಡ ಹಾಕಿದ್ದರು. ಆದರೆ ಕಾರಿನಲ್ಲಿ ಸ್ವಾಮಿ ಕೊರಗಜ್ಜ ಸ್ಟಿಕರ್ ಇದ್ದು, ಇದನ್ನು ವಿರೋಧಿಸಿದ ಹಿನ್ನೆಲೆಯಲ್ಲಿ ಕಾರು ಮಾಲೀಕ ಸೇರಿದಂತೆ ಹಿಂದು ಸಂಘಟನೆ ಕಾರ್ಯಕರ್ತರು ತೊಕ್ಕೊಟ್ಟು ಜಂಕ್ಷನ್ನಿನಲ್ಲೇ ಪ್ರತಿಭಟನೆ…
ಬೆಂಗಳೂರು : ವಿಶ್ವ ಅಂಗಾಂಗ ದಾನ ದಿನಾಚರಣೆಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ ಅವರು ಸ್ವತಃ ಅಂಗಾಂಗ ದಾನಕ್ಕೆ ಹೆಸರು ನೋಂದಣಿ ಮಾಡಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಅಂಗಾಂಗ ದಾನಕ್ಕೆ ನೋಂದಣಿ ಮಾಡಿಕೊಂಡ ಬಳಿಕ ಮಾತನಾಡಿದ ಸಿಎಂ ಬೊಮ್ಮಾಯಿ, ನಾವು ಸಾವನ್ನಪ್ಪಿದ ಬಳಿಕವೂ ಎಂಟು ಮಂದಿ ಜನರಿಗೆ ಬದುಕು ಕಲ್ಪಿಸಿಕೊಡಲು ಅಂಗಾಂಗ ದಾನದ ಮೂಲಕ ಸಾಧ್ಯ. ಆ ಮೂಲಕ ಸತ್ತ ಮೇಲೆಯೂ ಬದುಕಿರಬಹುದು. ಅಂಗಾಂಗ ದಾನವನ್ನು ಹೆಚ್ಚಿನ ಸಂಖ್ಯೆಯಲ್ಲಿ ಮಾಡಿ ಜೀವಗಳನ್ನು ಉಳಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಕೈ ಜೋಡಿಸಬೇಕು ಎಂದರು.ಮಾನವ ಜನ್ಮ ಶ್ರೇಷ್ಠವಾದುದು. ಆ ಶ್ರೇಷ್ಠತೆಯನ್ನು ಉಳಿಸುವ ಕೆಲಸ ನಮ್ಮದಾಗಬೇಕು. ಸಾವಿನ ನಂತರವೂ ಬದುಕಬೇಕೆಂದರೆ ಅಂಗಾಂಗಗಳನ್ನು ದಾನ ಮಾಡಬೇಕು. ಈ ನಿಟ್ಟಿನಲ್ಲಿ ಯುವಜನತೆ ಮಹತ್ವದ ಹೆಜ್ಜೆ ಇಡಬೇಕು ಎಂದು ತಿಳಿಸಿದರು.
ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿನ ಪ್ರಮಾಣ ಹೆಚ್ಚುತ್ತಲೇ ಇದೆ. ಹೀಗಾಗಿ ಇನ್ನೇನು 75ನೇ ಸ್ವಾತಂತ್ರ್ಯ ದಿನಾಚರಣೆ ಹತ್ರ ಬರಲಿದೆ. ಈ ವೇಳೆ ಬೃಹತ್ ಸಭೆ-ಸಮಾರಂಭ ಆಯೋಜಿಸದಂತೆ ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚಿಸಿದೆ. ಸ್ವಾತಂತ್ರ್ಯ ದಿನಾಚರಣೆ ಸಭೆ-ಸಮಾರಂಭಗಳಲ್ಲಿ ಹೆಚ್ಚಿನ ಜನಸಂದಣಿಗೆ ಅವಕಾಶ ನೀಡಬೇಡಿ. ಕಾರ್ಯಕ್ರಮಗಳಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸುವಂತೆ ಸೂಚನೆ ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಪ್ರತಿ ಜಿಲ್ಲೆಯ ಪ್ರಮುಖ ಸ್ಥಳದಲ್ಲಿ ‘ಸ್ವಚ್ಛ ಭಾರತ್’ ಅಭಿಯಾನ ಕೈಗೊಳ್ಳಿ. ತಿಂಗಳ ಅವಧಿಯ ಅಭಿಯಾನ ಕೈಗೊಂಡು, ನಾಗರಿಕರು ಸ್ವಯಂಪ್ರೇರಿತರಾಗಿ ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ನೋಡಿಕೊಳ್ಳಲು ತಿಳಿಸಿದೆ.
ಕೊಯಿಕ್ಕೋಡ್: ಪೊಲೀಸ್ ಠಾಣೆಯ ಒಳಗೆ ಸಬ್ ಇನ್ಸ್ಪೆಕ್ಟರ್ ಒಬ್ಬರು ಕುಸಿದು ಬಿದ್ದು ಸಾವಿಗೀಡಾಗಿರುವ ಘಟನೆ ಕೇರಳದ ಥಾಮರಸ್ಸೆರೆ ಠಾಣೆಯಲ್ಲಿ ನಡೆದಿದೆ. ಸನೋಜ್ (37) ಮೃತ ಸಬ್ ಇನ್ಸ್ಪೆಕ್ಟರ್. ಕರ್ತವ್ಯ ನಿಮಿತ್ತ ಪೊಲೀಸ್ ಠಾಣೆಗೆ ಆಗಮಿಸಿದ ಸನೋಜ್, ಠಾಣೆಯ ಒಳಗೆ ಕಾಲಿಡುತ್ತಿದ್ದಂತೆಯೇ ಎದೆ ನೋವಿನಿಂದಾಗಿ ಎದೆ ಹಿಡಿದುಕೊಂಡು ಕುಸಿದು ಬಿದ್ದರು. ಠಾಣೆಯಲ್ಲಿ ಸಿಬ್ಬಂದಿ ಸನೋಜ್ ಕುಸಿದು ಬಿದ್ದಿದ್ದನ್ನು ನೋಡಿ, ತಕ್ಷಣ ಅವರನ್ನು ಕೊಯಿಕ್ಕೋಡ್ ಮೆಡಿಕಲ್ ಕಾಲೇಜು ಹಾಸ್ಪಿಟಲ್ಗೆ ಚಿಕಿತ್ಸೆಗೆಂದು ದಾಖಲಿಸಿದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಸನೋಜ್ ಕೊನೆಯುಸಿರೆಳೆದಿದ್ದಾರೆ. ಸನೋಜ್ ಸಾವಿನ ಸುದ್ದಿ ಕೇಳಿ ಅವರ ಕುಟುಂಬಕ್ಕೆ ಆಘಾತವಾಗಿದ್ದು, ಆಕ್ರಂದನ ಮುಗಿಲು ಮುಟ್ಟಿದೆ. ಸಹೋದ್ಯೋಗಿಯೊಬ್ಬರನ್ನು ಕಳೆದುಕೊಂಡ ಸಿಬ್ಬಂದಿ ಸಹ ಕಂಬನಿ ಮಿಡಿದಿದ್ದಾರೆ.










