Author: main-admin

ಮಂಗಳೂರು : ರಕ್ಷಾಬಂಧನ ಕಟ್ಟಿಕೊಂಡು ಬಂದಿದ್ದ ವಿಧ್ಯಾರ್ಥಿಗಳ ಕೈಯಲ್ಲಿರುವ ರಕ್ಷಾ ಬಂಧನವನ್ನುಶಿಕ್ಷಕರು ತುಂಡರಿಸಿ ಹಾಕಿದ ಘಟನೆ ಮಂಗಳೂರಿನ ಕಾಟಿಪಳ್ಳದಲ್ಲಿರುವ ಚರ್ಚ್ ಶಾಲೆಯೊಂದರಲ್ಲಿ ನಡೆದಿದ್ದು, ವಿವಾದಕ್ಕೆ ಕಾರಣವಾಗಿದೆ. ಹಿಂದೂ ಸಮುದಾಯದ ಈ ಆಚರಣೆಗೆ ಅವಮಾನ ಮಾಡಿದ ಚರ್ಚ್ ಶಾಲೆಯ ವಿರುದ್ಧ ಪೋಷಕರು ತೀವ್ರ ಆಕ್ರೋಶವನ್ನು ವ್ಯಕ್ತಪಡಿಸಿದ್ದು, ಶಾಲೆಯ ಮುಂದೆ ಜಮಾಯಿಸಿ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ ಘಟನೆ ನಡೆದಿತ್ತು. ಹಿಂದೂ ಸಂಘಟನೆಯ ಪ್ರಮುಖರು ಕೂಡ ಶಾಲೆಯ ವರ್ತನೆಯ ಬಗ್ಗೆ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಪೋಷಕರು- ಹಿಂದೂ ಸಮಾಜದ ಪ್ರಮುಖರು ಶಾಲೆಗೆ ಆಗಮಿಸಿ ಆಕ್ರೋಶ ವ್ಯಕ್ತಪಡಿಸಿದ್ದು, ಪೊಲೀಸರು ಮಧ್ಯಪ್ರವೇಶಿಸಿದರು. ಶಾಲಾ ಆಡಳಿತ ಮಂಡಳಿ ಘಟನೆಯ ಕುರಿತಂತೆ ಕ್ಷಮೆ ಕೇಳಿದ್ದು, ಪ್ರಕರಣ ಸುಖಾಂತ್ಯವಾಗಿದೆ. ಬಳಿಕ ಶಾಲೆಯಲ್ಲಿ ಶಾಲೆಯ ಪ್ರಾಶುಂ ಪಾಲರು ಮಾತನಾಡಿ ನನಗೆ ಅರಿವಿಲ್ಲದೇ ಈ ಘಟನೆ ಸಂಭವಿಸಿದೆ. ನಮ್ಮ ಶಾಲೆಯಲ್ಲಿ ತಾವುದೇ ತಾರತಮ್ಯವಿಲ್ಲ. ಸಮಾರಸ್ಯತೆಯನ್ನು ಮೂಡಿಸುವ ಕೆಲಸ ಮಾಡುತ್ತೇವೆ. ತಿಳಿಯದೆ ಶಿಕ್ಷಕಿಯೊಬ್ಬರು ಹೀಗೆ ಮಾಡಿರಬೇಕು. ಕೂಡಲೇ ಶಿಕ್ಷಕಿಯಿಂದಲೇ ಕ್ಷಮೇ ಯಾಚಿಸಲು ತಿಳಿಸಿದ್ದಾರೆ. ಬಳಿಕ ಶಿಕ್ಷಕಿ ಪೋಷಕರ ಎದುರೇ…

Read More

ಬೆಳ್ತಂಗಡಿ: ಅನ್ಯಕೋಮಿನ ಜೋಡಿಯನ್ನು ಹಿಂದೂ ಕಾರ್ಯಕರ್ತರು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಬೆಳ್ತಂಗಡಿಯ ಕಾಪಿನಬಾಗಿಲು ಎಂಬಲ್ಲಿ ನಡೆದಿದೆ. ಗದಗ ಮೂಲದ ರಫೀಕ್(21) ಎಂಬಾತ ಹಿಂದೂ ಯುವತಿಯನ್ನು ಧರ್ಮಸ್ಥಳಕ್ಕೆ ಕರೆ ತಂದಿದ್ದು, ಖಾಸಗಿ ಲಾಡ್ಜ್‌ಗೆ ರೂಮ್ ಬುಕ್ಕಿಂಗ್ ಗಾಗಿ ಬಂದಿದ್ದಾರೆ ಎನ್ನಲಾಗಿದೆ. ನವ ವಿವಾಹಿತ ಅನ್ಯಕೋಮಿನ ಜೋಡಿ ಎಂದು ತಿಳಿಯುತ್ತಲೇ ಲಾಡ್ಜ್ ಸಿಬ್ಬಂದಿ ರೂಮ್ ನೀಡಲು ನಿರಾಕರಿಸಿದ್ದಾರೆ ಎನ್ನಲಾಗಿದ್ದು, ತಕ್ಷಣ ಅವರಿಬ್ಬರು ಅಲ್ಲಿಂದ ಬೆಂಗಳೂರು ಕಡೆಗೆ ತೆರಳಲು ಬಸ್ ಹತ್ತಿದ್ದು, ಈ ಬಗ್ಗೆ ವಿಷಯ ತಿಳಿದ ಕಾರ್ಯಕರ್ತರು ಕೊಕ್ಕಡದಲ್ಲಿ ಅಡ್ಡಗಟ್ಟಿದ್ದಾರೆ ಎನ್ನುವ ಮಾಹಿತಿ ಸಿಕ್ಕಿದೆ. ತದನಂತರ ಅನ್ಯಕೋಮಿನ ಜೋಡಿಯನ್ನು ಕಾರ್ಯಕರ್ತರು ನೆಲ್ಯಾಡಿ ಪೊಲೀಸರಿಗೆ ಒಪ್ಪಿಸಿದ್ದು, ಯುವತಿಯು ವಿದ್ಯಾಸಂಸ್ಥೆಯಲ್ಲಿ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಳು ಎನ್ನಲಾಗುತ್ತಿದೆ. ಜೋಡಿಯನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

Read More

ಬೆಳ್ತಂಗಡಿ: ಅನ್ಯ ಕೋಮಿನ ಜೋಡಿಯನ್ನು ತಡೆದು ಹಿಂದೂ ಸಂಘಟನೆಗಳ ಕಾರ್ಯಕರ್ತರು ಪೊಲೀಸರಿಗೆ ಒಪ್ಪಿಸಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ‌. ಗದಗ ಮೂಲದ ರಫೀಕ್ (21)ಎಂಬಾತ ಗದಗ ಮೂಲದ ಹಿಂದೂ ಯುವತಿಯನ್ನು ಧರ್ಮಸ್ಥಳಕ್ಕೆ ಕರೆ ತಂದಿದ್ದು ಖಾಸಗಿ ಲಾಡ್ಜ್ ಬುಕ್ಕಿಂಗ್ ಗಾಗಿ ಬಂದಿರುತ್ತಾರೆ ಎನ್ನಲಾಗಿದೆ. ಅನ್ಯಮತೀಯ ಜೋಡಿ ಎಂದು ತಿಳಿದ ಕೂಡಲೆ ಲಾಡ್ಜ್ ಸಿಬ್ಬಂದಿಯು, ರೂಮ್ ನೀಡಲು ನಿರಾಕರಿಸಿದ್ದಾರೆ. ಆಗ ಅವರು ತಕ್ಷಣ ಅಲ್ಲಿಂದ ಮರಳಿ ಬೆಂಗಳೂರು ಕಡೆಗೆ ತೆರಳಲು ಬಸ್ ಹತ್ತಿದ್ದರು. ಇದರಿಂದ‌ ಕೊಕ್ಕಡದಲ್ಲಿ ಸುದ್ದಿ ತಿಳಿದ ಹಿಂದೂ ಕಾರ್ಯಕರ್ತರು ಬಸ್ ಅಡ್ಡಗಟ್ಟಿದ್ದಾರೆ ಎಂದು ತಿಳಿದು ಬಂದಿದೆ. ನಂತರ ಜೋಡಿಯನ್ನು ನೆಲ್ಯಾಡಿ ಪೋಲಿಸರಿಗೆ ಒಪ್ಪಿಸಿದ್ದಾರೆ. ಯುವತಿಯು ಒಂದು ವಿದ್ಯಾ ಸಂಸ್ಥೆಯಲ್ಲಿ ಲೆಕ್ಚರ್ ಎಂದು ವಿಚಾರಿಸಿದಾಗ ತಿಳಿದು ಬಂದಿದೆ.

Read More

ಉಡುಪಿ : ಈ ಹಿಂದಿನ ವರ್ಷಗಳಲ್ಲಿ ಸ್ವಾತಂತ್ಯೋತ್ಸವದಂದು ನಡೆದಂತೆ ಈ ಬಾರಿಯೂ ರಿಕ್ಷಾ, ಬಸ್, ಟೆಂಪೋ, ಬೈಕ್ ಇತ್ಯಾದಿಗಳಿಗೆ ರಾಷ್ಟ್ರಧ್ವಜ ಕಟ್ಟಿಕೊಂಡು ರ್ಯಾಲಿ ಮಾಡಲು ಅವಕಾಶವಿದೆ. ಆದರೆ ರಾಷ್ಟ್ರಧ್ವಜಕ್ಕೆ ಸ್ವಲ್ಪವೂ ಅವಮಾನ ಆಗದಂತೆ ಎಚ್ಚರ ವಹಿಸಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಸೂಚನೆ ನೀಡಿದ್ದಾರೆ. ಈ ವಿಚಾರವಾಗಿ ಮಾಹಿತಿ ನೀಡಿದ ಅವರು, ಹರ್ ಘರ್ ತಿರಂಗಾ ಕಾರ್ಯಕ್ರಮವು ಆ. 13ರಿಂದ 15ರ ವರೆಗೆ ನಡೆಯಲಿದೆ. ಸ್ವಾತಂತ್ರೋತ್ಸವದ ಧ್ವಜಾರೋಹಣವು ಆ. 15ರಂದು ಎಲ್ಲ ಕಡೆಯೂ ನಡೆಯಲಿದೆ. ಸರಕಾರಿ ಕಚೇರಿ, ಶಾಲೆ, ಆಸ್ಪತ್ರೆ ಸಹಿತ ವಿವಿಧ ಕಡೆಗಳಲ್ಲಿ ಸೂರ್ಯೋದಯದ ಅನಂತರ ಧ್ವಜಾರೋಹಣ ನಡೆದು, ಸೂರ್ಯಾಸ್ತದ ಮೊದಲು ಧ್ವಜವನ್ನು ಕೆಳಗೆ ಇಳಿಸಲಾಗುತ್ತದೆ. ಆದರೆ ಈ ವರ್ಷಕ್ಕೆ ಅನ್ವಯವಾಗುವಂತೆ ಮೂರು ದಿನ ಹರ್ ಘರ್ ತಿರಂಗಾ ನಡೆಯುತ್ತಿರುವುದರಿಂದ ಆ. 13ರಿಂದ 15ರ ವರೆಗೆ ಮನೆ, ಕಟ್ಟಡ ಮೊದಲಾದ ಸ್ಥಳಗಳಲ್ಲಿ ರಾತ್ರಿಯೂ ಧ್ವಜಾರೋಹಣ ಇರಲಿದೆ. ಹಾಗೂ ಅಮೃತ ಸರೋವರವಾಗಿ ಅಭಿವೃದ್ಧಿಪಡಿಸಿರುವ ಕೆರೆಯ ಆವರಣಗಳಲ್ಲೂ ಧ್ವಜಾರೋಹಣ ನಡೆಯಲಿದೆ ಎಂದು ಹೇಳಿದರು.…

Read More

ಮಂಗಳೂರು:: ಅಪರಿಚಿತ ವಾಹನವೊಂದು ರಾಷ್ಟ್ರೀಯ ಹೆದ್ದಾರಿ 66 ರ ಜೆಪ್ಪಿನಮೊಗರು ಬಳಿ ಹುಲ್ಲುಗಳನ್ನು ಕಟಾವು ನಡೆಸುತ್ತಿದ್ದ ಇಬ್ಬರು ಕಾರ್ಮಿಕರಿಗೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಾಯಾಳು ಕಾರ್ಮಿಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಿಹಾರ ಜಾಮೂಲ್ ನಿವಾಸಿ ವಿಕ್ಕಿ ಖಾನ್ (23) ಮೃತ ಕಾರ್ಮಿಕ. ಗೋಪಾಲ್ ಪೂಜಾರಿ ಗಾಯಗೊಂಡವರು. ಬೆಳಿಗ್ಗೆ ಎಂಟು ಗಂಟೆ ಸುಮಾರಿಗೆ ಹೆದ್ದಾರಿ ಬಳಿಯ ಹುಲ್ಲುಗಳನ್ನು ಕಟಾವು ನಡೆಸುತ್ತಿದ್ದಾಗ, ತೊಕ್ಕೊಟ್ಟು ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ವಾಹನ ಢಿಕ್ಕಿ ಹೊಡೆದಿದೆ. ಪಿಕಪ್ ವಾಹನದ ಮೇಲೆ ಸಂಶಯ ವ್ಯಕ್ತಪಡಿಸಿರುವ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ. ನಾಗುರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಸುಳ್ಯ: ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಇಂದು ಬಂಧಿಸಲಾದ ಮೂರು ಮಂದಿ ಆರೋಪಿಗಳಿಗೆ ಆ.16ರವರೆಗೆ ಪೊಲೀಸ್ ಕಸ್ಟಡಿ ವಿಧಿಸಿ ಸುಳ್ಯ ನ್ಯಾಯಾಲಯ ಆದೇಶ ನೀಡಿದೆ. ಇಂದು ಬಂಧಿಸಲಾದ ಪ್ರಕರಣದ ಪ್ರಮುಖ ಆರೋಪಿಗಳಾದ ಸುಳ್ಯ ನಿವಾಸಿ ಶಿಯಾಬುದ್ದೀನ್ (33), ರಿಯಾಜ್ ಅಂಕತಡ್ಕ(27), ಎಲಿಮಲೆ ನಿವಾಸಿ ಬಶೀರ್(29) ಎಂಬವರನ್ನು ಗುರುವಾರ ಸಂಜೆ ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಹೆಚ್ಚಿನ ತನಿಖೆಗಾಗಿ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ನೀಡುವಂತೆ ಪೊಲೀಸ್ ಅಧಿಕಾರಿಗಳು ಮನವಿ ಸಲ್ಲಿಸಿದ್ದರು. ಮನವಿ ಪುರಸ್ಕರಿಸಿದ ನ್ಯಾಯಾಲಯವು ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ನೀಡಿದೆ ಎಂದು ತಿಳಿದು ಬಂದಿದೆ. ಪುತ್ತೂರು ಡಿವೈಎಸ್‌ಪಿ ಗಾನಾ ಪಿ ಕುಮಾರ್, ಸುಳ್ಯ ವೃತ್ತ ನಿರೀಕ್ಷಕ ನವೀನ್‌ಚಂದ್ರ ಜೋಗಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್‌ನಲ್ಲಿ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

Read More

ಕಡಬ: ಎರಡು ನಂಬರ್ ಪ್ಲೇಟ್ ಹೊಂದಿರುವ ಅಪರಿಚಿತ ಕಾರೊಂದು ಮರ್ಧಾಳದಲ್ಲಿ ಕಂಡುಬಂದಿದ್ದು, ಪೊಲೀಸರು ಲಾಕ್ ಮಾಡಿದ್ದಾರೆ. ಮುಂಭಾಗದಲ್ಲಿ ಮತ್ತು ಹಿಂಭಾಗದಲ್ಲಿ ಬೇರೆ ಬೇರೆ ನಕಲಿ ನಂಬರ್ ಪ್ಲೇಟ್ ಗಳನ್ನು ಹಾಕಲಾಗಿದ್ದು, ಬುಧವಾರ ರಾತ್ರಿ ಕಡಬ ಠಾಣಾ ಪೊಲೀಸರು ಮರ್ಧಾಳ ಜಂಕ್ಷನ್ ನಲ್ಲಿ ಕಾರಿನ ಚಕ್ರಗಳಿಗೆ ಲಾಕ್ ಮಾಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕಡಬ ಠಾಣಾ ಸಬ್ ಇನ್ಸ್‌ಪೆಕ್ಟರ್ ಆಂಜನೇಯ ರೆಡ್ಡಿ, ನಕಲಿ ನಂಬರ್ ಪ್ಲೇಟ್ ಹಾಕಿರುವ ಕಾರಿಗೆ ಲಾಕ್ ಮಾಡಲಾಗಿದ್ದು, ಕಾರಿನ ಮಾಲಕರನ್ನು ಪತ್ತೆ ಹಚ್ಚುವ ಕಾರ್ಯ ಮಾಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.

Read More

ಮಂಗಳೂರು: ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಮೂವರು ಪ್ರಮುಖ ಆರೋಪಿಗಳನ್ನು ಬಂಧಿಸುವಲ್ಲಿ ಮಂಗಳೂರು ಪೊಲೀಸರು ಯಶಸ್ವಿಯಾಗಿದ್ದು, ಈವರೆಗೆ ಬಂಧಿತರ ಸಂಖ್ಯೆ 10ಕ್ಕೇರಿದೆ. ಶಿಯಾಬುದ್ದೀನ್​ ಅಲಿ(33), ಎಲಿಮಲೆಯ ಬಶೀರ್(29) ಮತ್ತು ರಿಯಾಜ್(27) ಬಂಧಿತ ಆರೋಪಿಗಳು. 15 ದಿನಗಳಿಂದ ಪದೇಪದೆ ಜಾಗ ಬದಲಿಸುತ್ತಾ ತಲೆಮರೆಸಿಕೊಂಡಿದ್ದ ಆರೋಪಿಗಳನ್ನ ತಲಪಾಡಿ ಚೆಕ್ ಪೋಸ್ಟ್​ನಲ್ಲಿ ಗುರುವಾರ ಬೆಳಗ್ಗೆ ಬಂಧಿಸಲಾಗಿದ್ದು, ಕೃತ್ಯಕ್ಕೆ ಬಳಸಿದ್ದ ವಾಹನ ಹಾಗೂ ಆಯುಧಗಳನ್ನು ವಶಕ್ಕೆ ಪಡೆಯಲಾಗುವುದು ಎಂದು ಎಡಿಜಿಪಿ ಅಲೋಕ್ ಕುಮಾರ್ ವಿವರಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಲೋಕ್​ ಕುಮಾರ್​, ಪ್ರಕರಣಗಳಲ್ಲಿ ಸಂಚು ರೂಪಿಸಿದ ಹಾಗೂ ಸಹಕಾರ ನೀಡಿದ ಒಟ್ಟು 7 ಮಂದಿಯನ್ನು ಈಗಾಗಲೇ ಬಂಧಿಸಲಾಗಿದೆ. ಪ್ರಮುಖ ಆರೋಪಿಗಳ ಬಂಧನ ಸೇರಿದಂತೆ ಒಟ್ಟು ಹತ್ತು ಮಂದಿಯ ಬಂಧನವಾಗಿದೆ. ಇನ್ನೂ ತನಿಖೆ ಮುಂದುವರಿದಿದ್ದು ಹತ್ಯೆಗೆ ಹಾಗೂ ಆರೋಪಿಗಳ ರಕ್ಷಣೆಗೆ ಸಹಕಾರ ನೀಡಿದವರ ಬಂಧನವಾಗಲಿದೆ ಎಂದಿದ್ದಾರೆ. ಪ್ರವೀಣ್​ ಕೊಲೆ ಪ್ರಕರಣದ ಪ್ರಮುಖ ಮೂವರು ಆರೋಪಿಗಳು ಪದೇಪದೆ ತಮ್ಮ ವಾಸ ಸ್ಥಾನ ಬದಲಿಸುತ್ತಿದ್ದರು. ವಿಶೇಷ ತಂಡ ರಚಿಸಿ…

Read More

ಮಂಗಳೂರು: ನಗರದ ಬಿಕರ್ನಕಟ್ಟೆ ಕಂಡೆಟ್ಟು ಕ್ರಾಸ್‌ನಲ್ಲಿ ಕಳೆದ ಶುಕ್ರವಾರ ಸ್ಕೂಟರ್‌ ಅಪಘಾತದಲ್ಲಿ ಸವಾರ ಆತಿಶ್‌ (20) ಮೃತಪಟ್ಟಿದ್ದು, ನಗರದ ಗುಂಡಿಗಳನ್ನು ತುಂಬಿಸದ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕೊಲೆ ದೂರು ದಾಖಲಿಸುವಂತೆ ನೆಟ್ಟಿಗರು ಆಗ್ರಹಿಸಿದ್ದು, ಇನ್ನು ಕೆಲವರು ಜನಪ್ರತಿನಿಧಿಗಳ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದರು.ಆತಿಶ್ ಶುಕ್ರವಾರ ಸಂಜೆ 6.45ರ ಸುಮಾರಿಗೆ ನಂತೂರು ಜಂಕ್ಷನ್‌ನಿಂದ ಬಿಕರ್ನಕಟ್ಟೆಗೆ ಸ್ಕೂಟರ್ ನಲ್ಲಿ ಹೋಗುತ್ತಿದ್ದು, ಮಳೆಯಿಂದಾಗಿ ಕಂಡೆಟ್ಟು ಕ್ರಾಸ್‌ಗೆ ಸ್ವಲ್ಪ ಮೊದಲು ಬಿದ್ದಿದ್ದ ಗುಂಡಿಯನ್ನು ಅವರು ಗಮನಿಸಲಿಲ್ಲ. ಕೊನೆ ಕ್ಷಣದಲ್ಲಿ ಗುಂಡಿ ತಪ್ಪಿಸಲು ಯತ್ನಿಸಿದಾಗ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಡಿವೈಡರ್‌ನ ಕಬ್ಬಿಣದ ರಿಫ್ಲೆಕ್ಟರ್ ರೇಲಿಂಗ್‌ಗೆ ಅವರ ತಲೆ ಬಡಿದಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.

Read More

ಚಿಕ್ಕಮಗಳೂರು: ಚಾರ್ಮಾಡಿ ಘಾಟಿಯ ರಸ್ತೆ ಮಧ್ಯೆದಲ್ಲಿ ಲಾರಿಗಳು ಕೆಟ್ಟು ನಿಂತಿವೆ. ಹೀಗಾಗಿ ಕಿಲೋಮೀಟರ್ ಗಟ್ಟಲೇ ಟ್ರಾಫಿಕ್ ಜಾಮ್ ಆಗಿದೆ. ಇದರಿಂದ ವಾಹನ ಸವಾರರಿಗೆ ಕಿರಿಕಿರಿ ಉಂಟಾಗಿತ್ತು. ಮೂಡಿಗೆರೆ ತಾಲೂಕಿನ ಅಲೇಖಾನ್ ಹೊರಟ್ಟಿ ಸಮೀಪ ಎರಡು ಲಾರಿಗಳು ಕೆಟ್ಟು ನಿಂತಿವೆ. ತಡೆಗೋಡೆ ಒಡೆದು ವಾಹನಗಳನ್ನ ಮುಂದಕ್ಕೆ ತೆಗೆದುಕೊಂಡು ಹೋಗಿದ್ದಾರೆ.

Read More