ಕಾಸರಗೋಡು: ಮಂಗಳೂರಿನಲ್ಲಿ ಕುಕ್ಕರ್ ಪ್ರಕರಣದ ಆರೋಪಿ ಶಾರೀಕ್ ಕೊಚ್ಚಿಯಲ್ಲಿ ವಿದೇಶಿಗ ಸಹಿತ ನಾಲ್ವರ ಸಂಪರ್ಕದಲ್ಲಿದ್ದನೆಂದು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್.ಐ.ಎ.) ಅವರ ಗುರುತು ಪತ್ತೆಹಚ್ಚಿದ್ದು ಯಾವುದೇ ಮಾಹಿತಿ ನೀಡಲು ನಿರಾಕರಿಸಿದೆ. ಸ್ಫೋಟದ ಮುನ್ನ ಕೊಚ್ಚಿಗೆ ಹೋಗಿದ್ದು, ಅಲ್ಲಿ ವ್ಯವಹಾರ ನಡೆಸಿದವರ ಪೈಕಿ ನಾಲ್ವರ ಮಾಹಿತಿ ಲಭಿಸಿದೆ. ಇವರಲ್ಲಿ ಓರ್ವ ವಿದೇಶಿಗ, ಇಬ್ಬರು ಕೇರಳೀಯರು ಮತ್ತು ತಮಿಳುನಾಡು ನಿವಾಸಿಯಾಗಿದ್ದಾನೆ. ಇವರ ಮಾಹಿತಿಯನ್ನು ಬಹಿರಂಗ ಮಾಡಿಲ್ಲ. ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)ಗೆ ಹಸ್ತಾಂತರಿಸ ಲಾಗಿದ್ದರೂ ಕರ್ನಾಟಕ ವಿಶೇಷ ತನಿಖಾ ತಂಡ ಈಗಲೂ ತನಿಖೆಯನ್ನು ಮುಂದುವರಿಸುತ್ತಿದೆ. ಕೇರಳದಲ್ಲಿ ನಡೆಸುತ್ತಿರುವ ತನಿಖೆಗೆ ಕೇರಳ ಪೊಲೀಸರು ಸಂಪೂರ್ಣ ಸಹಕಾರ ನೀಡುತ್ತಿದ್ದಾರೆ. ತನಿಖಾತಂಡ ಕಳೆದ 2 ವಾರಗಳಿಂದ ಕೊಚ್ಚಿಯಲ್ಲೇ ಠಿಕಾಣಿ ಹೂಡಿದ್ದು, ಅಗತ್ಯದ ಪುರಾವೆ, ಮಾಹಿತಿ ಗಳನ್ನು ಕಲೆ ಹಾಕುತ್ತಿದೆ. ತನಿಖಾ ತಂಡಕ್ಕೆ ಕೇರಳ ಪೊಲೀಸ್ ವಿಭಾಗಗಳ ಓರ್ವ ಡಿವೈಎಸ್‌ಪಿ ಮತ್ತು ಇಬ್ಬರು ಎಸ್‌ಐಗಳು ನೆರವು ಹಾಗೂ ಸಹಕಾರ ನೀಡುತ್ತಿದ್ದಾರೆ. ಶಾರೀಕ್ ಸಂಪರ್ಕ ದಲ್ಲಿದ್ದವರ ಪೈಕಿ ಕೇರಳೀಯರಾದ ಇಬ್ಬರು ದೀರ್ಘ ಕಾಲದಿಂದ…
Author: main-admin
ಬೆಂಗಳೂರು : ಸಿಲಿಕಾನ್ ಸಿಟಿಯ ವಾಹನ ಸವಾರರೇ ಎಚ್ಚರ.! ಇನ್ಮುಂದೆ ವಾಹನಗಳ ಮೇಲೆ ದಂಡ ಬಾಕಿಯಿದ್ರೆ ಸಿಗಲ್ಲ ಇನ್ಶೂರೆನ್ಸ್ ಕ್ಯಾನ್ಸಲ್ ಆಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ. ಒಂದೆಡೆ ದಿನದಿಂದ ದಿನಕ್ಕೆ ವಾಹನ ಸಂಖ್ಯೆ ಹೆಚ್ಚಾಗ್ತಿದ್ದಂತೆ ನಿಯಮ ಉಲ್ಲಂಘನೆ ಕೇಸ್ ಹೆಚ್ಚಾಗುತ್ತಿದೆ ಈ ಬೆಂಗಳೂರಿನಲ್ಲಿ ಪ್ರತಿದಿನ ಸುಮಾರು 30 ಸಾವಿರಕ್ಕೂ ಹೆಚ್ಚು ಟ್ರಾಫಿಕ್ ಕೇಸ್‌ಗಳು ದಾಖಲಾಗುತ್ತಿವೆ. ಕಳೆದ 11 ತಿಂಗಳಲ್ಲಿ ಬೆಂಗಳೂರಿನಲ್ಲಿ 96 ಲಕ್ಷ ಸಂಚಾರ ನಿಯಮ ಉಲ್ಲಂಘನೆ ಕೇಸ್ ದಾಖಲಾಗಿದೆ. 11 ತಿಂಗಳಲ್ಲಿ ಬರೋಬ್ಬರಿ 164 ಕೋಟಿ ರೂ. ದಂಡದ ಮೊತ್ತ ವಸೂಲಿ ಮಾಡಲಾಗಿದೆ. ವರ್ಷಾಂತ್ಯಕ್ಕೆ ಒಂದು ಕೋಟಿ ಕೇಸ್ ಆಗುತ್ತದೆ ಎಂದು ಅಧಿಕಾರಿಗಳು ಅಂದಾಜಿಸಿದ್ದಾರೆ. ದೇಶದ ಯಾವ ನಗರದಲ್ಲೂ 1 ಕೋಟಿ ಕೇಸ್ ಹಾಕಿದ ಉದಾಹರಣೆ ಇಲ್ವಂತೆ. ಬೆಂಗಳೂರು ನಗರ ಒಂದರಲ್ಲೇ ಇಷ್ಟು ಕೇಸ್ ದಾಖಲಾಗುತ್ತಿದೆ. ಸಂಚಾರ ದಟ್ಟಣೆಯಲ್ಲಿ ಹೆಸರುವಾಸಿಯಾಗಿದ್ದ ಸಿಲಿಕಾನ್ ಸಿಟಿ ಈಗ ಸಂಚಾರ ನಿಯಮ ಉಲ್ಲಂಘನೆ ಹಾಗೂ ದಂಡ ಕಟ್ಟುವಲ್ಲೂ ರೆಕಾರ್ಡ್ ಮಾಡುತ್ತಿದೆ. ಇದರಿಂದಾಗಿ ವಾಹನ ಸಂಖ್ಯೆ…
ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ವಿಟ್ಲದ ಖಾಸಗಿ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮವೊಂದರಲ್ಲಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಕಾಂತಾರ ಚಿತ್ರದ ದೈವಾರಾಧನೆಯ ಸನ್ನಿವೇಶವನ್ನು ಛದ್ಮವೇಶದ ಮೂಲಕ ಪ್ರದರ್ಶಿಸಿದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ರಿಷಬ್ ಶೆಟ್ಟಿ ಅಭಿನಯದ ಕಾಂತಾರ ಚಲನಚಿತ್ರ ಇನ್ನಿಲ್ಲದಂತೆ ಯಶಸ್ವಿ ಕಂಡ ಬಳಿಕ ಎಲ್ಲೆಡೆ ದೈವಾರಾಧನೆ, ಭೂತಾರಾಧನೆ ಬಗ್ಗೆ ಜನತೆಗೆ ಒಲವು ಜಾಸ್ತಿಯಾಗಿದೆ. ಇದೇ ವೇಳೆ ಕೆಲವರು ಭೂತಾರಾಧನೆಯ ವೇಷ ಹಾಕಿಕೊಂಡು ವೇದಿಕೆಗೆ ಏರಿ ದೈವಕ್ಕೆ ಅಪಚಾರ ಎಸಗುವ ಕೆಲಸ ಮಾಡುತ್ತಿದ್ದಾರೆ.ಟಿವಿಗಳಲ್ಲಿನ ರಿಯಾಲಿಟಿ ಶೋಗಳಲ್ಲಿ ಕಾಂತಾರ ಚಲನಚಿತ್ರದಲ್ಲಿ ಕಾಣುವ ಪಂಜುರ್ಲಿಯಂತೆ ವೇಷಧರಿಸಿ ಹಾಡು ಹಾಕಿ ಕುಣಿದು ಚಪ್ಪಾಳೆ ಗಿಟಿಸುವುದಕ್ಕೆ ದೈವಾರಾಧಕರು ಹಾಗೂ ತುಳುನಾಡಿನ ಜನತೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೀಗ ಖಾಸಗಿ ಶಾಲೆಯ ಬಾಲಕನೊಬ್ಬ ಕೈಯಲ್ಲಿ ದೈವದ ಆಯುಧವನ್ನು ಹಿಡಿದುಕೊಂಡು ನರ್ತಿಸುವ ಸನ್ನಿವೇಶವನ್ನು ನೆರೆದ ಪುಟ್ಟ ಮಕ್ಕಳು ಹಾಗೂ ಶಿಕ್ಷಕರು ಕೈಚಪ್ಪಾಳೆ ತಟ್ಟಿ ಪ್ರೋತ್ಸಾಹಿಸುತ್ತಿರುವುದು ಕೂಡಾ ಕಂಡು ಬಂದಿದೆ. ಒಟ್ಟಿನಲ್ಲಿ ಪೂಜ್ಯ ಭಾವನೆಯಿಂದ ಕಾಣಬೇಕಾದ ದೈವದ ನರ್ತನವನ್ನು ಶಾಲಾ ಕಾಲೇಜಿನ ವೇದಿಕೆಗಳಲ್ಲೂ ತಂದಿರುವುದಕ್ಕೆ ಕೆಲವರು ಆಕ್ರೋಶ…
ಮಂಗಳೂರು: ಮಂಗಳೂರು ನಗರದ ಕೊಟ್ಟಾರ ಚೌಕಿಯಲ್ಲಿ ಡಿ.3ರಂದು ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಗುರುವಾರ ಮೃತಪಟ್ಟಿದ್ದಾರೆ. ಬೆಂಗಳೂರಿನ ಕಂಪೆನಿಯೊಂದರಲ್ಲಿ ಇಂಜಿನಿಯರ್ ಆಗಿರುವ ಮೆಗಾ ರಂಜಿತ್ ಪೈ (34) ಮೃತಪಟ್ಟ ದುರ್ದೈವಿ. ಡಿ.3ರಂದು ಸಂಜೆ 6.35ಕ್ಕೆ ಕೊಟ್ಟಾರ ಚೌಕಿಯ ಬಳಿ ರಸ್ತೆ ದಾಟುತ್ತಿದ್ದಾಗ ಬಸ್ ಢಿಕ್ಕಿ ಹೊಡೆದಿತ್ತು. ಗಂಭೀರ ಗಾಯಗೊಂಡಿದ್ದ ಮೆಗಾ ರಂಜಿತ್ ಪೈ ಅವರನ್ನು ಚಿಕಿತ್ಸೆಗಾಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇವರು ಸಾವನ್ನಪ್ಪಿದ್ದಾರೆ. ಪ್ರಸ್ತುತ ಬೆಂಗಳೂರಿನಲ್ಲಿ ವಾಸವಾಗಿರುವ ಇವರು ಮಂಗಳೂರಿನಲ್ಲಿರುವ ತನ್ನ ತಾಯಿಯನ್ನು ನೋಡಲು ಬಂದಿದ್ದರು ಎನ್ನಲಾಗಿದೆ. ಈ ಬಗ್ಗೆ ಸಂಚಾರ ಪಶ್ಚಿಮ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬೆಂಗಳೂರು: ಬೆಳ್ಳಂಬೆಳಗ್ಗೆ ಬೆಂಗಳೂರು ಸೇರಿದಂತೆ ಹಲವು ಕಡೆ ಐಟಿ ದಾಳಿ ನಡೆಸಿದೆ ಅಂತ ತಿಳಿದು ಬಂದಿದೆ. ಸಂಜಯನಗರ, ಹೆಬ್ಬಾಳ, ಚಿಕ್ಕಬಳ್ಳಾಪುರ, ರಾಮನಗರ ಹಾಗೂ ಬಿಡದಿಯಲ್ಲಿರುವ ಉದ್ಯಮಿಗಳ ಮನೆಗಳ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ಹಲವು ಮಹತ್ವದ ಮಾಹಿತಿಗಳನ್ನು, ದಾಖಲೆಗಳನ್ನು ಕಲೆ ಹಾಕಿದ್ದಾರೆ ಎನ್ನಲಾಗಿದೆ.
ಬೆಂಗಳೂರು : 42 ಕೈದಿಗಳ ಬಿಡುಗಡೆಗೆ ರಾಜ್ಯಪಾಲರಿಗೆ ಶಿಫಾರಸ್ಸು ಮಾಡುವ ಕುರಿತು ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ. ಸಚಿವ ಸಂಪುಟ ಸಭೆ ಬಳಿಕ ಕಾನೂನು ಸಚಿವ ಜೆ,ಸಿ ಮಾಧುಸ್ವಾಮಿ ಮಾತನಾಡಿದ್ದು, ಗಣರಾಜ್ಯೋತ್ಸವದ ಹಿನ್ನೆಲೆ ಸನ್ನಡತೆ ಆಧಾರದ ಮೇಲೆ 42 ಕೈದಿಗಳ ಬಿಡುಗಡೆಗೆ ರಾಜ್ಯಪಾಲರ ಶಿಫಾರಸ್ಸು ಮಾಡಲು ನಿರ್ಧಾರ ಕೈಗೊಳ್ಳಲಾಯಿತು ಎಂದು ತಿಳಿಸಿದ್ದಾರೆ. ಈ ಮೂಲಕ ರಾಜ್ಯದ 42 ಕೈದಿಗಳಿಗೆ ಬಿಡುಗಡೆ ಭಾಗ್ಯ ಸಿಗಲಿದೆ. ಕ್ರೀಡಾ ಸಾಧಕರಿಗೆ ಸರ್ಕಾರಿ ಉದ್ಯೋಗ ಒಲಂಪಿಕ್ಸ್, ಕಾಮನ್ ವೆಲ್ತ್, ಏಷ್ಯನ್ ಗೇಮ್ಸ್ ಪದಕವಿಜೇತರಿಗೆ ಸರ್ಕಾರಿ ಹುದ್ದೆ ನೀಡುವ ತೀರ್ಮಾನಕ್ಕೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ವಿಧಾನಸೌಧದಲ್ಲಿ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಲಂಪಿಕ್ಸ್, ಕಾಮನ್ ವೆಲ್ತ್, ಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ ಸರ್ಕಾರಿ ಹುದ್ದೆ ನೀಡುವ ನಿರ್ಧಾರಕ್ಕೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಎಬಿಸಿ ಗ್ರೂಪ್ ನಡಿ ಹುದ್ದೆ ನೀಡಲಾಗುತ್ತದೆ ಎಂದು ಸಚಿವ ಕಾನೂನು ಸಚಿವ…
ಧಾರವಾಡ : ಯುವಕ ಯುವತಿ ಲಾಡ್ಜ್ ನಲ್ಲಿ ನೇಣಿಗೆ ಶರಣಾದ ಘಟನೆ ನವಲಗುಂದ ಪಟ್ಟಣದಲ್ಲಿ ನಿನ್ನೆ ನಡೆದಿದ್ದು, ಕಾರಣ ನಿಗೂಢವಾಗಿದೆ. ಬಸವರಾಜ ತಳವಾರ ಎಂಬ ನವಲಗುಂದ ತಾಲೂಕಿನ ಬೆಳವಟಗಿ ಗ್ರಾಮದ ಯುವಕ ತನ್ನ ಪ್ರೇಮಿ ( ಗರ್ಲ್ ಫ್ರೆಂಡ್) ಜೊತೆ ನಿನ್ನೆ ಲಾಡ್ಜ್ ಗೆ ತೆರಳಿದ್ದರು. ನಂತರ ಸಂಜೆ ವೇಳೆ ಇಬ್ಬರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಘಟನೆ ಕುರಿತು ಮಾಹಿತಿ ಕಲೆಹಾಕಿದ್ದಾರೆ. ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದ್ದು, ತನಿಖೆ ನಡೆಯುತ್ತಿದೆ.
ಉಳ್ಳಾಲ : ಯುವಕನೋರ್ವ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಬುಧವಾರದಂದು ರಾತ್ರಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದ ಓರ್ವ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ. ಬಂಧಿತ ಆರೋಪಿ ಅಡ್ಯಾರ್ ಪದವು ನಿವಾಸಿ ಮುನೀರ್ (27) ಎಂದು ಗುರುತಿಸಲಾಗಿದೆ. ಮುನೀರ್ ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದು ಅದೇ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿರುವುದಾಗಿ ವರದಿಯಾಗಿದೆ. ಇವರು ಪರಸ್ಪರ ಪ್ರೀತಿಸುತ್ತಿದ್ದು ಬುಧವಾರ ರಾತ್ರಿ ಮುನೀರ್ ಮಹಿಳೆಯನ್ನು ಭೇಟಿಯಾಗಿದ್ದ ವೇಳೆ ಹಿಂದೂ ಸಂಘಟನೆಗಳ ಕಾರ್ಯಕರ್ತರು ದಾಳಿ ನಡೆಸಿ ಪೊಲೀಸರಿಗೆ ದೂರು ನೀಡಿದ್ದಾರೆ ಎನ್ನಲಾಗುತ್ತಿದೆ. ಮಹಿಳೆ ನೀಡಿದ ದೂರಿನ ಮೇರೆಗೆ ಉಳ್ಳಾಲ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ ಎನ್ನಲಾಗಿದೆ
ಬೆಂಗಳೂರು: ಅಪಘಾತವಾಗಿರುವ ವಾಹನಗಳನ್ನ ಇನ್ನು ಮುಂದೆ ಸಂಚಾರಿ ಪೊಲೀಸ್ ಠಾಣೆಗಳ ಮುಂದೆ ತಿಂಗಳುಗಟ್ಟಲೇ ಇರಿಸಿಕೊಳ್ಳುವಂತಿಲ್ಲ. ತಪಾಸಣೆ ನೆಪದಲ್ಲಿ ಠಾಣೆಗಳ ಮುಂದೆ ವಾಹನ ಇರಿಸಿಕೊಳ್ಳುವುದು ಸರಿಯಲ್ಲ. ಆಯಕ್ಸಿಡೆಂಟ್ ಆದ ವಾಹನಗಳನ್ನ 24 ಗಂಟೆಯೊಳಗೆ ಅಧಿಕಾರಿಗಳಿಂದ ವರದಿ ತರಿಸಿಕೊಂಡು ಮಾಲೀಕರಿಗೆ ಹಿಂತಿರುಗಿಸಲಾಗುವುದು ನಗರ ಸಂಚಾರ ವಿಭಾಗದ ವಿಶೇಷ ಆಯುಕ್ತ ಎಂ.ಎ.ಸಲೀಂ ತಿಳಿಸಿದ್ದಾರೆ. ಅಪಘಾತ ಪ್ರಕರಣಗಳಲ್ಲಿ ವಾಹನಗಳನ್ನ ವಶಪಡಿಸಿಕೊಂಡು ಠಾಣೆಗಳ ಮುಂದೆ ನಿಲ್ಲಿಸಲಾಗುತ್ತಿದೆ. ಠಾಣೆಗಳ ಮುಂದೆ ಹೆಚ್ಚಿನ ಸಂಖ್ಯೆಯಲ್ಲಿ ವಾಹನ ನಿಲ್ಲಿಸಲಾಗುತ್ತಿದ್ದು ಇದರಿಂದ ಸೌಂದರ್ಯಕ್ಕೆ ಧಕ್ಕೆಯಾಗುತ್ತಿದೆ. ಹೀಗಾಗಿ ಆಕ್ಸಿಡೆಂಟ್ ಆಗಿರುವ ಅಥವಾ ಅಪಘಾತ ಮಾಡಿರುವ ವಾಹನಗಳನ್ನ ಆರ್ ಟಿಓ ಅಧಿಕಾರಿಗಳಿಂದ ತ್ವರಿತವಾಗಿ ತಪಾಸಣೆ ನಡೆಸಲು ಕ್ರಮ ಕೈಗೊಳ್ಳಲಾಗುವುದು.. ತಾಂತ್ರಿಕವಾಗಿ ವಾಹನಗಳಲ್ಲಿ ದೋಷವಿದೆಯಾ ಎಂಬುದನ್ನು ಪತ್ತೆ ಹಚ್ಚಿ ಅಧಿಕಾರಿಗಳು ವರದಿ ತರಿಸಿ ಬಳಿಕ ಸಂಬಂಧಪಟ್ಟ ಮಾಲೀಕರನ್ನ ಕರೆಯಿಸಿ ಅವರಿಂದ ಮುಚ್ಚಳಿಕೆ ಬರೆಯಿಸಿ ಹಿಂತಿರುಗಿಸಲಾಗುವುದು ಎಂದಿದ್ದಾರೆ. ನಗರದಲ್ಲಿ ಹಂಪ್ ಗಳಿಂದ ಆಯಕ್ಸಿಡೆಂಟ್ ಜಾಸ್ತಿ ಆಗ್ತಿತ್ತು.. ಹೀಗಾಗಿ ಎಲ್ಲೆಲ್ಲಿ ಅವೈಜ್ಞಾನಿಕ ಹಂಪ್‌ಗಳು ಹಾಗೂ ಅನಾವಶ್ಯಕ ಹಂಪ್ ಗಳಿದ್ದರೆ ತೆಗೆಯುವುದಕ್ಕೆ ಹೇಳಲಾಗಿದೆ. ಜೊತೆಗೆ…
ಬೆಳ್ತಂಗಡಿ : ಕಿಂಡಿ ಅಣೆಕಟ್ಟು ಕಾಮಗಾರಿಗೆ ಕಬ್ಬಿಣವನ್ನು ಸಾಗಿಸುತ್ತಿದ್ದ ಟಾಕ್ಟರ್ ಪಲ್ಟಿಯಾಗಿ ತೋಟಕ್ಕೆ ಬಿದ್ದು ಒಬ್ಬ ಕಾರ್ಮಿಕ ಸಾವನ್ನಪ್ಪಿದ್ದು ,ಇಬ್ಬರು ಗಂಭೀರ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯ ಬಂಗಾರ್ ಪಲ್ಕೆಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಚಿಕ್ಕಮಗಳೂರು ಮೂಲದ ಅಶೋಕ್ ಎಂದು ಗುರುತಿಸಲಾಗಿದೆ. ಮಲವಂತಿಗೆ ಗ್ರಾಮಪಂಚಾಯತ್ ವ್ಯಾಪ್ತಿಯ ದುರ್ಗಮ ಎಳನೀರು ಭಾಗದ ಬಂಗಾರ ಬಳಿಗೆ ಎಂಬಲ್ಲಿ 5 ಕೋ.ರೂ. ವೆಚ್ಚದಲ್ಲಿ ಕಿಂಡಿ ಅಣೆಕಟ್ಟು ನಿರ್ಮಾಣವಾಗುತ್ತಿದ್ದು ಇದರ ಕಾಮಗಾರಿಗೆಂದು ಕಬ್ಬಿಣದ ಸರಳು ಸಾಗಿಸಲಾಗುತ್ತಿತ್ತು. ಈ ದಾರಿ ಅತ್ಯಂತ ಕಡಿದಾಗಿದ್ದು ದುರ್ಗಮವಾಗಿದೆ. ಲಾರಿ ಚಾಲಕ ನಿಯಂತ್ರಣ ಕಳೆದುಕೊಂಡ ಟ್ರ್ಯಾಕ್ಟರ್ ಪಲ್ಟಿಯಾಗಿದೆ. ಈ ವೇಳೆ ಚಾಲಕ ಮತ್ತು ಮರ್ತೋರ್ವ ಪ್ರಾಣಾಪಾಯದಿಂದ ಪಾರಾಗಿದ್ದು ಹಿಂಬದಿ ಕುಳಿತಿದ್ದ ಕಾರ್ಮಿಕ ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸಾಗಿಸವ ವೇಳೆ ಮೃತಪಟ್ಟಿದ್ದಾರೆ.










