ಉಡುಪಿ: ಯುವಕನ ಮೇಲಿನ ಹಲ್ಲೆ ಮತ್ತು ಜೀವಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿ ನಿರಂತರ ನ್ಯಾಯಾಲಯಕ್ಕೆ ವಿಚಾರಣೆ ಹಾಜರಾಗದ ಎಸ್ಸೈ ಶಕ್ತಿ ವೇಲು ಮತ್ತು ಪೊಲೀಸ್ ನಿರೀಕ್ಷಕ ಶರಣಗೌಡ ವಿರುದ್ಧ ಉಡುಪಿ ಪ್ರಿನ್ಸಿಪಲ್ ಸಿವಿಲ್ ಜಡ್ಜ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ನ.28ರಂದು ಜಾಮೀನು ರಹಿತ ವಾರಂಟ್ ಜಾರಿಗೊಳಿಸಿ ಆದೇಶ ಹೊರಡಿಸಿದೆ. ಮಲ್ಪೆ ಪೊಲೀಸ್ ಠಾಣೆ ವ್ಯಾಪ್ತಿಯ ಹೂಡೆಯ ಹಿದಾಯತುಲ್ಲ (27) ಎಂಬವರ ಮನೆಗೆ ಎಸ್ಸೆ ಶಕ್ತಿವೇಲು ಮತ್ತು ಪೊಲೀಸ್ ನಿರೀಕ್ಷಕ ಶರಣಗೌಡ ಮತ್ತು ಏಳು ಮಂದಿಯ ಪೊಲೀಸ್ ತಂಡ 2021ರ ನ.29ರ ತಡರಾತ್ರಿ ಅಕ್ರಮವಾಗಿ ನುಗ್ಗಿ ಹಿದಾಯತುಲ್ಲಾ ಅವರಿಗೆ ಥಳಿಸಿ, ಕಾನೂನು ಬಾಹಿರವಾಗಿ ಬಂಧಿಸಿ ಠಾಣೆಗೆ ಕರೆದು ದೌರ್ಜನ್ಯ ಎಸಗಿದ್ದರೆಂದು ದೂರಲಾಗಿದೆ. ಅಲ್ಲದೆ ಅವ್ಯಾಚ್ಯ ಶಬ್ದಗಳಿಂದ ಬೈದು, ಎನ್‌ಕೌಂಟರ್ ಮಾಡುವುದಾಗಿ ಬೆದರಿಸಿ, ತನ್ನೊಪ್ಪಿಗೆ ಬರಹಕ್ಕೆ ಸಹಿ ಮಾಡಲು ನಿರಂತರವಾಗಿ ದೈಹಿಕ ಹಲ್ಲೆ ನಡೆಸಿರುವುದಾಗಿ ದೂರಲಾಗಿದೆ. ಈ ಬಗ್ಗೆ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳುವಂತೆ ಹಿದಾಯತುಲ್ಲಾ ಉಡುಪಿ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ದೂರನ್ನು ಮಾನ್ಯ…
Author: main-admin
ಬಂಟ್ವಾಳ : ಕತಾರ್ ನಲ್ಲಿ ನಡೆದ ಭೀಕರ ಅಪಘಾತದಲ್ಲಿ ಬಂಟ್ವಾಳ ಮೂಲದ ಯುವಕ ಮೃತಪಟ್ಟ ಘಟನೆ ನಡೆದಿದೆ. ಬಂಟ್ವಾಳ ಸಜಿಪದ ಚಟ್ಟೆಕ್ಕಲ್ ನಿವಾಸಿ ಫಹದ್ ಮೃತ ಯುವಕ. ಫಹದ್ ಕಳೆದ ಐದು ತಿಂಗಳ ಹಿಂದೆಯಷ್ಠೇ ಕತಾರ್ ಗೆ ಉದ್ಯೋಗದ ನಿಮಿತ್ತ ತೆರಳಿದ್ದ.ಅಲ್ಲಿ ಕೆಲಸ ಮಾಡುವ ಸ್ಥಳದಲ್ಲಿ ತನ್ನ ಮಾಲಕನ ಮಗನನ್ನು ರೆಸಾರ್ಟ್ ಗೆ ಬಿಟ್ಟು ಬರಲು ಕಾರಿನಲ್ಲಿ ತೆರಳಿದ್ದಾನೆ. ಕಾರಿನಲ್ಲಿ ಬಿಟ್ಟು ವಾಪಾಸ್ಸು ಬರುವಾಗ ಕಾರು ಪಲ್ಟಿಯಾಗಿ ಫಹದ್ ಗೆ ಗಂಭೀರವಾದ ಗಾಯಗಳಾಗಿದೆ. ತಕ್ಷಣ ಪಹದ್ ಗೆ ಆಸ್ಪತ್ರೆಗೆ ಸಾಗಿಸಲಾಗಿದೆ ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣವಾಗಿ ನುಜ್ಜು ಗುಜ್ಜಾಗಿದೆ.ಫಹದ್ ನಿಧನದಿಂದ ಕುಟುಂಬದ ರೋಧನ ಮುಗಿಲು ಮುಟ್ಟಿದೆ.
ಮಂಗಳೂರು : ಸುರತ್ಕಲ್‌ನ ಖಾಸಗಿ ಆಸ್ಪತ್ರೆಯೊಂದರಲ್ಲಿ ಮಹಿಳೆಯರು ಉಡುಪು ಬದಲಾಯಿಸುವ ಕೊಠಡಿಯಲ್ಲಿ ರಹಸ್ಯ ಕ್ಯಾಮರಾ ಇರಿಸಿ ದೃಶ್ಯಗಳನ್ನು ಸೆರೆ ಹಿಡಿದ ಆರೋಪದಲ್ಲಿ 21 ವರ್ಷದ ನರ್ಸಿಂಗ್ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ್ದಾರೆ. ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ನರ್ಸಿಂಗ್ ವಿದ್ಯಾರ್ಥಿ ಪವನ್ ಕುಮಾರ್ ಈ ಕೃತ್ಯವೆಸಗಿದ ಆರೋಪಿ. ಮೂಲತಃ ಕಲಬುರಗಿಯವನಾದ ಪವನ್ ಬಜಪೆಯಲ್ಲಿ ವಾಸವಾಗಿದ್ದ.ಆಸ್ಪತ್ರೆಗೆ ತಪಾಸಣೆಗೆ ಬಂದವರು ಸ್ಯಾನಿಂಗ್‌ಗೆ ಒಳಗಾಗುವ ಮುನ್ನ ಬಟ್ಟೆ ಬದಲಾಯಿಸಬೇಕಾಗುತ್ತದೆ. ಪವನ್ ಮಹಿಳೆಯರು ಬಟ್ಟೆ ಬದಲಾಯಿಸುವ ಕೂಠಡಿಯಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದು, ಸ್ಯಾನಿಂಗ್‌ಗೆ ಒಳಗಾಗಲು ಬಂದಿದ್ದ ಯುವತಿಯೊಬ್ಬರು ಉಡುಪು ಬದಲಾಯಿಸುವ ಮೊದಲು ಕೊಠಡಿಯನ್ನು ಸೂಕ್ತವಾಗಿ ಪರಿಶೀಲಿಸಿದಾಗ ಮೂಲೆಯಲ್ಲಿ ರಹಸ್ಯ ಕ್ಯಾಮರಾ ಇರುವುದು ಪತ್ತೆಯಾಗಿದೆ. ಕೂಡಲೇ ಅವರು ಈ ವಿಷಯವನ್ನು ವೈದ್ಯರ ಗಮನಕ್ಕೆ ತಂದಿದ್ದಾರೆ, ತನಿಖೆ ನಡೆಸಿದಾಗ ಪವನ್ ಕುಮಾರ್ ಕ್ಯಾಮರಾ ಇಟ್ಟಿರುವುದು ಪತ್ತೆಯಾಗಿದೆ. ಸುರತ್ಕಲ್ ಠಾಣೆಗೆ ಅವನ ವಿರುದ್ಧ ದೂರು ನೀಡಲಾಗಿದೆ.
ಪಡುಬಿದ್ರಿ: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಎನ್‌ಐಟಿಕೆ ಸುರತ್ಕಲ್ ಟೋಲ್ ಪ್ಲಾಜಾ ಹೆಜಮಾಡಿ ಟೋಲ್‌ಪ್ಲಾಜಾದ ಜತೆಗೆ ವಿಲೀನಗೊಂಡಿದ್ದರೂ, ಹೆಚ್ಚುವರಿ ಟೋಲ್ ಸಂಗ್ರಹ ಸದ್ಯಕ್ಕಿಲ್ಲ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತಿಳಿಸಿದೆ. ಡಿ.1ರಿಂದ ಎನ್‌ಐಟಿಕೆ- ಸುರತ್ಕಲ್ ಟೋಲ್‌ಪ್ಲಾಜಾದಲ್ಲಿ ಶುಲ್ಕ ವಸೂಲಿ ಸ್ಥಗಿತಗೊಂಡಿದೆ. ಸುರತ್ಕಲ್‌ನ ಶುಲ್ಕವನ್ನು ಸೇರಿಸಿ ಹೆಜಮಾಡಿಯಲ್ಲಿ ಟೋಲ್ ಸಂಗ್ರಹಕ್ಕೆ ಪರಿಷ್ಕೃತ ದರವನ್ನು ಡಿ.4ರಿಂದ ಜಾರಿಗೊಳಿಸುವ ಬಗ್ಗೆ ನವಯುಗ ಸಂಸ್ಥೆ ಅಧಿಕೃತ ಪ್ರಕಟಣೆ ಇತ್ತೀಚೆಗೆ ಹೊರಡಿಸಿತ್ತು. ಆದರೆ ಹೆಚ್ಚುವರಿ ಟೋಲ್ ವಸೂಲಿಗೆ ಸರ್ಕಾರದಿಂದ ಈವರೆಗೆ ಅವಕಾಶ ಸಿಕ್ಕಿಲ್ಲ ಎಂದು ಎನ್‌ಎಚ್‌ಐ ಮಂಗಳೂರು ಯೋಜನಾ ನಿರ್ದೇಶಕ ಎಚ್.ಎಸ್.ಲಿಂಗೇ ಗೌಡ ತಿಳಿಸಿದ್ದಾರೆ.
ಮಂಗಳೂರು: ಕಂಕನಾಡಿಯ ಸುಲ್ತಾನ್ ಗೋಲ್ಡ್ ಜ್ಯುವೆಲ್ಲರಿಯಲ್ಲಿ ನಡೆದ ನೈತಿಕ ಪೊಲೀಸ್ ಗಿರಿ ಪ್ರಕರಣ ಸಂಬಂಧ ಮೂರು ಪ್ರತ್ಯೇಕ ಪ್ರಕರಣ ದಾಖಲಿಸಿದ ಕದ್ರಿ ಠಾಣಾ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಯುವತಿ ತಾಯಿ, ಹಲ್ಲೆಗೊಳಗಾದ ಯುವಕ ಮತ್ತು ಸುಲ್ತಾನ್ ಜ್ಯುವೆಲ್ಲರಿ ಮಾಲೀಕರ ದೂರು ಆಧಾರಿಸಿ ಎಫ್‌ಐಆರ್ ದಾಖಲಾಗಿದೆ. ಮಗಳ ಮೇಲೆ ದೌರ್ಜನ್ಯ ಹಾಗೂ ಬೆದರಿಕೆ ಒಡ್ಡಿದ ಬಗ್ಗೆ ಯುವತಿ ತಾಯಿ ದೂರು ನೀಡಿದ್ದಾರೆ. ಹಲ್ಲೆ ನಡೆಸಿ ಗಲಭೆ ಸೃಷ್ಟಿಸಿದ ಬಗ್ಗೆ ಯುವಕ ದೂರು ನೀಡಿದ್ದು, ಜ್ಯುವೆಲ್ಲರಿಗೆ ಅಕ್ರಮ ಪ್ರವೇಶ ಮಾಡಿ ದಾಂಧಲೆ ನಡೆಸಿದ ಬಗ್ಗೆ ಜ್ಯುವೆಲ್ಲರಿ ಆಡಳಿತ ದೂರು ದಾಖಲಿಸಿದೆ. ಸುಲ್ತಾನ್ ಜ್ಯುವೆಲ್ಲರಿಯಲ್ಲಿ ಸೇಲ್ಸ್ ಎಕ್ಸಿಕ್ಯೂಟಿವ್ ಆಗಿರುವ ಮಂಗಳೂರಿನ ಲುಕ್ಮಾನ್ ಉಲ್ ಹಕೀಂ ಮೇಲೆ ಹಲ್ಲೆ ನಡೆಸಲಾಗಿತ್ತು. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಯುವತಿಯ ಪೋಷಕರ ಜೊತೆ ಸುಲ್ತಾನ್ ಜ್ಯುವೆಲ್ಲರಿಗೆ ಬಂದಿದ್ದ ಯುವತಿ ಪ್ರಿಯಕರ ಚೇತನ್ ಎಂಬಾತ ಹಲ್ಲೆ ನಡೆಸಿದ್ದಾಗಿ ಲುಕ್ಮಾನ್ ದೂರು ನೀಡಿದ್ದಾನೆ. ಈ ವೇಳೆ ಪೊಲೀಸರ ಜೊತೆ ಸ್ಥಳಕ್ಕೆ…
ಉಡುಪಿ: ಮ್ಯೂಚುವಲ್ ಫಂಡ್ ಟ್ರೇಡಿಂಗ್‌ನಲ್ಲಿ ಹಣ ಹೂಡಿಕೆ ಮಾಡಿದರೆ ಹಣ ದ್ವಿಗುಣಗೊಳಿಸುವ ಆಮಿಷವೊಡ್ಡಿ ವ್ಯಕ್ತಿಯೊಬ್ಬರಿಗೆ ಆನ್‌ಲೈನ್ ವಂಚಕರು 78,500 ರೂ.ಗಳನ್ನು ವಂಚಿಸಿದ ಘಟನೆ ನಡೆದಿದೆ. ಅನುಷ್ ರವಿಶಂಕರ್ ವಂಚನೆಗೆ ಒಳಗಾದವರು. ಅನುಷ್ ಅವರಿಗೆ ಅಪರಿಚಿತರು 9395641735 ಸಂಖ್ಯೆಯಿಂದ ಕರೆ ಮಾಡಿ ಮ್ಯೂಚುವಲ್ ಫಂಡ್ ಟ್ರೇಡಿಂಗ್‌ನಲ್ಲಿ ಹಣ ಹೂಡಿಕೆ ಮಾಡಿದಲ್ಲಿ ಹಣ ದ್ವಿಗುಣಗೊಳಿಸಿ ನೀಡುವುದಾಗಿ ಆಮಿಷವೊಡ್ಡಿದ್ದಾರೆ. ಅವರ ಮಾತನ್ನು ನಂಬಿದ ಅನುಷ್ ಗೂಗಲ್ ಪೇ ಮುಖಾಂತರ ಆ ವ್ಯಕ್ತಿ ತಿಳಿಸಿದ ಬ್ಯಾಂಕ್ ಖಾತೆಗೆ ಕ್ರಮವಾಗಿ 1000 ರೂ., 3000 ರೂ., 3000 ರೂ. ಮತ್ತು 6500 ರೂ.ಗಳನ್ನು ಹೂಡಿಕೆ ಮಾಡಿದ್ದಾರೆ. ಆ ಬಳಿಕ ಮತ್ತೆ ಸೆಕ್ಯೂರಿಟಿ ಡೆಪಾಸಿಟ್, ಫಿಕ್ಸ್ ಡೆಪಾಸಿಟ್, ರಿಪಂಡ್ ಸೆಕ್ಯೂರಿಟಿ ಡೆಪಾಸಿಟ್‌ಗಳಿಗೂ ಹಣ ಪಾವತಿ ಮಾಡುವಂತೆ ಅಪರಿಚಿತ ವ್ಯಕ್ತಿ ತಿಳಿಸಿದ್ದು, ಆತ ಹೇಳಿದಂತೆ 9500 ರೂ., 22500 ರೂ., 14500 ರೂ., 18500 ರೂ.ಗಳನ್ನು ಪಾವತಿಸಿದ್ದಾರೆ. ಹೀಗೆ ಅನುಷ್ ಅವರು ಹಂತ ಹಂತವಾಗಿ ಒಟ್ಟು 78,500 ರೂ.ಗಳನ್ನು ಆತ ಹೇಳಿದಂತೆಯೇ ಪಾವತಿ…
ಮಂಗಳೂರು: ಕಟೀಲು ಮೇಳದ ಚೌಕಿ ಸಹಾಯಕನೋರ್ವ ಯಕ್ಷಗಾನ ನಡೆಯುತ್ತಿದ್ದ ಸ್ಥಳವಾದ ಬಿಸಿರೋಡಿನ ಪಲ್ಲಮಜಲು ಎಂಬಲ್ಲಿ ಹೃದಯಾಘಾತದಿಂದ ನಿಧನರಾದ ಘಟನೆ ನಡೆದಿದೆ. ಕಟೀಲು ಮೇಳದ ಐದನೇ ಮೇಳದ ಚೌಕಿ ಸಹಾಯಕ ಮಣಿನಾಲ್ಕೂರು ಗ್ರಾಮದ ಕೊಡಂಗೆ ನಿವಾಸಿ ಅಚ್ಯುತ ನಾಯಕ್ ( 45) ಅವರು ಹೃದಯ ಘಾತದಿಂದ ನಿಧನರಾಗಿದ್ದಾರೆ.ಪ್ರಸ್ತುತ ಕಟೀಲು ಮೇಳವು ಕಾಲಮಿತಿ ಯಕ್ಷಗಾನವಾಗಿದ್ದು, ರಾತ್ರಿ ಗಂಟೆಗೆ 1.ರ ಸುಮಾರಿಗೆ ಯಕ್ಷಗಾನ ಮುಗಿದು ಪರಿಕರಗಳನ್ನು ಜೋಡಿಸುತ್ತಿದ್ದ ವೇಳೆ ಏಕಾಏಕಿ ಅಸ್ವಸ್ಥತೆಗೊಂಡಿದ್ದಾರೆ. ತಕ್ಷಣ ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ಸಾಗಿಸಿ ದಾಗ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.ಕಳೆದ ಹಲವು ವರ್ಷಗಳಿಂದ ಕಟೀಲು ಮೇಳದ ಚೌಕಿ ಸಹಾಯಕರಾಗಿ ಕೆಲಸ ನಿರ್ವಹಿಸುತ್ತಿದ್ದ ಅವರು, ಈ ಹಿಂದೆ ಸರಪಾಡಿ ಸೇರಿದಂತೆ ಹಲವೆಡೆ ಸಣ್ಣ ಹೋಟೆಲ್ ನಡೆಸುತ್ತಿದ್ದರು, ಜೊತೆಗೆ ಅಡುಗೆ ಕೆಲಸಕ್ಕೂ ಹೋಗುತ್ತಿದ್ದರು ಎನ್ನಲಾಗಿದೆ.
ಬೆಳ್ತಂಗಡಿ: ಅಪರೂಪದ ಸಾರಿಬಳ ಹಾವೊಂದು ಕೋಳಿ ಮರಿಯನ್ನು ನುಂಗಲು ಪ್ರಯತ್ನಿಸಿದ ಗಟನೆ ಬೆಳ್ತಂಗಡಿಯ ಕೊಯ್ಯೂರು ಗ್ರಾಮದ ಅರಂತೊಟ್ಟು ಎಂಬಲ್ಲಿ ನಡೆದಿದ್ದು, ಇದನ್ನು ಉರಗ ಪ್ರೇಮಿ ಸ್ನೇಕ್ ಅಶೋಕ್ ಸುರಕ್ಷಿತವಾಗಿ ಹಿಡಿದು, ರಕ್ಷಿಸಿ ಕಾಡಿಗೆ ಬಿಟ್ಟಿದ್ದಾರೆ. ಕೊಯ್ಯೂರು ಗ್ರಾಮದ ಅರಂತೊಟ್ಟು ನಿವಾಸಿ ದೀಪಕ್ ಎಂಬುವರ ಮನೆಯಲ್ಲಿ ಸುಮಾರು 5 ಅಡಿ ಉದ್ದದ ಸಾರಿಬಳ ಹಾವು ಕೋಳಿಮರಿಯನ್ನು ನುಂಗುತ್ತಿದ್ದ ಸಮಯ ಅದನ್ನು ಕಂಡ ಮನೆಯವರು ಉರಗಮಿತ್ರ ಸ್ನೇಕ್ ಅಶೋಕ್ ಲಾಯಿಲ ಅವರಿಗೆ ಮಾಹಿತಿ ನೀಡಿದ್ದಾರೆ. ಅವರು ತಕ್ಷಣ ಅವರು ಆಗಮಿಸಿ ರಕ್ಷಿಸಿದ್ದಾರೆ. ಫೋರೆಸ್ಟನ್ಸ್ ಬೆಕ್ಕು ಹಾವು ಅಥವಾ ಸಾರಿಬಳ ಎಂದೇ ಕರೆಯಲ್ಪಡುವ ಈ ಹಾವು ಹೆಚ್ಚಾಗಿ ಗುಜರಾತ್, ಕೇರಳ ಹಾಗೂ ಕರ್ನಾಟಕದ ಪಶ್ಚಿಮ ಘಟ್ಟ ಪ್ರದೇಶದ ಕಾಡುಗಳಲ್ಲಿ ಕಂಡು ಬರುತ್ತದೆ. ಇವು ಜನವಸತಿ ಪ್ರದೇಶದಲ್ಲಿ ಕಂಡುಬರುವುದು ತೀರಾ ವಿರಳ. ಕೊಯ್ಯೂರಿನಲ್ಲಿ ಈ ಪ್ರಭೇದದ ಹಾವು ಕಂಡುಬಂದಿದೆ. ತನ್ನ 11 ವರ್ಷಗಳ ಹಾವು ಹಿಡಿಯುವ ಸೇವೆಯಲ್ಲಿ ಇದುವರೆಗೆ ಬೂದು ಬಣ್ಣದ ಸಾರಿಬಾಳ ಎರಡು ಬಾರಿ ಹಾಗೂ ತಿಳಿ…
ಬೆಂಗಳೂರು: ಕರ್ನಾಟಕ-ಮಹಾರಾಷ್ಟ್ರ ರಾಜ್ಯಗಳ ನಡುವೆ ಗಡಿ ವಿವಾದ ವಿಚಾರವಾಗಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ಮಹಾರಾಷ್ಟ್ರದಲ್ಲಿರುವ ಕನ್ನಡಿಗರ ರಕ್ಷಣೆಗೆ ಸರ್ಕಾರ ಸಿದ್ಧವಾಗಿದೆ ಎಂದು ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಬಹಳ ವರ್ಷದಿಂದ ಗಡಿ ವಿವಾದ ಮಾಡಿಕೊಂಡು ಬಂದಿದ್ದಾರೆ. ಕರ್ನಾಟಕ- ಮಾಹಾರಾಷ್ಟ್ರ ಜನರ ನಡುವೆ ಸಾಮರಸ್ಯ ಇದೆ. ಸುಪ್ರೀಂಕೋರ್ಟ್ ನಲ್ಲೂ ನಮ್ಮ ಪರ ತೀರ್ಪು ಬರುವ ವಿಶ್ವಾಸವಿದೆ. ಜನರ ರಕ್ಷಣೆಗೆ ನಾವು ಬದ್ಧವಾಗಿದ್ದೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಇನ್ನು ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದದಲ್ಲಿ ಮತ್ತೆ ಕ್ಯಾತೆ ತೆಗೆದಿರುವ ಮಹಾರಾಷ್ಟ್ರದ ಎಂ.ಇ.ಎಸ್. ಮಹಾರಾಷ್ಟ್ರ ರಾಜಕಾರಣಿಗಳ ವಿರುದ್ಧ ಕರವೇ ಕಿಡಿಕಾರಿದ್ದು, ಇಂದು ಬೆಳಗಾವಿಯ ಚೆನ್ನಮ್ಮ ವೃತ್ತದಲ್ಲಿ ಬಹಿರಂಗ ಸಭೆ ನಡೆಸಲಿದೆ. ಇಂದು ಕರ್ನಾಟಕ ರಕ್ಷಣಾ ವೇದಿಕೆ ಬಹಿರಂಗ ಸಭೆ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಬೆಳಗಾವಿ ನಗರದಾದ್ಯಂತ ಪೊಲೀಸ್ ಬಿಗ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಪೊಲೀಸ್ ಆಯುಕ್ತ ಡಾ. ಬೋರಲಿಂಗಯ್ಯ ನೇತೃತ್ವದಲ್ಲಿ ಭದ್ರತೆ ಕೈಗೊಳ್ಳಲಾಗಿದೆ. ಭದ್ರತೆಗಾಗಿ ಡಿಸಿಪಿ, ನಾಲ್ವರು ಸಿಪಿಐ, 10 ಪಿಎಸ್ ಐ, 12…
ಉಡುಪಿ : ಜಿಲ್ಲೆಯಲ್ಲೂ ಧರ್ಮ ಸಂಘರ್ಷ ಶುರುವಾಗಿದ್ದು, ಕುಂದಾಪುರ ತಾಲೂಕಿನಲ್ಲಿ ಎರಡು ಮಹತ್ವದ ಜಾತ್ರೆಗಳಲ್ಲಿ ಅನ್ಯ ಧರ್ಮೀಯ ವ್ಯಾಪಾರಿಗಳಿಗೆ ಅವಕಾಶ ನೀಡಬಾರದೆಂದು ಹಿಂದೂ ಸಂಘಟನೆಗಳು ಆಗ್ರಹಿಸಿದ್ದಾರೆ. ಜಿಲ್ಲೆಯಾದ್ಯಂತ ದಿನದಿಂದ ದಿನಕ್ಕೆ ಭಯೋತ್ಪಾದನೆ, ಲವ್ ಜಿಹಾದ್ ನಂತಹ ಪ್ರಕರಣ ಹೆಚ್ಚಿರುವ ಕಾರಣಕ್ಕೆ ಹಿಂದೂ ಸಂಘಟನೆಗಳು ಈ ರೀತಿಯ ಆಕ್ರೋಶ ವ್ಯಕ್ತಪಡಿಸಿದ್ದು, ಹಿಂದೂ ಸಂಘಟನೆಗಳ ಬೇಡಿಕೆಗೆ ವ್ಯವಸ್ಥಾಪನಾ ಸಮಿತಿ ಸಮ್ಮತಿಸುವ ಸಾಧ್ಯತೆಯಿದೆ ಹಾಗಾಗಿ ಜಿಲ್ಲೆಯ ಪ್ರಸಿದ್ದ ಕೋಟೇಶ್ವರದ ಕೋಡಿ ಹಬ್ಬ & ಉಪ್ಪಂದ ಜಾತ್ರೆಗಳು ಡಿಸೆಂಬರ್ 8 -9 ರಂದು ಶುರುವಾಗಲಿದ್ದು, ಈ ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ನೀಡದಂತೆ ಹಿಂದೂ ಪರ ಸಂಘಟನೆಗಳಾದ ವಿಶ್ವ ಹಿಂದೂ ಪರಿಷತ್, ಭಜರಂಗದಳ ಮನವಿ ಮಾಡಲಾಗಿದೆ. ಇನ್ನು ಉಪ್ಪುಂದದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲೂ ಧರ್ಮ ಸಂಘರ್ಷ ಶುರುವಾಗಿದೆ. ಡಿಸೆಂಬರ್ 9.10. 11ರಂದು ನೆರವೇರಲಿರುವ ಜಾತ್ರೆಯಲ್ಲಿ ದೇವಸ್ಥಾನದ ಆವರಣದಲ್ಲಿ ಅನ್ಯಧರ್ಮೀಯರ ವ್ಯಾಪಾರಕ್ಕೆ ಅವಕಾಶವಿಲ್ಲ.ಭಜರಂಗದಳ, ವಿಶ್ವ ಹಿಂದೂ ಪರಿಷತ್, ಹಿಂದೂ ಜಾಗರಣ ವೇದಿಕೆಯ ಒತ್ತಾಯದ ಮೇರೆಗೆ ಹಿಂದೂ ವ್ಯಾಪಾರಿಗಳಿಗೆ ಮಾತ್ರ…










