ಸುಬ್ರಹ್ಮಣ್ಯ: ಭಾರೀ ಮಳೆ ಸುರಿಯುತ್ತಿರುವ ಸುಬ್ರಹ್ಮಣ್ಯ ಪರಿಸರದಲ್ಲಿ ಗುಡ್ಡ ಕುಸಿದು ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಪರ್ವತಮುಖಿ ನಿವಾಸಿ ಮೂಲತಃ ಪಂಜದ ಕರಿಮಜಲು ಕುಸುಮಾಧರ ಅವರ ಮನೆಯ ಮೇಲೆ ಗುಡ್ಡ ಕುಸಿದಿದ್ದು, ಅವರ ಮಕ್ಕಳಾದ ಶ್ರುತಿ (11) ಮತ್ತು ಜ್ಞಾನಶ್ರೀ (6) ಮಣ್ಣಿನಡಿ ಸಿಲುಕಿ ಕೊಂಡಿದ್ದರು. ಜೆಸಿಬಿ ಮೂಲಕ ಮಣ್ಣು ತೆರವು ಮಾಡಿ ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಪರೀಕ್ಷಿಸಿದ ವೈದ್ಯರು, ಮಕ್ಕಳು ಅದಾಗಲೇ ಮೃತಪಟ್ಟಿರುವುದಾಗಿ ತಿಳಿಸಿದರು. ಮನೆಯಲ್ಲಿ ಒಟ್ಟು ಐವರು ಇರುತ್ತಿದ್ದರು. ಘಟನೆ ನಡೆದ ಸಂದರ್ಭ ತಂದೆ ಅಂಗಡಿಗೆ ಹೋಗಿದ್ದರು. ತಾಯಿ ರೂಪಾಶ್ರೀ ಮತ್ತು ಮಕ್ಕಳು ಮಾತ್ರ ಮನೆಯಲ್ಲಿದ್ದರು.
Author: main-admin
ಭಟ್ಕಳ: ಮಂಗಳವಾರ ಬೆಳಿಗ್ಗೆ ಮನೆಯ ಮೇಲೆ ಗುಡ್ಡ ಕುಸಿದು ಬಿದ್ದು ಅವಶೇಷಗಳಡಿ ನಾಲ್ವರು ಸಿಲುಕಿಕೊಂಡಿರುವ ಘಟನೆ ತಾಲ್ಲೂಕಿನ ಮುಟ್ಟಳ್ಳಿಯಲ್ಲಿ ನಡೆದಿದೆ. ಮನೆಯಲ್ಲಿದ್ದ ನಾರಾಯಣ ನಾಯ್ಕ (48), ಅವರ ಪುತ್ರಿ ಲಕ್ಷ್ಮಿ ನಾಯ್ಕ (33), ಪುತ್ರ ಅನಂತ ನಾರಾಯಣ ನಾಯ್ಕ (32) ಹಾಗೂ ಸಂಬಂಧಿ ಪ್ರವೀಣ ಬಾಲಕೃಷ್ಣ ನಾಯ್ಕ (20) ಮಣ್ಣಿನಲ್ಲಿ ಸಿಲುಕಿಕೊಂಡಿದ್ದಾರೆ. ಇನ್ನು ಗುಡ್ಡದ ಮೇಲಿನಿಂದ ಭಾರಿ ಪ್ರಮಾಣದಲ್ಲಿ ಚಿರೆಕಲ್ಲು ಮಿಶ್ರಿತ ಮಣ್ಣು ಮನೆಯ ಮೇಲೆ ಕುಸಿದಿದ್ದು, ಮನೆ ಸಂಪೂರ್ಣ ನಾಶವಾಗಿದ್ದು, ರಕ್ಷಣಾ ಕಾರ್ಯ ಮುಂದುವರೆದಿದೆ.
ದ.ಕ ಜಿಲ್ಲೆಯ ವಿವಿಧ ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿದೆ. ಅದರಲ್ಲೂ ಸುಬ್ರಹ್ಮಣ್ಯ ಕಲ್ಮಕಾರು , ಕೊಲ್ಲ ಮೊಗ್ರು , ಹರಿಹರ , ಬಾಳುಗೋಡು ಐನಕಿದು ಗ್ರಾಮದಲ್ಲಿ ಸೋಮವಾರ ಸಂಜೆ ಭಾರೀ ಮಳೆಯಾಗಿದ್ದು, ಜಳಪ್ರಳಯವೇ ಸಂಭವಿಸಿದೆ. ಭಾರೀ ಮಳೆ ಮುಂದುವರಿದಿದ್ದು, ನದಿ , ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಸುಳ್ಯ ಹಾಗೂ ಕಡಬ ತಾಲೂಕಿನ ಎಲ್ಲಾ ಅಂಗನವಾಡಿ, ಶಾಲಾ ಕಾಲೇಜು ಗಳಿಗೆ ಆ. 2 ರಂದು ಜಿಲ್ಲಾಧಿಕಾರಿ ಡಾ. ಕೆವಿ . ರಾಜೇಂದ್ರ ರಜೆ ಘೋಷಣೆ ಮಾಡಿದ್ದಾರೆ.ತಾಲೂಕಿನ ಹಲವೆಡೆ ಭೂಕುಸಿತ ಸಂಭವಿಸಿದ್ದು, ಭಾರೀ ಮಳೆಯಿಂದ ದರ್ಪಣ ತೀರ್ಥ ನದಿ, ಆದಿ ಸುಬ್ರಹ್ಮಣ್ಯ ಕ್ಷೇತ್ರದ ಒಳಗೆ ಪ್ರವೇಶಿತು.ಮಳೆಯ ಭೀಕರತೆಗೆ ಕಲ್ಮಕಾರು , ಕೊಲ್ಲ ಮೊಗ್ರು , ಹರಿಹರ , ಬಾಳುಗೋಡು ಈ ನಾಲ್ಕು ಗ್ರಾಮಗಳು ಸಂಪೂರ್ಣ ಸಂಪರ್ಕ ಕಡಿತಗೊಂಡಿದೆ.
ಕಾಸರಗೋಡು:ಮನೆಯ ಟೆರೇಸ್ ನಲ್ಲಿ ಗಾಂಜಾ ಗಿಡಗಳನ್ನು ಬೆಳೆಸಿದ್ದ ಮಂಗಳೂರಿನ ಕಾಲೇಜೊಂದರ ವಿದ್ಯಾರ್ಥಿಯನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ. ಬೇಕೂರು ಕನ್ನಡಿ ಪಾರೆಯ ನಜೀಬ್ ಮೆಹಫೂಜ್ (22) ಬಂಧಿತ. ಕುಂಬಳೆ ಪೊಲೀಸರಿಗೆ ಲಭಿಸಿದ ಖಚಿತ ಮಾಹಿತಿಯಂತೆ ತಪಾಸಣೆ ನಡೆಸಲಾಗಿದೆ. ಕಿದೂರಿನ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದ ಈತ ಟೆರೇಸ್ ನಲ್ಲಿ ಗಾಂಜಾ ಗಿಡ ಗಳನ್ನು ಬೆಳೆಸಿದ್ದನು. 20 ಲೀಟರ್ ನೀರಿನ ಬಾಟಲಿಯ ಮೇಲ್ಭಾಗವನ್ನು ಕತ್ತರಿಸಿ ಅದರಲ್ಲಿ ಮಣ್ಣು ತುಂಬಿಸಿ ಗಿಡಗಳನ್ನು ಬೆಳೆಸಲಾಗಿದೆ. ಹೀಗೆ ಮೂರು ಗಿಡಗಳನ್ನು ಪತ್ತೆ ಹಚ್ಚಲಾಗಿದೆ .ಈತ ಸ್ವಂತ ಬಳಕೆ ಅಲ್ಲದೆ ಮಾರಾಟಕ್ಕಾಗಿ ಗಾಂಜಾ ಗಿಡ ಗಳನ್ನು ಬೆಳೆಸಿದ್ದ ಎಂದು ತನಿಖೆಯಿಂದ ತಿಳಿದು ಬಂದಿದೆ.
ಮಂಗಳೂರು: ದಕ್ಷಿಣಕನ್ನಡದಲ್ಲಿ ಸರಣಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಜಿಪಿ ಪ್ರವೀಣ್ ಸೂದ್ ಪ್ರತಿಕ್ರಿಯೆ ನೀಡಿದ್ದಾರೆ. ಜಿಲ್ಲೆಯಲ್ಲಿ ಪೊಲೀಸ್ ಬಂದೋಬಸ್ತ್ ಕಡಿಮೆಯಿದೆ. ಅದಕ್ಕೆ ಮೊದಲು ಅದನ್ನು ಹೆಚ್ಚಿಸಬೇಕು ಎಂದು ಮಂಗಳೂರು ಕಮಿಷನರ್ ಕಚೇರಿಯಲ್ಲಿ ಡಿಜಿಪಿ ಪ್ರವೀಣ್ ಸೂದ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹತ್ತು ದಿನಗಳಲ್ಲಿ ಮೂರು ಕೊಲೆ ಪ್ರಕರಣಗಳು ನಡೆದಿವೆ. ಮಸೂದ್ ಕೊಲೆ ಪ್ರಕರಣಲ್ಲಿ ಎಂಟು ಜನರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ್ದೇವೆ. ಪ್ರವೀಣ್ ನೆಟ್ಟಾರು ಪ್ರಕರಣದಲ್ಲಿ ಇಬ್ಬರು ಅರೆಸ್ಟ್ ಆಗಿದ್ದಾರೆ. ತನಿಖೆ ಮುಂದುವರಿದಿದೆ. ಮುಂದಿನ ದಿನಗಳಲ್ಲಿ ಉಳಿದ ಆರೋಪಿಗಳನ್ನು ಪತ್ತೆ ಮಾಡುತ್ತೇವೆ. ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದ್ದಾರೆ.ಇನ್ನು ಫಾಝಿಲ್ ಹತ್ಯೆಯ ಬಗ್ಗೆ ತನಿಖೆ ನಡೆಸಿದ್ದೇವೆ. ಈ ಸಂಬಂಧ ಆರೋಪಿಗಳ ಸುಳಿವು ಸಿಕ್ಕಿದೆ. ಕೃತ್ಯಕ್ಕೆ ಬಳಸಿದ ಕಾರು ಪತ್ತೆಯಾಗಿದೆ. ಅದರಲ್ಲಿ ಓರ್ವನನ್ನು ಬಂಧಿಸಲಾಗಿದೆ ಎಂದರು.
ಬೆಂಗಳೂರು : ಬಿಜೆಪಿ ಕಾರ್ಯಕರ್ತ ಪ್ರವೀಣ್ ನಿಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಈ ಪ್ರಕರಣಕ್ಕೆ ಸಂಬಂಧಿಸದಂತೆ ಇದುವರೆಗೂ ನಾಲ್ವರು ಆರೋಪಿಗಳನ್ನ ಬಂಧಿಸಲಾಗಿದೆ. ಖಚಿತ ಮಾಹಿತಿ ಆಧರಿಸಿ ಅಖಾಡಕ್ಕೆ ಇಳಿದಿದ್ದ ಪೊಲೀಸರ ಸ್ಪೆಷಲ್ ಟೀಂ, ಮಂಗಳೂರಿನಿಂದ ಬೆಂಗಳೂರಿಗೆ ಬಂದಿದ್ದು, ಬೆಂಗಳೂರಿನಲ್ಲಿ ಆರೋಪಿಗಳನ್ನ ಹೆಡೆಮುರಿ ಕಟ್ಟಿದ್ದಾರೆ. ಈ ಮೂಲಕ ಜಾಕೀರ್ ಮತ್ತು ಶಫೀಕ್ ಬಳಿಕ ಮತ್ತಿಬ್ಬರು ಆರೋಪಿಗಳನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಆಗಸ್ಟ್ 5 ರ ವರೆಗೆ ನಿಷೇಧಾಜ್ಞೆ ಮುಂದುವರಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಜೆ 6 ಗಂಟೆಯಿಂದ ಬೆಳಗ್ಗೆ 6 ರವರೆಗೆ ವ್ಯಾಪಾರ ವಹಿವಾಟು ಮತ್ತು ವಾಹನ ಸಂಚಾರಕ್ಕೆ ವಿಧಿಸಲಾಗಿದ್ದ ನಿರ್ಬಂಧವನ್ನು ಎರಡು ದಿನ ವಿಸ್ತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ತಿಳಿಸಿದ್ದಾರೆ. ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಸೆಕ್ಷನ್ 144ರ ಅನ್ವಯ ವಿಧಿಸಿದ್ದ ನಿಷೇಧಾಜ್ಞೆಯನ್ನು ಆಗಸ್ಟ್ 5 ರ ಬೆಳಿಗ್ಗೆ 6 ಗಂಟೆಯವರೆಗೆ ವಿಸ್ತರಿಸಲಾಗಿದೆ. ಈ ಬಗ್ಗೆ ನಗರ ಪೊಲೀಸ್ ಸಯುಕ್ತ ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ.
ನವದೆಹಲಿ: ಎಲ್ಪಿಜಿ ಸಿಲಿಂಡರ್ಗಳ ಹೊಸ ದರಗಳನ್ನು (ಎಲ್ಪಿಜಿ ಬೆಲೆ ಹೊಸ) ಇಂದು ಬಿಡುಗಡೆ ಮಾಡಲಾಗಿದೆ. ಇಂದಿನಿಂದ, ಎಲ್ಪಿಜಿ ಸಿಲಿಂಡರ್ಗಳು ಅಗ್ಗವಾಗಿವೆ. ಇಂಡಿಯನ್ ಆಯಿಲ್ ಇಂದು ಅಂದರೆ ಆಗಸ್ಟ್ 1 ರಂದು ಬಿಡುಗಡೆ ಮಾಡಿದ ಹೊಸ ದರದ ಪ್ರಕಾರ, ಎಲ್ಪಿಜಿ ಸಿಲಿಂಡರ್ ಬೆಲೆಯನ್ನು 36 ರೂ.ಗಳಷ್ಟು ಕಡಿಮೆ ಮಾಡಲಾಗಿದೆ. ವಾಣಿಜ್ಯ ಸಿಲಿಂಡರ್ ಇಂದಿನಿಂದ, 19 ಕೆಜಿ ಎಲ್ಪಿಜಿ ಸಿಲಿಂಡರ್ ದೆಹಲಿಯಲ್ಲಿ 2012.50 ರೂ.ಗೆ ಬದಲಾಗಿ 1976.50 ರೂ.ಗೆ ಲಭ್ಯವಾಗಲಿದೆ. ಅದೇ ಸಮಯದಲ್ಲಿ, ಕೋಲ್ಕತ್ತಾದಲ್ಲಿ, ಈ ಮೊದಲು ಇದು 2132.00 ರೂ.ಗೆ ಲಭ್ಯವಿತ್ತು, ಆದರೆ ಆಗಸ್ಟ್ 1 ರಿಂದ, ಇದು 2095.50 ರೂ.ಗೆ ಲಭ್ಯವಿದೆ. ಇಂದಿನಿಂದ ವಾಣಿಜ್ಯ ಸಿಲಿಂಡರ್ ಬೆಲೆ ಮುಂಬೈನಲ್ಲಿ 1936.50 ರೂ.ಗೆ ಮತ್ತು ಚೆನ್ನೈನಲ್ಲಿ 2141 ರೂ.ಗೆ ಇಳಿದಿದೆ. ವಾಣಿಜ್ಯ ಸಿಲಿಂಡರ್ಗಳು ಅಗ್ಗವಾಗಿದ್ದರೂ, 14.2 ಕೆಜಿ ದೇಶೀಯ ಎಲ್ಪಿಜಿ ಸಿಲಿಂಡರ್ಗಳ ದರದಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ ಸಬ್ಸಿಡಿ ರಹಿತ ಗೃಹಬಳಕೆಯ ಎಲ್ಪಿಜಿ ಸಿಲಿಂಡರ್ಗಳ (ಎಲ್ಪಿಜಿ ಸಿಲಿಂಡರ್ ಬೆಲೆ) ಬೆಲೆ ಕಳೆದ ಎರಡು…
ಕಾರ್ಕಳ : ಸುರತ್ಕಲ್ ನಲ್ಲಿ ನಡೆದ ಫಾಜಿಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳು ಬಳಸಿದ್ದಾರೆ ಎನ್ನಲಾದ ಹುಂಡೈ ಇಯೋನ್ ಕಾರಿ ಕಾರ್ಕಳದ ಇನ್ನಾ ಗ್ರಾಮದ ಕಡಕುಂಜದ ನಿರ್ಜನ ಪ್ರದೇಶದಲ್ಲಿ ಇಂದು ಪತ್ತೆಯಾಗಿದೆ. ಪಡುಬಿದ್ರಿ ಪೊಲೀಸ್ ಠಾಣಾವ್ಯಾಪ್ತಿಯಲ್ಲಿ ಪತ್ತೆಯಾಗಿದ್ದು, ಸ್ಥಳಕ್ಕೆ ಬಂದ ಕಾಪು ಸರ್ಕಲ್ ಇನ್ಸ್ ಪೆಕ್ಟರ್ ಪೂವಯ್ಯ ಹಾಗೂ ಪಡುಬಿದ್ರಿ ಎಸೈ ಪುರುಪೋತ್ತಮ ಪರಿಶೀಲನೆ ನಡೆಸಿದ್ದು, ಬೆರಳಚ್ಚು ತಜ್ಞರು ಆಗಮಿಸುವ ಹಿನ್ನಲೆಯಲ್ಲಿ ಸಾರ್ವಜನಿಕರು ಸ್ಪರ್ಶಿಸ ಬಾರದು ಎಂಬ ನಿಟ್ಟಿನಲ್ಲಿ ಪ್ಲಾಸ್ಟಿಕ್ ಹೊದಿಗೆ ಹಾಕಿದ್ದಾರೆ. ಸ್ಥಳೀಯರು ಹೇಳುವಂತೆ ಮೂರು ನಾಲ್ಕು ದಿನಗಳಿಂದ ಈ ಕಾರು ಈ ಭಾಗದಲ್ಲಿ ಅನಾಥ ಸ್ಥಿತಿಯಲ್ಲಿದ್ದು, ನಾವು ಅಷ್ಟಾಗಿ ಗಮನಿಸಿಲ್ಲ..ಇವತ್ತು ಸಂಶಯಗೊಂಡು ಪೊಲೀಸರಿಗೆ ಮಾಹಿತಿ ನೀಡಿ ಅವರು ಬಂದಾಗ ಕೊಲೆಗೆ ಬಳಸಲಾದ ಕಾರು ಎಂಬುದು ನಮಗೆ ತಿಳಿದಿದೆ ಎಂದರು. ಕಾರಿನಲ್ಲಿ ಮೈಕ್ರೋ ಸಿಮ್ ಪತ್ತೆಯಾಗಿದೆ. ಕಾರಿನ ಹಿಂಬದಿ ಸೀಟಿನಲ್ಲಿ ರಕ್ತದ ಕಲೆಗಳೂ ಪತ್ತೆಯಾಗಿದೆ. ನೀರಿನ ಬಾಟಲಿ, ಚಿಲ್ಲರೆ ಹಣವೂ ಕಾರಿನಲ್ಲಿದ್ದು, ಆರೋಪಿಗಳು ಈ ಕಾರನ್ನು ನಿರ್ಜನ ಪ್ರದೇಶದಲ್ಲಿ ಬಿಟ್ಟು…
ಮಂಗಳೂರು:ಫಾಝಿಲ್ ಕೊಲೆ ಪ್ರಕರಣದ ತನಿಖಾಧಿಕಾರಿಯಾಗಿ ಮಂಗಳೂರು ಉತ್ತರ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಮಹೇಶ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ. ಎಸಿಪಿಯನ್ನು ತನಿಖಾಧಿಕಾರಿಯಾಗಿ ನೇಮಕ ಮಾಡಿ ಆದೇಶಿಸಿರುವುದಾಗಿ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ. ಫಾಝಿಲ್ ಕೊಲೆ ಪ್ರಕರಣದ ತನಿಖೆಯನ್ನು ಉನ್ನತ ಅಧಿಕಾರಿಗಳು ಮಾಡುವಂತೆ ಫಾಝಿಲ್ ಅವರ ತಂದೆ ಮನವಿ ಮಾಡಿದ್ದರು ಎನ್ನಲಾಗಿದೆ.










