Author: main-admin

ಉಡುಪಿ: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ನಡೆಯುವ ರಾಜ್ಯದ ನಾಗರೀಕರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಗಣತಿದಾರರಾಗಿ ಭಾಗವಹಿಸದೇ ನಿರ್ಲಕ್ಷ್ಯ ತೋರಿದ ಮೂವರು ಶಿಕ್ಷಕರನ್ನು ಅಮಾನತು ಮಾಡಲಾಗಿದೆ. ಒಳಕಾಡು ಸರ್ಕಾರಿ ಶಾಲಾ ಸಹ ಶಿಕ್ಷಕಿಯರಾದ ಸುರೇಖ ಮತ್ತು ರತ್ನ ಹಾಗೂ ಉದ್ಯಾವರ ಸರ್ಕಾರಿ ಶಾಲಾ ಸಹ ಶಿಕ್ಷಕಿ ಪ್ರಭಾ ಅವರನ್ನು ಅಮಾನತು ಮಾಡಿ ಜಿಲ್ಲಾಧಿಕಾರಿ ಸ್ವರೂಪ ಆದೇಶಿಸಿದ್ದಾರೆ. ಈ ಮೂವರು ಶಿಕ್ಷಕಿಯರು ಕೂಡಾ ಸಮೀಕ್ಷೆ ಕಾರ್ಯದಲ್ಲಿ ಭಾಗವಹಿಸದೇ, ನೇಮಕಾತಿ ಆದೇಶವನ್ನು ಸ್ವೀಕರಿಸಿರುವುದಿಲ್ಲ, ಹಲವು ಬಾರಿ ದೂರವಾಣಿ ಮೂಲಕ ಸಂಪರ್ಕಿಸಿದರೂ ನೇಮಕಾತಿ ಆದೇಶ ಪ್ರತಿಯನ್ನು ಸ್ವೀಕರಿಸಲು ನಿರಾಕರಿಸಿರುತ್ತಾರೆ. ಹೀಗಾಗಿ ಕಾರಣ ಕೇಳಿ ನೋಟಿಸ್ ನೀಡಲಾಗಿದ್ದು ಈವರೆಗೂ ನೋಟಿಸ್ ಗೆ ಸಮಜಾಯಿಷಿ ನೀಡಿರುವುದಿಲ್ಲ. ಈ ಕಾರಣದಿಂದಾಗಿ ಸಮೀಕ್ಷೆದಾರರನ್ನು ಅಮಾನತು ಮಾಡಲಾಗಿದೆ.

Read More

ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ಮಗು ಜನಿಸಿದ ನಂತರ ಮದುವೆಗೆ ನಿರಾಕರಿಸಿದ ಯುವಕ ಕೃಷ್ಣ ರಾವ್ ಮದುವೆಯಾಗಲು ತಪ್ಪಿದ್ದಲ್ಲಿ ಆತನ ಮನೆ ಮುಂದೆ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ನ್ಯಾಯಕ್ಕಾಗಿ ಧರಣಿ ನಡೆಸುವುದಾಗಿ ಹಿಂದುಳಿದ ವರ್ಗಗಳ ಆಯೋಗದ ಸದಸ್ಯೆ ಪ್ರತಿಭಾ ಕುಳಾಯಿ ಎಚ್ಚರಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೃಷ್ಣ ರಾವ್ ಒಪ್ಪಿದಲ್ಲಿ ಆತನ ಜೊತೆ ಯುವತಿಯ ವಿವಾಹವನ್ನು ನಾನೇ ಸ್ವಂತ ಖರ್ಚಿನಲ್ಲಿ ಮಾಡಿಸುತ್ತೇನೆ. ಪ್ರೀತಿ, ಪ್ರೇಮದ ಹೆಸರಲ್ಲಿ ಲೈಂಗಿಕ ಚಟುವಟಿಕೆ ನಡೆಸಿ, ಬಳಿಕ ಅರ್ಧದಲ್ಲೇ ಕೈಬಿಡುವ ಘಟನೆಗಳು ಮರುಕಳಿಸಬಾರದು. ಇದೊಂದು ಜಿಲ್ಲೆಗೆ ಕಪ್ಪು ಚುಕ್ಕೆ. ಹಾಗಾಗಿ ಈ ಘಟನೆ ಪ್ರೀತಿಸಿ, ಮಗು ಕರುಣಿಸಿ ಯುವತಿಯ ಬಾಳನ್ನು ಅರ್ಧಕ್ಕೇ ಕೈಬಿಡುವವರಿಗೆ ಒಂದು ಪಾಠವಾಗಬೇಕು ಎಂದರು. ಸದ್ಯ ಜಾಮೀನಿನಲ್ಲಿರುವ ಕೃಷ್ಣ ರಾವ್ ಕೋರ್ಟ್ ನಲ್ಲಿ ವಿಚಾರಣೆ ವೇಳೆ ನೀಡುವ ಹೇಳಿಕೆಯನ್ನು ಆಧರಿಸಿ ಮುಂದೆ ಹೋರಾಟದ ರೂಪುರೇಷೆ ಹಾಕಿಕೊಳ್ಳಲಾಗುವುದು. ಸಂತ್ರಸ್ತೆಗೆ ನ್ಯಾಯ ಕೊಡಿಸಿಯೇ ಸಿದ್ಧ ಎಂದು ಪ್ರತಿಭಾ ಕುಳಾಯಿ ಹೇಳಿದರು. 

Read More

ಉಡುಪಿ: ಹೂಡಿಕೆಯ ಹೆಸರಿನಲ್ಲಿ 4.2 ಲಕ್ಷ ರೂಪಾಯಿಯನ್ನು ವಂಚಿಸಿದ ಕುರಿತು ವರದಿಯಾಗಿದೆ. ನಾಝಿಯಾ (39) ಎನ್ನುವವರು ವಂಚೊನೆಗೊಳಗಾದ ಸಂತ್ರಸ್ಥೆ. ಇನ್ಸ್ಟಾಗ್ರಾಮ್ ನಲ್ಲಿ Afreen Halaal Investment ಎಂಬ ಪ್ರೊಫೈಲ್‌ ನಲ್ಲಿ ವಿಡಿಯೋವೊಂದರಲ್ಲಿ ಹಣ ಹೂಡಿಕೆ ಮಾಡಿ ಹೆಚ್ಚಿನ ಲಾಭವನ್ನು ಗಳಿಸಬಹುದಾದ ಜಾಹೀರಾತನ್ನು ವೀಕ್ಷಿಸಿದ್ದಾರೆ. ನಂತರ ಪ್ರೋಫೈಲ್‌ ವ್ಯಕ್ತಿಗೆ ಹೂಡಿಕೆ ಮಾಡುವ ಬಗ್ಗೆ ತಿಳಿಯಲು ಸಂದೇಶವನ್ನು ಕಳುಹಿಸಿದ್ದು, ಆನಂತರ ಆರೋಪಿಯು 9477953918 ನಂಬ್ರದಿಂದ ವಾಟ್ಸಪ್‌ ಗೆ ಬೇರೆ–ಬೇರೆ ವ್ಯಕ್ತಿಗಳು ಟ್ರೇಡಿಂಗ್‌ ನಲ್ಲಿ ಹೂಡಿಕೆ ಮಾಡಿ ಲಾಭ ಗಳಿಸಿದ್ದ ಟ್ರಾನ್ಸಕ್ಷನ್‌ ಗಳ ಸ್ಟ್ರೀನ್‌ ಶಾನ್‌ ಗಳನ್ನು ಹೊಂದಿದ ಸಂದೇಶಗಳನ್ನು ಕಳುಹಿಸಿದ್ದಾರೆ. ಇದನ್ನು ನಂಬಿದ ಸಂತ್ರಸ್ಥೆ ಟ್ರೇಡಿಂಗ್‌ ನಲ್ಲಿ ಹೂಡಿಕೆ ಮಾಡಿ ಲಾಭ ಗಳಿಸುವ ಉದ್ದೇಶದಿಂದ ಆರೋಪಿಯು ನೀಡಿದ ಕ್ಯೂ ಅರ್‌ ಕೋಡ್‌ ಗೆ ಅವರು ಮೊದಲ ಬಾರಿಗೆ 2000/- ರೂಪಾಯಿಗಳನ್ನು ವರ್ಗಾವಣೆ ಮಾಡಿದ್ದು, ಇದಾದ ಬಳಿಕ ಆರೋಪಿಯ ಬಳಿ ಲಾಭದ ಹಣವನ್ನು ಕೇಳಿದಾಗ ಆರೋಪಿಯು “ ನೀವು ಮೊದಲ ಬಾರಿ ಹೂಡಿಕೆ ಮಾಡುತ್ತೀದ್ದೀರಿ…

Read More

ಕಾರ್ಕಳ: ಪ್ರೀತಿಯ ಕಾರಣಕ್ಕೆ ಮನೆ ಬಿಟ್ಟು ಹೋಗುವುದಾಗಿ ತಿಳಿಸಿದ್ದ ಮಗಳನ್ನು ತಾಯಿಯೇ ಹತ್ಯೆ ಮಾಡಿದ ಭೀಕರ ಘಟನೆ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ಕಾನಂಗಿಯಲ್ಲಿ ಬೆಳಕಿಗೆ ಬಂದಿದೆ. ಮೃತಳನ್ನು ಶೇಖ್ ಮುಸ್ತಫಾ ಅವರ ಮಗಳು ಶಿಫನಾಝ್ (17) ಎಂದು ಗುರುತಿಸಲಾಗಿದೆ. ಆರೋಪಿಯಾದ ತಾಯಿ ಗುಲ್ಝಾರ್ ಬಾನು (45) ಅವರನ್ನು ಪೊಲೀಸರು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಮಾಹಿತಿಯ ಪ್ರಕಾರ, ಸೆಪ್ಟೆಂಬರ್ 20ರಂದು ತಾಯಿ-ಮಗಳ ನಡುವೆ ಪ್ರೀತಿಯ ವಿಚಾರವಾಗಿ ವಾಗ್ವಾದ ಉಂಟಾಗಿತ್ತು. ಆ ವೇಳೆ ಶಿಫನಾಝ್ ತನ್ನ ಗೆಳೆಯನೊಂದಿಗೆ ಮನೆ ಬಿಟ್ಟು ಹೋಗುವುದಾಗಿ ಹೇಳಿದ್ದಳು. ಇದರಿಂದ ಆಕ್ರೋಶಗೊಂಡ ತಾಯಿ, ಮಗಳ ಬಾಯಿಗೆ ಬಟ್ಟೆ ತುರುಕಿಸಿ, ಕುತ್ತಿಗೆ ಹಿಸುಕಿಕೊಂಡು ಕೊಲೆ ಮಾಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ನಂತರ, ಶಿಫನಾಝ್ನ ತಂದೆ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆದರೆ ಮರಣೋತ್ತರ ಪರೀಕ್ಷೆಯಲ್ಲಿ ಶಿಫನಾಝ್ ಅವರನ್ನು ಕತ್ತು ಹಿಸುಕಿಕೊಂಡು ಕೊಲೆ ಮಾಡಲಾಗಿದೆ ಎಂಬುದು ಬಹಿರಂಗವಾಯಿತು. ಬಳಿಕ ಪೊಲೀಸರು…

Read More

ಮಂಗಳೂರು: ನಗರದ ದಂಬೆಲ್ ನದಿ ಕಿನಾರೆ ರಸ್ತೆಯ ಫಲ್ಗುಣಿ ಸೇತುವೆ ಬಳಿ ಗಾಂಜಾ ಹಿಡಿದುಕೊಂಡು ಬರುತ್ತಿದ್ದ ಇಬ್ಬರನ್ನು ಉರ್ವ ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಬಿಹಾರದ ಪೂರ್ಣಿಯಾ ಹರಿಪುರ್ ಗ್ರಾಮದ ನಿವಾಸಿ, ಪ್ರಸಕ್ತ ಕೂಳೂರು ರಾಯಕಟ್ಟೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿರುವ ಕೃಷ್ಣ ಕುಮಾರ್ (20), ಗದಗ ಜಿಲ್ಲೆ ಶಿರಹಟ್ಟಿ ತಾಲೂಕು ಯಳವತ್ತಿ ಗ್ರಾಮ ನಿವಾಸಿ, ಪಡೀಲ್ ಕೊಡಕ್ಕಲ್‌ನಲ್ಲಿ ವಾಸವಾಗಿರುವ ಬಸಯ್ಯ ಶಂಕರಯ್ಯ ಮಠಪತಿ (23) ಎಂದು ತಿಳಿದು ಬಂದಿದೆ.ಬಂಧಿತ ಆರೋಪಿಗಳಿಂದ ಅಂದಾಜು 20,200 ರೂ. ಮೌಲ್ಯದ 1 ಕೆ.ಜಿ. 364 ಗ್ರಾಂ. ಗಾಂಜಾ, ಎರಡು ಮೊಬೈಲ್, 13 ಖಾಲಿ ಜಿಪ್ ಕವರನ್ನು ಮಂಗಳೂರು: ನಗರದ ದಂಬೆಲ್ ನದಿ ಕಿನಾರೆ ರಸ್ತೆಯ ಫಲ್ಗುಣಿ ಸೇತುವೆ ಬಳಿ ಗಾಂಜಾ ಹಿಡಿದುಕೊಂಡು ಬರುತ್ತಿದ್ದ ಇಬ್ಬರನ್ನು ಉರ್ವ ಪೊಲೀಸರು ಬಂಧಿಸಿದ್ದಾರೆ.

Read More

ಬಂಟ್ವಾಳ : ರಸ್ತೆ ದಾಟುವ ವೇಳೆ ರಿಕ್ಷಾ ಡಿಕ್ಕಿ ಹೊಡೆದು ಪಾದಚಾರಿ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಕಲ್ಲಡ್ಕದ ಅಮ್ಮೂರು ಕ್ರಾಸ್‌ನಲ್ಲಿ ನಡೆದಿದೆ. ಸಜೀಪ ಮೂಡ ಗ್ರಾಮದ ಸುಭಾಷ್ ನಗರ ನಿವಾಸಿ ಲೋಕೇಶ್‌ ಮೂಲ್ಯ (44) ಮೃತ ದುರ್ದೈವಿ. ಲೋಕೇಶ್ ಅವರು ಕಲ್ಲಡ್ಕದ ನಾಯರ ಪೆಟ್ರೋಲ್ ಪಂಪ್‌ನ ಮುಂಭಾಗದಲ್ಲಿ ರಸ್ತೆ ದಾಟುವ ವೇಳೆ ಅತಿವೇಗದಿಂದ ಬಂದ ರಿಕ್ಷಾ ಡಿಕ್ಕಿ ಹೊಡೆದು ಚಾಲಕನ ನಿಯಂತ್ರಣ ಕಳೆದುಕೊಂಡು ಬಳಿಕ ಪಲ್ಟಿಯಾಗಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಲೋಕೇಶ್ ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆಯಾದರೂ ಚಿಕಿತ್ಸೆ ಫಲಕಾರಿಯಾಗದೆ ಮುಂಜಾನೆ ವೇಳೆ ಮೃತಪಟ್ಟ ಬಗ್ಗೆ ಪೋಲಿಸ್ ಇಲಾಖೆ ಮಾಹಿತಿ ನೀಡಿದೆ.ರಿಕ್ಷಾದಲ್ಲಿ ಚಾಲಕನ ಪತ್ನಿ ಮಕ್ಕಳು ಹಾಗೂ ಮಾವ ಪ್ರಯಾಣಿಸುತ್ತಿದ್ದು ಯಾವುದೇ ಗಾಯಗಳಿಲ್ಲದೆ ಅಪಾಯದಿಂದ ಪಾರಾಗಿದ್ದಾರೆ. ಲೋಕೇಶ್ ಅವರು ಪತ್ನಿ ಹಾಗೂ ಎರಡು ಮಕ್ಕಳ ಸಹಿತ ಅನೇಕ ಬಂಧುಬಳಗವನ್ನು ಅಗಲಿದ್ದಾರೆ.

Read More

ಧರ್ಮಸ್ಥಳ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಯನ್ನು ವಿಶೇಷ ತನಿಖಾ ತಂಡ (SIT) ಮತ್ತಷ್ಟು ಚುರುಕುಗೊಳಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೊಗಳನ್ನು ತಯಾರಿಸಿದ ಹಲವಾರು ಯೂಟ್ಯೂಬರ್‌ಗಳಿಗೆ SIT ಅಧಿಕಾರಿಗಳು ಮತ್ತೊಮ್ಮೆ ನೋಟಿಸ್ ಜಾರಿಗೊಳಿಸಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ. ಈ ಬೆಳವಣಿಗೆಯಿಂದ ಯೂಟ್ಯೂಬರ್‌ಗಳ ಸಂಕಷ್ಟ ಮುಗಿಯುವ ಲಕ್ಷಣಗಳು ಸದ್ಯಕ್ಕೆ ಕಾಣಿಸುತ್ತಿಲ್ಲ. ವಿವಾದಿತ ಯೂಟ್ಯೂಬರ್ ಸಮೀರ್ ಎಂಡಿ ಸೇರಿದಂತೆ ಐದಕ್ಕೂ ಹೆಚ್ಚು ಯೂಟ್ಯೂಬರ್‌ಗಳಿಗೆ ನೋಟಿಸ್ ಹೋಗಿದ್ದು, ಅವರು ಬೆಳ್ತಂಗಡಿ SIT ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವ ಸಾಧ್ಯತೆಯಿದೆ. SIT ಅಧಿಕಾರಿಗಳು ಈ ವಿಚಾರಣೆಗಾಗಿ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು,ಈ ಬಾರಿ ಯಾವೆಲ್ಲಾ ಪ್ರಶ್ನೆಗಳನ್ನು ಕೇಳಬೇಕು ಎಂಬುದರ ಕುರಿತು ಅಧಿಕಾರಿಗಳು ಪೂರ್ವ ಸಿದ್ಧತೆ ನಡೆಸಿದ್ದಾರೆ. ಈ ಹಿಂದಿನ ತನಿಖೆಯ ಸಂದರ್ಭದಲ್ಲಿ ಆರೋಪಿ ಚಿನ್ನಯ್ಯ ನೀಡಿದ ಹೇಳಿಕೆಗಳನ್ನು ಆಧರಿಸಿ SIT ತನ್ನ ತನಿಖೆಯನ್ನು ಮುಂದುವರಿಸಿದೆ. ಚಿನ್ನಯ್ಯ ನೀಡಿದ ಹೇಳಿಕೆಗಳಲ್ಲಿ ಕೆಲವೊಂದು ವಿಚಾರಗಳ ಬಗ್ಗೆ ಯೂಟ್ಯೂಬರ್‌ಗಳ ಮೂಲಕ ಮರು ಪರಿಶೀಲನೆ ನಡೆಸುವುದು ಮತ್ತು ಪ್ರಶ್ನೆಗಳನ್ನು ಕೇಳುವ ಉದ್ದೇಶದಿಂದ ಅವರನ್ನು ಕರೆಸಿಕೊಳ್ಳಲಾಗುವುದು ಎಂದು ಹೇಳಲಾಗಿದೆ.

Read More

ಬಂಟ್ವಾಳ: ಅಕ್ರಮ ಕಸಾಯಿಖಾನೆ ನಡೆಸಿದ ಆರೋಪದಲ್ಲಿ ಆರೋಪಿಯ ಮನೆ/ಕಸಾಯಿ ಖಾನೆಯನ್ನು ಮುಟ್ಟುಗೋಲು ಹಾಕಿದ ದ.ಕ. ಜಿಲ್ಲೆಯಲ್ಲಿ ಮೊಟ್ಟ ಮೊದಲ ಪ್ರಕರಣ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಾರಿಪಳ್ಳ ಸಮೀಪದ ಪಾಡಿ ಎಂಬಲ್ಲಿ ನಡೆದಿದೆ. ಪುದು ಗ್ರಾಮದ ಪಾಡಿ ನಿವಾಸಿ ಹಸನಬ್ಬಗೆ ಸೇರಿದ ಮನೆಯನ್ನು ಅಕ್ರಮ ಕಸಾಯಿ ಖಾನೆ ನಡೆಸಿದ ಆರೋಪದಲ್ಲಿ ಜಪ್ತಿ ಮಾಡಿ ಸರಕಾರದ ವಶಕ್ಕೆ ಪಡೆಯಲಾಗಿದೆ. ಹಸನಬ್ಬ ವಿರುದ್ಧ ಗೋ ಕಳವು, ಗೋವಧೆಯಂತಹ ಪ್ರಕರಣ ದಾಖಲಾಗಿದ್ದು, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 123/2025 ಕಲಂ 303 ಬಿ ಎನ್ ಎಸ್ ಕಲಂ 4,7,12 ಗೋ ಸಂರಕ್ಷಣಾ ಕಾಯಿದೆ ಮತ್ತು 11(ಡಿ) ಗೋಹತ್ಯೆ ನಿಷೇಧ ಕಾಯಿದೆಯಡಿ ದಾಖಲಾದ ಪ್ರಕರಣದಲ್ಲಿ ದಸ್ತಗಿರಿ ಮಾಡಿ ಎಸಿಜೆ ಮತ್ತು ಜೆ ಎಂ ಎಫ್ ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಈತನ ವಿರುದ್ಧ 2017ನೇ ಸಾಲಿನಲ್ಲಿ ಅಪರಾಧ ಕ್ರಮಾಂಕ 65/2017 ಕಲಂ 379 ಐಪಿಸಿ ಮತ್ತು 4,5,11 ಗೋ ಸಂರಕ್ಷಣಾ ಕಾಯಿದೆ ಮತ್ತು 11(ಎಲ್) ಗೋಹತ್ಯೆ…

Read More

ಉಡುಪಿ: ಅಂಬಲಪಾಡಿಯ ದೇವಸ್ಥಾನದಲ್ಲಿ ಮಹಿಳೆಯ ಸರ ಕದ್ದ ಕಳ್ಳಿಯರಿಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಅಂಬಲಪಾಡಿಯ ದೇವಸ್ಥಾನದಲ್ಲಿ ನವರಾತ್ರಿಯ ಸಡಗರದಲ್ಲಿದ್ದಾಗ ವೃದ್ಧ ಮಹಿಳೆಯೊಬ್ಬರ ಸರವನ್ನು ಕಳ್ಳಿಯರಿಬ್ಬರು ಕದ್ದಿದ್ದಾರೆ. ಸಂಶಯಗೊಂಡು ಮಹಿಳೆಯರನ್ನು ಪರಿಶೀಲಿಸಿದಾಗ ಸರ ಪತ್ತೆಯಾಗಿದೆ. ಈ ಬಗ್ಗೆ ಕೋಪಗೊಂಡ ಸಾರ್ವಜನಿಕ ಮಹಿಳೆಯರು ಆಪಾದಿತ ಮಹಿಳೆಯರಿಗೆ ಹಲ್ಲೆ ನಡೆಸಲು ಮುಂದಾಗಿದ್ದು, ವಿಶುಶೆಟ್ಟಿಯವರು ಮಹಿಳೆಯರನ್ನು ರಕ್ಷಿಸಿದ್ದಾರೆ. ಪೆಟ್ಟು ತಿಂದ ಮಹಿಳೆಯರು ಪೋಲಿಸರಿಗೆ ಒಪ್ಪಿಸುವ ಸಂದರ್ಭದಲ್ಲಿ ಅನಾರೋಗ್ಯದ ಬಗ್ಗೆ ತಿಳಿಸಿದ್ದಾರೆ. ತದನಂತರ ವಿಶುಶೆಟ್ಟಿಯವರು ಆಪಾದಿತ ಮಹಿಳೆಯರನ್ನು ತನ್ನ ವಾಹನದಲ್ಲಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಪೋಲಿಸರಿಗೆ ಒಪ್ಪಿಸಿರುತ್ತಾರೆ. ಆಪಾದಿತ ಮಹಿಳೆಯರು ತಮಿಳುನಾಡು ಮೂಲದವರೆಂಬ ಮಾಹಿತಿ ಇದೆ.

Read More

ಬೆಂಗಳೂರು: ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ 1 ವರ್ಷದ ಅವಧಿಗೆ ಗಡಿಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತರು ಹೊರಡಿಸಿರುವ ಆದೇಶವನ್ನು ಅಕ್ಟೋಬರ್ 8ರವರೆಗೆ ಜಾರಿಗೊಳಿಸದಂತೆ ಹೈಕೋರ್ಟ್ ಮಧ್ಯಂತರ ಆದೇಶ ಮಾಡಿದೆ. ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಸೆಪ್ಟೆಂಬರ್ 18ರಂದು ಪುತ್ತೂರು ಸಹಾಯಕ ಆಯುಕ್ತ ಸ್ಟೆಲ್ಲಾ ವರ್ಗಿಸ್ ಹೊರಡಿಸಿರುವ ಆದೇಶ ಪ್ರಶ್ನಿಸಿ ಮಹೇಶ್‌ ಶೆಟ್ಟಿ ತಿಮರೋಡಿ ಸಲ್ಲಿಸಿರುವ ರಿಟ್ ಅರ್ಜಿ ಕುರಿತು ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ಅವರ ರಜಾಕಾಲದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು. ಕೆಲ ಕಾಲ ಅರ್ಜಿ ಆಲಿಸಿದ ನ್ಯಾಯಪೀಠ, ಗಡಿಪಾರು ಆದೇಶ ಜಾರಿಗೆ ಅಕ್ಟೋಬರ್ 8ರ ವರೆಗೆ ಮಧ್ಯಂತರ ತಡೆ ನೀಡಿತಲ್ಲದೆ, ಪ್ರತಿವಾದಿಗಳಾದ ರಾಜ್ಯ ಗೃಹ ಇಲಾಖೆ, ಪುತ್ತೂರು ಸಹಾಯಕ ಆಯುಕ್ತರು, ಬಂಟ್ವಾಳ ಉಪ ವಿಭಾಗದ ಉಪ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಬೆಳ್ತಂಗಡಿ ಪೊಲೀಸ್ ಸಬ್ ಇನ್‌ಸ್ಪೆಕ್ಟರ್‌ಗೆ ನೋಟಿಸ್‌ ಜಾರಿಗೊಳಿಸಿ, ಅರ್ಜಿ ವಿಚಾರಣೆ ಮುಂದೂಡಿತು. ಗಡಿಪಾರು ಆದೇಶ ಹೊರಡಿಸಿರುವುದು ಕಾನೂನುಬಾಹಿರ ಮತ್ತು…

Read More