Author: main-admin

ಬಂಟ್ವಾಳ : ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿದ್ದ ಸರಗಳ್ಳತನ ಪ್ರಕರಣದ ಶಂಕಿತ ಆರೋಪಿಯ ಮುಖಚಹರೆ ಪತ್ತೆಯಾಗಿದ್ದು, ಆದನ್ನು ಪೊಲೀಸರು ಸಾರ್ವಜನಿಕರ ಮಾಹಿತಿಗಾಗಿ ಬಿಡುಗಡೆ ಮಾಡಿದ್ದಾರೆ. ಕೆಲವು ದಿನಗಳ ಹಿಂದೆ ಬಂಟ್ವಾಳ ಗ್ರಾಮಾಂತರ ಠಾಣೆಯ ವ್ಯಾಪ್ತಿಯಲ್ಲಿ ಸರ ಕಳ್ಳತನ ನಡೆದಿದ್ದು, ಈ ಬಗ್ಗೆ ಪ್ರಕರಣ ದಾಖಲಾಗಿತ್ತು. ಈ ಶಂಕಿತ ವ್ಯಕ್ತಿಯ ವ್ಯಕ್ತಿಯ ಗುರುತು ಅಥವಾ ಇರುವಿಕೆ ಕಂಡು ಬಂದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಕಂಟ್ರೋಲ್ ರೂಮ್ ಅಥವಾ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯನ್ನು ಸಂಪರ್ಕಿಸಬೇಕಾಗಿ ಸಾರ್ವಜನಿಕರಲ್ಲಿ ಪೊಲೀಸರು ಕೋರಿದ್ದಾರೆ.

Read More

ಮಂಗಳೂರು: ನಗರದಲ್ಲಿ ಹಲವು ದಿನಗಳಿಂದ ಸುದ್ದಿಯಲ್ಲಿರುವ ಚಿರತೆಯ ಹಾವಳಿಯ ಮಧ್ಯೆಯೇ ಚಿರತೆಯನ್ನು ಸೆರೆ ಹಿಡಿಯಲು ಇರಿಸಿದ್ದ ಬೋನಿಗೆ ನಾಯಿ ಬಿದ್ದ ಘಟನೆ ಬೆಳಕಿಗೆ ಬಂದಿದೆ. ನಗರದ ಕದ್ರಿ ಕೈಬಟ್ಟಲು ಡಾಕ್ಟರ್ಸ್ ಲೇನ್ ಬಳಿ ಕಳೆದ ಎರಡು ದಿನಗಳಿಂದ ರಾತ್ರಿ ವೇಳೆ ಚಿರತೆಯ ಓಡಾಟ ಕಂಡುಬಂದಿತ್ತು. ಅದನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆಯ ಸಿಬ್ಬಂದಿ ಬುಧವಾರ ನಾಗಬನದ ಬಳಿ ಬೋನು ಇರಿಸಿದ್ದರು. ಗುರುವಾರ ಬೆಳಗ್ಗೆ ಆ ಬೋನಿನಲ್ಲಿ ನಾಯಿ ಸೆರೆಯಾಗಿರುವುದು ಕಂಡು ಬಂದಿದೆ. ಇದನ್ನು ಗಮನಿಸಿದ ಸ್ಥಳೀಯರು ನಾಯಿಯನ್ನು ಬೋನಿನಿಂದ ಹೊರಗೆ ತೆಗೆದಿದ್ದಾರೆ. ಡಾಕ್ಟರ್ಸ್ ಲೇನ್‌ನಲ್ಲಿ ಎರಡು ದಿನ ರಾತ್ರಿ ವೇಳೆ ಪತ್ತೆಯಾಗಿದ್ದ ಚಿರತೆಯು ಬುಧವಾರ ರಾತ್ರಿ ಪತ್ತೆಯಾದ ಬಗ್ಗೆ ವರದಿಯಾಗಿಲ್ಲ. ಹಾಗಾಗಿ ಚಿರತೆಯ ಪತ್ತೆಗೆ ಕಾರ್ಯಾಚರಣೆ ಮುಂದುವರಿಸಲಾಗಿದೆ. ಗುರುವಾರವೂ ನಾಗಬನದ ಬಳಿ ಬೋನು ಇಡಲಾಗಿದೆ. ಇಲಾಖೆಯ ಸಿಬ್ಬಂದಿ ವರ್ಗವು ನಿಗಾ ವಹಿಸಿದೆ. ಈ ಮಧ್ಯೆ ನಗರದ ಪಂಪ್‌ವೆಲ್ ಬಳಿ ಕೂಡ ಚಿರತೆ ಓಡಾಡಿದೆ ಎನ್ನಲಾಗಿದೆ. ಆದರೆ ಈ ಬಗ್ಗೆ ಅದು ದೃಢಪಟ್ಟಿಲ್ಲ ಎಂದು…

Read More

ಮಂಗಳೂರು: ನಗರದ ಬಿಜೈ ಪ್ರದೇಶದಲ್ಲಿರುವ ಪ್ರತಿಷ್ಠಿತ ಲೂರ್ಡ್ಸ್ ಸೆಂಟ್ರಲ್ ಶಾಲೆಗೆ ಬಾಂಬ್ ಬೆದರಿಕೆ ಇಮೇಲ್ ಬಂದಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಯ ಅಧಿಕೃತ ಇಮೇಲ್ ವಿಳಾಸಕ್ಕೆ ಬೆದರಿಕೆ ಸಂದೇಶ ಬಂದಿರುವ ಹಿನ್ನೆಲೆಯಲ್ಲಿ ಆಡಳಿತ ಮಂಡಳಿ ಪೊಲೀಸರಿಗೆ ದೂರು ನೀಡಿದೆ. ಮಾಹಿತಿ ಪಡೆದ ಕದ್ರಿ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಇತ್ತೀಚೆಗಷ್ಟೇ ಮಂಗಳೂರಿನ ನ್ಯಾಯಾಲಯಕ್ಕೆ ಬಾಂಬ್ ಇಡಲಾಗಿದೆ ಎಂದು ಇಮೇಲ್ ಮೂಲಕ ಬೆದರಿಕೆ ಬಂದಿದ್ದರೂ, ಪರಿಶೀಲನೆ ಬಳಿಕ ಅದು ಹುಸಿ ಕರೆ ಎಂಬುದು ದೃಢಪಟ್ಟಿತ್ತು. ತಮಿಳುನಾಡು ಮೂಲದಿಂದ ರಾಜ್ಯದ ಹಲವು ನ್ಯಾಯಾಲಯಗಳಿಗೆ ಇಂತಹ ಬೆದರಿಕೆ ಸಂದೇಶಗಳು ಬಂದಿರುವುದೂ ಪತ್ತೆಯಾಗಿತ್ತು. ಅದೇ ರೀತಿ ಬೆಂಗಳೂರಿನ ಕೆಲವು ಶಾಲೆಗಳಿಗೂ ಇತ್ತೀಚೆಗೆ ಬಾಂಬ್ ಬೆದರಿಕೆ ಬಂದಿದ್ದವು. ಇದೀಗ ಮಂಗಳೂರಿನ ಲೂರ್ಡ್ಸ್ ಶಾಲೆಗೆ ಬೆದರಿಕೆ ಬಂದಿರುವ ಹಿನ್ನೆಲೆಯಲ್ಲಿ ಪೊಲೀಸರು ಸಂಪೂರ್ಣ ತಪಾಸಣೆ ನಡೆಸುತ್ತಿದ್ದಾರೆ. ಯಾರು ಇಮೇಲ್ ಕಳುಹಿಸಿದ್ದಾರೆ ಎಂಬುದರ ಬಗ್ಗೆ ತನಿಖೆ ಮುಂದುವರಿದಿದೆ. ಈವರೆಗೆ ನಡೆದ ಪರಿಶೀಲನೆಯಲ್ಲಿ ಯಾವುದೇ ಅನುಮಾನಾಸ್ಪದ…

Read More

ಮಂಗಳೂರು : ಮುಂಬೈ ಸಿಸಿಬಿ ಪೊಲೀಸ್ ಎಂದು ಹೇಳಿ ವ್ಯಕ್ತಿಯೊಬ್ಬರನ್ನು ಡಿಜಿಟಲ್ ಅರೆಸ್ಟ್ ಮಾಡಿ ಬರೋಬ್ಬರಿ 41 ಲಕ್ಷಹಣವನ್ನು ವಸೂಲಿ ಮಾಡಿದ ಘಟನೆ ನಡೆದಿದ್ದು, ಮಂಗಳೂರು ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರಿನ ಪ್ರಕಾರ ಸಂತ್ರಸ್ತ ವ್ಯಕ್ತಿಗೆ ದಿನಾಂಕ 31-01-2026 ರಂದು ಯಾರೋ ಅಪರಿಚಿತ ವ್ಯಕ್ತಿ ದೆಹಲಿಯಿಂದ 8796142545 ಈ ನಂಬರ್ ನಿಂದ ಕರೆ ಮಾಡಿ ಮುಂಬೈ ಸಿಸಿಬಿ ಪೊಲೀಸ್ ಎಂದು ಪರಿಚಯಿಸಿಕೊಂಡಿದ್ದಾರೆ. ವೇಳೆ ವ್ಯಕ್ತಿಗೆ ನಿಮ್ಮ ಗುರುತಿನ ಚೀಟಿ ಬಳಸಿಕೊಂಡು ಮುಂಬೈನಲ್ಲಿ ಕೆನರಾ ಬ್ಯಾಂಕ್ ನಲ್ಲಿ ಖಾತೆಯನ್ನು ತೆರೆದಿದ್ದು ಅದರಲ್ಲಿ ದೊಡ್ಡ ಮಟ್ಟದ ಅವ್ಯವಹಾರ ನಡೆಯುತ್ತಿದ್ದು, ಹಾಗೂ ಗುರುತಿನ ಕಾರ್ಡ್ ನಂಬರ್ ನ್ನು ಉಪಯೋಗಿಸಿಕೊಂಡು ಮೊಬೈಲ್ ನಂಬರ್ ನ್ನು ಖರೀದಿಯಾಗಿದೆ ಹಾಗೂ ಕೆನರಾ ಬ್ಯಾಂಕ್ ಖಾತೆ ತರೆದು ಅಕ್ರಮ ಹಣ ವರ್ಗಾವಣೆ ಮಾಡಿಸಿಕೊಂಡಿರುವುದಾಗಿ ತಿಳಿಸಿದ್ದಾರೆ. ಅಲ್ಲದೆ ಈ ಹಿನ್ನಲೆ ನಿಮ್ಮನ್ನ ಅರೆಸ್ಟ್ ಮಾಡುವುದಾಗಿ ಬೆದರಿಕೆ ಕೂಡ ಹಾಕಿದ್ದಾರೆ. ಬಳಿಕ ದೂರುದಾರ ನನ್ನು ಡಿಜಿಟಲ್ ಅರೆಸ್ಟ್ ಮಾಡಿದಲ್ಲದೆ ಅರೆಸ್ಟ್ ಮಾಡಲು ಸುಪ್ರಿಂ…

Read More

ಮಂಗಳೂರು : ನಗರದ ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯ ಕೇಂದ್ರ ರೈಲ್ವೆ ನಿಲ್ದಾಣದಲ್ಲಿ ನೈತಿಕ ಪೊಲೀಸ್ ಗಿರಿ ನಡೆದಿದೆ. ಮಂಗಳೂರು ನಗರ ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯ ಕೇಂದ್ರ ರೈಲು ನಿಲ್ದಾಣದಲ್ಲಿ ಫೆ.24 ರಂದು ಕೇಂದ್ರ ರೈಲ್ವೆ ನಿಲ್ದಾಣದ ರೈಲ್ವೆ ಟ್ರ್ಯಾಕ್ ನಲ್ಲಿ ಮಂಗಳೂರು ನಗರದ ಕಾಸ್ಸಿಯಾ ಶಾಲೆಯ 10ನೇ ತರಗತಿಯ ವಿದ್ಯಾರ್ಥಿಗಳು ರೈಲ್ವೆ ಟ್ರ್ಯಾಕ್ ನಲ್ಲಿ ಕುಳಿತು ಕೊಂಡು ಇದ್ದು, ಕುಳಿತಿದ್ದನ್ನು ವಿಚಾರಿಸಿ ಅಲ್ಲಿಗೆ ಇಬ್ಬರು ಸ್ಟೀಫನ್ ಮೊಂತೆರೋ (56 ವರ್ಷ) ಮತ್ತು ಆತನ ಮಗ ಅವಿಲ್ ಮೊಂತೆರೋ (21 ವರ್ಷ) ಬಂದಿದ್ದು ಕುಳಿತಿದ್ದ ಇಬ್ಬರನ್ನು ಪ್ರಶ್ನಿಸಿ,ಇಲ್ಲಿ ಯಾಕ ಕುಳಿತಿದ್ದೀರಿ,ಎಂದು ಸ್ಟೀಪನ್ ಮೊಂತೆರೋ ಮೊಬೈಲ್ ನಿಂದ ಅವರಿಬ್ಬರ ಫೋಟೋ ತೆಗೆದು ನಂತರ ವಿಡಿಯೋ ಮಾಡಿದ್ದಾನೆಂದು ತಿಳಿದುಬಂದಿದೆ. ಈ ಬಗ್ಗೆ ವಿಧ್ಯಾರ್ಥಿ ನಮ್ಮ ಫೋಟೋ ಯಾಕೆ ತೆಗಿತಿರಿ ಎಂದು ಕೇಳಿದ್ದು ಅದಕ್ಕೆ ಸ್ಟೀಫನ್ ಮೊಂತೆರೋ ಇವರುಗಳಿಗೆ ಬೈದಿದ್ದಾನೆ.ಬಳಿಕ ತನ್ನ ಮನೆಯಲ್ಲಿ ತಂದೆಯೊಂದಿಗೆ ತಿಳಿಸಿದ್ದು ವಿದ್ಯಾರ್ಥಿ ತಂದೆ ಜನಾರ್ಧನ್ ರವರು ಇಂದು ಮಂಗಳೂರು…

Read More

ಮಂಗಳೂರು: ವಿಟ್ಲ ಪೊಲೀಸ್ ಠಾಣೆ ವ್ಯಾಪ್ತಿಯ ಅಕ್ರ ಸಂಖ್ಯೆ 193/2019 ಪ್ರಕರಣದ ಆರೋಪಿಯಾಗಿದ್ದು, ಕಳೆದ ಎರಡು ವರ್ಷಗಳಿಂದ ಮಾನ್ಯ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. ಐಪಿಸಿ ಕಲಂ 427, 504, 394, 341 ಹಾಗೂ 2(A) Prevention of Destruction and Loss of Property Act ಅಡಿ ದಾಖಲಾಗಿರುವ ಪ್ರಕರಣದಲ್ಲಿ ಆರೋಪಿಯಾಗಿರುವ ಬಂಟ್ವಾಳ ತಾಲೂಕಿನ ಕನ್ಯಾನ ನಿವಾಸಿ ಇಬ್ರಾಹಿಂ ಬಾತೀಸ್ ಎಂಬಾತನು 24/02/2026 ರಂದು ವಿದೇಶದಿಂದ ಮರಳಿ ಬರುವಾಗ, ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಇಮಿಗ್ರೇಶನ್ ವಿಭಾಗದ ಸಹಕಾರದೊಂದಿಗೆ ವಿಟ್ಲ ಪೊಲೀಸ್ ಠಾಣೆಯ ಹೆಡ್ ಕಾನ್ಸ್‌ಟೇಬಲ್ (HC 668) ಹಾಗೂ ಪೊಲೀಸ್ ಕಾನ್ಸ್‌ಟೇಬಲ್ (PC 2465) ರವರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ನ್ಯಾಯಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ 07/03/2026 ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.ಈ ಕಾರ್ಯಾಚರಣೆ ವಿಟ್ಲ ಪೊಲೀಸ್ ಠಾಣೆಯ ಅಧಿಕಾರಿಗಳ ಚುರುಕು ಕಾರ್ಯಾಚರಣೆಯಿಂದ ಯಶಸ್ವಿಯಾಗಿದೆ.

Read More

ಪುತ್ತೂರು: ಉಪ್ಪಿನಂಗಡಿ ಬೊಳ್ಳಾವು ಎಂಬಲ್ಲಿ ಮಹಿಳೆಯೋರ್ವರ ಮಾನಭಂಗಕ್ಕೆ ಯತ್ನಿಸಿ, ಹಲ್ಲೆ ನಡೆಸಿ ಜೀವ ಬೆದರಿಕೆಯೊಡ್ಡಿದ್ದ ಪ್ರಕರಣದ ಆರೋಪಿಗೆ ಜಿಲ್ಲಾ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಫೆಬ್ರವರಿ 11 ರಂದು ಬೆಳಿಗ್ಗೆ ತೋಟದಲ್ಲಿ ಅಡಿಕೆ ಹೆಕ್ಕಲು ಹೋಗಿದ್ದ ಸಂದರ್ಭ ಧರ್ನಪ್ಪ ನಾಯ್ಕ ಎಂಬಾತ ನನ್ನ ಬಳಿ ಬಂದು ನನ್ನ ಬಟ್ಟೆಯನ್ನು ಹರಿದು ಹಾಕಿ ಮೈಮೇಲೆ ಕೈ ಹಾಕಿ ಮಾನಭಂಗಕ್ಕೆ ಯತ್ನಿಸಿ ಅವಾಚ್ಯವಾಗಿ ಬೈದು, ತೋಟಕ್ಕೆ ನೀರು ಬಿಡುವ ಜೆಟ್ ನಿಂದ ಹಲ್ಲೆ ನಡೆಸಿದ್ದಾಗಿ ಆರೋಪಿಸಿ ಸುಮಿತ್ರಾ ಎಂಬವರು ಪೊಲೀಸರಿಗೆ ನೀಡಿದ್ದರು ತಾನು ಬೊಬ್ಬೆ ಹೊಡೆದಾಗ ಮೈದುನ ಅಲ್ಲಿಗೆ ಬರುವುದನ್ನು ನೋಡಿ ಆರೋಪಿಯು ಜೀವ ಬೆದರಿಕೆ ಹಾಕಿ ಓಡಿ ಹೋಗಿದ್ದಾಗಿ ದೂರಿನಲ್ಲಿ ತಿಳಿಸಿದ್ದರು. ಉಪ್ಪಿನಂಗಡಿ ಪೊಲೀಸರು ಆರೋಪಿ ವಿರುದ್ಧ ಅ.ಕ್ರ 0020/2026 ರಂತೆ ಪ್ರಕರಣ ದಾಖಲಿಸಿಕೊಂಡಿದ್ದರು. ಪ್ರಕರಣದ ಆರೋಪಿ ಧರ್ನಪ್ಪ ನಾಯ್ಕ ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯನ್ನು ಪುರಸ್ಕರಿಸಿ, ವಿಚಾರಣೆ ನಡೆಸಿದ ಪುತ್ತೂರು ಐದನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್…

Read More

ಕರ್ನಾಟಕ ಯಕ್ಷಗಾನ ಅಕಾಡೆಮಿ ವತಿಯಿಂದ ವಿಧಾನಸಭಾ ಸಚಿವಾಲಯ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದಲ್ಲಿ ಬೆಂಗಳೂರಿನ ವಿಧಾನ ಸೌಧದ ಮೆಟ್ಟಿಲುಗಳ ಮೇಲೆ ಇದೇ ಪ್ರಥಮ ಬಾರಿಗೆ ಉಭಯತಿಟ್ಟುಗಳ ಸುಪ್ರಸಿದ್ಧ ಯಕ್ಷಗಾನ ಕಲಾವಿದರ ಕೂಡುವಿಕೆಯಲ್ಲಿ ಯಕ್ಷಗಾನ ಪ್ರದರ್ಶನ ಮುಂಬರುವ ಮೇ ತಿಂಗಳಲ್ಲಿ ಆಯೋಜಿಸಲಾಗುವುದು ಎಂದು ವಿಧಾನಸೌಧದ ಸ್ಪೀಕರ್ ಯು. ಟಿ . ಖಾದರ್ ತಿಳಿಸಿದ್ದಾರೆ. ಈ ಬಗ್ಗೆ ಕರ್ನಾ ಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ನೇತೃತ್ವದ ಅಕಾಡೆಮಿ ನಿಯೋಗ ಮಂಗಳವಾರ ವಿಧಾನಸೌಧದ ಸ್ಪೀಕರ್ ಯು. ಟಿ .ಖಾದರ್ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿತು. ನಿಯೋಗದ ಮನವಿಗೆ ಸ್ಪಂದಿಸಿದ ಸ್ಪೀಕರ್ ಯು. ಟಿ. ಖಾದರ್ ಅವರು ಶಾಸಕರು ಮತ್ತು ಪರಿಷತ್ ಸದಸ್ಯರು ವೀಕ್ಷಿಸಲು ಅನುಕೂಲವಾಗುವ ಹಾಗೆ ಹೆಸರಾಂತ ಯಕ್ಷಗಾನ ಕಲಾವಿದರನ್ನು ಒಳಗೊಂಡ ಯಕ್ಷಗಾನ ಪ್ರದರ್ಶನಕ್ಕೆ ಅವಕಾಶ ನೀಡುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ವಿಧಾನಸಭಾ ಸಚಿವಾಲಯದ ಕಾರ್ಯದರ್ಶಿ ವಿಶಾಲಾಕ್ಷಿ, ಯಕ್ಷಗಾನ ಅಕಾಡೆಮಿ ರಿಜಿಸ್ಟ್ರಾರ್ ನಮೃತಾ ಎನ್., ಸದಸ್ಯರುಗಳಾದ ಕೊಪ್ಪಲ…

Read More

ಮಂಗಳೂರು: ಪಾಂಡೇಶ್ವರ ಅಗ್ನಿಶಾಮಕ ದಳದ ದಕ್ಷ ಹಾಗೂ ಪ್ರಾಮಾಣಿಕ ಸಿಬ್ಬಂದಿ ಕಾರ್ತಿಕ್ ಅವರಿಗೆ 2025ನೇ ಸಾಲಿನ ಮಾನ್ಯ ಮುಖ್ಯಮಂತ್ರಿ ಅವರ ಚಿನ್ನದ ಪದಕ ಲಭಿಸಿದೆ. ಮಂಗಳೂರು ಕುಂಪಲ ನಿವಾಸಿಯಾಗಿರುವ ಇವರು ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತುತುರ್ತು ಸೇವೆಗಳ ಹುದ್ದೆಗೆ 2008ರಲ್ಲಿ ಸೇರ್ಪಡೆಗೊಂಡು ತರಬೇತಿಯನ್ನು ಬೆಂಗಳೂರಿನಲ್ಲಿ ಪಡೆದಿದ್ದರು. ಬಳಿಕ ಮಡಿಕೇರಿ, ಗೋಣಿಕೊಪ್ಪ, ಉಡುಪಿ, ಬೆಳ್ತಂಗಡಿಯಲ್ಲಿ ಕಾರ್ಯ ನಿರ್ವಹಿಸಿದ್ದರು. ಪ್ರಸ್ತುತ ಪಾಂಡೇಶ್ವರ ಅಗ್ನಿಶಾಮಕ ಠಾಣೆಯಲ್ಲಿ ಕರ್ತವ್ಯವನ್ನು ನಿರ್ವಹಿಸುತ್ತಿದ್ದಾರೆ. ಕಾರ್ತಿಕ್ ಅವರ 18 ವರ್ಷಗಳ ಸೇವೆಯನ್ನು ಗುರುತಿಸಿ ಅನೇಕ ನಗದು ಬಹುಮಾನಗಳು ಲಭಿಸಿದೆ ಇವರ ದಕ್ಷ ಮತ್ತು ಪ್ರಾಮಾಣಿಕ ಸೇವೆಯನ್ನು ಗುರುತಿಸಿ ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ 2025 ನೇ ಸಾಲಿನ ಮುಖ್ಯಮಂತ್ರಿ ಅವರ ಚಿನ್ನದ ಪದಕ ಲಭಿಸಿದೆ.

Read More

ಬಂಟ್ವಾಳ: 2014ರಲ್ಲಿ ದಾಖಲಾಗಿದ್ದ ವಿದೇಶೀಯರ ಕಾಯ್ದೆ ಸಂಬಂಧಿತ ಪ್ರಕರಣದಲ್ಲಿ ಸುಮಾರು 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಅಪರಾಧ ಸಂಖ್ಯೆ 152/2014ರಲ್ಲಿ FOREIGNERS ACT ಕಲಂ 14(a)(b)(c) ಹಾಗೂ 34 IPC ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಉಡುಪಿ ಮೂಲದ ತಾಜ್ ಮೊಹಮ್ಮದ್ ಯುಸೂಫ್ (59) ಆರೋಪಿ ಆಗಿದ್ದು, ದೀರ್ಘಕಾಲದಿಂದ ಪತ್ತೆಯಾಗದೆ ತಪ್ಪಿಸಿಕೊಂಡಿದ್ದನು. ಆರೋಪಿಯ ಸುಳಿವು ಪತ್ತೆಯಾದ ಹಿನ್ನೆಲೆಯಲ್ಲಿ ಪೊಲೀಸರು ಕಾರ್ಕಳ ಭಾಗದಲ್ಲಿ ದಾಳಿ ನಡೆಸಿ ಫೆ.24ರಂದು ಬಂಧಿಸಿದ್ದಾರೆ. ಈ ಕಾರ್ಯಾಚರಣೆ ಬಂಟ್ವಾಳ ಸಹಾಯಕ ಪೊಲೀಸ್ ಅಧೀಕ್ಷಕರಾದ ಯಶ್ ಕುಮಾರ್ ಶರ್ಮಾ ಅವರ ಸೂಚನೆಯಂತೆ ನಡೆಯಿತು. ಪೊಲೀಸ್ ಉಪ ನಿರೀಕ್ಷಕರಾದ ಮಂಜುನಾಥ ಟಿ ಮತ್ತು ಕೃಷ್ಣಕಾಂತ ಕೆ ಅವರ ನೇತೃತ್ವದಲ್ಲಿ ಪಿಸಿ 2462 ಶಿವಾನಂದ ಮಡ್ಡಿ, ಪಿಸಿ 2467 ಶಿದ್ದಪ್ಪ ಹಾಗೂ ಪಿಸಿ 2474 ಪ್ರವೀಣ್ ಅವರನ್ನೊಳಗೊಂಡ ತಂಡ ಆರೋಪಿಯನ್ನು ವಶಕ್ಕೆ ಪಡೆದಿದೆ.ಬಂಧಿತನನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ…

Read More