Author: main-admin

ಬಂಟ್ವಾಳ; ಬಿಸಿಎಂ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿಗಳು ಹೊಡೆದಾಡಿಕೊಂಡ ಘಟನೆ ವಾಮದಪದವಿನಲ್ಲಿರುವ ಬಿಸಿಎಂ ವಿದ್ಯಾರ್ಥಿ ನಿಲಯದಲ್ಲಿ ನಡೆದಿದೆ. ಪಿಯುಸಿ ವಿದ್ಯಾರ್ಥಿಗಳಿಗೆ ಅದೇ ವಿದ್ಯಾರ್ಥಿ ನಿಲಯದ ಪದವಿ ವಿದ್ಯಾರ್ಥಿಗಳು ಹಲ್ಲೆ ನಡೆಸಿದ್ದಾರೆ. ಈ ಕುರಿತು ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ವಾಮದಪದವು ಕಾಲೇಜಿ‌ನ ಪ್ರಾಂಶುಪಾಲರು ದೂರು ನೀಡಿದ್ದಾರೆ. ವಿದ್ಯಾರ್ಥಿ ನಿಲಯದಲ್ಲಿ ವಾಮದಪದವು ಪದವಿ ಪೂರ್ವ ಕಾಲೇಜಿನ 14 ವಿದ್ಯಾರ್ಥಿಗಳು ವಾಸವಿದ್ದರು.‌ಇವರಿಗೆ ಪದವಿ ವಿದ್ಯಾರ್ಥಿಗಳಾದ ಶರತ್ ಎಸ್, ಅಭಿಷೇಕ್, ಸುದೀಪ್, ರಾಕೇಶ್ ಹಾಗೂ ಸಂಗಡಿಗರು ಸೇರಿ ಬೆಲ್ಟ್, ವಿಕೆಟ್ ಗಳಿಂದ ಹಲ್ಲೆ ಮಾಡಿದ್ದಾರೆಂದು ದೂರು ದಾಖಲಿಸಲಾಗಿದೆ. ಹಲ್ಲೆಯಿಂದ ಗಾಯಗೊಂಡ ವಿದ್ಯಾರ್ಥಿಗಳಿಗೆ ವಾಮದಪದವು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ.

Read More

ಮಂಗಳೂರು: ಮಂಗಳೂರು ಹೊರವಲಯದ ಮಳಲಿ ಪೇಟೆ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಮಂಗಳೂರಿನ ಮೂರನೇ ಹೆಚ್ಚುವರಿ ಸಿವಿಲ್‌ ನ್ಯಾಯಾಲಯ ಆ. 1ರಂದು ಆದೇಶ ನೀಡಲಿದೆ. ಮಸೀದಿ ಕಟ್ಟಡದಲ್ಲಿ ದೇವಸ್ಥಾನ ಹೋಲುವ ರಚನೆ ಕಂಡುಬಂದಿದ್ದ ಹಿನ್ನೆಲೆಯಲ್ಲಿ ಕೋರ್ಟ್‌ ಕಮಿಷನರ್‌ ಮೂಲಕ ಸಮೀಕ್ಷೆ ನಡೆಸುವಂತೆ ಹಿಂದೂ ಸಂಘಟನೆ ಪರ ವಕೀಲರು ಮನವಿ ಮಾಡಿದ್ದರು. ಇದಕ್ಕೆ ಮಸೀದಿ ಪರ ವಕೀಲರು ಆಕ್ಷೇಪಿಸಿದ್ದರು. ವಕ್ಫ್ ಬೋರ್ಡ್‌ ಅಧೀನದಲ್ಲಿ ಇರುವುದರಿಂದ ಸರ್ವೇ ನಡೆಸಲು ಅವಕಾಶ ನೀಡದೆ ನವೀಕರಣ ಕಾಮಗಾರಿ ಮುಂದುವರಿಸಲು ಅವಕಾಶ ನೀಡಬೇಕು ಎಂದು ವಾದ ಮಂಡಿಸಿದ್ದರು. ಸಿವಿಲ್‌ ನ್ಯಾಯಾಲಯ ತೀರ್ಪು ಪ್ರಕಟಿಸದಂತೆ ಸ್ಥಳೀಯರಾದ ಮನೋಜ್‌ ಕುಮಾರ್‌, ಧನಂಜಯ ಮತ್ತಿತರರು ಸಲ್ಲಿಸಿದ್ದ ಅರ್ಜಿಯನ್ನು ರಾಜ್ಯ ಹೈಕೋರ್ಟ್‌ ವಜಾಗೊಳಿಸಿದ್ದ ಆದೇಶದ ಪ್ರತಿಯನ್ನು ಮಸೀದಿ ಪರ ವಕೀಲರು ಸಿವಿಲ್‌ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ಆದೇಶದ ಪ್ರತಿ ಸ್ವೀಕರಿಸಿದ ಮಂಗಳೂರಿನ ಮೂರನೇ ಹೆಚ್ಚುವರಿ ಸಿವಿಲ್‌ ನ್ಯಾಯಾಲಯವು ತೀರ್ಪನ್ನು ಆ. 1ಕ್ಕೆ ನಿಗದಿಗೊಳಿಸಿದೆ.

Read More

ಬೆಳ್ತಂಗಡಿ: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಲಾಗಿದೆ ಎಂಬ ಆರೋಪದಲ್ಲಿ ಯುವಕರ ತಂಡವೊಂದು ವ್ಯಕ್ತಿಯೊಬ್ಬರು ಹಲ್ಲೆ ನಡೆಸಿದ್ದು, ಈ ವೇಳೆ ಗಲಾಟೆಯನ್ನು ತಡೆಯಲು ಬಂದ ವ್ಯಕ್ತಿಗೂ ಹಲ್ಲೆ ನಡೆಸಲಾಗಿದೆ. ಪರಿಣಾಮ ಗಂಭೀರವಾಗಿ ಗಾಯಗೊಂಡ ಅವರು ಆಸ್ಪತ್ರೆಗೆ ದಾಖಲಿಸುವ ವೇಳೆ ಮೃತಪಟ್ಟ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಪರಾರಿ ಶಾಂತಿನಗರದ ನಿವಾಸಿ ಜಾರಪ್ಪ ನಾಯ್ಕ ( 55 ) ಮೃತಪಟ್ಟ ವ್ಯಕ್ತಿ. ನಾರಾಯಣ ನಾಯ್ಕ (47) ಎಂಬಾತ ಸ್ಥಳೀಯ ಆರು ವರ್ಷದ ಅಪ್ರಾಪ್ತ ಬಾಲಕಿಗೆ ಕಳೆದ 10 ದಿನಗಳ ಹಿಂದೆ ಲೈಂಗಿಕ ಕಿರುಕುಳ ನೀಡಿದ್ದ ಎಂದು ಹೇಳಲಾಗುತ್ತಿದೆ. ಈ ಲೈಂಗಿಕ ಕಿರುಕುಳ ವಿಚಾರವಾಗಿ ಅದಾಗಲೆ ರಾಜಿ ಸಂಧಾನವೂ ನಡೆದಿತ್ತು. ಆದರೆ ನಿನ್ನೆ ಸಂಜೆ ವೇಳೆ ಆತ ಮತ್ತೆ ಬಾಲಕಿಯನ್ನು ಕರೆದು ಮಾತಾಡಿಸಿದ್ದ ಎಂದು ಆರೋಪಿಸಲಾಗಿದೆ. ಪರಿಣಾಮ ಇದರ ಬಗ್ಗೆ ತಗಾದೆ ತೆಗೆದ ಯುವಕರ ತಂಡ ನಾರಾಯಣ ನಾಯ್ಕನನ್ನು ತಡೆದು ಹಲ್ಲೆಗೆ ಮುಂದಾಗಿದೆ. ಇದನ್ನು ನೋಡಿ ಜಾರಪ್ಪ ನಾಯ್ಕ ಎಂಬವರು ಹಲ್ಲೆ ನಡೆಸುವುದನ್ನು…

Read More

ಕೋಟ: ಮೀನುಗಾರಿಕೆ ತೆರಳಿದ ವೇಳೆ ದೋಣಿ ಮಗುಚಿ ಬಿದ್ದು ಓರ್ವ ಮೃತಪಟ್ಟ ಘಟನೆ ಪಾರಂಪಳ್ಳಿ ಪಡುಕರೆಯ ಕಡಲ ಕಿನಾರೆಯಲ್ಲಿ ನಡೆದಿದೆ‌. ಪಾರಂಪಳ್ಳಿ ನಿವಾಸಿ ಸುಮಂತ್ ಮೊಗವೀರ (23) ಮೃತ ದುರ್ದೈವಿ. ನಿನ್ನೆ ಬೆಳಿಗ್ಗೆ ಸಂದೀಪ್, ಪ್ರಜ್ವಲ್ ಹಾಗೂ ಸುಮಂತ್ ಮೀನುಗಾರಿಕೆ ತೆರಳಲು ನಾಡದೋಣಿಯ ಮೂಲಕ ಸಮುದ್ರಕ್ಕೆ ತೆರಳಿದ್ದರು. ಸಮುದ್ರದಲ್ಲಿ ಈ ವೇಳೆ ಭಾರೀ ಗಾತ್ರದ ಅಲೆಗೆ ಸಿಲುಕಿ ದೋಣಿಯಲ್ಲಿದ್ದ ಮೂವರು ಮುಗುಚಿ ಬಿದ್ದಿದ್ದು, ಇಬ್ಬರು ಸಂದೀಪ್ ಮತ್ತು ಪ್ರಜ್ವಲ್ ಈಜಿ ದಡ ಸೇರಿದ್ದಾರೆ. ಆದರೆ ಸುಮಂತ್ ಬಾರಿ ಗಾತ್ರದ ಅಲೆಗಳಿಗೆ ಸಿಲುಕಿ‌ ಸಮುದ್ರಪಾಲಾಗಿದ್ದಾನೆ.

Read More

ಬೈಂದೂರು; ಉಪ್ಪುಂದ ನಂದನವನ ವಸತಿ ಗೃಹಕ್ಕೆ ಅನ್ಯಕೋಮಿನ ಜೋಡಿಗಳು ಬಂದ ವಿಷಯ ತಿಳಿದು ಹಿಂದೂ ಸಂಘಟನೆಯ ಕಾರ್ಯಕರ್ತರು ಬೈಂದೂರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಉಳ್ಳಾಲದ ನಿವಾಸಿ ಅಮೀರ್ (45) ಎಂಬವರು 28 ವರ್ಷದ ಯುವತಿಯೊಂದಿಗೆ ಬೈಂದೂರು ಲಾಡ್ಜ್ ಗೆ ತೆರಳಿದ್ದರು. ಅಮೀರ್ ಗುಜರಿ ವ್ಯಾಪಾರಿಯಾಗಿದ್ದು, ಯುವತಿ ಆತನ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದಳು ಎನ್ನಲಾಗಿದೆ. ಇದೀಗ ಇಬ್ಬರನ್ನು ವಶಕ್ಕೆ ಪಡೆದು ಈ‌ ಕುರಿತು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ‌.

Read More

ಮಂಗಳೂರು: ಸ್ವಾಮೀಜಿ ಅನುಮಾನಾಸ್ಪದವಾಗಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಜಪೆಯ ತಲಕಲ ಸ್ವಾಮಿ ಆತ್ಮಹತ್ಯೆ ಮಾಡಿಕೊಂಡವರು. ಇವರು ಜೀವನದಲ್ಲಿ ಜಿಗುಪ್ಸೆ ಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.‌ಇನ್ನೊಂದು ಕಡೆ ಅವರ ಸಾವಿನ ಬಗ್ಗೆ ಅನುಮಾನ‌ ಕೂಡ ವ್ಯಕ್ತವಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Read More

ಪುತ್ತೂರು: ನಗರದೊಳಗೆ 200ಕ್ಕೂ ಅಧಿಕ ಅಂಗಡಿಗಳು ಉದ್ಯಮ ಪರವಾನಿಗೆ ಪತ್ರವನ್ನೇ ಪಡೆಯದೆ ವ್ಯಾಪಾರ ವ್ಯವಹಾರದಲ್ಲಿ ತೊಡಗಿರುವುದು ಬೆಳಕಿಗೆ ಬಂದಿದ್ದು ಅಂತಹ ಅಂಗಡಿಗಳಿಗೆ ನಗರಸಭೆ ಬೀಗ ಜಡಿಯಲು ಮುಂದಾಗಿದೆ. ಉದ್ದಿಮೆ ನಡೆಸುವ ಅಂಗಡಿ ಮಾಲಕರು ಅಧಿನಿಯಮದ ಪ್ರಕಾರ ಪರವಾನಿಗೆ ಪತ್ರ ಪಡೆದೆ ವ್ಯವಹಾರ ಮಾಡಬೇಕು. ಉದ್ಯಮ ಪರವಾನಿಗೆ ಪತ್ರ ಇಲ್ಲದಿದ್ದರೆ ಅದನ್ನು ಅನಧಿಕೃತ ಎಂದೇ ಪರಿಗಣಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಅಧಿಕೃತ, ಅನಧಿಕೃತ ಅಂಗಡಿ ಪತ್ತೆ ಕಾರ್ಯ ನಡೆಸಲಾಗಿದೆ. ಅನಧಿಕೃತ ಅಂಗಡಿ ಗುರುತು ಪರವಾನಿಗೆ ಪಡೆದ ಕಟ್ಟಡದಲ್ಲಿ ವ್ಯವಹಾರ ಆರಂಭಿಸುವ ಮೊದಲ ಅಂಗಡಿ ಮಾಲಕ ನಗರಸಭೆಗೆ ಅರ್ಜಿ ಸಲ್ಲಿಸಿ (ಆನ್‌ಲೈನ್‌) ಉದ್ಯಮ ಪರವಾನಿಗೆ ಪಡೆಯಬೇಕು. ಪ್ರತೀ ವರ್ಷ ಪರವಾನಿಗೆ ಪತ್ರವನ್ನು ನವೀಕರಿಸಬೇಕು. ಆದರೆ ಪುತ್ತೂರು ನಗರದೊಳಗೆ 200ಕ್ಕೂ ಅಧಿಕ ಅಂಗಡಿಗಳು ಉದ್ಯಮ ಪರವಾನಿಗೆ ಪಡೆದು ಕೊಳ್ಳದೆ ವ್ಯಾಪಾರ ವ್ಯವಹಾರ ನಡೆಸುತ್ತಿದೆ. ಇದು ಕಾನೂನು ಬಾಹಿರವಾಗಿದ್ದು ಈ ಹಿನ್ನೆಲೆಯಲ್ಲಿ ಪೌರಾ ಯುಕ್ತರ ನೇತೃತ್ವದ ಅಧಿಕಾರಿಗಳ ತಂಡವು ಅಂತಹ ಅಂಗಡಿಗಳನ್ನು ಗುರುತು ಮಾಡಿದೆ. ಬೀಗ ಜಡಿಯುವಿಕೆ ಪ್ರತೀ ಹತ್ತು ವಾರ್ಡ್‌ಗಳಿಗೆ…

Read More

ವಿಟ್ಲ: ಬೆಳ್ಳಂಬೆಳಗ್ಗೆ ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ವಾಹನವನ್ನು ಹಿಂದು ಪರ ಸಂಘಟನೆಯ ಕಾರ್ಯಕರ್ತರು ತಡೆದು ನಿಲ್ಲಿಸಿದ ಘಟನೆ ವಿಟ್ಲದ ಕೋಡಂದೂರು ರಸ್ತೆಯಲ್ಲಿ ಜು.22 ರಂದು ಬೆಳಗ್ಗೆ ನಡೆದಿದೆ. ವಾಹನ ತಡೆಯುತ್ತಿದ್ದಂತೆ ಆರೋಪಿಗಳು ಕಾರ್ ಅನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾರೆ. ಬಳಿಕ ಕಾರಿನ ಗಾಜನ್ನು ಒಡೆದು ಶೋಚನೀಯ ಸ್ಥಿತಿಯಲ್ಲಿ ಇದ್ದ ದನಗಳನ್ನು ಹಿಂದು ಸಂಘಟನೆಯ ಕಾರ್ಯಕರ್ತರು ರಕ್ಷಿಸಿದ್ದಾರೆ. ಸ್ಥಳಕ್ಕೆ ವಿಟ್ಲ ಠಾಣೆಯ ಪೊಲೀಸರು ಬೇಟಿ ನೀಡಿ ಕಾರನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

Read More

ಕುಂಬಳೆ: ರೈಲು ಹಳಿಯ ಮೇಲೆ ಕಲ್ಲುಗಳನ್ನು ಇಟ್ಟು ಜು. 17ರಂದು ವಿದ್ವಂಸಕ ಕೃತ್ಯ ನಡೆಸಲು ಸಂಚು ರೂಪಿಸಿದ್ದ ಅಘಾತಕಾರಿ ವಿಚಾರ ಬಹಿರಂಗಗೊಂಡಿದೆ. ಬಂದ್ಯೋಡು ಮುಟ್ಟಂನ ಸಮೀಪ ಕೃತ್ಯವೆಸಗಿದ ಸಮಯದಲ್ಲಿ ಆ ಮಾರ್ಗವಾಗಿ ಮಂಗಳೂರು ಚೆನ್ನೈ ಮೈಲ್‌ ಎಕ್ಸ್‌ ಪ್ರಸ್‌ ಸಾಗಬೇಕಿತ್ತು ಆದರೆ ಲೊಕೊ ಪೈಲಟ್‌ ಇದನ್ನು ಗಮನಿಸಿದ್ದು ಇದರಿಂದ ಮುಂದೊದಗಬಹುದಾದ ದುರಂತ ತಪ್ಪಿತ್ತು.ಕಾಸರಗೋಡು ಮತ್ತು ಕಣ್ಣೂರು ಜಿಲ್ಲೆಗಳ ಕೋಟಿಕುಳಂ, ಕಣ್ಣಾಪುರಂ, ಕಣ್ಣೂರು ಸೌತ್‌, ವಳಪಟ್ಟಣಂ, ಪಾಪಿನಶ್ಯೇರಿ ಮತ್ತಿತರ ಕಡೆ ಇಂತಹುದೇ ಕೃತ್ಯ ಈ ಹಿಂದೆ ಎಸಗಲಾಗಿತ್ತು. ಈ ಘಟನೆಯನ್ನು ರೈಲ್ವೇ ಭದ್ರತಾ ಪಡೆ (ಆರ್‌ಪಿಎಫ್‌) ಮತ್ತು ಪೊಲೀಸ್‌ ವಿಭಾಗ ಗಂಭೀರವಾಗಿ ಪರಿಗಣಿಸಿದ್ದು, ಈ ಕೃತ್ಯದಲ್ಲಿ ಉಗ್ರಗಾಮಿಗಳ ಕೈವಾಡವಿರುವ ಬಗ್ಗೆಯೂ ತನಿಖೆ ನಡೆಸುವುದಾಗಿ ತಿಳಿಸಿದ್ದಾರೆ.ಜು. 17ರಂದು ಮಂಗಳೂರು ಚೆನ್ನೈ ಮೈಲ್‌ ಎಕ್ಸ್‌ ಪ್ರಸ್‌ ಸಾಗಬೇಕಿದಾದ ಸಮಯದಲ್ಲಿ ರೈಲಿನ ಲೊಕೊ ಪೈಲಟ್‌ ರೈಲು ಹಳಿಯಲ್ಲಿ ಕಲ್ಲಿರಿಸಿದುದನ್ನು ನೋಡಿ ಅಧಿಕಾರಿಗಳಿಗೆ ಮಾಹಿತಿ ರವಾನಿಸಿದ್ದು ತತ್‌ಕ್ಷಣದ ಕಾರ್ಯಾಚರಣೆಯಲ್ಲಿ ಕಲ್ಲುಗಳನ್ನು ತೆರವುಗೊಳಿಸಿ ಸಂಭಾವ್ಯ ಅನಾಹುತ ತಪ್ಪಿಸಲಾಗಿತ್ತು.

Read More

ಹಾಸನ: ರಾಷ್ಟ್ರೀಯ ಹೆದ್ದಾರಿ 75 ದೋಣಿಗಾಲ್ ಶಿರಾಡಿಘಾಟ್ ಮಾರ್ಗದಲ್ಲಿ ಲಾರಿ ಮತ್ತು ಬಸ್ ಸೇರಿದಂತೆ ಎಲ್ಲಾ ವಾಹನ ಸಂಚಾರಕ್ಕೆ ಅನುಮತಿ ಸಿಕ್ಕಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರ ವರದಿ ಮೆರೆಗೆ ಎಲ್ಲಾ ರೀತಿ ವಾಹನ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಕಳೆದ ಒಂದು ವಾರ ಹಿಂದೆ ಭಾರಿ ಮಳೆಯಿಂದಾಗಿ ರಸ್ತೆ ಕುಸಿತವಾಗಿತ್ತು. ಹೀಗಾಗಿ ಬಸ್‌ ಮತ್ತು ಲಾರಿ ಸಂಚಾರಕ್ಕೆ ಜಿಲ್ಲಾಧಿಕಾರಿ ಬ್ರೇಕ್‌ ಹಾಕಿದ್ದರು. ಇದೀಗ ಎಲ್ಲ ವಾಹನ ಸಂಚಾರಕ್ಕೂ ಅನುಮತಿ ನೀಡಲಾಗಿದೆ ಎಂದು ತಹಸೀಲ್ದಾರ್ ಜಯಕುಮಾರ್ ಹೇಳಿದ್ದಾರೆ.

Read More