ದಕ್ಷಿಣಕನ್ನಡ : ಭಾರೀ ಮಳೆಯಿಂದಾಗಿ ಮಣ್ಣು ಕುಸಿತ ಗೊಂಡ ಹಿನ್ನೆಲೆ ಬಂದ್ ಆಗಿದ್ದ ಶಿರಾಡಿಘಾಟ್, ಮುಂದಿನ ವಾರದಿಂದ ತಾತ್ಕಾಲಿಕವಾಗಿ ಒನ್ ವೇ ಸಂಚಾರಕ್ಕೆ ಅವಕಾಶ ನೀಡಲಾಗುತ್ತಿದೆ. ಕಾಮಾಗಾರಿ ಬಳಿಕ ಭಾರೀವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗುತ್ತದೆ. ಮುಂದಿನ ವಾರದಿಂದ ಶಿರಾಡಿಘಾಟ್ ಸಂಚಾರಕ್ಕೆ ಮುಕ್ತವಾಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ.
Author: main-admin
ಉಡುಪಿ: ಪತಿಯ ಮರಣಾನಂತರ ಮಾನಸಿಕ ಖಿನ್ನತೆ ಉಲ್ಬಣಗೊಂಡು ಹೆರ್ಗ ಗ್ರಾಮದ ಈಶ್ವರನಗರ ನಿವಾಸಿ ಸುಮತಿ(72) ಎಂಬುವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅನೇಕ ವರ್ಷಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದರು. ಕಳೆದ ವರ್ಷ ಇವರ ಪತಿ ಅನಾರೋಗ್ಯದಿಂದ ಮೃತಪಟ್ಟಿದ್ದು, ಬಳಿಕ ಮಾನಸಿಕ ಖಿನ್ನತೆ ಸಮಸ್ಯೆ ಉಲ್ಬಣಗೊಂಡಿತ್ತು. 25 ದಿನಗಳ ಹಿಂದೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು.
ಉಪ್ಪಿನಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪದ ಕೂಟೇಲು ಸೇತುವೆ ಬಳಿ ಕಾರುಗಳೆರಡು ಮುಖಾಮುಖಿ ಢಿಕ್ಕಿಯಾಗಿ ಒಂದು ಕಾರಿನಲ್ಲಿದ್ದ ಪ್ರಯಾಣಿಕರು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ. ಕೆಮ್ಮಾರದ ಮುಹಮ್ಮದ್ ನವಾಝ್ ಹಾಗೂ ಅನ್ಸಾರ್ ಗಾಯಗೊಂಡವರಾಗಿದ್ದಾರೆ. ಸ್ವಿಫ್ಟ್ ಡಿಸೈರ್ ಕಾರಿನಲ್ಲಿದ್ದ ಸಾಮೆತ್ತಡ್ಕದ ನಿವಾಸಿ ಅಬ್ದುಲ್ ಮಜೀದ್ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಉಪ್ಪಿನಂಗಡಿ ಕಡೆಯಿಂದ ಹಳೆಗೇಟು ಕಡೆ ಹೋಗುತ್ತಿದ್ದ ಕಾರು ಕೂಟೇಲು ಸೇತುವೆಯ ಬಳಿ ರಸ್ತೆಯ ವಿರುದ್ಧ ದಿಕ್ಕಿನಲ್ಲಿ ಬಂದು ಹಳೆಗೇಟಿನಿಂದ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ಸ್ವಿಫ್ಟ್ ಡಿಸೈರ್ ಕಾರಿಗೆ ಮುಖಾಮುಖಿ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಸ್ವಿಫ್ಟ್ ಡಿಸೈರ್ ಕಾರು ಹಳೆಗೇಟು ಕಡೆ ಮುಖ ಮಾಡಿ ರಸ್ತೆಯಂಚಿನ ತಗ್ಗು ಪ್ರದೇಶಕ್ಕೆ ಮಗುಚಿ ಬಿದ್ದರೆ, ಮಾರುತಿ 800 ಕಾರು ರಸ್ತೆಯ ಇನ್ನೊಂದು ಬದಿ ಉಪ್ಪಿನಂಗಡಿ ಕಡೆಗೆ ಮುಖ ಮಾಡಿ ನಿಂತಿದೆ. ಮಾರುತಿ ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ. ಪುತ್ತೂರು ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಿನೀವಾ: ವಿದೇಶಗಳಲ್ಲಿ ಕಾಣಿಸಿಕೊಂಡು ಇದೀಗ ಭಾರತದಲ್ಲೂ ಆತಂಕ ಸೃಷ್ಟಿಸಿರುವ ಮಂಕಿಪಾಕ್ಸ್ ಅಥವಾ ಮಂಗನ ಸಿಡುಬು ಖಾಯಿಲೆಯ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ಅಚ್ಚರಿಯ ಮಾಹಿತಿಯೊಂದನ್ನು ನೀಡಿದೆ. 50ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಈ ವರ್ಷ 3,200ಕ್ಕಿಂತ ಅಧಿಕ ಮಂಕಿಪಾಕ್ಸ್ ಪ್ರಕರಣಗಳು ದೃಢಪಟ್ಟಿದ್ದು, ಒಬ್ಬ ವ್ಯಕ್ತಿ ಮೃತಪಟ್ಟಿರುವುದಾಗಿ ಡಬ್ಲ್ಯುಎಚ್‌ಒಗೆ ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಡಬ್ಲ್ಯುಎಚ್‌ಒ ಮತ್ತೊಂದು ಅಚ್ಚರಿ ಮಾಹಿತಿ ನೀಡಿದ್ದು, ಮಂಕಿಪಾಕ್ಸ್ ಕಂಡು ಬಂದಿರುವವರು ಬಹುತೇಕರು ಮಧ್ಯವಯಸ್ಸಿನವರಾಗಿದ್ದಾರೆ. ಅಲ್ಲದೇ ಇವರಲ್ಲಿ ಬಹುತೇಕರು ಪುರುಷರೇ ಆಗಿದ್ದಾರೆ. ಇನ್ನೂ ವಿಚಿತ್ರವೆಂದರೆ ಈ ಖಾಯಿಲೆ ಕಾಣಿಸಿಕೊಂಡ ಪ್ರತಿ ಐವರಲ್ಲಿ ಮೂವರು, ಪುರುಷ ಮತ್ತು ಪುರುಷ ಲೈಂಗಿಕ ಸಂಪರ್ಕ ಮಾಡಿರುವವರು ಎಂದು ಡಬ್ಲ್ಯುಎಚ್‌ಒ ಹೇಳಿಕೆ ನೀಡಿದೆ. ‘ಮಂಕಿಪಾಕ್ಸ್’ ಪ್ರಕರಣಗಳು ಏರಿಕೆಯಾಗುತ್ತಿರುವ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ಮುಖ್ಯಸ್ಥ ಟೆಡ್ರೋಸ್ ಗೆಬ್ರೇಯೇಸಸ್ ಕಳವಳ ವ್ಯಕ್ತಪಡಿಸಿದ್ದು, ಸದ್ಯ ಈ ಸೋಂಕು ಆರೋಗ್ಯ ತುರ್ತುಸ್ಥಿತಿಯಲ್ಲ ಎಂದು ಶನಿವಾರ ಹೇಳಿದ್ದರು. ಪಶ್ಚಿಮ ಮತ್ತು ಮಧ್ಯ ಆಫ್ರಿಕಾ ದೇಶಗಳಲ್ಲಿ ಹೆಚ್ಚಾಗಿ ಕಾಣಿಸಿಕೊಂಡಿದ್ದ ‘ಮಂಕಿಪಾಕ್ಸ್’ ಪ್ರಕರಣಗಳು…
ವಿಟ್ಲ: ವಿಟ್ಲ ಮುಡ್ನೂರು ದಂಬೆತಾರು ಮನೆಯಿಂದ ಚಿನ್ನಾಭರಣ ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಮನೆಕೆಲಸಕ್ಕಿದ್ದ ಪುತ್ತೂರು ಮೂಲದ ದಂಪತಿಯನ್ನು ಬಂಧಿಸಿದ್ದಾರೆ.ಬಂಧಿತರನ್ನು ಸರ್ವೆ ಬಾವಿಕಟ್ಟೆ ನಿವಾಸಿ ಪ್ರಮೋದ್(26) ಮತ್ತು ಅವನ ಪತ್ನಿ ಸುಮತಿ(25) ಎಂದು ಗುರುತಿಸಲಾಗಿದೆ. ಇವರಿಬ್ಬರು ದಂಬೆತಾರು ವಿನಯ ಚಂದ್ರನಾಯಕ್ ರವರ ಮನೆಯಲ್ಲಿ ಕೂಲಿ ಕೆಲಸಕ್ಕಿದ್ದು, ಮನೆಯ ಬೆಡ್ ರೂಮ್ ನ ಕಪಾಟಿನಲ್ಲಿದ್ದ ಚಿನ್ನದ ಬ್ರಾಸ್ ಲೈಟ್-1, ಚಿನ್ನದ ಲಕ್ಷ್ಮಿ ಚೈನ್-01, ಚಿನ್ನದ ಪದಕ ಸಹಿತ ಚೈನು -1, ಚಿನ್ನದ ಲಕ್ಷ್ಮಿ ಪದಕ ಸಹಿತ ಚೈನ್-01, ಚಿನ್ನದ ಉಂಗುರಗಳು -03 (Total- 98Gram) ಚಿನ್ನಾಭರಣಗಳು , ಸದ್ರಿ ಚಿನ್ನಾಭರಣಗಳ ಒಟ್ಟು ಮೌಲ್ಯ ಅಂದಾಜು 1,48,000/ ರೂಪಾಯಿಯ ಚಿನ್ನಾಭರಣಗಳನ್ನು ಕಳವುಗೈದಿದ್ದರು ಈ ಬಗ್ಗೆ ತನಿಖೆ ಆರಂಭಿಸಿದ ಪೊಲೀಸರು ಆರೋಪಿಗಳಿಬ್ಬರನ್ನು ಬಂಧಿಸಿದ್ದು, ಕಳವಾಗಿದ್ದ 98 ಗ್ರಾಂ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಕಾರ್ಯಾಚರಣೆಯಲ್ಲಿ ವಿಟ್ಲ ಪೊಲೀಸ್ ಠಾಣಾ ಉಪನಿರೀಕ್ಷಕರಾದ ಸಂದೀಪ್ ಕುಮಾರ್ ಶೆಟ್ಟಿ, ಮಂಜುನಾಥ ಟಿ., ಪೊಲೀಸ್ ಹೆಡ್ ಕಾನ್ಸ್ಟೇಬಲ್ ಗಳಾದ ಜಯರಾಮ ಕೆ.ಟಿ., ರಕ್ಷಿತ್, ಕರುಣಾಕರ, ಪೊಲೀಸ್ ಕಾನ್ಸ್ಟೇಬಲ್…
ದಕ್ಷಿಣಕನ್ನಡ : ರಾಜ್ಯಾದ್ಯಂತ ಭಾರಿ ಮಳೆ ಸುರಿಯುತ್ತಿದ್ದು, ದಕ್ಷಿಣಕನ್ನಡ ಕನ್ನಡ ಜಿಲ್ಲೆಯಲ್ಲೂ ಮಳೆಯಿಂದಾಗಿ ಹಲವು ಸಮಸ್ಯೆಗಳು ಎದುರಾಗಿದೆ. ಇದೀಗ ಶಿರಾಡಿಘಾಟ್ ಆಯ್ತು, ಇದೀಗ ಚಾರ್ಮಾಡಿಘಾಟ್ 2ನೇ ತಿರುವಿನಲ್ಲಿ ರಸ್ತೆ ಕುಸಿತಗೊಂಡಿದೆ. ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ಬಳಿಯ ಚಾರ್ಮಾಡಿಘಾಟ್‌ನ 2ನೇ ತಿರುವಿನಲ್ಲಿ ಕುಸಿತಗೊಂಡಿದೆ. ಸ್ಲ್ಯಾಬ್ ಬಿರುಕು ಕಣಿಸಿಕೊಂಡಿದ್ದು, ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ವಾಹನ ಸವಾರರು ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ.
ಬೆಂಗಳೂರು: ಭಾರತಕ್ಕೆ ಸ್ವಾತಂತ್ರ್ಯ ಬಂದು ಮುಂದಿನ ಆಗಸ್ಟ್ 15ಕ್ಕೆ 75 ವರ್ಷ ಆಗ್ತಿದೆ. ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಿನ್ನೆಲೆ ಕೇಂದ್ರ ಸರ್ಕಾರ `ಹರ್ ಘರ್ ತಿರಂಗಾ’ ಅಭಿಯಾನ ನಡೆಸಲು ಘೋಷಿಸಿದೆ. ಇದರ ಬೆನ್ನಲ್ಲೇ ರಾಜ್ಯದ ಪದವಿ, ಸ್ನಾತಕೋತ್ತರ ಪದವಿ ಕಾಲೇಜುಗಳು, ವಿವಿಗಳಲ್ಲಿ ಕಡ್ಡಾಯವಾಗಿ ತಿರಂಗ ಹಾರಿಸಬೇಕು ಎಂದು ಉನ್ನತ ಶಿಕ್ಷಣ ಇಲಾಖೆ ಆದೇಶಿಸಿದೆ. ಶಾಲಾ ಶಿಕ್ಷಣ ಇಲಾಖೆ ಕೂಡ ಮಹತ್ವದ ಆದೇಶ ಹೊರಡಿಸಲು ಮುಂದಾಗಿದೆ. ಅಮೃತಮಹೋತ್ಸವ ಹಿನ್ನೆಲೆ ಆಗಸ್ಟ್ 11 ರಿಂದ 17ರ ವರೆಗೆ ರಾಜ್ಯದ ಎಲ್ಲ ಪ್ರಾಥಮಿಕ ಶಾಲೆಗಳು, ಪ್ರೌಢಶಾಲೆಗಳು, ಪಿಯುಸಿ ಕಾಲೇಜುಗಳು, ಮದರಸಾಗಳ ಮೇಲೂ ಕಡ್ಡಾಯವಾಗಿ ತಿರಂಗಾ ಹಾರಿಸಲೇಬೇಕು ಎಂದು ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಪತ್ರ ಬರೆದಿದ್ದಾರೆ. ಸರ್ಕಾರಿ, ಅನುದಾನಿತ, ಅನದಾನ ರಹಿತ ಶಾಲಾ-ಕಾಲೇಜುಗಳು, ಎಲ್ಲಾ ಮದರಸಾಗಳು ಈ ಅದೇಶವನ್ನು ಪಾಲಿಸಬೇಕು. ತ್ರಿವರ್ಣ ಧ್ವಜದ ಜೊತೆಗೆ ಶಾಲೆ, ಕಾಲೇಜು, ಮದರಸಾಗಳಲ್ಲಿ ರಾಷ್ಟ್ರಭಕ್ತಿ ಮೂಡಿಸುವ ಸ್ವಾತಂತ್ರ್ಯದ ತ್ಯಾಗ, ಬಲಿದಾನ ಮೆಲುಕು ಹಾಕುವ ಗೀತ ಗಾಯನ…
ಮಂಗಳೂರು: ನಗರದ ಪಂಜಿಮೊಗರು ಬಳಿ ರಸ್ತೆ ದಾಟುತ್ತಿದ್ದ ಇಬ್ಬರು ಬಾಲಕರಿಗೆ ಬೈಕ್ ಡಿಕ್ಕಿಯಾದ ಘಟನೆ ಭಾನುವಾರ ಮದ್ಯಾಹ್ನ ನಡೆದಿದೆ. ಇಬ್ಬರು ಬಾಲಕರು ಪಂಜಿಮೊಗರಿನಲ್ಲಿ ರಸ್ತೆ ದಾಟುತ್ತಿದ್ದ ವೇಳೆಯಲ್ಲಿ ವೇಗವಾಗಿ ಬಂದ ಬೈಕ್ ಬಾಲಕರಿಗೆ ಡಿಕ್ಕಿಯಾಗಿದೆ. ಡಿಕ್ಕಿಯಾದ ರಭಸಕ್ಕೆ ಇಬ್ಬರು ಬಾಲಕರು ರಸ್ತೆ ಪಕ್ಕಕ್ಕೆ ಎಸೆಯಲ್ಪಟ್ಟಿದ್ದಾರೆ. ಅಪಘಾತದಲ್ಲಿ ಬಾಲಕರು ಪವಾಡಸದೃಶವಾಗಿ ಪಾರಾಗಿದ್ದು ಸಣ್ಣ ಪುಟ್ಟ ಗಾಯವಾಗಿದೆ. ಅಪಘಾತ ದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಬಗ್ಗೆ ಮಂಗಳೂರು ಉತ್ತರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪುತ್ತೂರು; ವಿದ್ಯಾರ್ಥಿಗಳಿಗೆ ಗಾಂಜಾ ಪೂರೈಸುತ್ತಿದ್ದ ವಿದ್ಯಾರ್ಥಿಯೊಬ್ಬನನ್ನು ಪುತ್ತೂರು ನಗರ ಠಾಣಾ ಪೊಲೀಸರ ತಂಡ ಬಂಧಿಸಿದೆ. ನಗರದ ಕಾಲೇಜೊಂದರ ವಿದ್ಯಾರ್ಥಿ ಕೇರಳ ಮೂಲದ ಮುಬಿನ್ (20) ಬಂಧಿತ. ಈತನನ್ನು ಗಾಂಜಾ ಸಹಿತ ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ. ಈತ ಕಳೆದ ಕೆಲ ಸಮಯಗಳಿಂದ ನಗರದ ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಪೂರೈಕೆ ನಡೆಸುತ್ತಿದ್ದಈ ಬಗ್ಗೆ ಖಚಿತ ಮಾಹಿತಿ ಪಡೆದ ಎಸ್.ಐ ರಾಜೇಶ್ ಕೆ.ವಿ ಮತ್ತು ತಂಡ ಕಾರ್ಯಚರಣೆ ನಡೆಸಿದ್ದು, ಬಂಧಿತನಿಂದ ಸುಮಾರು ಅರ್ಧ ಕೆಜಿ ಗಾಂಜಾ ವಶಕ್ಕೆ ಪಡೆದುಕೊಳ್ಳಲಾಗಿದೆ.
ಮಂಗಳೂರು: ಅಪ್ರಾಪ್ತ ವಯಸ್ಕ ವಿದ್ಯಾರ್ಥಿನಿಗೆ ಪೋನ್ ಮಾಡುವಂತೆ ಪೀಡಿಸುತ್ತಿದ್ದಲ್ಲದೇ, ಯಾರು ಇಲ್ಲದ ವೇಳೆ ಮನೆಗೆ ನುಗ್ಗಿ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ನಗರದ ಮಹಿಳಾ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಪಂಜಿಮೊಗರಿನ ಮುಸ್ತಫಾ (35) ಎಂದು ಗುರುತಿಸಲಾಗಿದೆ. ಆರೋಪಿಯು ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಶಾಂತಿನಗರದ ತರಕಾರಿ ಅಂಗಡಿಯೊಂದರಲ್ಲಿ ಕೆಲಸಕ್ಕಿದ್ದ. ಅಪ್ರಾಪ್ತ ವಿದ್ಯಾರ್ಥಿನಿ ತಾಯಿಯೊಂದಿಗೆ ಬಾಡಿಗೆ ಮನೆಯಲ್ಲಿ ವಾಸವಿದ್ದು, ತರಕಾರಿ ತರಲು ಅಂಗಡಿಗೆ ಹೋದಾಗ ಪೋನ್ ಮಾಡುವಂತೆ ಪೀಡಿಸುತ್ತಿದ್ದ. ಜು.8ರಂದು ರಾತ್ರಿ 8.30ಕ್ಕೆ ಬಾಲಕಿ ಮನೆಯಲ್ಲೇ ಒಬ್ಬಳೇ ಇದ್ದಾಗ ಮನೆಗೆ ಅಕ್ರಮವಾಗಿ ಪ್ರವೇಶಿಸಿ ಮಾನಭಂಗಕ್ಕೆ ಯತ್ನಿಸಿದ್ದಲ್ಲದೆ ಕೃತ್ಯವನ್ನು ಇತರರಿಗೆ ಹೇಳಿದರೆ ಜೀವಸಹಿತ ಬಿಡುವುದಿಲ್ಲ ಎಂದು ಬೆದರಿಕೆಯೊಡ್ಡಿರುವುದಾಗಿ ದೂರು ದಾಖಲಾಗಿದ್ದು ಅದರಂತೆ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಮಹಿಳಾ ಪೊಲೀಸರು ತಿಳಿಸಿದ್ದಾರೆ.










