ಮಂಗಳೂರು: ನಗರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹಾಲುಪುಡಿ ಪ್ಯಾಕೆಟ್ ನೊಳಗಡೆ ಬಚ್ಚಿಟ್ಟು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 31,31,440 ಲಕ್ಷ ರೂ. ಮೌಲ್ಯದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಕಾಸರಗೋಡು ಮೂಲದ ಪ್ರಯಾಣಿಕ ದುಬೈನಿಂದ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದ. ಕಸ್ಟಮ್ಸ್ ಅಧಿಕಾರಿಗಳು ಈತನನ್ನು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಈತ ಹಾಲಿನಪುಡಿಯ ಪ್ಯಾಕೆಟ್ ನೊಳಗಡೆ ಬಚ್ಚಿಟ್ಟು ಚಿನ್ನ ಸಾಗಾಟ ಮಾಡಿರೋದು ಪತ್ತೆಯಾಗಿದೆ. ತಕ್ಷಣ ಪ್ರಯಾಣಿಕ ಸೇರಿದಂತೆ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ. ಈತನಿಂದ 602.200 ಗ್ರಾಂ ತೂಕದ 31,31,440 ಲಕ್ಷ ರೂ. ಮೌಲ್ಯದ 24 ಕ್ಯಾರೆಟ್ ಶುದ್ಧ ಚಿನ್ನವನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ತನಿಖೆ ಮುಂದುವರಿದಿದೆ.
Author: main-admin
ಪುತ್ತೂರು; ಕಾರು- ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ತಂದೆ ಮೃತಪಟ್ಟು, ಮಗ ಗಂಭೀರ ಗಾಯಗೊಂಡ ಘಟನೆ ಪುತ್ತೂರು ಸಮೀಪದ ಕುಂಬ್ರದಲ್ಲಿ ನಿನ್ನೆ ರಾತ್ರಿ ನಡೆದಿದೆ. ಪಂಜಿಗುಡ್ಡೆ ನಿವಾಸಿ ರಘುರಾಮ ಶೆಟ್ಟಿ ಮೃತರು.ಇವರ ಮಗ ಕೂಡ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ರಘುರಾಮ್ ಅವರು ತನ್ನ ಮಗನನ್ನು ಬೆಂಗಳೂರು ಬಸ್ ಗೆ ಬಿಡಲೆಂದು ಮನೆಯಿಂದ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ವಿರುದ್ಧ ದಿಕ್ಕಿನಿಂದ ಬಂದ ಮಾರುತಿ ಓಮ್ನಿ ಕಾರು ಢಿಕ್ಕಿ ಹೊಡೆದಿದೆ.
ಮುಂಬೈ: ಮಹಾರಾಷ್ಟ್ರದ ನೂತನ ಸರ್ಕಾರಕ್ಕೆ ವಿಶ್ವಾಸಮತ ಯಾಚನೆಗೆ ಇನ್ನೂ ಒಂದು ದಿನ ಬಾಕಿ ಇರುವಾಗಲೇ ವಿಧಾನಸಭೆ ಸ್ಪೀಕರ್ ಆಯ್ಕೆ ನಡೆದಿದೆ. ರಾಹುಲ್ ನಾರ್ವೇಕರ್ ಅವರನ್ನು ನೂತನ ಸ್ಪೀಕರ್ ಆಗಿ ಆಯ್ಕೆ ಮಾಡಲಾಗಿದೆ. ಕೊಲಾಬಾ ಕ್ಷೇತ್ರದ ಬಿಜೆಪಿ ಶಾಸಕರಾಗಿರುವ ರಾಹುಲ್ ನಾರ್ವೇಕರ್ ಅವರ ಹೆಸರನ್ನು ವಿಧಾನಸಭೆ ವಿಶೇಷ ಅಧಿವೇಶನದಲ್ಲಿ ಬಿಜೆಪಿಯ ಚಂದ್ರಕಾಂತ್ ಪಾಟೀಲ್ ಅವರು ನಾಮ ನಿರ್ದೇಶನ ಮಾಡಿದರು. ಬಳಿಕ ನಡೆದ ಚುನಾವಣೆಯಲ್ಲಿ 164 ಮತ ಪಡೆದು ನಾರ್ವೇಕರ್ ಸ್ಪೀಕರ್ ಹುದ್ದೆಗೇರಿದರು. ಶಿವಸೇನೆಯ ರಾಜನ್ ಸಾಲ್ವಿ 107 ಮತಗಳೊಂದಿಗೆ ಪರಾಭವಗೊಂಡರು. ಕೈ ಎತ್ತುವ ಮೂಲಕ ಚುನಾವಣೆ ನಡೆಸಲಾಯಿತು. 2021ರ ಫೆಬ್ರವರಿಯಲ್ಲಿ ಕಾಂಗ್ರೆಸ್‌ನ ನಾನಾ ಪಟೋಲ್ ಸ್ಪೀಕರ್ ಹುದ್ದೆಗೆ ರಾಜೀನಾಮೆ ನೀಡಿದ ಬಳಿಕ ತೆರವಾಗಿದ್ದ ಹುದ್ದೆಗೆ ಈಗ ಆಯ್ಕೆ ನಡೆದಿದ್ದು, ಡೆಪ್ಯುಟಿ ಸ್ಪೀಕರ್ ನರಹರಿ ಜೀರವಾಲ್ ಅವರು ಅಧಿಕಾರ ಹಸ್ತಾಂತರಿಸಿದರು. ರಾಜಕೀಯಕ್ಕೆ ಬರುವುದಕ್ಕೂ ಮುನ್ನ ಶಿವಸೇನೆಯ ಯುವ ಘಟಕದಲ್ಲಿ ವಕ್ತಾರರಾಗಿ ಕೆಲಸ ಮಾಡಿದ ಅನುಭವ ನಾರ್ವೇಕರ್ ಅವರಿಗಿದೆ. 2014ರಲ್ಲಿ ಶಿವಸೇನೆ ತೊರೆದು ಎನ್‌ಸಿಪಿ ಸೇರಿದ್ದರು.…
ಬಲೂಚಿಸ್ತಾನ: ಬಸ್ ಕಂದರಕ್ಕೆ ಉರುಳಿದ ಪರಿಣಾಮ ಸುಮಾರು 19 ಮಂದಿ ಪ್ರಯಾಣಿಕರು ಸಾವನ್ನಪ್ಪಿ, 12 ಜನರು ಗಾಯಗೊಂಡಿರುವ ಘಟನೆ ನೈಋತ್ಯ ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ನಡೆದಿದೆ. ಮಳೆಯ ನಡುವೆ ಬಸ್ ಅತಿ ವೇಗವಾಗಿ ಚಲಿಸಿದ್ದು,ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ್ದು, ಬಸ್ ಆಳವಾದ ಕಂದಕಕ್ಕೆ ಬಿದ್ದು ಹಲವು ಬಾರಿ ಪಲ್ಟಿಯಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿದೆ. ಇನ್ನು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಶ್ರೀನಗರ: ಜಮ್ಮು-ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಸಂಘಟನೆಯ ಇಬ್ಬರು ಶಸ್ತ್ರಧಾರಿ ಭಯೋತ್ಪಾದಕರನ್ನು ಗ್ರಾಮಸ್ಥರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ. ಇಬ್ಬರನ್ನೂ ಪೊಲೀಸರು ಇದೀಗ ಬಂಧಿಸಿದ್ದಾರೆ. ಈ ಪೈಕಿ ರಜೌರಿ ಜಿಲ್ಲೆಯ ನಿವಾಸಿ ತಲಿಬ್ ಹುಸೇನ್ ಎಲ್‌ಇಟಿ ಸಂಘಟನೆಯ ಕಮಾಂಡರ್ ಆಗಿದ್ದಾನೆ. ಅಲ್ಲದೆ ಈತನನ್ನು ಹಲವು ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸರು ಶೋಧ ನಡೆಸುತ್ತಿದ್ದರು. ಅಲ್ಲದೆ ಜಿಲ್ಲೆಯಲ್ಲಿ ಐಇಡಿ ಸ್ಫೋಟ ಪ್ರಕರಣದ ಮಾಸ್ಟರ್ ಮೈಂಡ್ ಆಗಿದ್ದ ಫೈಜಲ್ ಅಹ್ಮದ್ ದರ್ ನ್ನು ತುಕ್ಸಾನ್ ಗ್ರಾಮದಲ್ಲಿ ಪೊಲೀಸರು ಬಂಧಿಸಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆಂದು ವರದಿಯಾಗಿದೆ. ಎರಡು ಎಕೆ ಅಸಾಲ್ಟ್ ರೈಫಲ್ಸ್, 7 ಗ್ರೆನೇಡ್ ಗಳು, ಒಂದು ಪಿಸ್ತೂಲ್‌ನ್ನು ಪೊಲೀಸರು ಬಂಧಿತರಿಂದ ವಶಪಡಿಸಿಕೊಂಡಿದ್ದಾರೆ. ಉಗ್ರರನ್ನು ಹಿಡಿದುಕೊಟ್ಟ ಗ್ರಾಮಸ್ಥರ ಸಾಹಸಕ್ಕೆ ಪೊಲೀಸ್ ಅಧಿಕಾರಿಗಳು ಮೆಚ್ಚುಗೆ ಸೂಚಿಸಿದ್ದಾರೆ. ಅಲ್ಲದೆ ಗ್ರಾಮಸ್ಥರಿಗೆ ಡಿಜಿಪಿ ದಲ್ಬಿರ್ ಸಿಂಗ್ ಅವರು 2 ಲಕ್ಷ ರೂ. ನಗದು ಬಹುಮಾನ ಘೋಷಿಸಿದ್ದಾರೆ.
ಮಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ)ಯಡಿ ರಾಜ್ಯದಲ್ಲಿ ಪದವಿ ಪೂರ್ವ ತರಗತಿಗಳಿಗೆ ಪಠ್ಯ ಕ್ರಮವನ್ನು ಡಿಸೆಂಬರ್ ಅಂತ್ಯದ ವೇಳೆಗೆ ಅಂತಿಮಗೊಳಿಸಿ ಅನುಷ್ಠಾನಕ್ಕೆ ತರಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ನಾಗೇಶ್ ಹೇಳಿದ್ದಾರೆ. ಮಂಗಳೂರು ನಗರದ ಶಕ್ತಿ ಪಿಯು ಕಾಲೇಜಿನಲ್ಲಿ ದ.ಕ. ಪ್ರಾಂಶುಪಾಲರ ಸಂಘ, ಚಾಣಕ್ಯ ವಿವಿ ಹಾಗೂ ವಿದ್ಯಾಭಾರತಿ ಆಶ್ರಯದಲ್ಲಿ ಶನಿವಾರ ಜಿಲ್ಲಾ ಪಿಯು ಕಾಲೇಜುಗಳ ಪ್ರಾಂಶುಪಾಲರಿಗೆ ಏರ್ಪಡಿಸಿದ ‘ರಾಷ್ಟ್ರೀಯ ಶಿಕ್ಷಣ ನೀತಿ-2020’ ಕುರಿತ ಕಾರ್ಯಾಗಾರ ಸಮಾರೋಪದಲ್ಲಿ ಅವರು ಮಾತನಾಡಿದರು. ಈಗಾಗಲೇ 1ರಿಂದ 12ನೇ ತರಗತಿ ವರೆಗಿನ ಪಠ್ಯಕ್ರಮವನ್ನು ಬೇರೆ ರಾಜ್ಯಗಳಲ್ಲಿ ಅಳವಡಿಸಲಾಗಿದೆ. ಆದರೆ ಕರ್ನಾಟಕದಲ್ಲಿ ಹಂತ ಹಂತವಾಗಿ ಅನುಷ್ಠಾನಕ್ಕೆ ತರಲಾಗುತ್ತಿದೆ. ಪಿಯು ತರಗತಿಗಳಿಗೆ ಹೊಸ ಶಿಕ್ಷಣ ನೀತಿಯಡಿ ಪಠ್ಯಕ್ರಮ ಅಳವಡಿಸಿ ಡಿಸೆಂಬರ್ ವೇಳೆಗೆ ಅಂತಿಮಗೊಳಿಸಿ ನಂತರ ಕಾರ್ಯರೂಪಕ್ಕೆ ತರಲಾಗುವುದು ಎಂದರು. ಸಲಹೆಗೆ ಮತ್ತೆ ಅವಕಾಶ: ಹೊಸ ಶಿಕ್ಷಣ ನೀತಿ ಜಾರಿಗೆ ತರಬೇಕಾದರೆ ಪಿಯು ಉಪನ್ಯಾಸಕರಿಂದಲೂ ಅಮೂಲ್ಯ ಸಲಹೆ ಕೇಳಲಾಗಿತ್ತು. ಆದರೆ ಅದು…
ಥಾಣೆ: ಆಟವಾಡುವಾಗ ಗಾಯಗೊಂಡ ಶಾಲಾ ಬಾಲಕಿಯ ನೆರವಿಗೆ ಬಂದ ಅಮೆಜಾನ್ ಡೆಲಿವರಿ ಬಾಯ್ ಒಬ್ಬರ ಕೆಲಸಕ್ಕೆ ನೆಟ್ಟಿಗರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಅಮೆಜಾನ್ ಡೆಲಿವರಿ ಬಾಯ್ ರವಿ ಎಂಬಾತನೇ ಮಾನವೀಯ ಕೆಲಸಕ್ಕಾಗಿ ಶ್ಲಾಘನೆಗೆ ಒಳಪಟ್ಟಾತ. ಮಹಾರಾಷ್ಟ್ರದ ಥಾಣೆಯ ಶಾಲೆಯೊಂದರ ವಿದ್ಯಾರ್ಥಿನಿ ಆಟವಾಡುತ್ತಿದ್ದಾಗ ಕಬ್ಬಿಣದ ಗೇಟ್ ಸಡಿಲಗೊಂಡು ಆಕೆಯ ಕೆನ್ನೆಯ ಮೂಲಕ ಗೇಟ್‌ನ ಒಂದು ಭಾಗ ಚುಚ್ಚಿಕೊಂಡಿತ್ತು. ಅದೇ ಮಾರ್ಗವಾಗಿ ತೆರಳುತ್ತಿದ್ದ ಡೆಲಿವರಿ ಬಾಯ್ ಇದನ್ನು ನೋಡಿ ತತ್‌ಕ್ಷಣ ಬಾಲಕಿ ಬಳಿಗೆ ಆಗಮಿಸಿ ಲೋಹದ ತುಂಡನ್ನು ಹಿಡಿದು ಆಕೆಗೆ ಹೆಚ್ಚಿನ ರಕ್ತಸ್ರಾವ ಆಗದಂತೆ ತಡೆದರು. ವೈದ್ಯರು ಸ್ಥಳಕ್ಕೆ ಆಗಮಿಸುವವರೆಗೂ ಡೆಲಿವರಿ ಬಾಯ್ ಈ ಸಾಹಸ ಮೆರೆದರು. ಬಳಿಕ ಸಮೀಪದ ವಸಂತ ವಿಹಾರ್ ಆಸ್ಪತ್ರೆಯ ವೈದ್ಯಕೀಯ ತಂಡ ಆಗಮಿಸಿ ಗೇಟ್‌ನ ಒಂದು ಭಾಗವನ್ನೇ ಕತ್ತರಿಸಿ ಬಾಲಕಿಯನ್ನು ರಕ್ಷಿಸಿದರು. ಆನಂತರ ಬಾಲಕಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಯಿತು. ರವಿ ಅವರು ಮಾಡಿದ ಈ ಮಾನವೀಯ ಕಾರ್ಯದ ವೀಡಿಯೋವನ್ನು ಸಾಲುಂಕೆ ಎಂಬವರು ಸಾಮಾಜಿಕ ತಾಣದಲ್ಲಿ ಹಂಚಿಕೊಂಡಿದ್ದು, ಇದನ್ನು ಹಲವಾರು…
ಕುಂದಾಪುರ: ಕಾರೊಂದು ಹೆದ್ದಾರಿಯಿಂದ ಸಮುದ್ರಕ್ಕೆ ಬಿದ್ದು ಓರ್ವ ಸಾವನ್ನಪ್ಪಿ, ಮತ್ತೊಬ್ಬರು ನೀರಿನಲ್ಲಿ ಮುಳುಗಿ ನಾಪತ್ತೆಯಾದ ಘಟನೆ ಶನಿವಾರ ತಡರಾತ್ರಿ ಮರವಂತೆಯಲ್ಲಿ ಸಂಭವಿಸಿದೆ. ವೀರೇಶ್ ಆಚಾರ್ಯ (28) ಮೃತಪಟ್ಟವರು. ಕುಂದಾಪುರದ ಕೋಟೇಶ್ವರ ಬಳಿಯಿಂದ ಬೈಂದೂರು ಕಡೆಗೆ ತೆರಳುತ್ತಿದ್ದ ಕಾರು ಮರವಂತೆಯ ಮಾರಸ್ವಾಮಿ ದೇವಸ್ಥಾನದ ಬಳಿ ಹೆದ್ದಾರಿಯಿಂದ ಸಮುದ್ರಕ್ಕೆ ಬಿದ್ದಿದೆ. ಕಾರಿನಲ್ಲಿ ನಾಲ್ವರು ಪ್ರಯಾಣಿಸುತ್ತಿದ್ದು, ಓರ್ವರು ಸಾವನ್ನಪ್ಪಿದ್ದಾರೆ. ಮತ್ತೊಬ್ಬರು ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದು, ಇಬ್ಬರು ಅಪಾಯದಿಂದ ಪಾರಾಗಿದ್ದಾರೆ. ಗಾಯಗೊಂಡ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಗ್ನಿಶಾಮಕ ಸಿಬಂದಿ ಸ್ಥಳಕ್ಕಾಗಮಿಸಿ ಕಾರನ್ನು ಮೇಲಕ್ಕೆತ್ತಿದ್ದಾರೆ. ಗಂಗೊಳ್ಳಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕಾಪು: ರಾಷ್ಟ್ರೀಯ ಹೆದ್ದಾರಿ 66 ಹೆಜಮಾಡಿ ಶ್ರೀ ಬ್ರಹ್ಮ ಬೈದರ್ಕಳ ಗರಡಿಯ ಎದುರು ಚಾಲಕನ ನಿಯಂತ್ರಣ ತಪ್ಪಿ ಕಮರಿಗೆ ಬಿದ್ದ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ. ಖಾಸಗಿ ವೇಗದೂತ ಬಸ್ ಉಡುಪಿಯಿಂದ ಮಂಗಳೂರಿಗೆ ತೆರಳುತ್ತಿತ್ತು ಎಂದು ತಿಳಿದುಬಂದಿದೆ. ಘಟನೆಯಲ್ಲಿ ಸಣ್ಣಪುಟ್ಟ ಗಾಯಗಳಿಂದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಹೆಜಮಾಡಿ ಟೋಲ್ ಸುರಕ್ಷತಾ ಅಧಿಕಾರಿ ಶೈಲೇಶ್ ಶೆಟ್ಟಿ, ಟೋಲ್ ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ಆಗಮಿಸಿ ಪ್ರಯಾಣಿಕರನ್ನು ಸುರಕ್ಷಿತವಾಗಿ ಹೊರಕ್ಕೆ ಕರೆ ತರುವಲ್ಲಿ ಸಹಕರಿಸಿದ್ದಾರೆ. ಪಡುಬಿದ್ರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮಂಗಳೂರು : ನಗರದಿಂದ ರಾಷ್ಟ್ರದ ರಾಜಧಾನಿ ಡೆಲ್ಲಿ ನಡುವೆ ನೇರ ವಿಮಾನಯಾನ ಸೇವೆ ಪ್ರಾರಂಭಗೊಂಡಿದೆ. ಮಂಗಳೂರು – ಡೆಲ್ಲಿ ನಡುವೆ ವಿಮಾನಯಾನ ಸೇವೆ ಆರಂಭಿಸಬೇಕೆಂಬ ಹಲವು ದಿನಗಳ ಬೇಡಿಕೆ ಕೊನೆಗೂ ಈಡೇರಿದೆ. ಇಂಡಿಗೋ ವಿಮಾನ ಸಂಸ್ಥೆಯು ತನ್ನ ಮೊದಲ ಸಂಚಾರವನ್ನು ಶುಕ್ರವಾರ ಆರಂಭಿಸಿದೆ. ಡೆಲ್ಲಿಯಿಂದ ಪ್ರಯಾಣಿಕರನ್ನು ಹೊತ್ತೊಯ್ದ ವಿಮಾನವು ಬೆಳಗ್ಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದಿದೆ. ಅದೇ ರೀತಿ 140 ಪ್ರಯಾಣಿಕರನ್ನು ಮಂಗಳೂರು ವಿಮಾನ ನಿಲ್ದಾಣದಿಂದ ಹೊತ್ತೊಯ್ದ ವಿಮಾನವು 10.40ಕ್ಕೆ ಮರಳಿ ಡೆಲ್ಲಿ ತಲುಪಿದೆ. ವಾರದಲ್ಲಿ ಸೋಮವಾರ , ಬುಧವಾರ, ಶುಕ್ರವಾರ ಹಾಗೂ ರವಿವಾರ ಸೇರಿದಂತೆ ವಾರದಲ್ಲಿ ನಾಲ್ಕು ದಿನಗಳಲ್ಲಿ ಈ ವಿಮಾನ ಸಂಚಾರ ಇರಲಿದೆ. ಈಗಾಗಲೇ ಮಂಗಳೂರು-ಪೂನಾ-ಡೆಲ್ಲಿ ನಡುವೆ ವಿಮಾನ ಸಂಚಾರ ನಡೆಯುತ್ತಿದ್ದು, ಪ್ರಯಾಣಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇನ್ನು ಡೆಲ್ಲಿ ನೇರ ವಿಮಾನದಿಂದ ಪ್ರಯಾಣಿಕರಿಗೆ ಮತ್ತಷ್ಟು ಅನುಕೂಲವಾಗಲಿದೆ.










