Author: main-admin

ಉಡುಪಿ: ಬೈಕೊಂದು ನಿಯಂತ್ರಣ ತಪ್ಪಿ ರಸ್ತೆ ಮಧ್ಯೆ ಇರುವ ಡಿವೈಡರ್‌ಗೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ವಿದ್ಯಾರ್ಥಿ ಮೃತಪಟ್ಟು ಇಬ್ಬರು ಗಾಯಗೊಂಡ ಘಟನೆ ಉಡುಪಿ ಮಣಿಪಾಲದ ಟೈಗರ್ ಸರ್ಕಲ್ ಬಳಿ ನಡೆದಿದೆ. ಮೃತರನ್ನು ಸಹಸವಾರ ಶಿವಮೊಗ್ಗದ ಮೂಲದ ನಿಖಿಲ್ (23) ಎಂದು ಗುರುತಿಸಲಾಗಿದೆ. ಸವಾರ ನಿಹಾಲ್ ಹಾಗೂ ಇನ್ನೊರ್ವ ಸಹಸವಾರ ಮಹೇಂದ್ರ ಜಿ. ಎಂಬವರು ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ. ಇವರು ಮೂವರು ಮಣಿಪಾಲ ಕಾಲೇಜಿನಲ್ಲಿ ಪ್ರಥಮ ವರ್ಷದ ಎಂಟೆಕ್ ವಿದ್ಯಾರ್ಥಿಗಳಾಗಿದ್ದಾರೆ. ಇವರು ಮೂವರು ನಿನ್ನೆ ಬೆಳಗ್ಗೆ ಒಂದು ಬೈಕಿನಲ್ಲಿ ಕೆಳ ಪರ್ಕಳ ಕಡೆಯಿಂದ ಉಡುಪಿ ಕಡೆಗೆ ಬರುತ್ತಿದ್ದು, ಈ ವೇಳೆ ನಿಂತ್ರಯಣ ತಪ್ಪಿದ ಬೈಕ್ ರಸ್ತೆಯ ಡಿವೈಡರ್‌ಗೆ ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಮೂವರು ರಸ್ತೆಗೆ ಬಿದ್ದಿದ್ದು, ಇವರಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡ ನಿಖಿಲ್ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು: ಗಂಡ ಊಟಕ್ಕೆ ಬರಲಿಲ್ಲವೆಂದು ಬೇಸರಗೊಂಡು ಟೆಕ್ಕಿ ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನೇಣಿಗೆ ಶರಣಾಗಿರುವ ಮಹಿಳೆಯನ್ನು ಸ್ವಾತಿ ಅಂತ ತಿಳಿದು ಬಂದಿದ್ದು, ಸ್ವಾತಿ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದ್ದು, ಆಕೆ ತನ್ನ ಬಾಲ್ಯದ ಗೆಳೆಯನ ಜೊತೆಗೆ ಕಳೆದೆರಡು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು, ಅವರ ಮದುವೆಗೆ ಇಬ್ಬರ ಮನೆಯವರು ಕೂಡ ಒಪ್ಪಿಗೆ ನೀಡಿದ್ದರು ಎನ್ನಲಾಗಿದೆ. ಈ ನಡುವೆ ಎರಡು ದಿ‌ನದ ಹಿಂದೆ ಮನೆಯಲ್ಲಿ ಸ್ವಾತಿಗೆ ಇಶ್ಟವಿರದ ಅಡುಗೆ ಮಾಡಿದ್ದರಂತೆ. ಇದರಿಂದ ಬೇಸರಗೊಂಡಿದ್ದ ಸ್ವಾತಿ ಊಟ ಮಾಡದೇ ಮಲಗಿಕೊಂಡಿದ್ದರಂಂತೆ. ಮರು ದಿನ ಬೆಳಗ್ಗೆ ಗಂಡ ದಾಮೋದರ್‌, ಸ್ವಾತಿಗೆ ಕರೆ ಮಾಡಿ ಇಂದು ಮಧ್ಯಾಹ್ನ ಜೊತೆಯಲ್ಲಿ ಊಟ ಮಾಡೋಣ ಅಂತ ಹೇಳಿ ಸಮಾಧಾನ ಮಾಡಿದ್ದಾರೆ. ದಾಮೋದರ್‌ ಸ್ವಾತಿ ಆಫೀಸ್‌ಗೆ ಊಟವನ್ನು ಆನ್‌ಲೈನ್‌ ಮೂಲಕ ಬುಕ್‌ ಮಾಡಿದ್ದಾರೆ. ಆದರೆ ದಾಮೋದರ್‌ ಕೆಲಸದ ಒತ್ತಡದಿಂದ ಅಂದು ಸ್ವಾತಿ ಜೊತೆಗೆ ಊಟಕ್ಕೆ ಹೋಗಿಲ್ಲ ಎನ್ನಲಾಗಿದೆ. ಇದನ್ನೇ ಮನಸ್ಸಿಗೆ ಹಚ್ಚಿಕೊಂಡ ಸ್ವಾತಿ ಮನೆಗೆ ಬಂದು ಯಾರು…

Read More

ಬೆಳ್ತಂಗಡಿ: ಉಜಿರೆ ಸಮೀಪದ ಪೆರ್ಲದಲ್ಲಿ ಪುರಾತನ ಶಿವಲಿಂಗವೊಂದು ಪತ್ತೆಯಾದ ಘಟನೆ ನಡೆದಿದೆ. ಗ್ರಾಮಸ್ಥರಿಂದ ಪುರಾತನ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದ ನವೀಕರಣಕ್ಕಾಗಿ ದೈವಜ್ಞರಿಂದ ಅಷ್ಟಮಂಗಲ ಪ್ರಶ್ನೆ ಇಟ್ಟ ಸಂದರ್ಭದಲ್ಲಿ ದೇವಸ್ಥಾನದ ಕುರುಹು ಇದ್ದ ಪಕ್ಕದ ಮಣ್ಣಿನಡಿಯಲ್ಲಿ ಪುರಾತನ ಶಿವಲಿಂಗವೊಂದು ಡಿ.16 ರಂದು ಪತ್ತೆಯಾಗಿದೆ.ಡಿ.8 ಮತ್ತು 9 ಹಾಗೂ 15 ಮತ್ತು 16ರಂದು ದೈವಜ್ಞರಾದ ನೆಲ್ಯಾಡಿ ಶ್ರೀಧರ ಗೋರೆಯವರ ನೇತೃತ್ವದಲ್ಲಿ ಅಷ್ಟಮಂಗಲ ಪ್ರಶ್ನೆ ನಡೆಯುತ್ತಿತ್ತು. ಈ ವೇಳೆ ಪರಿಸರದಲ್ಲಿ ಶಿವನ ಸಾನಿಧ್ಯವಿದೆಯೆಂದು ಗೋಚರಿಸುತ್ತದೆ ಎಂದು ತಿಳಿಸಿದ್ದರು ಅಂತೆಯೇ ಅವರು ತಿಳಿಸಿದ ಜಾಗದಲ್ಲಿ ಅಗೆದಾಗ ಮಣ್ಣಿನಡಿಯಲ್ಲಿ ಪುರಾತನ ಶಿವಲಿಂಗ ಪತ್ತೆಯಾಗಿದೆ.ಸುಮಾರು 2 ರಿಂದ 3 ಅಡಿ ಉದ್ದದ ಶಿವಲಿಂಗದ ಪಾಣಿಪೀಠ ಇರುವ ಶಿವಲಿಂಗವಾಗಿದೆ.ಸುಮಾರು 400 ರಿಂದ 500 ವರ್ಷಗಳಷ್ಟು ಹಳೆಯದಾಗಿದೆ ಎಂದು ತಿಳಿದುಬಂದಿದ್ದು ಶಿವಲಿಂಗ ಪ್ರತಿಷ್ಟೆಯಾಗಬೇಕು ಎಂದು ಕಂಡುಬಂದಿದೆ.

Read More

ಮಂಗಳೂರು: ತಿಂಗಳ ಮೂರನೇ ಶನಿವಾರವಾದ ಸೆ.17ರ ಬೆಳಿಗ್ಗೆ 11 ಗಂಟೆಯಿಂದ ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಕಜೆಕ್ಕೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ಗ್ರಾಮ ವಾಸ್ತವ್ಯ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ಅವರು ಅಲ್ಲಿನ ಗ್ರಾಮಸ್ಥರಿಂದ ಅಹವಾಲು ಸ್ವೀಕರಿಸಿ, ಕೆಲವೊಂದು ಸಮಸ್ಯೆಗಳನ್ನು ಆದಷ್ಟು ಸ್ಥಳದಲ್ಲಿಯೇ ಬಗೆಹರಿಸಲು ಉದ್ದೇಶಿಸಿರುತ್ತಾರೆ, ಕಾರಣ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ಹಾಜರಿರುವಂತೆ ಅಪರ ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಕರಾವಳಿ ಭಾಗ ಸೇರಿದಂತೆ ರಾಜ್ಯದಲ್ಲಿ ಲವ್ ಜಿಹಾದ್ ವಿರುದ್ಧ ಹೋರಾಟ ನಡೆಸುತ್ತಿದ್ದ ಬೆನ್ನಲ್ಲೇ ದಿನಕೊಂದು ಪ್ರಕರಣಗಳು ಬೆಳಕಿಗೆ ಬರುತ್ತಲೇ ಇದೆ. ಇಂತಹದ್ದೇ ದ‌.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಲ್ಲಡ್ಕದ ದಾಸಕೋಡಿ ಬಳಿ ಹಿಂದೂ ಯುವತಿ- ಮುಸ್ಲಿಂ ಯುವಕನೊಂದಿಗೆ ಬೆಂಗಳೂರು ಬಸ್ಸಿನಲ್ಲಿ ಪ್ರಯಾಣಿಸುವುದು ಸಿಕ್ಕಿಬಿದಿದ್ದು, ಬಸ್ಸನ್ನುಅಡ್ಡಗಟ್ಟಿ ಭಜರಂಗದಳ ಕಾರ್ಯಕರ್ತರು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ಮುಸ್ಲಿಂ ಯುವಕ ಮಹಮ್ಮದ್ ರಾಯಿಫ್​ನೊಂದಿಗೆ ಹಿಂದೂ ಯುವತಿ ನಿಧಿ ಶೆಟ್ಟಿ ಪ್ರಯಾಣಿಸುತ್ತಿದ್ದಳು ಎಂದು ತಿಳಿದು ಬಂದಿದೆ. ಕೂಡಲೇ ಭಜರಂಗದಳ ಕಾರ್ಯಕರ್ತರು ಬಸ್ಸು ತಡೆಯೋದಕ್ಕೆ ಮುಂದಾಗಿದ್ದು, ಈ ಸಂರ್ಭದಲ್ಲಿ ಭಜರಂಗ ದಳದ ಕಾರ್ಯಕರ್ತರಿಗೆ ಹಿಂದೂ ಯುವತಿ ಬಸ್ಸಿನಲ್ಲೆ ನಿಂತುಕೊಂಡು ರಂಪಾಟ ಮಾಡಿದ್ದಾಳೆ. ಹಿಂದೂ ಯುವತಿಗೆ ಭಜರಂಗದಳ ಕಾರ್ಯಕರ್ತರು ಕ್ಲಾಸ್ಟ್‌ ತೆಗೆದುಕೊಂಡು , ಬಂಟ್ವಾಳ ಪೊಲೀಸರಿಗೆ ಮಾಹಿತಿ ನೀಡುವ ಮೂಲಕ ನೈತಿಕ ಪೊಲೀಸ್ ಗಿರಿ ಮೆರೆದಿದ್ದಾರೆ

Read More

 ಮಧ್ಯಪ್ರದೇಶ: ಮಧ್ಯಪ್ರದೇಶದ ಗ್ವಾಲಿಯರ್ ಜಿಲ್ಲೆಯಲ್ಲಿ ಮಹಿಳೆಯೊಬ್ಬರು ನಾಲ್ಕು ಕಾಲುಗಳಿರುವ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಇಲ್ಲಿನ ಕಮಲರಾಜ ಆಸ್ಪತ್ರೆಯ ಮಹಿಳಾ ಮತ್ತು ಮಕ್ಕಳ ವಿಭಾಗದಲ್ಲಿ ಸಿಕಂದರ್ ಕಂಪೂ ಪ್ರದೇಶದ ಆರತಿ ಕುಶ್ವಾಹ ಅವರು ಬುಧವಾರ ಈ ಮಗುವಿಗೆ ಜನ್ಮ ನೀಡಿದ್ದಾರೆ. ನವಜಾತ ಶಿಶು ಆರೋಗ್ಯವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಜಯರೋಗ್ಯ ಆಸ್ಪತ್ರೆ ಸಮೂಹದ ಸೂಪರಿಂಟೆಂಡೆಂಟ್ ಡಾ.ಆರ್.ಕೆ.ಎಸ್.ಧಕಡ್ ಮಾತನಾಡಿ, ‘ಮಗುವಿಗೆ ಹುಟ್ಟಿನಿಂದಲೇ ನಾಲ್ಕು ಕಾಲುಗಳಿವೆ. ಆಕೆಗೆ ದೈಹಿಕ ವಿಕಲತೆ ಇದೆ. ಕೆಲವು ಭ್ರೂಣಗಳಲ್ಲಿ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಇದನ್ನು ವೈದ್ಯಕೀಯ ವಿಜ್ಞಾನದ ಭಾಷೆಯಲ್ಲಿ ಇಶಿಯೋಪಾಗಸ್ ಎಂದು ಕರೆಯಲಾಗುತ್ತದೆ. ಭ್ರೂಣವು ಎರಡು ಭಾಗಗಳಾಗಿ ವಿಭಜನೆಯಾದಾಗ, ದೇಹವು ಎರಡು ಸ್ಥಳಗಳಲ್ಲಿ ಬೆಳವಣಿಗೆಯಾಗುತ್ತದೆ. ಈ ಹೆಣ್ಣು ಮಗುವಿನ ಸೊಂಟದ ಕೆಳಗಿನ ಭಾಗವು ಎರಡು ಹೆಚ್ಚುವರಿ ಕಾಲುಗಳೊಂದಿಗೆ ಅಭಿವೃದ್ಧಿಗೊಂಡಿದೆ. ಆದರೆ ಆ ಕಾಲುಗಳು ನಿಷ್ಕ್ರಿಯವಾಗಿವೆ’ ಎಂದಿದ್ದಾರೆ. ಇದೀಗ ಮಕ್ಕಳ ವಿಭಾಗದ ವೈದ್ಯರು ದೇಹದ ಯಾವುದೇ ಭಾಗದಲ್ಲಿ ಬೇರೆ ಯಾವುದೇ ಅಂಗವಿಕಲತೆ ಇದೆಯೇ ಎಂದು ತಪಾಸಣೆ ನಡೆಸುತ್ತಿದ್ದು, ಪರೀಕ್ಷೆ ಬಳಿಕ…

Read More

ದೌಸಾ (ರಾಜಸ್ಥಾನ): ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ 100 ದಿನಕ್ಕೆ ಕಾಲಿಟ್ಟಿದ್ದು, ಸಂಭ್ರಮವನ್ನಾಚರಿಸುತ್ತಿದೆ. ಸೆಪ್ಟೆಂಬರ್ 7 ರಂದು ಕನ್ಯಾಕುಮಾರಿಯಿಂದ ಪ್ರಾರಂಭವಾದ ಕಾಲ್ನಡಿಗೆಯ ಮೆರವಣಿಗೆಯು ಶುಕ್ರವಾರ ತನ್ನ 100 ದಿನಗಳನ್ನು ಪೂರೈಸಿದ್ದು, ಈ ಯಾತ್ರೆಯು ಶುಕ್ರವಾರ ರಾಜಸ್ಥಾನದ ದೌಸಾದಿಂದ ಪುನರಾರಂಭಗೊಂಡಿದೆ. ವೈನಾಡ್ ಸಂಸದ ರಾಹುಲ್ ಗಾಂಧಿ ಅವರು ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರೊಂದಿಗೆ ಬೆಳಿಗ್ಗೆ 6 ಗಂಟೆಗೆ ಮೀನಾ ಹೈಕೋರ್ಟ್, ದೌಸಾದಿಂದ ಪಾದಯಾತ್ರೆಯನ್ನು ಪುನರಾರಂಭಿಸಿದರು ಮತ್ತು ಬೆಳಿಗ್ಗೆ 11 ಗಂಟೆಗೆ ಗಿರಿರಾಜ್ ಧರಣ್ ದೇವಸ್ಥಾನದಲ್ಲಿ ವಿರಾಮ ತೆಗೆದುಕೊಳ್ಳಲಿದ್ದಾರೆ. ರಾಜ್ಯಸಭಾ ಸಂಸದ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಟ್ವೀಟ್ ಮಾಡಿ, ‘ಇಂದು ಭಾರತ್ ಜೋಡೋ ಯಾತ್ರೆಯ ಐತಿಹಾಸಿಕ ಪ್ರಯಾಣವು 100 ದಿನಗಳನ್ನು ಪೂರ್ಣಗೊಳಿಸುತ್ತದೆ. ದ್ವೇಷ, ಮತಾಂಧತೆ, ವಿಭಜನೆ, ಹಿಂಸೆ, ಅನ್ಯಾಯ, ನಿರುದ್ಯೋಗ ಮತ್ತು ಬೆಲೆ ಅಕ್ಕಿ ವಿರುದ್ಧ ದೇಶವನ್ನು ಒಂದುಗೂಡಿಸುತ್ತದೆ. ಈ ಯಾತ್ರೆ 8 ರಾಜ್ಯಗಳು ಮತ್ತು 2,763 ಕಿಮೀ ಸಂಚರಿಸಿದ್ದು, ಲಕ್ಷಾಂತರ ಜನರ ಹೃದಯಗಳನ್ನು…

Read More

ಬೆಂಗಳೂರು : ರಸ್ತೆ ಗುಂಡಿಗಳಿಂದ ಅಪಘಾತಕ್ಕೆ ಒಳಗಾಗಿ ಗಂಭೀರವಾಗಿ ಗಾಯಗೊಂಡ ಮತ್ತು ಸಾವನ್ನಪ್ಪಿದ ಪ್ರಕರಣಗಳಲ್ಲಿ ಎಫ್ ಐಆರ್ ದಾಖಲಿಸಿ ತನಿಖೆ ನಡೆಸಬೇಕು ಎಂದು ಗೃಹ ಇಲಾಖೆಗೆ ಹೈಕೋರ್ಟ್ ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ರಸ್ತೆ ಗುಂಡಿಗಳ ಅವಾಂತರಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್, ರಸ್ತೆ ಗುಂಡಿಗಳಿಂದ ಅಪಘಾತಕ್ಕೆ ಒಳಗಾಗಿ ಗಂಭೀರವಾಗಿ ಗಾಯಗೊಂಡಿದ್ದರೆ ಮತ್ತು ಸಾವನ್ನಪ್ಪಿದರೆ ತಾಂತ್ರಿಕ ಕಾರಣಗಳನ್ನು ನೀಡದೇ ಎಫ್ ಐಆರ್ ದಾಖಲಿಸುವಂತೆ ಗೃಹ ಇಲಾಖೆಗೆ ಹೈಕೋರ್ಟ್ ಸೂಚನೆ ನೀಡಿದೆ. ಬೆಂಗಳೂರು ನಗರ ವ್ಯಾಪ್ತಿಯಲ್ಲಿನ ರಸ್ತೆ ಗುಂಡಿಗಳನ್ನು ಮುಚ್ಚುವಂತೆ ವಿಜಯನ್ ಮೆನನ್ ಮತ್ತಿತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ವೇಳೆ ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಲೆ ಮತ್ತು ನ್ಯಾ. ಅಶೋಕ್ ಎಸ್ ಕಿಣಗಿ ಅವರ ನೇತೃತ್ವದ ವಿಭಾಗೀಯ ಪೀಠ ನಿರ್ದೇಶನ ನೀಡಿದೆ.

Read More

ಬೆಂಗಳೂರು: ಖಾಸಗಿ ಕಾಲೇಜ್ ಒಂದರ ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಕತ್ತು ಕೊಯ್ದುಕೊಂಡ ಸ್ಥಿತಿಯಲ್ಲಿ ಹಾಸ್ಟೆಲ್‍ನ ಶೌಚಾಲಯದಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಬನ್ನೇರುಘಟ್ಟ ಸಮೀಪದ ಖಾಸಗಿ ಕಾಲೇಜಿನ ಇಂಜಿನಿಯರಿಂಗ್ ವಿದ್ಯಾರ್ಥಿ ನಿತಿನ್ (19) ಕತ್ತು ಕೊಯ್ದ ಸ್ಥಿತಿಯಲ್ಲಿ ಪತ್ತೆಯಾದ ಕೇರಳ ಮೂಲದ ವಿದ್ಯಾರ್ಥಿ. ನಿತಿನ್ ಇದೇ ತಿಂಗಳು ಡಿ.1ಕ್ಕೆ ಕಾಲೇಜು ಸೇರಿದ್ದ. ಪ್ರಥಮ ವರ್ಷದ ಇಂಜಿನಿಯರಿಂಗ್ ಪದವಿಗೆ ಅಡ್ಮಿಷನ್ ಮಾಡಿಸಿದ್ದ ನಿತಿನ್ ಚಾಕುವಿನಿಂದ ತಾನೇ ಚುಚ್ಚಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಕಾಲೇಜ್ ಕ್ಯಾಂಪಸ್ ಒಳಗಿನ ಹಾಸ್ಟೆಲ್‍ನಲ್ಲಿ ವಾಸವಿದ್ದ ನಿತಿನ್ ನಿನ್ನೆ ಮಧ್ಯಾಹ್ನ ಹಾಸ್ಟೆಲ್ ಕೊಠಡಿಯ ಒಳಗೆ ಹೋಗಿ ಬಾಗಿಲು ಹಾಕಿಕೊಂಡಿದ್ದ. ಹಾಸ್ಟೆಲ್ ಸಹಪಾಠಿ ಬಂದು ಬಾಗಿಲು ಬಡಿದಿದ್ದ. ಬಾಗಿಲು ತೆಗೆಯದ ಹಿನ್ನೆಲೆ ಹಾಸ್ಟೆಲ್ ವಾರ್ಡನ್‍ಗೆ ವಿಷಯ ತಿಳಿಸಿದ್ದಾನೆ. ಕೂಡಲೇ ವಾರ್ಡನ್ ಹಾಗೂ ಸಿಬ್ಬಂದಿ ಬಂದು ಬಾಗಿಲು ಒಡೆದಿದ್ದಾರೆ. ಆಗ ಕತ್ತು ಕೊಯ್ದ ಸ್ಥಿತಿಯಲ್ಲಿ ಶೌಚಾಲಯದಲ್ಲಿ ನಿತಿನ್ ಶವವಾಗಿ ಪತ್ತೆಯಾಗಿದ್ದಾನೆ. ಸ್ಥಳಕ್ಕೆ ಬನ್ನೇರುಘಟ್ಟ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More

ಮಣಿಪಾಲ: ಉಡುಪಿ ನಗರ ಸಭೆಯ ಮಾಜಿ ಅಧ್ಯಕ್ಷೆ ಶಾಂತಾ ನಾಯ್ಕ್ ಅವರ ಮನೆಗೆ ನುಗ್ಗಿದ ಯುವಕನೋರ್ವ ಅವರ ಪತಿಗೆ ರಾಡ್‌ನಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಪರಾರಿಯಾದ ಘಟನೆ ನಡೆದಿದೆ. ಮಣಿಪಾಲ ಠಾಣೆ ವ್ಯಾಪ್ತಿಯ ಅಲೆವೂರು ಸಮೀಪದ ಮಂಚಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಕೃಷ್ಣ ನಾಯ್ಕ್ (54) ಹಲ್ಲೆಗೆ ಒಳಗಾದವರು. ಅರ್ಜುನ್ ಎಂಬ ಯುವಕ ಹಳೇ ದ್ವೇಷದ ಹಿನ್ನೆಲೆಯಲ್ಲಿ ಕೃಷ್ಣ ನಾಯ್ಕ್ ಅವರ ಮನೆಗೆ ಬಂದಿದ್ದ. ಈ ವೇಳೆ ಗೇಟ್ ಮುಂದೆಯೇ ಕೃಷ್ಣ ನಾಯ್ಕ್ ಅವರ ಮೇಲೆ ರಾಡ್‌ನಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾನೆ. ಹಲ್ಲೆಯಿಂದ ಗಂಭೀರ ಗಾಯಗೊಂಡ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಧಿಕ ರಕ್ತಸ್ರಾವವಾಗಿರುವ ಕಾರಣ ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ.

Read More