Author: main-admin

ಮಣಿಪಾಲ: ಉಡುಪಿ ನಗರ ಸಭೆಯ ಮಾಜಿ ಅಧ್ಯಕ್ಷೆ ಶಾಂತಾ ನಾಯ್ಕ್ ಅವರ ಮನೆಗೆ ನುಗ್ಗಿದ ಯುವಕನೋರ್ವ ಅವರ ಪತಿಗೆ ರಾಡ್‌ನಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಪರಾರಿಯಾದ ಘಟನೆ ನಡೆದಿದೆ. ಮಣಿಪಾಲ ಠಾಣೆ ವ್ಯಾಪ್ತಿಯ ಅಲೆವೂರು ಸಮೀಪದ ಮಂಚಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಕೃಷ್ಣ ನಾಯ್ಕ್ (54) ಹಲ್ಲೆಗೆ ಒಳಗಾದವರು. ಅರ್ಜುನ್ ಎಂಬ ಯುವಕ ಹಳೇ ದ್ವೇಷದ ಹಿನ್ನೆಲೆಯಲ್ಲಿ ಕೃಷ್ಣ ನಾಯ್ಕ್ ಅವರ ಮನೆಗೆ ಬಂದಿದ್ದ. ಈ ವೇಳೆ ಗೇಟ್ ಮುಂದೆಯೇ ಕೃಷ್ಣ ನಾಯ್ಕ್ ಅವರ ಮೇಲೆ ರಾಡ್‌ನಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾನೆ. ಹಲ್ಲೆಯಿಂದ ಗಂಭೀರ ಗಾಯಗೊಂಡ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಧಿಕ ರಕ್ತಸ್ರಾವವಾಗಿರುವ ಕಾರಣ ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ.

Read More

ಮೂಡಬಿದಿರೆ: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮುಲ್ಲರಪಟ್ನ ನಿವಾಸಿ 45 ವರ್ಷದ ಇಸ್ಹಾಕ್ ಎಂಬವರಿಗೆ ಬಸ್ ಕಂಡೆಕ್ಟರ್ ಸೇರಿದಂತೆ ಸಂಘ ಪರಿವಾರದ ಕಾರ್ಯಕರ್ತರೆನ್ನಲಾದ ತಂಡ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ರಾಯಿ ಎಂಬಲ್ಲಿ ನಡೆದಿದೆ. ಈಗ ಬಿಸಿರೋಡಿನಲ್ಲಿ ವಾಸವಿರುವ ಇಸ್ಹಾಕ್ ಮೇಸ್ತ್ರಿ ಕೆಲಸ ಮಾಡುತ್ತಿದ್ದು, ನಿನ್ನೆ ಬೆಳಗ್ಗೆ ಬಿ.ಸಿ.ರೋಡ್ ನಿಂದ ಮೂಡುಬಿದಿರೆಗೆ ತೆರಳಲೆಂದು ಖಾಸಗಿ ಬಸ್ ಹತ್ತಿದ್ದಾರೆ. ಬಸ್ಸಿನಲ್ಲಿ ಪ್ರಯಾಣಿಕರ ದಟ್ಟಣೆಯಿದ್ದುರಿಂದ ಇಸ್ಹಾಕ್ ಕುಳಿತಿದ್ದ ಸೀಟಿನ ಬಳಿ ನಿಂತಿದ್ದ ಮಹಿಳೆಯೊಬ್ಬರು ಬ್ಯಾಗ್ ಹಿಡಿದುಕೊಳ್ಳುವಂತೆ ಇಸ್ಹಾಕ್ ಅವರಿಗೆ ನೀಡಿದ್ದಾರೆ ಎನ್ನಲಾಗಿದೆ. ಮಹಿಳೆ ತಾನು ಇಳಿಯುವ ಜಾಗ ತಲುಪಿದಾಗ ಇಸ್ಹಾಕ್ ಅವರಿಂದ ಬ್ಯಾಗ್ ಪಡೆದು ಬಸ್ಸಿನಿಂದ ಇಳಿದು ಹೋದರೆನ್ನಲಾಗಿದೆ. ಬಳಿಕ ಕಂಡೆಕ್ಟರ್ ಇಸ್ಹಾಕ್ ಅವರನ್ನು ಬಸ್ಸಿನಿಂದ ಕೆಳಗಿಳಿಸಿ ಅವರಿಗೆ ಹಲ್ಲೆ ನಡೆಸಿದ್ದಾನೆ. ಅಲ್ಲದೆ ಕೆಲವು ಸಂಘ ಪರಿವಾರದ ಕಾರ್ಯಕರ್ತರೆನ್ನಲಾದ ಕೆಲವು ಯುವಕರನ್ನು ಕರೆಸಿ ಇಸ್ಹಾಕ್ ಅವರನ್ನು ಒಪ್ಪಿಸಿದ್ದಾನೆ. ಬಳಿ ಕದುಷ್ಕರ್ಮಿಗಳ ಗುಂಪು ಇಸ್ಹಾಕ್ ಅವರನ್ನು ಆಟೋದಲ್ಲಿ ಕರೆದುಕೊಂಡು ಹೋಗಿ ರಾಯಿ ಎಂಬಲ್ಲಿ ನಿರ್ಜನ ಪ್ರದೇಶದಲ್ಲಿ ಮರಕ್ಕೆ ಕಟ್ಟಿ ಹಾಕಿ…

Read More

ಮಂಗಳೂರು : ದ.ಕ. ಜಿಲ್ಲಾ ಕಾಂಗ್ರೆಸ್‌ ಭವನದ ಪ್ರವೇಶ ದ್ವಾರದ ಮೆಟ್ಟಿಲುಗಳ ನವೀಕರಣ ಕಾಮಗಾರಿಯು ಇದೀಗ “ವಾಸ್ತು’ ವಿಚಾರದ ಚರ್ಚೆಗೆ ವೇದಿಕೆ ಒದಗಿಸಿದೆ. ಕಚೇರಿ ಪ್ರವೇಶಕ್ಕೆ ಈ ಹಿಂದೆ 8 ಮೆಟ್ಟಿಲುಗಳಿದ್ದವು. ಇದನ್ನು ಬೆಸ ಸಂಖ್ಯೆಗೆ ಪರಿವರ್ತಿಸುವ ಕಾಮಗಾರಿ ನಡೆಯುತ್ತಿದೆ ಎಂಬ ಮಾತು ರಾಜಕೀಯವಾಗಿ ಚರ್ಚೆ ಹುಟ್ಟುಹಾಕಿದೆ. ಆದರೆ “ಅಂಡರ್‌ ಗ್ರೌಂಡ್‌ ನೀರಿನ ಟ್ಯಾಂಕ್‌ ದುರಸ್ತಿಗಾಗಿ ಮೆಟ್ಟಿಲು ದುರಸ್ತಿ ಮಾಡಲಾ ಗಿದ್ದು, ಇದರಲ್ಲಿ ವಾಸ್ತು ವಿಚಾರ ಇಲ್ಲ’ ಎಂದು ಕಾಂಗ್ರೆಸ್‌ ಮುಖಂಡರು ತಿಳಿಸಿದ್ದಾರೆ. ಟ್ವೀಟ್‌ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಅವರು “ಹಿಂದೂಗಳ ಪ್ರತೀ ಆಚರಣೆಯನ್ನೂ ಅಣಕ ಮಾಡುವ ಕಾಂಗ್ರೆಸ್‌ ಈಗ ಸೋಲಿನ ಭೀತಿಯಿಂದ ವಾಸ್ತುದೋಷದ ಮೊರೆ ಹೋಗಿರುವುದು ತಲೆಗೆ ಹೊಯ್ದ ನೀರು ಕಾಲಿಗೆ ಬರಲೇಬೇಕು ಎಂಬು ದಕ್ಕೆ ಉದಾಹರಣೆ’ ಎಂದಿದ್ದಾರೆ. ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಹರೀಶ್‌ ಕುಮಾರ್‌ ಪ್ರತಿಕ್ರಿಯಿಸಿ, “ಕಟ್ಟಡಕ್ಕೆ 10 ವರ್ಷ ಆಗಿದೆ. ಹೀಗಾಗಿ ಮೆಟ್ಟಿಲು, ನೀರಿನ ಟ್ಯಾಂಕ್‌ ಸಹಿತ ಕೆಲವು ಗಾರೆ ಕೆಲಸ ಮಾಡಲು ಇತ್ತು. ಅದನ್ನೇ…

Read More

ಸುರತ್ಕಲ್: ಸಾಮಾಜಿಕ ಜಾಲತಾಣದಲ್ಲಿ ಚಿನ್ನ ಹಾಗೂ ಹಣಕ್ಕಾಗಿ ಉದ್ಯಮಿಯೋರ್ವರಿಗೆ ಖಾಸಗಿ ಮಾಹಿತಿಯನ್ನು ಬಹಿರಂಗಗೊಳಿಸುವ ಬೆದರಿಕೆಯನ್ನೊಡ್ಡಿದ್ದ ಆರೋಪದ ಮೇರೆಗೆ ಹಿಂದೂ ಮಹಾಸಭಾದ ರಾಜ್ಯಾಧ್ಯಕ್ಷ ರಾಜೇಶ್ ಪವಿತ್ರನ್ ಅವರನ್ನು ಸುರತ್ಕಲ್ ಠಾಣಾ ಪೊಲೀಸರು ಬಂಧಿಸಿದ್ದಾರೆ. ರಾಜೇಶ್ ಪವಿತ್ರನ್, ಕಾವೂರು ನಿವಾಸಿ ಸುರೇಶ್ ಎಂಬವರು ಸುರತ್ಕಲ್‌ನಲ್ಲಿ ಪಾಲುದಾರಿಕೆಯಲ್ಲಿ ವ್ಯವಹಾರ ನಡೆಸಲು ಮುಂದಾಗಿದ್ದರು. ಆದರೆ, ರಾಜೇಶ್ ಪವಿತ್ರನ್ ನಡೆಸುತ್ತಿದ್ದ ಅವ್ಯವಹಾರಗಳು ಗಮನಕ್ಕೆ ಬಂದ ಕಾರಣ ಆತನೊಂದಿಗೆ ಪಾಲುದಾರಿಕೆಯಿಂದ ಹೊರ ಬರಲು ಬಯಸಿದ್ದಾಗಿ ಪೊಲೀಸರಿಗೆ ಸುರೇಶ್ ಅವರು ತಿಳಿಸಿದ್ದಾರೆ. ಇದುವೆ ರಾಜೇಶ್ ಪವಿತ್ರನ್ ಅವರ ಆಕ್ರೋಶಕ್ಕೆ ಕಾರಣವಾಗಿದೆ.ಇದರಿಂದ ಆಕ್ರೋಶಗೊಂಡ ಆರೋಪಿ ರಾಜೇಶ್ ಪವಿತ್ರನ್, ಸುರೇಶ್ ಅವರ ಲ್ಯಾಪ್ ಟಾಪ್ ವಶಕ್ಕೆ ಪಡೆದು ಹೆಚ್ಚುವರಿ ಹಣ ನೀಡಬೇಕು, ಇಲ್ಲದಿದ್ದಲ್ಲಿ ಅದರಲ್ಲಿದ್ದ ಎಲ್ಲಾ ಖಾಸಗಿ ಮಾಹಿತಿಗಳನ್ನು ಬಹಿರಂಗ ಪಡಿಸುವುದಾಗಿ ಬೆದರಿಕೆಯೊಡ್ಡಿದ್ದ. ಅಲ್ಲದೆ, ಕೈ, ಕಾಲು ಕಡಿದುಹಾಕುವುದಾಗಿ ಬೆದರಿಕೆ ಹಾಕಿದ್ದ ಎಂದು ಸುರೇಶ್‌ ಅವರು ಸುರತ್ಕಲ್‌ ಪೊಲೀಸರಿಗೆ ದೂರು ನೀಡಿದ್ದರು.ಸುರೇಶ್‌ ಅವರ ದೂರು ದಾಖಲಿಸಿಕೊಂಡ ಪೊಲೀಸರು, ರಾಜೇಶ್‌ ಪವಿತ್ರನ್‌ನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ ಎಂದು…

Read More

ಮಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಲಿದ್ದು ಈ ಹಿನ್ನೆಲೆಯಲ್ಲಿ ಮೀನುಗಾರರು ಎಚ್ಚರಿಕೆ ವಹಿಸಬೇಕೆಂದು ಹವಾಮಾನ ಇಲಾಖೆ ತಿಳಿಸಿದೆ. ಡಿಸೆಂಬರ್ 14ರಿಂದ 17ರವರೆಗೆ ಕಡಲು ಪ್ರಕ್ಷುಬ್ದವಾಗಲಿದ್ದು ಈ ಅವಧಿಯಲ್ಲಿ ಗಾಳಿಯ ವೇಗ ಹೆಚ್ಚರಲಿದೆ ಆದುದರಿಂದ ಮೀನುಗಾರರು ಮೀನುಗಾರಿಕೆಗೆ ಇಳಿಯದೇ ಇರುವುದು ಉತ್ತಮ ಅದರಲ್ಲೂ ಡಿಸೆಂಬರ್ 16ರಂದು ಗಾಳಿಯ ವೇಗ ಅತಿ ಹೆಚ್ಚು ಇರುವ ಸಾಧ್ಯತೆ ಇದೆ. ಈ ವೇಳೆ ಸಂಭವಿಸಬಹುದಾದ ಅನಾಹುತವನ್ನು ತಡೆಗಟ್ಟುವ ಉದ್ದೇಶದಿಂದ ಯಾವುದೇ ದೋಣಿ ಮೀನುಗಾರಿಕೆಗೆ ತೆರಳದಂತೆ ಹಾಗೂ ಈಗಾಗಲೇ ತೆರಳಿಯಲ್ಲಿರುವ ಎಲ್ಲಾ ದೋಣಿಗಳು ಕೂಡಲೇ ಧಡ ಸೇರುವಂತೆ ಮೀನುಗಾರಿಕೆ ಜಂಟ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಕಾರವಾರ: ಭೀಕರ ಕಾರು ಅಫಘಾತದಲ್ಲಿ ಪ್ರಸಿದ್ದ ಯಕ್ಷಗಾನ ಕಲಾವಿದ ತಿಮ್ಮಪ್ಪ ಭಾಗ್ವತ್ ಬಾಳೆಹದ್ದ (65) ಮೃತಪಟ್ಟಿದ್ದಾರೆ. ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಗಂಭೀರವಾಗಿ ಗಾಯಗೊಂಡಿದ್ದ ತಿಮ್ಮಪ್ಪ ಭಾಗ್ವತ್ ಬಾಳೆಹದ್ ರನ್ನು ಶಿರಶಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಯಕ್ಷಗಾನ ಹಾಗೂ ಹಲವು ರಾಗಗಳಲ್ಲಿ ತಿಮ್ಮಪ್ಪ ಭಾಗ್ವತ್ ಬಾಳೆಹದ್ದ ಸಾಕಷ್ಟು ಹೆಸರು ಮಾಡಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟಿದ್ದು, ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ದೋಹಾ: ಡಿಸೆಂಬರ್ 18 ರಂದು ನಡೆಯುವ ಫಿಫಾ ವಿಶ್ವಕಪ್ 2022 ರ ಫೈನಲ್‌ ಪಂದ್ಯ ತನ್ನ ಕೊನೆಯ ಆಟ ಎಂದು ಅರ್ಜೆಂಟಿನಾ ತಂಡದ ನಾಯಕ ಹಾಗೂ ಖ್ಯಾತ ಫುಟ್‌ಬಾಲ್‌ ಆಟಗಾರ ಲಿಯೋನೆಲ್‌ ಮೆಸ್ಸಿ ತಿಳಿಸಿದ್ದಾರೆ. ಆ ಮೂಲಕ ತಮ್ಮ ನಿವೃತ್ತಿಯನ್ನು ಖಚಿತಪಡಿಸಿದ್ದಾರೆ. ಫೈನಲ್‌ನಲ್ಲಿ ನನ್ನ ಕೊನೆಯ ಪಂದ್ಯವನ್ನು ಆಡುವ ಮೂಲಕ ವಿಶ್ವಕಪ್ ಪ್ರಯಾಣವನ್ನು ಪೂರ್ಣಗೊಳಿಸಲು ಇಚ್ಛಿಸಿದ್ದೇನೆ ಎಂದು ಮೆಸ್ಸಿ ತಿಳಿಸಿದ್ದಾರೆ. ಹಲವು ವರ್ಷಗಳ ನಂತರ ಮುಂದಿನ ವಿಶ್ವಕಪ್‌ ಪಂದ್ಯ ನಡೆಯುತ್ತದೆ. ಅಲ್ಲಿ ಇಂಥಹ ಸಾಧನೆ ಮಾಡಲು ಆಗುವುದಿಲ್ಲ ಎಂದು ನನಗೆ ಎನ್ನಿಸುತ್ತಿದೆ. ಹೀಗಾಗಿ ವಿದಾಯ ಹೇಳುವುದು ಉತ್ತಮ ಎನಿಸುತ್ತಿದೆ ಎಂದು ಮೆಸ್ಸಿ ಸ್ಪಷ್ಟಪಡಿಸಿದ್ದಾರೆ. 35 ವರ್ಷ ವಯಸ್ಸಿ ಮೆಸ್ಸಿ ಈ ಬಾರಿ ತಮ್ಮ ಐದನೇ ವಿಶ್ವಕಪ್‌ನಲ್ಲಿ ಆಡುತ್ತಿದ್ದಾರೆ.

Read More

ಮಂಗಳೂರು: ಡಿ.16ರವರೆಗೆ ಮ್ಯಾಂಡಸ್ ಚಂಡಮಾರುತದಿಂದ ಅರಬ್ಬಿ ಸಮುದ್ರವು ಪ್ರಕ್ಷುಬ್ಧವಾಗಿರುತ್ತದೆ, ಈ ವೇಳೆ ಸಂಭವಿಸುವ ಅನಾಹುತವನ್ನು ತಡೆಗಟ್ಟಲು ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳದಂತೆ ಹಾಗೂ ಮೀನುಗಾರಿಕೆಗೆ ತೆರಳಿರುವ ಎಲ್ಲಾ ಮೀನುಗಾರಿಕೆ ದೋಣಿಗಳು ಕೂಡಲೇ ದಡ ಸೇರುವಂತೆ ಮೀನುಗಾರಿಕೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಮಂಗಳೂರು ಕೋಸ್ಟ್‍ಗಾರ್ಡ್ ನೀಡಿರುವ ಹವಾಮಾನ ಮುನ್ಸೂಚನೆ ಆಧರಿಸಿ ಅವರು ಎಚ್ಚರಿಸಿದ್ದಾರೆ

Read More

ಮಂಗಳೂರು: ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣದ ಆರೋಪಿ ಶಾರೀಕ್ ಆರೋಗ್ಯದಲ್ಲಿ ಶೇ. 80ರಷ್ಟು ಚೇತರಿಕೆ ಕಂಡಿದೆ. ಮಂಗಳೂರಿನ ಕಮಕನಾಡಿಯ ಖಾಸಗಿ ಆಸ್ಪತ್ರೆಯಲ್ಲಿ ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟದ ರೂವಾರಿ ಉಗ್ರ ಶಾರೀಕ್ ಚಿಕಿತ್ಸೆ ಪಡೆಯುತ್ತಿದ್ದು, ನಡೆಯುವ ಸ್ಥಿತಿಗೆ ತಲುಪಿದ್ದಾನೆ. ಈ ಹಿನ್ನೆಲೆಯಲ್ಲಿ ಎನ್‍ಐಎ ಅಧಿಕಾರಿಗಳು ಇಂದು ವೈದ್ಯರ ಸಮ್ಮತಿಯ ಮೇರೆಗೆ ಶಾರೀಕ್‍ನನ್ನು ವಶಕ್ಕೆ ಪಡೆಯುವ ಸಾಧ್ಯತೆಯಿದೆ. ಅಷ್ಟೇ ಅಲ್ಲದೇ ಪೊಲೀಸ್ ಬಿಗಿ ಭದ್ರತೆಯನ್ನು ಒದಗಿಸಲಾಗಿದೆ. ಇತ್ತೀಚೆಗೆ ಮಂಗಳೂರಿನಲ್ಲಿ ರಿಕ್ಷಾದಲ್ಲಿ ಸ್ಫೋಟಗೊಂಡು ಸಿಡಿದ ಕುಕ್ಕರ್‌ ಮುಚ್ಚಳ ಶಾರೀಕ್‌ ಕುತ್ತಿಗೆಗೆ ಬಡಿದಿತ್ತು. ಇದರಿಂದಾಗಿ ಶಾರೀಕ್‌ನ ಕೈ, ದೇಹಕ್ಕೆ ಬೆಂಕಿ ಬಿದ್ದರಿಂದ ಯಾವುದೇ ಕ್ಷಣದಲ್ಲಿ ಸೋಂಕು ತಗುಲಿ ಆರೋಗ್ಯ ಏರುಪೇರಾಗುವ ಸಾಧ್ಯತೆಯಿತ್ತು.

Read More

ಬೆಳ್ತಂಗಡಿ : ಕಾಶಿಪಟ್ಣ ಗ್ರಾಮದಲ್ಲಿ ಆಟೋ ಮತ್ತು ಸ್ಕೂಟರ್ ನಡುವೆ ಮಂಗಳವಾರ ಸಂಭವಿಸಿದ ಅಪಘಾತದಲ್ಲಿ ನಾರಾವಿ ಗ್ರಾಮದ ನಿವಾಸಿ, ನಿತ್ಯಾನಂದ ಪೂಜಾರಿ (48) ಮೃತಪಟ್ಟಿದ್ದಾರೆ. ಕೊಕ್ರಾಡಿ– ಶಿರ್ತಾಡಿ ರಸ್ತೆಯ ಪೆರಂದಡ್ಕ ಎಂಬಲ್ಲಿ ನಿತ್ಯಾನಂದ ಪೂಜಾರಿ ಅವರು ಸ್ಕೂಟರ್‌ನಲ್ಲಿ ಬರುತ್ತಿದ್ದ ವೇಳೆ. ವಿರುದ್ಧ ದಿಕ್ಕಿನಿಂದ ಬಂದ ಆಟೋ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡ ಸ್ಕೂಟರ್ ಸವಾರ ನಿತ್ಯಾನಂದ ಪೂಜಾರಿ ಸ್ಥಳದಲ್ಲೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ವೇಣೂರು ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.

Read More