ಪರಪ್ಪನ ಅಗ್ರಹಾರ ಜೈಲಿನ ಕರ್ಮಕಾಂಡ ಮತ್ತೊಮ್ಮೆ ಬಯಲಾಗಿದ್ದು ಜೈಲಿನಲ್ಲಿ ಉಮೇಶ್ ರೆಡ್ಡಿ ಹಾಗೂ ಭಯೋತ್ಪಾದಕರು ಸೇರಿದಂತೆ ಹಲವು ಕೈದಿಗಳ ಕೈಯಲ್ಲಿ ಮೊಬೈಲ್ ಕಂಡುಬಂದಿದ್ದು ಈ ಒಂದು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಈ ವಿಚಾರವಾಗಿ ಗೃಹ ಸಚಿವ ಜಿ ಪರಮೇಶ್ವರ್ ಅವರು ಪ್ರತಿಕ್ರಿಯೆ ನೀಡಿ ಇದಕ್ಕೆ ಯಾರು ಹೊಣೆಗಾರರಾಗಿದ್ದಾರೆ. ಅಂಥವರ ವಿರುದ್ಧ ಕಠಿಣವಾದ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು. ಬೆಂಗಳೂರಲ್ಲಿ ಮಾತನಾಡಿದ ಅವರು, ಇವಂದು ಘಟನೆಗಳು ಮಂಗಳೂರು ಬೆಳಗಾವ್ ಸೇರಿದಂತೆ ಬಹಳ ಕಡೆ ಆದ ಸಂದರ್ಭದಲ್ಲಿ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿ ಅವರ ವಿರುದ್ಧ ಕ್ರಮ ತೆಗೆದುಕೊಂಡಿದ್ದೇವೆ ಆದರೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಪದೇಪದೇ ಆಗಿದ್ದು ಕೇಳಿಬಂದಿದ್ದು ಇದೇ ಕೂಡ ಇದೇ ರೀತಿಯಾದಾಗ ಕೆಲವರನ್ನು ಸಸ್ಪೆಂಡ್ ಮಾಡಲಾಗಿತ್ತು. ಎಡಿಜಿಪಿ ಬಿ ದಯಾನಂದ ಜೊತೆಗೆ ನಾನು ಮಾತನಾಡಿದ್ದೇನೆ ಯಾರು ಹೊಣೆಗಾರರಾಗಿದ್ದಾರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಸೂಪರಿಟೆಂಡೆಂಟ್ ಮತ್ತು ಕೆಳ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಕೂಡಲೇ ವರದಿ ನೀಡುವಂತೆ ನಾನು…
Author: main-admin
ಬೆಂಗಳೂರು: ಸ್ಥಳ ಮಹಜರಿಗೆ ಕರೆದೊಯ್ದಿದ್ದ ವೇಳೆ ಪೊಲೀಸರ ಮೇಲೆ ದಾಳಿ ನಡೆಸಿ ಎಸ್ಕೇಪ್ ಆಗಲು ಯತ್ನಿಸಿದ ಆರೋಪಿ ಮೇಲೆ ಫೈರಿಂಗ್ ನಡೆಸಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ. ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಬೊಮ್ಮಸಂದ್ರ ಸ್ಮಶಾನದ ಬಳಿ ನಿನ್ನೆ (ನ.8) ರಾತ್ರಿ 10.30ರ ಸುಮಾರಿಗೆ ಘಟನೆ ನಡೆದಿದ್ದು, ಕಿಡ್ನಾಪ್ & ಇಬ್ಬರ ಕೊಲೆ ಪ್ರಕರಣದ ಆರೋಪಿಯಾಗಿರುವ ಆಂಧ್ರ ಮೂಲದ ರವಿ ಪ್ರಸಾದ್ ರೆಡ್ಡಿ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಉದ್ಯಮಿ ಬಾಲಪ್ಪ ರೆಡ್ಡಿ, ಮಾದೇಶ್ ಎಂಬುವರ ಕೊಲೆ ಪ್ರಕರಣದ ಸಂಬಂಧ ಆರೋಪಿ ರವಿ ಪ್ರಸಾದ್ ರೆಡ್ಡಿಯನ್ನ ಹೆಬ್ಬಗೋಡಿ ಪೊಲೀಸರು ಬಂಧಿಸಿದ್ದರು. ಕೇಸ್ ಸಂಬಂಧ ಸ್ಥಳ ಮಹಜರಿಗೆ ಪೊಲೀಸರು ಕರೆದೊಯ್ದಿದ್ದ ವೇಳೆ ಆರೋಪಿ, ಹೆಡ್ ಕಾನ್ಸ್ಸ್ಟೇಬಲ್ ಅಶೋಕ್ ಮೇಲೆ ಏಕಾಏಕಿ ದಾಳಿ ನಡೆಸಿದ್ದಾನೆ. ಈ ವೇಳೆ ಗಾಳಿಯಲ್ಲಿ ಎರಡು ಸುತ್ತು ಗುಂಡು ಹಾರಿಸಿ ವಾರ್ನಿಂಗ್ ನೀಡಿದರೂ ದಾಳಿ ನಿಲ್ಲಿಸದಿದ್ದಾಗ ಆರೋಪಿ ಮೇಲೆ ಹೆಬ್ಬಗೋಡಿ ಇನ್ಸ್ಪೆಕ್ಟರ್ ಸೋಮಶೇಖರ್ ಫೈರಿಂಗ್ ಮಾಡಿದ್ದಾರೆ. ರವಿ ಪ್ರಸಾದ್ ರೆಡ್ಡಿ…
ಬ್ರಹ್ಮಾವರದ ಹಿಂದುಳಿದ ವರ್ಗಗಳ ಹಾಸ್ಟೆಲ್ ನಿಂದ ನಾಪತ್ತೆಯಾಗಿದ್ದ ಮೂವರು ವಿದ್ಯಾರ್ಥಿನಿಯರು ಮಂಗಳೂರಿನಲ್ಲಿ ಪತ್ತೆಯಾಗಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ನಿನ್ನೆ (ನ.8) ಬೆಳಗ್ಗೆ ಮೂವರು ವಿದ್ಯಾರ್ಥಿನಿಯರು ಹಾಸ್ಟೆಲ್ ನಿಂದ ನಾಪತ್ತೆಯಾಗಿದ್ದರು. ತನಿಖೆ ನಡೆಸಿದ ಬ್ರಹ್ಮಾವರ ಪೊಲೀಸರು ಸಿಸಿ ಟಿವಿ ದೃಶ್ಯಗಳನ್ನು ಪರಿಶೀಲಿಸಿದ್ದಾರೆ. ಅಲ್ಲದೇ ಮೊಬೈಲ್ ಲೊಕೇಶನ್ ಆಧಾರದ ಮೇಲೆ ವಿದ್ಯಾರ್ಥಿನಿಯರು ಮಂಗಳೂರಿನಲ್ಲಿ ಇರುವುದನ್ನು ಪತ್ತೆ ಹಚ್ಚಿದ್ದಾರೆ. ಬ್ರಹ್ಮಾವರ ಪೊಲೀಸರು ಪೋಷಕರೊಂದಿಗೆ ಮಂಗಳೂರಿಗೆ ತೆರಳಿದ್ದು, ಅಲ್ಲಿಂದ ಕರೆತರುತ್ತಿದ್ದಾರೆ ಎನ್ನುವ ಮಾಹಿತಿ ಸಿಕ್ಕಿದೆ. ಬ್ರಹ್ಮಾವರ ಪೊಲೀಸರ ಕ್ಷಿಪ್ರ ಕಾರ್ಯಾಚರಣೆಯಿಂದಾಗಿ ನಾಪತ್ತೆ ಪ್ರಕರಣ ಸುಖಾಂತ್ಯಗೊಂಡಿದೆ
ಪುತ್ತೂರು: ನಿಷೇಧಿತ ಮಾದಕ ವಸ್ತು ಗಾಂಜಾವನ್ನು ಆಟೋ ರಿಕ್ಷಾದಲ್ಲಿ ಸಾಗಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಪುತ್ತೂರು ನಗರ ಪೊಲೀಸ್ ಠಾಣೆಯವರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ನ.08, 2025 ರಂದು ಮಧ್ಯಾಹ್ನ ಸವಣೂರು ಕಡೆಯಿಂದ ಪುತ್ತೂರು ಕಡೆಗೆ ಆಟೋ ರಿಕ್ಷಾದಲ್ಲಿ ಗಾಂಜಾ ಸಾಗಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ, ಪುತ್ತೂರು ನಗರ ಠಾಣೆಯ ಉಪನಿರೀಕ್ಷಕ ಜನಾರ್ಧನ ಕೆ.ಎಂ. ಅವರು ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ವಾಹನವನ್ನು ತಡೆದು ಪರಿಶೀಲನೆ ನಡೆಸಿದರು. ಪರಿಶೀಲನೆ ವೇಳೆ 1 ಕಿಲೋ ಗಿಂತಲೂ ಹೆಚ್ಚು ಪ್ರಮಾಣದ ನಿಷೇಧಿತ ಮಾದಕ ವಸ್ತು ಗಾಂಜಾ ಹಾಗೂ ಸುಮಾರು 25 ಇಂಚು ಉದ್ದದ ಕತ್ತಿ ಪತ್ತೆಯಾಗಿದ್ದು, ಆಟೋ ಚಾಲಕನನ್ನು ವಿಚಾರಿಸಿದಾಗ ಆತ ಕಡಬ ತಾಲೂಕಿನ ಸವಣೂರು ನಿವಾಸಿ ಪ್ರಸಾದ್ ಇ (35) ಎಂದು ತಿಳಿದುಬಂದಿದೆ. ಈ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 106/2025ರಂತೆ NDPS ಕಾಯ್ದೆಯ ಸೆಕ್ಷನ್ 8(c), 20(ii)(c) ಹಾಗೂ Indian Arms Act ಸೆಕ್ಷನ್ 25(1B)(b) ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು,…
ಮಂಗಳೂರು: ಉದ್ಯಮಿಗಳಿಗೆ ಸಾಲ ಕೊಡಿಸುವುದಾಗಿ ನಂಬಿಸಿ ಕೋಟಿಗಟ್ಟಲೆ ರೂಪಾಯಿ ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಂಚಕ ರೋಷನ್ ಸಲ್ಡಾನನ 2.85 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಮಂಗಳೂರು ಉಪವಲಯ ಕಚೇರಿ ಅಧಿಕಾರಿಗಳು ರೋಷನ್ ಸಲ್ಡಾನನ ಮನೆ ಮತ್ತು ಬ್ಯಾಂಕ್ ಖಾತೆ ಸೇರಿ 2.85 ಕೋಟಿ ರೂ. ಮೌಲ್ಯದ ಆಸ್ತಿಯನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿದ್ದಾರೆ. ರೋಷನ್ ಸಲ್ಡಾನ ಸಾಲ ಕೊಡಿಸುವ ಆಮಿಷವೊಡ್ಡಿ ಶ್ರೀಮಂತ ವ್ಯಕ್ತಿಗಳು ಹಾಗೂ ಉದ್ಯಮಿಗಳಿಗೆ 200 ಕೋಟಿ ರೂ.ಗೂ ಅಧಿಕ ಹಣ ವಂಚನೆ ಮಾಡಿದ್ದ. ಈ ಸಂಬಂಧ ರೋಷನ್ ಸಲ್ಡಾನ, ಆತನ ಪತ್ನಿ ಢಫ್ನಿನೀತು ಹಾಗೂ ಇತರರ ವಿರುದ್ಧ ಎಫ್‍ಐಆರ್ ದಾಖಲಾಗಿತ್ತು. ಇದರ ಆಧಾರದ ಮೇಲೆ ಇಡಿ ಅಧಿಕಾರಿಗಳು ತನಿಖೆ ನಡೆಸಿದ್ದರು. ಈ ಹಿಂದೆ ಸುಮಾರು 9.5 ಕೋಟಿ ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿತ್ತು. ಮಂಗಳೂರಿನಲ್ಲಿರುವ ಆತನ ಐಷಾರಾಮಿ ಬಂಗಲೆಯನ್ನು ಕಂಡು ಅಧಿಕಾರಿಗಳು ದಂಗಾಗಿದ್ದರು. ನೂರಾರು ಕೋಟಿ ಸಾಲ ಕೊಡಿಸುವುದಾಗಿ ಐದರಿಂದ ಹತ್ತು…
ಉಡುಪಿ: ಉಡುಪಿ ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ಉಪಾಧೀಕ್ಷಕ (ಡಿವೈಎಸ್ಪಿ) ರಾಗಿ ವಿ.ಎಸ್.ಹಾಲಮೂರ್ತಿ ರಾವ್ ಶುಕ್ರವಾರ ಅಧಿಕಾರ ವಹಿಸಿಕೊಂಡಿದ್ದಾರೆ. ಉಡುಪಿ ಠಾಣೆಯಲ್ಲಿ ಕಳೆದ ಸುಮಾರು ಒಂದು ವರ್ಷದಿಂದ ಡಿವೈಎಸ್‌ಪಿ ಹುದ್ದೆ ಖಾಲಿ ಇತ್ತು. ಈವರೆಗೆ ಪ್ರಭಾರ ಡಿವೈಎಸ್ಪಿಯಾಗಿ ನಿರೀಕ್ಷಕ ಮಂಜುನಾಥ್ ಕಾರ್ಯನಿರ್ವಹಿಸುತ್ತಿದ್ದರು. ಇದೀಗ ಅಧಿಕಾರ ವಹಿಸಿಕೊಂಡಿರುವ ನೂತನ ಡಿವೈಎಸ್ಪಿ ಸಾರ್ವಜನಿಕರು ತಮ್ಮ ಯಾವುದೇ ದೂರುಗಳಿದ್ದಲ್ಲಿ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದ್ದಾರೆ.
ಉಳ್ಳಾಲ: ಅಪ್ರಾಪ್ತಯ ಮೇಲೆ ಮಲ ತಂದೆಯೇ ಅತ್ಯಾಚಾರಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಆರೋಪಿ ಅಮೀರ್ ನನ್ನು ಬಂಧನ ಮಾಡಲಾಗಿತ್ತು. ಇದೀಗ ಈ ಪ್ರಕರಣಕ್ಕೆ ಇಂದು ಮಂಗಳೂರಿನ FTSC-2ನೇ ನ್ಯಾಯಾಲಯವು CR. Mis 1024/2025 ಆರೋಪಿ ಅಮೀರ್ ಅವರಿಗೆ ಜಾಮೀನು ನೀಡಿ ಆದೇಶ ಮಾಡಿದೆ. ಆರೋಪಿ ಪರ ಹಿರಿಯ ನ್ಯಾಯವಾದಿ ಶ್ರೀ. S. S.KHAZI ವಾದಿಸಿದ್ದರು.
ಮಂಗಳೂರು: ಜಿಲ್ಲಾ ಕಾರಾಗೃಹದಲ್ಲಿ ಅಳವಡಿಸಲಾಗಿರುವ ಮೊಬೈಲ್ ಸಿಗ್ನಲ್ ಜಾಮರ್‌ನಿಂದ ಸುತ್ತಲಿನ ಪ್ರದೇಶಗಳಲ್ಲಿ ಮೊಬೈಲ್ ನೆಟ್‌ವರ್ಕ್ ಸಮಸ್ಯೆ ಉಂಟಾಗಿರುವ ಕುರಿತು, ಸುತ್ತಮುತ್ತಲಿನ ಮೊಬೈಲ್ ನೆಟ್ವರ್ಕ್ ಸಾಮರ್ಥ್ಯವನ್ನು ಪರಿಶೀಲಿಸಿ ವರದಿ ಸಲ್ಲಿಸುವಂತೆ ಹೈಕೋರ್ಟ್ ಸರ್ಕಾರಕ್ಕೆ ಸೂಚನೆ ನೀಡಿದೆ. ಮಂಗಳೂರು ವಕೀಲರ ಸಂಘವು ಕಳೆದ ಮಾರ್ಚ್‌ನಿಂದ ನ್ಯಾಯಾಲಯಗಳ ಸಂಕೀರ್ಣ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೊಬೈಲ್ ನೆಟ್‌ವರ್ಕ್ ಸಮಸ್ಯೆ ಎದುರಾಗಿರುವ ಬಗ್ಗೆ ಹೈಕೋರ್ಟ್‌ನಲ್ಲಿ ದಾವೆ ಹೂಡಿತ್ತು. ಈ ಅರ್ಜಿಯ ವಿಚಾರಣೆ ಮಂಗಳವಾರ ಆರಂಭಗೊಂಡಿತು. ಸಂಘದ ಪರವಾಗಿ ಹಿರಿಯ ನ್ಯಾಯವಾದಿ ಪಿ.ಪಿ. ಹೆಗ್ಡೆ ವಾದ ಮಂಡಿಸಿದರು. ಕೈದಿಗಳು ಕಾರಾಗೃಹದೊಳಗೆ ಮೊಬೈಲ್ ಬಳಸುವುದನ್ನು ತಡೆಯುವ ಉದ್ದೇಶದಿಂದ ಜಾಮರ್ ಅಳವಡಿಸಲಾಗಿದೆ. ಆದರೆ, ವಾಸ್ತವದಲ್ಲಿ ಕೈದಿಗಳಿಗೆ ಮೊಬೈಲ್ ನೆಟ್‌ವರ್ಕ್ ಇನ್ನೂ ಲಭ್ಯವಿದೆ ಎಂಬ ಮಾಹಿತಿ ಇದೆ. ಇದರ ಬದಲಿಗೆ, ಕಾರಾಗೃಹದ ಹೊರಗಡೆ ನ್ಯಾಯವಾದಿಗಳು ಹಾಗೂ ಸಾರ್ವಜನಿಕರಿಗೆ ನೆಟ್ವರ್ಕ್ ಸಮಸ್ಯೆಯಿಂದಾಗಿ ತೀವ್ರ ತೊಂದರೆಯಾಗಿದೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ನ್ಯಾಯಾಲಯದ ಕಲಾಪಗಳಿಗೆ ಸಂಬಂಧಿಸಿದ ಕೆಲಸಗಳನ್ನು ಮಾಡುವಾಗಲೂ…
ಪುತ್ತೂರು : ಜೊತೆಗೆ ಓದುತ್ತಿದ್ದ ವಿದ್ಯಾರ್ಥಿಯೊಬ್ಬ ಅನಾರೋಗ್ಯ ಪೀಡಿತನಾದ ಕಾರಣ ಆತನನ್ನು ನೋಡಲು ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳ ಗುಂಪಿನ ಮೇಲೆ ಇಬ್ಬರು ದುಷ್ಕರ್ಮಿಗಳು ಅಡ್ಡಗಟ್ಟಿ ನೈತಿಕ ಪೊಲೀಸ್ ಗಿರಿ ನಡೆಸಿದ ಘಟನೆ ಉಪ್ಪಿನಂಗಡಿ ಸಮೀಪದ ಪೆರಿಯಡ್ಕ ಎಂಬಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಬೈಕ್ ಸವಾರರಾದ ಮುಸ್ತಫಾ ಮತ್ತು ಸಹಸವಾರ ಮುಸ್ತಫಾ ಪೆರಿಯಡ್ಕ ಎಂದು ಗುರುತಿಸಲಾಗಿದೆ. ತಮ್ಮದೇ ಕಾಲೇಜಿನಲ್ಲಿ ಓದುತ್ತಿರುವ ಸಹಪಾಠಿ ವಿದ್ಯಾರ್ಥಿ ಇತ್ತೀಚೆಗೆ ಅನಾರೋಗ್ಯದಿಂದ ಚಿಕಿತ್ಸೆ ಪಡೆದು ಮನೆಯಲ್ಲಿದ್ದು, ಆತನ ಆರೋಗ್ಯ ವಿಚಾರಿಸುವ ಸಲುವಾಗಿ, ಕಾಲೇಜಿನ ಕೆಲವು ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರು ಆತನ ಮನೆಗೆ ಗುರುವಾರ ನ.6 ರಂದು ಬೆಳಗ್ಗೆ ಕಾಲೇಜಿನಿಂದ ಹೊರಟು ಪೆರಿಯಡ್ಕ ಎಂಬಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಬೈಕ್ ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ವಿದ್ಯಾರ್ಥಿಗಳನ್ನು ಅಡ್ಡಗಟ್ಟಿ ವಿದ್ಯಾರ್ಥಿಗಳ ಹೆಸರು, ಕಾಲೇಜ್ ಹಾಗೂ ಊರಿನ ಬಗ್ಗೆ ವಿಚಾರಿಸಿ ಬಳಿಕ ವಿಭಿನ್ನ ಕೋಮುಗಳ ವಿದ್ಯಾರ್ಥಿ /ವಿದ್ಯಾರ್ಥಿನಿಯರು ಜೊತೆಗೆ ತೆರಳುತ್ತಿರುವ ಬಗ್ಗೆ ತಕರಾರು ತೆಗೆದು,…
ಮಂಗಳೂರು: ನಿಷೇದಿತ ಮಾದಕ ವಸ್ತು ಎಂಡಿಎಂಎನ್ನು ಖರೀದಿಸಿ ಮಂಗಳೂರು ನಗರದ ಸಾರ್ವಜನಿಕರಿಗೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಮಾದಕವಸ್ತು ಸರಬರಾಜು ಮಾಡುತ್ತಿದ್ದ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿ ಅವರುಗಳಿಂದ 24.57 ಗ್ರಾಂ ತೂಕದ MDMA ಮಾದಕ ವಸ್ತು ಎಂಡಿಎಂಎ ಅನ್ನು ವಶಪಡಿಸಿಕೊಂಡಿರುತ್ತಾರೆ. ನ.4ರಂದು ಮಂಗಳೂರು ನಗರದ ಬಂದರು ಮತ್ತು ದಕ್ಕೆಯ ಪರಿಸರದಲ್ಲಿ ಆಟೋ ರಿಕ್ಷಾದಲ್ಲಿ ಇದ್ದುಕೊಂಡು ಮಾದಕವಸ್ತು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಸಿಸಿಬಿ ಪೊಲೀಸರು ಆಟೋ ಚಾಲಕ ಅಬ್ದುಲ್ ಸಲಾಮ್ ಪ್ರಾಯ 39 ವರ್ಷ ತಂದೆ; ಅಬ್ದುಲ್ ಹಮೀದ್ ವಾಸ; ಎಸ್.ಹೆಚ್. ನಗರ, ದಯಾಂಬು, ಅಡ್ಯಾರ್, ಕಣ್ಣೂರು, ಮಂಗಳೂರು. ಎಂಬಾತನನ್ನು ವಶಕ್ಕೆ ಪಡೆದುಕೊಂಡು ಆತನಿಂದ ರೂ. 1,20,000/- ಮೌಲ್ಯದ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ, ಆಟೋ ರಿಕ್ಷಾ, ಮೊಬೈಲ್ ಪೋನ್, ತೂಕಮಾಪನ, ಖಾಲಿ ಜಿಪ್ ಲಾಕ್ ಕವರ, ಸಹಿತ ಒಟ್ಟು ರೂ. 2,30,500/- ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ…









