Author: main-admin

ಉಡುಪಿ: ಎಕೆಎಂಎಸ್ ಬಸ್ ಮಾಲಕ ಸೈಪು ಯಾನೇ ಸೈಫುದ್ದೀನ್ ಆತ್ರಾಡಿಯನ್ನು ಗುಂಡಿಟ್ಟು ಕೊಲೆ ಮಾಡಿದ ಘಟನೆ ಶನಿವಾರ ಮಲ್ಪೆ ಸಮೀಪದ ಕೊಡವೂರು ಬಳಿ ನಡೆದಿದೆ. ಮಣಿಪಾಲದಲ್ಲಿ ಸಾರಿಗೆ ವ್ಯವಹಾರದಲ್ಲೂ ತೊಡಗಿಸಿಕೊಂಡಿದ್ದ ಸೈಫುದ್ದೀನ್, ಅಪರಿಚಿತ ದಾಳಿಕೋರರು ಗುಂಡು ಹಾರಿಸಿದಾಗ ದಾಳಿಗೆ ಗುರಿಯಾದರು ಎಂದು ತಿಳಿದುಬಂದಿದೆ. ಮೂಲಗಳ ಪ್ರಕಾರ, ಗುಂಡೇಟಿನ ಬಳಿಕ ಆರೋಪಿಗಳು ಅವರನ್ನು ಮತ್ತಷ್ಟು ಹಲ್ಲೆಗೊಳಪಡಿಸಿ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಭೇಟಿ ನೀಡಿದ್ದು ಮಾಹಿತಿ ಪಡೆದಿದ್ದಾರೆ. ಪ್ರಕರಣದ ಸಂಬಂಧ ಮಲ್ಪೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

Read More

ಉಡುಪಿ: ಮಹಿಳೆಯೊಬ್ಬರಿಗೆ ಕರೆ ಮಾಡಿದ ಅಪರಿಚಿತ ವ್ಯಕ್ತಿಗಳು ಐಮೊಬೈಲ್ ಆ್ಯಪ್ ಮೂಲಕ ಐಸಿಐಸಿಐ ಬ್ಯಾಂಕ್ ಕ್ರೆಡಿಟ್ ಹಾಗೂ ಡೆಬಿಟ್ ಕಾರ್ಡನಿಂದ ಒಟ್ಟು 4,31,697 – ರೂ. ಹಣವನ್ನು ತಮ್ಮ ಖಾತೆಗೆ ವರ್ಗಾವಣೆ ಮಾಡಿಕೊಂಡಿದ್ದಾರೆ. ಮಣಿಪಾಲದ ಬೇಬಿ ಎಸ್. (55) ಇವರಿಗೆ ಗುರುವಾರ ಸಾಯಂಕಾಲ ಐಸಿಐಸಿಐ ಕ್ರೆಡಿಟ್ ಕಾರ್ಡ್ ಎಂಬ ಹೆಸರಿನಿಂದ ಕರೆ ಬಂದಿದ್ದು, ಕರೆಯನ್ನು ಸ್ವೀಕರಿಸಿದ ಸ್ವಲ್ಪ ಹೊತ್ತಿನ ಬಳಿಕ ಸ್ವಯಂಚಾಲಿತವಾಗಿ ಮೊಬೈಲ್ನಲ್ಲಿ ಅಪರಿಚಿತ ಆ್ಯಪ್ ಇನ್ಸ್ಟಾಲ್ ಆಗಿದೆ. ನಂತರ ಮೊಬೈಲ್ ಸ್ವಿಚ್ ಆಫ್ ಆಗಿತ್ತು. ಸ್ವಲ್ಪ ಸಮಯದ ಬಳಿಕ ಮಹಿಳೆಯ ಬ್ಯಾಂಕ್ ಖಾತೆ ಕ್ರೆಡಿಟ್ ಕಾರ್ಡನಿಂದ 294800 ಮತ್ತು 129900 ರೂ. ಹಾಗೂ ಡೆಬಿಟ್ ಕಾರ್ಡನಿಂದ 2000 -ರೂ,, 999 ರೂ, 1999 ರೂ., 1999 -ರೂ ಹಣ ಕಡಿತಗೊಂಡಿದೆ. ತಕ್ಷಣ ಬ್ಯಾಂಕ್ಗೆ ಕರೆ ಮಾಡಿ ಖಾತೆಯನ್ನು ಸ್ಥಗಿತಗೊಳಿಸಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Read More

ಮಂಗಳೂರು: ಬರ್ಕೆ ಪೊಲೀಸ್ ಠಾಣೆ ಮತ್ತು ಮಂಗಳೂರು ಪೂರ್ವ ಪೊಲೀಸ್ ಠಾಣೆಗಳಲ್ಲಿ ಪ್ರತ್ಯೇಕ ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳನ್ನು ಮಂಗಳೂರಿನ ಅಬ್ತಾಸ್ ಹಾಜಿ ಕಾಂಪೌಂಡ್‌ನ ನಿವಾಸಿ, ಕಳೆದ ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗುವುದನ್ನು ತಪ್ಪಿಸಿಕೊಂಡಿದ್ದ ಶೇಖ್ ಶಹಬಾಜ್ (31) ಮತ್ತು ಕಸಬಾ ಬೆಂಗ್ರೆ ನಿವಾಸಿ, ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ಮೊಹಮ್ಮದ್ ನಿಜಾಮುದ್ದೀನ್ ಅಲಿಯಾಸ್ ಬ್ರೋ ನಿಜಾಮ್ (30) ಎಂದು ಗುರುತಿಸಲಾಗಿದೆ. ಶಹಬಾಜ್‌ನನ್ನು ಆಂಧ್ರಪ್ರದೇಶದ ಶ್ರೀ ಸತ್ಯಸಾಯಿ ಜಿಲ್ಲೆಯ ಇಂದುಪುರ ತಾಲೂಕಿನ 2 ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯ ಸುರುಗೂರು ಪ್ರದೇಶದಿಂದ ಸೆಪ್ಟೆಂಬರ್ 24ರ ರಾತ್ರಿ ಬಂಧಿಸಲಾಗಿದೆ. ಬರ್ಕೆ ಠಾಣೆಯ ವಾರಂಟ್ ಸಿಬ್ಬಂದಿ ಚೇತನ್ ಬಿ.ಆರ್. ಮತ್ತು ಮೋಹನ್ ಅವರು ಇಂದುಪುರ 2 ಟೌನ್ ಠಾಣೆಯ ಇನ್ಸ್ಪೆಕ್ಟರ್ ಅಬ್ದುಲ್ ಕರೀಂ ಮತ್ತು ಅಪರಾಧ ವಿಭಾಗದ ಸಿಬ್ಬಂದಿ ಸಹಾಯದಿಂದ ಈ ಕಾರ್ಯಾಚರಣೆ ನಡೆಸಿದ್ದಾರೆ. ನ್ಯಾಯಾಲಯಕ್ಕೆ ಹಾಜರಾಗದ ಕಾರಣಕ್ಕಾಗಿ ಆತನ ವಿರುದ್ಧ ಬರ್ಕೆ ಠಾಣೆಯಲ್ಲಿ ಮತ್ತೊಂದು ಪ್ರಕರಣವನ್ನು ಸಹ…

Read More

ಸಪ್ಟೆಂಬರ್ 21ರಂದು ಬೆಂದೂರ್ ಚರ್ಚ್ ಸಭಾಂಗಣದಲ್ಲಿ ಕಾಸ್ಕ್ ಸಂಸ್ಥೆಯ ವಾರ್ಷಿಕ ಮಹಾಸಭೆಯು ನಡೆಯಿತು. ಮಹಾಸಭೆಯ ನಂತರ ಸದಸ್ಯರು ಹಾಗೂ ಅವರ ಕುಟುಂಬ ಸದಸ್ಯರ ಪುನರ್ಮಿಲನ ಸಮಾರಂಭವು ನೆರವೇರಿತು. ಫ್ಲೋರಾ ಕ್ಯಾಸ್ಟೆಲಿನೊ ಸಂಚಾಲನೆಯಲ್ಲಿ ಕೊಂಕಣಿ ಸಂಸ್ಕೃತಿ ಮತ್ತು ಪರಂಪರೆಯ ಅನೇಕ ಕಾರ್ಯಕ್ರಮಗಳು ನೆರವೇರಿದವು. ರೆಮೋನಾ ಇವೆಟ್ ಪಿರೇರಾ ಭರತನಾಟ್ಯವನ್ನು ಪ್ರದರ್ಶಿಸಿದರು. ಇತ್ತೀಚೆಗೆ ನಡೆದ 120 ಗಂಟೆಗಳ ಪ್ರದರ್ಶನ ಮತ್ತು ವಿಶ್ವ ದಾಖಲೆಗಾಗಿ ಅವರನ್ನು ಅಭಿನಂದಿಸಲಾಯಿತು. ಅವರ ಅಸಾಧಾರಣ ಸಾಧನೆಗಾಗಿ ಪ್ರತಿಷ್ಠಿತ ‘ಕಾಸ್ಕ್ ಮೊತಿಯಾಂ’ ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು.ಸಾನ್ಸಿಯಾ ಅವರ ಕೊಂಕಣಿ ಪರಂಪರೆಯ ನುಡಿನಮನ, ಪ್ರಜ್ವಲ್ ಮತ್ತು ಶವಿಲ್ ಅವರ ‘ಗುಮಟ್’ ವಾದನ, ಮೆಲ್ವಿಟಾ ಹಾಗೂ ತಂಡದಿಂದ ದೆಖ್ಣಿ ನಾಚ್, ರೋಮಿತ್ ಹಾಗೂ ತಂಡದಿಂದ ತೊಣಿಯೊ ನಾಚ್ ನಂತಹ ಜಾನಪದ ನೃತ್ಯಗಳು ಪ್ರದರ್ಶಿಸಲ್ಪಟ್ಟವು. ಫ್ರ್ಯಾಂಕ್ಲಿನ್ ಅವರ ‘ ಮಾಂಡೊ’ ಗಾಯನವು ಉತ್ಸವಕ್ಕೆ ಶಾಸ್ತ್ರೀಯ ಗೋವಾ ಸೊಬಗನ್ನು ನೀಡಿತು. ಈ ಸಂದರ್ಭದಲ್ಲಿ ಸಂಸ್ಥೆಯ ಸಿಬ್ಬಂದಿ ಪ್ರತಿಮಾ ಅವರನ್ನು ಗೌರವಿಸಲಾಯಿತು. ಜಾನೆಟ್ ಡಿಸೋಜಾ ನಡೆಸಿ ಕೊಟ್ಟ ಹೌಸಿ…

Read More

ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಬಂಧನದಲ್ಲಿದ್ದ ಯುವಕನೊಬ್ಬ ರಾಸಾಯನಿಕ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಳಕಿಗೆ ಬಂದಿದೆ. ಪೊಲೀಸ್ ಮೂಲಗಳ ಪ್ರಕಾರ, ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಅಪರಾಧ ಕ್ರಮಾಂಕ 43/2025 ಪ್ರಕರಣದಲ್ಲಿ 2ನೇ ಆರೋಪಿ ರಕ್ಷಿತ್ ಶೆಟ್ಟಿ (22) ಅವರನ್ನು ಸೆಪ್ಟೆಂಬರ್ 22ರಂದು ಉಡುಪಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (FTSC-1) ತನಿಖಾ ಉದ್ದೇಶಕ್ಕಾಗಿ ಪೊಲೀಸ್ ಅಭಿರಕ್ಷೆಗೆ ಒಪ್ಪಿಸಿತ್ತು. ಮಂಗಳವಾರ (ಸೆ. 23) ಬೆಳಗ್ಗೆ ಸುಮಾರು 7:30ರ ಹೊತ್ತಿಗೆ, ಆರೋಪಿ ಶೌಚಾಲಯಕ್ಕೆ ಹೋಗಲು ಗಾರ್ಡ್ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಗಳಿಗೆ ತಿಳಿಸಿದ್ದಾನೆ. ಸಿಬ್ಬಂದಿ ಆರೋಪಿ ಜೊತೆ ಶೌಚಾಲಯಕ್ಕೆ ತೆರಳಿದಾಗ, ಅವರ ಕಣ್ಣು ತಪ್ಪಿಸಿ ಬದಿಯಲ್ಲಿ ಶೌಚಾಲಯ ಸ್ವಚ್ಛತೆಗೆ ಇಡಲಾಗಿದ್ದ HARPIC ರಾಸಾಯನಿಕ ದ್ರವವನ್ನು ಸೇವಿಸಿದ್ದಾನೆಂದು ತಿಳಿದುಬಂದಿದೆ. ಘಟನೆಯ ನಂತರ ತಕ್ಷಣವೇ ಪೊಲೀಸರು ಆರೋಪಿ ಮೇಲೆ ಚಿಕಿತ್ಸೆ ನೀಡಿದ್ದು, ಈ ಆತ್ಮಹತ್ಯಾ ಯತ್ನವು ತನಿಖಾ ಪ್ರಕ್ರಿಯೆಗೆ ಅಡ್ಡಿಯಾಗುವ ಉದ್ದೇಶದಿಂದ ನಡೆದಿತ್ತೆಂಬ ಅನುಮಾನ ವ್ಯಕ್ತವಾಗಿದೆ. ಈ ಕುರಿತು ಮಹಿಳಾ ಪೊಲೀಸ್ ಠಾಣೆಯ…

Read More

ಮಂಗಳೂರಿನ ಜೋಕಟ್ಟೆ ಕೆಂಜಾರು ಗ್ರಾಮದ ಕಾಪಿಕಾಡು ಗುಡ್ಡೆ ಮನೆಯ ಯುವತಿಯೊಬ್ಬಳು ನಾಪತ್ತೆಯಾಗಿರುವ ಬಗ್ಗೆ ಬಜಪೆ ಠಾಣೆಗೆ ದೂರು ನೀಡಲಾಗಿದೆ. ಕೆಂಜಾರು ಗ್ರಾಮದ ಕಾಪಿಕಾಡು ಗುಡ್ಡೆ ಮನೆಯ ನಿವಾಸಿ ಟೀನಾ (23) ನಾತ್ತೆಯಾಗಿರುವ ಯುವತಿ. ಈಕೆ ಯಾರೂ ಇಲ್ಲದ ವೇಳೆ ಮನೆಯಿಂದ ಹೊರಟು ಹೋಗಿದ್ದು, ಬಳಿಕ ಮನೆಗೆ ವಾಪಾಸಾಗದೇ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಟೀನಾ ಅವರ ಬಗ್ಗೆ ಯಾವುದೇ ಮಾಹಿತಿ ದೊರೆತರೆ ತಕ್ಷಣ ಬಜಪೆ ಪೊಲೀಸ್ ಠಾಣೆಯನ್ನು ಸಂಪರ್ಕಿಸಲು ಠಾಣಾಧಿಕಾರಿ ತಿಳಿಸಿದ್ದಾರೆ.

Read More

ಮಂಗಳೂರು: ಭ್ರಷ್ಟಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಪುತ್ತೂರು ತಹಶೀಲ್ದಾರ್ ಎಸ್.ಬಿ. ಕೂಡಲಗಿಗೆ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ವಿಶೇಷ) ನ್ಯಾಯಾಲಯ ಜಾಮೀನು ನಿರಾಕರಿಸಿದೆ. ಜಮೀನಿನ ನಿರಾಕ್ಷೇಪಣಾ ಪತ್ರಕ್ಕೆ ಸಂಬಂಧಿಸಿ ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿ ತಹಶೀಲ್ದಾರ್ ಎಸ್.ಬಿ. ಕೂಡಲಗಿ ವಿರುದ್ಧ ಆ.28ರಂದು ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 09/2025ರಡಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಪುತ್ತೂರು ತಾಲೂಕು ಕಚೇರಿಯ ಪ್ರಥಮ ದರ್ಜೆ ಸಹಾಯಕ ಸುನೀಲ್ ಕುಮಾರ್ ಎಸ್.ಎಂ ಹಾಗೂ ತಹಶೀಲ್ದಾರ್ ಎಸ್.ಬಿ. ಕೂಡಲಗಿ ವಿರುದ್ಧ ಭ್ರಷ್ಟಾಚಾರ ನಿರ್ಬಂಧಕ ಕಾಯ್ದೆ, 1988 (ತಿದ್ದುಪಡಿ ಕಾಯ್ದೆ 2018) ಅಡಿಯಲ್ಲಿ ಆರೋಪ ದಾಖಲಿಸಲಾಗಿತ್ತು. ಟ್ರ್ಯಾಪ್ ಕಾರ್ಯಾಚರಣೆಯ ವೇಳೆ ಪ್ರಥಮ ದರ್ಜೆ ಸಹಾಯಕ ಸುನಿಲ್ ಕುಮಾರ್ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಬಳಿಕ ಅವರು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಆದರೆ ತಹಶೀಲ್ದಾರ್ ಕೂಡಲಗಿ ತಲೆಮರೆಸಿಕೊಂಡಿದ್ದರು ಬಳಿಕ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಕೆ ಮಾಡಿದ್ದರು. ಇದೀಗ ನ್ಯಾಯಾಲಯವು ಅವರ ಜಾಮೀನು…

Read More

ಚಿಕ್ಕಮಗಳೂರು ಜಿಲ್ಲೆಯ ಕಳಸ ಪೊಲೀಸ್ ಠಾಣೆಯಲ್ಲಿ ಪಿಎಸ್ಸೈ ಆಗಿ ಕಾರ್ಯ ನಿರ್ವಹಿಸುತ್ತಿದ್ದ ವೇಳೆ ಪತ್ನಿಗೆ ಕಿರುಕುಳ ನೀಡಿದ್ದ ಆರೋಪದಲ್ಲಿ ಕರ್ತವ್ಯದಿಂದ ಅಮಾನತುಗೊಂಡಿದ್ದ ಪಿಎಸ್ಸೈ ಪಿ.ಡಿ.ನಿತ್ಯಾನಂದಗೌಡ ಮೇಲೆ ಮತ್ತೊಂದು ಗಂಭೀರ ಆರೋಪ ಕೇಳಿ ಬಂದಿದೆ.    2005-06ನೇ ಸಾಲಿನಲ್ಲಿ ಪಿಎಸ್ಸೈ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿ ನಿತ್ಯಾನಂದ ಗೌಡ ಅವರು ಪರೀಕ್ಷೆಗೂ ಮುನ್ನ ಪ್ರಶ್ನೆ ಪತ್ರಿಕೆ ಪಡೆದು ಅಕ್ರಮವಾಗಿ ಸರಕಾರಿ ಹುದ್ದೆ ಗಿಟ್ಟಿಸಿಕೊಂಡಿದ್ದಾರೆ. ಈ ಸಂಬ0ಧ ತನಿಖೆ ನಡೆಸಿ ಆರೋಪಿಯನ್ನು ಸೇವೆಯಿಂದ ವಜಾ ಮಾಡುವುದರೊಂದಿಗೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಜಿಪಂ ಕೆಡಿಪಿ ಸದಸ್ಯ, ಕಳಸ ಬ್ಲಾಕ್ ಕಾಂಗ್ರೆಸ್ ಮುಖಂಡ ಮುಹಮ್ಮದ್ ರಫೀಕ್ ಎಂಬವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದ್ದಾರೆ.  ಎಸ್ಪಿಗೆ ಕಚೇರಿಗೆ ಆಗಮಿಸಿ ದೂರು ನೀಡಿರುವ ರಫೀಕ್, ನಿತ್ಯಾನಂದಗೌಡ ಅವರು ಪಿಎಸ್ಸೈ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿ ಪಶ್ನೆ ಪತ್ರಿಕೆ ಪಡೆದು ಪರೀಕ್ಷೆ ಬರೆದು ಸರಕಾರಿ ಹುದ್ದೆ ಗಿಟ್ಟಿಸಿಕೊಂಡಿರುವುದು, ಭ್ರಷ್ಟಾಚಾರ ನಡೆಸಿರುವುದು, ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಅವರ ಪತ್ನಿ ಈ ಹಿಂದೆಯೇ…

Read More

ಮಂಗಳೂರು: ರಸ್ತೆ ಸಂಚಾರಕ್ಕೆ ತಡೆಯೊಡ್ಡಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಆಟೊ ರಿಕ್ಷಾ ಚಾಲಕನಿಗೆ ದಂಡ ವಿಧಿಸಿದ ಘಟನೆ ನಗರದಲ್ಲಿ ಬುಧವಾರ ರಾತ್ರಿ ನಡೆದಿದೆ.ಸೆ.24ರಂದು ರಾತ್ರಿ 9:30ಕ್ಕೆ ಆಟೊ ರಿಕ್ಷಾ ಚಾಲಕ ಶೈಲೇಶ್ (28) ಎಂಬಾತ ಕುದ್ರೋಳಿ ದೇವಸ್ಥಾನದ ಮುಖ್ಯ ದ್ವಾರದ ಸಾರ್ವಜನಿಕ ರಸ್ತೆಯಲ್ಲಿ ರಸ್ತೆ ಸಂಚಾರಕ್ಕೆ ಅಡಚಣೆ ಉಂಟು ಮಾಡಿದ್ದ ಈ ಬಗ್ಗೆ ಪೊಲೀಸ್ ಸಿಬ್ಬಂದಿ ಕಾನೂನು ಉಲ್ಲಂಘನೆ ನೋಟಿಸ್‌ ದಾಖಲು ಮಾಡಿದ್ದರು. ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಶೈಲೇಶ್ ಪೊಲೀಸರೊಂದಿಗೆ ವಾಗ್ವಾದ ನಡೆಸಿದ್ದ. ಬಳಿಕ ಆತ ಕ್ಷಮೆ ಯಾಚಿಸಿದ್ದಾನೆ. ಚಾಲಕನ ವಿರುದ್ದ ಐಎಂವಿ ಪ್ರಕರಣ ದಾಖಲಿಸಿ ದಂಡ ವಿಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Read More

ಬೆಂಗಳೂರು: ಸಿವಿಲ್ ವ್ಯಾಜ್ಯಗಳಲ್ಲಿ ಮೊದಲಿಂದಲೂ ಪೊಲೀಸರು ಸುಖಾ ಸುಮ್ನೆ ತಲೆ ಹಾಕುತ್ತಿದ್ದಾರೆ ಎನ್ನುವ ಆರೋಪ ಇದ್ದೇ, ತಮ್ಮ ವ್ಯಾಪ್ತಿಯನ್ನು ಹಲವು ಸಾರಿ ಪೊಲೀಸರು ಸಿವಿಲ್‌ ವ್ಯಾಜ್ಯಗಳಲ್ಲಿ ತಲೆ ಹಾಕಿರುವ ಉದಾಹರಣೆಗಳು ನಮ್ಮ ಕಣ್ಣ ಮುಂದೆ ಇದೆ. ಇದಲ್ಲದೇ ಸುಪ್ರಿಂಕೋರ್ಟ್ ಮತ್ತು ಹೈಕೋರ್ಟ್‌ಗಳು ಸಿವಿಲ್ ವ್ಯಾಜ್ಯಗಳಲ್ಲಿ ಪೋಲಿಸರ ಕೆಲಸ ಮತ್ತು ಕಾರ್ಯ ವ್ಯಾಪ್ತಿಗಳ ಬಗ್ಗೆ ತಿಳಿಸುತ್ತಲೇ ಬಂದಿದ್ದು, ಯಾವುದೇ ಕಾರಣಕ್ಕೂ ಕೂಡ ಸಿವಿಲ್ ವ್ಯಾಜ್ಯದಲ್ಲಿ ಪೊಲೀಸರು ತಲೆ ಹಾಕುವ ಹಾಗೇ ಇಲ್ಲ ಅಂತ ಖಡಕ್ ಆಗಿ ಹೇಳಿದೆ. ಆದರೆ ಸುಪ್ರಿಂಕೋರ್ಟ್ ಮತ್ತು ಹೈಕೋರ್ಟ್ ಏನು ಹೇಳಿದರು ಕೂಡ ಪೊಲೀಸರು ಸಿವಿಲ್ ವ್ಯಾಜ್ಯಗಳಲ್ಲಿ ತಲೆ ಹಾಕುತ್ತಾರೆ ಎನ್ನಲಾಗುತ್ತಿದೆ. ಇದಲ್ಲದೇ ನ್ಯಾಯಾಲಗಳು ಕೂಡ ಅಂತಹ ಪೊಲೀಸ್ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಂಡಿದೆ. ಕೂಡ ಈಗ ಮತ್ತೆ ಪೊಲೀಸ್ ಮಹಾ ನಿರ್ದೇಶಕ ಸಲೀಂ ಅವರು ತಮ್ಮ ಇಲಾಖೆ ಅಧೀನದ ಪೊಲೀಸರಿಗೆ ತಿಳಿ ಹೇಳುವ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದ್ದು ಅದರ ವಿವರ ಈ ಕೆಳಕಂಡತಿದೆ. CRM-3/105/2018, Dated 14.11.2018.…

Read More