Author: main-admin

ಉಡುಪಿ: ಸೋಶಿಯಲ್ ಮಿಡಿಯಾಗಳಲ್ಲಿ ಮಕ್ಕಳ ಕಳ್ಳರ ಕುರಿತಂತೆ ಸುಳ್ಳು ಸುದ್ದಿಗಳು ಹರಿದಾಡುತ್ತಿದ್ದು, ಈ ರೀತಿಯ ಸುದ್ದಿ ಹಬ್ಬಿಸುವವರ ವಿರುದ್ದ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಉಡುಪಿ ಎಸ್ ಪಿ ಅಕ್ಷಯ್ ಮಚ್ಚಿಂದ್ರ ಎಚ್ಚರಿಕೆ ನೀಡಿದ್ದಾರೆ. ಮಕ್ಕಳ ಕಳ್ಳರು ಇದ್ದಾರೆ ಎಂದು ಬಗ್ಗೆ ಬೇರೆ ದೇಶ, ರಾಜ್ಯಗಳ ವಿಡಿಯೋಗಳನ್ನು ಹರಿಬಿಡಲಾಗುತ್ತಿದ್ದು ಇದರಿಂದ ಆತಂಕಗೊಂಡ ಸಾರ್ವಜನಿಕರು ಅಪರಿಚಿತ ಅಮಾಯಕ ವ್ಯಕ್ತಿಗಳ ಮೇಲೆ ಹಲ್ಲೆ ಮಾಡುತ್ತಿರುವ ಘಟನೆಗಳು ನಡೆಯುತ್ತಿವೆ. ಅನುಮಾನಾಸ್ಪದ ವ್ಯಕ್ತಿಗಳು ಕಂಡುಬಂದರೆ 112 ಸಹಾಯವಾಣಿಗೆ ಕರೆ ಮಾಡಬೇಕು. ಪೊಲೀಸರು ಸ್ಥಳಕ್ಕೆ ಬಂದು ವಿಚಾರಣೆ ನಡೆಸಿ ಸೂಕ್ತ ಕ್ರಮಕೈಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.

Read More

ಯುಎಇಯಿಂದ ಮಂಗಳೂರಿಗೆ ಸರಕು ಸಾಗಿಸುತ್ತಿದ್ದ ಗಬಾನ್‌ ದೇಶದ ಹಡಗು ರತ್ನಗಿರಿ ಕರಾವಳಿಯ ಪಶ್ಚಿಮಕ್ಕೆ ಸುಮಾರು 41 ಮೈಲ್‌ ದೂರದಲ್ಲಿ ಅಪಾಯದಲ್ಲಿ ಸಿಲುಕಿದ್ದು ಅದರಲ್ಲಿದ್ದ 19 ಮಂದಿಯನ್ನು ಭಾರತೀಯ ಕೋಸ್ಟ್‌ ಗಾರ್ಡ್‌ ರಕ್ಷಿಸಿದೆ. ರಕ್ಷಿಸಲ್ಪಟ್ಟವರಲ್ಲಿ 18 ಮಂದಿ ಭಾರತೀಯರು ಮತ್ತು ಓರ್ವ ಇಥಿಯೋಪಿಯನ್‌ ಪ್ರಜೆ ಸೇರಿದ್ದಾನೆ. ಯುಎಇಯ ಖೋರ್‌ ಫಕನ್‌ನಿಂದ 3,911 ಮೆಟ್ರಿಕ್‌ ಟನ್‌ ಅಸಾಲ್ಟ್‌ ಬಿಟುಮಿನ್‌ ಹೊತ್ತು ಮಂಗಳೂರು ಕಡೆಗೆ ಬರುತ್ತಿದ್ದ ಹಡಗು ಬೆಳಗ್ಗೆ 9.23ರ ವೇಳೆಗೆ ಅಪಾಯಕ್ಕೆ ಸಿಲುಕಿತ್ತು. ಈ ಬಗ್ಗೆ ಕರೆ ಸ್ವೀಕರಿಸಿದ ಮುಂಬೈ ಕೋಸ್ಟ್‌ ಗಾರ್ಡ್‌ ಕೂಡಲೇ ಸುಜೀತ್‌ ಮತ್ತು ಅಪೂರ್ವ ಎಂಬ ಎರಡು ಹಡಗುಗಳು ಹಾಗೂ ಹೆಲಿಕಾಪ್ಟರ್‌ ಮೂಲಕ ಕಾರ್ಯಾಚರಣೆ ನಡೆಸಿದೆ. ಹಡಗು ಮುಳುಗುವ ಹಂತದಲ್ಲಿದೆ ಎಂದು ಕೋಸ್ಟ್‌ ಗ್ಗಾರ್ಡ್‌ ಮೂಲಗಳು ತಿಳಿಸಿವೆ.

Read More

ನವದೆಹಲಿ: ವಿಶೇಷ ಸರಕು ಸಾಗಣೆ ವಿಮಾನದಲ್ಲಿ ನಮೀಬಿಯಾದಿಂದ ಎಂಟು ಚಿರತೆಗಳು ಇಂದು ಬೆಳಗ್ಗೆ ಮಧ್ಯಪ್ರದೇಶದ ಗ್ವಾಲಿಯರ್ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿವೆ. ಈ ಚಿರತೆಗಳನ್ನು ಕುನೊ ರಾಷ್ಟ್ರೀಯ ಉದ್ಯಾನವನಕ್ಕೆ ಹೆಲಿಕಾಪ್ಟರ್‌ ಮೂಲಕ ಸಾಗಿಸಲಾಗುತ್ತಿದೆ. ಚಿರತೆಗಳೊಂದಿಗೆ ವಿಮಾನವು ಇಂದು ಮುಂಜಾನೆ ಭಾರತೀಯ ವಾಯುಪಡೆ (ಐಎಎಫ್) ನಿರ್ವಹಿಸುವ ಗ್ವಾಲಿಯರ್‌ನ ಮಹಾರಾಜಪುರ ವಾಯುನೆಲೆಗೆ ಆಗಮಿಸಲಿದೆ. ಒಂದು ಗಂಟೆಯ ನಂತರ, ಅವುಗಳನ್ನು IAF ಚಿನೂಕ್ ಹೆವಿ-ಲಿಫ್ಟ್ ಹೆಲಿಕಾಪ್ಟರ್‌ನಲ್ಲಿ ಕುನೋ ರಾಷ್ಟ್ರೀಯ ಉದ್ಯಾನವನಕ್ಕೆ ಸಾಗಿಸಲಾಗುತ್ತದೆ. ಚೀತಾ ಸಂರಕ್ಷಣಾ ನಿಧಿಯ (CCF) ಪ್ರಕಾರ, ನಮೀಬಿಯಾದಲ್ಲಿ ಪ್ರಧಾನ ಕಛೇರಿಯನ್ನು ಹೊಂದಿರುವ ಅಂತರರಾಷ್ಟ್ರೀಯ ಲಾಭರಹಿತ ಸಂಸ್ಥೆ ಅತ್ಯಂತ ವೇಗದ ಭೂ ಪ್ರಾಣಿಯನ್ನು ಸಂರಕ್ಷಿಸುವ ಗುರಿಯನ್ನು ಹೊಂದಿದೆ. ಭಾರತಕ್ಕೆ ಬಂದಿರುವ ಐದು ಹೆಣ್ಣು ಚಿರತೆಗಳು ಎರಡರಿಂದ ಐದು ವರ್ಷ ವಯಸ್ಸಿನವರಾಗಿದ್ದಾರೆ. ಗಂಡು ಚಿರತೆಗಳು 4.5 ವರ್ಷ ಮತ್ತು 5.5 ವರ್ಷಗಳ ನಡುವೆಯದ್ದಾಗಿದೆ ಎಂದು ತಿಳಿದುಬಂದಿದೆ. ಭಾರತವು ಹಿಂದೆ ಏಷ್ಯಾಟಿಕ್ ಚಿರತೆಗಳಿಗೆ ನೆಲೆಯಾಗಿತ್ತು. ಆದರೆ 1952 ರ ವೇಳೆಗೆ ಈ ಪ್ರಭೇದವು ದೇಶೀಯವಾಗಿ ಅಳಿವಿನಂಚಿನಲ್ಲಿದೆ ಎಂದು ಘೋಷಿಸಲಾಯಿತು.…

Read More

ಬೆಂಗಳೂರು : ಎಲ್ ಇಡಿ (LED) ಬಳಸುವ ವಾಹನ ಸವಾರರಿಗೆ ಸಾರಿಗೆ ಸಚಿವ ಶ್ರೀರಾಮುಲು ಬಿಗ್ ಶಾಕ್ ನೀಡಿದ್ದು, ವಾಹನಗಳಲ್ಲಿ ಎಲ್ ಇಡಿ ದೀಪ ಬಳಸುತ್ತಿರುವ ಸವಾರರ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ತಿಳಿಸಿದ್ದಾರೆ. ವಿಧಾನ ಪರಿಷತ್ ನಲ್ಲಿ ಬಿಜೆಪಿಯ ವೈ.ಎಂ. ಸತೀಶ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ವಾಹನಗಳಲ್ಲಿ ಎಲ್ ಇಡಿ ದೀಪ ಬಳಸುತ್ತಿರುವ ಸವಾರರ ವಿರುದ್ಧ ಮೋಟಾರು ವಾಹನ ಕಾಯ್ದೆಯ ಕಲಂ 177ರಡಿ ಪ್ರಕರಣ ದಾಖಲಿಸಿ 500 ರೂ. ದಂಡ ವಿಧಿಸಲಾಗುವುದು ಎಂದು ತಿಳಿಸಿದ್ದಾರೆ. 2019 ರಲ್ಲಿ 7,414, 2020 ರಲ್ಲಿ 2,312, 2021 ರಲ್ಲಿ 1,492 ಹಾಗೂ 2022 ರಲ್ಲಿ ಆಗಸ್ಟ್ ವರೆಗೆ 703 ಪ್ರಕರಣಗಳು ದಾಖಲಾಗಿವೆ. ರಸ್ತೆ ಸುರಕ್ಷತೆಗಾಗಿ 295 ಕೋಟಿ ರೂ. ಮೀಸಲಿಡಲಾಗಿದೆ ಎಂದು ಹೇಳಿದ್ದಾರೆ. ಇನ್ನು ಐಷಾರಾಮಿ ವಾಹನಗಳ ನೋಂದಣಿಯಲ್ಲಿನ ಅಕ್ರಮಗಳು ಮತ್ತು ರಾಜ್ಯದ ಬೊಕ್ಕಸಕ್ಕೆ ಕೋಟಿಗಟ್ಟಲೆ ನಷ್ಟವನ್ನುಂಟುಮಾಡುವ ತೆರಿಗೆ ವಂಚನೆಯ ಬಗ್ಗೆ ಸಿಐಡಿ ತನಿಖೆಗೆ ಆದೇಶಿಸಲಾಗುವುದು ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಹೇಳಿದರು.

Read More

ಉಡುಪಿ: ಶಾಲೆ ಬಿಟ್ಟು ಸೈಕಲ್‌ನಲ್ಲಿ ಮನೆಗೆ ತೆರಳುತ್ತಿದ್ದಾಗ ಬಸ್ ಢಿಕ್ಕಿಯಾಗಿ ಬಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಉಡುಪಿಯ ಕಾಪು ಠಾಣಾ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಕಟಪಾಡಿ ಪೋಸಾರು ಜಂಕ್ಷನ್‌ನಲ್ಲಿ ಅಜಾಗ್ರತೆಯಿಂದ ಬಸ್ಸು ಚಲಾಯಿಸಿ ಬಂದು ವಿದ್ಯಾರ್ಥಿಗೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಗೆ ಗಂಭೀರ ಗಾಯಗಳಾಗಿದೆ. ಆತನನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

Read More

ಬೈಂದೂರು: ಇಲ್ಲಿಗೆ ಸಮೀಪದ ಶಿರೂರು ಟೋಲ್ ಗೇಟ್ ಸಮೀಪ ನಿಲ್ಲಿಸಿದ್ದ ಲಾರಿಯ ಚಕ್ರಗಳನ್ನು ಕಳವು ಮಾಡಿರುವ ಬಗ್ಗೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲದ ಲಾರಿ ಚಾಲಕ ಪುರುಷೋತ್ತಮ ತಾಂಡೇಲ್ ಎಂಬವರು ಪೊಲೀಸರಿಗೆ ದೂರು ನೀಡಿದ್ದಾರೆ. ಅವರು ಸೆ.14 ರಂದು ತಮ್ಮ ಮನೆಯಿಂದ ಲಾರಿಯಲ್ಲಿ ಮಗ ಸಾಹಿಲ್ ನ ಜೊತೆಯಲ್ಲಿ ಹೊರಟಿದ್ದರು. ರಾತ್ರಿ 9 ಗಂಟೆ ವೇಳೆ ಬೈಂದೂರು ತಾಲೂಕಿನ ಶಿರೂರು ಗ್ರಾಮದ ಶಿರೂರು ಟೋಲ್ ಗೇಟ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿಯನ್ನು ನಿಲ್ಲಿಸಿ ಮಗನೊಂದಿಗೆ ಲಾರಿಯಲ್ಲಿ ಮಲಗಿದ್ದರು. ಮರುದಿನ ಸೆ.15 ರಂದು ಬೆಳಿಗ್ಗೆ 4 ಗಂಟೆ ವೇಳೆ, ಎದ್ದು ಹೊರಡಲು ಲಾರಿಯನ್ನು ಸ್ಟಾರ್ಟ್ ಮಾಡಲು ಮುಂದಾದಾಗ ಲಾರಿಯು ಒಂದು ಭಾಗಕ್ಕೆ ವಾಲಿಕೊಂಡಿದ್ದು ಗಮನಕ್ಕೆ ಬಂದಿದೆ. ಕೂಡಲೇ ಲಾರಿಯನ್ನು ಪರಿಶೀಲಿಸಿದಾಗ ಲಾರಿಯ ಹಿಂದಿನ 4 ಚಕ್ರಗಳು ಹಾಗೂ ಹೆಚ್ಚುವರಿಯಾಗಿ ಇಟ್ಟಿದ್ದ ಚಕ್ರವೂ ಕಳವಾಗಿರುವುದು ಕಂಡು ಬಂದಿದೆ. ಕಳವಾದ 5 ಚಕ್ರಗಳ ಮೌಲ್ಯ 1,85,000 ಆಗಿರುತ್ತದೆ ಎಂಬುದಾಗಿ ನೀಡಿದ ದೂರಿನಂತೆ ಬೈಂದೂರು ಪೊಲೀಸ್ ಠಾಣೆಯಲ್ಲಿ…

Read More

ಮುಲ್ಕಿ: ಅನ್ಯ ಕೋಮಿನ ಯುವಕನ ಜೊತೆ ಯುವತಿ ಪತ್ತೆಯಾಗಿದ್ದು, ಸ್ಥಳೀಯ ಯುವಕರು ಕಾರ್ಯಾಚರಣೆ ನಡೆಸಿ ಯುವಕನನ್ನು ಪೊಲೀಸರಿಗೆ ಒಪ್ಪಿಸಿದ ಘಟನೆ ಮಂಗಳೂರು ಹೊರವಲಯದ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕೆಎಸ್ ರಾವ್ ನಗರ ಪೊಲೀಸ್ ಕ್ವಾರ್ಟರ್ಸ್ ಬಳಿ ನಡೆದಿದೆ. ಉಡುಪಿಯ ಕಟಪಾಡಿಯಲ್ಲಿ ವಾಸ್ತವ್ಯವಿರುವ ಉತ್ತರ ಪ್ರದೇಶ ಮೂಲದ ಯುವಕ ಫಯಿಮ್ ಎಂಬಾತ ಕಟಪಾಡಿಯಲ್ಲಿ ಸೆಲೂನ್ ಅಂಗಡಿಯಲ್ಲಿ ಕೆಲಸಕ್ಕಿದ್ದು ತನ್ನ ಮಿತ್ರ ಗುಲ್ಫಾಮ್ ಎಂಬವರ ರೂಮ್‌ಗೆ ಬಂದಿದ್ದ. ಆ ಸಂದರ್ಭ ಕೊಲಕಾಡಿ ಮೂಲದ ಯುವತಿ ಜೊತೆ ಮಾತನಾಡುತ್ತಾ ರಸ್ತೆಯಲ್ಲಿ ನಡೆದುಕೊಂಡು ಬರುತ್ತಿರುವಾಗ ಸ್ಥಳೀಯರಿಗೆ ಸಂಶಯ ಬಂದು ವಿಚಾರಿಸಿದ್ದು, ಕೂಡಲೇ ಯುವತಿ ಸ್ಥಳದಿಂದ ಪರಾರಿಯಾಗಿದ್ದಾಳೆ. ಈ ಸಂದರ್ಭ ಸ್ಥಳದಲ್ಲಿ ಮಾತಿನ ಚಕಮಕಿ ನಡೆದಿದ್ದು ಸ್ಥಳೀಯರು ಆರೋಪಿಗಳಿಗೆ ಗೂಸಾ ಇಕ್ಕಿದ್ದಾರೆ. ಮಾಹಿತಿ ತಿಳಿದು ಕೂಡಲೇ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಸ್ಥಿತಿ ತಿಳಿಗೊಳಿಸಿ ಇಬ್ಬರನ್ನು ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ. ಇನ್ನು ಆರೋಪಿ ಫಯೀಮ್ ಕಡಪಾಡಿಯಲ್ಲಿ ನೆಲೆಸಿದ್ದು ಇಬ್ಬರು ಮಕ್ಕಳ ತಂದೆಯಾಗಿದ್ದಾರೆ. ಕಳೆದ ಕೆಲ ತಿಂಗಳ ಹಿಂದೆ…

Read More

ಮೂಡುಬಿದಿರೆ: ತಾಲೂಕಿನ ಅಶ್ವಥಪುರದ ಬೇರಿಂಜೆ ಗುಡ್ಡ ಎಂಬಲ್ಲಿ ಒಂಟಿ ಮಹಿಳೆ ಕಮಲ ಅವರ ಮನೆಗೆ ಕಳೆದ 15 ದಿನಗಳ ಹಿಂದೆ ನುಗ್ಗಿ ಕುತ್ತಿಗೆ ಹಿಡಿದು ಚಿನ್ನಾಭರಣ ಕಳವು ಮಾಡಿದ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಅಶ್ವತ್ಥಪುರದ ನಿವಾಸಿಗಳಾದ ದಿನೇಶ್‌ ಪೂಜಾರಿ, ಸುಕೇಶ್‌ ಪೂಜಾರಿ ಹಾಗೂ ಹರೀಶ್ ಪೂಜಾರಿ ಬಂಧಿತ ಆರೋಪಿಗಳು. ಅಂಗನವಾಡಿ ಸಹಾಯಕಿಯಾಗಿ ದುಡಿಯುತ್ತಿದ್ದ ಕಮಲ ಒಂಟಿಯಾಗಿ ವಾಸವಿದ್ದು. ಇದರ ಮಾಹಿತಿ ಇದ್ದ ಆರೋಪಿಗಳು ಕಳೆದ ತಿಂಗಳು 2 ಜನ ಮಂಕಿಕ್ಯಾಪ್ ಹಾಕಿ ಕೈಗೆ ಹ್ಯಾಂಡ್ ಗೌಸ್ ಹಾಕಿ ಕೈಯಲ್ಲಿ ತಲವಾರು ಹಿಡಿದು ಕೊಂಡು ಬಂದು ಕಮಲರವರ ಕುತ್ತಿಗೆ ಅದುಮಿ ಹಿಡಿದು ಹಲ್ಲೆ ನಡೆಸಿ ಕುತ್ತಿಗೆಯಲ್ಲಿದ್ದ ಚಿನ್ನದ ಕರಿಮಣಿ ಸರ ಮತ್ತು ಚಿನ್ನದ 2 ಬಳೆಗಳನ್ನು ಬಲವಂತದಿಂದ ತೆಗೆದು ಸುಲಿಗೆ ಮಾಡಿದ್ದು, ಈ ಬಗ್ಗೆ ಮೂಡಬಿದ್ರೆ ಠಾಣೆಯಲ್ಲಿ ಪ್ರಕಣ ದಾಖಲಾಗಿತ್ತು. ಈ ಪ್ರಕರಣವು ಗಂಭೀರ ಪ್ರಕರಣವಾದ್ದರಿಂದ ಈ ಪ್ರಕರಣದ ಪತ್ತೆಗೆ ಬಗ್ಗೆ ಸಿಸಿಬಿ ಘಟಕದ ವಿಶೇಷ ತಂಡ ರಚನೆ ಮಾಡಿದ್ದು,…

Read More

ಬೆಳ್ತಂಗಡಿ:ಬೈಕ್‌ಗೆ ಲಾರಿ ಢಿಕ್ಕಿ ಹೊಡೆದ ಪರಿಣಾಮ‌ ಯುವಕನೋರ್ವ ಸ್ಥಳದಲ್ಲೇ‌ ಮೃತಪಟ್ಟ ಘಟನೆ ಬೆಳ್ತಂಗಡಿ ಅಳದಂಗಡಿ ಬಳಿ ನಡೆದಿದೆ. ಪ್ರವೀಣ್ ಮೃತ ಯುವಕ. ಅಪಘಾತದ ಬಳಿಕ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಲು ಯತ್ನಿಸಿದ್ದು, ಈ ವೇಳೆ ಸ್ಥಳೀಯರು ತಡೆದಿದ್ದಾರೆ. ಅಪಘಾತದ ಹಿನ್ನೆಲೆ ಕೆಲಕಾಲ ಸಂಚಾರ ಸಮಸ್ಯೆ ಉಂಟಾಗಿದ್ದು,ಈ ಕುರಿತು ವೇಣೂರು ಠಾಣೆಯಲ್ಲಿ ಕೇಸ್ ದಾಖಲಾಗಿದೆ.

Read More

ಉಡುಪಿ : ನಿನ್ನೆ ಉಚ್ಚಿಲ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬಾಲಕ ಸಮರ್ಥ್ ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾನೆ. ಕಾಪು ಸಮೀಪದ ಆನೆಗುಂದಿ ಸರಸ್ವತಿ ಪೀಠದಲ್ಲಿ ಸಮರ್ಥ ಏಳನೇ ತರಗತಿ ಓದುತ್ತಿದ್ದು, ಇತ್ತೀಚೆಗೆ ಗಣೇಶ ಹಬ್ಬಕ್ಕೆಂದು ಊರಿಗೆ ತೆರಳಿದ್ದಾನೆ. ಮಂಗಳವಾರು ಬೆಳಗಾವಿಯಿಂದ ತಂದೆ ಜೊತೆ ಉಚ್ಚಿಲಕ್ಕೆ ಆಗಮಿಸಿದ ಸಮರ್ಥ, ಸರಕಾರಿ ಬಸ್ ನಿಂದ ಇಳಿದು ರಸ್ತೆ ಬದಿಯಲ್ಲಿ ನಿಂತಿದ್ದ, ಈ ಸಂದರ್ಭ ಅಪರಿಚಿತ ವಾಹನವೊಂದು ತಂದೆ ಮಗನಿಗೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಸಮರ್ಥ ತಂದೆ ಪ್ರಭಾಕರ್ ಶಂಕರ್ ಸ್ಥಳದಲ್ಲಿಯೇ ಮೃತಪಟ್ಟಿದ್ದರೆ, ಅವರ ಮಗ ಸಮರ್ಥ್ ಇಂದು ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಅಸು ನೀಗಿದ್ದಾರೆ. ಈ ಘಟನೆಯಿಂದಾಗಿ ಬೆಳಗಾವಿಯ ಕುಟುಂಬಕ್ಕೆ ಬರಸಿಡಿಲು ಎರಗಿದಂತಾಗಿದೆ.

Read More