Author: main-admin

ಮಂಗಳೂರು: ಕಾಂಗ್ರೆಸ್‌ ಮಾಜಿ ಕಾರ್ಪೋರೇಟರ್‌ ಪ್ರತಿಭಾ ಕುಳಾಯಿ ಅವರ ವಿರುದ್ದ ಸಾಮಾಜಿಕ ಜಾಲತಾಣಗಳಲ್ಲಿ ಮಾನಹಾನಿಕಾರಕ ಪೋಸ್ಟ್ ಹಾಕಿದ್ದ ಪ್ರಕರಣದ ಆರೋಪಿಗಳಲ್ಲಿ ಓರ್ವನಾಗಿರುವ ಕೆ. ಆರ್. ಶೆಟ್ಟಿ ಅಡ್ಯಾರ್ ಪದವು ಗುರುವಾರ ನ್ಯಾಯಾಲಯಕ್ಕೆ ಹಾಜರಾಗಿದ್ದಾನೆ. ಸುರತ್ಕಲ್‌ನಲ್ಲಿರುವ ಟೋಲ್‌ಗೇಟ್‌ನಲ್ಲಿ ಅಕ್ರಮವಾಗಿ ಟೋಲ್‌ ವಸೂಲಿ ಮಾಡಲಾಗುತ್ತಿದೆ. ಟೋಲ್‌ಗೇಟ್‌ ಅನ್ನು ತೆರವುಗೊಳಿಸಬೇಕೆಂದು ಅಕ್ಟೋಬರ್ 18ರಂದು ಬೃಹತ್ ಹೋರಾಟ ನಡೆದಿತ್ತು. ಈ ವೇಳೆ, ಸುರತ್ಕಲ್ ಟೋಲ್‌ಗೇಟ್‌ ವಿರೋಧಿ ಹೋರಾಟ ಸಮಿತಿ ಸದಸ್ಯರೂ ಆದ ಪ್ರತಿಭಾ ಕುಳಾಯಿ ವಿರುದ್ಧ ಹೋರಾಟದ ದೃಶ್ಯಾವಳಿ ಬಳಸಿ ಸಾಮಾಜಿಕ ಜಾಲತಾಣದಲ್ಲಿ ಮಾನಹಾನಿಕಾರಕ ಪೋಸ್ಟ್ ಮಾಡಿರುವ ಆರೋಪ ಇವರ ಮೇಲಿದೆ.ವಕೀಲರ ಮೂಲಕ ಕೋರ್ಟ್ ಗೆ ಹಾಜರಾಗಿದ್ದ ಆತನನ್ನು ನ್ಯಾಯಾಲಯ ಒಂದು ದಿನದ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ಕೆ. ಆರ್. ಶೆಟ್ಟಿ ಸಾಮಾಜಿಕ ಜಾಲತಾಣದಲ್ಲಿ ಹಾಕಿದ ಪೋಸ್ಟ್ ಗೆ ಮತ್ತೋರ್ವ ಆರೋಪಿ ಶ್ಯಾಮ ಸುದರ್ಶನ ಭಟ್ ಹೊಸಮೂಲೆ ಅಶ್ಲೀಲ ಕಮೆಂಟ್ ಹಾಕಿದ್ದು, ಸದ್ಯ ತಲೆಮರೆಸಿಕೊಂಡಿದ್ದಾನೆ.ಮಾನಹಾನಿಕಾರಕ ಪೋಸ್ಟ್ ವಿರುದ್ದ ಪ್ರತಿಭಾ ಕುಳಾಯಿ ಅವರು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌…

Read More

ಮಂಗಳೂರು: ಇಂದಿನಿಂದ (ಅಕ್ಟೋಬರ್ 28) ಸುರತ್ಕಲ್ ಟೋಲ್ ಗೇಟ್ ತೆರವಿಗಾಗಿ ಅನಿರ್ಧಿಷ್ಟಾವಧಿ ಹಗಲು ರಾತ್ರಿ ಮುಷ್ಕರವನ್ನು ನಡೆಸುವುದಾಗಿ ಸುರತ್ಕಲ್ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯು ಈ ಹಿಂದೆ ಕರೆನೀಡಿದ್ದು, ಆದರೆ ಮಂಗಳೂರು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್, ಸುರತ್ಕಲ್ ಠಾಣಾ ವ್ಯಾಪ್ತಿಯ ಟೋಲ್ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಸೆಕ್ಷನ್ 144 ಪ್ರಕಾರ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ. ಇಂದು ಬೆಳಿಗ್ಗೆ 6ರಿಂದ ನವಂಬರ್ 3ರ ಸಂಜೆ 6 ಗಂಟೆಯ ತನಕ ಸುರತ್ಕಲ್ ಪೊಲೀಸ್ ಠಾಣೆಯ ಟೋಲ್ ಗೇಟ್ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಸುರಕ್ಷತೆಯ ದೃಷ್ಠಿಯಿಂದ ಹಾಗೂ ಟೋಲ್ ಗೇಟ್ ಗೆ ರಕ್ಷಣೆ ನೀಡುವ ದೃಷ್ಟಿಯಿಂದ ಈ ಸೆಕ್ಷನ್ ಜಾರಿಗೊಳಿಸಲಾಗಿದೆ ಎಂದು ಕಮಿಷನರ್ ತಿಳಿಸಿದ್ದಾರೆ.ಅ.25 ರಂದು ಸುರತ್ಕಲ್ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯ ಪತ್ರಿಕಾಗೋಷ್ಠಿಯಲ್ಲಿ ಕರೆದು, ಟೋಲ್ ಗೇಟ್ ತೆರವಿಗೆ ಅಕ್ಟೋಬರ್ 18 ರಂದು ನಡೆದ ಹೋರಾಟಕ್ಕೆ ಜನರು ಬೆಂಬಲಿಸಿದ್ದಾರೆ.. ಅಂದು ನಾವು ಟೋಲ್…

Read More

ಬೆಳ್ತಂಗಡಿ: ಗುಂಡಿ ಬಿದ್ದ ರಸ್ತೆಗಳನ್ನು ದುರಸ್ತಿ ಮಾಡದ ಸರ್ಕಾರ, ಜನಪ್ರತಿನಿಧಿಗಳ ಕಾರ್ಯವನ್ನು ಖಂಡಿಸಿ ಸಮಾನ ಮನಸ್ಕ ಯುವಕರ ತಂಡ ರಸ್ತೆ ಗುಂಡಿಗಳಲ್ಲಿ ದೀಪ ಹಚ್ಚಿ ದೀಪಾವಳಿ ಆಚರಣೆ ಮಾಡಿ ವಿನೂತನ ಪ್ರತಿಭಟನೆ ಮಾಡಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಬುಧವಾರ ಸಂಜೆ ಬೆಳ್ತಂಗಡಿ ಸಮೀಪದ ಲಾಯಿಲ ಗ್ರಾಮದ ರಾಘವೇಂದ್ರ ಮಠದ ಹತ್ತಿರ ರಾಷ್ಟ್ರೀಯ ಹೆದ್ದಾರಿಯ ರಸ್ತೆ ಗುಂಡಿಗಳಲ್ಲಿ ದೀಪ ಹಚ್ಚಿ ದೀಪಾವಳಿ ಆಚರಣೆ ಮಾಡಲಾಯಿತು. ಈ ಸಂದರ್ಭ ಸಾಮಾಜಿಕ ಕಾರ್ಯಕರ್ತ, ಸಿಪಿಐ(ಎಂ) ನಾಯಕ ಶೇಖರ್ ಲಾಯಿಲ ಮಾತನಾಡಿ, ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಗುಂಡಿಗಳಲ್ಲಿ ದಿನನಿತ್ಯ ಪ್ರಯಾಣಿಸುವ ಜನಪ್ರತಿನಿಧಿಗಳು, ಅಧಿಕಾರಿಗಳಿಗೆ ಕಣ್ಣು ಕಾಣದಿದ್ದು ದೀಪ ಹಚ್ಚಿ ಗುಂಡಿ ಕಾಣುವಂತೆ ಮಾಡುವ ಉದ್ದೇಶದಿಂದ ಈ ರೀತಿ ಮಾಡಲಾಗಿದೆ ಎಂದರು. ಕಾಂಗ್ರೆಸ್ ಸಾಮಾಜಿಕ ಜಾಲತಾಣ ವಿಭಾಗದ ಜಿಲ್ಲಾ ನಾಯಕ ಸಂದೀಪ್ ಎಸ್ ಅಳದಂಗಡಿ ಮಾತನಾಡಿ ನಮ್ಮ ತಾಲೂಕಿನ ಅವ್ಯವಸ್ಥೆ ಇಡೀ ರಾಜ್ಯದಲ್ಲಿಯೇ ಕುಖ್ಯಾತಿ ಪಡೆದಿದೆ. ರಾಜ್ಯ ಸಂಪುಟ ಸಚಿವ ಸುನೀಲ್ ಕುಮಾರ್ ಇತ್ತೀಚಿಗೆ ರಸ್ತೆ ಬದಲಿಸಿ ಪ್ರಯಾಣಿಸಿರುವುದು ಶಾಸಕ,…

Read More

ಮಂಗಳೂರು: ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ‘ಕಾಂತಾರ’ ಸದ್ಯ  ಸಿನಿ ಜಗತ್ತಿನಲ್ಲಿ ಹವಾ ಸೃಷ್ಟಿಸಿದ್ದು ಹೌಸ್‌ಫುಲ್‌ ಪ್ರದರ್ಶನ ಕಾಣುತ್ತಿದೆ. ಈ ನಡುವೆ ಸೋಷಿಯಲ್‌ ಮೀಡಿಯಾಗಳಲ್ಲಿ ಕಾಂತಾರ ಕುರಿತ ಪೋಸ್ಟ್‌, ರೀಲ್ಸ್‌ ಹಾಗೂ ವಿಡಿಯೋಗಳು ಸಾಕಷ್ಟು ಸದ್ದು ಮಾಡುತ್ತಿವೆ. ಆದರೆ ಯುವತಿಯೋರ್ವಳು ಇನ್ಸ್ಟಾಗ್ರಾಮ್‌ನಲ್ಲಿ ಮಾಡಿರುವ ರೀಲ್ಸ್‌ ಈಗ ವಿವಾದಕ್ಕೆ ಕಾರಣವಾಗಿದೆ. ಕಾಂತಾರ ಸಿನಿಮಾದ ಪಂಜುರ್ಲಿ ದೈವದ ದೃಶ್ಯ ರೀಲ್ಸ್ ಮಾಡಿ ಯುವತಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾಳೆ. ಪಂಜುರ್ಲಿ ದೈವದಂತೆ ಬಣ್ಣ ಹಚ್ಚಿ, ವೇಷ ಧರಿಸಿ ಯುವತಿ ರೀಲ್ಸ್ ಮಾಡಿದ್ದು, ಸಾಮಾಜಿಕ ತಾಣಗಳಲ್ಲಿ ಯುವತಿ ವಿರುದ್ದ ಆಕ್ರೋಶ ಕೇಳಿಬಂದಿದೆ. ಮೇಕಪ್ ಅರ್ಟಿಸ್ಟ್ ಆಗಿರೋ ಶ್ವೇತಾ ರೆಡ್ಡಿಇನ್ಸ್ಟಾಗ್ರಾಮ್ ಖಾತೆಯಲ್ಲಿ ರೀಲ್ಸ್ ಮಾಡಿ ಅಪ್‌ಲೋಡ್‌ ಮಾಡಿದ್ದಾರೆ. ಸಿನಿಮಾದ ವರಹಾ ರೂಪಂ ಹಾಡಿಗೆ ರೀಲ್ಸ್ ಮಾಡಲು ದೈವಾರಾಧನೆ ಅಣಕ ಮಾಡಿರುವ ಯುವತಿ ವಿರುದ್ಧ ನೆಟ್ಟಿಗರು ಕಿಡಿಕಾರಿದ್ದಾರೆ. ದೈವಾರಾಧನೆಯು ತುಳುನಾಡಿನ ಧಾರ್ಮಿಕ ನಂಬಿಕೆಯ ಭಾಗವಗಿದೆ. ಹೀಗಾಗಿ ತುಳುನಾಡಿನ ನಂಬಿಕೆಗೆ ಇದರಿಂದ ಧಕ್ಕೆಯಾಗಿದೆ, ರೀಲ್ಸ್‌ನ್ನು ತಕ್ಷಣ ಡಿಲೀಟ್‌ ಮಾಡಿ ಕ್ಷಮೆ ಕೇಳುವಂತೆ…

Read More

ಬಾರ್ಕೂರು: ಒಂಬತ್ತು ದಿನಗಳ ಹಿಂದೆ ನಾಪತ್ತೆಯಾಗಿದ್ದ 44 ವರ್ಷದ ಮೃತದೇಹ ಗುರುವಾರ ಅಕ್ಟೋಬರ್ 27 ರಂದು ಬಾರ್ಕೂರಿನ ಕಂಬಳ ಗದ್ದೆಯಲ್ಲಿ ಪತ್ತೆಯಾಗಿದೆ. ಮೃತರನ್ನು ಪ್ರವೀಣ್ ಬೆಳ್ಚಡ ಎಂದು ಗುರುತಿಸಲಾಗಿದೆ. ಅವರು ಅಕ್ಟೋಬರ್ 18 ರಂದು ನೇಜಾರ್‌ನಲ್ಲಿರುವ ತಮ್ಮ ಮನೆಯಿಂದ ನಾಪತ್ತೆಯಾಗಿದ್ದರು.ಈ ಕುರಿತು ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ನಾಪತ್ತೆಯಾದ ಎರಡು ದಿನಗಳ ನಂತರ ಅವರ ವಾಹನ ಬಾರ್ಕೂರು ಸೇತುವೆ ಬಳಿ ಪತ್ತೆಯಾಗಿತ್ತು.

Read More

ಬೆಂಗಳೂರು:ನವೆಂಬರ್ 1 ಕನ್ನಡ ರಾಜ್ಯೋತ್ಸವ ನಿಮಿತ್ತ, ಅಕ್ಟೋಬರ್ 28ರಂದು ಕೋಟಿ ಕಂಠ ಗಾಯನ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ತಿಳಿಸಿದ್ದಾರೆ. ಕ್ಯೂಆರ್ ಕೋಡ್ ಮೂಲಕ 1.10 ಕೋಟಿ ಜನ ನೋಂದಣಿ ಮಾಡಿಕೊಂಡಿದ್ದು, ನನ್ನ ನಾಡು ನನ್ನ ಹಾಡು ಘೋಷಣೆಯೊಂದಿಗೆ ಗಾಯನ ನಡೆಯಲಿದೆ ಎಂದರು. ರಾಜ್ಯ ಸರ್ಕಾರದಿಂದ ಅಕ್ಟೋಬರ್ 28, 2022ರಂದು ನನ್ನ ನಾಡು, ನನ್ನ ಹಾಡು ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಸಾರ್ವಜನಿಕರಾಧಿಯಾಗಿ ಎಲ್ಲಿರಿಗೂ ಭಾಗವಹಿಸೋದಕ್ಕೆ ಅವಕಾಶ ನೀಡಲಾಗಿತ್ತು. ಇದಕ್ಕೆ ಭರ್ಜರಿ ರೆಸ್ಪಾನ್ಸ್ ದೊರೆತಿದೆ. 46 ದೇಶ, 26 ರಾಜ್ಯಗಳಿಂದ 1.10 ಕೋಟಿ ಜನರು ಕಾರ್ಯಕ್ರಮದಲ್ಲಿ ಹಾಡೋದಕ್ಕಾಗಿ ನೋಂದಣಿ ಮಾಡಿಕೊಂಡಿದ್ದಾರೆ. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿ ಮಾಹಿತಿ ನೀಡಿದಂತ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನೀಲ್ ಕುಮಾರ್ ಅವರು, ನನ್ನ ನಾಡು, ನನ್ನ ಹಾಡು ಕಾರ್ಯಕ್ರಮವನ್ನು ಅಕ್ಟೋಬರ್ 28ರಂದು ಆಯೋಜಿಸಲಾಗಿದೆ. ಕೋಠಿ ಕಂಠ ಗಾಯನ ಕಾರ್ಯಕ್ರಮಕ್ಕೆ ಕ್ಯೂ ಆರ್ ಕೋಡ್ ಮೂಲಕ 1.10…

Read More

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿಯವರು ನವೆಂಬರ್ 11 ರಂದು ಬೆಂಗಳೂರಿಗೆ ಆಗಮಿಸಲಿದ್ದು, ಕೆಂಪೇಗೌಡ ವಿಮಾನ ನಿಲ್ದಾಣದ ಆವರಣದಲ್ಲಿ ನಿರ್ಮಾಣವಾಗಿರುವ ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ. ಈ ಹಿನ್ನೆಲೆ ಬೆಂಗಳೂರಿನಲ್ಲಿ ಇಂದು ಪ್ರಾತ್ಯಕ್ಷಿತೆ ಕಾರ್ಯ ನಡೆಯಲಿದೆ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಿಂದ ಪ್ರಾತ್ಯಕ್ಷಿತೆ ನಡೆಯಲಿದೆ. ಇಂದು ಬೆಳಗ್ಗೆ 11 ಗಂಟೆಗೆ ವಿಡಿಯೋ ಕಾನ್ಸ್ ರೆನ್ಸ್ ಮೂಲಕ ಪ್ರಧಾನಿ ಮೋದಿ ಜೊತೆ ಸಿಎಂ ಬೊಮ್ಮಾಯಿ ಚರ್ಚೆ ನಡೆಸಲಿದ್ದಾರೆ. ನವೆಂಬರ್ 11 ರಂದು ಪ್ರಧಾನಿ ಮೋದಿ ಬೆಂಗಳೂರಿಗೆ ಆಗಮಿಸಿ ವಿವಿಧ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ 2 ನೇ ಟರ್ಮಿನಲ್ ನ್ನು ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ. ಅಲ್ಲದೇ ವಿಮಾನ ನಿಲ್ದಾಣದ ಆವರಣದಲ್ಲಿ ನಿರ್ಮಾಣವಾಗಿರುವ ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ. ಮೋದಿ ಬೆಂಗಳೂರಿಗೆ ಭೇಟಿ ನೀಡುತ್ತಿರುವ ಹಿನ್ನೆಲೆ ರಾಜ್ಯ ಬಿಜೆಪಿ ಈಗಾಗಲೇ ಭರ್ಜರಿ ಸಿದ್ದತೆ ನಡೆಸಿದೆ.

Read More

ಮಂಗಳೂರು : ಅಪಾರ್ಟ್‌ಮೆಂಟ್‌ವೊಂದರಲ್ಲಿ ದೀಪಾವಳಿ ಹಬ್ಬಕ್ಕೆ ಬಿಡಿಸಿದ ರಂಗೋಲಿಯನ್ನು ಕುಡಿದ ಅಮಲಿನಲ್ಲಿದ್ದ ವಿದ್ಯಾರ್ಥಿಗಳು ವಿರೂಪಗೊಳಿಸಿದ ಘಟನೆ ನಗರದ ಬಿಜೈನಲ್ಲಿ ನಡೆದಿದೆ. ದೀಪಾವಳಿ ಹಬ್ಬಕ್ಕೆ ಶುಭಾಶಯ ಕೋರಿ ಅಪಾರ್ಟ್‌ಮೆಂಟ್ ನಿವಾಸಿಗಳು ರಂಗೋಲಿ ಹಾಕಿದ್ದರು. ಆದರೆ ಕೇರಳ ಮೂಲದವರೆನ್ನಲಾದ ಕೆಲವು ವಿದ್ಯಾರ್ಥಿಗಳು ಈ ರಂಗೋಲಿಯನ್ನು ಮೆಟ್ಟಿ ಅದನ್ನು ವಿರೂಪಗೊಳಿಸಿ ದುರ್ವರ್ತನೆ ತೋರಿದ್ದಾರೆ.ಕೈಯಲ್ಲಿ ಮದ್ಯದ ಬಾಟಲಿ ಹಿಡಿದುಕೊಂಡು ಒಬ್ಬ ವಿದ್ಯಾರ್ಥಿ ರಂಗೋಲಿ ಬಳಿ ನಿಂತಿದ್ದು, ಇನ್ನೊಬ್ಬ ರಂಗೋಲಿಯನ್ನು ಮೆಟ್ಟುತ್ತಿದ್ದಾನೆ. ಅಪಾರ್ಟ್‌ಮೆಂಟ್ ಸಿಸಿಟಿವಿಯಲ್ಲಿ ಈ ದೃಶ್ಯ ಸೆರೆಯಾಗಿದ್ದು, ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಇನ್ನು ಶಾಸಕ ಡಿ. ವೇದವ್ಯಾಸ ಕಾಮತ್ ಅವರು ಘಟನೆಯ ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ವಿದ್ಯಾರ್ಥಿಗಳ ದುರ್ವರ್ತನೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಪೊಲೀಸರು ಇಂತಹ ವರ್ತನೆ ತೋರಿದವರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

Read More

ನವದೆಹಲಿ : ಒಂದು ವೇಳೆ ನೋಟುಗಳಲ್ಲಿ ದೇವರ ಚಿತ್ರ ಇದ್ದರೆ, ಇಡೀ ದೇಶವೇ ಆಶೀರ್ವದಿಸಲಿದೆ. ಲಕ್ಷ್ಮೀ ದೇವಿ ಸಮೃದ್ಧಿಯ ಸಂಕೇತ, ಗಣೇಶ ವಿಘ್ನ ನಿವಾರಕನಾಗಿದ್ದಾನೆ” ಎಂಬುದಾಗಿ ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ. “ಇಂಡೋನೇಷ್ಯಾ ನೋಟುಗಳ ಮೇಲೆ ಲಕ್ಷ್ಮಿ ದೇವಿ ಮತ್ತು ಗಣೇಶನ ಚಿತ್ರಗಳನ್ನು ಮುದ್ರಿಸಲು ಸಾಧ್ಯವಾದರೆ ನಮಗ್ಯಾಕೆ ಸಾಧ್ಯವಾಗುವುದಿಲ್ಲ . ದೇಶದ ಆರ್ಥಿಕ ಪರಿಸ್ಥಿತಿ ಸುಧಾರಣೆಗೆ ಪಣ ತೊಡುವುದರ ಹೊರತಾಗಿ ಪರಮಾತ್ಮನ ಆಶೀರ್ವಾದ ಬೇಕು ಹೀಗಾಗಿ ಕೇಂದ್ರ ಕ್ಕೆಪತ್ರ ಬರೆದು ಮನವಿ ಮಾಡುತ್ತೇನೆ ಎಂದು ಹೇಳಿದ್ದಾರೆ. ಪ್ರಯತ್ನಗಳನ್ನು ಮಾಡಿದರೂ, ಕೆಲವೊಮ್ಮೆ ದೇವರು ಮತ್ತು ದೇವತೆಗಳು ನಮ್ಮನ್ನು ಆಶೀರ್ವದಿಸದಿದ್ದರೆ ನಮ್ಮ ಪ್ರಯತ್ನಗಳು ಫಲ ನೀಡುವುದಿಲ್ಲ. ಹೀಗಾಗಿ ನಮ್ಮ ಕರೆನ್ಸಿ ನೋಟುಗಳಲ್ಲಿ ಗಣೇಶ ಮತ್ತು ಲಕ್ಷ್ಮಿ ದೇವಿಯ ಫೋಟೋಗಳನ್ನು ಸೇರಿಸುವಂತೆ ನಾನು ಪ್ರಧಾನಿ ಮೋದಿಗೆ ಮನವಿ ಮಾಡುತ್ತೇನೆ ಎಂದು ಹೇಳಿದ್ದಾರೆ.: ಭಾರತೀಯ ರಿವರ್ಸ್ ಬ್ಯಾಂಕ್ ಮುದ್ರಿಸುವ ಹೊಸ ನೋಟುಗಳ ಮೇಲೆ ಇನ್ಮುಂದೆ ಲಕ್ಷ್ಮಿ ದೇವಿ ಮತ್ತು ಗಣೇಶನ ಫೋಟೋಗಳನ್ನು ಮುದ್ರಿಸಬೇಕು, ಇದರಿಂದ ದೇಶದ ಏಳಿಗೆಗೆ ಸಹಾಯವಾಗುತ್ತದೆ…

Read More

ಕನ್ನಡದ ‘ಕಾಂತಾರ’ (Kantara) ಸಿನಿಮಾ ದೇಶಾದ್ಯಂತ ಸದ್ದು ಮಾಡುತ್ತಿದೆ. ಈ ಸಿನಿಮಾ ನೋಡಿ ಪರಭಾಷೆಯ ಸ್ಟಾರ್​ ಕಲಾವಿದರು ಮತ್ತು ತಂತ್ರಜ್ಞರು ಭೇಷ್​ ಎನ್ನುತ್ತಿದ್ದಾರೆ. ರಿಷಬ್​ ಶೆಟ್ಟಿ (Rishab Shetty) ಅವರ ನಟನೆ, ನಿರ್ದೇಶನಕ್ಕೆ ಎಲ್ಲ ಕಡೆಗಳಿಂದ ಮೆಚ್ಚುಗೆ ಕೇಳಿಬರುತ್ತಿದೆ. ಈಗಾಗಲೇ ಪ್ರಭಾಸ್​, ಕಂಗನಾ ರಣಾವತ್​, ಅನುಷ್ಕಾ ಶೆಟ್ಟಿ ಸೇರಿದಂತೆ ಅನೇಕ ಘಟಾನುಘಟಿಗಳು ಈ ಚಿತ್ರದ ಕುರಿತು ತಮ್ಮ ಅನಿಸಿಕೆ ತಿಳಿಸಿದ್ದಾರೆ. ಈಗಿನದ್ದು ಸೂಪರ್​ ಸ್ಟಾರ್​ ರಜನಿಕಾಂತ್​ (Rajinikanth) ಸರದಿ. ಹೌದು, ರಜನಿಕಾಂತ್​ ಅವರು ‘ಕಾಂತಾರ’ ಚಿತ್ರ ವೀಕ್ಷಿಸಿದ್ದಾರೆ. ಬಳಿಕ ಟ್ವಿಟರ್​ ಮೂಲಕ ತಮ್ಮ ವಿಮರ್ಶೆ ತಿಳಿಸಿದ್ದಾರೆ. ಅವರಿಗೆ ಈ ಚಿತ್ರ ತುಂಬ ಇಷ್ಟ ಆಗಿದೆ. ಇಂಥ ಸಿನಿಮಾವನ್ನು ನಿರ್ಮಾಣ ಮಾಡಿದ ‘ಹೊಂಬಾಳೆ ಫಿಲ್ಮ್ಸ್​’ ಮತ್ತು ನಿರ್ದೇಶನ ಮಾಡಿದ ರಿಷಬ್​ ಶೆಟ್ಟಿ ಅವರನ್ನು ತಲೈವಾ ಮನಸಾರೆ ಹೊಗಳಿದ್ದಾರೆ. ರಜನಿಕಾಂತ್​ ಅವರು ‘ಕಾಂತಾರ’ ಸಿನಿಮಾ ಬಗ್ಗೆ ಮಾಡಿದ ಟ್ವೀಟ್​ ವೈರಲ್​ ಆಗಿದೆ. ಇದನ್ನು ‘ಹೊಂಬಾಳೆ ಫಿಲ್ಮ್ಸ್​’ ಸಂಸ್ಥೆ ರೀಟ್ವೀಟ್​ ಮಾಡಿಕೊಂಡಿದ್ದು, ತಲೈವಾಗೆ ಧನ್ಯವಾದ ತಿಳಿಸಿದೆ.…

Read More