ಮಂಗಳೂರು: ನಗರದ ಬಲ್ಮಠ ಬಳಿ ನಿರ್ಮಾಣ ಹಂತದ ಕಟ್ಟಡದ ಬಳಿ ಬುಧವಾರ ಸಂಭವಿಸಿರುವ ಮಣ್ಣು ಕುಸಿತಗೊಂಡು ನಡೆದ ದುರಂತಕ್ಕೆ ಸಂಬಂಧಿಸಿದಂತೆ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ. ಕಟ್ಟಡ ಕಾಮಗಾರಿಯ ಗುತ್ತಿಗೆದಾರ ವೇಣುಗೋಪಾಲ್, ಸೂಪರ್‌ವೈಸರ್ ಸಹಿತ ಮೂವರ ವಿರುದ್ಧ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ. ಘಟನೆಯಲ್ಲಿ ಉತ್ತರಪ್ರದೇಶ ಮೂಲದ ಕಾರ್ಮಿಕ ಚಂದನ್ ಕುಮಾರ್ ಮೃತಪಟ್ಟಿದ್ದಾದೆ. ಬಿಹಾರ ಮೂಲದ ಕಾರ್ಮಿಕ ರಾಜ್‌ಕುಮಾರ್‌ನನ್ನು ರಕ್ಷಿಸಲಾಗಿತ್ತು.
Author: main-admin
ಮಂಗಳೂರು : ಮನಪಾ ನೂತನ ಆಯುಕ್ತರಾಗಿ ರವಿಚಂದ್ರ ನಾಯಕ್ ಅವರನ್ನು ರಾಜ್ಯ ಸರಕಾರ ನೇಮಕ ಮಾಡಿ ತಕ್ಷಣ ಜಾರಿಗೆ ಬರುವಂತೆ ಆದೇಶಿಸಿದೆ. ಈವರೆಗೆ ಮಂಗಳೂರು ಮನಪಾ ಆಯುಕ್ತರಾಗಿದ್ದ ಸಿ.ಎಲ್.ಆನಂದ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶಿಸಿದೆ. ಅವರಿಂದ ತೆರವಾಗಿರುವ ಸ್ಥಾನಕ್ಕೆ ಶಿವಮೊಗ್ಗ ಜಿಲ್ಲೆಯ ತುಂಗಾ ಮೇಲ್ದಂಡೆ ಯೋಜನೆಯ ವಿಶೇಷ ಭೂಸ್ವಾಧೀನಾಧಿಕಾರಿ, ಹಿರಿಯ ಕೆಎಎಸ್ ಅಧಿಕಾರಿ ರವಿಚಂದ್ರ ನಾಯಕ್‌ರನ್ನು ನೇಮಕ ಮಾಡಿದೆ.
ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ ಜೈಲು ಪಾಲಾಗಿರುವಂತ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ 17 ಆರೋಪಿಗಳಿಗೆ ಕೋರ್ಟ್ ಜುಲೈ.18ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ. ಇಂದು ರೇಣುಕಾಸ್ವಾಮಿ ಕೊಲೆ ಕೇಸ್ ಆರೋಪಿಗಳಾದ ನಟ ದರ್ಶನ್ ಅವರ ಗೆಳತಿ ಪವಿತ್ರಾ ಗೌಡ ಸೇರಿದಂತೆ 17 ಆರೋಪಿಗಳ ಪ್ರಕರಣದ ವಿಚಾರಣೆ ನಡೆಸಿದಂತ ನ್ಯಾಯಪೀಠವು, ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಣೆ ಮಾಡಿ ಆದೇಶಿಸಿದೆ. ಈ ಹಿಂದೆ ವಿಧಿಸಿದ್ದ 14 ದಿನಗಳ ನ್ಯಾಯಾಂಗ ಬಂಧನ ಅವಧಿ ಜುಲೈ 4 ಕ್ಕೆ ಮುಕ್ತಾಯವಾಗಿತ್ತು. ಈ ಹಿನ್ನೆಲೆ ಬೆಂಗಳೂರಿನ ಕೋರ್ಟ್‌ನಲ್ಲಿ ಗುರುವಾರ ಕೇಸ್ ವಿಚಾರಣೆ ನಡೆದಿದ್ದು, ನ್ಯಾಯಾಂಗ ಬಂಧನವನ್ನು ಮತ್ತೆ 14 ದಿನ ವಿಸ್ತರಣೆ ಮಾಡಲಾಗಿದೆ. ಅಂದರೆ, ಜುಲೈ 18 ವರೆಗೂ ನಟ ಸೇರಿದಂತೆ ಎಲ್ಲಾ ಆರೋಪಿಗಳಿಗೂ ಜೈಲೇ ಗತಿ ಆದಂತೆ ಆಗಿದೆ.
ಬಾರ್ಬಡೋಸ್‌ನಲ್ಲಿ ಟಿ20 ವಿಶ್ವಕಪ್ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದ ಟೀಮ್ ಇಂಡಿಯಾ, ನಾಲ್ಕು ದಿನಗಳ ಬಳಿಕ ತವರಿಗೆ ಮರಳಿದೆ. ಚಾಂಪಿಯನ್ ತಂಡಕ್ಕೆ ಏರ್ ಪೋರ್ಟ್‌ನಲ್ಲಿ ಹೃದಯ ಸ್ವರ್ಪಿ ಸ್ವಾಗತ ನೀಡಲಾಗಿದೆ. ಟೀಮ್ ಇಂಡಿಯಾ ಆಟಗಾರರು ಅಭಿಮಾನಿಗಳತ್ತ ಕೈ ಬಿಸಿ, ನವದೆಹಲಿಯ ಮೌರ್ಯ ಹೊಟೇಲ್‌ಗೆ ತೆರಳಿದೆ. ಮೌರ್ಯದಲ್ಲಿ ಟೀಮ್ ಇಂಡಿಯಾ ಆಟಗಾರರಿಗೆ ವಿಶೇಷ ಸ್ವಾಗತವನ್ನು ನೀಡಲಾಯಿತು. ಈ ವೇಳೆ ಹೊಟೇಲ್ ವಿಶೇಷ ರೀತಿಯಲ್ಲಿ ಕೇಕ್ ಅನ್ನು ಸಿದ್ಧ ಪಡಿಸಿತ್ತು. ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಕೇಕ್ ಕತ್ತರಿಸಿ ಖುಷಿ ಪಟ್ಟರು. ಹೊಟೇಲ್‌ನಲ್ಲಿ ಕೆಲ ಕಾಲ ವಿಶ್ರಮಿಸಿದ ಬಳಿಕ ರೋಹಿತ್ ಪಡೆ ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಗೆ ಪ್ರಯಾಣ ಬೆಳೆಸಿತು. ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲು ಬೆಳಿಗ್ಗೆ 11 ಗಂಟೆಗೆ ಪ್ರಧಾನಿ ನಿವಾಸಕ್ಕೆ ತಲುಪಿತು. ಈ ಸಭೆ ಮುಗಿದ ನಂತರ ಮುಂಬೈನಲ್ಲಿ ನಡೆಯಲಿರುವ ವಿಜಯೋತ್ಸವ ಪರೇಡ್‌ನಲ್ಲಿ ಭಾಗವಹಿಸಲು ಭಾರತ ತಂಡದ ಆಟಗಾರರು ದೆಹಲಿ ವಿಮಾನ ನಿಲ್ದಾಣಕ್ಕೆ ತೆರಳಿದ್ದಾರೆ.
ಬಂಟ್ವಾಳ: ರಾ.ಹೆ.75ರ ತುಂಬೆ ರಾಮಲಕಟ್ಟೆ ಬಳಿ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಢಿಕ್ಕಿಯಾದ ಘಟನೆ ನಡೆದಿದೆ. ಪ್ರಯಾಣಿಕರು ಯಾವುದೇ ಅಪಾಯಗಳಿಲ್ಲದೆ ಪಾರಾಗಿದ್ದಾರೆ. ಬಸ್ ಬಿ.ಸಿ.ರೋಡು ಭಾಗದಿಂದ ಮಂಗಳೂರಿಗೆ ತೆರಳುತ್ತಿದ್ದು, ಚಾಲಕನ ಅತಿ ವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಘಟನೆಯಿಂದ ಕೆಲ ಹೊತ್ತು ಸಂಚಾರಕ್ಕೆ ತೊಡಕು ಉಂಟಾಗಿದ್ದು, ಬಳಿಕ ಬಸ್ ತೆರವು ಮಾಡಲಾಗಿದೆ. ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳ್ತಂಗಡಿ: ವಿಷ ಸೇವನೆ ಮಾಡಿ ಕಾಲೇಜ್ ವಿದ್ಯಾರ್ಥೀನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಬೆಳ್ತಂಗಡಿಯಲ್ಲಿ ನಡೆದಿದೆ. ಪುದುವೆಟ್ಟು ಗ್ರಾಮದ ಕಲ್ಲಾಜೆ ನಿವಾಸಿ ವೆಂಕಟೇಶ್ ಅವರ ಪುತ್ರಿ ಅನಿತಾ (17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯಾಗಿದ್ದಾಳೆ. ಈಕೆ ನಾಲ್ಕು ದಿನದ ಹಿಂದೆ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ ಗೆ ಯತ್ನಿಸಿ ತೀವ್ರ ಅಸ್ವಸ್ಥಗೊಂಡಿದ್ದಳು. ಆಕೆಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ 3 ದಿನಗಳ ಕಾಲ ಜೀವನ್ಮರಣ ಹೋರಾಟ ನಡೆಸಿದ ಅನಿತಾ ಬುಧವಾರ ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ. ಈಕೆ ಪ್ರಸ್ತುತ ಬೆಳ್ತಂಗಡಿಯ ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಎಸೆಸೆಲ್ಸಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದಿದ್ದು, ಮನೆಯವರಿಗೆ ಕಷ್ಟ ಕೊಡಲು ನನ್ನಿಂದ ಆಗಲ್ಲ ಎಂದು ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿರುವುದಾಗಿ ತಿಳಿದುಬಂದಿದ್ದು ಈ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಮಂಗಳೂರು: ನಗರದ ಬಲ್ಮಠದಲ್ಲಿ ಕಟ್ಟಡ ಕಾಮಗಾರಿ ಅವಘಡದ ಬೆನ್ನಲ್ಲೇ ಎಚ್ಚೆತ್ತ ಮಂಗಳೂರು ಮಹಾನಗರ ಪಾಲಿಕೆ ಮಳೆಗಾಲ ಮುಗಿಯುವವರೆಗೆ ಎಲ್ಲಾ ಕಟ್ಟಡದ ಕಾಮಗಾರಿ ಸ್ಥಗಿತಕ್ಕೆ ಆದೇಶಿಸಿದೆ. ಇಂದಿನಿಂದ ಯಾವುದೇ ಕಟ್ಟಡದ ಕಾಮಗಾರಿಯನ್ನು ನಡೆಸದಂತೆ ಹಾಗೂ ಈಗಾಗಲೇ ಪ್ರಾರಂಭಿಸಿರುವ ಕಟ್ಟಡ ನಿರ್ಮಾಣ ಕಾಮಗಾರಿಗಳನ್ನು ನಿಲ್ಲಿಸುವಂತೆ ಸೂಚನೆ ನೀಡಿದೆ. ಅಗತ್ಯ ಮುನ್ನೆಚ್ಚರಿಕೆ ಕ್ರಮ ಅಳವಡಿಸಿಕೊಂಡು ಕಾಮಗಾರಿಯನ್ನು ಸ್ಥಗಿತಗೊಳಿಸಲು ಸೂಚನೆ ನೀಡಿದೆ. ಅವೈಜ್ಞಾನಿಕವಾಗಿ ಭೂಮಿಯನ್ನು ಅಗೆದು ಹಾಕದಂತೆ ಸೂಚನೆ ನೀಡಿದೆ. ಆದೇಶ ಉಲ್ಲಂಘನೆ ಕಂಡುಬಂದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆಯಡಿ ಕ್ರಮದ ಎಚ್ಚರಿಕೆ ನೀಡಿ ಮನಾಪ ಆಯುಕ್ತರು ಕಟ್ಟುನಿಟ್ಟಾಗಿ ಆದೇಶಿಸಿದ್ದಾರೆ.
ಮಂಗಳೂರು: ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಮಣ್ಣು ಕುಸಿದು, ಕಾರ್ಮಿಕರು ಸಿಲುಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಕಾರ್ಮಿಕನನ್ನು ರಕ್ಷಿಸಲಾಗಿದೆ. ಮಂಗಳೂರಿನ ಬಲ್ಮಠದಲ್ಲಿ ಖಾಸಗಿ ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಏಕಾಏಕಿ ಮಣ್ಣು ಕುಸಿದು, ಅವಶೇಷಗಳ ಅಡಿಯಲ್ಲಿ ಇಬ್ಬರು ಕಾರ್ಮಿಕರು ಸಿಲುಕಿಕೊಂಡಿದ್ದರು. ಅವರಲ್ಲಿ ಓರ್ವ ಕಾರ್ಮಿಕನನ್ನು ರಕ್ಷಿಸಲಾಗಿದ್ದು, ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೋರ್ವ ಕಾರ್ಮಿಕನಿಗಾಗಿ ಅಗ್ನಿಶಾಮಕ ಸಿಬ್ಬಂದಿ, ಎಸ್ ಡಿ ಆರ್ ಎಫ್ ತಂಡ ರಕ್ಷಣಾ ಕಾರ್ಯಾಚರಣೆ ಮುಂದುವರೆಸಿದೆ. ಘಟನಾ ಸ್ಥಳಕ್ಕೆ ದಕ್ಷಿಣ ಕನ್ನದ ಡಿಸಿ ಮುಲೈ ಮುರುಗನ್ ಭೇಟಿ ನೀಡಿದ್ದಾರೆ. ಮಣ್ಣಿನಲ್ಲಿ ಸಿಲುಕಿರುವ ಕಾರ್ಮಿಕನ ರಕ್ಷಣೆಗಾಗಿ ಕಾರ್ಯಾಚರಣೆ ಚುರುಕುಗೊಂಡಿದೆ.
ಮಂಗಳೂರು: ಕಟ್ಟಡ ಕಾಮಗಾರಿ ವೇಳೆ ಗುಡ್ಡ ಕುಸಿದು ಇಬ್ಬರು ಕಾರ್ಮಿಕರು ಮಣ್ಣಿನಡಿಗೆ ಸಿಲುಕಿರುವ ಘಟನೆ ನಗರದ ಬಲ್ಮಠ ರೋಡ್ ಸಮೀಪ ನಡೆದಿದೆ. ಕಟ್ಟದ ನಿರ್ಮಾಣದ ವೇಳೆ ಘಟನೆ ನಡೆದಿದ್ದು, ಮಣ್ಣಿನಡಿಗೆ ಸಿಲುಕಿರುವ ಕಾರ್ಮಿಕರಿಗಾಗಿ ತೀವ್ರ ಶೋಧ ಕಾರ್ಯಚರಣೆ ನಡೆಯುತ್ತಿದೆ. ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ, ಪೊಲೀಸ್ ಆಯುಕ್ತರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.
ಮಂಗಳೂರು ನಗರದ ದೇರೆಬೈಲಿನಲ್ಲಿ ಕೃಷ್ಣರಾಜ ಮಯ್ಯ ನೇತೃತ್ವದ ಆಶೀರ್ವಾದ್ ಇನ್ಫ್ರಾಸ್ಟ್ರಕ್ಚರ್ ಕಂಪನಿ ವತಿಯಿಂದ ನಿರ್ಮಾಣಗೊಳ್ಳುತ್ತಿರುವ ದ್ವಾರಕಾ ಎನ್ ಕ್ಲೇವ್ ಎಂಬ ವಸತಿ ಹಾಗೂ ವಾಣಿಜ್ಯ ಕಟ್ಟಡವು 2017ನೇ ಇಸವಿಯಲ್ಲಿ ಆರಂಭವಾಗಿ 2019 ಡಿಸೆಂಬರ್ ನಲ್ಲಿ ಕಟ್ಟಡ ಪೂರ್ಣಗೊಳಿಸುವುದಾಗಿ ಗ್ರಾಹಕರೊಂದಿಗೆ ಒಪ್ಪಂದ ಮಾಡಿಕೊಂಡಿದ್ದರು. ಆದರೆ ಇಂದಿನ ದಿನಗಳವರೆಗೂ ಕಟ್ಟಡ ಪೂರ್ಣಗೊಂಡಿಲ್ಲ. ಪ್ರತಿ ಬಾರಿಯೂ ಗ್ರಾಹಕರು ಈ ಬಗ್ಗೆ ವಿಚಾರಿಸಿದಾಗ ಬಿಲ್ಡರ್ ಕೃಷ್ಣರಾಜ ಮಯ್ಯ ಅವರು ಇನ್ನೂ ಎರಡು ಮೂರು ತಿಂಗಳುಗಳಲ್ಲಿ ಪೂರ್ಣಗೊಳಿಸುವುದಾಗಿ ಆಶ್ವಾಸನೆ ನೀಡುತ್ತಾ ಬಂದಿದ್ದರು. ಈ ಬಗ್ಗೆ ಮನನೊಂದ 5 ಮಂದಿ ಗ್ರಾಹಕರು ಸೂಕ್ತದ ದಾಖಲೆಗಳೊಂದಿಗೆ ರೇರದ ಮೊರೆ ಹೋದರು ಈ ಬಗ್ಗೆ ವಿಚಾರಣೆ ನಡೆಸಿದ ರೇರ ಮೂವರು ಅರ್ಜಿದಾರರಾದ ಹರ್ಷ, ದಿನೇಶ್ ರವರಿಗೆ ರೂ 9,07,691, ಜೀತನ್ ದಿಕ್ಕುನ್ನ ರವರಿಗೆ ರೂ 10,07,939 ಹಾಗೂ ಕೃಷ್ಣರಾಜ ಸಾಲಿಯಾನ್ ರವರಿಗೆ ರೂ 651614 ಪರಿಹಾರವನ್ನು 60 ದಿನಗಳ ಒಳಗೆ ಪಾವತಿಸುವಂತೆ ಮತ್ತು ಕಟ್ಟಡವನ್ನು 60 ದಿನ ಒಳಗೆ ಪೂರ್ಣಗೊಳಿಸುವಂತೆ ಆದೇಶಿಸಿದೆ. ಇನ್ನು…