ಆಕ್ಟೋಬರ್ 25ರಮಂಗಳವಾರದಂದು ಸೂರ್ಯಗ್ರಹಣ ಆವರಿಸಲಿರುವ ಹಿನ್ನೆಲೆ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಾಲಯದಲ್ಲಿ ದೇವರ ದರ್ಶನ ಸಮಯದಲ್ಲಿ ವ್ಯತ್ಯಾಸ ಆಗಲಿದ್ದು , ಭಕ್ತರು ಸಹಕರಿಸಬೇಕಾಗಿ ಕೋರಿದೆ. ದಕ್ಷಿಣ ಕನ್ನಡ ಜಿಲ್ಲೆಯ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮಂಜುನಾಥ ಸ್ವಾಮಿಯ ದರ್ಶನದ ಸಮಯವನ್ನು ಬದಲಾವಣೆ ಮಾಡಲಾಗಿದೆ. ಮಂಗಳವಾರದಂದು ಮಧ್ಯಾಹ್ನದವರೆಗೆ ಎಂದಿನಂತೆ ಭಕ್ತರಿಗೆ ದೇವರ ದರ್ಶನ ಮಾಡಲು ಅವಕಾಶವಿದ್ದು, ನಂತರ ಮಧ್ಯಾಹ್ನ 2:30ರಿಂದ ರಾತ್ರಿ 7:30ರವರೆಗೆ ದರ್ಶನಕ್ಕೆ ಅವಕಾಶ ಇರುವುದಿಲ್ಲ. ಮಧ್ಯಾಹ್ನ 2:30ರವರೆಗೆ ಭೋಜನ ಪ್ರಸಾದದ ವ್ಯವಸ್ಥೆ ಇರಲಿದೆ. ಬಳಿಕ ರಾತ್ರಿ 7:30ರ ನಂತರ ಭೋಜನ ಪ್ರಸಾದದ ವ್ಯವಸ್ಥೆಯನ್ನು ಮಾಡಲಾಗುತ್ತದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಆಡಳಿತ ಮಂಡಳಿ ಪ್ರಕಟಣೆ ಹೊರಡಿಸಿದೆ. ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದಲ್ಲೂ ಸೂರ್ಯ ಗ್ರಹಣ ನಿಮಿತ್ತ ದೇವರ ದರ್ಶನದ ಸಮಯವನ್ನು ಬದಲಾವಣೆ ಮಾಡಲಾಗಿದೆ. ಮಂಗಳವಾರ ಮಧ್ಯಾಹ್ನ ಎಂದಿನಂತೆ ದೇವಸ್ಥಾನದಲ್ಲಿ ಅನ್ನ ಪ್ರಸಾದವಿರುತ್ತದೆ. ಗ್ರಹಣ ಆರಂಭಗೊಳ್ಳುವ ಅವಧಿಯಿಂದ ಬಿಡುವವರೆಗೆ ಭಕ್ತರಿಗೆ ದೇವಸ್ಥಾನಕ್ಕೆ ಪ್ರವೇಶವಿದ್ದು, ದೇವಸ್ಥಾನದಲ್ಲಿ ಜಪಮಾಡಬಹುದು. ಆದರೆ ಈ ಅವಧಿಯಲ್ಲಿ…
Author: main-admin
ಪ್ರಸ್ತುತ ಜಗತ್ತಿನಲ್ಲಿ ಯುವಜನತೆ ಮೊಬೈಲ್ ವೈಶಿಷ್ಟ್ಯಗಳಿಗೆ ಮಾರುಹೋಗಿರುವ ಹಿನ್ನೆಲೆ ಅನೇಕರು ಸ್ಮಾರ್ಟ್ ಫೋನ್ ಬಳಕೆ ಮಾಡುತ್ತಿದ್ದಾರೆ. ಸೌಂಡ್ ಬಂದರೆ ಬೇರೆಯವರಿಗೆ ತೊಂದರೆ ಆಗುತ್ತದೆ ಎಂದು ಭಾವಿಸಿ ಹೆಚ್ಚಿನವರು ಹಾಡುಗಳನ್ನು ಆಸ್ವಾದಿಸಲು ಇಯರ್ ಫೋನ್ ಬಳಸುತ್ತಾರೆ. ಈ ಸಾಧನವನ್ನು ಸೀಮಿತವಾಗಿ ಬಳಸಿದರೆ ತೊಂದರೆ ಇಲ್ಲ. ಅದರೆ ಅತಿಯಾಗಿ ಬಳಸುವವರು ಈ ಮುನ್ನೆಚ್ಚರಿಕೆಗಳನ್ನು ಅನುಸರಿಸದಿದ್ದರೆ ಮುಂದೆ ಶ್ರವಣ ಸಮಸ್ಯೆ ಜೊತೆಗೆ ಇನ್ನಷ್ಟು ಸಮಸ್ಯೆಗಳು ಎದುರಾಗಲಿವೆ ಎಂದು ತಜ್ಞರ ಹೇಳುತ್ತಾರೆ. ವಿಶ್ವ ಆರೋಗ್ಯ ಸಂಸ್ಥೆ (WHO)ಯೂ ಎಚ್ಚರಿಕೆ ನೀಡಿದೆ. ಇಯರ್‌ಫೋನ್‌ಗಳ ಅತಿಯಾದ ಬಳಕೆ ಕಿವಿಗಳ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಕಿವಿಯಲ್ಲಿ ನೋವನ್ನು ಉಂಟುಮಾಡಬಹುದು. ಕ್ರಮೇಣ ಈ ಸಮಸ್ಯೆ ಹೆಚ್ಚಾಗಬಹುದು. ಕೆಲವರಿಗೆ ತಲೆಸುತ್ತು ಬರಬಹುದು ಎಂದು ಆರೋಗ್ಯ ತಜ್ಞರು ಎಚ್ಚರಿಸಿದ್ದಾರೆ. ಇತರರು ಬಳಸಿದ ಇಯರ್‌ಫೋನ್‌ಗಳನ್ನು ಬಳಸುವುದು ಸೋಂಕುಗಳಿಗೆ ಕಾರಣವಾಗಬಹುದು. ಇಯರ್‌ಫೋನ್‌ಗಳನ್ನು ಬಳಸುವಾಗ ಧ್ವನಿ ಕಡಿಮೆ ಇಡಬೇಕು. ವಾಲ್ಯೂಮ್ 60 ಡೆಸಿಬಲ್‌ಗಳಿಗಿಂತ ಕಡಿಮೆಯಿದೆ ಎಂದು ಖಚಿತಪಡಿಸಿಕೊಳ್ಳಿ. 85 ಡೆಸಿಬಲ್‌ಗಿಂತ ಹೆಚ್ಚಿನ ಶಬ್ದವು ಶ್ರವಣ ನಷ್ಟಕ್ಕೆ ಕಾರಣವಾಗಬಹುದು. ಫೋನ್…
ಮಂಗಳೂರು: ನಾಡಿನೆಲ್ಲೆಡೆ ಇದೀಗ ದೀಪಾವಳಿ ಹಬ್ಬದ ಸಂಭ್ರಮ. ಈಗಾಗಲೇ ಜನತೆ ದೀಪಾವಳಿ ಹಬ್ಬದ ಸಡಗರದಲ್ಲಿ ಖರೀದಿಯಲ್ಲಿ ತೊಡಗಿಸಿಕೊಂಡಿದ್ದಾರೆ. ಇಂದು ನರಕಚತುರ್ದಶಿ ಸಂಭ್ರಮವಾಗಿದ್ದು, ನಾಡಿನ ಜನತೆ ಎಣ್ಣೆ ಹಚ್ಚಿ ಸ್ನಾನ ಮಾಡಿ, ದೇವರಿಗೆ ವಿಶೇಷ ಪೂಜೆ ಮಾಡಿದರು. ಇನ್ನು ದೀಪಾವಳಿ ಅಂದರೆ ಪಟಾಕಿ ಇರಲೇಬೇಕು. ಆದರೆ ಪಟಾಕಿ ಸಿಡಿಸುವ ಮುನ್ನ ಇರಲಿ ಎಚ್ಚರ ಎನ್ನುವುದು ಕಿವಿಮಾತು. ಕ್ಷಣ ಮಾತ್ರದ ಸಂಭ್ರಮಕ್ಕೆ ಇಡೀ ಬದುಕನ್ನು ಕತ್ತಲೆ ಮಾಡಿಕೊಳ್ಳುವವರು ಇದ್ದಾರೆ. ಹೀಗಾಗಿ ಪಟಾಕಿಸಿಡಿಸುವುದಿದ್ದರೂ ಅತ್ಯಂತ ಜಾಗರೂಕರಾಗಿ ಪಟಾಕಿ ಸಿಡಿಸಿರಿ ಎನ್ನುವುದು ಹಿರಿಯರ ಎಚ್ಚರಿಕೆ. ಇನ್ನು ಜನತೆ ಹಸಿರು ಪಟಾಕಿಗೆ ಹೆಚ್ಚಿನ ಒತ್ತು ನೀಡಬೇಕಾಗಿದೆ. ಸಾರ್ವಜನಿಕ ಆಸ್ತಿ ಮತ್ತು ಆರೋಗ್ಯದ ಸಂರಕ್ಷಣೆ, ಪರಿಸರ ಮಾಲಿನ್ಯ ಮತ್ತು ಶಬ್ಧ ಮಾಲಿನ್ಯ ನಿಯಂತ್ರಣದಲ್ಲಿಡುವ ಉದ್ದೇಶದಿಂದ 125 ಡೆಸಿಬಲ್ ಅಥವಾ 145 ಡಿಸಿಬಲ್ ಹೆಚ್ಚು ಶಬ್ಧ ಮಾಡುವ ಪಟಾಕಿ ಹಾಗೂ ಸಿಡಿಮದ್ದುಗಳ ಮಾರಾಟ ಮತ್ತು ಉಪಯೋಗವನ್ನು ನಿಷೇಧಿಸಲಾಗಿದೆ. ರಾತ್ರಿ 10ರಿಂದ ಬೆಳಿಗ್ಗೆ 6ಗಂಟೆಯವರೆಗೆ ಪಟಾಕಿ, ಸಿಡಿಮದ್ದು ಸಿಡಿಸುವುದನ್ನು ನಿಷೇಧಿಸಲಾಗಿದೆ. ದಿನದ ಯಾವುದೇ…
ನವದೆಹಲಿ: ಪಾಕಿಸ್ಥಾನ ವಿರುದ್ದ ಭಾನುವಾರ ನಡೆದ ಐಸಿಸಿ ಟಿ20 ವಿಶ್ವಕಪ್ ರೋಚಕ ಹಣಾಹಣಿಯಲ್ಲಿ ಭಾರತ ಗೆಲುವು ಸಾಧಿಸುತ್ತಿದ್ದಂತೆಯೇ ದೇಶದೆಲ್ಲೆಡೆ ಪಟಾಕಿ ಹಚ್ಚಿ ಸಂಭ್ರಮಿಸಲಾಗುತ್ತಿದೆ. ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ಥಾನ 20 ಓವರ್ ಗಳಲ್ಲಿ ಎಂಟು ವಿಕೆಟ್ ಕಳೆದುಕೊಂಡು 159 ರನ್ ಗಳಿಸಿದರೆ, ಭಾರತವು 6 ವಿಕೆಟ್ ಕಳೆದುಕೊಂಡು ಅಂತಿಮ ಎಸೆತದಲ್ಲಿ ಜಯ ಸಾಧಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಗೆ ಇಳಿದ ಪಾಕಿಸ್ತಾನಕ್ಕೆ ಉತ್ತಮ ಆರಂಭವೇನು ಸಿಗಲಿಲ್ಲ. 15 ರನ್ ಆಗುವಷ್ಟರಲ್ಲಿ ನಾಯಕ ಬಾಬರ್ ಅಜಂ ಮತ್ತು ಕೀಪರ್ ರಿಜ್ವಾನ್ ಪೆವಿಲಿಯನ್ ಸೇರಿದ್ದರು. ನಂತರ ಜೊತೆಯಾದ ಮಸೂದ್ ಮತ್ತು ಇಫ್ತಿಕಾರ್ ಅಹಮದ್ 76 ರನ್ ಜೊತೆಯಾಟವಾಡಿದರು. ತಲಾ ಅರ್ಧಶತಕ ಸಿಡಿಸಿದ ಇಬ್ಬರು ಪಾಕ್ ತಂಡವನ್ನು ಆಧರಿಸಿದರು. ಕೊನೆಯಲ್ಲಿ ಶಹೀನ್ ಶಾ ಅಫ್ರಿದಿ 8 ಎಸೆತಗಳಲ್ಲಿ 16 ರನ್ ಗಳಿಸಿದರು. ಭಾರತದ ಪರ ಅರ್ಶದೀಪ್ ಸಿಂಗ್ ಮತ್ತು ಹಾರ್ದಿಕ್ ಪಾಂಡ್ಯ ತಲಾ ಮೂರು ವಿಕೆಟ್ ಕಿತ್ತರು. ಭುವನೇಶ್ವರ್ ಮತ್ತು ಶಮಿ ತಲಾ ಒಂದು…
ಪಾಟ್ನಾ: ರಾಜಧಾನಿ ಪಾಟ್ನಾದ ದಿಘಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಭಾನುವಾರ ಬೆಳಗ್ಗೆ ಗಂಗಾನದಿಯಲ್ಲಿ ದೋಣಿಯೊಂದು ಮಗುಚಿದ್ದು, ಅದರಲ್ಲಿದ್ದ 11 ಮಂದಿಯನ್ನು ರಕ್ಷಿಸಲಾಗಿದ್ದು, ಇಬ್ಬರು ನಾಪತ್ತೆಯಾಗಿದ್ದಾರೆ. ಅವರಿಗಾಗಿ ಹುಡುಕಾಟ ನಡೆಯುತ್ತಿದೆ. ದೋಣಿ ಮುಳುಗುತ್ತಿದ್ದನ್ನು ಗಮನಿಸಿದ ಗಂಗಾ ಘಾಟ್ ಅನ್ನು ಸ್ವಚ್ಛಗೊಳಿಸುವ ಸಿಬ್ಬಂದಿ, ಸ್ಥಳೀಯರ ಸಹಾಯದಿಂದ ದೋಣಿಯಲ್ಲಿದ್ದ ಜನರನ್ನು ರಕ್ಷಿಸಿದ್ದಾರೆ. ಘಟನಾ ಸ್ಥಳಕ್ಕೆ SDRF ತಂಡ ಆಮಿಸಿದ್ದು, ರಕ್ಷಣಾ ಕಾರ್ಯದಲ್ಲಿ ತೊಡಗಿವೆ ಎನ್ನಲಾಗುತ್ತಿದೆ. 13 ಜನರಿದ್ದ ದೋಣಿಯೊಂದು ಜೆಪಿ ಸೇತುವಿನ ಪಾಯಾ ಸಂಖ್ಯೆ 10 ರ ಬಳಿ ಇದ್ದಕ್ಕಿದ್ದಂತೆ ಡಿಕ್ಕಿ ಹೊಡೆದಿತ್ತು. ಪರಿಣಾಮ ಅದರಲ್ಲಿದ್ದ 11 ಜನರನ್ನು ರಕ್ಷಿಸಲಾಗಿದೆ. ಇನ್ನೂ ಇಬ್ಬರು ನಾಪತ್ತೆಯಾಗಿದ್ದಾರೆ. ಗಂಗಾನದಿಯ ನೀರಿನ ಮಟ್ಟ ಹೆಚ್ಚಿದ್ದು, ನಾಪತ್ತೆಯಾಗಿರುವ ಇಬ್ಬರಿಗಾಗಿ ಶೋಧ ಕಾರ್ಯ ಮುಂದುವರಿದಿದೆ ಎಂದು ಎಸ್ಪಿ ತಿಳಿಸಿದ್ದಾರೆ.
ಮಕ್ಕಳ ಚರ್ಮ ತುಂಬ ಮೃದವಾಗಿರುತ್ತದೆ. ಅವರನ್ನು ಎಷ್ಟು ಜಾಗ್ರತೆಯಿಂದ ನೋಡಿಕೊಳ್ಳುತ್ತೇವೋ ಅಷ್ಟು ಒಳ್ಳೆಯದು. ಅದರಲ್ಲೂ ಚಳಿಗಾಲದಲ್ಲಿ ಮಕ್ಕಳ ಚರ್ಮ ತೇವಾಂಶ ಕಳೆದುಕೊಳ್ಳುತ್ತದೆ. ಹವಾಮಾನದಲ್ಲಿ ಸಣ್ಣ ಬದಲಾವಣೆ ಆದರೂ ಕೂಡಾ ಅದು ಮಕ್ಕಳ ಆರೋಗ್ಯದ ಮೇಲೆ ತಕ್ಷಣ ಪರಿಣಾಮ ಬೀರುತ್ತದೆ. ಹಾಗೆಯೇ ಅವರ ಚರ್ಮವೂ ಒಣಗುತ್ತದೆ.ಚಳಿಗಾಲದಲ್ಲಿ ನಿಮ್ಮ ಮಗುವಿನ ಚರ್ಮವು ಬಹಳ ಒಣಗಿದ್ದರೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬುದನ್ನು ತಿಳಿದುಕೊಳ್ಳುವುದು ಬಹಳ ಮುಖ್ಯ. ನಿಮ್ಮ ಮಗುವಿನ ಕೋಮಲ ತ್ವಚೆಯನ್ನು ನೋಡಿಕೊಳ್ಳಲು ಇಲ್ಲಿ ತಿಳಿಸಿರುವ ಕೆಲವೊಂದು ಸಲಹೆಗಳು ನಿಮಗೆ ಅನುಕೂಲವಾಗಬಹುದು. ಮಕ್ಕಳ ಉಡುಪುಗಳ ಬಗ್ಗೆ ಇರಲಿ ಗಮನಯಾವುದೇ ಹವಾಮಾನವಾದರೂ ಮಕ್ಕಳ ಬಟ್ಟೆಗಳ ಫ್ಯಾಬ್ರಿಕ್ ಬಹಳ ಮೃದುವಾಗಿರಬೇಕು. ಚಳಿಗಾಲದಲ್ಲಿ ಮಕ್ಕಳ ಚರ್ಮವು ಹೆಚ್ಚು ಸೂಕ್ಷ್ಮವಾಗುತ್ತದೆ. ಆದ್ದರಿಂದ ದದ್ದುಗಳು ಅಥವಾ ಕಿರಿಕಿರಿಯನ್ನು ತಡೆಯುವ ಬಟ್ಟೆಗಳನ್ನು ತೊಡಿಸಿ. ಅವರಿಗೆ ಮೃದುವಾದ, ಸರಳವಾದ ಬಟ್ಟೆಗಳನ್ನು ಆರಿಸಿ. ಈ ಬಟ್ಟೆಗಳನ್ನು ಮಾರುಕಟ್ಟೆಯಿಂದ ತಂದ ಕೂಡಲೇ ಮಕ್ಕಳಿಗೆ ತೊಡಿಸಬೇಡಿ. ಅವುಗಳನ್ನು ಮೊದಲು ಬೇಬಿ ಡಿಟರ್ಜೆಂಟ್‌ನಲ್ಲಿ ತೊಳೆಯಿರಿ.ಮಕ್ಕಳ ಉತ್ಪನ್ನಗಳನ್ನು ಎಚ್ಚರಿಕೆಯಿಂದ ಆರಿಸಿಮಕ್ಕಳಿಗೆ…
ಬೆಳಗಾವಿ : ಸವದತ್ತಿ ಯಲ್ಲಮ್ಮ ಕ್ಷೇತ್ರದ ಶಾಸಕ, ವಿಧಾನಸಭೆ ಉಪಸಭಾಪತಿ ಆನಂದ ಮಾಮನಿ (56) ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಶನಿವಾರ ತಡರಾತ್ರಿ ನಿಧನರಾಗಿದ್ದಾರೆ. ತೀವ್ರ ಅನಾರೋಒಗ್ಯದಿಂದ ಬಳಲುತ್ತಿದ್ದ ಶಾಸಕ ಆನಂದ ಮಾಮನಿ ಅವರನ್ನು ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ತಡರಾತ್ರಿ ನಿಧನರಾಗಿದ್ದಾರೆ. ಆನಂದ್ (ವಿಶ್ವನಾಥ್) ಚಂದ್ರಶೇಖರ್ ಮಾಮನಿ ಅವರು ಬೆಳಗಾವಿ ಜಿಲ್ಲೆಯ ಸವದತ್ತಿಯಲ್ಲಿ ಜನವರಿ 18, 1966 ಜನಿಸಿದರು. ತಂದೆ ಚಂದ್ರಶೇಖರ ಮಲ್ಲಿಕಾರ್ಜುನ ಮಾಮನಿ, ತಾಯಿ ಶ್ರೀಮತಿ ಗಂಗಮ್ಮ ಮಾಮನಿ. ಹಿಂದೂ ಲಿಂಗಾಯತ (ಪಂಚಮಸಾಲಿ) ಸಮುದಾಯಕ್ಕೆ ಸೇರಿದ ಇವರು ಸವದತ್ತಿಯ ಗೌರವಕುಟುಂಬಕ್ಕೆ ಸೇರಿದವರು. 2008 ರಲ್ಲಿ ಬಿಜೆಪಿ ಪಕ್ಷದಿಂದ ಮೊದಲ ಬಾರಿಗೆ ಸವದತ್ತಿ ಕ್ಷೇತ್ರದ ಶಾಸಕರಾಗಿ ಆಯ್ಕೆಯಾದರು. ಅವರು ಮತ್ತೆ 2013-2018 ರಲ್ಲಿ ಎರಡನೇ ಬಾರಿಗೆ ಬಿಜೆಪಿಯಿಂದ ವಿಧಾನಸಭೆಗೆ ಸ್ಪರ್ಧಿಸಿ ಜಯಗಳಿಸಿದರು. ಮತ್ತೆ 2018 ರಲ್ಲಿ ಮೂರನೇ ಬಾರಿಗೆ ಹ್ಯಾಟ್ರಿಕ್ ವಿಜಯ ಸಾಧಿಸಿದರು. ಪ್ರಸ್ತುತ ಬಿಜೆಪಿ ಸರ್ಕಾರದಲ್ಲಿ ವಿಧಾನಸಭಾ ಡೆಪ್ಯುಟಿ ಸ್ಪೀಕರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.
ನವದೆಹಲಿ: 2022 ಅಕ್ಟೋಬರ್ 25ರಂದು ಭಾಗಶಃ ಸೂರ್ಯಗ್ರಹಣ ಸಂಭವಿಸಲಿದೆ(3 ಕಾರ್ತಿಕ, 1944 ಶಕ ಯುಗ). ಭಾರತದಲ್ಲಿ ಗ್ರಹಣವು ಮಧ್ಯಾಹ್ನದ ನಂತರ ಸೂರ್ಯಾಸ್ತದ ಮೊದಲು ಕಾಣಿಸಿಕೊಳ್ಳಲಿದ್ದು, ಇದು ಹೆಚ್ಚಿನ ಸ್ಥಳಗಳಲ್ಲಿ ಗೋಚರಿಸುತ್ತದೆ. ಆದಾಗ್ಯೂ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಮತ್ತು ಈಶಾನ್ಯ ಭಾರತದ ಕೆಲವು ಭಾಗಗಳಲ್ಲಿ (ಐಜ್ವಾಲ್, ದಿಬ್ರುಗಢ್, ಇಂಫಾಲ್, ಇಟಾನಗರ, ಕೊಹಿಮಾ, ಸಿಬ್ಸಾಗರ್, ಸಿಲ್ಚಾರ್, ತಮೆಲಾಂಗ್ ಇತ್ಯಾದಿ) ಇದನ್ನು ನೋಡಲು ಸಾಧ್ಯವಿಲ್ಲ. ದೇಶದ ವಾಯವ್ಯ ಭಾಗಗಳಲ್ಲಿ ಗರಿಷ್ಠ ಗ್ರಹಣದ ಸಮಯದಲ್ಲಿ ಚಂದ್ರನು ಸೂರ್ಯನನ್ನು ಆವರಿಸಿದ ಪ್ರಮಾಣವು ಸರಿಸುಮಾರು ಶೇಕಡ 40 ಮತ್ತು 50ರ ನಡುವೆ ಇರುತ್ತದೆ. ದೇಶದ ಇತರ ಭಾಗಗಳಲ್ಲಿ, ಶೇಕಡಾವಾರು ವ್ಯಾಪ್ತಿಯು ಮೇಲಿನ ಮೌಲ್ಯಗಳಿಗಿಂತ ಕಡಿಮೆ ಇರುತ್ತದೆ. ದೆಹಲಿ ಮತ್ತು ಮುಂಬೈನಲ್ಲಿ, ಗ್ರಹಣದ ಪರ್ವ(ಉತ್ತುಂಗ) ಸಮಯದಲ್ಲಿ ಚಂದ್ರನು ಸೂರ್ಯನನ್ನು ಆವರಿಸಿಕೊಳ್ಳುವ ಶೇಕಡಾವಾರು ಪ್ರಮಾಣ ಕ್ರಮವಾಗಿ 44% ಮತ್ತು 24% ಇರುತ್ತದೆ. ಗ್ರಹಣ ಆರಂಭದಿಂದ ಸೂರ್ಯಾಸ್ತಮಾನದವರೆಗೆ ದೆಹಲಿ ಮತ್ತು ಮುಂಬೈನಲ್ಲಿ ಕ್ರಮವಾಗಿ 1 ಗಂಟೆ 13 ನಿಮಿಷ ಮತ್ತು 1 ಗಂಟೆ…
ಮಂಗಳೂರು: ಕ್ಯಾನ್ಸರ್ ಪೀಡಿತರಿಗೆ ಕೂದಲು ದಾನ ಮಾಡುವ ಮೂಲಕ ಎರಡು ವರ್ಷದ ಕೂಸೊಂದು ಎಲ್ಲರಿಗೂ ಮಾದರಿಯಾಗಿದ್ದಾಳೆ.ಮರೋಳಿಯ ಭರತ್ ಕುಲಾಲ್ ಹಾಗೂ ಸುಮಲತಾ ದಂಪತಿಯ ಪುತ್ರಿ ಆದ್ಯ ಕುಲಾಲ್ ಕ್ಯಾನ್ಸರ್ ಪೀಡಿತರಿಗೆ ವಿಗ್ ಮಾಡಲು ತಮ್ಮ ಕೂದಲನ್ನು ದಾನ ಮಾಡಿದ್ದಾಳೆ. ಇಷ್ಟೊಂದು ಸಣ್ಣ ವಯಸ್ಸಿಗೆ ಈ ರೀತಿಯ ಕಾರ್ಯವನ್ನು ಮಾಡಿರೋದು ಎಲ್ಲರ ಶ್ಲಾಘನೆಗೆ ಪಾತ್ರವಾಗಿದೆ. ಈಕೆಯ ಸಾಧನೆಯ ಬಗ್ಗೆ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ತಮ್ಮ ಫೇಸ್ಬುಕ್ ಖಾತೆಯಲ್ಲಿ ಮೆಚ್ಚುಗೆ ವ್ಯಕ್ತಪಡಿಸಿ ಈ ರೀತಿ ಬರೆದುಕೊಂಡಿದ್ದಾರೆ. “ನಮಸ್ತೇ ಕುಡ್ಲ, ಆದ್ಯ ಕುಲಾಲ್ ಎಂಬ ಮರೋಳಿಯ ಈ ಮಗುವಿನ ಧೈರ್ಯ ಮತ್ತು ಆಸಕ್ತಿಯನ್ನು ಗಮನಿಸಿ ನಿಜಕ್ಕೂ ನಾನು ಭಾವುಕನಾದೆ. ಇಷ್ಟು ಚಿಕ್ಕ ವಯಸ್ಸಿನಲ್ಲಿ (2.4 ವರ್ಷ) ಆಕೆ ತನ್ನ ಕೂದಲನ್ನು ಕ್ಯಾನ್ಸರ್ ರೋಗಿಗಳಿಗೆ ದಾನ ಮಾಡಿದ್ದಾಳೆ. ಸಮಾಜಕ್ಕೆ ಒಂದಲ್ಲ ಒಂದು ರೀತಿಯಲ್ಲಿ ಸೇವೆ ಸಲ್ಲಿಸಲು ನಮ್ಮಲ್ಲಿ ಅನೇಕರನ್ನು ಪ್ರೇರೇಪಿಸಿದ್ದಾಳೆ. ಮರೋಳಿಯ ಸುಮಲತಾ ಹಾಗೂ ಭರತ್ ಕುಲಾಲ್ ದಂಪತಿ ಅವಳನ್ನು ಸರಿಯಾಗಿ ಬೆಳೆಸುತ್ತಿದ್ದಾರೆ. ಅವಳು…
ಮಂಗಳೂರು: ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದುಬೈನಿಂದ ಆಗಮಿಸಿದ ಪ್ರಯಾಣಿಕರಿಂದ ಕೋಟಿ ರೂಪಾಯಿ ಬೆಲೆ ಬಾಳುವ ಚಿನ್ನವನ್ನ ವಶಕ್ಕೆ ಪಡೆಯಲಾಗಿದೆ. ಅಕ್ರಮವಾಗಿ ದುಬೈನಿಂದ ಚಿನ್ನವನ್ನು ಒಳ ಉಡುಪಿನಲ್ಲಿರಿಸಿ ತರುತ್ತಿದ್ದ ವೇಳೆ ವಶಕ್ಕೆ ಪಡೆಯಲಾಗಿದೆ. ಅಕ್ಟೋಬರ್ 18 ರಿಂದ ಅಕ್ಟೋಬರ್ 21 ರ ಮಧ್ಯೆ ಆಗಮಿಸಿದ ಐವರು ಪ್ರಯಾಣಿಕರಲ್ಲಿ ಬರೋಬ್ಬರಿ 1.59 ಕೋಟಿ ಮೌಲ್ಯದ 3124.540 ಗ್ರಾಂ ನ ಚಿನ್ನವನ್ನು ಪತ್ತೆ ಹಚ್ಚಲಾಗಿದ್ದು. ಇವರೆಲ್ಲರೂ ಅಕ್ರಮ ಚಿನ್ನ ಸಾಗಾಟ ನಡೆಸು ಉದ್ದೇಶದಿಂದ ಅದನ್ನು ಬೇರೆ ಬೇರೆ ರೂಪಕ್ಕೆ ಪರಿವರ್ತಿಸಿದ್ದಾಗಿ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ. ಆರೋಪಿಗಳು ಚಿನ್ನವನ್ನು ಪೇಸ್ಟ್ ಹಾಗೂ ಪೌಡರ್ ರೂಪಕ್ಕೆ ಬದಲಾಯಿಸಿ, ಒಳ ಉಡುಪಿನಲ್ಲಿ ಇರಿಸಿಕೊಂಡು ಸಾಗಿಸಲು ಯತ್ನಿಸಿದ್ದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ತಪಾಸಣೆ ವೇಳೆ ಅಕ್ರಮ ಚಿನ್ನ ಸಾಗಾಟ ನಡೆಸುತ್ತಿರುವ ವಿಚಾರ ಬೆಳಕಿಗೆ ಬಂದಿದ್ದು, ಪ್ರಯಾಣಿಕರ ಸಹಿತ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ.









