ಮಂಗಳೂರು: ಸಾವಿರಾರು ಹೋರಾಟಗಾರರು ಸುರತ್ಕಲ್ ಟೋಲ್ ಸಂಗ್ರಹ ವಿರೋಧಿಸಿ ಟೋಲ್’ಗೇಟ್’ಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು. ಬಿಜೆಪಿಗೆ ಧಿಕ್ಕಾರ, ನಳಿನ್ ಕುಮಾರ್ ಕಟೀಲ್’ಗೆ ಧಿಕ್ಕಾರ, ಕೂಡಲೇ ಟೋಲ್ ಸಂಗ್ರಹ ನಿಲ್ಲಿಸಬೇಕೆಂದು ಆಗ್ರಹಿಸಿದರು. ಕೆಲ ಹೊತ್ತು ಪೊಲೀಸರೊಂದಿಗೆ ವಾಗ್ದಾದ ನಡೆದು ನಂತರ ಆಕ್ರೋಶಿತ ಪ್ರತಿಭಟನಾಕಾರರು ಟೋಲ್’ಗೆ ಮುತ್ತಿಗೆ ಹಾಕಿ ಘೋಷಣೆ ಕೂಗಿದರು. ಭಾರೀ ಸಂಖ್ಯೆಯಲ್ಲಿ ನಿಯೋಜಿತ ಪೊಲೀಸರು ಪ್ರತಿಭಟನಾಕಾರರನ್ನು ನಿಯಂತ್ರಿಸಲು ಹರ ಸಾಹಸ ಪಟ್ಟರು. ನಂತರ ಹೋರಾಟ ಸಮಿತಿ ಮುಖಂಡರನ್ನು ಮತ್ತು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದರು.
Author: main-admin
ಬೆಂಗಳೂರು : ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಕಾರನ್ನು ತಡೆದು ಬೆದರಿಕೆ ಒಡ್ಡಿದ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಶಾಸಕ ಹರೀಶ್ ಪೂಂಜಾ ಅವರ ಕಾರನ್ನು ತಡೆದು ಬೆದರಿಕೆ ಒಡ್ಡಿದ ಆರೋಪಿ ರಿಯಾಜ್ ನನ್ನು ಈಗಾಗಲೇ ಬಂಧಿಸಲಾಗಿದ್ದು, ಪ್ರಕರಣದ ಹಿಂದೆ ಯಾರ್ಯಾರಿದ್ದಾರೆ ಎಂಬ ಸತ್ಯ ಹೊರಬರಬೇಕು ಎಂಬ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿ ಆದೇಶ ಹೊರಡಿಸಿದೆ. ಕೆಲ ದಿನಗಳ ಹಿಂದೆ ಶಾಸಕ ಹರೀಶ್ ಪೂಂಜಾ ಕಾರನ್ನು ಓವರ್ ಟೇಕ್ ಮಾಡುವ ಸಂದರ್ಭದಲ್ಲಿ ಶಾಸಕರಿದ್ದ ಕಾರು ತಡೆದು ಆರೋಪಿ ರಿಯಾಜ್ ಅವಾಚ್ಯವಾಗಿ ನಿಂದನೆ ಮಾಡಿ ಬೆದರಿಕೆ ಹಾಕಿದ್ದ. ಈ ಹಿನ್ನೆಲೆಯಲ್ಲಿ ಶಾಸಕರು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಬೆಳ್ತಂಗಡಿ: ವೇಣೂರಿನಲ್ಲಿ ವ್ಯಕ್ತಿಯೊಬ್ಬರ ಮೇಲೆ ತಂಡವೊಂದು ತಲವಾರು ದಾಳಿ ನಡೆಸಿದ ಘಟನೆ ನಡೆದಿದ್ದು, ಪ್ರಕರಣದ ಆರೋಪಿಗಳನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಹಾವೇರಿ ನಿವಾಸಿಗಳಾಗಿರುವ ಲಿಂಗಪ್ಪ ಗುರುಪಾದಯ್ಯ ಹಿರೇಮಠ ಹಾಗೂನಾಗರಾಜ ಬಸಪ್ಪ ಎಂಬವರಾಗಿದ್ದಾರೆ. ಗಾಯಾಳು ಅಂಡಂಜೆ ಗ್ರಾಮದ ನಿವಾಸಿ ರಾಜೇಂದ್ರ ಜೈನ್ ಎಂಬವರಾಗಿದ್ದಾರೆ. ಇವರು ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದ ವೇಳೆ ಕಾರಿನಲ್ಲಿ ಬಂದ ತಂಡ ತಲವಾರಿನಿಂದ ಹಲ್ಲೆ ನಡೆಸಿತ್ತು. ಬೊಬ್ಬೆ ಕೇಳಿ ಸ್ಥಳೀಯರು ಇವರನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಪ್ರಕರಣ ದಾಖಲಿಸಿ ಕೊಂಡ ವೇಣೂರು ಪೊಲೀಸರು ಹುಡುಕಾಟ ನಡೆಸಿ ಇದೀಗ ಆರೋಪಿಗಳನ್ನು ಬಂಧಿಸಿದ್ದಾರೆ.ರಾಜೇಂದ್ರ ಅವರು ಇತ್ತೀಚೆಗೆ ಹಾವೇರಿ ಮೂಲದ ಯುವತಿಯನ್ನು ವಿವಾಹವಾಗಿದ್ದು ಹಲ್ಲೆಗೆ ಸ್ಪಷ್ಟವಾದ ಕಾರಣಗಳು ಇನ್ನಷ್ಟೇ ತಿಳಿದು ಬರಬೇಕಾಗಿದೆ. ವೇಣೂರು ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.
ಮಂಗಳೂರು : ಮಳಲಿ ಮಸೀದಿ ಕಟ್ಟಡದಲ್ಲಿ ದೇವಾಲಯ ಹೋಲುವ ರಚನೆಗಳು ಕಂಡು ಬಂದಿರುವ ಹಿನ್ನೆೆಲೆಯಲ್ಲಿ ನ್ಯಾಯಾಲಯದಲ್ಲಿ ನಡೆಯುತ್ತಿರುವ ಪ್ರಕರಣದ ವಿಚಾರಣೆ ಸಂಬಂಧದ ತೀರ್ಪನ್ನು ಮಂಗಳೂರಿನ ನ್ಯಾಯಾಲಯ ನ.9ಕ್ಕೆೆ ಮುಂದೂಡಿದೆ. ಕೋರ್ಟ್ ಕಮಿಷನರ್ ಮೂಲಕ ಸರ್ವೆ ಮಾಡುವಂತೆ ವಿಎಚ್‌ಪಿ ಮನವಿ ಮಾಡಿತ್ತು. ಆ ಬಳಿಕ ಮಸೀದಿಯ ಜಾಗಕ್ಕೆೆ ಸಂಬಂಧಿಸಿದಂತೆ ವಕ್ಫ್ ಮತ್ತು ಸಿವಿಲ್ ನ್ಯಾಯಾಲಯದ ಅಧಿಕಾರದ ಬಗ್ಗೆೆ ವಾದ ವಿವಾದ ನಡೆದಿತ್ತು. ಈ ಕುರಿತಾದ ಆದೇಶವನ್ನು ನ್ಯಾಯಾಲಯ ಅ.17ಕ್ಕೆೆ ನಿಗದಿಗೊಳಿಸಿತ್ತು. ಇದೀಗ ಆದೇಶವನ್ನು ಮತ್ತೊಮ್ಮೆ ಮುಂದೂಡಲಾಗಿದೆ. ಈ ಹಿಂದೆ ಸೆಪ್ಟೆಂಬರ್ 27ರಂದು ಮಂಗಳೂರು ಕೋರ್ಟ್ ತೀರ್ಪನ್ನು ಮುಂದೂಡಿತ್ತು. ಇದೀಗ ಮತ್ತೆ ಮಂಗಳೂರು ಕೋರ್ಟ್ ತೀರ್ಪನ್ನು ಮುಂದೂಡಿದೆ.
ಮಂಗಳೂರು: ರಾಜ್ಯದ ಹಲವೆಡೆ ವಿವಿಧೆಡೆ ಜಾನುವಾರುಗಳಲ್ಲಿ ಹರಡುತ್ತಿರುವ ಚರ್ಮ ಗಂಟು ಕಾಯಿಲೆ ವೈರಾಣುವನ್ನು ನಿಯಂತ್ರಿಸಲು ಲಸಿಕೆ ಅಭಿಯಾನದ ಭಾಗವಾಗಿ ದಕ್ಷಿಣ ಕನ್ನಡ ಜಿಲ್ಲೆಗೆ 20,000 ಲಸಿಕೆ ಹಂಚಿಕೆಯಾಗಿದೆ. ಬೆಂಗಳೂರಿನಿಂದ ಸೋಮವಾರ ಸರಬರಾಜು ಆಗಲಿದ್ದು, ಮಂಗಳವಾರದಿಂದ ವಿತರಣೆ ನಡೆಯಲಿದೆ. ಭಾರತ ಸರ್ಕಾರದ ಮಾರ್ಗಸೂಚಿಯಂತೆ ರೋಗ ಕಾಣಿಸಿಕೊಂಡ 5 ಕಿ.ಮೀ. ಸುತ್ತಳತೆಯಲ್ಲಿ ಆರೋಗ್ಯವಂತ ಜಾನುವಾರುಗಳಿಗೆ ಲಸಿಕೆ ಹಾಕಬೇಕು ಹೀಗಾಗಿ ಮೊದಲ ’ಶಂಕಿತ’ ಚರ್ಮಗಂಟು ರೋಗ ಕಾಣಿಸಿಕೊಂಡ ಬಂಟ್ವಾಳ ತಾಲೂಕಿನ ಬಿಳಿಯೂರು ಸುತ್ತಲಿನ ಸುಮಾರು 5 ಕಿ.ಮೀ. ವ್ಯಾಪ್ತಿಯಲ್ಲಿ ಮತ್ತು ಕೆಲವೊಂದು ಗೋ ಶಾಲೆಗಳಲ್ಲಿ ಮೊದಲನೇ ಹಂತದಲ್ಲಿ ಲಸಿಕೆ ಹಂಚಿಕೆ ನಡೆಯಲಿದೆ. ಇದಾದ ಕೆಲವೇ ದಿನಗಳಲ್ಲಿ ಮತ್ತಷ್ಟು ಡೋಸ್ ಲಸಿಕೆ ಜಿಲ್ಲೆಗೆ ಸರಬರಾಜಾಗುವ ಸಾಧ್ಯತೆ ಇದೆ.ಕ್ಯಾಪ್ರಿಪಾಕ್ಸ್’ ಎನ್ನುವ ವೈರಾಣುವಿನಿಂದ ಹರಡುವ ಈ ರೋಗ, ಆಫ್ರಿಕಾ ದೇಶದಲ್ಲಿ 1929ರಲ್ಲಿ ಮೊದಲು ಕಾಣಿಸಿ ಕೊಂಡಿತು. ಭಾರತದಲ್ಲಿ 2019ರಲ್ಲಿ ಒಡಿಶಾದಲ್ಲಿ ಮೊದಲ ಬಾರಿ ಪತ್ತೆ ಯಾಗಿತ್ತು. ಬಾಧಿತ ಹಸುವಿನ ಹಾಲನ್ನು ಕುಡಿಯುವುದರಿಂದಲೂ ರೋಗ ಬರುವುದಿಲ್ಲ
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಮಳಲಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಮಂಗಳೂರಿನ 3 ನೇ ಹೆಚ್ಚುವರಿ ನ್ಯಾಯಾಲಯ ಇಂದು ತೀರ್ಪು ಪ್ರಕಟಿಸುವ ಸಾಧ್ಯತೆ ಇದೆ. ಮಳಲಿ ಮಸೀದಿ ವಿವಾದದ ವಿಚಾರಣೆ ನಡೆಸಿದ ಮಂಗಳೂರಿನ 3 ನೇ ಹೆಚ್ಚುವರಿ ನ್ಯಾಯಾಲಯ ಈಗಾಗಲೇ ವಾದ-ವಿವಾದ ಆಲಿಸಿದ್ದು, ಇಂದು ತೀರ್ಪು ಪ್ರಕಟಿಸಲಿದೆ. ಮಳಲಿ ಮಸೀದಿ ನವೀಕರಣ ಕಾಮಗಾರಿಯ ವೇಳೆ ದೇವಾಲಯ ಮಾದರಿ ರಚನೆ ಪತ್ತೆಯಾಗಿದೆ ಎನ್ನಲಾಗಿದ್ದು, ಆ ರಚನೆಯನ್ನು ಕೆಡವದಂತೆ ನಿರ್ಬಂಧ ವಿಧಿಸುವಂತೆ ಕೋರಿ ಧನಂಜಯ್ ಹಾಗೂ ಮನೋಜ್ ಕುಮಾರ್ ಸಿವಿಲ್ ನ್ಯಾಯಾಲಯಕ್ಕೆ ದಾವೆ ಹೂಡಿದ್ದರು.
ಗಾಂಧಿನಗರ: ಗುಜರಾತ್ ಬಯೋಟೆಕ್ನಾಲಜಿ ರಿಸರ್ಚ್ ಸೆಂಟರ್ ಭಾರತದಲ್ಲಿ ಓಮಿಕ್ರಾನ್ ಹೊಸ ರೂಪಾಂತರ BF.7ನ ಮೊದಲ ಪ್ರಕರಣವನ್ನು ಪತ್ತೆ ಮಾಡಿದೆ. ಈ ಬಗ್ಗೆ ಮಾಹಿತಿ ನೀಡಿರುವ ಗುಜರಾತ್ ಬಯೋಟೆಕ್ನಾಲಜಿ ರಿಸರ್ಚ್ ಸೆಂಟರ್‌ನ ಹಿರಿಯ ವಿಜ್ಞಾನಿ ಡಾ ಮಾಧವಿ ಜೋಶಿ ಅವರು, ಜನರು ಭಯಭೀತರಾಗಬಾರದು. ಆದರೆ ಮಾಸ್ಕ್ ಧರಿಸಲು, ಗುಂಪುಗೂಡುವುದನ್ನು ತಪ್ಪಿಸಬೇಕು ಹಾಗೂ ಹ್ಯಾಂಡ್ ಸ್ಯಾನಿಟೈಸರ್ ನೈರ್ಮಲ್ಯವನ್ನು ಅನುಸರಿಸಲು ವಿನಂತಿಸಿದ್ದಾರೆ. ಗಮನಾರ್ಹ ವಿಚಾರವೆಂದರೆ ಎರಡು ಹೊಸ ಓಮಿಕ್ರಾನ್ ಉಪ-ರೂಪಾಂತರಗಳು BF.7 ಮತ್ತು BA.5.1.7 ಇತ್ತೀಚೆಗೆ ಚೀನಾದಲ್ಲಿ ಪತ್ತೆಯಾಗಿವೆ.
ಮಣಿಪಾಲ: ನಿಷೇದಿತ ಮಾದಕ ವಸ್ತು ಎಂಡಿಎಂಎ ಪೌಡರ್ ಮಾರಾಟ ಮಾಡಲು ಯತ್ನಿಸುತ್ತಿದ್ದ ಓರ್ವ ಆರೋಪಿಯನ್ನು ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯ ಪೊಲೀಸರು ಹೆರ್ಗ ಗ್ರಾಮದ ಶೇಷಾದ್ರಿ ನಗರದಲ್ಲಿ ಬಂಧಿಸಿದ್ದಾರೆ. ಹಿರಿಯಡ್ಕ ಬೆಲ್ಲಾರ್ ದೇವಸ್ಥಾನ ಬೆಟ್ಟು ನಿವಾಸಿ ರಾಘವೇಂದ್ರ ದೇವಾಡಿಗ (41) ಬಂಧಿತ ಆರೋಪಿಯಾಗಿದ್ದಾನೆ.ಆರೋಪಿಯಿಂದ 4.61 ಗ್ರಾಂ ತೂಕದ ಎಂಡಿಎಂಎ ಪೌಡರ್, ಸ್ಕೂಟರ್, ಮೊಬೈಲ್ ಫೋನ್, ವೇವಿಂಗ್ ಮೆಷಿನ್, 2300 ರೂ. ನಗದು ವಶಪಡಿಸಿಕೊಳ್ಳಲಾಗಿದೆ. ಇವುಗಳ ಒಟ್ಟು ಮೌಲ್ಯ 59,545 ರೂ. ಎಂದು ಅಂದಾಜಿಸಲಾಗಿದೆ.ಈ ಬಗ್ಗೆ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುರತ್ಕಲ್ ಟೋಲ್ ಗೇಟ್ ಕುರಿತು ಅಕ್ಟೋಬರ್ 18 ರಂದು ನಡೆಯಲಿರುವ ಆಂದೋಲನದಲ್ಲಿ ಭಾಗವಹಿಸಲು ಪ್ರಮುಖರು ಪ್ರಚೋದನಕಾರಿ ಕರೆ ಮತ್ತು ಹೇಳಿಕೆಗಳನ್ನು ನೀಡಿದ ಹಿನ್ನೆಲೆಯಲ್ಲಿ, ಕೆಲವು ವ್ಯಕ್ತಿಗಳಿಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ಆಗಿರುವ ಡಿಸಿಪಿ ಮುಂದೆ 107 ಸಿಆರ್‌ಪಿಸಿ ಅಡಿಯಲ್ಲಿ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ ಎಂದು ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಹೇಳಿದ್ದಾರೆ. “ಪ್ರತಿಯೊಬ್ಬ ವ್ಯಕ್ತಿಯ ಖಾಸಗಿತನವನ್ನು ಗೌರವಿಸಬೇಕು ಮತ್ತು ಮಹಿಳೆಯರಿಗೆ ಹೆಚ್ಚು ಗೌರವ ನೀಡಬೇಕು. ನಾನು ಎಸಿಪಿ ಉತ್ತರ ಮಹೇಶ್ ಕುಮಾರ್ ಅವರಿಗೆ ಈ ಬಗ್ಗೆ ವಿಚಾರಣೆ ನಡೆಸಿ ವರದಿಯನ್ನು ಸಲ್ಲಿಸಲು ಕೇಳಿದ್ದೇನೆ. ನಾವು ಪ್ರತಿಯೊಂದು ಶಾಂತಿಯುತ ಪ್ರತಿಭಟನೆಗೆ ಅನುಕೂಲ ಮಾಡಿಕೊಟ್ಟಿದ್ದೇವೆ ಎಂಬುದಕ್ಕೆ ಕಮಿಷನರೇಟ್‌ನಲ್ಲಿರುವ ಪ್ರತಿಯೊಬ್ಬರೂ ಸಾಕ್ಷಿಯಾಗಿದ್ದಾರೆ ಎಂದು ಅವರು ಹೇಳಿದರು. 16 ಮಂದಿಗೆ ನೋಟಿಸ್ ಜಾರಿ ಮಾಡಲಾಗಿದೆ ಎಂದು ಶಶಿಕುಮಾರ್ ಮಾಹಿತಿ ನೀಡಿದ್ದಾರೆ.
ಮಂಗಳೂರು: ನಗರದ ಜಿಲ್ಲಾ ನ್ಯಾಯಾಲಯ ಸಂಕೀರ್ಣದ ಮುಖ್ಯ ಪ್ರವೇಶ ದ್ವಾರದಲ್ಲಿ ವಕೀಲರುಗಳು ಹಾಗೂ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧ ವಿಧಿಸಿ ಕೇವಲ ನ್ಯಾಯಧೀಶರಿಗಷ್ಟೇ ಪ್ರವೇಶ ಎಂಬ ಹೊಸ ನಿಯಮ ಜಾರಿಗೊಂಡಿದೆ. ಪರಿಣಾಮ ವಕೀಲರುಗಳು, ಸಾರ್ವಜನಿಕ ವಲಯದಲ್ಲಿ ತೀವ್ರ ವ್ಯಕ್ತವಾಗಿದೆ. ಜಿಲ್ಲಾ ನ್ಯಾಯಾಲಯ ಕಟ್ಟಡವು ಸರಕಾರಿ ಕಾರ್ಯಕ್ಕಾಗಿ ಸಾರ್ವಜನಿಕರಿಗೆ ಮುಕ್ತ ಪ್ರವೇಶ ಹೊಂದಿರುವ ಕಟ್ಟಡವಾಗಿದೆ. ಆದರೆ ನೂತನವಾಗಿ ಜಾರಿಯಾಗಿರುವ ನಿಯಮದಿಂದ ದ.ಕ.ಜಿಲ್ಲಾ ನ್ಯಾಯಧೀಶರು ಮಾತ್ರ ಮುಖ್ಯದ್ವಾರದಿಂದ ಪ್ರವೇಶಿಸಬಹುದು. ವಕೀಲರು ಸಹಿತ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧ ವಿಧಿಸಿರುವುದು ತೀವ್ರ ಅಸಮಾಧಾನವನ್ನು ಹುಟ್ಟು ಹಾಕಿದೆ. ನ್ಯಾಯಾಂಗದ ಅಂಗವಾಗಿರುವ ನ್ಯಾಯವಾದಿಗಳಿಗೂ ಕೂಡ ಪ್ರವೇಶ ನಿರ್ಬಂದಿಸಿರುವ ಜಿಲ್ಲಾ ನ್ಯಾಯಾಧೀಶ ರವೀಂದ್ರ ಎಂ. ಜೋಶಿಯವರ ಕ್ರಮ ತೀವ್ರ ಟೀಕೆಗೆ ಒಳಗಾಗಿದೆ. ತಕ್ಷಣ ಈ ನಾಮಫಲಕವನ್ನು ತೆರವು ಗೊಳಿಸುವಂತೆ ಈಗಾಗಲೇ ವಕೀಲರ ಸಂಘ ಒತ್ತಾಯಿಸಿದೆ. ಆದರೆ, ವಕೀಲರ ಸಂಘದ ಮನವಿಗೆ ಸೂಕ್ತ ಸ್ಪಂದನೆ ಈವರೆಗೆ ದೊರಕಿಲ್ಲ. ಈ ಬಗ್ಗೆ ಚರ್ಚೆ ನಡೆಸಲು ಮುಂದಿನ ವಾರ ವಕೀಲರ ಸಭೆ ಕೂಡ ಕರೆಯಲಾಗಿದೆ ಎನ್ನಲಾಗಿದೆ. ನ್ಯಾಯಾಲಯ…










