ಉಡುಪಿ: ಶುಕ್ರವಾರದಿಂದ ಮೊದಲ್ಗೊಂಡ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ ಮುಗಿಲು ಮುಟ್ಟಿದೆ. ನಿನ್ನೆ (ಶನಿವಾರ) ನಡೆದ ವಿಟ್ಲಪಿಂಡಿ ಮಹೋತ್ಸವದಲ್ಲಿ ಸಾವಿರಾರು ಭಕ್ತರು ಭಕ್ತಿಸಾಗರದಲ್ಲಿ ಮಿಂದೆದ್ದರು. ಪರ್ಯಾಯ ಮಠಾಧೀಶರಾದ ವಿದ್ಯಾವಲ್ಲಭ ತೀರ್ಥ ಸ್ವಾಮೀಜಿ ಶ್ರೀಕೃಷ್ಣನಿಗೆ ಯಶೋಧೆ ಅಲಂಕಾರ ಮಾಡಿ ವಿಶೇಷ ಪೂಜೆ ನಡೆಸಿದರೆ, ಸಾವಿರಾರು ಭಕ್ತರು ಕೃಷ್ಣನ ದರ್ಶನ ಮಾಡಿ ಕೃತಾರ್ಥರಾದರು. ಶನಿವಾರ ಮಧ್ಯಾಹ್ನ ಮೂರು ಗಂಟೆ ಸುಮಾರಿಗೆ ಕೃಷ್ಣಮಠದ ರಥಬೀದಿಗೆ ಭಕ್ತರ ದಂಡೇ ಹರಿದುಬಂತು. ರಥಬೀದಿಯಲ್ಲಿ ಹುಲಿ ಕುಣಿತ ಪ್ರದರ್ಶನ ನಡೆಯಿತು. ವಿವಿಧ ವೇಷಧಾರಿಗಳು ನೆರೆದ ಭಕ್ತರನ್ನು ರಂಜಿಸಿದರು. ರಥಬೀದಿಯಲ್ಲಿ ಸಾಂಪ್ರದಾಯಿಕ ಮೊಸರು ಕುಡಿಕೆ ಒಡೆಯುವ ಆಚರಣೆ ನಡೆಯಿತು. ಮಧ್ಯಾಹ್ನ ಮೂರೂವರೆ ಸುಮಾರಿಗೆ ಗೊಲ್ಲರು ಕೃಷ್ಣಮಠದ ಮುಂಭಾಗ ಮೊಸರು ಕುಡಿಕೆಗಳನ್ನು ಒಡೆಯುವುದರೊಂದಿಗೆ ವಿಟ್ಲಪಿಂಡಿಗೆ ಚಾಲನೆ ದೊರೆಯಿತು. ಬಳಿಕ ಕೃಷ್ಣನ ಮೃಣ್ಮಯ ಮೂರ್ತಿಯನ್ನು ಚಿನ್ನದ ರಥದಲ್ಲಿಟ್ಟು ವೈಭವದ ಶೋಭಾಯಾತ್ರೆ ನಡೆಸಲಾಯಿತು. ಕೊರೊನಾ ಮಹಾಮಾರಿ ಕಾರಣದಿಂದಾಗಿ ಕಳೆದ ಎರಡು ವರ್ಷ ಸರಳವಾಗಿ ಅಷ್ಟಮಿ ಆಚರಣೆ ನಡೆದಿತ್ತು. ಈ ಬಾರಿ ನಡೆದ ಉತ್ಸವದಲ್ಲಿ ಹೊರ ಜಿಲ್ಲೆ ಮತ್ತು…
Author: main-admin
ಹೊಸದಿಲ್ಲಿ: ಹಿಮಾಚಲಪ್ರದೇಶ ಮತ್ತು ಉತ್ತರಾಖಂಡದಲ್ಲಿ ಮೇಘಸ್ಪೋಟದಿಂದಾಗಿ ಸಾವನ್ನಪ್ಪುತ್ತಿರುವ ಸಂಖ್ಯೆ ಹೆಚ್ಚುತ್ತಲೇ ಇದ್ದು, ಸಾವಿನ ಸಂಖ್ಯೆ 31ಕ್ಕೆ ಏರಿಕೆಯಾಗಿದೆ. ಈ ಸಂಖ್ಯೆ ಇನ್ನಷ್ಟು ಹೆಚ್ಚುವ ಸಾಧ್ಯತೆ ಇದ್ದು, ಈಗಾಗಲೇ 18 ಮಂದಿ ಅವಶೇಷಗಳಡಿ ಸಿಲುಕಿ ನಾಪತ್ತೆಯಾಗಿದ್ದಾರೆ. ಶುಕ್ರವಾರ ತಡರಾತ್ರಿ ಜನರೆಲ್ಲರೂ ಗಾಢ ನಿದ್ರೆಯಲ್ಲಿದ್ದ ವೇಳೆ ಮೇಘಸ್ಪೋಟ ಸಂಭವಿಸಿದೆ. ಕಳೆದೆರಡು ದಿನಗಳಿಂದ ಅವಶೇಷಗಳಡಿ ಸಿಲುಕಿರುವವರ ಪತ್ತೆ ಕಾರ್ಯ ನಡೆಯುತ್ತಿದ್ದು, ಈ ಪೈಕಿ ಹಲವರ ಮೃತದೇಹ ಪತ್ತೆಯಾಗಿದೆ. ಹಿಮಾಚಲ ಪ್ರದೇಶದಲ್ಲಿ ಕನಿಷ್ಠ 22 ಮಂದಿ ಸಾವಿಗೀಡಾಗಿದ್ದು, 8 ಮಂದಿ ಅವಶೇಷಗಳಡಿ ಸಿಲುಕಿ ನಾಪತ್ತೆಯಾಗಿದ್ದಾರೆ. ಉತ್ತರಾಖಂಡ ಮತ್ತು ಒಡಿಶಾದಲ್ಲಿ ತಲಾ ನಾಲ್ವರು ಸಾವಿಗೀಡಾಗಿದ್ದಾರೆ. ಜಾರ್ಖಂಡ್‌ನಲ್ಲಿ ಒಬ್ಬರು ಮೃತಪಟ್ಟಿದ್ದಾರೆ. ಕುಶಾನ್ ಗ್ರಾಮದಲ್ಲಿ ಮನೆ ಕುಸಿದು ಬಿದ್ದು ಒಂದೇ ಕುಟುಂಬದ 8 ಮಂದಿ ಅವಶೇಷಗಳಡಿಯಲ್ಲಿ ಸಿಲುಕಿದ್ದಾರೆ. 2 ಲಕ್ಷ ಮನೆಗಳಿಗೆ ಹಾನಿಜೀವ, ಆಸ್ತಿಪಾಸ್ತಿ ಹಾನಿ, ಸಾರ್ವಜನಿಕ ಸೌಲಭ್ಯಗಳಿಗೂ ಹಾನಿ ಸಂಭವಿಸಿದೆ. ಬೃಹತ್ ಗಾತ್ರದ ಬಂಡೆಕಲ್ಲುಗಳು ಉರುಳಿದ ಪರಿಣಾಮ ರಸ್ತೆ ಸಂಪರ್ಕ ಕಡಿತಗೊಂಡಿದೆ. ಈ ವರ್ಷದ ಮಳೆಗೆ ಪ್ರವಾಹ ಪರಿಸ್ಥಿತಿಯಿಂದಾಗಿ ಅಸ್ಸಾಂನಲ್ಲಿ…
ಬೆಂಗಳೂರು: ರಾಜ್ಯ ಸರ್ಕಾರವು 7 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ಈ ಮೂಲಕ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದೆ. ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್.ಆರ್. ಉಮಾಶಂಕರ್ ಅವರನ್ನು ಸಹಕಾರ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿ, ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ.ಎಸ್.ಸೇಲ್ವಕುಮಾರ್ ಅವರನ್ನು ಲೋಕೋಪಯೋಗಿ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ. ಇನ್ನು ಆಹಾರ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕಪಿಲ್ ಮೋಹನ್ ಅವರಿಗೆ ಕಂದಾಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸ್ಥಾನ, ಸೆಲ್ವಕುಮಾರ್ ಅವರಿಗೆ ಕೌಶಲ್ಯಾಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹುದ್ದೆ ಹೆಚ್ಚುವರಿಯಾಗಿ ನೀಡಲಾಗಿದೆ. ಹಾಸನ ಜಿಲ್ಲಾಧಿಕಾರಿ ಗಿರೀಶ್ ಅವರನ್ನು ಕೆಐಎಡಿಬಿಸಿಇಒ, ಕಾರ್ಯಕಾರಿ ಸದಸ್ಯ ಸ್ಥಾನಕ್ಕೆ ವರ್ಗಾಯಿಸಲಾಗಿದೆ. ಅರ್ಚನಾ ಅವರನ್ನು ಹಾಸನ ಡಿಸಿಯಾಗಿ ವರ್ಗಾವಣೆ ಮಾಡಲಾಗಿದೆ. ಇನ್ನು ಡಿಪಿಎಆರ್ ಕಾರ್ಯದರ್ಶಿ ವಿ.ಪೊನ್ನುರಾಜ್ ಅವರಿಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯ ಕಾರ್ಯದರ್ಶಿ ಹುದ್ದೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ.
ಕಾಪು, ಆಗಸ್ಟ್ 20: ಫ್ಲ್ಯಾಟ್‌ನಿಂದ ಚಿನ್ನಾಭರಣ ಸಹಿತ ನಗ-ನಗದು ಕಳವುಗೈಯ್ಯುತ್ತಿದ್ದ ಯುವತಿ ಮತ್ತು ಯುವಕನೋರ್ವನನ್ನು ಪೊಲೀಸರು ಬಂಧಿಸಿದ ಘಟನೆ ಉಡುಪಿಯ ಕಾಪುವಿನಲ್ಲಿ ನಡೆದಿದೆ.ಮಂಗಳೂರು ಬಜಪೆ ಮೂಲದ ಪ್ರಸ್ತುತ ಮೂಳೂರು ಶ್ರೀ ಸಾಯಿ ವಾರ್ಚರ್ ಫ್ಲ್ಯಾಟ್‌ನಲ್ಲಿ ವಾಸವಿರುವ ವಾಜೀದ್ (25) ಮತ್ತು ಉಡುಪಿ ಕಡಿಯಾಳಿಯ ಬಾಡಿಗೆ ಮನೆಯ ವಾಸಿ ಶಹನಾಜ್ (32) ಬಂಧಿತ ಆರೋಪಿಗಳು. ಮೂಳೂರಿನ ಶ್ರೀ ಸಾಯಿ ವಾರ್ಚರ್ ಫ್ಲ್ಯಾಟ್‌ನಲ್ಲಿ ವಾಸವಿದ್ದ ಸರ್ಫ್‌ರಾಜ್ ಅವರು ಮನೆಯಲ್ಲಿ ಇಲ್ಲದಿದ್ದಾಗ ಅವರ ಮನೆಯ ಕಪಾಟಿನ ಡ್ರಾಯರ್‌ನಲ್ಲಿಟ್ಟಿದ್ದ 1.98 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಾಣೆಯಾಗಿರುವ ವಿಚಾರ ಮುನ್ನೆಲೆಗೆ ಬಂದಿದ್ದ ಕಾರಣ ಅವರು ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ತನಿಖೆ ನಡೆಸಿದ ಪೊಲೀಸರು ಸಿಸಿಟಿವಿ ಸಾಕ್ಷಿ ಆಧಾರದಲ್ಲಿ ದಾಖಲೆಗಳನ್ನು ಪರಿಶೀಲಿಸಿ ಸಂಶಯದ ಮೇರೆಗೆ ವಾಜೀದ್‌ನ್ನು ವಶಕ್ಕೆ ಪಡೆದಿದ್ದರು. ಆಗ ಆತ ಕಳ್ಳತನ ಮಾಡಿರುವುದನ್ನು ಬಾಯ್ಬಿಟ್ಟಿದ್ದ. ಈ ಕೃತ್ಯದಲ್ಲಿ ತನ್ನ ಸ್ನೇಹಿತೆ ಶಹನಾಜ್ ಕೂಡಾ ಕೈ ಜೋಡಿಸಿರುವುದಾಗಿ ತಿಳಿಸಿದ್ದ. ಎಸ್‌ಪಿ ಹಾಕೆ ಅಕ್ಷಯ್ ಮಚೀಂದ್ರಾ ,…
ಮಂಗಳೂರು: ಗಾಂಜಾ ಗ್ಯಾಂಗ್ ವೊಂದು ಯುವಕನನ್ನು ಮಾರಕಾಸ್ತ್ರದಿಂದ ಇರಿದು ಕೊಲೆಗೆ ಯತ್ನಿಸಿರುವ ಘಟನೆ ವಲಚ್ವಿಲ್ ಬಳಿ ನಡೆದಿದೆ. ನಿನ್ನೆ ರಾತ್ರಿ ಅಂಗಡಿಗೆ ಸಾಮಾನು ತರಲು ತೆರಳಿದ್ದ ಮಿಫ್ತಾಹ್ ಎಂಬ ಬಾಲಕನ ಮೇಲೆ ಹಲ್ಲೆಗೆ ಗಾಂಜಾ ಗ್ಯಾಂಗ್ ಮುಂದಾಗಿದ್ದು ಇದನ್ನು ತಡೆಯಲು ಯತ್ನಿಸಿದ ಆತನ ಮಾವ ಆಸೀಫ್ ಮೇಲೆ ಗಂಭೀರ ಹಲ್ಲೆ ನಡೆಸಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಘಟನಯಲ್ಲಿ ಅಸೀಫ್ ಸ್ಥಿತಿ ಗಂಭೀರವಾಗಿದ್ದು, ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದಾರೆ.ಈ ಕುರಿತು ಕಂಕನಾಡಿ ಠಾಣೆಯಲ್ಲಿ ಕೇಸ್ ದಾಖಲಾಗಿದೆ.ಮನ್ಸೂರ್ ಮತ್ತು ಆಶಿಕ್ ಎಂಬವರು ಕೃತ್ಯ ನಡೆಸಿದ್ದಾರೆ ಎನ್ನಲಾಗಿದೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಡಿಕೇರಿಗೆ ಭೇಟಿ ನೀಡಿದ್ದ ವೇಳೆ ಸಾವರ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂಬ ಕಾರಣಕ್ಕೆ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಅವರ ಕಾರಿನ ಮೇಲೆ ಮೊಟ್ಟೆ ಎಸೆದಿದ್ದರು. ಇದು ಕಾಂಗ್ರೆಸ್ ಕಾರ್ಯಕರ್ತರನ್ನು ಕೆರಳಿಸಿದೆ. ಅಲ್ಲದೆ ಆಗಸ್ಟ್ 26ರಂದು ಮಡಿಕೇರಿಯ ಜಿಲ್ಲಾ ರಕ್ಷಣಾಧಿಕಾರಿ ಕಚೇರಿ ಮುತ್ತಿಗೆ ಹಾಕುವುದಾಗಿ ಸಿದ್ದರಾಮಯ್ಯ ಗುಡುಗಿದ್ದು, ಇದಕ್ಕೆ ರಾಜ್ಯದ ವಿವಿಧ ಭಾಗಗಳಿಂದ ಸಾವಿರಾರು ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಆಗಮಿಸುವ ನಿರೀಕ್ಷೆ ಇದೆ. ಇದರ ಮಧ್ಯೆ ಕಾಂಗ್ರೆಸ್ ಕಾರ್ಯಕರ್ತರು ಶಾಸಕರ ಭವನದಲ್ಲೂ ಪ್ರತಿಭಟನೆ ನಡೆಸಬಹುದೆಂಬ ಕಾರಣಕ್ಕೆ ಅಲ್ಲಿ ಮೊಟ್ಟೆ ಬ್ಯಾನ್ ಮಾಡಲಾಗಿದೆ. ಅಲ್ಲದೆ ಕೆ.ಜಿ. ಬೋಪಯ್ಯ ಹಾಗೂ ಅಪ್ಪಚ್ಚು ರಂಜನ್ ಅವರ ಕೊಠಡಿಗಳಿಗೆ ಹೆಚ್ಚಿನ ಭದ್ರತೆ ಒದಗಿಸಲಾಗಿದೆ. ಈ ಹಿಂದೆ ಯತ್ನಾಳ್ ಅವರ ಕೊಠಡಿ ಮೇಲೆ ದಾಳಿ ನಡೆದಿದ್ದ ಕಾರಣ ಈ ಕ್ರಮ ಕೈಗೊಳ್ಳಲಾಗಿದೆ.
ಮಂಗಳೂರು: ಹಿಜಾಬ್ ಧರಿಸಿ ತರಗತಿಗೆ ಹಾಜರಾಗುವಂತಿಲ್ಲ ಎಂದು ಮಂಗಳೂರು ವಿಶ್ವವಿದ್ಯಾಲಯ ಕಳೆದ ಮೇ ತಿಂಗಳಿನಲ್ಲಿ ಸೂಚಿಸಿದ ಮೇಲೆ ವಿವಿ ಸಂಯೋಜಿತ ಸರ್ಕಾರಿ ಮತ್ತು ಅನುದಾನಿತ ಪದವಿ ಕಾಲೇಜುಗಳ ಎರಡು, ಮೂರು, ನಾಲ್ಕು ಮತ್ತು ಐದನೇ ಸೆಮಿಸ್ಟರ್‌ನ ಶೇ 16ರಷ್ಟು ಮುಸ್ಲಿಂ ವಿದ್ಯಾರ್ಥಿನಿಯರು ಟಿಸಿ ಪಡೆದುಕೊಂಡು, ಕಾಲೇಜಿನಿಂದ ಹೊರಗೆ ಉಳಿದಿದ್ದಾರೆ. ಮಾಹಿತಿ ಹಕ್ಕಿನ ಅಡಿಯಲ್ಲಿ ಈ ವಿಷಯ ಬಹಿರಂಗಗೊಂಡಿದೆ. 2020-21, 2021-22ನೇ ಸಾಲಿನಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರವೇಶ ಪಡೆದಿದ್ದ ಒಟ್ಟು 900 ಮುಸ್ಲಿಂ ವಿದ್ಯಾರ್ಥಿನಿಯರಲ್ಲಿ 145ವಿದ್ಯಾರ್ಥಿನಿಯರು ತಮ್ಮ ಟಿಸಿ ಪಡೆದಿದ್ದಾರೆ. ವಿವಿ ವ್ಯಾಪ್ತಿಯಲ್ಲಿ ಬರುವ ಕೊಡಗಿನ ಸರ್ಕಾರಿ, ಅನುದಾನಿತ 10 ಕಾಲೇಜುಗಳಲ್ಲಿ ಓದುತ್ತಿರುವ 113 ಮುಸ್ಲಿಂ ವಿದ್ಯಾರ್ಥಿನಿಯರು ಇದೇ ಕಾಲೇಜುಗಳಲ್ಲಿ ಶಿಕ್ಷಣ ಮುಂದುವರಿಸಿದ್ದಾರೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ 39 ಸರ್ಕಾರಿ ಕಾಲೇಜುಗಳು, 36 ಅನುದಾನಿತ ಕಾಲೇಜುಗಳು ಇವೆ. ಕಾಲೇಜು ಶಿಕ್ಷಣ ಅರ್ಧಕ್ಕೆ ಮೊಟಕುಗೊಳಿಸಿದವರಲ್ಲಿ ಸರ್ಕಾರಿ ಕಾಲೇಜಿನವರು ಶೇ 34ರಷ್ಟಿದ್ದರೆ, ಅನುದಾನಿತ ಕಾಲೇಜಿನ ಶೇ 8ರಷ್ಟು ಮುಸ್ಲಿಂ…
ಉಡುಪಿ: ವಿದ್ಯಾರ್ಥಿಯೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆಂಗವಳ್ಳಿ ಗ್ರಾಮದ ನಿಲ್ಸಕಲ್ ಎಂಬಲ್ಲಿ ನಡೆದಿದೆ. ಗಣೇಶ(14)ಆತ್ಮಹತ್ಯೆ ಮಾಡಿಕೊಂಡ ಬಾಲಕ.ಈತ ಹಾಲಾಡಿ ಪ್ರೌಡಶಾಲೆಯ 9ನೇ ತರಗತಿ ವಿದ್ಯಾರ್ಥಿಯಾಗಿದ್ದ. ಗಣೇಶ್ ಮನೆಯ ಪಕ್ಕದಲ್ಲಿ ಇರುವ ಸೌದೆ ತುಂಬುವ ಮಾಡಿನ ಒಳಗಡೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.ಶಾಲೆಗೆ ಹೋಗಲು ಮನಸ್ಸು ಇಲ್ಲದೆ ಮನನೊಂದು ವಿದ್ಯಾರ್ಥಿ ಈ ರೀತಿ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.
ಸುರತ್ಕಲ್:ವ್ಯಕ್ತಿಯೊಬ್ಬ ಕತ್ತಿಯಿಂದ ಇಬ್ಬರಿಗೆ ಗಾಯಗೊಳಿಸಿದ್ದಲ್ಲದೆ, ಬಸ್ಸಿಗೆ ಕಲ್ಲು ತೂರಾಟ ನಡೆಸಿದ ಘಟನೆ ಕಾನಾ ಸಮೀಪ ನಡೆದಿದೆ. ಗಾಯಾಳು ಸೇರಿ ಕತ್ತಿ ಬೀಸಿದ ವ್ಯಕ್ತಿಗೂ ಗಾಯವಾಗಿದ್ದು, ಇಬ್ಬರನ್ನೂ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸುರತ್ಕಲ್ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ,ತನಿಖೆ ಆರಂಭಿಸಿದ್ದು,ಆರೋಪಿಯ ತನಿಖೆ ನಡೆಯಲಿದೆ.ಕೃತ್ಯ ನಡೆಸಿರುವಾತ ಮಾನಸಿಕ ಅಸ್ವಸ್ಥ ಎಂದು ವರದಿಯಾಗಿದೆ. ಸುರತ್ಕಲ್ ಪೊಲೀಸ್ ಠಾಣೆಯ ಅಧಿಕಾರಿಗಳು ಆರೋಪಿಯ ವಿಚಾರಣೆ ನಡೆಸುತ್ತಿದ್ದಾರೆ.
ಸುಳ್ಯ: ತಾಲೂಕಿನ ಬೆಳ್ಳಾರೆ ಠಾಣಾ ವ್ಯಾಪ್ತಿಯಲ್ಲಿ ನಡೆದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಐವರು ಆರೋಪಿಗಳನ್ನು ಗುರುವಾರ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿದೆ ಎಂದು ತಿಳಿದು ಬಂದಿದೆ. ಪ್ರಕರಣದಲ್ಲಿ ಆರೋಪಿಗಳಾದ ನೌಫಲ್ (28) ಸೈನುಲ್ ಆಬಿದ್ (22), ಮೊಹಮ್ಮದ್ ಸೈಯದ್ (32), ಅಬ್ದುಲ್ ಬಶೀರ್ (29) ಮತ್ತು ರಿಯಾಜ್ (27) ಅವರನ್ನು ಎನ್‌ಐಎ ಆರು ದಿನಗಳ ಕಾಲ (ಆ.23ರ ವರೆಗೆ) ವಶಕ್ಕೆ ಪಡೆದುಕೊಂಡಿದೆ ಎನ್ನಲಾಗಿದೆ. ಜುಲೈ 27ರಂದು ಆರೋಪಿಗಳು ಬಿಜೆಪಿ ಯುವ ಮುಖಂಡ ಪ್ರವೀಣ್ ಅವರನ್ನು ರಸ್ತೆಯಲ್ಲಿ ಭೀಕರವಾಗಿ ಹತ್ಯೆಗೈದಿದ್ದರು. ಈ ಪ್ರಕರಣ ಸಂಬಂಧ ಕಾನೂನು ಬಾಹಿರ ಚಟುವಟಿಕೆಗಳ ತಡೆ (ಯುಎಪಿಎ) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಬೆಳ್ಳಾರೆ ಠಾಣೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರು. ಬಳಿಕ ಪ್ರಕರಣವನ್ನು ಎನ್ಐಎಗೆ ವರ್ಗಾಯಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ತನಿಖೆ ಚುರುಕುಗೊಳಿಸಿರುವ ಎನ್‌ಐಎ ಅಧಿಕಾರಿಗಳು ಗುರುವಾರ ಐವರು ಆರೋಪಿಗಳನ್ನು ಆರು ದಿನಗಳ ಕಾಲ ತಮ್ಮ ಕಸ್ಟಡಿಗೆ ಪಡೆದುಕೊಂಡು…










