ಉಡುಪಿ: ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ನಡೆದಿದ್ದ ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿ ಕರ್ತವ್ಯ ಲೋಪ ಎಸಗಿದ ಆರೋಪದಲ್ಲಿ ಬ್ರಹ್ಮಾವರ ಠಾಣೆ ಎಸ್ಸೈ ಸೇರಿದಂತೆ ಇಬ್ಬರನ್ನು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಅರುಣ್ ಕೆ. ಅಮಾನತುಗೊಳಿಸಿ ಆದೇಶ ನೀಡಿದ್ದಾರೆ. ಕೇರಳದ ಕೊಲ್ಲಂ ಮೂಲದ ಆರೋಪಿ ಬಿಜು ಮೋನು(45)ನನ್ನು ಪೊಲೀಸರು ಬ್ರಹ್ಮಾವರ ಠಾಣೆಗೆ ಕರೆದುಕೊಂಡು ಬಂದು, ಆತನ ವಿರುದ್ಧ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.ಚೇರ್ಕಾಡಿ ಗ್ರಾಮದ ಮಹಿಳೆಗೆ ಕಿರುಕುಳ ನೀಡಿದ ಆರೋಪ ಬಿಜು ಮೋನು ಮೇಲಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿ, ಆರೋಪಿಯನ್ನು ಬಂಧಿಸುವಾಗ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಸುಪ್ರೀಂ ಕೋರ್ಟ್ ನಿರ್ದೇಶನಗಳನ್ನು ಪೂರ್ಣವಾಗಿ ಪಾಲಿಸದ ಬ್ರಹ್ಮಾವರ ಪೊಲೀಸ್ ಠಾಣೆಯ ಉಪನಿರೀಕ್ಷಕ ಮಧು ಬಿ.ಇ. ಮತ್ತು ಪ್ರಭಾರ ಠಾಣಾಧಿಕಾರಿಯಾಗಿರುವ ಹೆಡ್‌ಕಾನ್ಸ್ಟೇಬಲ್ ಸುಜಾತ ಅವರನ್ನು ಅಮಾನತು ಮಾಡಲಾಗಿದೆ ಎಂದು ಎಸ್ಪಿ ಡಾ.ಅರುಣ್ ಕೆ. ತಿಳಿಸಿದ್ದಾರೆ. ಲಾಕಪ್‌ಡೆತ್ ಪ್ರಕರಣದ ತನಿಖೆಗಾಗಿ ಬೆಂಗಳೂರಿನ ಸಿಐಡಿ ಪೊಲೀಸರ ತಂಡ ನಿನ್ನೆಯೇ ಬ್ರಹ್ಮಾವರಕ್ಕೆ ಆಗಮಿಸಿದ್ದು ತನಿಖೆ ಚುರುಕುಗೊಳಿಸಿದೆ.
Author: main-admin
ಮಂಗಳೂರು : ನಿವೃತ್ತ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿದ್ದ(ADGP) ಕೆ.ಎಸ್.ಸುರೇಶ್ ಬಾಬು ನಿಧನರಾಗಿದ್ದಾರೆ. ಅವರು 1974 ರಿಂದ 2006 ರವರೆಗೆ ಭಾರತೀಯ ಪೊಲೀಸ್ ಸೇವೆಯ (IPS) ಕರ್ನಾಟಕ ಕೇಡರ್‌ನಲ್ಲಿ ಸೇವೆ ಸಲ್ಲಿಸಿದ್ದರು. ತಮ್ಮ ವಿಶಿಷ್ಟ ವೃತ್ತಿಜೀವನದಲ್ಲಿ ಐಜಿಪಿ (ದಕ್ಷಿಣ ವಲಯ, ಮೈಸೂರು), ಐಜಿಪಿ (ಪಶ್ಚಿಮ ವಲಯ ಮಂಗಳೂರು) ಐಜಿಪಿ (ಗುಪ್ತಚರ), ಬೆಂಗಳೂರು ನಗರದಲ್ಲಿ ಜಂಟಿ ಪೊಲೀಸ್ ಕಮಿಷನರ್ (ಅಪರಾಧ) ಮತ್ತು ಮೈಸೂರಿನಲ್ಲಿರುವ ಪೊಲೀಸ್ ಅಕಾಡೆಮಿಯ ನಿರ್ದೇಶಕ ಸ್ಥಾನ ಸೇರಿದಂತೆ ಹಲವಾರು ಪ್ರಮುಖ ಹುದ್ದೆಗಳನ್ನು ಸುರೇಶ್ ಬಾಬು ಅಲಂಕರಿಸಿದ್ದರು. 1999 ರಲ್ಲಿ ಗೌರವಾನ್ವಿತ ಸೇವೆಗಾಗಿ ಪೊಲೀಸ್ ಪದಕ ಮತ್ತು 2005 ರಲ್ಲಿ ವಿಶೇಷ ಸೇವೆಗಳಿಗಾಗಿ ರಾಷ್ಟ್ರಪತಿಗಳ ಪೊಲೀಸ್ ಪದಕವನ್ನು ಪಡೆದಿದ್ದರು. ನಿವೃತ್ತಿಯ ನಂತರ, ಕನ್ನಡ ದಿನಪತ್ರಿಕೆಯೊಂದರಲ್ಲಿ ಪೋಲೀಸ್‌ನ ವಿವಿಧ ಅಂಶಗಳ ಕುರಿತು ಜನಪ್ರಿಯ ಸಾಪ್ತಾಹಿಕ ಅಂಕಣವನ್ನು ಬರೆಯುವ ಮೂಲಕ ಸಮಾಜಕ್ಕೆ ಕೊಡುಗೆ ನೀಡುವುದನ್ನು ಮುಂದುವರೆಸಿದ್ದರು. ಬೆಂಗಳೂರಿನ NSLUSI, ಕರ್ನಾಟಕ ನ್ಯಾಯಾಂಗ ಅಕಾಡೆಮಿ, ಮೈಸೂರಿನ ಕರ್ನಾಟಕ ಪೊಲೀಸ್ ಅಕಾಡೆಮಿ, ಮಂಗಳೂರಿನ ಎಸ್‌ಡಿಎಂ ಕಾನೂನು ಕಾಲೇಜು ಮತ್ತು…
ಮಂಗಳೂರು : ಬಾಣಂತಿಯೊಬ್ಬಳು ಮಂಗಳೂರು ನಗರದ ಲೇಡಿಗೋಷನ್ ಆಸ್ಪತ್ರೆಯ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಗೊಂಡಿದ್ದಾರೆ. ಉಡುಪಿ ಜಿಲ್ಲೆಯ ಕಾರ್ಕಳದ ರಂಜಿತಾ ಆಚಾರ್ಯ (28) ಮೃತ ಮಹಿಳೆಯಾಗಿದ್ದಾಳೆ. ರಂಜಿತಾ ಅವರಿಗೆ ಅವಧಿ ಪೂರ್ವ ಪ್ರಸವವಾಗಿತ್ತು. ಅ.30ರಂದು ಸಿಸೇರಿಯನ್ ಮೂಲಕ ಹೆರಿಗೆ ನಡೆದಿತ್ತು. ಎನ್ ಐಸಿಯುವಿನಲ್ಲಿ ಅರೈಕೆಯಲ್ಲಿದ್ದ ಶಿಶು ನ.3ರಂದು ಮೃತಪಟ್ಟಿತ್ತು. ರಂಜಿತಾ ಅವರು ಸೋಮವಾರ ಆಸ್ಪತ್ರೆಯಿಂದ ಬಿಡುಗಡೆಗೊಳ್ಳಬೇಕಿತ್ತು. ಅಷ್ಟರಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ರಂಜಿತಾ ಅವರನ್ನು ಆಸ್ಪತ್ರೆಯಿಂದ ಕರೆದೊಯ್ಯಲು ಮನೆಯವರು ಕೂಡ ಲೇಡಿಗೋಷನ್ ಆಸ್ಪತ್ರೆಗೆ ಬಂದಿದ್ದರು. ಆದರೆ ರಂಜಿತಾ ಏಕಾಏಕಿ ನಾಲ್ಕನೇ ಮಹಡಿಯಿಂದ ಕೆಳಕ್ಕೆ ಹಾರಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ತಕ್ಷಣವೇ ಜಿಲ್ಲಾ ಸರ್ಕಾರಿ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅಷ್ಟರಲ್ಲೇ ಅವರು ಕೊನೆಯುಸಿರೆಳೆದಿದ್ದರು ಎಂದು ವೈದ್ಯರು ತಿಳಿಸಿದ್ದಾರೆ. ರಂಜಿತಾ ಅವರನ್ನು ಹೆರಿಗೆಗಾಗಿ ಮೊದಲು ಕಾರ್ಕಳದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಿಗೆ ಕೆಲವು ಗಂಭೀರ ಆರೋಗ್ಯ ಸಮಸ್ಯೆ ಇದ್ದುದರಿಂದ ಇಲ್ಲಿನ ಲೇಡಿಗೋಷನ್ ಆಸ್ಪತ್ರೆಗೆ ಅ.28ರಂದು ದಾಖಲು ಮಾಡಲಾಗಿತ್ತು.
ನವದೆಹಲಿ :ಸುಪ್ರೀಂಕೋರ್ಟ್’ನ 51ನೇ ಮುಖ್ಯ ನ್ಯಾಯಮೂರ್ತಿಯಾಗಿ ಸಂಜೀವ್ ಖನ್ನಾ ಅವರು ಪ್ರಮಾಣವಚನದ ಸ್ವೀಕರಿಸಿದ್ದಾರೆ. ಇಂದು ಬೆಳಗ್ಗೆ 10 ಗಂಟೆಗೆ ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಮಾಣ ವಚನ ಬೋಧಿಸಿದ್ದಾರೆ. ಭಾನುವಾರ ನಿವೃತ್ತರಾದ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಬದಲಿಗೆ ಅವರು ನೇಮಕಗೊಂಡಿದ್ದಾರೆ. ನ್ಯಾಯಮೂರ್ತಿ ಖನ್ನಾ ಅವರ ಅಧಿಕಾರಾವಧಿಯು ಮೇ 13, 2025 ರವರೆಗೆ ಇರುತ್ತದೆ. ನ್ಯಾಯಮೂರ್ತಿ ಚಂದ್ರಚೂಡ್ ಅವರು ನ್ಯಾಯಮೂರ್ತಿ ಖನ್ನಾ ಅವರ ಹೆಸರನ್ನು ಶಿಫಾರಸು ಮಾಡಿದ್ದರು ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ಅವರು ನ್ಯಾಯಮೂರ್ತಿ ಖನ್ನಾ ಅವರ ಹೆಸರನ್ನು ಅಕ್ಟೋಬರ್ 16 ರಂದು ಶಿಫಾರಸು ಮಾಡಿದ್ದರು ಮತ್ತು ಕೇಂದ್ರ ಸರ್ಕಾರ ಅಕ್ಟೋಬರ್ 24 ರಂದು ಅವರ ನೇಮಕಾತಿಯ ಅಧಿಸೂಚನೆಯನ್ನು ಹೊರಡಿಸಿತ್ತು. ಶುಕ್ರವಾರ ನ್ಯಾಯಮೂರ್ತಿ ಚಂದ್ರಚೂಡ್ ಅವರು ಮುಖ್ಯ ನ್ಯಾಯಮೂರ್ತಿಯಾಗಿ ಕೊನೆಯ ಕೆಲಸದ ದಿನವಾಗಿದ್ದು, ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ಗಳ ನ್ಯಾಯಾಧೀಶರು, ವಕೀಲರು ಮತ್ತು ಸಿಬ್ಬಂದಿ ಅವರಿಗೆ ಭಾವನಾತ್ಮಕ ಬೀಳ್ಕೊಟ್ಟರು. ನ್ಯಾಯಮೂರ್ತಿ ಖನ್ನಾ ಅವರು ಅನೇಕ ಐತಿಹಾಸಿಕ ನಿರ್ಧಾರಗಳ ಭಾಗವಾಗಿದ್ದರು…
ಮಂಗಳೂರು: ತನ್ನ ಪುಟ್ಟ ಮಗುವನ್ನೆತ್ತಿಕೊಂಡು ತಂದೆಯೋರ್ವರು ಗುರುಪುರ ನದಿಯ ಸೇತುವೆಯ ಮೇಲೇರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾದ ಘಟನೆ ರವಿವಾರ ಮಧ್ಯಾಹ್ನ ನಡೆದಿದೆ. ಕೈಕಂಬದ ನಿವಾಸಿ ಸಂದೀಪ್ ಎಂಬವರು ತಮ್ಮ 2 ವರ್ಷದ ಮಗುವನ್ನೆತ್ತಿಕೊಂಡು ಗುರುಪುರ ಸೇತುವೆಯ ಮೇಲೇರುವುದನ್ನು ಸ್ಥಳೀಯರು ಗಮನಿಸಿದ್ದಾರೆ. ಅವರು ಆತ್ಮಹತ್ಯೆಗೆ ಯತ್ನಿಸುತ್ತಿದ್ದಾರೆಂದು ತಿಳಿದು ಉಪಾಯದಿಂದ ಮನವೊಲಿಸಿ ಮಗು ಸಹಿತ ಅವರನ್ನು ರಕ್ಷಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಪೊಲೀಸರು ಸಂದೀಪ್ ಬಳಿ ವಿಚಾರಿಸಿದಾಗ ತಾನು ಮಗುವಿಗೆ ಹೊಳೆ ತೋರಿಸುವ ಉದ್ದೇಶದಿಂದ ಸೇತುವೆಯ ಮೇಲೇರಿರುವುದಾಗಿ ತಿಳಿಸಿದ್ದಾರೆ. ಬಳಿಕ ಪೊಲೀಸರು ಅವರಿಗೆ ಬುದ್ಧಿವಾದ ಹೇಳಿ ಮನೆಗೆ ಕಳುಹಿಸಿ ಕೊಟ್ಟಿದ್ದಾರೆ.
ಬಂಟ್ವಾಳ: ರಾತ್ರಿ ವೇಳೆ ಪ್ರೇಯಸಿಯ ಮನೆಗೆ ಬಂದ ಯುವಕನಿಗೆ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಘಟನೆ ಬಂಟ್ವಾಳದ ಸಜೀಪನಡು ಗ್ರಾಮದ ಕಂಚಿನಡ್ಕಪದವು ಎಂಬಲ್ಲಿ ನಡೆದಿದೆ. ಹಲ್ಲೆಯಿಂದ ತೀವ್ರ ಗಾಯಗೊಂಡ ಮಹಮ್ಮದ್ ಮುಸ್ತಾಪ(21)ನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮುಸ್ತಾಪನ ಸಂಬಂಧಿ ಹುಡುಗಿಯೊಬ್ಬಳು ಸಜೀಪನಡು ಗ್ರಾಮದ ಕಂಚಿನಡ್ಕಪದವಿನಲ್ಲಿರುವ ಮನೆಗೆ ಬರಲು ಹೇಳಿದಂತೆ ಸಜೀಪನಡು ಕಂಚಿನಡ್ಕಪದವು ಎಂಬಲ್ಲಿಗೆ ಬಂದಾಗ ಆರೋಪಿಗಳು ಮಹಮ್ಮದ್ ಮುಸ್ತಾಫನ ಬಗ್ಗೆ ಸಂಶಯಗೊಂಡವರು ಗುಂಪು ಸೇರಿಕೊಂಡು ಕಂಬಕ್ಕೆ ಹಗ್ಗದಿಂದ ಕಟ್ಟಿಹಾಕಿ ಹಲ್ಲೆ ನಡೆಸಿದ್ದು, ಘಟನೆ ಸಂಬಂಧ ವೀಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಕಂಬಕ್ಕೆ ಕಟ್ಟಿ ಹಾಕಿ ರಕ್ತ ಚಿಮ್ಮುವಂತೆ ಯುವಕರ ತಂಡವು ಅರೆಬೆತ್ತಲೆಗೊಳಿಸಿ ಹಲ್ಲೆ ನಡೆಸಿದ್ದಾರೆಂದು ತಿಳಿದುಬಂದಿದೆ.ಈ ಘಟನೆ ಸಂಬಂಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳಾದ ಮಹಮ್ಮದ್ ಸಪ್ಪಾನ್ ,ಮಹಮ್ಮದ್ ರಿಜ್ವಾನ್, ಇರ್ಪಾನ್, ಅನೀಸ್ ಅಹಮ್ಮದ್, ನಾಸೀರ್ ,ಶಾಕೀರ್ ಬಂಧಿಸಲಾಗಿದ್ದು. ಕೊಲೆಯತ್ನ ಪ್ರಕರಣ ದಾಖಲಾಗಿಸಲಾಗಿದೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಕಾಸರಗೋಡು : ದರೋಡೆಕೋರರ ತಂಡವನ್ನು ನಾಗರಿಕರ ಸಹಾಯದಿಂದ ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿದ ಘಟನೆ ವರ್ಕಾಡಿ ಸಮೀಪದ ಮಜೀರ್ ಪಳ್ಳದಿಂದ ನಡೆದಿದೆ. ಉಳ್ಳಾಲದ ಫೈಝಲ್ ಮತ್ತು ತುಮಕೂರಿನ ಶಹೀದ್ ಅಮಾನ್ ಬಂಧಿತರು . ನಾಲ್ವರು ಪರಾರಿಯಾಗಿದ್ದಾರೆ. ಬ್ಯಾಂಕ್ ದರೋಡೆಗೆ ಬಂದಿದ್ದರು ಎಂದು ಪೊಲೀಸರ ತನಿಖೆಯಿಂದ ತಿಳಿದುಬಂದಿದೆ . ಇಂದು ಮುಂಜಾನೆ ಮೂರು ಗಂಟೆ ಸುಮಾರಿಗೆ ಸಂಶಯಾಸ್ಪದವಾಗಿ ಕಂಡು ಬಂದ ಇವರನ್ನು ಗಸ್ತು ತಿರುಗುತ್ತಿದ್ದ ಮಂಜೇಶ್ವರ ಪೊಲೀಸರು ಕಾರನ್ನು ನಿಲ್ಲಿಸಿ ವಿಚಾರಿಸಿದಾಗ ನಾಲ್ವರು ಪರಾರಿಯಾಗಿದ್ದು , ಇಬ್ಬರನ್ನು ನಾಗರಿಕರ ಸಹಾಯದಿಂದ ಪೊಲೀಸರು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಸೆರೆ ಹಿಡಿಯುವವ ಮಧ್ಯೆ ಪೊಲೀಸರು ಮತ್ತು ದರೋಡೆಕೋರರ ನಡುವೆ ಹೊಡೆದಾಟ ನಡೆದಿದೆ. ಗಾಯಗೊಂಡ ಇಬ್ಬರು ದರೋಡೆಕೋರರನ್ನು ಕಾಸರಗೋಡು ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ . ಪರಾರಿಯಾದವರ ಬಗ್ಗೆ ಪೊಲೀಸರಿಗೆ ಮಾಹಿತಿ ಲಭಿಸಿದ್ದು ಇವರಿಗಾಗಿ ಶೋಧ ನಡೆಯುತ್ತಿದೆ. ಕಾರಿನಿಂದ ಗ್ಯಾಸ್ ಕಟ್ಟರ್ , ಸಿಲಿಂಡರ್ ಮೊದಲಾದವುಗಳು ಪತ್ತೆಯಾಗಿದೆ ಬ್ಯಾಂಕ್ ಸೇರಿದಂತೆ ಹಲವು ದರೋಡೆಗೆ ಇವರು ಹೊಂಚು ಹಾಕುತ್ತಿದ್ದರು ಎಂದು ಪೊಲೀಸರು…
ಬ್ರಹ್ಮಾವರ: ಮಹಿಳೆಗೆ ಚುಡಾಯಿಸಿದ ಆರೋಪದಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆಗೆ ಕರೆ ತಂದಿದ್ದ ಕೇರಳ ಮೂಲದ ಕಾರ್ಮಿಕನೊಬ್ಬ ಇಂದು ಸೆಲ್‌ನ ಬಾತ್ ರೂಮಿನೊಳಗೆ ಮೃತಪಟ್ಟ ಘಟನೆ ಸಂಭವಿಸಿದೆ. ಮೃತರನ್ನು ಕೇರಳ ರಾಜ್ಯ ಕೊಲ್ಲಂ ಮೂಲದ ಬಿಜು ಮೋಹನ್ (42) ಎಂದು ಗುರುತಿಸಲಾಗಿದೆ. ಇವರು ಹಂಗಾರಕಟ್ಟೆ ಮೀನು ಫ್ಯಾಕ್ಟರಿಯಲ್ಲಿ ಕೆಲಸ ಮಾಡಿಕೊಂಡಿದ್ದು, ಮೂರು ದಿನಗಳ ಹಿಂದೆಯಷ್ಟೆ ಇಲ್ಲಿಗೆ ಕೆಲಸಕ್ಕೆ ಸೇರಿಕೊಂಡಿದ್ದರು. ಸೂರಬೆಟ್ಟು ಎಂಬಲ್ಲಿನ ಬಾಡಿಗೆ ಮನೆಯಲ್ಲಿ ವಾಸವಿದ್ದ ಬಿಜು ಮೋಹನ್, ನವೆಂಬರ್ 9 ರಂದು ರಾತ್ರಿ ವೇಳೆ ಅಲ್ಲೇ ಸಮೀಪದ ಮನೆಯಲ್ಲಿ ವಾಸವಿದ್ದ ಮಹಿಳೆಯನ್ನು ಚುಡಾಯಿಸಿದ್ದರು ಎಂದು ಆರೋಪಿಸಲಾಗಿದೆ. ಆ ವೇಳೆ ಮಹಿಳೆ ಬೊಬ್ಬೆ ಹಾಕಿದ್ದು, ಸ್ಥಳೀಯರು ಜಮಾಯಿಸಿ ಬಿಜು ಮೋಹನ್‌ನನ್ನು ಹಿಡಿದು ಮನೆಯೊಳಗೆ ಕೂಡಿ ಹಾಕಿದ್ದರು. ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು, ಆರೋಪಿಯನ್ನು ವಶಕ್ಕೆ ಪಡೆದು, ಠಾಣೆಗೆ ಕರೆದೊಯ್ದಿದ್ದರು ಎಂದು ತಿಳಿದುಬಂದಿದೆ. ಮದ್ಯ ಸೇವಿಸಿದ್ದರೆನ್ನಲಾದ ಬಿಜು ಮೋಹನ್ ರನ್ನು ಸೆಲ್‌ನಲ್ಲಿ ಇರಿಸಲಾಗಿದ್ದು, ಇಂದು ನಸುಕಿನ ವೇಳೆ 3:30ರ ಸುಮಾರಿಗೆ…
ಕಡಬ: ಭೂವಿವಾದಕ್ಕೆ ಸಂಬಂಧಿಸಿದಂತೆ ಕಡಬ ತಾಲೂಕಿನ ಗೋಳಿತೊಟ್ಟು, ಆಲಂತಾಯ ಗ್ರಾಮದ ಪೆರ್ಲ ನಿವಾಸಿ ಪ್ರಗತಿಪರ ಕೃಷಿಕ ರಮೇಶ ಗೌಡ ಎಂಬವರನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಪ್ರಮುಖ ಆರೋಪಿ ಪೆರ್ಲ ಕಲ್ಲಂಡದ ಹರೀಶ (29) ಎಂಬಾತನನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ. ನವೆಂಬರ್ 8ರಂದು ರಾತ್ರಿ ಸ್ಕೂಟರ್‌ನಲ್ಲಿ ಬರುತ್ತಿದ್ದ ರಮೇಶ ಗೌಡರನ್ನು ದಾರಿಯಲ್ಲಿ ಕಾದು ಕುಳಿತು ಅಟ್ಟಾಡಿಸಿ, ಕತ್ತಿಯಿಂದ ಕಡಿದು ಕೊಲೆ ಮಾಡಲಾಗಿತ್ತು. ಈ ಬಗ್ಗೆ ಶ್ರೀಧರ ಗೌಡರ ಪತ್ನಿ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದು, ಈ ಕೊಲೆ ಪ್ರಕರಣದಲ್ಲಿ ಆರೋಪಿ ಹರೀಶ ಸೇರಿದಂತೆ ಆತನ ಸಹೋದರಿಯ ಪತಿ ಸಂತೋಷ್ ಹಾಗೂ ಧರ್ಣಪ್ಪ ಅಲಿಯಾಸ್ ಬೆಳಿಯಪ್ಪ ಗೌಡ ಎಂಬವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿದ್ದಾರೆ. ಕೊಲೆ ಆರೋಪಿ ಹರೀಶನ ಮನೆಯವರಿಗೂ ತನ್ನ ಪತಿಗೂ ಸುಮಾರು 7-8 ತಿಂಗಳ ಹಿಂದೆ ರಸ್ತೆಗೆ ನೀರಿನ ಪೈಪ್ ಅಳವಡಿಸುವ ಮನಸ್ತಾಪವಿತ್ತು. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿತ್ತು. ಆ ಬಳಿಕ ಮರವೊಂದನ್ನು ಕಡಿಯುವ ವಿಚಾರದಲ್ಲಿ ಮತ್ತೆ ಮನಸ್ತಾಪ…
ಮುಲ್ಕಿ: ನಗರ ಪಂಚಾಯಿತಿಯ ಒಳ ರಸ್ತೆಯ ಪಂಚಮಹಲ್ ರಸ್ತೆಯ ಪುಂಡಲಿಕ ಕಾಮತ್ ಅಂಗಡಿಯ ತಿರುವಿನಲ್ಲಿ 407 ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಯಲ್ಲಿ ಹೂತು ಹೋಗಿ ಸುಮಾರು 2 ಗಂಟೆಗೂ ಹೆಚ್ಚು ಕಾಲ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿತು. ವೆಂಕಟರಮಣ ದೇವಸ್ಥಾನದ ಕಡೆಯಿಂದ ಮುಲ್ಕಿ ಕೆ ಎಸ್ ರಾವ್ ನಗರದ ಕಡೆ ಕೂಲಿ ಕಾರ್ಮಿಕರನ್ನು ಹೇರಿಕೊಂಡು ಕಾಂಕ್ರೀಟ್ ಮಷೀನ್ ಸಾಗಾಟ ಮಾಡುತ್ತಿದ್ದ ಟೆಂಪೋ ರಸ್ತೆ ತಿರುವಿನಲ್ಲಿ ಚಕ್ರ ಕೂತು ಹೋಗಿದೆ. ಈ ಸಂದರ್ಭ ಟೆಂಪೋ ಹಿಂದುಗಡೆ ಕುಳಿತಿದ್ದ ಮಹಿಳೆಯೊಬ್ಬರು ಪವಾಡ ಸದೃಶ ಪಾರಾಗಿದ್ದಾರೆ. ಬಳಿಕ ಜಾಕ್ ಅಳವಡಿಸಿ ಟೆಂಪೋವನ್ನು ಮೇಲೆತ್ತಲಾಯಿತು. ಈ ಭಾಗದ ಅಪಾಯಕಾರಿ ರಸ್ತೆ ತಿರುವಿನಲ್ಲಿ ಅನೇಕ ಸಣ್ಣಪುಟ್ಟ ಅಪಘಾತಗಳು ಸಂಭವಿಸಿದ್ದು ರಸ್ತೆ ಅಗಲೀಕರಣ ಗೊಳಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.