Author: main-admin

ಕಾಪು ತಾಲೂಕು ಮುದರಂಗಡಿಯ ಸೇಂಟ್ ಕ್ಷೇವಿಯರ್ ಚರ್ಚ್‌ ಕಾಂಪ್ಲೆಕ್ಸ್‌ನಲ್ಲಿ ನಡೆದ ಪ್ರಿನ್ಸ್ ಎಂಟರ್ಪ್ರೈಸಸ್ ಮಾಲೀಕ ಡೇವಿಡ್ ಡಿಸೋಜಾ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ. ಬೈಂದೂರಿನ ಯಡ್ತರೆ ನಿವಾಸಿ ಲೋಕೇಶ್ ತೇಜ ಕೊಠಾರಿ (42) ಬಂಧಿತ ಆರೋಪಿ. ಆಗಸ್ಟ್ 21ರಂದು ವಿಶೇಷ ಕರ್ತವ್ಯದಲ್ಲಿದ್ದ ಕಾರ್ಕಳ–ಪಡುಬಿದ್ರೆ ಪೊಲೀಸರು ಬೈಂದೂರು ತಾಲೂಕಿನ ಯಡ್ತರೆ ಗ್ರಾಮದಲ್ಲಿ ಆರೋಪಿಯನ್ನು ವಶಕ್ಕೆ ಪಡೆದು, ಪ್ರಕರಣದ ತನಿಖಾಧಿಕಾರಿಗಳ ಮುಂದೆ ಹಾಜರುಪಡಿಸಿದ್ದಾರೆ. ಪೊಲೀಸರ ಪ್ರಕಾರ, ಲೋಕೇಶ್ ತೇಜ ಕೊಠಾರಿ ಈ ಹಿಂದೆ ಬಾಂಬೆಯಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಪ್ರಕರಣದ ಮತ್ತೋರ್ವ ಆರೋಪಿ ಕಿಶೋರ್ ರಾಮ ಪೂಜಾರಿ ಅವರ ಪರಿಚಯವಾಗಿದ್ದು, ಇಬ್ಬರೂ ಸ್ನೇಹಿತರಾಗಿದ್ದರು. ಕೊಲೆ ಕೃತ್ಯಕ್ಕೆ ಸಂಬಂಧಿಸಿದಂತೆ ನೇರವಾಗಿ ಭಾಗಿಯಾಗಿದ್ದ ಅನ್ಮೋಲ್ ರಸ್ತೋಗಿ ಹಾಗೂ ರಾಜು ಅವರಿಗೆ ಮೋಟಾರ್ ಸೈಕಲ್‌ಗಳನ್ನು ಒದಗಿಸುವ ಮೂಲಕ ಇತರ ಆರೋಪಿಗಳೊಂದಿಗೆ ಸೇರಿ ಅಪರಾಧಿಕ ಒಳಸಂಚಿನಲ್ಲಿ ಭಾಗಿಯಾಗಿದ್ದಾನೆ ಎಂದು ತನಿಖೆಯಲ್ಲಿ ತಿಳಿದುಬಂದಿದೆ. ಆತನಿಂದ ಕೃತ್ಯಕ್ಕೆ ಬಳಸಲಾಗಿದೆ ಎನ್ನಲಾದ ಮೊಬೈಲ್ ಫೋನ್‌ಗಳನ್ನು ಹಾಗೂ ಮೋಟಾರ್ ಸೈಕಲ್‌ನ…

Read More

ಮಂಗಳೂರು: ದಕ್ಷಿಣ ರೈಲ್ವೆ ಹಾಗೂ ನೈಋತ್ಯ ರೈಲ್ವೆ ವಲಯಗಳ ನಡುವೆ ಹಂಚಿಕೆಯಾಗಿದ್ದ ಕರಾವಳಿಯ ರೈಲ್ವೆ ಜಾಲವನ್ನು ಕೊನೆಗೂ ಒಂದೇ ಆಡಳಿತಾತ್ಮಕ ವಿಭಾಗದಡಿ ತರಲು ಭಾರತೀಯ ರೈಲ್ವೆ ಪ್ರಮುಖ ನಿರ್ಧಾರ ಕೈಗೊಂಡಿದೆ. ಉಳ್ಳಾಲದವರೆಗಿನ ಮಂಗಳೂರು ರೈಲು ಪ್ರದೇಶವನ್ನು ಪಾಲಕ್ಕಾಡ್ ವಿಭಾಗದಿಂದ ನೈಋತ್ಯ ರೈಲ್ವೆಯ ಮೈಸೂರು ವಿಭಾಗಕ್ಕೆ ವರ್ಗಾಯಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ತಿಳಿಸಿದ್ದಾರೆ. ಇಂಟರ್‌ಚೇಂಜ್ ಪಾಯಿಂಟ್ ಬದಲಾವಣೆಪ್ರಸ್ತುತ ಪಡೀಲ್‌ನಲ್ಲಿರುವ ದಕ್ಷಿಣ ಹಾಗೂ ನೈಋತ್ಯ ರೈಲ್ವೆ ವಲಯಗಳ ನಡುವಿನ ಪರಿವರ್ತನಾ ಕೇಂದ್ರ (ಇಂಟರ್‌ಚೇಂಜ್ ಪಾಯಿಂಟ್) ಶೀಘ್ರದಲ್ಲೇ ಉಳ್ಳಾಲಕ್ಕೆ ಸ್ಥಳಾಂತರಗೊಳ್ಳಲಿದೆ. ಈ ಬದಲಾವಣೆಗೆ ಸಂಬಂಧಿಸಿದಂತೆ ರೈಲ್ವೆ ಸಚಿವಾಲಯದಿಂದ ಶೀಘ್ರದಲ್ಲೇ ಅಧಿಕೃತ ಅಧಿಸೂಚನೆ ಹೊರಬೀಳುವ ನಿರೀಕ್ಷೆಯಿದೆ. ಇದೇ ವೇಳೆ, ತೋಕೂರು ರೈಲು ನಿಲ್ದಾಣವು ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ (KRCL) ವ್ಯಾಪ್ತಿಯಲ್ಲಿಯೇ ಮುಂದುವರಿಯಲಿದೆ. ಕೊಂಕಣ ರೈಲ್ವೆ ಮತ್ತು ನೈಋತ್ಯ ರೈಲ್ವೆ ನಡುವಿನ ಪ್ರಮುಖ ವಿನಿಮಯ ಕೇಂದ್ರವಾಗಿ ತೋಕೂರು ಸೇವೆ ಸಲ್ಲಿಸಲಿದೆ. ಮಂಗಳೂರು ರೈಲು ಜಾಲವನ್ನು ಒಂದೇ ಸೂರಿನಡಿ ತರಬೇಕೆಂಬುದು ಕರಾವಳಿ…

Read More

ಉಡುಪಿ: ಜಾಗ ಖರೀದಿಸುವ ಉದ್ದೇಶದಿಂದ ಉಡುಪಿಗೆ ಬಂದಿದ್ದ ಕೇರಳ ಮೂಲದ ಶ್ರುತಿ ವಿ. (37) ಎಂಬವರಿಗೆ ಸೈಬರ್ ವಂಚಕರು ಬ್ಯಾಂಕ್ ಅಧಿಕಾರಿ ಎಂದು ನಂಬಿಸಿ ₹4 ಲಕ್ಷ ವಂಚಿಸಿರುವ ಘಟನೆ ನಡೆದಿದೆ. ಶ್ರುತಿ ಅವರು ಕಟಪಾಡಿಯ ರಮಾನಂದ ಶೆಟ್ಟಿ ಅವರಿಗೆ ಮೂರು ಚೆಕ್‌ಗಳನ್ನು ನೀಡಿದ್ದರು. ಈ ಚೆಕ್‌ಗಳನ್ನು ಪಾಸ್ ಮಾಡುವ ಕುರಿತು ಮಾಹಿತಿ ಪಡೆಯಲು ದಿನಾಂಕ 19-08-2026ರಂದು ಗೂಗಲ್ ಮೂಲಕ ಬ್ಯಾಂಕ್‌ನ ನಂಬರ್ ಹುಡುಕಿ, 08409615973ಕ್ಕೆ ಕರೆ ಮಾಡಿದ್ದಾರೆ. ಕರೆ ಸ್ವೀಕರಿಸಿದ ವ್ಯಕ್ತಿ ತಾನು ಬ್ಯಾಂಕ್ ಅಧಿಕಾರಿ ಎಂದು ನಂಬಿಸಿ, ಲಿಂಕ್‌ವೊಂದನ್ನು ಕಳುಹಿಸಿ ಅದನ್ನು ಓಪನ್ ಮಾಡುವಂತೆ ತಿಳಿಸಿದ್ದಾನೆ. ನಂತರ YONO APP ಮೂಲಕ ‘Proceed’ ಮಾಡುವಂತೆ ಸೂಚಿಸಿದ ಹಿನ್ನೆಲೆಯಲ್ಲಿ ಶ್ರುತಿ ಅವರು ₹4 ಲಕ್ಷದ ವಹಿವಾಟು ನಡೆಸಿದ್ದಾರೆ. ಬಳಿಕ ಅವರ ಬ್ಯಾಂಕ್ ಖಾತೆಯಿಂದ ₹4 ಲಕ್ಷ ಹಣ ವರ್ಗಾವಣೆಯಾಗಿರುವುದು ಗಮನಕ್ಕೆ ಬಂದಿದೆ. ತಕ್ಷಣ ಎಸ್‌ಬಿಐ ಬ್ಯಾಂಕ್‌ಗೆ ತೆರಳಿ ವಿಚಾರಿಸಿದಾಗ ಇದು ಆನ್‌ಲೈನ್ ವಂಚನೆ ಎಂದು ತಿಳಿದುಬಂದಿದೆ. ಸೈಬರ್ ವಂಚಕರು ಹಣ…

Read More

ಸುಳ್ಯ: ತಾಲೂಕಿನ ಐವರ್ನಾಡು ಗ್ರಾಮದಲ್ಲಿ ಕಾಡಾನೆ ಓಡಿಸುವ ಕಾರ್ಯಾಚರಣೆಯ ವೇಳೆ ಅರಣ್ಯ ಇಲಾಖೆ ಸಿಬ್ಬಂದಿ ಹಾರಿಸಿದ ಗುಂಡು ಇಬ್ಬರಿಗೆ ತಗುಲಿದೆ. ಓರ್ವನಿಗೆ ಗಾಯವಾಗಿದ್ದು, ಮತ್ತೊಬ್ಬ ಅದೃಷ್ಟವಶಾತ್​​ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಘಟನೆಯಿಂದ ಅರಣ್ಯ ಇಲಾಖೆ ಮತ್ತೆ ಎಡವಟ್ಟು ಮಾಡಿಕೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಐವರ್ನಾಡು ಗ್ರಾಮದ ಬೆಂಗಮಲೆ ಎಂಬಲ್ಲಿ ಕಾಡಾನೆಗಳನ್ನು ಕಾಡಿಗೆ ಓಡಿಸುವ ಕಾರ್ಯಾಚರಣೆ ವೇಳೆ ಅರಣ್ಯ ಸಿಬ್ಬಂದಿ ಹಾರಿಸಿದ ಗುಂಡು ತಗುಲಿ ಬೈಕ್ ಸವಾರನೊಬ್ಬ ಗಾಯಗೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮತ್ತೊಬ್ಬ ಸವಾರನ ಶರ್ಟ್ ಜೇಬಿನಲ್ಲಿದ್ದ ಮೊಬೈಲ್‌ಗೆ ಗುಂಡು ತಗುಲಿದ್ದು, ಆತ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಸುಮಾರು ನಾಲ್ಕೈದು ದಿನಗಳ ಹಿಂದೆ ಐವರ್ನಾಡು ವ್ಯಾಪ್ತಿಯಲ್ಲಿ ಅರಣ್ಯ ಸಿಬ್ಬಂದಿ ಕಾಡಾನೆಗಳನ್ನು ಓಡಿಸಲು ಕಾರ್ಯಾಚರಣೆ ನಡೆಸುತ್ತಿದ್ದರು. ಈ ವೇಳೆ ಸಿಬ್ಬಂದಿ ಹಾರಿಸಿದ ಗುಂಡು, ಅದೇ ಮಾರ್ಗವಾಗಿ ಬೈಕ್‌ನಲ್ಲಿ ತೆರಳುತ್ತಿದ್ದ ರಾಘವ ಪ್ರಭು ಎಂಬುವವರ ಕಾಲಿಗೆ ತಗುಲಿದೆ. ತಕ್ಷಣವೇ ಗಾಯಗೊಂಡ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅರಣ್ಯಾಧಿಕಾರಿಗಳೇ ಚಿಕಿತ್ಸಾ ವೆಚ್ಚವನ್ನು…

Read More

ಬಂಟ್ವಾಳ: ಬಂಟ್ವಾಳ ಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 16 ವರ್ಷದ ಅಪ್ರಾಪ್ತ ಬಾಲಕಿಯನ್ನು 47 ವರ್ಷದ ಅಪರಿಚಿತ ವ್ಯಕ್ತಿ ಹಿಂಬಾಲಿಸಿದ ಆರೋಪದ ಮೇಲೆ ಬಂಟ್ವಾಳ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಾಲಕಿಯ ತಾಯಿ ನೀಡಿದ ದೂರಿನ ಪ್ರಕಾರ, ಕಳೆದ ಕೆಲವು ದಿನಗಳಿಂದ ಬಾಲಕಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಅಪರಿಚಿತ ಮಧ್ಯವಯಸ್ಕ ವ್ಯಕ್ತಿಯೊಬ್ಬ ಆಕೆಯನ್ನು ಹಿಂಬಾಲಿಸುತ್ತಿದ್ದ. ಆಗಸ್ಟ್ 19, 2026 ರ ಸಂಜೆ ಬಾಲಕಿ ಕಲ್ಲಡ್ಕ ಬಸ್ ನಿಲ್ದಾಣಕ್ಕೆ ಬಂದಾಗ, ಅದೇ ಅಪರಿಚಿತ ವ್ಯಕ್ತಿ ಆಕೆಯನ್ನು ಗಮನಿಸುತ್ತಿದ್ದ ಎನ್ನಲಾಗಿದೆ. ಇದರಿಂದ ಭಯಗೊಂಡ ಬಾಲಕಿ ತಾಯಿ ಕೆಲಸ ಮಾಡುತ್ತಿದ್ದಲ್ಲಿಗೆ ಹೋಗಿ ತಿಳಿಸಿದ್ದಾಳೆ. ಬಳಿಕ ದೂರುದಾರರು ತನ್ನ ಕಛೇರಿಯ ಮಾಲಿಕರೊಂದಿಗೆ ಬಸ್ ನಿಲ್ದಾಣದ ಬಳಿ ಬಂದಾಗ ಅಪರಿಚಿತ ವ್ಯಕ್ತಿ ಅಲ್ಲಿದ್ದ ಎನ್ನಲಾಗಿದೆ. ಆತನನ್ನು ವಿಚಾರಿಸಿದಾಗ ತನ್ನ ಹೆಸರು ಜಯಂತ್ ಎಂಬುದಾಗಿ ತಿಳಿಸಿ ತೆರಳಿದ್ದಾನೆ. ದೂರಿನ ಆಧಾರದ ಮೇಲೆ, ಬಂಟ್ವಾಳ ಪಟ್ಟಣ ಪೊಲೀಸರು ಅಪರಾಧ ಸಂಖ್ಯೆ 116/2026 ರ ಅಡಿಯಲ್ಲಿ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್), 2023 ರ…

Read More

ಉಡುಪಿ ಜಿಲ್ಲೆಯ ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಮುದರಂಗಡಿಯಲ್ಲಿ ನಡೆದ ಡೇವಿಡ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಿಹಾರ ಮೂಲದ ಸೂರಜ್ ಬಂಧಿತ ಆರೋಪಿ. ಪ್ರಕರಣದ ಆರೋಪಿಗಳಾದ ಚಿರಾಗ್ ಹಾಗೂ ಇರ್ಷಾದ್, ಹತ್ಯೆಗೆ ಸಂಬಂಧಿಸಿದ ಶೂಟರ್ ರಾಜುವಿಗೆ ನೀಡಬೇಕಿದ್ದ ಹಣವನ್ನು ಸೂರಜ್‌ನ ಬ್ಯಾಂಕ್ ಖಾತೆಗೆ ವರ್ಗಾಯಿಸಿದ್ದರು ಎನ್ನಲಾಗಿದೆ. ಆರೋಪಿಗಳ ಬ್ಯಾಂಕ್ ಖಾತೆಗಳ ವಹಿವಾಟು ಹಾಗೂ ಮೊಬೈಲ್ ಕರೆಗಳ ವಿವರಗಳನ್ನು ಪರಿಶೀಲಿಸಿದ ವೇಳೆ ಸೂರಜ್‌ಗೆ ಸಂಬಂಧಿಸಿದ ಮಹತ್ವದ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ. ಈ ಮಾಹಿತಿಯ ಆಧಾರದ ಮೇಲೆ ತನಿಖಾ ತಂಡವು ಬಾಂಬೆ, ದೆಹಲಿ ಸೇರಿದಂತೆ ವಿವಿಧ ರಾಜ್ಯಗಳಿಗೆ ತೆರಳಿ ಕಾರ್ಯಾಚರಣೆ ನಡೆಸಿ ಸೂರಜ್‌ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಬಂಧಿತ ಸೂರಜ್‌ನನ್ನು ಉಡುಪಿಯ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಮುಖ್ಯ ನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾಲಯದಲ್ಲಿ ನ್ಯಾಯಾಧೀಶ ಎಂ. ಪುರುಷೋತ್ತಮ್ ಅವರ ಮುಂದೆ ಹಾಜರುಪಡಿಸಲಾಯಿತು. ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Read More

ಮಂಗಳೂರು: ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಆಹಾರವನ್ನು ಪೂರೈಸುವ ಅಡುಗೆ ಸೇವಾ ಘಟಕವನ್ನು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಅಧಿಕಾರಿಗಳು ಗುರುವಾರ ಪರಿಶೀಲಿಸಿದರು. ಪ್ರಯಾಣಿಕರಿಗೆ ನೀಡಲಾಗುವ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯವನ್ನು ಅಧಿಕಾರಿಗಳು ಪರಿಶೀಲಿಸಿದರು, ಜೊತೆಗೆ ಅದರ ತಯಾರಿಕೆ ಮತ್ತು ಸಾಗಣೆಯ ಸಮಯದಲ್ಲಿ ಅನುಸರಿಸಲಾದ ಸುರಕ್ಷತಾ ಶಿಷ್ಟಾಚಾರಗಳನ್ನು ಪರಿಶೀಲಿಸಿದರು. ಸಾರಿಗೆ ವಾಹನವು ಸಾಕಷ್ಟು ಶುಚಿತ್ವವನ್ನು ಕಾಯ್ದುಕೊಂಡಿದೆಯೇ, ಆಹಾರವನ್ನು ಸೂಕ್ತವಾಗಿ ಸಂಗ್ರಹಿಸಲಾಗಿದೆಯೇ ಮತ್ತು ಎಲ್ಲಾ ನಿಗದಿತ ಮಾನದಂಡಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆಯೇ ಎಂದು ಅವರು ಪರಿಶೀಲಿಸಿದರು.ಆಹಾರ ಮತ್ತು ಔಷಧ ಸುರಕ್ಷತಾ ಉಲ್ಲಂಘನೆಗಳ ಕುರಿತು ಸಾರ್ವಜನಿಕರು ನೇರವಾಗಿ ದೂರುಗಳನ್ನು ನೋಂದಾಯಿಸಲು ಅನುವು ಮಾಡಿಕೊಡಲು ರಾಜ್ಯ ಸರ್ಕಾರವು QR ಕೋಡ್ ವ್ಯವಸ್ಥೆಯನ್ನು ಪರಿಚಯಿಸಿದ ನಂತರ ರೈಲ್ವೆ ಅಡುಗೆ ವ್ಯವಸ್ಥೆಯ ಈ ಪರಿಶೀಲನೆ ನಡೆದಿದೆ.ಆಹಾರ ಸುರಕ್ಷತಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವತ್ತ ಗಮನ ಹರಿಸಲಾಗಿದ್ದು, ಪ್ರಯಾಣಿಕರಿಗೆ ಗುಣಮಟ್ಟದ ಮತ್ತು ಸುರಕ್ಷಿತ ಊಟ ದೊರೆಯುವುದನ್ನು ಖಚಿತಪಡಿಸಿಕೊಳ್ಳಲು ರೈಲ್ವೆ ಕ್ಯಾಂಟೀನ್‌ಗಳು ಮತ್ತು ರೈಲುಗಳಲ್ಲಿ ನೀಡಲಾಗುವ ಆಹಾರವನ್ನು ಈಗ…

Read More

ಮುಲ್ಕಿ: ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಚಂದ್ರಮೌಳೇಶ್ವರ ದೇವಸ್ಥಾನದಲ್ಲಿ ಕಾಣಿಕೆ ಹುಂಡಿ ಕಳ್ಳತನ ಮಾಡಿದ್ದ ಆರೋಪಿಯನ್ನು ಮಂಗಳೂರು ನಗರ ಮುಲ್ಕಿ ಪೊಲೀಸರು ಬಂಧಿಸಿ, ಕಳುವಾದ ಹಣವನ್ನು ವಶಪಡಿಸಿಕೊಂಡಿದ್ದಾರೆ. ಆಗಸ್ಟ್ 18 ರಂದು ಮಧ್ಯರಾತ್ರಿ ಆರೋಪಿ ದೇವಸ್ಥಾನದ ಮೇಲ್ಛಾವಣಿಯ ಜಾಲರಿ ಮೂಲಕ ಒಳನುಗ್ಗಿದ್ದಾನೆ. ಸಿಸಿ ಕ್ಯಾಮರಾವನ್ನು ತಿರುಗಿಸಿ ಕಾಣಿಕೆ ಡಬ್ಬಿಯ ಬೀಗ ಮುರಿದು ಹಣ ಕಳ್ಳತನ ಮಾಡಿದ್ದನು.ಈ ಕುರಿತು ದೂರು ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ, ಆರೋಪಿಯನ್ನು ಕೊಡಗು ಜಿಲ್ಲೆಯ, ಮಡಿಕೇರಿ ತಾಲೂಕಿನ ಸಣ್ಣಪುಲಿಕೊಟ್ಟ ಗ್ರಾಮದ ನಿವಾಸಿ ರವಿಕುಮಾರ @ರವಿ ಹೆಚ್.ಜಿ ಎಂಬಾತನನ್ನು ದಸ್ತಗಿರಿ ಮಾಡಿದ್ದಾರೆ. ಆರೋಪಿಯಿಂದ ಕಳವು ಮಾಡಿದ್ದ ಸುಮಾರು 2195 ರೂ. ನಗದು ವಶಪಡಿಸಿಕೊಳ್ಳಲಾಗಿದೆ. ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಮುಲ್ಕಿ ಠಾಣೆಯ ಪಿಎಸ್‌ಐ ಹಾಗೂ ತಂಡದಿಂದ ಕಾರ್ಯಾಚರಣೆ ನಡೆಸಲಾಗಿದೆ. ಆರೋಪಿತನ ಮೇಲೆ ಈ ಕೆಳಗಿನಂತೆ ಪ್ರಕರಣ ದಾಖಲಾಗಿರುತ್ತದೆ. ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣಾ ಅ.ಕ್ರ: 44/2024 ಕಲಂ: 457, 380 ಐಪಿಸಿ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣಾ ಅ.ಕ್ರ:…

Read More

ಬಂಟ್ವಾಳ : ಮಣಿಹಳ್ಳ-ಕಕ್ಯಪದವು ರಸ್ತೆಯ ಮಣಿನಾಲ್ಕೂರು ಗ್ರಾಮದ ಮುಲ್ಕಾಜೆಮಾಡ ಎಂಬ ನಿರ್ಜನ ಪ್ರದೇಶದಲ್ಲಿ ಗುರುವಾರ (ಆಗಸ್ಟ್ 20) ಹಾಡಹಗಲೇ ಬೈಕ್ ಸವಾರನನ್ನು ಅಡ್ಡಗಟ್ಟಿದ ನಾಲ್ವರು ದುಷ್ಕರ್ಮಿಗಳು ತಲವಾರು ತೋರಿಸಿ ಬೆದರಿಸಿ ಲಕ್ಷಾಂತರ ರೂಪಾಯಿ ದರೋಡೆ ನಡೆಸಿ ಪರಾರಿಯಾಗಿದ್ದಾರೆ. ಸುರತ್ಕಲ್ ನಿವಾಸಿ ಮಯ್ಯದಿ ಎಂಬವರೇ ದರೋಡೆಗೊಳಗಾದ ಬೈಕ್ ಸವಾರ. ವಿವಿಧ ಅಂಗಡಿಗಳಿಗೆ ಹೋಲ್‌ಸೇಲ್ ಆಧಾರದಲ್ಲಿ ಪೂರೈಸಿದ್ದ ಸಿಮೆಂಟ್ ವ್ಯಾಪಾರದ ನಗದು ಹಣವನ್ನು ವಸೂಲಿ ಮಾಡಿಕೊಂಡು ಮಯ್ಯದಿ ಅವರು ಬೈಕ್‌ನಲ್ಲಿ ಹಿಂದಿರುಗುತ್ತಿದ್ದರು. ಮುಲ್ಕಾಜೆಮಾಡದ ನಿರ್ಜನ ರಸ್ತೆಯಲ್ಲಿ ಬರುತ್ತಿದ್ದಂತೆ, ಎರಡು ಬೈಕ್‌ಗಳಲ್ಲಿ ಬೆನ್ನಟ್ಟಿ ಬಂದ ನಾಲ್ವರು ಅಪರಿಚಿತ ಖದೀಮರು ಬೈಕ್ ಅಡ್ಡಗಟ್ಟಿದ್ದಾರೆ. ಬಳಿಕ ತಲವಾರು ಬೀಸಿ ಪ್ರಾಣ ಬೆದರಿಕೆಯೊಡ್ಡಿ, ಅವರ ಬ್ಯಾಗ್‌ನಲ್ಲಿದ್ದ ಸುಮಾರು ₹8 ಲಕ್ಷಕ್ಕೂ ಅಧಿಕ ನಗದನ್ನು ಕಸಿದುಕೊಂಡು ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಘಟನೆ ನಡೆದ ವಿಷಯ ತಿಳಿಯುತ್ತಿದ್ದಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಅನಂತ ಪದ್ಮನಾಭ ಹಾಗೂ ಎಸ್‌ಐ ಮಂಜುನಾಥ್ ನೇತೃತ್ವದ ಪೊಲೀಸ್ ತಂಡ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದೆ. ಪ್ರಕರಣ ದಾಖಲಿಸಿಕೊಂಡಿರುವ…

Read More

ಉಡುಪಿ: ಬಾಳೆಹಣ್ಣುಗಳನ್ನು ಕೃತಕವಾಗಿ ಹಣ್ಣಾಗಿಸಲು ಹಾನಿಕಾರಕ ರಾಸಾಯನಿಕಗಳನ್ನು ಬಳಸಲಾಗುತ್ತಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಆಹಾರ ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳು ಉಡುಪಿಯ ಅಲೆವೂರಿನಲ್ಲಿರುವ ಮೂರರಿಂದ ನಾಲ್ಕು ಬಾಳೆಹಣ್ಣು ಸಂಗ್ರಹಣಾ ಕೇಂದ್ರಗಳ ಮೇಲೆ ದಾಳಿ ನಡೆಸಿದ್ದಾರೆ. ಕುಂದಾಪುರ ಸಹಾಯಕ ಆಯುಕ್ತೆ ರಶ್ಮಿ ಅವರ ನೇತೃತ್ವದಲ್ಲಿ ಆರೋಗ್ಯ ಇಲಾಖೆ ಹಾಗೂ ಆಹಾರ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಸಂಗ್ರಹಣಾ ಕೇಂದ್ರಗಳಲ್ಲಿ ತಪಾಸಣೆ ನಡೆಸಿದರು. ತಪಾಸಣೆ ವೇಳೆ ಬಾಳೆಹಣ್ಣುಗಳು ಶೀಘ್ರವಾಗಿ ಮಾಗುವಂತೆ ಮಾಡಲು ಹಾನಿಕಾರಕ ರಾಸಾಯನಿಕಗಳನ್ನು ಬಳಸಿರುವುದು ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಹಣ್ಣುಗಳಿಗೆ ಕೃತಕ ಬಣ್ಣ ನೀಡಲು ಬಳಸಲಾಗುತ್ತಿದೆ ಎನ್ನಲಾದ ಏಜೆಂಟ್‌ಗಳನ್ನೂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಬಾಳೆಹಣ್ಣುಗಳನ್ನು ಕೃತಕವಾಗಿ ಹಣ್ಣಾಗಿಸಲು ಹಾನಿಕಾರಕ ರಾಸಾಯನಿಕಗಳನ್ನು ಬಳಸಿದ ಆರೋಪದಡಿ ಸಂಬಂಧಪಟ್ಟವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಈ ಅಕ್ರಮ ಚಟುವಟಿಕೆಗೆ ಬಳಸಲಾಗಿದೆ ಎನ್ನಲಾದ ಕೆಲವು ವಾಹನಗಳನ್ನೂ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ವಶಪಡಿಸಿಕೊಂಡಿರುವ ರಾಸಾಯನಿಕಗಳು, ಕೃತಕ ಬಣ್ಣದ ಏಜೆಂಟ್‌ಗಳು ಹಾಗೂ ಇತರ ವಸ್ತುಗಳ ಪ್ರಮಾಣದ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ. ಆಹಾರ…

Read More