ಬಂಟ್ವಾಳ: ಫರಂಗಿಪೇಟೆಯ ಕಾಂತಪ್ಪ ಪೂಂಜ ಸಂಕೀರ್ಣ ಎದುರು ನಿಂತಿದ್ದ ಎರಡು ಕಾರುಗಳಿಗೆ ವೋಕ್ಸ್ ವೆಗಾನ್ ಕಾರು ಢಿಕ್ಕಿ ಹೊಡೆದ ಪರಿಣಾಮ ಮೂರು ಕಾರುಗಳು ಕೂಡ ಜಖಂಗೊಂಡಿದೆ. ಬಿ.ಸಿ.ರೋಡು ಕಡೆಯಿಂದ ಅತಿ ವೇಗದಲ್ಲಿ ಬಂದ ಕಾರು, ಚಾಲಕನ ನಿಯಂತ್ರಣ ಕಳೆದುಕೊಂಡು ಫರಂಗಿಪೇಟೆಯಲ್ಲಿ ಹೆದ್ದಾರಿ ಬದಿ ನಿಲ್ಲಿಸಿದ್ದ ಮಾರುತಿ ಆಮ್ನಿ ಮತ್ತು ಮಾರುತಿ ಆಲ್ಟೊ ಕಾರಿಗೆ ಢಿಕ್ಕಿಯಾಗಿದ್ದು, ಅದರಲ್ಲಿ ಒಂದು ಕಾರು ರಿಪೇರಿಗೆ ನಿಲ್ಲಿಸಿದ್ದ ಟಿಪ್ಪರ್ ಗೆ ಢಿಕ್ಕಿಯಾಗಿದೆ. ಆಮ್ನಿ ಮತ್ತು ಟಿಪ್ಪರ್ ನಡುವೆ ಸಿಲಿಕಿದ ಮಾರುತಿ ಆಲ್ಟೊ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Author: main-admin
ಮಂಗಳೂರು: ಡಿಸಿ ಮನ್ನ ಭೂಮಿಯನ್ನು ಅತಿಕ್ರಮಣ ಮಾಡಿದ್ದಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಂಡು ಅದನ್ನು ತಕ್ಷಣ ತೆರವುಗೊಳಿಸುವಂತೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾದ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಡಿಸಿ ಮನ್ನ ಭೂಮಿ ಅತಿಕ್ರಮಣ ಮಾಡಿ ಅಲ್ಲಿ ಹೊಸದಾಗಿ ಕಟ್ಟಡ ನಿರ್ಮಾಣ ಮಾಡಿದಲ್ಲಿ ತಕ್ಷಣ ಸಂಬಂಧಿಸಿದ ಅಧಿಕಾರಿ ಹಾಗೂ ಸಿಬ್ಬಂದಿ ಸ್ಥಳ ಪರಿಶೀಲನೆ ನಡೆಸಿ, ಅದನ್ನು ಸ್ಥಗಿತಗೊಳಿಸಬೇಕು. 192(ಎ) ಪ್ರಕಾರ ಪ್ರಕರಣ ದಾಖಲಿಸಿ ಕಾನೂನು ರೀತಿಯ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು. ಪರಿಶಿಷ್ಟ ಜಾತಿ ಹಾಗೂ ಪಂಗಡದ ಹಿತಾಸಕ್ತಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ವ್ಯಾಪ್ತಿಗೆ ಬರುವ ವಿಚಾರಗಳನ್ನು ಶೀಘ್ರವಾಗಿ ಇತ್ಯರ್ಥ ಪಡಿಸಲಾಗುತ್ತಿದೆ. ಸರ್ಕಾರದ ಮಟ್ಟದಲ್ಲಿ ಆಗಬೇಕಾದ ಕೆಲಸಗಳಿಗೆ ಸಂಬಂಧಿಸಿದವರು ಸಲ್ಲಿಸುವ ಮನವಿಯನ್ನು ಶಿಫಾರಸ್ಸು ಮಾಡಿ ಸರ್ಕಾರಕ್ಕೆ ಸಲ್ಲಿಸಲಾಗುತ್ತಿದೆ. ಜಿಲ್ಲೆಯಲ್ಲಿರುವ ಸರ್ಕಾರದ ವಿವಿಧ ಕಚೇರಿಗಳಲ್ಲಿ ಬಾಹ್ಯ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಪರಿಶಿಷ್ಟ…
ಸುಬ್ರಹ್ಮಣ್ಯ : 14 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ದೂರಿನ ಹಿನ್ನೆಲೆಯಲ್ಲಿ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಮಹಿಳೆ ಸೇರಿ 14 ಮಂದಿಯ ವಿರುದ್ಧ ದೂರು ದಾಖಲಾಗಿದೆ. ಸುಬ್ರಹ್ಮಣ್ಯದ 14 ವರ್ಷದ ಬಾಲಕಿಯ ಮೇಲೆ 2015ರ ಜನವರಿಯಿಂದ 2022ರ ಮೇ ವರೆಗೆ ಬೇರೆ ಬೇರೆ ಆರೋಪಿಗಳು ಬೇರೆ ಬೇರೆ ಸ್ಥಳದಲ್ಲಿ ಅತ್ಯಾಚಾರ ನಡೆಸಿದ ಬಗ್ಗೆ ದೂರಿನಲ್ಲಿ ತಿಳಿಸಲಾಗಿದೆ. ವೇದಾವತಿ, ವಿನೋದ್ ಮಣಿಯಾಣಿ, ಪ್ರವೀಣ್, ದಯಾನಂದ, ಹನುಮಂತ, ಆನಂದ, ಪ್ರದೀಪ್, ಅಚ್ಯುತಾ, ಸತೀಶ್ ಗೌಡ, ಜಯಪ್ರಕಾಶ್, ಜಯಪ್ರಕಾಶ್ ತಮ್ಮ, ಮಾಂಕು, ಗುತ್ತಿಗಾರಿನ ವ್ಯಕ್ತಿ, ವೇದಾವತಿ ಎಂಬವರ ಪ್ರಿಯತಮ ಎಂಬವರ ಮೇಲೆ ದೂರು ದಾಖಲಾಗಿದೆ. .ಬಾಲಕಿ 5ನೇ ತರಗತಿಯಲ್ಲಿ ಇರುವ ಸಂದರ್ಭದಲ್ಲಿ ಆಕೆಯ ಅತ್ತಿಗೆ ವೇದಾವತಿ ಲೈಂಗಿಕ ದೌರ್ಜನ್ಯ ಎಸಗಿದ್ದು, ಬಳಿಕ ವಿವಿಧ ಆರೋಪಿಗಳು ಬೇರೆ ಬೇರೆ ಸ್ಥಳದಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಬೆದರಿಕೆ ಒಡ್ಡಿರುವ ಬಗ್ಗೆಯೂ ದೂರಿನಲ್ಲಿ ತಿಳಿಸಲಾಗಿದೆ. ಆರೋಪಿಗಳ ವಿರುದ್ಧ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದಲ್ಲಿ ಕಾನೂನು ಕ್ರಮಕೈಗೊಳ್ಳುವಂತೆ ದೂರಿನಲ್ಲಿ ತಿಳಿಸಲಾಗಿದೆ.…
ಬೆಳ್ತಂಗಡಿ: ಅಕ್ರಮವಾಗಿ ದನ ಸಾಗಾಟ ಮಾಡುತ್ತಿದ್ದ ಪ್ರಕರಣವೊಂದನ್ನು ಬೆಳ್ತಂಗಡಿ ಪೊಲೀಸರು ಪತ್ತೆ ಹಚ್ವಿದ್ದು ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿ ಸುಂದರ ಮೂಲ್ಯ ಎಂಬಾತನಾಗಿದ್ದು ಈತ ಪಿಕಪ್ ವಾಹನದಲ್ಲಿ ಹಿಂಸಾತ್ಮಕವಾದ ರೀತಿಯಲ್ಲಿ ದನವನ್ನು ತುಂಬಿಕೊಂಡು ಬರುತ್ತಿದ್ದಾಗ ಬೆಳ್ತಂಗಡಿ ಪೇಟೆಯಲ್ಲಿ ಪೊಲೀಸರು ವಾಹನವನ್ನು ನಿಲ್ಲಿಸಿ ಪರಿಶೀಲನೆ ನಡೆಸಿದಾಗ ಯಾವುದೇ ಪರವಾನಿಗೆಯಿಲ್ಲದೆ ದನ ಸಾಗಾಟ ಮಾಡುತ್ತಿರುವುದು ಸ್ಪಷ್ಟಗೊಂಡಿದ್ದು ಆರೋಪಿ ಸುಂದರ ಮೂಲ್ಯ ನನ್ನು ಬಂಧಿಸಿದ್ದಾರೆ. ಸಾಗಾಟಮಾಡುತ್ತಿದ್ದ ದನವನ್ನು ಹಾಗೂ ಸಾಗಾಟಕ್ಕೆ ಉಪಯೋಗಿಸಿದ ಪಿಕಪ್ ವಾಹನವನ್ನು ವಶಕ್ಕೆ ಪಡೆಯಲಾಗಿದ್ದು, ಇದರ ಒಟ್ಟು ಮೌಲ್ಯ 160,000 ಎಂದು ಅಂದಾಜಿಸಲಾಗಿದೆ. ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಕೊಳ್ಳಲಾಗಿದೆ.
ಮಂಗಳೂರು: ಮಂಗಳೂರಿನ ಬಸ್‌ಗಳಲ್ಲಿ ಕನ್ನಡ ನಾಮ ಫಲಕ ಕಡ್ಡಾಯಗೊಳಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿರುವುದನ್ನು ಆಕ್ಷೇಪಿಸಿ ತುಳು ಭಾಷಾ ಸಂರಕ್ಷಣಾ ಸಮಿತಿ ಕುಡ್ಲ ವತಿಯಿಂದ ಇಂದು ಮಂಗಳೂರಿನ ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆಯಿತು. ಪ್ರತಿಭಟನಾಕಾರರು ತೌಳವ ನಾಡಿನಲ್ಲಿ ತುಳು ಭಾಷೆಯ ಮೇಲೆ ಕನ್ನಡದ ಸವಾರಿ, ಕನ್ನಡ ಕಡ್ಡಾಯದಿಂದ ತುಳುವಿಗೆ ಅನ್ಯಾಯ, ಜೈ ಜೈ ತುಳುನಾಡು, ತುಳು ಭಾಷೆಯನ್ನು ಉಳಿಸಿ ಬೆಳೆಸಬೇಕು ಎಂಬಿತ್ಯಾದಿ ಘೋಷಣೆ ಕೂಗಿದರು. ಕನ್ನಡವೇ ಸತ್ಯ, ಕನ್ನಡವೇ ನಿತ್ಯ, ಆದರೆ ತುಳು ನಮಗೆ ಅಗತ್ಯ. ತುಳು ಭಾಷೆ ನಮ್ಮ ಮಾತೃ ಭಾಷೆ; ಅದಕ್ಕೆ ಪ್ರಾಮುಖ್ಯತೆ ನೀಡ ಬೇಕು ಇತ್ಯಾದಿ ಭಿತ್ತಿ ಪತ್ರ ಹಿಡಿದು ಪ್ರತಿಭಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಜೈ ತುಳುನಾಡು ಸಂಘಟನೆ ಮತ್ತು ತುಳು ಭಾಷಾ ಸಂರಕ್ಷಣಾ ಸಮಿತಿಯ ಮುಖಂಡ ವಿಕಾಸ್ ಅವರು ತುಳು ಭಾಷೆಗೆ 2,500 ವರ್ಷಗಳಿಗೂ ಅಧಿಕ ಇತಿಹಾಸವಿದೆ. ತುಳುವಿನಲ್ಲಿ 1000 ಕ್ಕೂ ಮಿಕ್ಕಿ ಪಾಡ್ದನೆಗಳಿವೆ. ಇದು ಒಂದು ಧರ್ಮದ ಭಾಷೆಯಲ್ಲ. ಇದು ಒಂದು ಪ್ರದೇಶದ…
ಕಾರ್ಕಳ : ತಾಲೂಕಿನ ಬೈಲೂರು ಗುಡ್ಡೆಅಂಗಡಿ ಬಳಿ ಸರ್ಕಾರಿ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಹಿರಿಯಡ್ಕ ಬೊಮ್ಮಾರಬೆಟ್ಟು ಗ್ರಾಮದ ನಿವಾಸಿ ಮನೋಹರ ಜೋಗಿ (30ವ) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬುಧವಾರ ರಾತ್ರಿ ಈ ಅಪಘಾತ ನಡೆದಿದ್ದು ಖಾಸಗಿ ಬಸ್‌ನ ಕಂಡಕ್ಟರ್ ಆಗಿದ್ದ ಮನೋಹರ ಜೋಗಿ ಕರ್ತವ್ಯ ಮುಗಿಸಿ ತನ್ನ ಬೈಕಿನಲ್ಲಿ ಮನೆಗೆ ತೆರಳುಗುತ್ತಿದ್ದಾಗ ಬೈಲೂರಿನ ಗುಡ್ಡೆಯಂಗಡಿ ಎಂಬಲ್ಲಿ ಸರ್ಕಾರಿ ಬಸ್ ಡಿಕ್ಕಿಯಾಗಿದೆ.
ವಿಟ್ಲ: ಬಂಟ್ವಾಳದ ವಿಟ್ಲ ಸಮೀಪದ ಕಡಂಬುವಿನ ಯುವಕ ಕೇರಳದಲ್ಲಿ ನಡೆದ ರೈಲು ಅಪಘಾತದಲ್ಲಿ ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ. ಇಲ್ಲಿನ ಕಡಂಬು ಸಮೀಪದ ಪಿಲಿವಲಚ್ಚಿಲ್ ನಿವಾಸಿ ಅಶ್ರಫ್ (19) ಮೃತಪಟ್ಟ ಯುವಕ. ವೃತ್ತಿಯಲ್ಲಿ ಎಸಿ ಮೆಕಾನಿಕ್ ಆಗಿದ್ದ ಈತ ಎಸಿ ಟ್ರೈನಿಂಗ್‌ಗಾಗಿ ಕೇರಳದ ಕೊಚ್ಚಿಗೆ ತೆರಳಿದ್ದರು. ತನ್ನ ಕೆಲಸ ಕಾರ್ಯ ಮುಗಿಸಿ, ಊರಿಗೆ ರೈಲಿನಲ್ಲಿ ಹಿಂತಿರುಗುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಹೊರಗಡೆ ಎಸೆಯಲ್ಪಟ್ಟು, ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಬೆಳ್ತಂಗಡಿ: ಹಾಸನದ ಯುವಕ ಧರ್ಮಸ್ಥಳ ಸಮೀಪದ ಕಾಡಿನಲ್ಲಿ ವೀಡಿಯೋ ಮಾಡಿ ವಿಷ ಸೇವಿಸಿದ್ದು, ಆತನ ಸ್ಥಿತಿ ಗಂಭೀರವಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಅರಕಲಗೂಡು ರಾಮನಾಥ್ ಪುರದ ನಿವಾಸಿ ಸುನಿಲ್ (28) ಬೈಕಿನಲ್ಲಿ ನಿನ್ನೆ ಬೆಳಗ್ಗೆ ಧರ್ಮಸ್ಥಳಕ್ಕೆ ಬಂದಿದ್ದರು. ಬಳಿಕ ದೇವರ ದರ್ಶನ ಮುಗಿಸಿ ಮಹಾತ್ಮ ಗಾಂಧಿ ವೃತ್ತದ ಪಕ್ಕದ ಗುಡ್ಡಕ್ಕೆ ಹೋಗಿ ಕುಳಿತು ವಿಷ ಪದಾರ್ಥ ಕುಡಿದುಕೊಂಡು ಮೊಬೈಲ್‌ನಲ್ಲಿ ವೀಡಿಯೋ ಚಿತ್ರೀಕರಣ ಮಾಡಿ ಕುಟುಂಬದವರಿಗೆ ಮತ್ತು ಸ್ನೇಹಿತರಿಗೆ ಕಳುಹಿಸಿದ್ದ. ತಕ್ಷಣ ಕುಟುಂಬಸ್ಥರು ಧರ್ಮಸ್ಥಳ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.ಧರ್ಮಸ್ಥಳ ಪೊಲೀಸ್ ಠಾಣೆಯ ಸಿಬಂದಿಗಳು ಕಾಡಿನ ಸುತ್ತಮುತ್ತ ಹುಡುಕಾಟ ನಡೆಸಿದಾಗ ಅರೆಪ್ರಜ್ಞಾ ಸ್ಥಿತಿಯಲ್ಲಿದ್ದ ಸುನಿಲ್‌ನನ್ನು ಪತ್ತೆ ಮಾಡಿದ್ದು. ತಕ್ಷಣ ಸುನಿಲ್ ಗೆ ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಮಂಗಳೂರು: ಕಾನೂನುಬಾಹಿರ ಚಟುವಟಿಕೆಗಳ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಪಿಎಫ್ಐ ಸಂಘಟನೆ ಹಾಗೂ ಅದರ ಅಂಗ ಸಂಸ್ಥೆಗಳನ್ನು ಬ್ಯಾನ್ ಮಾಡಿರುವ ಬೆನ್ನಲ್ಲೇ ಇದೀಗ ಮಂಗಳೂರು ಪೊಲೀಸರು ಈ ಸಂಘಟನೆಗಳ 12 ಕಚೇರಿಗಳಿಗೆ ಬೀಗಮುದ್ರೆ ಜಡಿದಿದ್ದಾರೆ. ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ 10 ಪಿಎಫ್ಐ ಕಚೇರಿಗಳು, 1 ಸಿಎಫ್ಐ ಕಚೇರಿ, 1 ಐಇ ಕಚೇರಿಗೆ ಬೀಗ ಜಡಿಯಲಾಗಿದೆ. ಪಣಂಬೂರು ಠಾಣಾ ವ್ಯಾಪ್ತಿಯ ಕಸಬಾ ಬೆಂಗ್ರೆ, ಸುರತ್ಕಲ್ ಠಾಣಾ ವ್ಯಾಪ್ತಿಯ ಚೊಕ್ಕಬೆಟ್ಟು, ಕಾಟಿಪಳ್ಳ -2ನೇ ಬ್ಲಾಕ್, ಬಜ್ಪೆ ಠಾಣಾ ವ್ಯಾಪ್ತಿಯ ಅಡ್ಡೂರು, ಕಿನ್ನಿಪದವು, ಉಳ್ಳಾಲ ಠಾಣಾ ವ್ಯಾಪ್ತಿಯ ಕೆ.ಸಿ.ರೋಡ್, ಕೊಣಾಜೆ ಠಾಣಾ ವ್ಯಾಪ್ತಿಯ ಇನೋಳಿ, ಮಂಗಳೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ಮಲ್ಲೂರು, ಮಂಗಳೂರು ಸೌತ್ ಠಾಣಾ ವ್ಯಾಪ್ತಿಯ ನೆಲ್ಲಿಕಾಯಿ ರಸ್ತೆ, ಮಂಗಳೂರು ಉತ್ತರ ಠಾಣಾ ವ್ಯಾಪ್ತಿಯ ಕುದ್ರೋಳಿ – ಕರ್ಬಲಾ ರಸ್ತೆಯ ಕಚೇರಿಗಳು ಸೇರಿ ಪಿಎಫ್ಐನ ಒಟ್ಟು 10 ಕಚೇರಿಗಳಿಗೆ ಪೊಲೀಸರು ಬೀಗ ಜಡಿದಿದ್ದಾರೆ. ಅದೇ ರೀತಿ ಮಂಗಳೂರು ಉತ್ತರ ಠಾಣಾ ವ್ಯಾಪ್ತಿಯ ಅಝಿಝುದ್ದೀನ್ ರಸ್ತೆಯ…
ಉಳ್ಳಾಲ: ಕಾರ್ಯಕ್ರಮವೊಂದರ ಫ್ಲೆಕ್ಸ್ ನಲ್ಲಿ ಮಹಿಳೆಯ ಅನುಮತಿ ಇಲ್ಲದೆ ಫೋಟೋ ಅಳವಡಿಸಿದ ಬಗ್ಗೆ ಕೇರಳದ ಭಜರಂಗದಳದ ಕಾರ್ಯಕರ್ತರು ಕಾರ್ಯಕ್ರಮ ಆಯೋಜಕರಿಗೆ ಸರಿಯಾಗಿ ಕ್ಲಾಸ್ ಕೊಟ್ಟ ಘಟನೆ ಕೋಲ್ಯ ನಾರಾಯಣಗುರು ಸಭಾಭವನದಲ್ಲಿ ಬುಧವಾರ ನಡೆಯಿತು. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಮಂಗಳೂರು ಗ್ರಾಮಾಂತರ ತಾಲೂಕು ಮಟ್ಟದ ಪೋಷಣ ಮಾಸಾಚರಣೆ ಕಾರ್ಯಕ್ರಮ,ಅನ್ನಪ್ರಾಶನ, ಪೌಷ್ಟಿಕ ಆಹಾರ ಹಾಗೂ ಸೀಮಂತ ಕಾರ್ಯಕ್ರಮ ಕೊಲ್ಯನಾರಾಯಣಗುರು ಸಭಾಂಗಣದಲ್ಲಿ ಬುಧವಾರ ನಡೆಯಿತು. ಕಾರ್ಯಕ್ರಮದ ಪ್ರಚಾರ ಪ್ರಯುಕ್ತ ಸಭಾಂಗಣದ ಮುಂದೆ ಅಳವಡಿಸಿದ್ದ ಫ್ಲೆಕ್ಸ್ ನಲ್ಲಿ ಹಿಂದೂ’ ಮಹಿಳೆಯೊಬ್ಬರ ಹಲವು ವರ್ಷಗಳ ಹಿಂದಿನ ಗರ್ಭಿಣಿ ಭಾವಚಿತ್ರವನ್ನು ಜಾಲತಾಣದಿಂದ ನಕಲು ಮಾಡಿ ಅಳವಡಿಸಲಾಗಿದೆ, ಪಕ್ಕದಲ್ಲೇ ಕ್ಷೇತ್ರದ ಶಾಸಕ ಯು.ಟಿ. ಖಾದರ್ ಅವರ ಫೋಟೋ ಬಳಸಲಾಗಿದೆ. ವಿಷಯ ತಿಳಿಯುತ್ತಿದ್ದಂತೆಯೇ ಕೆರಳಿದ ಭಜರಂಗ ದಳದ ಕಾರ್ಯಕರ್ತರು ಕಾರ್ಯಕ್ರಮ ನಡೆಯುತ್ತಿದ್ದ ನಾರಾಯಣಗುರು ಸಭಾಂಗಣದೊಳಗೆ ನುಗ್ಗಿ ಆಯೋಜಕರ ನಿರ್ಲಕ್ಷ್ಯತನಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಲ್ಲದೆ ಶಾಸಕರ ವಿರುದ್ಧ ಘೋಷಣೆ ಕೂಗಿದರು. ಮಹಿಳೆಯರ ಬಗ್ಗೆ…










