Author: main-admin

ಬೆಳ್ಳಾರೆ: ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರ್ ಹತ್ಯೆಯಿಂದ ಆಘಾತಕ್ಕೊಳಗಾಗಿರುವ ತಂದೆಯ ಆರೋಗ್ಯದಲ್ಲಿ ಏರುಪೇರಾಗಿದ್ದು, ಇದೀಗ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಗನ ಸಾವಿನಿಂದ ಶೇಖರ್ ಪೂಜಾರಿ ತೀವ್ರ ಆಘಾತಕ್ಕೊಳಗಾಗಿದ್ದರು. ಮೊದಲೇ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ ತಂದೆ ಶೇಖರ್ ಪೂಜಾರಿ ಅವರು ಇದ್ದ ಒಬ್ಬ ಮಗನ ಸಾವಿನಿಂದ ಕಂಗಾಲಾಗಿದ್ದರು. ಇದೀಗ ಅವರ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿದ್ದು, ಕುಟುಂಬಸ್ಥರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಂಬುಲೆನ್ಸ್ ಮೂಲಕ ಬೆಳ್ಳಾರೆಯ ಭಾರದ್ವಾಜ್ ಆಸ್ಪತ್ರೆಗೆ ಶೇಖರ್ ಅವರನ್ನು ರವಾನೆ ಮಾಡಲಾಗಿದೆ.

Read More

ಉಡುಪಿ: ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಅವರ ಹತ್ಯೆ ಖಂಡಿಸಿ ಮತ್ತು ಮನನೊಂದು ರಾಜೀನಾಮೆ ನೀಡುವುದು ಮುಂದುವರೆದಿದೆ. ಮಲ್ಪೆಯ ಬೈಲಕೆರೆ ತೆಂಕನಿಡಿಯೂರು ಗ್ರಾಮದಲ್ಲಿಯೇ 50 ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ತಮ್ಮ ಪ್ರಾಥಮಿಕ ಸದಸ್ಯತ್ವಕ್ಕೆ ಸಾಮೂಹಿಕ ರಾಜೀನಾಮೆ ನೀಡಿದ್ದಾರೆ. ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅವರಿಗೆ ತಮ್ಮ ರಾಜಿನಾಮೆ ಪತ್ರವನ್ನು ಸಲ್ಲಿಸಿರುವ ಬೈಲಕೆರೆಯ ಬಿಜೆಪಿ ಕಾರ್ಯಕರ್ತರು, ಹಿಂದು ಕಾರ್ಯಕರ್ತರಿಗೆ ರಕ್ಷಣೆ ಇಲ್ಲ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಬೈಲಕೆರೆ, ಬಿಜೆಪಿ ಕಾರ್ಯಕರ್ತರು ಬಿಜೆಪಿಯಲ್ಲಿ ಹಲವಾರು ಸಮಯದಿಂದ ಜವಾಬ್ದಾರಿಯುತ ಕಾರ್ಯಕರ್ತರಾಗಿ ದುಡಿಯುತ್ತಿದ್ದೇವೆ. ನಾವು ಕಾರ್ಯಕರ್ತರ ನಿರಂತರ ಹತ್ಯಾಕಾಂಡದಿಂದ ಬೇಸತ್ತು, ಹಿಂದೂ ಕಾರ್ಯಕರ್ತರ ಸುರಕ್ಷತೆಯ ಬಗ್ಗೆ ಯೋಚಿಸದ ಬಿಜೆಪಿ ಸರಕಾರದಿಂದ ವಿಶ್ವಾಸ ಕಳೆದುಕೊಂಡಿರುವುದರಿಂದ ಅತ್ಯಂತ ನೋವಿನಿಂದ ಕಠಿಣ ನಿರ್ಧಾರ ತೆಗೆದುಕೊಂಡು ರಾಜಿನಾಮೆ ನೀಡುತ್ತಿರುವುದಾಗಿ ಪತ್ರದಲ್ಲಿ ತಿಳಿಸಲಾಗಿದೆ.

Read More

ಮಂಗಳೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್ ಹತ್ಯೆಗೆ ಮೇಲ್ನೋಟಕ್ಕೆ 2-3 ಕಾರಣಗಳು ಕಂಡು ಬರುತ್ತಿದೆ. ಆರೋಪಿಗಳನ್ನು ದಸ್ತಗಿರಿ ಮಾಡಿದ ಮೇಲೆ ಹತ್ಯೆಗೆ ಕಾರಣ ತಿಳಿಸುತ್ತೇವೆ. ವಶಕ್ಕೆ ಪಡೆದವರಲ್ಲಿ ಅವರು ಯಾರು ಎಂಬುದನ್ನು ಸದ್ಯಕ್ಕೆ ಹೇಳಲು ಸಾಧ್ಯವಿಲ್ಲ ಎಂದು ಸುಳ್ಯದ ಬೆಳ್ಳಾರೆಯಲ್ಲಿ ಎಡಿಜಿಪಿ ಅಲೋಕ್ ಕುಮಾರ್ ಹೇಳಿಕೆ ನೀಡಿದ್ದಾರೆ. ಘಟನೆಯ ಬಗ್ಗೆ ಮುಖ್ಯಮಂತ್ರಿ ಮತ್ತು ಗೃಹ ಮಂತ್ರಿ ನಿನ್ನೆಯಿಂದ ಮಾಹಿತಿ ಪಡೆದಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ಮಾಡಿ ಎಲ್ಲಾ ಆಯಾಮಗಳಲ್ಲಿ ತನಿಖೆ ಮಾಡುತ್ತಿದ್ದಾರೆ. ಮಂಗಳೂರು ಕಮಿಷನರ್ ಸಹಾಯ ಕೂಡ ಪಡೆಯಲಾಗಿದೆ.‌ ಉಡುಪಿ ಪೊಲೀಸರ ಸಹಾಯ ಕೂಡ ಪಡೆಯಲಾಗಿದೆ. ದಕ್ಷ ಅಧಿಕಾರಿಗಳ 6 ತಂಡ ನಾವು ರಚನೆ ಮಾಡಿದ್ದು ಈಗಾಗಲೇ 15ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದು ವಿಚಾರಣೆ ಮಾಡುತ್ತಿದ್ದೇವೆ ಎಂದಿದ್ದಾರೆ. ಇನ್ನು ಅಂತಿಮ ದರ್ಶನಕ್ಕೆ ಸಂಸದರು ಸಚಿವರುಗಳು ಸ್ಥಳಕ್ಕೆ ಬಂದಿದ್ದಾರೆ. ಜನರು ಭಾವಾವೇಶದಿಂದ ವಾಹನವನ್ನು ತಳ್ಳಲು ಪ್ರಯತ್ನ ಮಾಡಿದ್ದಾರೆ. ಪರಿಸ್ಥಿತಿ ಹತೋಟಿಗೆ ತರಲು ಲಘುಲಾಠಿ ಪ್ರಹಾರ ಮಾಡಬೇಕಾಯಿತು. ಡಿ.ಸಿ ಸೆಕ್ಷನ್ 144 ಜಾರಿ…

Read More

ಸುರತ್ಕಲ್‌: ಮಗುವಿನ ಅಶ್ಲೀಲ ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಕಳುಹಿಸಿರುವುದು ಹಾಗೂ ಅದರ ಬಗ್ಗೆ ಕಮೆಂಟ್‌ ಮಾಡಿರುವ ಬಗ್ಗೆ ಸುರತ್ಕಲ್‌ ಠಾಣೆಯಲ್ಲಿ ಚಿತ್ತರಂಜನ್‌ ಶೆಟ್ಟಿ ವಿರುದ್ಧ ಕೇಸು ದಾಖಲಾಗಿದೆ. ಕೇಂದ್ರದ ಅಪರಾಧ ನಿಯಂತ್ರಣದ ಸೈಬರ್‌ ಟಿಪ್‌ ಪೋರ್ಟಲ್‌ ಮೂಲಕ ಕಳುಹಿಸಿರುವ ಅರ್ಜಿಯ ಪ್ರಕಾರ ಪ್ರಕರಣ ದಾಖಲಾಗಿದೆ. ಚಿತ್ತರಂಜನ್‌ ಶೆಟ್ಟಿ ಅಶ್ಲೀಲತೆಯ ವೀಡಿಯೋವನ್ನು ಕಳುಹಿಸಿರುವ ಮಾಹಿತಿ ಪೋರ್ಟಲ್‌ನಲ್ಲಿ ದಾಖಲಾಗಿದೆ. ಇದೊಂದು ಅತ್ಯಾಧುನಿಕ ಪೋರ್ಟಲ್‌ ಆಗಿದ್ದು ಇದರಲ್ಲಿ ಲೈಂಗಿಕ ದೌರ್ಜನ್ಯ ವೀಡಿಯೋ ರವಾನೆ ಆದಲ್ಲಿ ಮಾಹಿತಿಗಳು ದಾಖಲಾಗುತ್ತದೆ. ಸಾಕ್ಷಿಗಳ ಆಧಾರದ ಮೇಲೆ ಆರೋಪಿ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Read More

ಕಳೆದ ವಾರದ ಸುರಿದ ಭಾರೀ ಮಳೆಯಿಂದ ಮಡಿಕೇರಿ ಜಿಲ್ಲಾಧಿಕಾರಿ ಕಚೇರಿ ಬಳಿ ತಡೆಗೋಡೆಯಲ್ಲಿ ಉಬ್ಬು ಕಂಡು ಬಂದಿದ್ದರಿಂದ ತಾತ್ಕಾಲಿಕವಾಗಿ ನಿಷೇಧಿಸಿದ್ದ ಮಡಿಕೇರಿ -ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದಿನಿಂದ ಲಘು ವಾಹನಗಳ ಸಂಚಾರಕ್ಕೆ ಕೊಡಗು ಜಿಲ್ಲಾಡಳಿತ ಅವಕಾಶ ಮಾಡಿಕೊಟ್ಟಿದೆ. ಕಳೆದ ವಾರದ ಸುರಿದ ಭಾರೀ ಮಳೆಯಿಂದಾಗಿ ಮಡಿಕೇರಿ- ಮಂಗಳೂರು ರಸ್ತೆ ಕುಸಿತಗೊಂಡಿದ್ದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ 275ರ ಸಂಪರ್ಕವನ್ನು ನಿಷೇಧ ಮಾಡಲಾಯಿತುಇನ್ನು ತಡೆಗೋಡೆಯ ಉಬ್ಬುವಿಕೆಯನ್ನು ತಡೆಯಲು ತಾತ್ಕಾಲಿಕವಾಗಿ ಸ್ಯಾಂಡ್ ಬಂಡಲ್‍ಗಳನ್ನು ಹಾಕಿ ಕಾಮಗಾರಿಯನ್ನು ಮಾಡಲಾಗಿದ್ದು, ಇದೀಗ ಲಘು ವಾಹನಗಳ ಸಂಚಾರಕ್ಕೆ ಕೊಡಗು ಜಿಲ್ಲಾಡಳಿತ ಅವಕಾಶ ಮಾಡಿಕೊಟ್ಟಿದೆ.

Read More

ಉಳ್ಳಾಲ:  ಅಪ್ರಾಪ್ತ ಮಗಳ ಮೇಲೆಯೇ ಮಲತಂದೆಯೋರ್ವ ಅತ್ಯಾಚಾರವೆಸಗಿರುವ ಘಟನೆ ಕೊಣಾಜೆ‌ ಪೊಲೀಸ್ ಠಾಣಾ ವ್ಯಾಪ್ತಿಯ ಪಾವೂರು ಎಂಬಲ್ಲಿ ನಡೆದಿದೆ. ಪ್ರಕರಣ ಸಂಬಂಧ ಆರೋಪಿ ಅಶ್ವಥ್ (25) ಎಂಬಾತನನ್ನು ಕೊಣಾಜೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹೊರ ಜಿಲ್ಲೆಯಿಂದ ಬಂದ ಕುಟುಂಬ ಪಾವೂರಿನಲ್ಲಿ ನೆಲೆಸಿತ್ತು. ಮಹಿಳೆಯ ಪತಿ ಸಾವನ್ನಪ್ಪಿದ ಬಳಿಕ ಅಶ್ವಥ್ ಜತೆಗೆ ಸಂತ್ರಸ್ತ ಬಾಲಕಿಯ ತಾಯಿ ಸಂಸಾರ ನಡೆಸುತ್ತಿದ್ದರು. ಆಕೆ ಹೆರಿಗೆಗೆಂದು ಆಸ್ಪತ್ರೆಗೆ ದಾಖಲಾದ ಹಿನ್ನೆಲೆಯಲ್ಲಿ ಅಶ್ವಥ್ ಹಾಗೂ ಬಾಲಕಿ ಮನೆಯಲ್ಲಿದ್ದರು. ಈ ಸಂದರ್ಭದಲ್ಲಿ ಬಾಲಕಿ ಮೇಲೆ ಆರೋಪಿ ಅತ್ಯಾಚಾರವೆಸಗಿದ್ದಾನೆ ಎನ್ನಲಾಗ್ತಿದೆ. ವಿಪರೀತ ರಕ್ತಸ್ರಾವವಾದ ಕಾರಣ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಪಾಂಡೇಶ್ವರದ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Read More

ಪುತ್ತೂರು ತಾಲೂಕು ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಬಳಿಕ ಪ್ರವೀಣ್ ನೆಟ್ಟಾರು ಮೃತದೇಹವನ್ನು ಬೆಳಗ್ಗೆ ಕುಟುಂಬಸ್ಥರಿಗೆ ಹಸ್ತಾಂತರಿಸಲಾಯುತು. ಪುತ್ತೂರಿನಿಂದ ಸವಣೂರು ನಿಂತಿಕಲ್ಲು ಮಾರ್ಗವಾಗಿ ಪ್ರವೀಣ್ ಪಾರ್ಥೀವ ಶರೀರವನ್ನು ಮೆರವಣಿಗೆ ಮೂಲಕ ಕರೆತರಲಾಗುತ್ತಿದ್ದು, ಹುಟ್ಟೂರು ನೆಟ್ಟಾರಿನಲ್ಲಿ ಅಂತ್ಯ ಸಂಸ್ಕಾರ ನಡೆಸಲು ತೀರ್ಮಾನಿಸಲಾಗಿದೆ. ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು(29) ಅವರನ್ನು ನಗರದ ಬೆಳ್ಳಾರೆ ಪೇಟೆಯಲ್ಲಿ ಹತ್ಯೆ ಮಾಡಲಾಗಿದೆ. ಈ ಬರ್ಬರ ಹತ್ಯೆಯನ್ನು ಖಂಡಿಸಿ ಪುತ್ತೂರು, ಸುಳ್ಯ, ಕಡಬ ತಾಲೂಕಿನಲ್ಲಿ ಸ್ವಯಂಪ್ರೇರಿತ ಬಂದ್‌ಗೆ ವಿಎಚ್‌ಪಿ, ಭಜರಂಗದಳ, ಹಿಂದೂ ಜಾಗರಣ ವೇದಿಕೆ ಕರೆ ನೀಡಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರು ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸಿದ್ದಾರೆ.

Read More

ಪುತ್ತೂರು: ಬಿಜೆಪಿ ಯುವ ಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರ್(32) ಅವರನ್ನು ದುಷ್ಕರ್ಮಿಗಳು ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆ ಖಂಡಿಸಿ ಪುತ್ತೂರು ಬೆಳ್ಳಾರೆಯಲ್ಲಿ ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡಲಾಗಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡು ಬಸ್‌ನ ಮೇಲೆ ಕಲ್ಲೆಸೆದಿರುವ ಘಟನೆ ನಡೆದಿದೆ.ಪುತ್ತೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಕೆಎಸ್‌‌ಆರ್‌‌ಟಿಸಿ ಬಸ್ ಮೇಲೆ ಬೊಳುವಾರಿನಲ್ಲಿ ಕಲ್ಲೆಸೆದಿದ್ದು, ಬಸ್‌ನ ಮುಂಬಾಗದ ಗಾಜು ಹುಡಿಯಾಗಿದೆ.ಇನ್ನು ಪ್ರವೀಣ್ ಹತ್ಯೆ ಖಂಡಿಸಿ ಹಿಂದೂ ಸಂಘಟನೆಗಳೂ ಕರೆ ನೀಡಿರುವ ಬಂದ್ ಗೆ ಬೆಂಬಲಿಸಿ ಪುತ್ತೂರಿನ ವಿವೇಕಾನಂದ ಕಾಲೇಜು ಮತ್ತು ಅಂಬಿಕಾ ಸಮೂಹ ವಿದ್ಯಾಸಂಸ್ಥೆಗಳಿಗೆ, ಪ್ರಗತಿ ಸ್ಟಡಿ ಸೆಂಟರ್‌‌ಗೆ ರಜೆ ಘೋಷಣೆ ಮಾಡಲಾಗಿದೆ.ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಪ್ರವೀಣ್ ಅವರ ಮರಣೋತ್ತರ ಪರೀಕ್ಷೆ ನಡೆದಿದ್ದು, ಸರಕಾರಿ ಆಸ್ಪತ್ರೆ ಶವಾಗಾರದಲ್ಲಿ ಪ್ರವೀಣ್ ಮೃತದೇಹ ಇಡಲಾಗಿದ್ದು, ಮೆರವಣಿಗೆ ಮೂಲಕ ಮೃತದೇಹ ಸಾಗಿಸಲು ಬಿಜೆಪಿ ಕಾರ್ಯಕರ್ತರು ಹಿಂದೂ ಪರ ಸಂಘಟನೆ ಕಾರ್ಯಕರ್ತರು ಸಿದ್ಧತೆ ನಡೆಸಿದ್ದಾರೆ.ಪ್ರವೀಣ್ ನೆಟ್ಟಾರು ಅವರು ಬೆಳ್ಳಾರೆಯಲ್ಲಿ ಕೋಳಿ ಅಂಗಡಿ ನಡೆಸುತ್ತಿದ್ದರು. ಬೆಳ್ಳಾರೆ ಪೇಟೆಯಲ್ಲಿ ತನ್ನ ಅಂಗಡಿ ಮುಚ್ಚುತ್ತಿದ್ದಾಗ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ಮಾಡಿ, ಬರ್ಬರವಾಗಿ ಹತ್ಯೆ…

Read More

ಸುಳ್ಯ: ಬೆಳ್ಳಾರೆಯಲ್ಲಿ ಹಿಂದೂ ಸಂಘಟನೆಯ ಮುಖಂಡನನ್ನು ತಲವಾರಿನಿಂದ ಕಡಿದು ಬರ್ಬರವಾಗಿ ಕೊಲೆ ಮಾಡಲಾಗಿದೆ. ಹೌದು ಬಿಜೆಪಿ ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯ ನ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆದಿರುವ ಘಟನೆ ಬೆಳ್ಳಾರೆಯಲ್ಲಿ ನಡೆದಿದೆ. ಪ್ರವೀಣ್ ನೆಟ್ಟಾರು (32) ಮೃತ ವ್ಯಕ್ತಿಯಾಗಿದ್ದಾರೆ. ಬೈಕ್ ನಲ್ಲಿ ಬಂದ ತಂಡ ತಲವಾರಿನಿಂದ ದಾಳಿ ಮಾಡಿದೆ. ದಾಳಿಗೊಳಗಾದ ಪ್ರವೀಣ್ ರನ್ನು ಆಂಬ್ಯುಲೆನ್ಸ್ ನಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾದರು ಪ್ರಯೋಜನವಾಗಿಲ್ಲ. ಬೆಳ್ಳಾರೆ ಪೆಟ್ರೋಲ್ ಪಂಪ್ ಬಳಿಯ ಮಾಸ್ತಿ ಕಟ್ಟೆ ಎಂಬಲ್ಲಿ ಬಿಜೆಪಿ ಜಿಲ್ಲಾ ಯುವಮೋರ್ಚಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು ಮೇಲೆ ಅಪರಿಚಿತರು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಪರಾರಿಯಾಗಿದ್ದಾರೆ. ಬೆಳ್ಳಾರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿದ್ದಾರೆ. ಇತ್ತೀಚೆಗಷ್ಟೇ ಬೆಳ್ಳಾರೆಯ ಕಳಂಜ ಎಂಬಲ್ಲಿ ಮಸೂದ್ ಎಂಬ ಮುಸ್ಲಿಂ ಯುವಕನನ್ನು ಸಂಘಪರಿವಾರದ ಕಾರ್ಯಕರ್ತರು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆ ಗೈದಿದ್ದರು. ಈ ಕೃತ್ಯಕ್ಕೆ ಸಂಬಂಧಿಸಿದಂತೆ ರಿವೆಂಜ್ ಪಡೆದುಕೊಂಡಿರಬಹುದು ಎಂದು ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

Read More

ಮುಂಬೈ: ಮಂಕಿಪಾಕ್ಸ್‌ ವೈರಸ್‌ ಸೋಂಕು ಪತ್ತೆಗಾಗಿ ಜೀನ್ಸ್‌2ಮಿ ಪ್ರೈವೇಟ್‌ ಲಿಮಿಟೆಡ್‌ ಎಂಬ ಕಂಪನಿಯು ಆರ್‌ಟಿ- ಪಿಸಿಆರ್‌ ಆಧರಿತ ಕಿಟ್ ಬಿಡುಗಡೆ ಮಾಡಿದೆ. ವ್ಯಕ್ತಿಯಲ್ಲಿ ಮಂಕಿಪಾಕ್ಸ್‌ ವೈರಸ್‌ನ ಸೋಂಕು ಇರುವುದನ್ನು ಈ ಕಿಟ್ ಬಳಸಿ ನಡೆಸುವ ಪರೀಕ್ಷೆಯಿಂದ 50 ನಿಮಿಷಕ್ಕೂ ಕಡಿಮೆ ಸಮಯದಲ್ಲಿ ತಿಳಿಯಬಹುದಾಗಿದೆ ಎಂದು ಕಂಪನಿ ಮೂಲಗಳು ಹೇಳಿವೆ. ‘ಕಂಪನಿ ತಯಾರಿಸುವ ಕಿಟ್‌ಗಳು ಗರಿಷ್ಠ ಮಟ್ಟದ ನಿಖರತೆಯ ಫಲಿತಾಂಶ ನೀಡುತ್ತವೆ. ಅಲ್ಪಸಮಯದಲ್ಲಿಯೇ ಸೋಂಕು ಪತ್ತೆ ಹಚ್ಚುವುದು ಸಾಧ್ಯವಾಗಬೇಕು ಎಂಬ ಉದ್ದೇಶದಿಂದ ಈ ಆರ್‌ಟಿ-ಪಿಸಿಆರ್‌ ಆಧರಿತ ಪರೀಕ್ಷಾ ಕಿಟ್‌ಗಳನ್ನು ಬಿಡುಗಡೆ ಮಾಡಲಾಗಿದೆ’ ಎಂದು ಜೀನ್ಸ್‌2ಮಿ ಕಂಪನಿಯ ಸಿಇಒ ಹಾಗೂ ಸಂಸ್ಥಾಪಕ ನೀರಜ್‌ ಗುಪ್ತಾ ಹೇಳಿದ್ದಾರೆ. ಮಾನವ ದೇಹದಿಂದ ಸಂಗ್ರಹಿಸಿದ ಮಾದರಿಗಳ ಪರೀಕ್ಷೆಗೆ ಬಳಸುವ ಸಾಧನಗಳ (ಐವಿಡಿ) ತಯಾರಿಕೆಯಲ್ಲಿ ಜೀನ್ಸ್‌2ಮಿ ಪ್ರೈವೇಟ್‌ ಲಿಮಿಟೆಡ್‌ ಮುಂಚೂಣಿಯಲ್ಲಿದೆ. ಕಂಪನಿಯು ಎರಡು ವಿಧದ ಕಿಟ್‌ಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಸಾಮಾನ್ಯವಾಗಿ ಬಳಸಬಹುದಾದ ಪಿಸಿಆರ್‌ ಆಧಾರಿತ ಕಿಟ್‌ ಹಾಗೂ ಆಸ್ಪತ್ರೆಗಳು, ವಿಮಾನನಿಲ್ದಾಣಗಳು, ಡಯಾಗ್ನೊಸ್ಟಿಕ್‌ ಕೇಂದ್ರಗಳು, ಪ್ರಯೋಗಾಲಯಗಳು ಹಾಗೂ ಆರೋಗ್ಯ ಶಿಬಿರಗಳಲ್ಲಿ ಬಳಸಬಹುದಾದ…

Read More