ಉಡುಪಿ ತಾಲೂಕಿನ ಶಿವಳ್ಳಿ ಗ್ರಾಮದ ರಾಯಲ್ ಎಂಬೆಸಿ ಅಪಾರ್ಟ್ಮೆಂಟ್ನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಸೆಪ್ಟೆಂಬರ್ 18ರಂದು ರಾತ್ರಿ 11 ಗಂಟೆಗೆ ಮಣಿಪಾಲ ಠಾಣಾ ಪೊಲೀಸ್ ನಿರೀಕ್ಷಕ ಮಹೇಶ್ ಪ್ರಸಾದ್ ನೇತೃತ್ವದ ತಂಡವು, ರಾಯಲ್ ಎಂಬೆಸಿ ಅಪಾರ್ಟ್ಮೆಂಟ್ 17ನೇ ಮಹಡಿಯ ಫ್ಲಾಟ್ (C-1702) ಮೇಲೆ ದಾಳಿ ನಡೆಸಿ ಆರ್ಯನ್ ಸಿ. ತಾದಾನಿ ಎಂಬಾತನನ್ನು ಬಂಧಿಸಿದೆ. ಅವನಿಂದ 2.105 ಕೆಜಿ (₹60,000 ಮೌಲ್ಯ) ಗಾಂಜಾ, ಹುಕ್ಕಾ, ಡಿಜಿಟಲ್ ಸ್ಕೇಲ್ ಹಾಗೂ ₹75,000 ಮೌಲ್ಯದ ಐಫೋನ್ ಸ್ವಾಧೀನಪಡಿಸಿಕೊಂಡಿದ್ದಾರೆ. ಮುಂದಿನ ತನಿಖೆಯಲ್ಲಿ ಇನ್ನೋರ್ವ ಆರೋಪಿ ಆರ್ಯನ್ ಚಗಪ್ಪನನ್ನು ಮಂಗಳೂರಿನಲ್ಲಿ ಬಂಧಿಸಲಾಗಿದ್ದು, ಅವನ ಸ್ಕೂಟಿ (KA 20 EX 7595)ಯಿಂದ 627 ಗ್ರಾಂ (₹20,000 ಮೌಲ್ಯದ) ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಬಂಧಿತರು ಇಬ್ಬರೂ ಮಣಿಪಾಲದ ಪ್ರತಿಷ್ಠಿತ ಕಾಲೇಜಿನ ಬಿಸಿನೆಸ್ ಮ್ಯಾನೇಜ್ಮೆಂಟ್ ವಿದ್ಯಾರ್ಥಿಗಳು. ಮಾದಕ ವ್ಯಸನಿಗಳಾಗಿರುವ ಇವರು ಗಾಂಜಾವನ್ನು ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದರೆಂಬುದು ತನಿಖೆಯಿಂದ ಬಹಿರಂಗವಾಗಿದೆ. ಮಣಿಪಾಲ ಠಾಣೆಯಲ್ಲಿ NDPS ಕಾಯ್ದೆಯ ಕಲಂ 8(c),…
Author: main-admin
ಬೆಳ್ತಂಗಡಿ: ಕೊಯ್ಯೂರಿನಲ್ಲಿ ಮಹಿಳೆಯ ಕುತ್ತಿಗೆಯಿಂದ ಚಿನ್ನದ ಕರಿಮಣಿ ಸರ ಎಳೆದ ಪ್ರಕರಣದ ಆರೋಪಿ ಉಮೇಶ್ ಗೌಡ ಎಂಬಾತನಿಗೆ ಬೆಳ್ತಂಗಡಿ ನ್ಯಾಯಾಲಯವು ಮೂರು ವರ್ಷ ಕಠಿಣ ಸಜೆ ಹಾಗೂ ದಂಡ ವಿಧಿಸಿದೆ. 2024 ಡಿಸೆಂಬರ್ 9ರಂದು ಕೊಯ್ಯೂರು ಗ್ರಾಮದ ಪಾಂಬೇಲು ಎಂಬಲ್ಲಿ ರಸ್ತೆಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಕುತ್ತಿಗೆಯಿಂದ ಆರೋಪಿ ಉಮೇಶ್ ಗೌಡ ಚಿನ್ನದ ಸರವನ್ನು ಎಳೆದು ತುಂಡರಿಸಿ ಸರದೊಂದಿಗೆ ತಪ್ಪಿಸಿಕೊಂಡಿದ್ದು ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಕೊಳ್ಳಲಾಗಿತ್ತು. ಆರೋಪಿಯನ್ನು ಅದೇ ದಿನ ಬಂಧಿಸಲಾಗಿತ್ತು. ತನಿಖಾಧಿಕಾರಿಯಾದ ಬೆಳ್ತಂಗಡಿ ಠಾಣೆಯ ಪೊಲೀಸ್ ನಿರೀಕ್ಷಕರಾದ ಸುಬ್ಬಾಪುರ ಮಠ್ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು. 126(2),309(5), 309(6) ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಈ ಆರೋಪಗಳು ನ್ಯಾಯಾಲಯದಲ್ಲಿ ಸಾಬೀತಾಗಿದ್ದು ಆರೋಪಿಗೆ ಮೂರು ವರ್ಷ ಕಠಿಣ ಕಾರಾಗೃಹ ವಾಸ ಹಾಗೂ 20 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.
ಕುಂದಾಪುರ: ಗುರುವಾರ ಸಂಜೆ ಕಾಲೇಜಿನಿಂದ ಮನೆಗೆ ಬಾರದೆ ನಾಪತ್ತೆಯಾಗಿದ್ದ ಕಾಲೇಜು ವಿದ್ಯಾರ್ಥಿಯೋರ್ವನ ಮೃತದೇಹ ಶನಿವಾರ ಬೆಳಿಗ್ಗೆ ಗಂಗೊಳ್ಳಿಯ ದಾಕುಹಿತ್ಲು ನದಿತೀರದಲ್ಲಿ ಪತ್ತೆಯಾಗಿದೆ. ಖಾಸಗಿ ಕಾಲೇಜೊಂದರ ಪ್ರಥಮ ಪಿಯುಸಿ ವಿದ್ಯಾರ್ಥಿ, ಹೆಮ್ಮಾಡಿ ಸಂತೋಷನಗರ ನಿವಾಸಿ ಲವೇಶ್ ಪೂಜಾರಿ ಇವರ ಪುತ್ರ ನಮೇಶ್ (17) ಮೃತ ವಿದ್ಯಾರ್ಥಿ ಗುರುವಾರ ಸಂಜೆ ಕಾಲೇಜು ಬಿಟ್ಟ ಬಳಿಕ ನಮೇಶ್ ಮನೆಗೆ ವಾಪಾಸಾಗಿರಲಿಲ್ಲ. ಇತ್ತೀಚೆಗಷ್ಟೇ ತಂದೆ ಕೊಡಿಸಿದ್ದ ತನ್ನ ಐಫೋನ್ ಮೊಬೈಲ್ ಅನ್ನು ಮನೆಯಲ್ಲಿಯೇ ಬಿಟ್ಟು ಬೈಕ್‌ನಲ್ಲಿ ತೆರಳಿದ್ದ ನಮೇಶ್ ಹೆಮ್ಮಾಡಿ ಸಮೀಪದ ಕನ್ನಡಕುದ್ರು ನದಿ ತೀರದಲ್ಲಿ ಬೈಕ್ ಹಾಗೂ ತನ್ನ ಕಾಲೇಜು ಬ್ಯಾಗ್ ಅನ್ನು ಬಿಟ್ಟು ನಾಪತ್ತೆಯಾಗಿದ್ದನು. ನಮೇಶ್ ಗಾಗಿ ತೀವ್ರ ಹುಡುಕಾಟ:ನಮೇಶ್ ರಾತ್ರಿಯಾದರೂ ಮನೆಗೆ ಬಾರದಿದ್ದುದನ್ನು ಗಮಿಸಿದ ಮನೆಯವರು ಕುಂದಾಪುರ ನಗರ ಠಾಣೆಯಲ್ಲಿ ದೂರು ದಾಖಲಿಸಿ ಹುಡುಕಾಟ ಆರಂಭಿಸಿದ್ದರು. ಗುರುವಾರ ಪತ್ತೆಯಾಗದ ಕಾರಣ ಶುಕ್ರವಾರವೂ ಹುಟುಕಾಟ ಮುಂದಿವರೆಸಿದ್ದು, ಅಗ್ನಿಶಾಮಕದಳ ಹಾಗೂ ಗಂಗೊಳ್ಳಿಯ ಈಜುಪಟು ದಿನೇಶ್ ಖಾರ್ವಿ ಹಾಗೂ ಸ್ಥಳೀಯರು ಕನ್ನಡಕುದ್ರು ನದಿಯಲ್ಲಿ ಸಂಜೆಯ ತನಕವೂ ಹುಟುಕಾಟ ನಡೆಸಿದ್ದರು.…
ಬೆಂಗಳೂರು : ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಸಿಹಿಸುದ್ದಿ ಸಿಕ್ಕಿದ್ದು, ಗೃಹ ಇಲಾಖೆಯಲ್ಲಿ ಖಾಲಿ ಇರುವ 15,000 ಪೇದೆ ಹುದ್ದೆಗಳ ನೇಮಕಾತಿಗಾಗಿ ವೇಳಾಪಟ್ಟಿ ಮಾಡಲು ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,. 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪೂರ್ಣಗೊಂಡಿದೆ. 402 ಪಿಎಸ್‌ಐ ಹುದ್ದೆಗಳಲ್ಲಿ ಈಗಾಗಲೇ 398 ಹುದ್ದೆಗಳಿಗೆ ಆದೇಶ ಹೊರಡಿಸಲಾಗಿದ್ದು, ಗೃಹ ಇಲಾಖೆಯಲ್ಲಿ ಖಾಲಿ ಇರುವ 15,000 ಪೇದೆ ಹುದ್ದೆಗಳ ನೇಮಕಾತಿಗಾಗಿ ವೇಳಾಪಟ್ಟಿ ಮಾಡಲು ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ. ಡ್ರಗ್ಸ್ ಹಾವಳಿ ಬಗ್ಗೆ ಚರ್ಚೆ ಮಾಡಲಾಗಿದ್ದು, ನಿಯಂತ್ರಣಕ್ಕೆ ಸೂಚಿಸಲಾಗಿದೆ. ಡ್ರಗ್ ಪೆಡ್ಲರ್ ಜತೆ ನಂಟು ಸಂಬಂಧ 11 ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಇಲಾಖಾ ವಿಚಾರಣೆ ಮಾಡಿ ಬಳಿಕ ವಜಾ ಮಾಡುವ ಬಗ್ಗೆ ತೀರ್ಮಾನಿಸಲಾಗುವುದು ಎಂದು ತಿಳಿಸಿದರು.
ಕಾಪು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಅಪರಾಧ ಪ್ರಕರಣವೊಂದಕ್ಕೆ ಸಂಬಂಧಿಸಿ ಗರುಡ ಗ್ಯಾಂಗಿನ ಆರೋಪಿಯನ್ನು ಬಂಧಿಸಿದ ಘಟನೆ ನಡೆದಿದೆ. ಬಂಧಿತ ಆರೋಪಿಯನ್ನು ಕುಂದಾಪುರ ನಾವುಂದ ನಿವಾಸಿ ಮೊಹಮ್ಮದ್ ಆಸೀಪ್ ಎಂದು ಗುರುತಿಸಲಾಗಿದೆ. ಈತನು ಫೆಬ್ರವರಿ 2025 ರಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ. ಕಾಪು ಪೊಲೀಸ್ ಠಾಣೆಯಲ್ಲಿ ಮಾತ್ರವಲ್ಲದೇ, ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ 4 ಪ್ರಕರಣಗಳು, ಬೈಂದೂರು ಪೊಲೀಸ್ ಠಾಣೆಯಲ್ಲಿ 2 ಪ್ರಕರಣ ಹಾಗೂ ಮಂಗಳೂರಿನ ಕಂಕನಾಡಿ ಪೊಲೀಸ್ ಠಾಣೆಯಲ್ಲಿ 2 ಹಾಗೂ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ 2, ಪ್ರಕರಣಗಳು ದಾಖಲಾಗಿದ್ದು ನ್ಯಾಯಾಲಯಗಳಲ್ಲಿ ವಿಚಾರಣೆಯಲ್ಲಿವೆ. ಎಲ್ಲಾ ಪ್ರಕರಣಗಳಲ್ಲಿಯೂ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ. ಆರೋಪಿಯನ್ನು ಸೆ. 18ರಂದು ಚಿಕ್ಕಮಗಳೂರು ನಗರದ ಗೌರಿ ಕಾಲುವೆ ಎಂಬಲ್ಲಿ ಪತ್ತೆ ಹಚ್ಚಿ ಉಡುಪಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ಅ.16ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ನೀಡಿದ್ದಾರೆ. ವಾರೆಂಟ್ ಆರೋಪಿಯನ್ನು ಹಿರಿಯಡ್ಕದಲ್ಲಿರುವ ಜಿಲ್ಲಾ ಕಾರಾಗೃಹಕ್ಕೆ ಕಳುಹಿಸಲಾಗಿದೆ.
ಅಕ್ರಮ ಶಸ್ತ್ರಾಸ್ತ್ರ ಹೊಂದಿದ್ದ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆಗೆ ಹಾಜರಾಗುವಂತೆ ಮಹೇಶ್ ಶೆಟ್ಟಿ ತಿಮರೋಡಿ ಮನೆಯ ಗೋಡೆಗೆ ಬೆಳ್ತಂಗಡಿ ಪೊಲೀಸರು ನೋಟಿಸ್ ಅಂಟಿಸಿದ್ದಾರೆ. ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆ ನಡೆಸುತ್ತಿರುವ ಎಸ್‌ಐಟಿ ತಂಡ ಮಹೇಶ್ ಶೆಟ್ಟಿ ತಿಮರೋಡಿಯ ಮನೆಯಲ್ಲಿ ಮಹಜರು ನಡೆಸುತ್ತಿದ್ದ ವೇಳೆ ಶಸ್ತ್ರಾಸ್ತ್ರಗಳು ಪತ್ತೆಯಾಗಿತ್ತು. ಅಕ್ರಮವಾಗಿ ಶಸ್ತ್ರಾಸ್ತ್ರ ಹೊಂದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲು ಪೊಲೀಸರು ತಿಮರೋಡಿ ಮನೆಗೆ ತೆರಳಿದ್ದರು. ಈ ವೇಳೆ ಮನೆಯಲ್ಲಿ ಯಾರೂ ಇಲ್ಲದ ಕಾರಣ ಪೊಲೀಸರು ನೋಟಿಸನ್ನು ಮನೆಯ ಗೋಡೆಗೆ ಅಂಟಿಸಿದ್ದಾರೆ. ನೋಟಿಸ್‌ನಲ್ಲಿ ಸೆ. 21ರಂದು ವಿಚಾರಣೆಗೆ ಹಾಜರಾಗುವಂತೆ ತಿಳಿಸಲಾಗಿದೆ.
ಮಂಗಳೂರು: ನಕಲಿ ಆಧಾರ್ ಕಾರ್ಡ್, ಪಹಣಿ ಪತ್ರ ಸೃಷ್ಟಿಸಿ ವಂಚಿಸುತ್ತಿದ್ದ ಪ್ರಕರಣ ಸಂಬಂಧ ಸುರತ್ಕಲ್ ಪೊಲೀಸರು ಮತ್ತೋರ್ವನನ್ನು ಬಂಧಿಸಿದ್ದಾರೆ. ಬಂಧಿತನನ್ನು ಗುರುಪುರ ಉಳಾಯಿಬೆಟ್ಟು ನಿವಾಸಿ ಮುಹಮ್ಮದ್ ಅಲಿ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಅಲಿ ಬಂಧನದೊಂದಿಗೆ ನಕಲಿ ಆಧಾರ್ ಕಾರ್ಡ್, ಪಹಣಿ ಪತ್ರ ಸೃಷ್ಟಿಸಿ ವಂಚಿಸಿ ಬಂಧನಕ್ಕೊಳಗಾದವರ ಸಂಖ್ಯೆ 6ಕ್ಕೆ ಏರಿದಂತಾಗಿದೆ. ಆರೋಪಿಯನ್ನು ಗುರುಪುರದಲ್ಲಿ ಬಂಧಿಸಿದ್ದ ಪೊಲೀಸರು, ಗುರುವಾರ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಈ ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಸಾಧ್ಯತೆ ಇದ್ದು, ಸದ್ಯ ಆರೋಪಿಯನ್ನು ಹೆಚ್ಚಿನ ವಿಚಾರಣೆಗಾಗಿ ಪೊಲೀಸರು ಕಸ್ಟಡಿಗೆ ಪಡೆದುಕೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ನಗರದ ದಡ್ಡಲ್ ಕಾಡ್ ಎಂಬಲ್ಲಿ ಆಧಾರ್ ಕಾರ್ಡ್ ಮತ್ತು ಪಹಣಿ ಪತ್ರಗಳನ್ನು ನಕಲಿಯಾಗಿ ಸೃಷ್ಟಿಸಿ ಸರಕಾರದ ಬೇರೆ ಬೇರೆ ಇಲಾಖೆಯ ಕಚೇರಿ ಮತ್ತು ನ್ಯಾಯಾಲಯಕ್ಕೆ ವಂಚಿಸುತ್ತಿರುವ ಕುರಿತು ಪೊಲೀಸರಿಗೆ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ನಗರದ ಉರ್ವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾಗುತ್ತಿದ್ದಂತೆ ಎಚ್ಚೆತ್ತುಕೊಂಡ ಪೊಲೀಸರು ಮುಲ್ಕಿ ನಿವಾಸಿ…
ಬಂಟ್ವಾಳ: ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಕಮೆಂಟ್ ಮಾಡಿದ ಪ್ರಕರಣವೊಂದು ವಿಟ್ಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಸೆಪ್ಟೆಂಬರ್ 18, 2025 ರಂದು ಬಂಟ್ವಾಳ ತಾಲೂಕು ನಿವಾಸಿ ಅಬ್ದುಲ್ ರಹಿಮಾನ್ (36) ಅವರು ತಮ್ಮ ಮೊಬೈಲ್‌ನಲ್ಲಿ ಫೇಸ್‌ಬುಕ್ ಅಪ್ಲಿಕೇಶನ್ ವೀಕ್ಷಿಸುತ್ತಿದ್ದಾಗ Vartha Bharati ಪೇಜ್‌ನಲ್ಲಿ ಹಾಕಿದ್ದ ನ್ಯೂಸ್ ರೀತಿಯ ಪೋಸ್ಟ್‌ಗೆ ಹಲವರು ಪ್ರತಿಕ್ರಿಯೆ ನೀಡಿರುವುದನ್ನು ಗಮನಿಸಿದ್ದಾರೆ. ಈ ವೇಳೆ ಸನಾತನಿ ಸಿಂಹ ಎಂಬ ಫೇಸ್‌ಬುಕ್ ಪೇಜ್‌ನಿಂದ ಸಮುದಾಯಗಳ ನಡುವೆ ಕೋಮು ಸೌಹಾರ್ದತೆಗೆ ಧಕ್ಕೆಯುಂಟು ಮಾಡುವ ರೀತಿಯ ಕಾಮೆಂಟ್ ಹಾಕಿರುವುದು ಕಂಡುಬಂದಿದೆ.ಈ ಕುರಿತು ನೀಡಿದ ದೂರಿನ ಮೇರೆಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ: 131/2025, ಕಲಂ 353(2) BNS 202303 ರಂತೆ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.
ಮಂಗಳೂರು: ನಗರದ ಸ್ಟೇಟ್‌ಬ್ಯಾಂಕ್ ಬಳಿ ವ್ಯಕ್ತಿಯೊಬ್ಬ ಟ್ರಾಫಿಕ್‌ನಲ್ಲಿ ಕರ್ತವ್ಯನಿರತ ಹೆಡ್‌ಕಾನ್ ಸ್ಟೇಬಲ್‌ರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಬಗ್ಗೆ ಉತ್ತರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸ್ಟೇಟ್‌ಬ್ಯಾಂಕ್ ವೃತ್ತದ ಬಳಿ ಮಹಿಳೆಯೊಬ್ಬರು ರಸ್ತೆ ದಾಟುತ್ತಿದ್ದಾಗ ಟ್ರಾಫಿಕ್ ಎಚ್‌ಸಿ ವಾಹನಗಳನ್ನು ನಿಲ್ಲಿಸುವಂತೆ ಸೂಚನೆ ನೀಡಿದ್ದರು. ಆದರೆ ಸ್ಕೂಟರ್ ಸವಾರ ನಾಟೆಕಲ್‌ನ ಆಸಿಫ್ ಬಾವ ಎಂಬಾತ ಅದನ್ನು ಲೆಕ್ಕಿಸದೆ ಸ್ಕೂಟರ್ ಚಲಾಯಿಸಿದ್ದು, ಈ ಸಂದರ್ಭ ಎಚ್‌ಸಿ ಸ್ಕೂಟರ್ ಸವಾರನಿಗೆ ಏಯ್ ಅಂತ ಹೇಳಿ ಕೈಯಿಂದ ಸವರಿದ್ದಾರೆ. ಇದರಿಂದ ಆಕ್ರೋಶಗೊಂಡ ಆಸಿಫ್ ಬಾವ ಟ್ರಾಫಿಕ್ ಎಚ್‌ಸಿ ಜೊತೆ ವಾಗ್ವಾದ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾನೆ ಎಂದು ಆರೋಪಿಸಲಾಗಿದೆ. ಪೊಲೀಸ್ ಜೊತೆ ವಾಗ್ವಾದ ನಡೆಸುತ್ತಿರುವುದನ್ನು ಸಾರ್ವಜನಿಕರೊಬ್ಬರು ವೀಡಿಯೋ ಮಾಡಿದ್ದು, ಅದೀಗ ವೈರಲ್ ಆಗಿದೆ. ಈ ವೀಡಿಯೋವನ್ನು ಪರಿಶೀಲಿಸಿದ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಸ್ಕೂಟರ್ ಸವಾರನು ಟ್ರಾಫಿಕ್ ಪೊಲೀಸ್ ರ ಕರ್ತವ್ಯಕ್ಕೆ ಅಡ್ಡಿಪಡಿಸಿರುವುದು ಸ್ಪಷ್ಟವಾಗಿದೆ. ಆ ಹಿನ್ನಲೆಯಲ್ಲಿ ಸ್ಕೂಟರ್ ಸವಾರನ ವಿರುದ್ಧ ಕರ್ತವ್ಯಕ್ಕೆ ಅಡ್ಡಿ, ಪೊಲೀಸ್ ನಿಂದನೆ ಪ್ರಕರಣ ದಾಖಲಿಸಲು…
ಮಂಗಳೂರು: ಲಯನ್ಸ್ ಇಂಟರ್ ನ್ಯಾಷನಲ್ ಜಿಲ್ಲೆ 317 ಡಿ ಇದರ ಆಶ್ರಯದಲ್ಲಿ “ಸಿಂಹವಾಹಿನಿ ಲಯನ್ಸ್ ಜಿಲ್ಲಾ ಸಾಂಸ್ಕೃತಿಕ ಸ್ಪರ್ಧೆ ಸೆಪ್ಟೆಂಬರ್ 21 ರಂದು ಭಾನುವಾರ ಬೆಳಿಗ್ಗೆ 8.30 ಕ್ಕೆ ಕುದ್ಮಲ್ ರಂಗರಾವ್ ಪುರಭವನ ಮಂಗಳೂರಿನಲ್ಲಿ ನಡೆಯಲಿದೆ ಎಂದು ಲಯನ್ ರಾಜೇಶ್ ಶೆಟ್ಟಿ ಶಬರಿ ತಿಳಿಸಿದರು. ಅವರು ನಗರದ ಲಯನ್ ಅಶೋಕದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿ, ಲಯನ್ಸ್ ಜಿಲ್ಲಾ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಸುಮಾರು 25 ತಂಡಗಳು ಭಾಗವಹಿಸಲಿದ್ದು, ಸೆಟ್ಟಿಂಗ್ ಸೇರಿ ಒಂದು ತಂಡಕ್ಕೆ 20 ನಿಮಿಷಗಳ ಕಾಲಾವಧಿ ನೀಡಲಾಗಿದೆ. ಪ್ರಶಸ್ತಿ ಪುರಸ್ಕೃತರಿಗೆ ನಗದು ಸಹಿತ ಪ್ರಶಸ್ತಿ ಪತ್ರಗಳನ್ನು ನೀಡಲಾಗುವುದು. ಪ್ರಧಾನ ಅತಿಥಿಗಳಾಗಿ ಖ್ಯಾತ ಹಿನ್ನಲೆ ಗಾಯಕಿ ಬಿ.ಕೆ. ಸುಮಿತ್ರ ಭಾಗವಹಿಸಲಿದ್ದಾರೆ. ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶಿಕ ಪ್ರಧಾನ ಅರ್ಚಕರಾದ ವೇದಮೂರ್ತಿ ಹರಿನಾರಾಯಣ ಅಸ್ರಣ್ಣ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಲಯನ್ಸ್ ಜಿಲ್ಲೆ 317 ಡಿ ಜಿಲ್ಲಾ ಗವರ್ನರ್ ಕುಡ್ಪಿ ಅರವಿಂದ ಶೆಣೈ ಸಮಾರಂಭವನ್ನು ಉದ್ಘಾಟಿಸಲಿದ್ದಾರೆ ಹಾಗೂ ಬಹುಮಾನ ವಿತರಿಸಲಿದ್ದಾರೆ. ಗೌರವ ಅತಿಥಿಗಳಾಗಿ…










