ಮಂಗಳೂರು: ಪಬ್ ಮೇಲೆ ಭಜರಂಗದಳ ದಾಳಿ ವಿಚಾರಕ್ಕೆ ಸಂಬಂಧಿಸಿದಂತೆ ಪಬ್ ನ ಮ್ಯಾನೇಜರ್ ಮತ್ತು ಸಿಬ್ಬಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಗರದ ಬಲ್ಮಠ ಬಳಿಯ ಪಬ್ ನ ಒಳಗೆ ಅಪ್ರಾಪ್ತರಿಗೂ ಪ್ರವೇಶ ನೀಡಲಾಗಿತ್ತು, ಇದಲ್ಲದೆ ಮದ್ಯ ನೀಡಿದ ವಿಚಾರವಾಗಿ ಪಬ್ ನ ಮ್ಯಾನೇಜರ್ ಮತ್ತು ಸಿಬ್ಬಂದಿಯನ್ನು ಮಂಗಳೂರು ಬಂದರು ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಂಗಳೂರಿನ ಪ್ರತಿಷ್ಠಿತ ಖಾಸಗಿ ಕಾಲೇಜು ವಿದ್ಯಾರ್ಥಿಗಳಿಂದ ಪಬ್ನಲ್ಲಿ ಪಾರ್ಟಿ ನಡೆಯುತಿದ್ದು, ಕಾಲೇಜು ಫೇರ್ ವೆಲ್ ನೆಪದಲ್ಲಿ ಪಬ್ ನಲ್ಲಿ ಕುಡಿದು ಯುವಕ-ಯುವತಿಯರಿಂದ ಮೋಜು ಮಸ್ತಿಯಲ್ಲಿ ತೊಡಗಿದ್ದ ವಿಚಾರವಾಗಿ ಭಜರಂಗದಳ ಕಾರ್ಯಕರ್ತರು ಪಬ್ ಪ್ರವೇಶ ಖಂಡಿಸಿ ನಿನ್ನೆ ಪಬ್ ಮುಂದೆ ಜಮಾವಣೆಗೊಂಡಿದ್ದರು.
Author: main-admin
ವಿಟ್ಲ: ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದಿಂದ ನಾಪತ್ತೆಯಾಗಿದ್ದ ಯುವತಿಯನ್ನು ವಿಟ್ಲ ಠಾಣಾ ಪೊಲೀಸರು ಚಿಕ್ಕಮಗಳೂರಿನಲ್ಲಿ ಪತ್ತೆ ಹಚ್ಚಿದ್ದಾರೆ. ಬಂಟ್ವಾಳ ತಾಲೂಕು ಕೊಳ್ಳಾಡು ಗ್ರಾಮದ ಬಸಬೆಟ್ಟು ನಿವಾಸಿ ರಝಾಕ್ ರವರ ಪುತ್ರಿ ಜು.22 ರಂದು ತನ್ನ ಮನೆಯಿಂದ ನಾಪತ್ತೆಯಾಗಿದ್ದರು. ಈ ಬಗ್ಗೆ ಅವರ ಸಹೋದರ ಅಬ್ದುಲ್ ಶರೀಫ್ ರವರು ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಆಕೆ ವಿಟ್ಲದ ನೆಲ್ಲಿಗುಡ್ಡೆಯಲ್ಲಿರುವ ಪುತ್ತೂರು ಮುಕ್ವೆ ಮೂಲದ ಮಂತ್ರವಾದಿ ಜೊತೆ ತೆರಳಿರುವುದಾಗಿ ಅಬ್ದುಲ್ ಶರೀಫ್ ರವರು ದೂರಿನಲ್ಲಿ ಶಂಕೆ ವ್ಯಕ್ತಪಡಿಸಿದ್ದರು. ಇದರಂತೆ ನಾಪತ್ತೆ ಪ್ರಕರಣ ದಾಖಲಿಸಿದ ಪೊಲೀಸರು ಹುಡುಕಾಟ ಆರಂಭಿಸಿ ಆಕೆಯನ್ನು ಚಿಕ್ಕಮಗಳೂರಿನಿಂದ ಪತ್ತೆ ಹಚ್ಚಿದ್ದಾರೆ. ಬಳಿಕ ಠಾಣೆಗೆ ಕರೆ ತಂದು ವಿಚಾರಣೆ ನಡೆಸಿ ಯುವತಿಯನ್ನು ಆಕೆಯ ಪೋಷಕರೊಂದಿಗೆ ಕಳುಹಿಸಿ ಕೊಡಲಾಗಿದೆ ಎಂದು ತಿಳಿದು ಬಂದಿದೆ.
ಮಂಗಳೂರು: ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿ ಕೊಂಡಿದ್ದ ಆರೋಪಿಯನ್ನು ಮಂಗಳೂರು ದಕ್ಷಿಣ ಪೊಲೀಸರು ಹಿಡಿದು ಬಂಧಿಸಿದ್ದಾರೆ. ಕಟ್ಟೆಬಯಲ್ ಅಡ್ಯಾರ್ ಪಡೀಲ್ ನಿವಾಸಿ ಸದ್ದಾಂ ಹುಸೇನ್ ತಂದೆ ಹೆಸರು ಉಮಾರಬ್ಬ ಎಂಬ ಆರೋಪಿಯ ಮೇಲೆ ದಕ್ಷಿಣ ಪೊಲೀಸ್ ಠಾಣೆಯಲ್ಲಿ ಕಾಲಂ 307.504.506ರ ಅಡಿಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಆರೋಪಿಯು ಸುಮಾರು 6 ತಿಂಗಳಿನಿಂದ ಪೊಲೀಸರ ಕೈಗೆ ಸಿಗದೇ ತಲೆಮರೆಸಿಕೊಂಡಿದ್ದು,ದಸ್ತಗಿರಿಗಾಗಿ ನ್ಯಾಯಲಯ ಅರೆಸ್ಟ್ ವಾರೆಂಟ್ ಹೊರಡಿಸಲಾಗಿತ್ತು. ಆರೋಪಿಯ ಬಗ್ಗೆ ಖಚಿತ ಮಾಹಿತಿ ಪಡೆದು,ದಕ್ಷಿಣ ಪೊಲೀಸ್ ಅಧಿಕಾರಿ ಸಿಬ್ಬಂದಿಗಳಾದ ಪಿ.ಐ.ಮಂಜುನಾಥ್,ಪಿ.ಎಸ್.ಐ.ಮನೋಹರ್,ಪಿ.ಎಸ್.ಐ.ಶೀತಲ್ ಅಲುಗೂರು,ಹೆಚ್.ಸಿ.ಪುಟ್ಟರಾಮ್,ಹೆಚ್.ಸಿ.ಲಕ್ಷ್ಮಣ್,ಪಿ.ಸಿ.ರವಿಕುಮಾರ್,ಪಿ.ಸಿ.ಪರಶುರಾಮ್, ಪಿ.ಸಿ. ಬಾಸ್ಕರ್ ನೇತೃತ್ವದಲ್ಲಿ ಆರೋಪಿಯನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.ಆರೋಪಿಗೆ ಜಾಮೀನು ರಹಿತ ಪ್ರಕರಣವಾದ ಕಾರಣ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.ಆರೋಪಿಯ ಮೇಲೆ ಕಂಕನಾಡಿ ಠಾಣೆ,ಮತ್ತು ಗ್ರಾಮಾಂತರ ಠಾಣೆಯಲ್ಲಿ ಹಲವಾರು ಪ್ರಕರಣಗಳಲ್ಲಿ ಭಾಗಿಯಾದ ಬಗ್ಗೆ ದೂರು ದಾಖಲಾಗಿರುತ್ತದೆ.
ಮಂಗಳೂರು: ಪಬ್ ಗೆ ನುಗ್ಗಿ ಕಾಲೇಜು ವಿದ್ಯಾರ್ಥಿಗಳ ಪಾರ್ಟಿಗೆ ಬಜರಂಗದಳದ ಕಾರ್ಯಕರ್ತರು ಅವಾಚ್ಯವಾಗಿ ನಿಂದಿಸಿ ತಡೆ ಒಡ್ಡಿದ ಘಟನೆ ಇದೀಗ ನಡೆದಿದೆ. ಮಂಗಳೂರಿನ ರಿ-ಸೈಕಲ್ ದಿ ಲಾಂಜ್ ಪಬ್ ನಲ್ಲಿ ಪ್ರತಿಷ್ಠಿತ ಖಾಸಗಿ ಕಾಲೇಜು ವಿದ್ಯಾರ್ಥಿಗಳಿಂದ ಪಾರ್ಟಿ ನಡೆಯುತ್ತಿದ್ದಲ್ಲಿಗೆ ಭಜರಂಗದಳದ ಕಾರ್ಯಕರ್ತರು ನುಗ್ಗಿ ಪಾರ್ಟಿಯನ್ನು ತಡೆದಿದ್ದಾರೆ. ಕಾಲೇಜು ಫೇರ್ ವೆಲ್ ಹಿನ್ನೆಲೆ ಪಬ್ ನಲ್ಲಿ ಪಾರ್ಟಿ ಮಾಡುತ್ತಿದ್ದರು ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ಬಂದಿದ್ದು, ವಿದ್ಯಾರ್ಥಿಗಳು ತೆರಳಿದ್ದು, ಬಜರಂಗದಳದ ಕಾರ್ಯಕರ್ತರು ಕಾಲ್ಕಿತ್ತಿದ್ದಾರೆ.
ಪಶ್ಚಿಮಬಂಗಾಳ;ವಿದ್ಯಾರ್ಥಿನಿಗೆ ಕಪಾಳ ಮೋಕ್ಷ ಮಾಡಿದ ಶಿಕ್ಷಕಿಗೆ ಪೋಷಕರು ಶಾಲೆಗೆ ನುಗ್ಗಿ ಥಳಿಸಿ ವಿವಸ್ತ್ರಗೊಳಿಸಿದ ಘಟನೆ ದಕ್ಷಿಣ ದಿನಾಜ್‌ಪುರನಲ್ಲಿ ನಡೆದಿದೆ. ಖಾಸಗಿ ಶಾಲೆಯಲ್ಲಿ ಶಿಕ್ಷಕಿಯೋರ್ವರು ತರಗತಿಗೆ ಗೈರಾದ ವಿದ್ಯಾರ್ಥಿನಿಗೆ ಕಪಾಳ ಮೋಕ್ಷ ಮಾಡಿದ್ದಾರೆ. ಘಟನೆ ನಡೆದ ಕೆಲವೇ ಕ್ಷಣದಲ್ಲಿ ಪೋಷಕರ ಗುಂಪು ಶಾಲೆಗೆ ನುಗ್ಗಿ ಮಹಿಳಾ ಶಿಕ್ಷಕಿಯ ಮೇಲೆ ಹಲ್ಲೆ ನಡೆಸಿ ವಿವಸ್ತ್ರಗೊಳಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪ ಕೇಳಿ ಬಂದಿದೆ. ಘಟನೆ ಕುರಿತು ಶಾಲಾ ಆಡಳಿತ ಮಂಡಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಶಾಲೆಗೆ ದೌಡಾಯಿಸಿ, ಶಿಕ್ಷಕರಿಗೆ ಭದ್ರತೆಯ ಭರವಸೆ ನೀಡಿ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ. ಹಲ್ಲೆ ನಡೆಸಿದ ನಾಲ್ವರನ್ನು ಭಾನುವಾರ ಪೊಲೀಸರು ಬಂಧಿಸಿದ್ದಾರೆ.
ಕಾರ್ಕಳ: ತಾಲೂಕು ಕಚೇರಿಯಲ್ಲಿ ಗ್ರಾಮ ಕರಣಿಕರಾಗಿ ಸೇವೆ ಸಲ್ಲಿಸುತ್ತಿದ್ದ ಸುಶ್ಮಿತಾ ದೇವಾಡಿಗ(26) ಎಂಬವರು ಭಾನುವಾರ ತಡರಾತ್ರಿ ತಾವು ವಾಸವಿದ್ದ ಹುಡ್ಕೋ ಕಾಲೊನಿಯ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವಿವಾಹಿತರಾಗಿದ್ದ ಸುಶ್ಮಿತಾ ಮೂಲತಃ ಕಾರ್ಕಳದ ಪೆರ್ವಾಜೆಯವರಾಗಿದ್ದು ತಂದೆ ತಾಯಿವರ ಜತೆ ಸರಕಾರಿ ವಸತಿಗೃಹದಲ್ಲಿ ವಾಸವಾಗಿದ್ದರು. ಅವರ ಆತ್ಮಹತ್ಯೆಗೆ ನಿಖರ ಕಾರಣ ಇನ್ನಷ್ಟೇ ತಿಳಿದು ಬರಬೇಕಿದೆ. ಸುಶ್ಮಿತಾ ಅವರ ಪೋಷಕರಿಗೆ ಪೆರ್ವಾಜೆಯಲ್ಲಿ ಸ್ವಂತ ಜಾಗವಿಲ್ಲದ ಹಿನ್ನೆಲೆಯಲ್ಲಿ ಅವರ ಅಜ್ಜಿ ಮನೆಯಾದ ಹೆಬ್ರಿ ತಾಲೂಕಿನ ಚಾರ ಎಂಬಲ್ಲಿನ ಜಾಗದಲ್ಲಿ ಹೊಸ ಮನೆ ನಿರ್ಮಾಣ ಕಾಮಗಾರಿ ನಡೆಯುತ್ತಿತ್ತು. ಗೃಹಪ್ರವೇಶದ ಬಳಿಕ ಅವರ ಮದುವೆಯ ಬಗ್ಗೆ ಪೋಷಕರು ನಿರ್ಧರಿಸಿದ್ದರು ಎನ್ನಲಾಗಿದೆ. ಕಾರ್ಕಳ ತಾಲೂಕು ಕಚೇರಿಯಲ್ಲಿ ಪಿಂಚಣಿ ವಿಭಾಗದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಅತ್ಯಂತ ಸರಳ ಸ್ವಭಾವದ ಸುಶ್ಮಿತಾ ಅವರ ಈ ದುಡುಕಿನ ನಿರ್ಧಾರ ಸಿಬ್ಬಂದಿಗಳಲ್ಲಿ ಆತಂಕ ಮೂಡಿಸಿದೆ.
ದೆಹಲಿ: ‘ಮಹಿಳಾ ಸಬಲೀಕರಣವೇ ನನ್ನ ಮೊದಲ ಆದ್ಯತೆ’ ಎಂದು ಭಾರತದ ನೂತನ ರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕರಿಸಿದ ದ್ರೌಪದಿ ಮುರ್ಮು ಹೇಳಿದ್ದಾರೆ. ರಾಷ್ಟ್ರಪತಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಭಾಷಣ ಮಾಡಿದ ದ್ರೌಪದಿ ಮುರ್ಮು, ಭಾರತದ ವಿಕಾಸ ಯಾತ್ರೆಯ ವೇಗ ಹೆಚ್ಚಿಸಬೇಕು. ಸ್ವಾತಂತ್ರ್ಯ ಅಮೃತೋತ್ಸವ ಹೊತ್ತಲ್ಲಿ ಇದು ಹೊಸ ಚರಿತ್ರೆ. ಬಡವರ ಕನಸು ನನಸು ಮಾಡಲು ಬದ್ಧವಾಗಿದ್ದೇನೆ ಎಂದಿದ್ದಾರೆ. ಇನ್ನು ಮಹಿಳಾ ಸಬಲೀಕರಣವೇ ನನ್ನ ಮೊದಲ ಆದ್ಯತೆಯಾಗಿದ್ದು, ಅದರೊಂದಿಗೆ ಬಡವರ ಕನಸು ನನಸು ಮಾಡಲು ಬದ್ಧವಾಗಿದ್ದೇನೆ ಎಂದರು. ನಾನು ರಾಷ್ಟ್ರಪತಿಯಾಗಿದ್ದು ನನ್ನ ವೈಯಕ್ತಿಕ ಸಾಧನೆಯಲ್ಲ. ಇದು ಭಾರತದ ಪ್ರತಿಯೊಬ್ಬ ಬಡವರ ಸಾಧನೆ. ನ್ನ ನಾಮನಿರ್ದೇಶನವು ಭಾರತದಲ್ಲಿನ ಬಡವರ ಕನಸುಗಳನ್ನು ನನಸಾಗಿಸಬಹುದು ಎಂಬುದಕ್ಕೆ ಸಾಕ್ಷಿಯಾಗಿದೆ ಎಂದು ಹೇಳಿದ್ದಾರೆ.
ಬೆಳ್ತಂಗಡಿ: ಯುವಕನೊಬ್ಬನನ್ನು ಕಾರಿನಲ್ಲಿ ಬಂದ ತಂಡ ಬಲವಂತವಾಗಿ ಶಾಲೆಯೊಂದಕ್ಕೆ ಕರೆದುಕೊಂಡು ಹೋಗಿ ಹಲ್ಲೆ ನಡೆಸಿದ ಘಟನೆ ಅಳದಂಗಡಿಯ ಕೆದ್ದು ಶಾಲೆ ಬಳಿ ನಡೆದಿದೆ. ಲಾಯಿಲ ಅಂಕಾಜೆ ನಿವಾಸಿ ನಿಶೇತ್ (23) ಹಲ್ಲೆಗೆ ಒಳಗಾದ ಯುವಕ. ಈತನನ್ನುಬೊಲೆರೋ ವಾಹನಲ್ಲಿ ಬಂದ ಸುಮಾರು 8 ಮಂದಿಯ ತಂಡ ಬಲವಂತವಾಗಿ ಎಳೆದೊಯ್ದು ಮಾರಣಾಂತಿಕ ಹಲ್ಲೆ ಮಾಡಿ, ಮೊಬೈಲ್ ಫೋನ್ ಮತ್ತು ಚಿನ್ನದ ಸರ ಕಿತ್ತುಕೊಂಡು ಪರಾರಿಯಾಗಿದ್ದಾರೆ ಎಂದು ದೂರು ದಾಖಲಾಗಿದೆ. ಯುವತಿಯ ವಿಚಾರಕ್ಕೆ ಈ ಹಲ್ಲೆ ನಡೆದಿದೆ ಎಂದು ಹೇಳಲಾಗಿದೆ. ಘಟನೆ ಬಗ್ಗೆ ವೇಣೂರು ಪೊಲೀಸ್ ಠಾಣೆಗೆ ಮಾಹಿತಿ ನೀಡಲಾಗಿದ್ದು, ಪೊಲೀಸರು ಐದು ಮಂದಿಯನ್ನು ಬಂಧಿಸಿದ್ದಾರೆ
ಮಂಗಳೂರು: ಈಜಲು ಹೋದ ಯುವಕನೋರ್ವ ಕಲ್ಲಿನ ಕೋರೆಯಲ್ಲಿ ಮುಳುಗಿ ಮೃತಪಟ್ಟ ಘಟನೆ ರವಿವಾರ ಮಲ್ಲೂರು ಸಮೀಪದ ಉಳಾಯಿಬೆಟ್ಟು ಬದ್ರಿಯ ನಗರದಲ್ಲಿ ನಡೆದಿದೆ. ಜೋಕಟ್ಟೆ ನಿವಾಸಿ ಆದಂ ಎಂಬವರ ಪುತ್ರ ಮುಹಮ್ಮದ್ ಶಿಯಾಝ್ (19) ಮೃತಪಟ್ಟ ದುರ್ದೈವಿ ಯುವಕ. ರವಿವಾರ ಬೆಳಗ್ಗೆ ಶಿಯಾಝ್ ಉಳಾಯಿಬೆಟ್ಟುವಿನ ತಮ್ಮ ಸಂಬಂಧಿಕರ ಮನೆಗೆ ತೆರಳಿದ್ದರು. ಅಲ್ಲಿದ್ದ ಅವರು ಸಂಜೆಯ ವೇಳೆ ತಮ್ಮ ಸ್ನೇಹಿತರೊಂದಿಗೆ ಬದ್ರಿಯಾ ನಗರದ ಪೆರ್ಮುಂಕಿ ಕಾಯರ ಪದವಿನಲ್ಲಿರುವ ಕಲ್ಲಿನ ಕೋರೆಗೆ ಈಜಲು ತೆರಳಿದ್ದಾರೆ. ಆದರೆ ಕೋರೆಯ ಆಳ ತಿಳಿಯದೆ ಈಜಲು ಮುಂದಾಗಿದ್ದು, ಈ ವೇಳೆ ಕೋರೆಯಲ್ಲಿ ಮುಳುಗಿ ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವೆನ್ಲಾಕ್ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.
ಮಧುಮೇಹ ಹಾಗೂ ರಕ್ತದೊತ್ತಡ ನಿಯಂತ್ರಣದಲ್ಲಿ ಇಟ್ಟುಕೊಳ್ಳಲು ಜನರು ವಿವಿಧ ಪ್ರಯತ್ನ ಮಾಡುತ್ತಲೇ ಇರುತ್ತಾರೆ. ಇದೀಗ ಹೊಸದೊಂದು ಅಧ್ಯಯನ ವರದಿ ಬಹಿರಂಗವಾಗಿದ್ದು, ಗ್ರೀನ್ ಟೀ ಕುಡಿಯುವುದರಿಂದ ಮಧುಮೇಹ ಕಡಿಮೆ ಮಾಡಲು ಸಹ ಪ್ರಯೋಜನಕಾರಿಯಾಗಿದೆ ಎಂಬ ಅಂಶ ಗಮನಾರ್ಹವಾಗಿದೆ. ಟೈಪ್ 2 ಡಯಾಬಿಟಿಸ್ ಜಾಗತಿಕ ಸಾರ್ವಜನಿಕ ಆರೋಗ್ಯ ಸವಾಲಾಗಿದೆ ಮತ್ತು 2045 ರ ವೇಳೆಗೆ 693 ಮಿಲಿಯನ್ ಜನರ ಮೇಲೆ ಪರಿಣಾಮ ಬೀರುತ್ತದೆ ಎಂದು ಅಂದಾಜಿಸಲಾಗಿದೆ. ಇದು ಹೃದಯಾಘಾತ, ಪಾರ್ಶ್ವವಾಯು, ಕುರುಡುತನ, ಮೂತ್ರಪಿಂಡ ವೈಫಲ್ಯ ಮತ್ತಿತರ ಪ್ರತಿಕೂಲ ಆರೋಗ್ಯ ಪರಿಣಾಮ ಬೀರುವುದು. ನ್ಯೂಟ್ರಿಷನ್ ಮತ್ತು ಮೆಟಾಬಾಲಿಸಮ್ ಜರ್ನಲ್ ನಲ್ಲಿ ಪ್ರಕಟವಾದ 27 ಪ್ರಯೋಗಗಳ ಮೆಟಾ- ವಿಶ್ಲೇಷಣೆಯ ಆಧಾರದ ಮೇಲೆ ಅಧ್ಯಯನವು ಗ್ರೀನ್ ಟೀ ಸೇವನೆಯು ರಕ್ತದಲ್ಲಿನ ಗ್ಲೂಕೋಸ್ ಸಾಂದ್ರತೆಯ ಮೇಲೆ ಅನುಕೂಲಕರ ಪರಿಣಾಮವನ್ನು ಬೀರುತ್ತದೆ ಎಂದು ತೋರಿಸಿದೆ. ಚೀನಾದ ಹುವಾಜಾಂಗ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದ ತಂಡವು ಅಧ್ಯಯನಕ್ಕೆ ಒಳಪಟ್ಟ 2,194 ಮಂದಿಯ ಮಾಹಿತಿ ಮುಂದಿಟ್ಟುಕೊಂಡು ಫಲಿತಾಂಶಗಳನ್ನು ಪರಿಶೀಲಿಸಿದೆ. ಪೂಲ್ ಮಾಡಿದ ಫಲಿತಾಂಶಗಳು ಹಸಿರು…










