Author: main-admin

ಮಂಗಳೂರು: ಗೂಗಲ್ ಟ್ರಾನ್ಸ್‌ಲೇಟರ್‌ನಲ್ಲಿ ಇಂದು ಹಲವಾರು ಭಾಷೆಗಳು ನೂತನವಾಗಿ ಸೇರ್ಪಡೆಗೊಂಡಿದೆ. ಜಗತ್ತಿನಾದ್ಯಂತ ಹಲವಾರು ಭಾಷೆಗಳ ಸೇರ್ಪಡೆಯ ನಡುವೆ ಕರಾವಳಿ ಕರ್ನಾಟಕದ ತುಳುಭಾಷೆಗೂ ಮಾನ್ಯತೆ ದೊರಕಿರುವುದು ತುಳುವರಿಗೆ ಹೆಮ್ಮೆಯ ವಿಚಾರವಾಗಿದೆ. ಗೂಗಲ್ ಟ್ರಾನ್ಸ್‌ಲೆಟರ್ ಆ್ಯಪ್‌ನಲ್ಲಿ ಅಪ್ಡೇಟ್ ಮಾಡಿದರೆ, ಅಥವಾ ವೆಬ್‌ಸೈಟ್‌ನಲ್ಲಿ ಸರ್ಚ್ ಮಾಡಿದ್ದಲ್ಲಿ ತುಳು ಭಾಷೆ ಸೇರ್ಪಡೆಯಾಗಿದ್ದು ಗೊತ್ತಾಗುತ್ತದೆ. ತುಳು ಭಾಷೆಗೆ ಪ್ರತ್ಯೇಕ ಲಿಪಿಯಿದ್ದರೂ, ಈ ಲಿಪಿ ಬಗ್ಗೆ ಹೆಚ್ಚಿನ ತುಳುವರಿಗೆ ಜ್ಞಾನವಿಲ್ಲ. ಸದ್ಯ ಗೂಗಲ್ ಟ್ರಾನ್ಸ್‌ಲೇಟರ್ ತುಳು ಲಿಪಿಯ ಬದಲು ಕನ್ನಡಲಿಪಿಯಲ್ಲಿ ತುಳು ಭಾಷೆಗೆ ಭಾಷಾಂತರವಾಗುತ್ತದೆ. ಇದರಿಂದ ಜಗತ್ತಿನ ಯಾವುದೇ ಭಾಷೆಯಿಂದ ತುಳು ಭಾಷೆಗೆ ನೇರವಾಗಿ ಭಾಷಾಂತರಿಸಲು ಸಾಧ್ಯವಾಗಲಿದೆ. ಈ ಬಗ್ಗೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರನಾಥ ಗಟ್ಟಿ ಕಾಪಿಕಾಡ್ ಪ್ರತಿಕ್ರಿಯಿಸಿ, ಗೂಗಲ್ ಟ್ರಾನ್ಸ್‌ಲೇಟರ್‌ನಲ್ಲಿ ತುಳು ಭಾಷೆ ಸೇರ್ಪಡೆ ಆಗಿರುವುದು ತುಳುಭಾಷೆಗೆ ಜಾಗತಿಕವಾಗಿ ಸಂದ ಗೌರವವಾಗಿದೆ. ಇದು ತುಳುವರು ಸಂಭ್ರಮಪಡುವ ವಿಚಾರ. ಗೂಗಲ್ ಟ್ರಾನ್ಸ್‌ಲೇಟರ್‌ನಲ್ಲಿ ಕೆಲವು ಸಂದರ್ಭ ಶಬ್ದಗಳು ತಪ್ಪಾಗಿ ಉಲ್ಲೇಖವಾಗುವುದು ಸಾಮಾನ್ಯ ವಿಚಾರ. ಇಂತಹ ಸಂದರ್ಭಗಳಲ್ಲಿ ಅಲ್ಲೇ…

Read More

ಉಡುಪಿ: ನೋಡು ನೋಡುತ್ತಿದ್ದಂತೆ ಮನೆಯ ಬಾವಿಯೊಂದು ಭೂಕುಸಿತಕ್ಕೊಳಗಾದ ಘಟನೆ ಕಾರ್ಕಳ ತಾಲೂಕಿನ ನೆಲ್ಲಿಕಟ್ಟೆಯ ಸರ್ವಿಸ್ ಸ್ಟೇಶನ್ ಸಮೀಪ ನಡೆದಿದೆ. ಬಾವಿ ಕುಸಿಯುತ್ತಿರುವ ದೃಶ್ಯ ಇದೀಗ ಸಾಕಷ್ಟು ವೈರಲ್ ಆಗಿದೆ. ಮನೆಯಂಗಳದಲ್ಲೇ ಇದ್ದ ಬಾವಿ ಮನೆಯವರ ಕಣ್ಣೆದುರೇ ಭೂಕುಸಿತಕ್ಕೊಳಗಾಗಿ ಧಾರಾಶಾಹಿಯಾಗಿದೆ. ಇದೀಗ ಮನೆ ಕೂಡ ಅಪಾಯವನ್ನು ಎದುರಿಸುತ್ತಿದ್ದು, ಮನೆಯವರು ಆಂತಕಕ್ಕೀಡಾಗಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ಹಲವೆಡೆ ಭೂಕುಸಿತ ಉಂಟಾಗಿದೆ.

Read More

ಜಿಯೋ ಬೆನ್ನಲ್ಲೇ ಏರ್‌ಟೆಲ್‌ ಕೂಡ ನಾನಾ ಪ್ಲಾನ್‌ ಮೇಲೆ 11%-21%ರಷ್ಟು ದರ ಜಾಸ್ತಿ ಮಾಡಿದ್ದು ಜು.3ರಿಂದ ಜಾರಿಗೆ ಬರಲಿದೆ. ಅನ್‌ಲಿಮಿಟೆಡ್‌ ಪ್ರೀಪೇಯ್ಡ್‌ ಪ್ಲಾನ್‌ 179ರಿಂದ 199ರೂ.ಗೆ ಏರಿಕೆ(28ದಿನ ವ್ಯಾಲಿಡಿಟಿ), 455ರಿಂದ 509ರೂ.ಗೆ ಏರಿಕೆ(84 ದಿನ), 1799ರೂ.ನಿಂದ 1,999ರೂ.ಗೆ ಏರಿಕೆ(365). ಡೇಟಾ ಪ್ಲಾನ್‌-265 ರೂನಿಂದ 299ರೂಗೆಹೆಚ್ಚಳ (28ದಿನ), 299ರೂನಿಂದ 349ರೂಗೆ ಹೆಚ್ಚಳ (28ದಿನ), 359ರೂನಿಂದ 409ರೂಗೆ ಹೆಚ್ಚಳ, 399ರೂನಿಂದ 4.49ರೂಗೆ ಹೆಚ್ಚಳ. ಪೋಸ್ಟ್‌ಪೇಯ್ಡ್‌_399ರೂ ಪ್ಲಾನ್‌ 449ರೂಗೆ ಏರಿಕೆ, 499ರೂ ಪ್ಲಾನ್‌ 549ರೂಗೆ ಏರಿಕೆ.

Read More

ಆಗುಂಬೆ: ನಿರಂತರ ಮಳೆಯ ಹಿನ್ನೆಲೆ ಆಗುಂಬೆ ಘಾಟಿಯಲ್ಲಿ ಸೆ.15ರವರೆಗೆ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದು ಪರ್ಯಾಯ ಮಾರ್ಗದಲ್ಲಿ ಸಂಚರಿಸುವಂತೆ ಸೂಚಿಸಿದ್ದಾರೆ. ಆಗುಂಬೆ ಘಾಟಿಯಲ್ಲಿ ಮಳೆಗಾಲದ ಅವಧಿಯಲ್ಲಿ ಭೂಕುಸಿತವಾಗುವ ಸಂಭವ ಇರುವುದರಿಂದ ಜೂ.27ರಿಂದ ಸೆ.15ರವರೆಗೆ ಭಾರೀ ವಾಹನ ಸಂಚರಿಸದಂತೆ ಆದೇಶಿಸಲಾಗಿದೆ. ತೀರ್ಥಹಳ್ಳಿಯಿಂದ ಉಡುಪಿಗೆ ಹೋಗುವ ಭಾರೀ ವಾಹನಗಳು ತೀರ್ಥಹಳ್ಳಿ -ಮಾಸ್ತಿಕಟ್ಟೆ- ಸಿದ್ದಾಪುರ-ಕುಂದಾಪುರ ಮೂಲಕ ಉಡುಪಿ ತಲುಪಬಹುದು. ಉಡುಪಿಯಿಂದ ತೀರ್ಥಹಳ್ಳಿ ಬರುವವರು ಉಡುಪಿ- ಕುಂದಾಪುರ- ಸಿದ್ದಾಪುರ- ಮಾಸ್ತಿಕಟ್ಟೆ ಮೂಲಕ ತೀರ್ಥಹಳ್ಳಿಗೆ ಸಂಚರಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಮಂಗಳೂರು: ನಗರದ ಕಾವೂರು ಸೂಜಿಕಲ್ ಗುಡ್ಡೆ ಎಂಬಲ್ಲಿ ಭೂಕುಸಿತದಿಂದ ಕೆಲವು ಮನೆಗಳು ಅಪಾಯಕಾರಿ ಸ್ಥಿತಿಯಲ್ಲಿದ್ದು, ತಕ್ಷಣವೇ ಅಲ್ಲಿನ ನಿವಾಸಿಗಳ ಸ್ಥಳಾಂತರಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಸೂಚಿಸಿದ್ದಾರೆ. ಮಂಗಳೂರು ತಾಲೂಕಿನ ವಿವಿಧ ಮಳೆ ಹಾನಿ ಪ್ರದೇಶಗಳಿಗೆ ಮುಲ್ಲೈ ಮುಹಿಲನ್ ಅವರು ಗುರುವಾರ ಭೇಟಿ ನೀಡಿ ಪರಿಶೀಲಿಸಿದರು. ಕಾವೂರು ಸೂಜಿಕಲ್ ಗುಡ್ಡೆಯಲ್ಲಿ ಖಾಸಗಿ ಮನೆ ಕಟ್ಟಡ ನಿರ್ಮಿಸಲು ಅಗೆಯಲಾದ ಮಣ್ಣಿನಿಂದ ಎತ್ತರದ ಪ್ರದೇಶದಲ್ಲಿರುವ ಮನೆಗಳು ಕೆಳಗೆ ಬೀಳುವ ಸ್ಥಿತಿಯಲ್ಲಿವೆ. ಈ ನಿಟ್ಟಿನಲ್ಲಿ ಇಲ್ಲಿನ ನಿವಾಸಿಗಳನ್ನು ಬೇರೆಡೆ ಬಾಡಿಗೆ ಮನೆಗಳಿಗೆ ಸ್ಥಳಾಂತರಿಸಲು ಮಂಗಳೂರು ಮಹಾನಗರಪಾಲಿಕೆ ಆಯುಕ್ತರಿಗೆ ಅವರು ನಿರ್ದೇಶಿಸಿದ್ದಾರೆ. ಅಲ್ಲದೇ, ಘಟನೆಗೆ ಕಾರಣರಾದ ಖಾಸಗಿ ಮನೆಯ ನಿರ್ಮಾಣ ಕಾಮಗಾರಿಯನ್ನು ನಿಲ್ಲಿಸಲು ಸೂಚನೆ ನೀಡಿದ್ದಾರೆ.ಬಳಿಕ ಕೆಂಜಾರು ಶ್ರೀ ದೇವಿ ಕಾಲೇಜು ಆವರಣದಲ್ಲಿ ಉಂಟಾದ ಭೂಕುಸಿತ, ಮರವೂರು ಅಂತೋನಿಕಟ್ಟೆ ಎಂಬಲ್ಲಿ ಕಾಂಕ್ರೀಟ್ ತಡೆಗೋಡೆ ಕುಸಿದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ನಂತರ ಸುರತ್ಕಲ್ ಬಾಳ ಸಮೀಪ ಐ.ಎಸ್.ಪಿ.ಆರ್.ಎಲ್. ಗೆ ಸೇರಿದ ಪೈಪ್ ಲೈನ್ ಹಾದುಹೋದ ಪ್ರದೇಶದಲ್ಲಿ ಭೂಕುಸಿತ…

Read More

ಉಡುಪಿ: ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣದಲ್ಲಿ ಆರೋಪಿ ಪ್ರವೀಣ್ ಅರುಣ್ ಚೌಗುಲೆ ಜಾಮೀನು ಅರ್ಜಿ ಹೈಕೋರ್ಟ್ ನಲ್ಲಿ ವಜಾಗೊಂಡಿದೆ. ಉಡುಪಿ ಜಿಲ್ಲೆಯ ಮಲ್ಪೆ ಠಾಣೆಯ ನೇಜಾರ್ ಎಂಬಲ್ಲಿ 2023ರ ನವೆಂಬರ್ 12ರಂದು ಪ್ರವೀಣ್ ಅರುಣ್ ಚೌಗುಲೆ ಒಂದೇ ಕುಟುಂಬದ ಐನಾಜ್, ಹಸೀನಾ, ಅಫ್ನಾನ್, ಅಸೀಮ್ ಎಂಬುವರ ಹತ್ಯೆ ನಡೆಸಿದ್ದ.ಸಾಂದರ್ಭಿಕ ಸಾಕ್ಷಿ, ಸಿಸಿಟಿವಿ ದೃಶ್ಯಾವಳಿ, ಆರೋಪಿಯ ಕೂದಲಿನ ಡಿಎನ್ಎ ಆಧರಿಸಿ ಹೆಚ್ಚುವರಿ ಎಸ್ ಪಿಪಿ ಬಿ.ಎನ್.ಜಗದೀಶ್ ವಾದ ಮಾಡಿದರು. ವಿಚಾರಣೆ ನಡೆಸಿದ ನ್ಯಾ.ಎಂ.ಜಿ.ಉಮಾ ಅವರಿದ್ದ ಹೈಕೋರ್ಟ್ ಪೀಠ ಜಾಮೀನು ಅರ್ಜಿ ತಿರಸ್ಕರಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಪೊಲೀಸರು ಕಳೆದ ಫೆಬ್ರವರಿಯಲ್ಲಿ 15 ಸಂಪುಟಗಳ 2,202 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

Read More

ಸಕಲೇಶಪುರ : ಹಾಸನ-ಬಂಟ್ವಾಳ ನಡುವೆ ನಡೆಯುತ್ತಿರುವ ಬೆಂಗಳೂರು-ಮಂಗಳೂರು ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ತಾಲ್ಲೂಕಿನ ಆನೆಮಹಲ್ ಗ್ರಾಮದಲ್ಲಿ ಗುರುವಾರ ಸುರಿದ ಒಂದೇ ಮಳೆಗೆ ಕುಸಿದಿದೆ. ಸಕಲೇಶಪುರ ಬೈಪಾಸ್‌ ಟೋಲ್‌ಗೇಟ್‌ನಿಂದ ಮಾರನಹಳ್ಳಿವರೆಗೆ ಚತುಷ್ಪಥ ಕಾಮಗಾರಿ ಪ್ರಗತಿಯಲ್ಲಿದ್ದು, ಗ್ರಾಮದಲ್ಲಿ ಕಾಂಕ್ರಿಟ್‌ ರಸ್ತೆಯ ಕೆಳಗೆ ಅಳವಡಿಸಿರುವ ಮೋರಿಯ ಪೈಪ್‌ ತುಂಡಾಗಿ ರಸ್ತೆಯ ಒಂದು ಬದಿ ಕುಸಿದಿದೆ. ‘ರಸ್ತೆಯ ಕೆಳಭಾಗದಲ್ಲಿ ಅಳವಡಿಸಿರುವ ಚರಂಡಿಯ ಪೈಪುಗಳು ಉತ್ತಮ ಗುಣಮಟ್ಟದಿಂದ ಕೂಡಿಲ್ಲ’ ಎಂದು ಗ್ರಾಮದ ಭಾಸ್ಕರ್, ಹಸೈನಾರ್ ಅವರು ಕಾಮಗಾರಿ ಸಂದರ್ಭದಲ್ಲೇ ಆಕ್ಷೇಪ ವ್ಯಕ್ತಪಡಿಸಿದ್ದರು. ಆದರೆ, ಗುತ್ತಿಗೆದಾರರು ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಎಂಜಿನಿಯರ್‌ಗಳು ಅದನ್ನುಗಂಭೀರವಾಗಿ ಪರಿಗಣಿಸದೆ ಕಳಪೆ ಕಾಮಗಾರಿ ಮಾಡಿದ್ದೇ ಕುಸಿಯಲು ಕಾರಣ’ ಎಂದು ಗ್ರಾಮಸ್ಥರು ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು. ಶಾಸಕ ಭೇಟಿ: ಸ್ಥಳಕ್ಕೆ ಗುರುವಾರ ಸಂಜೆ ಶಾಸಕ ಸಿಮೆಂಟ್ ಮಂಜು ಭೇಟಿ ನೀಡಿ ಪರಿಶೀಲಿಸಿದರು. ‘ಹಾಸನದಿಂದ ಮಾರನಹಳ್ಳಿವರೆಗೆ ಹೆದ್ದಾರಿ ಕಾಮಗಾರಿ ಉತ್ತಮ ಗುಣಮಟ್ಟದಿಂದ ಕೂಡಿಲ್ಲ ಎಂದು ಗುತ್ತಿಗೆದಾರರಿಗೆ ಹಾಗೂ ಎಂಜಿನಿಯರ್‌ಗಳಿಗೆ ಹಲವು ಬಾರಿ ಹೇಳಿದ್ದೆ. ನಿತ್ಯ 30 ಸಾವಿರಕ್ಕೂ ಹೆಚ್ಚು…

Read More

ಕಾಸರಗೋಡು: ಕಾರು ನೀರಿನಲ್ಲಿ ಕೊಚ್ಚಿ ಹೋದ ಘಟನೆ ಕುತ್ತಿಕೋಲ್ ಸಮೀಪ ನಡೆದಿದ್ದು, ಕಾರಿನಲ್ಲಿದ್ದ ಇಬ್ಬರು ಅಪಾಯದಿಂದ ಪಾರಾಗಿದ್ದಾರೆ. ಕುತ್ತಿ ಕೋಲ್ ಪಳ್ಳಂಜಿ ಯಲ್ಲಿ ಹೊಳೆಯ ಸೇತುವೆ ಮೂಲಕ ತೆರಳು ತ್ತಿದ್ದಾಗ ನೀರಿನಲ್ಲಿ ಕೊಚ್ಚಿ ಕೊಂಡು ಹೋಗಿದೆ. ಕಾರಿನಲ್ಲಿದ್ದ ಅಂಬಲತ್ತರ ದ ತಸ್ರಿಫ್ ( 36) ಅಬ್ದುಲ್ ರಶೀದ್ ( 38) ರನ್ನು ಪರಿಸರ ವಾಸಿಗಳು ಹಾಗೂ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಮೇಲಕ್ಕೆತ್ತಿ ರಕ್ಷಿಸಿದ್ದಾರೆ. ಗುರುವಾರ ಬೆಳಿಗ್ಗೆ ಅರಣ್ಯ ಪ್ರದೇಶದ ಪಳ್ಳಂಜಿ- ಪಾಂಡಿ ರಸ್ತೆಯ ತಡೆಗೋಡೆ ಇಲ್ಲದ ಸೇತುವೆ ಮೂಲಕ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಇಬ್ಬರೂ ಉಪ್ಪಿನಂಗಡಿಗೆ ತೆರಳುತ್ತಿದ್ದರು. ಗೂಗಲ್ ಮ್ಯಾಪ್ ಮೂಲಕ ಇವರು ಕಾರನಲ್ಲಿ ಸಂಚರಿಸುತ್ತಿದ್ದರು. ಹೊಳೆಯಲ್ಲಿ ಸೇತುವೆ ಮೇಲಿಂದ ನೀರು ಹರಿದು ಹೋಗುತ್ತಿತ್ತು. ಸೇತುವೆಗೆ ತಡೆಗೋಡೆ ಇಲ್ಲದಿರುವುದನ್ನು ಅರಿಯದೆ ಇವರು ಮುಂದಕ್ಕೆ ಸಾಗುತ್ತಿದ್ದಾಗ ನೀಯಂತ್ರಣ ತಪ್ಪಿದ ಕಾರು ಹೊಳೆಗೆ ಬಿದ್ದು ಕೊಚ್ಚಿಕೊಂಡು ಹೋಗಿದ್ದು , ಅಲ್ಪ ದೂರಕ್ಕೆ ಸಾಗಿ ಬದಿಯ ಮರಕ್ಕೆ ಬಡಿದು ನಿಂತಿದೆ. ಇಬ್ಬರೂ ಕಾರಿನಿಂದ ಹೊರಬಂದು…

Read More

ಉಡುಪಿ: ನಿಲ್ಲಿಸಿದ್ದ ಬಸ್ ಗೆ ಫಾರ್ಚೂನರ್ ಕಾರೊಂದು ಡಿಕ್ಕಿ ಹೊಡೆದ ಘಟನೆ ಉಡುಪಿಯ ನಿಟ್ಟೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಶೋರೂಂಗೆ ಹೋಗುತ್ತಿದ್ದ ಹೊಚ್ಚ ಹೊಸ ಫಾರ್ಚೂನರ್ ಕಾರು ಅಪಘಾತಕ್ಕೀಡಾಗಿದೆ. ಕುಂದಾಪುರ ಶೋರೂಂ ನಿಂದ ಮಂಗಳೂರು ಶೋರೂಂಗೆ ಹೊಸ ಕಾರನ್ನು ಚಾಲಕ ಕೊಂಡೊಯ್ಯುತ್ತಿದ್ದನು. ನಿಟ್ಟೂರಿಗೆ ತಲುಪುತ್ತಿದ್ದಂತೆಯೇ ಬಸ್ ನಿಲ್ದಾಣದಲ್ಲಿ ನಿಂತಿದ್ದ ಸಿಟಿ ಬಸ್ ಗೆ ಹಿಂದಿನಿಂದ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ಬಸ್ ನ ಹಿಂಬದಿಗೂ ಹಾನಿಯಾಗಿದೆ. ಕಾರು ಚಾಲಕನ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎನ್ನಲಾಗಿದೆ. ಕೆಲಹೊತ್ತು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿತು. ಮಾಹಿತಿ ತಿಳಿದ ಕೂಡಲೇ ಶೋರೂಂ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದರು.

Read More

ವಿಟ್ಲ: ಕೇರಳ ಕಡೆಗೆ ಅಕ್ರಮವಾಗಿ ಹೊರಿ ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನ ಸಹಿತ ಮೂವರನ್ನು ವಿಟ್ಲ ಠಾಣಾ ಪೊಲೀಸರು ಕನ್ಯಾನ ಸಮೀಪ ವಶಕ್ಕೆ ಪಡೆದ ಘಟನೆ ನಡೆದಿದೆ. ಜೂ.26ರಂದು ಸಾಯಂಕಾಲ ವಿಟ್ಲ ಠಾಣಾ ಎಸ್.ಐ. ರತ್ನಕುಮಾರ್ ರವರು ಸಿಬ್ಬಂದಿಗಳೊಂದಿಗೆ ಬಂಟ್ವಾಳ ತಾಲೂಕು ಕನ್ಯಾನ ಗ್ರಾಮದ ಕನ್ಯಾನ ಶಿವಶಕ್ತಿ ಬಾರ್ ಬಳಿ ವಾಹನ ತಪಾಸಣೆಗಾಗಿ ನಿಂತಿದ್ದ ವೇಳೆ ದೇಲಂತಬೆಟ್ಟು ಕಡೆಯಿಂದ ಸಂಶಯಾಸ್ಪದವಾಗಿ ಬಂದ ಮಹೇಂದ್ರ ಪಿಕಪ್ ವಾಹನವನ್ನು ತಡೆದು ನಿಲ್ಲಿಸಿ ಪರಿಶೀಲನೆ ನಡೆಸಿದಾಗ ಅದರಲ್ಲಿ ಅಕ್ರಮವಾಗಿ ಹೋರಿಯೊಂದನ್ನು ಸಾಗಾಟ ಮಾಡುತ್ತಿರುವುದು ಬೆಳಕಿಗೆ ಬಂದಿತ್ತು. ಬಳಿಕ ವಾಹನದಲ್ಲಿದ್ದ ಅದರ ಚಾಲಕ ಮೊಹಮ್ಮದ್ ಜೊತೆಗಿದ್ದ ಪುರುಷೋತ್ತಮ ಹಾಗೂ ಯೋಗೀಶ್ ರವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಹೋರಿಯನ್ನು ಕೇರಳಕ್ಕೆ ಮಾಂಸಕ್ಕಾಗಿ ಮಾರಾಟ ಮಾಡುವ ಉದ್ದೇಶದಿಂದ ಕೊಂಡುಹೋಗುತ್ತಿರುವುದಾಗಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ‌. ಆರೋಪಿಗಳ ಸಹಿತ ಹೋರಿ ಹಾಗೂ ಕೃತ್ಯಕ್ಕೆ ಬಳಸಿದ್ದ ವಾಹನ ವನ್ನು ವಿಟ್ಲ ಠಾಣಾ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.

Read More