ಬೆಂಗಳೂರು: ಬಾಗಲಕೋಟೆ ಜಿಲ್ಲೆಯ ಮುಧೋಳ ನಗರದ ಪ್ರಸಿದ್ಧ ಮುಧೋಳದ ನಾಯಿಗಳು ಪ್ರಧಾನಿ ನರೇಂದ್ರ ಮೋದಿ ಅವರ ಭದ್ರತೆಯ ಹೊಣೆ ಹೊತ್ತಿರುವ ವಿಶೇಷ ರಕ್ಷಣಾ ಗುಂಪಿನ (ಎಸ್ಪಿಜಿ) ಭಾಗವಾಗುವ ಸಾಧ್ಯತೆಯಿದೆ ಎನ್ನಲಾಗಿದೆ. ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ತಿಮ್ಮಾಪುರದ ಶ್ವಾನ ಸಂಶೋಧನಾ ಮತ್ತು ಮಾಹಿತಿ ಕೇಂದ್ರದ ಮುಖ್ಯಸ್ಥರಾಗಿರುವ ಡಾ.ಸುಶಾಂತ್ ಹಂದಗೆ ಎರಡು ತಿಂಗಳ ವಯಸ್ಸಿನ ಎರಡು ಗಂಡು ಮುಧೋಳ ಮರಿಗಳನ್ನು ಏಪ್ರಿಲ್ 25, 2022 ರಂದು ಎಸ್ಪಿಜಿಯ ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿದೆ ಅಂತ ಹೇಳಿದ್ದಾರೆ. ಏಪ್ರಿಲ್ 25 ರಂದು ನಾಯಿಮರಿಗಳನ್ನು ಸಂಗ್ರಹಿಸಲು ಎಸ್ಪಿಜಿಯ ಪಶುವೈದ್ಯರು ಮತ್ತು ಇಬ್ಬರು ತರಬೇತುದಾರರು ಬಂದಿದ್ದರು ಸೂಕ್ಷ್ಮತೆಯಿಂದಾಗಿ, ಮಾಹಿತಿಯನ್ನು ಸಾರ್ವಜನಿಕರೊಂದಿಗೆ ಹಂಚಿಕೊಳ್ಳದಂತೆ ನಮ್ಮನ್ನು ಕೇಳಲಾಗಿದೆ ಅಂಥ ಅವರು ಇದೇ ವೇಳೆ ಹೇಳಿದ್ದಾರೆ. ‘ಯಾವುದೇ ಮರಿಗಳು ಲಭ್ಯವಿದೆಯೇ ಎಂದು ಅಧಿಕಾರಿಗಳು ನಮ್ಮನ್ನು ಕೇಳಿದರು. ಅವರು ಮರಿಗಳನ್ನು ಪ್ರಯೋಗಗಳಿಗಾಗಿ ಬಯಸುತ್ತಾರೆ ಎಂದು ನಮಗೆ ತಿಳಿದಿರಲಿಲ್ಲ. ಅಗತ್ಯ ಪರೀಕ್ಷೆಗಳು ಮತ್ತು ಕಾರ್ಯಾಚರಣೆಗಳನ್ನು ನಡೆಸಿದ ನಂತರ, ಎರಡು ಮರಿಗಳನ್ನು ಆಯ್ಕೆ ಮಾಡಿ ಅಧಿಕಾರಿಗಳಿಗೆ ಹಸ್ತಾಂತರಿಸಲಾಯಿತು’…
Author: main-admin
ಬೆಂಗಳೂರು: ಇನ್ನು ಮುಂದೆ ನಿತ್ಯ ಶಾಲಾ-ಕಾಲೇಜುಗಳಲ್ಲಿ ರಾಷ್ಟ್ರಗೀತೆ ಹಾಡಿಸೋದು ಕಡ್ಡಾಯ ಎಂದು ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಿದೆ ನಗರದ ಪ್ರತಿಷ್ಠಿತ ಖಾಸಗಿ ಶಾಲೆಗಳಾದ ಬಿಷಪ್ ಕಾಟನ್, ಬಾಲ್ಡ್ ವಿನ್, ಸೆಂಟ್ ಜೋಸೆಫ್ ಶಾಲೆಗಳು ರಾಷ್ಟ್ರಗೀತೆ ಹಾಡಿಸದೇ ಇರುವ ಬಗ್ಗೆ ಶಿಕ್ಷಣ ಇಲಾಖೆಗೆ ದೂರು ಸಲ್ಲಿಕೆ ಆಗಿತ್ತು. ಈ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಪತ್ರ ಬರೆದು ಸೂಚನೆ ನೀಡಿದ್ದಾರೆ. ಇದರನುಸಾರ ಎಲ್ಲಾ ಶಾಲೆಗಳಲ್ಲಿ ಮುಂಜಾನೆ ವೇಳೆಯಲ್ಲಿ ವಿದ್ಯಾರ್ಥಿಗಳಿಂದ ಕಡ್ಡಾಯವಾಗಿ ರಾಷ್ಟ್ರಗೀತೆ ಹಾಡಿಸಬೇಕು ಎಂದು ಸುತ್ತೋಲೆ ಹೊರಡಿಸಿದೆ. ಇದೀಗ ಸರ್ಕಾರ ಅಧಿಕೃತವಾಗಿ ಆದೇಶವನ್ನು ಹೊರಡಿಸಿದೆ. ಈ ಆದೇಶದಲ್ಲಿ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನರಹಿತ ಶಾಲಾ, ಕಾಲೇಜುಗಳಲ್ಲಿ (1-12) ಕಡ್ಡಾಯವಾಗಿ ರಾಷ್ಟ್ರಗೀತೆ ಹಾಡಬೇಕು ಸಾಮೂಹಿಕ ಪ್ರಾರ್ಥನೆ ಮಾಡಲು ಸ್ಥಳ ಅವಕಾಶ ಇಲ್ಲದೆ ಹೋದರೆ ಶಾಲಾ ಕೊಠಡಿಗಳಲ್ಲೆ ರಾಷ್ಟ್ರಗೀತೆ ಹಾಡಿಸುವಂತೆ ತಿಳಿಸಿದೆ.
ಬೈಂದೂರು: ಕಡಲಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಮೀನುಗಾರರೊಬ್ಬರು ಕುಸಿದು ಬಿದ್ದು ಸಮುದ್ರದ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಸಂಭವಿಸಿದೆ. ಆ.17ರಂದು ಬೆಳಗ್ಗೆ ಕಿರಿಮಂಜೇಶ್ವರ ಗ್ರಾಮದ ನಾಗೂರು ಹೊಸಹಿತ್ತು ಎಂಬಲ್ಲಿ ಈ ದುರ್ಘಟನೆ ನಡೆದಿದ್ದು ಹೊಸಹಿತ್ತು ನಿವಾಸಿ ನಾರಾಯಣ(60) ಮೃತ ಮೀನುಗಾರ. ಇವರು ದೋಣಿಯಲ್ಲಿ ಮೀನುಗಾರಿಕೆಗೆ ಸಮುದ್ರಕ್ಕೆ ಹೋಗಿದ್ದು, ಈ ವೇಳೆ ಕುಸಿದು ಬಿದ್ದು, ಆಕಸ್ಮಿಕವಾಗಿ ಆಯತಪ್ಪಿ ಸಮುದ್ರದ ನೀರಿಗೆ ಬಿದ್ದಿದ್ದಾರೆ.ತಕ್ಷಣ ಅವರನ್ಬು ಬೈಂದೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ಸಾಗಿಸಲಾಯಿತಾದರೂ ದಾರಿ ಮಧ್ಯೆ ಮೃತಪಟ್ಟರು.ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುಳ್ಯ: ಹಟ ಮಾಡುತ್ತಿದ್ದ ನಾಲ್ಕು ವರ್ಷ ಪ್ರಾಯದ ಮಗುವಿಗೆ ತಾಯಿಯೇ ಸಟ್ಟುಗ ಬಿಸಿ ಮಾಡಿ ಬರೆ ಹಾಕಿದ ದಾರುಣ ಘಟನೆ ಸುಳ್ಯದ ನಾವೂರಿನಿಂದ ವರದಿಯಾಗಿದೆ. ಆರು ದಿನಗಳ ಹಿಂದೆ ಈ ಘಟನೆ ನಡೆದಿದೆಯೆನ್ನಲಾಗಿದ್ದು ಸ್ಥಳೀಯರು ನೀಡಿದ ಮಾಹಿತಿಯ ಆಧಾರದಲ್ಲಿ ಸಿ.ಡಿ.ಪಿ.ಒ. ರಶ್ಮಿ ನೆಕ್ರಾಜೆಯವರು ಆ ಮನೆಗೆ ಧಾವಿಸಿ ಪರಿಶೀಲಿಸಿದರು. ಬಳಿಕ ಮಗುವನ್ನು ಸಿ.ಡಿ.ಪಿ.ಒ. ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಯಿತೆಂದು ವರದಿಯಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ಸಿಗಬೇಕಾಗಿದೆ.
ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಗಣೇಶ ಪ್ರತಿಷ್ಠಾಪನೆಗೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅನುಮತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಗೌರಿ-ಗಣೇಶ ಹಬ್ಬದ ಬಗ್ಗೆ ರಾಜ್ಯ ಸರ್ಕಾರ ತೆಗೆದುಕೊಂಡಿರುವ ನಿರ್ಧಾರವೂ ವ್ಯಾಪಕ ಚರ್ಚೆಗೆ ಗುರಿಯಾಗಿದೆ.ಇದೀಗ ಶಾಲೆಯಲ್ಲಿ ಶುಕ್ರವಾರ ದಿನ ನಮಾಜ್ ಗೆ ಅವಕಾಶ ನೀಡಿ. ನಮಗೂ ನಮಾಜ್ ಗೆ ಅವಕಾಶ ಮಾಡಿ ಕೊಡಿ ಅಂತಾ ಶಿಕ್ಷಣ ಸಚಿವರಿಗೆ ಮುಸ್ಲಿಂ ಮುಖಂಡರು ಒತ್ತಾಯಿಸಿದ್ದಾರೆ. ಕೋಲಾರದ ಒಂದು ಶಾಲೆಯಲ್ಲಿ ಶುಕ್ರವಾರದಂದು ಮುಸ್ಲಿಮ್ ಮಕ್ಕಳಿಗೆ ನಮಾಜ್ಮಾಡಲು ಅವಕಾಶ ನೀಡಿದ್ದಕ್ಕೆ ಶಾಲೆಯ ಮುಖ್ಯಸ್ಥರನ್ನೇ ಕೆಲಸದಿಂದ ಅಮಾನತು ಮಾಡಲಾಗಿತ್ತು. ಶಾಲೆಯಲ್ಲಿ ಹಿಜಾಬ್ ಬೇಡ ಅಂದವರು ಗಣೇಶನನ್ನು ಹೇಗೆ ಕೂರಿಸ್ತೀರಾ ಎಂದು ಮುಸ್ಲಿಂ ಮುಖಂಡರು ಶಿಕ್ಷಣ ಸಚಿವರಿಗೆ ಪ್ರಶ್ನೆ ಮಾಡಿದ್ದಾರೆ. ಇನ್ನು ಕ್ರಿಶ್ಚಿಯನ್ಸ್ ಗೆ ಕ್ರಿಸ್ ಮೆಸ್ ಆಚರಣೆಗೆ ಅವಕಾಶ ಕೊಡಿ. ಆದ್ರೆ ಗಣೇಶ ಮೂರ್ತಿ ಕೂರಿಸಲು ಅವಕಾಶ ನೀಡಿದ್ದೀರಾ.. ನಮಗೂ ಕೂಡ ಅವಕಾಶ ಮಾಡಿ ಕೊಡಿ ಅಂತಾ ಮುಖಂಡರು ಬೇಡಿಕೆ ಇಟ್ಟಿದ್ದಾರೆ.
ಉಪ್ಪಿನಂಗಡಿ: ಫೋನ್ ಕರೆಗಳ ಮೂಲಕ ಅಶ್ಲೀಲ ಮಾತುಗಳ್ನಾಡಿ ಹನಿಟ್ರ್ಯಾಪ್ ಮಾಡಲೆತ್ನಿಸಿದ ಬಗ್ಗೆ ಸಾಮಾಜಿಕ ಮುಖಂಡರೊಬ್ಬರು ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ. ಮಹಿಳೆಯೊಬ್ಬರು ಉಪ್ಪಿನಂಗಡಿಯ ಸಾಮಾಜಿಕ ಮತ್ತು ಶೈಕ್ಷಣಿಕ ಕ್ಷೇತ್ರದ ಮುಂದಾಳು ಓರ್ವರಿಗೆ ಕರೆ ಮಾಡಿ ಅಸಭ್ಯವಾಗಿ ತೀರಾ ಮುಜುಗರಕ್ಕೀಡು ಮಾಡುವಂತೆ ಮಾತನಾಡಿದ್ದಳು. ಆಕೆಯ ಮಾತಿಗೆ ನಡೆಗೆ ತೀಕ್ಷ್ಣವಾದ ಮಾತುಗಳಿಂದ ಆಕ್ಷೇಪವೆತ್ತಿದರೂ ಪದೇ ಪದೇ ಮೂರ್ನಾಲ್ಕು ಬಾರಿ ಕರೆ ಮಾಡಿ ವಿಕೃತ ವರ್ತನೆ ತೋರಿದಾಗ ಇದೊಂದು ಹನಿಟ್ರ್ಯಾಪ್ ಬ್ಲ್ಯಾಕ್‌ಮೇಲ್ ದಂಧೆಯ ಕೃತ್ಯ ಎಂದು ಶಂಕಿಸಿ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ. ಪೊಲೀಸರು ದೂರು ಸ್ವೀಕರಿಸಿ ತನಿಖೆ ನಡೆಸುತ್ತಿದ್ದಾರೆ.
ಮಂಗಳೂರು: ಕೊಟ್ಟಿಗೆಯಿಂದ ದನ ಕಳವುಗೈದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಐವರು ಆರೋಪಿಗಳನ್ನು ಮಂಗಳೂರಿನ ಕಂಕನಾಡಿ ನಗರ ಠಾಣಾ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಮಂಗಳೂರಿನ ಗುರುನಗರ ಬಂಗ್ಲಗುಡ್ಡೆಯ ಮಹಮ್ಮದ್ ಅಶ್ಪಕ್ ಆಲಿಯಾಸ್ ಶಮೀರ್ ಯಾನೆ ಚಮ್ಮಿ (22), ಗುರುಪುರ ಅಡ್ಡೂರು ಅದ್ಯಪಾಡಿ ಅಜರುದ್ದೀನ್ ಆಲಿಯಾಸ್ ಅಜರ್ (31), ಬಜಾಲ್ ಪಡ್ಪುವಿನ ಸುಹೈಲ್ (19), ಬಜಾಲ್ ಪಕ್ಕಲಡ್ಕದ ಮೊಹಮ್ಮದ್ ಅಫ್ರೀದ್ (25) ಮತ್ತು ಬಜಾಲ್ ಕಟ್ಟಪುಣಿಯ ಶಾಹೀದ್ ಆಲಿಯಾಸ್ ಚಾಯಿ (19) ಬಂಧಿತರು. ಅಜರುದ್ದೀನ್ ವಿರುದ್ಧ ಬಜಪೆ ಠಾಣೆಯಲ್ಲಿ, ಮೊಹಮ್ಮದ್ ಅಫ್ರೀದ್ ವಿರುದ್ಧ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಧಿತ ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ್ದ ಮಾರುತಿ ಕಾರು, ಕತ್ತಿ ಮತ್ತು ಹಗ್ಗಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ದೋಟ ಹೌಸ್ ಅಶ್ವಿನ್ ಎಂಬವರ ಮನೆಯಲ್ಲಿ ಜು. 20ರಂದು ಸಂಜೆ 6 ಗಂಟೆಗೆ ದನಗಳನ್ನು ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದರು. ಮರುದಿನ ಮುಂಜಾನೆ ಸುಮಾರು 3.30ಕ್ಕೆ ದನ ಕೂಗಿದ ಸದ್ದು ಕೇಳಿ ಮನೆಯವರು ನೋಡಿದಾಗ ಕೊಟ್ಟಿಗೆಯಲ್ಲಿದ್ದ ಸುಮಾರು 40 ಸಾವಿರ…
ಮಂಗಳೂರು: ವ್ಯಕ್ತಿಯೋರ್ವರ ಮೇಲೆ ಕಬ್ಬಿಣದ ರಾಡ್‌ನಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ತಂದೆ-ಮಗನನ್ನು ಬರ್ಕೆ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬೋಳೂರು ನಿವಾಸಿಗಳಾದ ದೇವದಾಸ್ ಬೋಳೂರು(61) ಹಾಗೂ ಸಾಯಿ ಕಿರಣ್ (21) ಬಂಧಿತ ತಂದೆ-ಮಗ. ನವೀನ್ ಸಾಲ್ಯಾನ್ ಗಾಯಗೊಂಡವರು. ಬೋಳೂರು ಮೊಗವೀರ ಮಹಾಸಭಾ ಸಂಘದ ಆಡಳಿತ ಭಿನ್ನಾಭಿಪ್ರಾಯ ಹಾಗೂ ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಈ ವಿಚಾರವಾಗಿ ಈ ಹಿಂದೆಯೂ ಪ್ರಕರಣ ದಾಖಲಾಗಿತ್ತು. ಆದರೆ ಆ.16ರಂದು ಸಂಜೆ 6:25ರ ಸುಮಾರಿಗೆ ಇದೇ ವಿಚಾರದಲ್ಲಿ ವಾಗ್ವಾದ ನಡೆದು ಬೋಳೂರು ಜಾರಂದಾಯ ದೈವಸ್ಥಾನದ ಹತ್ತಿರ ನವೀನ್ ಸಾಲ್ಯಾನ್ ಅವರ ಮೇಲೆ ದೇವದಾಸ್ ಬೋಳೂರು ಹಾಗೂ ಆತನ ಪುತ್ರ ಸಾಯಿ ಕಿರಣ್ ಕಬ್ಬಿಣದ ರಾಡ್‌ನಿಂದ ಹಲ್ಲೆಗೈದಿದ್ದಾರೆ. ಪರಿಣಾಮ ತಲೆಗೆ ಗಂಭೀರವಾಗಿ ಗಾಯಗೊಂಡ ಅವರನ್ನು ಜಿಲ್ಲಾ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಕಾರಿಗೆ ಪಿಕಪ್ ಡಿಕ್ಕಿ ಹೊಡೆದು ಪರಾರಿಯಾದ ಪಿಕಪ್ ನ್ನು ಸ್ಥಳೀಯರ ನೆರವಿನಿಂದ ಪತ್ತೆ ಹಚ್ಚಿದ ಘಟನೆ ಆ. 16. ಬಾಳಿಲದಿಂದ ವರದಿಯಾಗಿದೆ. ಬೆಳ್ಳಾರೆ ಕಡೆಗೆ ಹೋಗುತ್ತಿದ್ದ ಪುರುಷೋತ್ತಮ ಎಂಬವರ ಕಾರಿಗೆ ಬಾಳಿಲದ ಅಗಲ್ಪಾಡಿ ಎಂಬಲ್ಲಿ ಎದುರಿನಿಂದ ಬಂದ ಪಿಕಪ್ ವಾಹನ ಡಿಕ್ಕಿ ಹೊಡೆದು ಕಾರಿನ ಒಂದು ಬದಿ ಜಖಂ ಗೊಂಡಿತು. ಆದರೆ ಪಿಕಪ್ ವಾಹನದವರು ನಿಲ್ಲಿಸದೆ ಅಲ್ಲಿಂದ ಪರಾರಿಯಾಗಿದ್ದರು. ಈ ವಿಚಾರ ತಿಳಿದ ಕೂಡಲೇ ಸ್ಥಳೀಯರು ವಾಹನವನ್ನು ಹುಡುಕಾಟ ನಡೆಸಿದ್ದು, ಈ ವೇಳೆ ಬಾಳಿಲದ ಉರುಂಬಿ ಎಂಬಲ್ಲಿ ವಾಹನ ಪತ್ತೆಯಾಗಿದೆ. ಪರಾರಿಯಾದ ಪಿಕಪ್ ಹಾಸನದ ಸಚಿನ್ ಎಂಬವರುದು ಎಂದು ತಿಳಿದು ಬಂದಿದೆ. ಬಳಿಕ ಪ್ರಕರಣವನ್ನು ರಾಜಿಯಲ್ಲಿ ಮುಗಿಸಲಾಯಿತು.
ಉಡುಪಿ: ಶಿವಮೊಗ್ಗ ಜಿಲ್ಲೆಯಲ್ಲಿ ಚಾಕು ಇರಿತ ಪ್ರಕರಣ ಸಂಬಂಧಿಸಿ ಉಡುಪಿ ಜಿಲ್ಲೆಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ನಗರದ ಪೊಲೀಸರು ವಾಹನಗಳ ತಪಾಸಣೆ ನಡೆಸುತ್ತಿದ್ದಾರೆ. ಜಿಲ್ಲೆಯಾದ್ಯಂತ ಹೆಚ್ಚುವರಿಯಾಗಿ 20 ಚೆಕ್‌ಪೋಸ್ಟ್ ಗಳನ್ನು ತೆರೆಯಲಾಗಿದೆ. ವಾಹನಗಳನ್ನು ತಡೆದು ನಿಲ್ಲಿಸಿ ಮಾಹಿತಿ ಪಡೆಯುವ ಜತೆಗೆ ಮೊಬೈಲ್ ಸಂಖ್ಯೆಯನ್ನೂ ನಮೂದಿಸಿ ಕೊಳ್ಳಲಾಗುತ್ತಿದೆ. ಎಸ್ಪಿ, ಹೆಚ್ಚು ವರಿ ಪೊಲೀಸ್ ವರಿಷ್ಠಾಧಿಕಾರಿ, ಡಿವೈ ಎಸ್ಪಿ, ಇನ್‌ಸ್ಪೆಕ್ಟರ್‌ಗಳು, ಪಿಸಿಗಳು ತಪಾಸಣೆ ಕಾರ್ಯದಲ್ಲಿ ತೊಡಗಿದ್ದಾರೆ. ಬ್ರಹ್ಮಗಿರಿ ಸರ್ಕಲ್‌ನಲ್ಲಿ ಸಾವರ್ಕರ್ ಹಾಗೂ ಸುಭಾಷ್ ಚಂದ್ರ ಬೋಸ್ ಭಾವಚಿತ್ರಗಳಗೊಂಡ ಫ್ಲೆಕ್ಸ್ ಹಾಕಲಾಗಿದ್ದು, ಪೊಲೀಸ್ ಭದ್ರತೆ ಒದಗಿಸಲಾಗಿದೆ. ಬಂದೋ ಬಸ್ತ್ ಮಂಗಳವಾರವೂ ಮುಂದುವರಿಯಲಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿ ಕಾರಿಗಳು ತಿಳಿಸಿದ್ದಾರೆ. ಬೆಳ್ಳಾರೆ, ಸುರತ್ಕಲ್‌ನಲ್ಲಿ ನಡೆದಿರುವ ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗಾಗಲೇ ಬಿಗು ಬಂದೋಬಸ್ತು ಜಾರಿಯಲ್ಲಿದ್ದು, ಪೊಲೀಸರು ಜಾಗೃತ ಸ್ಥಿತಿಯಲ್ಲಿದ್ದಾರೆ. ಶಿವಮೊಗ್ಗ ಘಟನೆಯ ಹಿನ್ನೆಲೆಯಲ್ಲಿ ಹೆಚ್ಚುವರಿಯಾಗಿ ಯಾವುದೇ ಕ್ರಮಗಳನ್ನು ಜಿಲ್ಲೆಯಲ್ಲಿ ಕೈಗೊಂಡಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.










