Author: main-admin

ಮಂಗಳೂರು: ವಿದ್ಯುತ್ ತಂತಿ ಕಡಿದು ಬಿದ್ದ ವಿದ್ಯುತ್ ತಗುಲಿದ ಪರಿಣಾಮ ಇಬ್ಬರು ರಿಕ್ಷಾ ಚಾಲಕರು ಮೃತಪಟ್ಟ ಘಟನೆ ಮಂಗಳೂರು ರೊಸಾರಿಯೋ ಬಳಿ ನಡೆದಿದೆ. ಮೃತಪಟ್ಟ ರಿಕ್ಷಾ ಚಾಲಕರನ್ನು ರಾಜು ಮತ್ತು ದೇವರಾಜು ಎಂದು ಗುರುತಿಸಲಾಗಿದೆ. ಒಬ್ಬರು ಪುತ್ತೂರು ಹಾಗೂ ಇನ್ನೊಬ್ಬರು ಸಕಲೇಶಪುರದವರು. ಇಬ್ಬರೂ ಪಾಂಡೇಶ್ವರದ ರೊಸಾರಿಯೋ ಚರ್ಚ್ ಹಿಂಬದಿ ಬಾಡಿಗೆ ರೂಂನಲ್ಲಿ ವಾಸವಾಗಿದ್ದರು. ಬೆಳಗ್ಗೆ 4.30 ರ ಸುಮಾರಿಗೆ ಒಬ್ಬರು ರಿಕ್ಷಾ ಸ್ವಚ್ಚ ಗೊಳಿಸಲು ಹೊರಬಂದಿದ್ದು, ರಿಕ್ಷಾ ತೊಳೆಯುವ ವೇಳೆ ಮಳೆಗೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ವಿದ್ಯುತ್ ಆಘಾತಕ್ಕೆ ಒಳಗಾಗಿದ್ದರು. ಇದನ್ನು ಕಂಡ ಇನ್ನೊಬ್ಬ ಚಾಲಕ ಗೋಣಿ ಚೀಲ ಹಿಡಿದು ರಕ್ಷಣೆಗೆ ಮುಂದಾಗಿದ್ದು, ಅವರು ವಿದ್ಯುತ್ ಅಘಾತಕ್ಕೆ ಒಳಗಾಗಿರಬಹುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.ಮೃತದೇಹಗಳನ್ನು ವೆನ್ಸಾಕ್ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ ಎಂದು ತಿಳಿದು ಬಂದಿದೆ.

Read More

ಪುತ್ತೂರು: ತಾಲೂಕಿನೆಲ್ಲೆಡೆ ಭಾರಿ ಮಳೆಗೆ ಅನೇಕ ಕಡೆ ಧರೆ ಕುಸಿದ ಘಟನೆ ನಡೆಯುತ್ತಿದ್ದು, ಪುತ್ತೂರು ಬನ್ನೂರಿನ ಜೈನರಗುರಿ ಸಮೀಪ ಮಜೀದ್ ಎಂಬರ ಮನೆ ಮೇಲೆ ಧರೆ ಕುಸಿದ ಪರಿಣಾಮ ಮನೆ ಹಾನಿಗೊಂಡ ಮತ್ತು ನಿದ್ದೆಯಲ್ಲಿದ್ದ ಮಕ್ಕಳು ಮಣ್ಣಿನಡಿಯಲ್ಲಿ ಸಿಲುಕಿದ ಘಟನೆ ಜೂ.27 ರ ನಸುಕಿನ ಜಾವ ನಡೆದಿದೆ. ಬನ್ನೂರು ಜೈನರಗುರಿ ಮಜೀದ್ ಎಂಬವರ ಮನೆಯ ಪಕ್ಕದ ಧರೆಯೊಂದರ ಮಣ್ಣು ಮಳೆಗೆ ಸಡಿಲಗೊಂಡು ಮನೆ ಮೇಲೆ ಕುಸಿದು ಬಿದ್ದಿದೆ. ಮಜೀದ್ ಮತ್ತು ಮನೆ ಮಂದಿ ಮಕ್ಕಳು ಮಲಗಿದ್ದ ಕೊಠಡಿಯ ಮೇಲೆ ಮಣ್ಣು ಕುಸಿದ ಪರಿಣಾಮ ಮನೆಯ ಅರ್ಧ ಭಾಗ ಕುಸಿದಿತ್ತು. ಈ ವೇಳೆ ಮಕ್ಕಳು ಮಣ್ಣಿನಡಿಯಲ್ಲಿ ಸಿಲುಕಿದ್ದರು. ತಕ್ಷಣ ಮನೆಯಲ್ಲಿದ್ದ ಉಳಿದವರು ಮಕ್ಕಳನ್ನು ಮಣ್ಣಿನಡಿಯಿಂದ ಹೊರ ಎಳೆದು ಅಪಾಯವನ್ನು ತಪ್ಪಿಸಿದ್ದಾರೆ. ಘಟನಾ ಸ್ಥಳಕ್ಕೆ ನಗರಸಭಾ ಸದಸ್ಯ ಪಿ ಜಿ ಜಗನ್ನಿವಾಸ ರಾವ್, ಪೌರಾಯುಕ್ತ ಮಧು ಎಸ್ ಮನೋಹರ್ ಸಹಿತ ನಗರಸಭೆ ಅಧಿಕಾರಿಗಳು ಭೇಟಿ ನೀಡಿದ್ದಾರೆ. ನಗರಸಭೆ ಮತ್ತು ಸ್ಥಳೀಯರು ಮಣ್ಣು ತೆರವು ಕಾರ್ಯ…

Read More

ಕೊಚ್ಚಿ: ಭಾರತ ರಕ್ಷಣಾ ಕಾಯಿದೆ 1971ರ ನಿಯಮ 130 ಮತ್ತು 138ರ ಅಡಿಯಲ್ಲಿ ಒಬ್ಬ ವ್ಯಕ್ತಿಯು ಕೆಲಸ ಹುಡುಕಿಕೊಂಡು ಪಾಕಿಸ್ತಾನಕ್ಕೆ ಹೋಗಿರುವುದರಿಂದ ಶತ್ರುವಾಗುವುದಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಶತ್ರುವಿನ ಜತೆ ವ್ಯವಹಾರ ಮಾಡದ ಹೊರತು ಈ ಕಾಯ್ದೆಯಡಿ ಶತ್ರುವಾಗುವುದಿಲ್ಲ ಎಂದೂ ಕೋರ್ಟ್ ಅಭಿಪ್ರಾಯಪಟ್ಟಿದೆ. ಅರ್ಜಿದಾರರಾದ ಪಿ. ಉಮರ್ ಕೋಯಾ ಅವರು ತಮ್ಮ ತಂದೆ ಕುಂಜಿಕೋಯ ತಮ್ಮ ಸಂಬಂಧಿಕರಿಂದ ಕೆಲವು ಜಮೀನು ಮತ್ತು ಆಸ್ತಿಯನ್ನು ಖರೀದಿಸಿದ ಪ್ರಕರಣದಲ್ಲಿ ನ್ಯಾಯಾಲಯದ ಈ ತೀರ್ಪು ಬಂದಿದೆ. ಅಲ್ಲದೆ ನ್ಯಾಯಾಲಯವು ಕರಾಚಿಯ ಹೋಟೆಲ್‌ನಲ್ಲಿ ಕೆಲಕಾಲ ಕೆಲಸ ಮಾಡಿದ್ದ ಅರ್ಜಿದಾರರ ತಂದೆ ಕುಂಜಿ ಕೋಯಾ ಅವರ ಆಸ್ತಿಗಳ ವಿರುದ್ಧ ಶತ್ರು ಆಸ್ತಿ ಕಾಯ್ದೆಯಡಿಯಲ್ಲಿ ಆರಂಭಿಸಲಾದ ವಿಚಾರಣೆಯನ್ನು ರದ್ದುಗೊಳಿಸಿದೆ. ಈ ಪ್ರಕರಣವು ಉಮರ್ ಕೋಯಾ ಎಂಬ ವ್ಯಕ್ತಿಯದ್ದಾಗಿದೆ. ಮಲಪ್ಪುರಂ ನಿವಾಸಿ ಉಮರ್ ಕೋಯಾ ತಮ್ಮ ತಂದೆಯ ಆಸ್ತಿಯನ್ನು ಶತ್ರು ಆಸ್ತಿ ಕಾಯ್ದೆ 1968ರ ಅಡಿಯಲ್ಲಿ ಮುಟ್ಟುಗೋಲು ಹಾಕಿಕೊಳ್ಳುವಂತಿಲ್ಲ ಎಂದು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ವಾಸ್ತವವಾಗಿ, ಒಮರ್ ಕೋಯಾ ಅವರ ತಂದೆ…

Read More

ಮುಂಬೈ: ಕಾಲೇಜು ಕ್ಯಾಂಪಸ್ ನಲ್ಲಿ ಹಿಜಾಬ್, ನಿಖಾಬ್, ಬುರ್ಖಾ, ಟೋಪಿ ಧರಿಸುವುದನ್ನು ನಿಷೇಧಿಸುವ ಎನ್.ಜಿ ಆಚಾರ್ಯ ಮತ್ತು ಡಿಕೆ ಮರಾಠೆ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜು ಜಾರಿಗೊಳಿಸಿದ ಡ್ರೆಸ್ ಕೋಡ್ ಅನ್ನು ಪ್ರಶ್ನಿಸಿ ಒಂಬತ್ತು ವಿದ್ಯಾರ್ಥಿನಿಯರು ಸಲ್ಲಿಸಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್ ತಿರಸ್ಕರಿಸಿದೆ. ಎನ್.ಜಿ ಆಚಾರ್ಯ ಮತ್ತು ಡಿಕೆ ಮರಾಠೆ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಲೆ, ವಿದ್ಯಾಲಯದ ಒಂಬತ್ತು ವಿದ್ಯಾರ್ಥಿಗಳು. ಕ್ಯಾಂಪಸ್ನಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸುವ ಕಾಲೇಜು ಆಡಳಿತ ಮಂಡಳಿ ವಿಧಿಸಿರುವ ಡ್ರೆಸ್ ಕೋಡ್ ವಿರುದ್ಧ ವಿದ್ಯಾರ್ಥಿನಿಯರು ಅರ್ಜಿ ಸಲ್ಲಿಸಿದ್ದಾರೆ. ಎನ್.ಜಿ.ಆಚಾರ್ಯ ಮತ್ತು ಡಿ.ಕೆ.ಮರಾಠೆ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನಲ್ಲಿ ದಾಖಲಾಗಿರುವ ಅರ್ಜಿದಾರರು B.Sc ಮತ್ತು B.Sc (ಕಂಪ್ಯೂಟರ್ ಸೈನ್ಸ್) ಪದವಿಗಳನ್ನು ಪಡೆಯುತ್ತಿದ್ದಾರೆ. ಹೊಸ ಡ್ರೆಸ್ ಕೋಡ್ ಖಾಸಗಿತನ, ಘನತೆ ಮತ್ತು ಧಾರ್ಮಿಕ ಸ್ವಾತಂತ್ರ್ಯದ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎಂದು ಅವರು ವಾದಿಸುತ್ತಾರೆ. ಅರ್ಜಿಯ ಪ್ರಕಾರ, ವಿದ್ಯಾರ್ಥಿಗಳು ಹಲವಾರು ವರ್ಷಗಳಿಂದ ಕಾಲೇಜಿನ ಒಳಗೆ ಮತ್ತು ಹೊರಗೆ ನಿಖಾಬ್…

Read More

ಬೆಂಗಳೂರು : ಪರವಾನಗಿ ನವೀಕರಿಸಿದ ಆರೋಪ ಎದುರಿಸುತ್ತಿರುವ ಹಿನ್ನೆಲೆ ಪವರ್ ಟಿ.ವಿ ಕನ್ನಡ ಚಾನೆಲ್ ತಕ್ಷಣದಿಂದಲೇ ಎಲ್ಲಾ ಕಾರ್ಯಕ್ರಮಗಳನ್ನು ಸ್ಥಗಿತ ಗೊಳಿಸುವಂತೆ ಹೈ ಕೋರ್ಟ್ ಆದೇಶ ಹೊರಡಿಸಿದೆ. ಮಂಗಳವಾರ ಏಕಸದಸ್ಯ ನ್ಯಾಯ ಪೀಠದಲ್ಲಿ ಜೆಡಿಎಸ್ ವಿಧಾನ ಪರಿಷತ್ ಮಾಜಿ ಸದಸ್ಯ ಎಚ್.ಎಂ. ರಮೇಶ್ ಗೌಡ, ಡಾ. ಎ ರಮ್ಯಾ ರಮೇಶ್ ಹಾಗೂ ಐಪಿಎಸ್ ಅಧಿಕಾರಿ ಬಿ.ಆರ್. ರವಿಕಾಂತೇಗೌಡ ಸಲ್ಲಿಸಿದ ರಿಟ್ ಅರ್ಜಿಗಳನ್ನು ವಿಚಾರಣೆ ನಡೆಸಿ, ವಾದ ಮಂಡಿಸಿದ ಹೈಕೋರ್ಟ್ ಹಿರಿಯ ವಕೀಲ ಪ್ರಭುಲಿಂಗ ಪ್ರತಿವಾದಿ ರಾಕೇಶ್ ಶೆಟ್ಟಿ, ಅರ್ಜಿದಾರರ ವಿರುದ್ಧ ಮಾನಹಾನಿಕರ ಸುದ್ದಿಗಳನ್ನು ಬಿತ್ತರಿಸುತ್ತಿದ್ದರೆ, ವಾಸ್ತವದಲ್ಲಿ ಇವರ ಚಾನೆಲ್ ಕಾನೂನುಬಾಹಿರವಾಗಿ ನಡೆಯುತ್ತಿದೆ. 2021ರಿಂದಲೂ ಚಾನೆಲ್ ನ ಪರವಾನಗಿ ನವೀಕರಿಸಿಲ್ಲ ಎಂಬ ಅಂಶಗಳನ್ನು ನ್ಯಾಯಪೀಠದ ಗಮನಕ್ಕೆ ತಂದರು. ಬಳಿಕ ಈ ವಾದ ಆಲಿಸಿದ ನ್ಯಾಯಪೀಠ ಪ್ರತಿವಾದಿ ರಾಕೇಶ್ ಕೇಬಲ್ ಟೆಲಿವಿಷನ್ ನೆಟ್‌ವರ್ಕ್ ಗಳ ಕಾಯ್ದೆ 1995ದ ಆದೇಶವನ್ನು ಉಲ್ಲಂಘಿಸಿರುವ ಕಾರಣ ತಕ್ಷಣದಿಂದಲೇ ತಮ್ಮ ಚಾನೆಲ್ ನಲ್ಲಿ ಪ್ರಸಾರವಾಗುವ ಸುದ್ದಿಗಳನ್ನು ಜುಲೈ 8ರ ವರೆಗೂ…

Read More

ಬೆಂಗಳೂರು : ಪೆಟ್ರೋಲ್, ಡೀಸೆಲ್ ಬಳಿಕ ಇದೀಗ ಕೆಎಂಎಫ್ ಹಾಲಿನ ದರ ಏರಿಕೆ ಮಾಡಿದ್ದು, ಇಂದು ಮಧ್ಯಾಹ್ನದಿಂದಲೇ ಪ್ರತಿ ಪ್ಯಾಕೆಟ್ನ ಬೆಲೆ ರೂ.2 ಏರಿಕೆಯಾಗಲಿದೆ ಎಂದು ಕೆಎಂಎಫ್ ಮಾಹಿತಿ ನೀಡಿದೆ. ಹೌದು ಹೊಸ ಹಾಲಿನ ಪ್ಯಾಕೆಟ್ ನಿಂದ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ ತಗುಲಿದೆ. ಆದರೆ ರಾತ್ರಿ ಬಂದಿರುವಂತಹ ಸ್ಟಾಕ್ ದರದಲ್ಲಿ ಯಾವುದೇ ಬದಲಾವಣೆ ಇಲ್ಲ ಸದ್ಯ ಹಳೆಯ ದರದಲ್ಲಿ ಹಾಲಿನ ಪ್ಯಾಕೆಟ್ ಗಳನ್ನು ಮಾರಾಟ ಮಾಡಲಾಗುತ್ತಿದೆ. ಮಧ್ಯಾಹ್ನದ ನಂತರ ಹೊಸ ದರದಲ್ಲಿ ಹಾಲು ಮಾರಾಟ ಮಾಡಲಾಗುತ್ತದೆ. ಮಧ್ಯಾಹ್ನದಿಂದ ನಂದಿನಿ ಹಾಲಿನ ದರ ಹೆಚ್ಚಾಗಲಿದೆ ಹಾಗಾಗಿ ಸದ್ಯ ಸಾಮಾನ್ಯ ದರದಲ್ಲಿ ಹಾಲಿನ ಪ್ಯಾಕೆಟ್ ಗಳನ್ನು ಮಾರಾಟ ಮಾಡಲಾಗುತ್ತಿದೆ. ಇವಾಗ ಇರುವುದು ರಾತ್ರಿ ಬಂದಿರುವ ಸ್ಟಾಕ್ ಒಂದು ಲೀಟರ್ ಒಂದು ಪ್ಯಾಕೆಟ್ ತಗೊಂಡ್ರೆ 2 ರೂಪಾಯಿ ಜಾಸ್ತಿ ಆಗುತ್ತದೆ ಅರ್ಧ ಲೀಟರ್ 2 ಪ್ಯಾಕೆಟ್ ತಗೊಂಡ್ರೆ 4 ರೂಪಾಯಿ ಜಾಸ್ತಿ ಆಗುತ್ತದೆ. ಪ್ಯಾಕೆಟ್ ಮೇಲೆ 2 ರೂಪಾಯಿ ಜಾಸ್ತಿ ಮಾಡಿದ್ದಾರೆ ಎಂದು ಬೆಂಗಳೂರಿನಲ್ಲಿ…

Read More

ಮಂಗಳೂರು: ಜೋರು ಮಳೆಯಿಂದಾಗಿ ಮಂಗಳೂರಿನ ಕುತ್ತಾರಿನ ಮದನಿ ನಗರದಲ್ಲಿ ಸಮೀಪದ ಮನೆಯ ಗೋಡೆ ಇನ್ನೊಂದು ಮನೆಯ ಮೇಲೆ ಕುಸಿದು ಬಿದ್ದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಬುಧವಾರ ಮುಂಜಾನೆಸಂಭವಿಸಿದೆ. ಮೃತಪಟ್ಟವರನ್ನು ಯಾಸಿರ್‌(45), ಅವರ ಪತ್ನಿ ಮರಿಯಮ್ಮ(40) ಹಾಗೂ ಮಕ್ಕಳಾದ ರಿಯಾನ & ರಿಫಾನ್‌ ಎಂದು ಗುರುತಿಸಲಾಗಿದೆ. ಅಬೂಬಕ್ಕರ್‌ ಅವರ ಮನೆ ಗೋಡೆ ಯಾಸಿರ್‌ ಮನೆ ಮೇಲೆ ಕುಸಿದು ಬಿದ್ದಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಪೊಲೀಸರು ಆಗಮಿಸಿದ್ದು, ಕಾರ್ಯಾಚರಣೆ ನಡೆಸುತ್ತಿದ್ದಾರೆ. ಈಗಾಗಲೇ ಮೂವರ ಮೃತದೇಹಗಳನ್ನು ಹೊರ ತೆಗೆಯಲಾಗಿದೆ.

Read More

ಮಂಗಳೂರು: ನಗರದ ಜೆಪ್ಪಿನಮೊಗರು ಎಂಬಲ್ಲಿ ರಸ್ತೆಯನ್ನು ಅಗೆದು ಹಾಕಿರುವ ವಿಚಾರದಲ್ಲಿ ಗಲಾಟೆ ನಡೆದು ವಕೀಲ ದಂಪತಿಗೆ ಹಲ್ಲೆ ನಡೆಸಿ, ಮಾನಭಂಗಕ್ಕೆ ಯತ್ನಿಸಿದ್ದಾರೆಂದು ಸ್ಥಳೀಯ ವ್ಯಕ್ತಿಯೊಬ್ಬರ ಮೇಲೆ ದೂರು ದಾಖಲಾಗಿದೆ. ವಕೀಲ ದಂಪತಿಯೂ ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ವ್ಯಕ್ತಿ ಪ್ರತಿದೂರು ದಾಖಲಿಸಿದ್ದಾರೆ. ನ್ಯಾಯವಾದಿ ಜಯಪ್ರಕಾಶ್ ಅವರ ಮನೆಗೆ ಹೋಗುವ ದಾರಿಯ ವಿಚಾರದಲ್ಲಿ ಸ್ಥಳೀಯ ರಾಬರ್ಟ್ ವೆಲೆರಿಯನ್ ಮೆಂಡೋನ್ಸಾ ಅವರ ನಡುವೆ ತಕಾರಾರು ಎದ್ದಿತ್ತು. ಈ ಬಗ್ಗೆ ಎರಡೂ ಕಡೆಯವರ ನಡುವೆ ಈ ಹಿಂದೆಯೇ ಜಗಳ ನಡೆದಿತ್ತು‌. ಈ ನಡುವೆ ಜಾಗದ ಮಾಲಕ ರಾಬರ್ಟ್ ವೆಲೆರಿಯನ್ ಮೆಂಡೋನ್ಸಾ ಅವರು ಜಯಪ್ರಕಾಶ್ ಅವರ ಮನೆಗೆ ಹೋಗುವ ದಾರಿಯನ್ನು ಅಗೆದು ಹಾಕಿದ್ದರು. ಪರಿಣಾಮ ರಸ್ತೆ ತುಂಬಾ ನೀರು ನಿಂತು ಮೊಣಕಾಲು ಮುಳುಗುವಷ್ಟು ನೀರಿನಲ್ಲಿಯೇ ಜನ ಸಂಚಾರ ಮಾಡಬೇಕಿತ್ತು. ಈ ಬಗ್ಗೆ ವೀಡಿಯೋ ಮಾಡಿ ವಕೀಲ ಜಯಪ್ರಕಾಶ್ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು. ವೀಡಿಯೋದಲ್ಲಿ ಸ್ಥಳೀಯ ಕಾರ್ಪೊರೇಟರ್ ವೀಣಾ ಮಂಗಳ ಅವರನ್ನು ತರಾಟೆಗೆ ತೆಗೆದುಕೊಂಡಿದ್ದರು. ಆದ್ದರಿಂದ…

Read More

ಬೆಂಗಳೂರು :ನಂದಿನಿ ಹಾಲಿನ ದರ ಹೆಚ್ಚಿಸಲಾಗಿದೆ ಎಂದು ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಭೀಮನಾಯ್ಕ್ ತಿಳಿಸಿದ್ದಾರೆ.ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರತಿ ಲೀಟರ್‌ ಹಾಲಿನ ದರವನ್ನ 2.10 ರೂ. ಹಾಗೂ ಅರ್ಧ ಲೀಟರ್‌ ಹಾಲಿನ ದರ 22 ರೂ. ನಿಂದ 24 ರೂ.ಗೆ ಹೆಚ್ಚಿಸಲಾಗಿದೆ. ಆದ್ರೆ ಗ್ರಾಹಕರಿಗೆ ಸಿಗುತ್ತಿದ್ದ 1,000 ಎಂಎಲ್‌ (1 ಲೀಟರ್)‌ ಪ್ಯಾಕೆಟ್‌ ಹಾಲು ಇನ್ಮುಂದೆ 1,050 ಎಂಎಲ್‌ ಹಾಗೂ ಅರ್ಧ ಲೀಟರ್‌ ಪ್ಯಾಕೆಟ್‌ ಹಾಲು 550 ಎಂಎಲ್‌ ಹೆಚ್ಚುವರಿ ಸಿಗಲಿದೆ ಎಂದು ಅವರು ತಿಳಿಸಿದ್ದಾರೆ. ನಾಳೆಯಿಂದ ಈ ದರ ನಾಳೆಯಿಂದ ಅನ್ವಯವಾಗಲಿದೆ ಎಂದು ತಿಳಿಸಿದರು.ಮೊಸರು ಇನ್ನಿತರ ಯಾವುದೇ ಹಾಲಿನ ಉತ್ಪನ್ನದ ದರ ಏರಿಕೆ ಮಾಡಲ್ಲ. ಕೇರಳದಲ್ಲಿ ಒಂದು ಲೀಟರ್ ಹಾಲಿನ ಬೆಲೆ 52 ರುಪಾಯಿ ಇದೆ. ಗುಜರಾತ್​​​​ನಲ್ಲಿ ಅಮುಲ್ ಒಂದು ಲೀಟರ್​ಗೆ 56 ರೂ. ಮಹಾರಾಷ್ಟ್ರದಲ್ಲಿ 56 ರೂ. ದೆಹಲಿ ಮದರ್ ಡೈರಿಯ ಹಾಲಿನ ಬೆಲೆ 54 ರೂ. ಇದೆ ಎಂದರು.

Read More

ಉಡುಪಿ ಜಿಲ್ಲೆಯಲ್ಲಿ ಅತಂಕ‌ ಸೃಷ್ಟಿಸಿದ್ದ ಗ್ಯಾಂಗ್ ವಾರ್ ಅರೋಪಿಗಳು ಹಿರಿಯಡ್ಕ ಜಿಲ್ಲಾ ಕಾರಾಗೃಹದಲ್ಲಿ ದಾಂಧಲೆ ನಡೆಸಿ, ಜಿಲ್ಲಾ ಅಧೀಕ್ಷಕರು, ಸಿಬ್ಬಂದಿಯ ಮೇಲೆ ಹಲ್ಲೆಗೆ ಯತ್ನಿಸಿರುವ ಘಟನೆ ಸಂಭವಿಸಿದೆ. ಕಾರಾಗೃಹದಲ್ಲಿರುವ ಈ ಖತರ್ ನಾಕ್ ಗ್ಯಾಂಗ್ ಕುರ್ಚಿ ಅಡುಗೆ ಮನೆಯಲ್ಲಿದ್ದ ಚಾಹಾ ಸೌಟು ಪಾತ್ರೆಗಳಿಂದ ಜಿಲ್ಲಾ ಅಧೀಕ್ಷಕರು, ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದೆ ಎಂದು ಮಾಹಿತಿ ತಿಳಿದು ಬಂದಿದೆ. ವಿಚಾರಣಾ ಕೈದಿಗಳಾದ ಮುಹಮ್ಮದ್ ಆಶಿಕ್ ಮತ್ತು ಮಹಮ್ಮದ್ ಸಕ್ಲೇನ್ ಪಿಜನ್ ಕಾಲ್ ಸಿಸ್ಟಮ್ ಕರೆ ಮಾಡಲು ತಡವಾಯಿತೆಂದು ಹೇಳಿ ಕರ್ತವ್ಯದಲ್ಲಿದ್ದ ಜೈಲರ್ ಎಸ್.ಎ.ಶಿರೋಳ ಅವರಿಗೆ ಅವಾಚ್ಯ ಶಬ್ದಗಳಿಂದ ಬೈದು ಬೆದರಿಕೆ ಹಾಕಿ ಜೋರಾಗಿ ಕೂಗಾಡಿದ್ದಾರೆ. ಮಾತ್ರವಲ್ಲದೇ ಅಧೀಕ್ಷಕರ ಕಚೇರಿಯಿಂದ ಕರೆದುಕೊಂಡು ಹೋಗುವಾಗ ಸಿಬ್ಬಂದಿಯೊಂದಿಗೆ ಮತ್ತೆ ಗಲಾಟೆ ಆರಂಭಿಸಿ ಸಿಬ್ಬಂದಿಯನ್ನು ದೂಡಿ ಕೊಠಡಿಯಲ್ಲಿದ್ದ ಬೆಂಕಿ ನಂದಿಸುವ ಯಂತ್ರವನ್ನು ತೆಗೆಯಲು ಪ್ರಯತ್ನಿಸಿದರೆನ್ನಲಾಗಿದೆ. ಬಳಿಕ ಅಡುಗೆ ಕೋಣೆಯಲ್ಲಿರುವ ದೊಡ್ಡ ಸೌಟನ್ನು ಮತ್ತು ಚಹಾ ಮಾಡುವ ಸೌಟನ್ನು ತಂದು, ಮುಹಮ್ಮದ್ ಸಕ್ಲೇನ್ ತನ್ನ ಕೊಠಡಿಯ ಮರದ ಕುರ್ಚಿಯನ್ನು ತೆಗೆದುಕೊಂಡು…

Read More