ರಾಜ್ಯಾದ್ಯಂತ ಕಬಾಬ್, ಫಿಶ್, ಚಿಕನ್‌ಗೆ ಕೃತಕ ಬಣ್ಣ ಬಳಕೆಗೆ ನಿರ್ಬಂಧಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಕೃತಕ ಬಣ್ಣದ ಬೆರೆಸುವಿಕೆಯಿಂದಾಗಿ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಕಬಾಬ್, ಫಿಶ್, ಚಿಕನ್ ತಯಾರಿಕೆಯಲ್ಲಿ ಕೃತಕ ಬಣ್ಣಗಳನ್ನು ಬೆರೆಸುವುದನ್ನು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ನಿರ್ಬಂಧಿಸಿದೆ. ಬಾಯಿ ಚಪ್ಪರಿಸಿಕೊಂಡು ತಿನ್ನುವ ಗೋಬಿ ಮಂಚೂರಿ, ಬಾಂಬೆ ಮಿಠಾಯಿಗೆ ಕಲರ್ ಹಾಕುವುದನ್ನು ಬ್ಯಾನ್ ಮಾಡಿದ ಬೆನ್ನಲ್ಲೇ ಇದೀಗ ಕಬಾಬ್ ಸರದಿಯಾಗಿದೆ. ಕೃತಕ ಬಣ್ಣದಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿದೆ. ಹೀಗಾಗಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯು ರಾಜ್ಯಾದ್ಯಂತ ಮಾರಾಟ ಮಾಡಲಾಗುತ್ತಿರುವ ಕಬಾಬ್‌ಗಳ ಮಾದರಿಗಳನ್ನು ಸಂಗ್ರಹಿಸಿ ಲ್ಯಾಬ್‌ಗೆ ಕಳುಹಿಸಿತ್ತು. ರಾಜ್ಯಾದ್ಯಂತ 39 ಕಬಾಬ್‌ಗಳ ಮಾದರಿಗಳನ್ನು ಸಂಗ್ರಹಿಸಿ ಲ್ಯಾಬ್‌ಗೆ ಕಳಿಸಿದಾಗ, ಅದರಲ್ಲಿ 8 ಕಬಾಬ್‌ನ ಮಾದರಿಗಳು ಕೃತಕ ಬಣ್ಣದಿಂದ (ಸನ್‌ಸೆಟ್ ಯೆಲ್ಲೋ – 7 ಮಾದರಿಗಳು ಹಾಗೂ ಸನ್‌ಸೆಟ್ ಯೆಲ್ಲೋ ಮತ್ತು ಕಾರ್ಮೋಸಿನ್ ಹೊಂದಿರುವ ಮಾದರಿಗಳು 1) ಕೂಡಿರುವುದರಿಂದ ಅಸುರಕ್ಷಿತ ಎಂದು…
Author: main-admin
ಉಳ್ಳಾಲ: ಬೈಕ್ ಕಳವು ನಡೆಸಿದ ಆರೋಪಿಗಳಿಬ್ಬರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದು, ಬಂಧಿತರಿಂದ ತೊಕ್ಕೊಟ್ಟುವಿನಿಂದ ಕಳವು ನಡೆಸಿದ ಆಕ್ಟಿವಾ ಸ್ಕೂಟರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.ಮುಕ್ಕಚ್ಚೇರಿ ಕಡಪ್ಪುರ ನಿವಾಸಿ ಅಬ್ದುಲ್ ಸವಾದ್ (26) ಮತ್ತು ಧರ್ಮನಗರ ನಿವಾಸಿ ಯಶ್ಬಿತ್ (22) ಬಂಧಿತರು.ಬಂಧಿತರಿಬ್ಬರು ಕೆಲ ದಿನಗಳ ಹಿಂದೆ ತೊಕ್ಕೊಟ್ಟು ಕೀರ್ತಿ ಹೊಟೇಲ್ ಎದುರುಗಡೆ ನಿಲ್ಲಿಸಿದ್ದ ಆಕ್ಟಿವಾ ಸ್ಕೂಟರನ್ನು ಕಳವು ನಡೆಸಿದ್ದರು. ಖಚಿತ ಮಾಹಿತಿ ಪಡೆದ ಉಳ್ಳಾಲ ಪೊಲೀಸರು ಆರೋಪಿಗಳಿಬ್ಬರನ್ನು ಉಳ್ಳಾಲದಿಂದ ಬಂಧಿಸಿದ್ದಾರೆ.ಆರೋಪಿಗಳಲ್ಲಿ ಅಬ್ದುಲ್ ಸವಾದ್ ವಿರುದ್ಧ ಗಾಂಜಾ ಹಾಗೂ ಕಳವು ಪ್ರಕರಣಗಳು ಮಂಗಳೂರಿನ ವಿವಿಧ ಠಾಣೆಗಳಲ್ಲಿದೆ. ಯಶ್ಬಿತ್ ಉಳ್ಳಾಲ – ಸ್ಟೇಟ್ ಬ್ಯಾಂಕ್ ಬಸ್ಸಿನಲ್ಲಿ ನಿರ್ವಾಹಕನಾಗಿದ್ದಾನೆ.ಠಾಣಾಧಿಕಾರಿ ಬಾಲಕೃಷ್ಣ ಹೆಚ್.ಎನ್ ನೇತೃತ್ವದಲ್ಲಿ ಆರೋಪಿಗಳನ್ನು ಬಂಧಿಸಲಾಗಿದ್ದು, ರೂ. 80,000 ಬೆಲೆ ಬಾಳುವ ಆಕ್ಟಿವಾ ಸ್ಕೂಟರನ್ನು ವಶಕ್ಕೆ ಪಡೆಯಲಾಗಿದೆ.
ವಿಟ್ಲ: ಉಡುಪಿ-ಕಾಸರಗೊಡು ವಿದ್ಯುತ್ ಮಾರ್ಗ ಜಿಲ್ಲೆಯ ರೈತರ ಅಳಿವು ಉಳಿವಿನ ಪ್ರಶ್ನೆಯಾಗಿದ್ದು, ಕೃಷಿ ಜಮೀನುಗಳನ್ನು ಉಳಿಸುವ ನಿಟ್ಟಿನಲ್ಲಿ ಜಿಲ್ಲೆಯ ಶಾಸಕರಿಗೆ, ಸಂಸದರಿಗೆ ಹಲವು ಬಾರಿ ಮನವಿಗಳನ್ನು ಸಲ್ಲಿಸಲಾಗಿದೆ. ಆದರೆ ಅವರು ಅದನ್ನು ಕಸದ ಬುಟ್ಟಿಗೆ ಎಸೆದು ಕಂಪನಿಯ ಏಜೆಂಟರಂತೆ ವರ್ತಿಸುತ್ತಿರುವುದು ಖಂಡನಾರ್ಹ. ಕೃಷಿ ಜಮೀನುಗಳನ್ನು ಹಾಳು ಮಾಡುವ ಈ ಯೋಜನೆಯನ್ನು ತಕ್ಷಣ ಸ್ಥಗಿತಗೊಳಿಸಬೇಕು. ಇದರ ವಿರುದ್ಧ ಹೋರಾಟಕ್ಕಿಳಿದಿರುವ ರೈತರ ಮೇಲೆ ಸುಳ್ಳು ಪ್ರಕರಣ ದಾಖಲಿಸುವ ಹುನ್ನಾರ ನಡೆಯುತ್ತಿದೆ. ಇದು ಮುಂದುವರಿದರೆ ಮುಂದಿನ ದಿನ ಇದರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಕಾರ್ಯದರ್ಶಿ ಮನೋಹರ ಶೆಟ್ಟಿ ನಡಿಕಂಬಳಗುತ್ತು ಎಚ್ಚರಿಸಿದ್ದಾರೆ. ವಿಟ್ಲದಲ್ಲಿ ಕರೆದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು. ಯೋಜನೆಗಾಗಿ ಪಡುಬಿದ್ರೆಯ ಇನ್ನಾದಲ್ಲಿ ಭತ್ತದ ಗದ್ದೆಯನ್ನು ಹಾಳುಗೆಡುವುದನ್ನು ವಿರೋಧಿಸಿ ತೀವ್ರ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಮಧ್ಯ ಪ್ರವೇಶಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳರ್ ಯೋಜನೆಯ ಕಾಮಗಾರಿ ತಕ್ಷಣ ನಿಲ್ಲಿಸುವಂತೆ ಆದೇಶ ಹೊರಡಿಸಿದ್ದು, ಇದು ಉಭಯ ಜಿಲ್ಲೆಗಳಿಗೆ ಅನ್ವಯವಾಗಿದೆ. ಆದರೆ…
ಬೆಂಗಳೂರು: ಶೀಘ್ರದಲ್ಲಿ ಹೊಸದಾಗಿ ಒಂದು ಸಾವಿರ ಗ್ರಾಮ ಲೆಕ್ಕಾಧಿಕಾರಿಗಳ ನೇಮಕಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಅವರು ಕಲಬುರಗಿ ನಗರದಲ್ಲಿವಿಭಾಗ ಮಟ್ಟದ ಕಂದಾಯ ಇಲಾಖೆ ಅಧಿಕಾರಿಗಳ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡುತ್ತ ಈ ಬಗ್ಗೆ ಮಾಹಿತಿ ನೀಡಿದರು. ಇದೇ ವೇಳೆ ಅವರು ಮಾತನಾಡುತ್ತ, ಸರ್ವೆ ಕೆಲಸಗಳು ವಿಳಂಬವಾಗುವುದನ್ನು ತಪ್ಪಿಸಲು ಸರ್ವೆಯರ್‌ಗಳ ಹುದ್ದೆಗಳನ್ನೂ ಕೂಡ ಭರ್ತಿ ಮಾಡಲಾಗುವುದು ಅಂತ ತಿಳಿಸಿದರು. ಇನ್ನೂ ‘ಈ ಬಾರಿ ವಾಡಿಕೆಗಿಂತ ಹೆಚ್ಚಿನ ಮಳೆ ಆಗುವ ಹಿನ್ನಲೆಯಲ್ಲಿ ಮುಂಜಾಗ್ರತ ಕ್ರಮವಾಗಿ ಅಧಿಕಾರಿಗಳಿಗೆ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ ಅಂತ ತಿಳಿಸಿದರು.
ಕುಂದಾಪುರ:ಕುಂದಾಪುರ-ಬೈಂದೂರು ರಾಷ್ಟ್ರೀಯ ಹೆದ್ದಾರಿ 66ರ ಸಂಗಮ ಜಂಕ್ಷನ್ ಬಳಿ ಭಾನುವಾರ ಬೆಳಗ್ಗೆ ಟ್ರಕ್‌ನ ಕೆಳಗೆ ಸ್ಕೂಟರ್ ಉರುಳಿ ಬಿದ್ದಿದೆ. ಅದೃಷ್ಟವಶಾತ್ ಸ್ಕೂಟರ್‌ನಲ್ಲಿ ಪ್ರಯಾಣಿಸುತ್ತಿದ್ದ ತಾಯಿ ಮತ್ತು ಮಗಳಿಗೆ ಬಿದ್ದು ಸಣ್ಣಪುಟ್ಟ ಗಾಯಗಳಾಗಿವೆ. ಗಾಯಗೊಂಡವರನ್ನು ರೋಸಿ ಮತ್ತು ಆಕೆಯ ಮಗಳು ರೆನಿಸ್ ಎಂದು ಗುರುತಿಸಲಾಗಿದೆ. ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಟ್ರಕ್ ಹರಿಯಾಣದಿಂದ ಕೊಝಿಕೋಗೆ ತೆರಳುತ್ತಿತ್ತು. ಡಿಕ್ಕಿಯ ರಭಸಕ್ಕೆ ಸ್ಕೂಟರ್ ನಜ್ಜುಗುಜ್ಜಾಗಿದೆ. ಈ ಸಂಬಂಧ ಕುಂದಾಪುರ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ
ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾತ್ಯತೀತ ಜನತಾದಳ (ಜೆಡಿಎಸ್) ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರನ್ನು ಭಾನುವಾರದಂದು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ಸೂರಜ್ ರೇವಣ್ಣ ಪರ ಸೋಮವಾರ (ಜೂನ್. 24) ಜಾಮೀನು ಅರ್ಜಿ ಸಲ್ಲಿಸಲಾಗುತ್ತದೆ. ಮುಂದಿನ ವಿಚಾರಣೆ ಜುಲೈ 6 ರಂದು ನಡೆಯಲಿದೆ. ಈ ಬಗ್ಗೆ ಸೂರಜ್ ರೇವಣ್ಣ ಪರ ವಕೀಲ ನಿಖಿಲ್ ಕಾಮತ್ ಮಾಹಿತಿ ನೀಡಿದ್ದಾರೆ. ಅಪರಾಧ ತನಿಖಾ ಇಲಾಖೆ (ಸಿಐಡಿ) ಕಸ್ಟಡಿಗಾಗಿ ನ್ಯಾಯಾಲಯವನ್ನು ಸಂಪರ್ಕಿಸುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಸೋಮವಾರ ಸಿಐಡಿ ಮುಂದಿನ ನಡೆ ನೋಡಿಕೊಂಡು ಜಾಮೀನು ಅರ್ಜಿ ಸಲ್ಲಿಸುವುದಾಗಿ ನಿಖಿಲ್ ಕಾಮತ್ ಮಾಹಿತಿ ನೀಡಿದ್ದಾರೆ. ಸಲಿಂಗ ಕಾಮ, ಅಸಹಜ ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರನ್ನು ಸೆನ್ ಪೊಲೀಸ್ ಠಾಣೆಯಲ್ಲಿ ಬಂಧಿಸಲಾಗಿತ್ತು. ಸೂರಜ್ ರೇವಣ್ಣ ಅವರನ್ನು 42ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶ ಶಿವಕುಮಾರ್ ಅವರ ಮುಂದೆ ಹಾಜರುಪಡಿಸಿದ್ದರು. ವಾದ ಆಲಿಸಿದ ನ್ಯಾಯಾಧೀಶರು 14 ದಿನಗಳ…
ಜಗತ್ತಿನ ಬಹುತೇಕ ಜನರ ದಿನ ಆರಂಭವಾಗುವುದೇ ಟೀ ಅಥವಾ ಕಾಫಿಯಿಂದ. ದಿನಕ್ಕೆ ಒಂದು ಕಪ್ ಕಾಫಿ-ಟೀ ಕುಡಿಯಲಿಲ್ಲ ಅಂದ್ರೆ ಆ ದಿನ ಏನೋ ಮಿಸ್ ಮಾಡಿಕೊಂಡಂತೆ ಜನರು ಚಡಪಡಿಸುತ್ತಾರೆ. ಒಂದು ಹೊತ್ತು ಊಟ ಬೇಕಾದರೂ ಬಿಡುತ್ತೇನೆ ಆದರೆ, ಟೀ-ಕಾಫಿ ಬಿಡುವುದಿಲ್ಲ ಎಂದು ಹೇಳುವ ಜನರು ಕೂಡ ನಮ್ಮ ನಡುವೆ ಇದ್ದಾರೆ. ದಿನಕ್ಕೊಂದು ಟೀ ಕುಡಿಯದಿದ್ದರೂ ಸುಸ್ತು, ಚಡಪಡಿಕೆ ಹಾಗೂ ತಲೆ ನೋವು ಅನುಭವಿಸುವವರೂ ಇದ್ದಾರೆ. ಅಷ್ಟೊಂದು ಜನಪ್ರಿಯವಾಗಿದೆ ಈ ಪಾನೀಯ. ಅವರವರ ರುಚಿ ಮತ್ತು ಆರೋಗ್ಯಕ್ಕೆ ತಕ್ಕಂತೆ ಗ್ರೀನ್ ಟೀ, ಬ್ಲಾಕ್ ಟೀ, ಲೆಮನ್ ಟೀ, ಹಾಲಿನ ಟೀ ಕುಡಿಯುತ್ತಾರೆ. ಹೆಚ್ಚಿನವರು ಹಾಲಿನ ಚಹಾವನ್ನು ಇಷ್ಟಪಡುತ್ತಾರೆ. ಹಾಲಿಗೆ ಹೆಚ್ಚು ಚಹಾ ಎಲೆಗಳನ್ನು ಸೇರಿಸಿ ಮತ್ತು ದೀರ್ಘಕಾಲದವರೆಗೆ ಕುದಿಸಿ ತಯಾರಿಸಿದ ಚಹಾವನ್ನು ಇಷ್ಟಪಡುವ ಇದ್ದಾರೆ. ಆದಾಗ್ಯೂ, ದೀರ್ಘಕಾಲದವರೆಗೆ ಚಹಾವನ್ನು ಕುದಿಸುವುದು ಅನೇಕ ಹಾನಿಕಾರಕ ಸಂಯುಕ್ತಗಳನ್ನು ಉಂಟುಮಾಡುತ್ತದೆ. ಅತಿಯಾಗಿ ಕುದಿಸಿದ ಚಹಾವು ಸ್ಲೋ ಪಾಯಿಸನ್ ಆಗಿ ಪರಿವರ್ತನೆಯಾಗಬಹುದು ಎಂದು ಪೌಷ್ಟಿಕತಜ್ಞರು ಎಚ್ಚರಿಸಿದ್ದಾರೆ. ಚಹಾವನ್ನು ಎಷ್ಟು ಹೊತ್ತು…
ಉಡುಪಿ: ಕೆಲ ದಿನಗಳ ಹಿಂದೆ ಪುತ್ತೂರಿನ ಬಿರಿಯಾನಿ ಪಾಯಿಂಟ್ ಬಳಿ ನಡೆದ ತಲವಾರು ದಾಳಿ ಪ್ರಕರಣಕ್ಕೆ ಸಂಬಂಧಿಸಿದ ದೂರುದಾರನ ಮನೆಯಿಂದಲೇ ಪೊಲೀಸರು ತಲವಾರು ವಶಪಡಿಸಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಸೆಲೂನಿನಲ್ಲಿ ಕೆಲಸ ಮಾಡಿಕೊಂಡಿದ್ದ ಪುತ್ತೂರು ಗ್ರಾಮದ ಚರಣ್ ರಾಜ್(18) ಎಂಬಾತನ ಮನೆಯಲ್ಲಿ ತಲವಾರು ಇರುವ ಬಗ್ಗೆ ಉಡುಪಿ ನಗರ ಠಾಣಾ ಎಸ್ಸೈ ಪುನೀತ್ ಕುಮಾರ್ ರಿಗೆ ಮಾಹಿತಿ ಬಂದಿದ್ದು, ಅದರಂತೆ ಜೂ.21ರಂದು ನ್ಯಾಯಾಲಯದಿಂದ ಶೋಧನಾ ವಾರೆಂಟನ್ನು ಪಡೆದುಕೊಂಡು ಆತನ ಮನೆಯಲ್ಲಿ ಶೋಧ ಕಾರ್ಯ ನಡೆಸಿದ್ದರು. ಈ ವೇಳೆ ಆತನ ಮನೆಯಲ್ಲಿ ತಲವಾರು ದೊರೆತಿದ್ದು, ಅದರಂತೆ ಆತನ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಜೂ.15ರಂದು ಪ್ರವೀಣ್, ಅಭಿಷೇಕ್, ದೇಶರಾಜ್ ಮತ್ತು ಇತರರು ಕೈಯಲ್ಲಿ ತಲವಾರಗಳನ್ನು ಹಿಡಿದುಕೊಂಡು ದಾಳಿ ಮಾಡಿ ದ್ವಿಚಕ್ರ ವಾಹನಗಳಿಗೆ ಹಾನಿ ಮಾಡಿದ್ದರೆಂದು ಚರಣ್‌ರಾಜ್ ಉಡುಪಿ ನಗರ ಠಾಣೆಗೆ ದೂರು ನೀಡಿದ್ದನು.
ಕಾರ್ಕಳ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿಗೆ ದ್ವಿಚಕ್ರ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಬಾಲಕಿ ಸಾವನ್ನಪ್ಪಿದ ಘಟನೆ ಬೆಳ್ಮಣ್ ಸಮೀಪದ ನಂದಳಿಕೆ ಕ್ರಾಸ್ ರಸ್ತೆಯಲ್ಲಿ ನಡೆದಿದೆ. ನಂದಳಿಕೆ ನಿವಾಸಿ ಪ್ರಣಮ್ಯ ಶೆಟ್ಟಿ 14 (ವ). ಮೃತ ಬಾಲಕಿ.ನಂದಳಿಕೆಯ ಲಕ್ಷ್ಮೀ ಜನಾರ್ದನ ದೇವಾಲಯದ ಪೂಜೆಗೆಂದು ಹೆದ್ದಾರಿ ಬದಿಯಲ್ಲಿ ಸಂಜೆಯ ವೇಳೆಯಲ್ಲಿ ನಡೆದುಕೊಂಡು ಹೋಗುವ ಸಂದರ್ಭದಲ್ಲಿ ಅಜಾಗರೂಕತೆ ಹಾಗೂ ವೇಗವಾಗಿ ಬಂದ ದ್ವಿಚಕ್ರ ವಾಹನ ಡಿಕ್ಕಿ ಹೊಡೆದಿದ್ದು ಡಿಕ್ಕಿಯ ರಭಸಕ್ಕೆ ಪಾದಚಾರಿ ಬಾಲಕಿ ಗಂಭೀರ ಗಾಯಗೊಂಡಿದ್ದು ಕೂಡಲೇ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಬಾಲಕಿ ಕೊನೆಯುಸಿರೆಳೆದಿದ್ದಾಳೆ. ಮುಲ್ಲಡ್ಕ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹತ್ತನೆ ತರಗತಿಯ ಪ್ರತಿಭಾನ್ವಿತ ವಿದ್ಯಾರ್ಥಿನಿ. ಘಟನೆಯ ಬಗ್ಗೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುಳ್ಯ: ಭೀಕರ ಕಾರು ಅಪಘಾತ ಸಂಭವಿಸಿ ಕಾರು ನುಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಪ್ರಾಯಣಿಕರೊಬ್ಬರು ಗಂಭೀರ ಗಾಯಗೊಂಡ ಘಟನೆ ಸುಳ್ಯ ಸಂಪಾಜೆ ಬಳಿ ನಡೆದಿದೆ. ಕಾರಿನಲದಲಿದ್ದವರು ಮಂಡ್ಯ ಮೂಲದ ನಾಲ್ವರು ಫೋಟೋ ಗ್ರಾಫರ್ಸ್ ಹೊನ್ನಾವರದಲ್ಲಿ ತಮ್ಮ ಕೆಲಸ ಮುಗಿಸಿ ವಾಪಸ್ ಮಂಡ್ಯಕ್ಕೆ ಹೊರಟಿದ್ದರು. ಈ ವೇಳೆ ರಾತ್ರಿ 3 ಗಂಟೆಯ ವೇಳೆಗೆ ಸಂಪಾಜೆ ಗೇಟಿನಿಂದ ಸ್ವಲ್ಪ ದೂರದಲ್ಲಿ ನಿಯಂತ್ರಣ ತಪ್ಪಿದ ವೋಕ್ಸ್‌ವ್ಯಾಗನ್ ಕಾರು ರಸ್ತೆಯ ರಕ್ಷಣಾ ಗೋಡೆಗೆ ಢಿಕ್ಕಿಯಾಗಿದೆ. ರಸ್ತೆಯ ಬದಿಯ ಕಬ್ಬಿಣದ ತಡೆಗೋಡೆಗೆ ಢಿಕ್ಕಿ ಹೊಡೆದ ಕಾರಿನೊಳಗೆ ಕಬ್ಬಿಣದ ತಡೆಗೋಡೆ ನುಗ್ಗಿದೆ. ಢಿಕ್ಕಿಯ ರಭಸಕ್ಕೆ ಕಾರು ಛಿದ್ರ ವಾಗಿದೆ. ಅಪಘಾತದ ತೀವ್ರತೆಗೆ ಓರ್ವನಿಗೆ ಗಂಭೀರ ಗಾಯವಾಗಿದ್ದು, ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ. ಮತ್ತೊಬ್ಬರಿಗೂ ಗಂಭೀರ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಉಳಿದಿಬ್ಬರು ಅಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗಿದೆ.