Author: main-admin

ಮಂಗಳೂರು: ಮನೆಯೊಂದರಿಂದ 13 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವಾದ ಘಟನೆ ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ. ಹೆಲೆನ್ ಲೋಬೊ ಎಂಬವರ ಮನೆಯಿಂದ ಚಿನ್ನಾಭರಣ ಕಳ್ಳತನವಾಗಿದ್ದು, ಇವರು ಮಗಳ ಮಗುವಿನ ನಾಮಕರಣ ಕಾರ್ಯಕ್ರಮಕ್ಕಾಗಿ 2023, ಜನವರಿ 4ರಂದು ಬೆಂಗಳೂರಿಗೆ ಹೋಗಿದ್ದರು. ಈ ವೇಳೆ ತಮ್ಮ ಬಳಿಯಿದ್ದ ಚಿನ್ನಾಭರಣಗಳನ್ನು ಪಕ್ಕದ ಮನೆಯ ಮೇಬಲ್ ಫಾಂಟೆಸ್ ಎಂಬವರಿಗೆ ನೀಡಿ ತೆರಳಿದ್ದರೆನ್ನಲಾಗಿದೆ.ಬಳಿಕ ಚಿನ್ನಾಭರಣವನ್ನು ಹೆಲೆನ್ ಲೋಬೊ ಪಡೆದು ಮನೆಯಲ್ಲಿರಿಸಿದ್ದರು. 2024 ಜೂನ್ 16ರಂದು ಚಿನ್ನಾಭರಣಗಳನ್ನು ಪರಿಶೀಲಿಸಿದಾಗ ನೆಕ್ಲೆಸ್, ಚೈನ್ , ಕರಿಮಣಿ ಸರ , ಕೈಬಳೆ, ಕಿವಿಯ ಓಲೆ ಸೇರಿದಂತೆ ಸುಮಾರು 13 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವಾಗಿರುವುದು ಅವರ ಗಮನಕ್ಕೆ ಬಂದಿದೆ. ಈ ಸಂಬಂಧ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಉಡುಪಿ: ಪರಶುರಾಮನ ನಕಲಿ ಮೂರ್ತಿಯನ್ನು ಸರಬರಾಜು ಮಾಡಿದ ಆರೋಪದ ಮೇಲೆ ಕೃಷ್ಣ ಕಲಾಲೋಕದ ಮಾಲೀಕ ಎನ್ನಲಾದ ಕೃಷ್ಣ ಎಂಬಾತನ ವಿರುದ್ಧ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕಾರ್ಕಳದ ನಲ್ಲೂರು ಗ್ರಾಮದ ನಿವಾಸಿ ಕೃಷ್ಣ (30) ಎಂಬವರು ನೀಡಿದ ದೂರಿನಂತೆ ಆರೋಪಿಗಳು ಉಡುಪಿ ನಿರ್ಮಿತಿ ಕೇಂದ್ರದಿಂದ ಪ್ರತಿಮೆ ರಚನೆ ಮತ್ತು ಪ್ರತಿಷ್ಠಾಪನೆಗಾಗಿ 1,25,50,000 ರೂ. ಆದರೆ, ಆರೋಪಿಗಳು ಅಸಲಿ ಕಂಚಿನ ಪರಶುರಾಮ ಪ್ರತಿಮೆ ನೀಡುವ ಬದಲು ನಕಲಿ ಪ್ರತಿಮೆ ನಿರ್ಮಿಸಿ ಸರ್ಕಾರಕ್ಕೆ ವಂಚಿಸಿದ್ದಾರೆ

Read More

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಜೈಲುಪಾಲಾಗಿದ್ದಾರೆ. ಇಂದು ಕೋರ್ಟ್ ಅವರಿಗೆ ಜುಲೈ.4ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ. ಹೀಗಾಗಿ 2011ರ ಬಳಿಕ ನಟ ದರ್ಶನ್ ಮತ್ತೆ ಜೈಲುಪಾಲಾಗಿದ್ದಾರೆ. ಇಂದು ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ನಲ್ಲಿ ರೇಣುಕಾಸ್ವಾಮಿ ಹತ್ಯೆ ಪ್ರಕರಣ ಆರೋಪಿಗಳಾದಂತ ನಟ ದರ್ಶನ್ ಸೇರಿದಂತೆ ನಾಲ್ವರು ಆರೋಪಿಗಳ ಪೊಲೀಸ್ ಕಸ್ಟಡಿ ಅಂತ್ಯಗೊಂಡ ಹಿನ್ನಲೆಯಲ್ಲಿ ವಿಚಾರಣೆಯನ್ನು ನಡೆಸಲಾಯಿತು. ಈ ವಿಚಾರಣೆಯ ಬಳಿಕ ನಟ ದರ್ಶನ್, ವಿನಯ್, ಪ್ರದೋಷ್ ಹಾಗೂ ಧನರಾಜ್ ಅವರಿಗೆ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಜುಲೈ.4ರವರೆಗೆ ನ್ಯಾಯಾಂಗ ಬಂಧನಕ್ಕೆ ವಿಧಿಸಿ ಆದೇಶಿಸಿದೆ. ಈ ಮೂಲಕ ನಟ ದರ್ಶನ್ ಕೂಡ ಪವಿತ್ರಾ ಗೌಡ ಬಳಿಕ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿದ್ದಾರೆ.

Read More

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಪ್ರಮಾಣ ವಚನ ದಿನದಂದು ಬೋಳಿಯಾರ್‌ನಲ್ಲಿ ಮಸೀದಿ ಎದುರು ಬಿಜೆಪಿ ವಿಜಯೋತ್ಸವ ಮೆರವಣಿಗೆ ವೇಳೆ ನಡೆದ ಅಹಿತಕರ ಘಟನೆಗೆ ಸಂಬಂಧಿಸಿ ಬಂಧಿತ ಹಿಂದೂ ಸಂಘಟನೆಗೆ ಸೇರಿದ ಆರೋಪಿಗಳ ವಿರುದ್ಧ ಯಾವುದೇ ಬಲವಂತದ ಹಾಗೂ ಒತ್ತಡದ ಕ್ರಮ ಕೈಗೊಳ್ಳದಂತೆ ಪೊಲೀಸರಿಗೆ ಶುಕ್ರವಾರ ಹೈಕೋರ್ಟ್ ನಿರ್ದೇಶನ ನೀಡಿದೆ. ಕಳೆದ ಜೂ.9ರಂದು ಬೋಳಿಯಾರ್‌ನಲ್ಲಿ ವಿಜಯೋತ್ಸವದಲ್ಲಿ ಘೋಷಣೆ ಕೂಗಿದ ವೇಳೆ ಹಲ್ಲೆ ಘಟನೆ ನಡೆದಿದೆ. ಘಟನೆಯಲ್ಲಿ ಐದು ಮಂದಿ ಗಾಯಗೊಂಡು ಆಸ್ಪತ್ರೆ ದಾಖಲಾಗಿದ್ದರು. ಘಟನೆ ಬಗ್ಗೆ ಗಾಯಾಳುಗಳು ಕೊಣಾಜೆ ಪೊಲೀಸರಿಗೆ ದೂರು ನೀಡಿದ್ದರು. ಇದೇ ವೇಳೆ ಬೈಕ್‌ನಲ್ಲಿ ಬಂದವರು ಪಾಕಿಸ್ಥಾನ ಕುನ್ನಿಗಳೇ ಎಂದು ನಿಂದಿಸಿದ್ದಾರೆ ಎಂದು ಆರೋಪಿಸಿ ಸ್ಥಳೀಯ ಮಸೀದಿ ಅಧ್ಯಕ್ಷರು ಮಾರನೇ ದಿನ ಕೊಣಾಜೆ ಪೊಲೀಸರಿಗೆ ಪ್ರತಿ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಸುರೇಶ್,ವಿನಯ, ಸುಭಾಸ್, ರಂಜಿತ್, ಧನಂಜಯ್ ಮತ್ತಿತರರ ವಿರುದ್ಧ ಪೊಲೀಸರು ಕೇಸು ದಾಖಲಿಸಿದ್ದರು. ಅಲ್ಲದೆ ಇವರನ್ನು ಬಂಧಿಸಿದ್ದರು.ಪೊಲೀಸರು ಈ ಕ್ರಮದ ವಿರುದ್ಧ ಈ ಐದು ಮಂದಿ ಹೈಕೋರ್ಟ್ ಮೆಟ್ಟಿಲೇರಿದ್ದು,…

Read More

ಉಪ್ಪಿನಂಗಡಿ: ಇಲ್ಲಿನ ಬ್ಯಾಂಕ್‌ ರಸ್ತೆಯ ಬಹುಮಹಡಿ ಕಟ್ಟಡಕ್ಕೆ ಶುಕ್ರವಾರ ರಾತ್ರಿ ಆಕಸ್ಮಿಕವಾಗಿ ಬೆಂಕಿ ತಗಲಿದ್ದು, 5ಕ್ಕೂ ಹೆಚ್ಚು ಅಂಗಡಿಗಳು ಸುಟ್ಟು ಹೋಗಿ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ. ಇಲ್ಲಿನ ಅಂಚೆ ಕಚೇರಿ ಸಮೀಪದ ಪೃಥ್ವೀ ಮಹಲ್‌ ಕಟ್ಟಡಕ್ಕೆ ಅಗ್ನಿ ಸ್ಪರ್ಶವಾಗಿದ್ದು, ದುರಂತಕ್ಕೆ ಕಾರಣ ತಿಳಿದುಬಂದಿಲ್ಲ. ಕಟ್ಟಡದ ತಳ ಅಂತಸ್ತಿನಲ್ಲಿರುವ ಬೇಕರಿ, ಮೊಬೈಲ್‌ ಅಂಗಡಿ, ಚಪ್ಪಲಿ ಅಂಗಡಿ, ಫ್ಯಾನ್ಸಿ ಸಹಿತ ಹಲವು ಅಂಗಡಿಗಳು ಬೆಂಕಿ ಹಬ್ಬಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿದ್ದು, ಸ್ಥಳೀಯರ ನೆರವಿನೊಂದಿಗೆ ಬೆಂಕಿ ನಂದಿಸಲು ಶ್ರಮಿಸಿದ್ದಾರೆ. ಸ್ಥಳೀಯರು ಹಾಗೂ ಅಗ್ನಿಶಾಮಕ ದಳದ ಸಕಾಲಿಕ ಕಾರ್ಯಾಚರಣೆಯಿಂದ ಹೆಚ್ಚಿನ ಅನಾಹುತವನ್ನು ತಪ್ಪಿಸಲಾಗಿದೆ. ಉಪ್ಪಿನಂಗಡಿ ಪೊಲೀಸರು ಸ್ಥಳದಲ್ಲಿದ್ದು ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ.

Read More

ಮಣಿಪಾಲ: ವ್ಯಕ್ತಿಯೊಬ್ಬರನ್ನು ಅಪಹರಿಸಿ, ಚಾಕು ತೋರಿಸಿ ಬೆದರಿಸಿ ಅವರಲ್ಲಿದ್ದ 1 ಲಕ್ಷ ರೂ. ಹಣವನ್ನು ಕಸಿದು ಪರಾರಿಯಾದ ಘಟನೆ ಉಡುಪಿ ನಗರದಲ್ಲಿ ಸಂಭವಿಸಿದೆ. ಆತ್ರಾಡಿಯ ಮಹಮ್ಮದ್‌ ನಿಹಾಲ್‌ ಅವರು ಬಸ್‌ನ ಕಲೆಕ್ಷನ್‌ ವ್ಯವಹಾರ ಮಾಡಿಕೊಂಡಿದ್ದು, ಬಸ್‌ನ ಕಲೆಕ್ಷನ್‌ ಹಣವನ್ನು ತೆಗೆದುಕೊಂಡು ಉಡುಪಿ ಸರ್ವಿಸ್‌ ಬಸ್‌ ನಿಲ್ದಾಣದ ಬೇಕರಿ ಬಳಿ ಹೋಗುತ್ತಿದ್ದಾಗ ಕಾರಿನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಬಲವಂತವಾಗಿ ಅವರನ್ನು ಕಾರಿನಲ್ಲಿ ಕರೆದೊಯ್ದಿದ್ದಾರೆ. ಕಾರಿನಲ್ಲಿ ಚಾಕು ತೋರಿಸಿ, ಕೈಯಿಂದ ಹೊಡೆದು ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಣವನ್ನು ಕಸಿದು ಜೀವ ಬೆದರಿಕೆ ಹಾಕಿದ್ದಾರೆ. ಆರೋಪಿಗಳನ್ನು ಶಾರೀಕ್‌, ಇರ್ಫಾನ್‌ ಎಂದು ಗುರುತಿಸಲಾಗಿದೆ. ಇವರ ಜತೆಗೆ ಇನ್ನೂ ಇಬ್ಬರು ಅಪರಿಚಿತರು ಇದ್ದರು ಎಂದು ಮಹಮ್ಮದ್‌ ನಿಹಾಲ್‌ ಉಡುಪಿ ನಗರ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Read More

ಮಂಗಳೂರು : ನಗರದ ಹೊರವಲಯದಲ್ಲಿರುವ ಉಳಾಯಿಬೆಟ್ಟು ಎಂಬಲ್ಲಿ ಪಿಡಬ್ಲ್ಯುಡಿ ಗುತ್ತಿಗೆದಾರರೊಬ್ಬರ ಮನೆಗೆ ನುಗ್ಗಿದ್ದ ಡಕಾಯಿತಿ ಗ್ಯಾಂಗ್ ಮನೆಯವರನ್ನು ಕಟ್ಟಿ ಹಾಕಿ ಚೂರಿ ತೋರಿಸಿ ನಗ – ನಗದು ದರೋಡೆ ಮಾಡಿದೆ. ಪಿಡಬ್ಲ್ಯುಡಿ ಗುತ್ತಿಗೆದಾರ ಉಳಾಯಿಬೆಟ್ಟುವಿನ ಪದ್ಮನಾಭ ಕೋಟ್ಯಾನ್ ಮನೆಯಲ್ಲಿ ಈ ದರೋಡೆ ಕೃತ್ಯ ನಡೆದಿದೆ‌. ಮುಖಕ್ಕೆ ಮಾಸ್ಕ್ ಧರಿಸಿದ್ದ 8-9 ಮಂದಿಯಿದ್ದ ತಂಡವೊಂದು ಶುಕ್ರವಾರ ರಾತ್ರಿ 8ಗಂಟೆಗೆ ಮನೆಗೆ ನುಗ್ಗಿದೆ. ಬಳಿಕ ಮನೆಯವರಿಗೆ ಚೂರಿ ತೋರಿಸಿ ಬೆದರಿಸಿದೆ‌. ಬಳಿಕ ಮನೆಯವರನ್ನೆಲ್ಲ ಬೆಡ್‌ಶೀಟ್ ನಲ್ಲಿ ಕಟ್ಟಿಹಾಕಿದೆ. ಈ ವೇಳೆ ಪದ್ಮನಾಭ ಕೋಟ್ಯಾನ್ ಅವರ ಬಲಗೈಗೆ ಚೂರಿಯಿಂದ ಇರಿಯಲಾಗಿದೆ. ನಮ್ಮೊಂದಿಗೆ ಎಲ್ಲರೂ ಸಹರಿಸಬೇಕು‌. ಮನೆಯಲ್ಲಿ ಹಣವಿದೆಯೇ ಎಂದು ನೋಡುತ್ತೇವೆ ಎಂದು ದರೋಡೆಕೋರ ತಂಡ ಮನೆಯೆಲ್ಲ ಜಾಲಾಡಿ ಕೈಗೆ ಸಿಕ್ಕಿದ ಹಣ, ಒಡವೆಗಳನ್ನು ದೋಚಿ ಅಲ್ಲಿಂದ ಕಾಲ್ಕಿತ್ತಿದೆ‌. ಹೋಗುವಾಗ ಮನೆಯ ಮಾಲೀಕ ಪದ್ಮನಾಭ ಕೋಟ್ಯಾನ್ ಅವರ ವಾಹನವನ್ನು ತೆಗೆದುಕೊಂಡು ಹೋಗಿದ್ದಾರೆ. ಆದರೆ, ಮನೆಯಿಂದ ಸ್ವಲ್ಪ ದೂರದಲ್ಲಿ ವಾಹನವನ್ನು ಇಟ್ಟು ತಂಡ ಪರಾರಿಯಾಗಿದೆ‌. ಈ ಬಗ್ಗೆ ಕಂಕನಾಡಿ…

Read More

ಮಂಗಳೂರು: ಇಲ್ಲಿನ ಪಿವಿಎಸ್‌ ವೃತ್ತದ ಬಳಿ ಗುರುವಾರ ನಡೆದಿದ್ದ ಬಿಜೆಪಿ ಪ್ರತಿಭಟನೆಯ ವೇಳೆ ಸ್ಥಳದಲ್ಲಿದ್ದ ಪೊಲೀಸ್‌ ಸಿಬ್ಬಂದಿಯೊಬ್ಬರ ಪರ್ಸ್‌ಅನ್ನು ಕಳ್ಳನೋರ್ವನು ಎಗರಿಸಿರುವ ಘಟನೆ ನಡೆದಿದೆ. ಪ್ರತಿಭಟನೆ ವೇಳೆ ಪ್ರತಿಭಟನಾಕಾರರು ಹಾಗೂ ಪೊಲೀಸರ ಮಧ್ಯೆ ನೂಕಾಟ-ತಳ್ಳಾಟ ನಡೆದಿದೆ‌. ಈ ಸಂದರ್ಭಕ್ಕಾಗಿ ಹೊಂಚು ಹಾಕುತ್ತಿದ್ದ ಖದೀಮನೋರ್ವನು ಈ ಗುಂಪಿನ ನಡುವೆ ತನ್ನ ಕೈಚಳಕ ತೋರಿಸಿದ್ದಾನೆ‌. ಈತ ಸಿವಿಲ್‌ ಡ್ರೆಸ್‌ನಲ್ಲಿದ್ದ ಪೊಲೀಸ್‌ ಸಿಬ್ಬಂದಿಯ ಪರ್ಸ್‌ ಎಗರಿಸಿದ್ದಾನೆ. ಈ ದೃಶ್ಯ ಮಾಧ್ಯಮದ ವೀಡಿಯೋದಲ್ಲಿ ಸೆರೆಯಾಗಿದೆ. ಪರ್ಸ್ ಎಗರಿಸಿದ ಬಳಿಕ ಆತ ಮೆತ್ತಗೆ ಅಲ್ಲಿಂದ ಕಾಲ್ಕಿತ್ತಿರುವುದು ವಿಡಿಯೋದಲ್ಲಿ ಕಂಡು ಬಂದಿದೆ. ಆರೋಪಿಯ ಪತ್ತೆಗಾಗಿ ಶೋಧ ಕಾರ್ಯ ನಡೆಯುತ್ತಿದೆ.

Read More

ಮುಲ್ಕಿ: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಮುಲ್ಕಿ ಪೊಲೀಸರು ಇದೀಗ ಯಶಸ್ವಿಯಾಗಿದ್ದಾರೆ. ಮಂಗಳೂರು ಉಳಾಯಿಬೆಟ್ಟುಸಾಲೆ ಮಜಲು ಮನೆ ನಿವಾಸಿ ಪ್ರದೀಪ ಪೂಜಾರಿ ಬಂಧಿತ ಆರೋಪಿ ಆರೋಪಿ ಪ್ರದೀಪ ಪೂಜಾರಿ ಎಂಬಾತ ನ್ಯಾಯಾಲಯಕ್ಕೆ ಹಾಜರಾಗದೆ ತಲೆನರೆಸಿಕೊಂಡಿದ್ದನು. ಮುಲ್ಕಿ ಪೊಲೀಸರು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಆರೋಪಿತನಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿರುತ್ತದೆ. ಈತನ ಮೇಲೆ ಈ ಹಿಂದೆ ಬರ್ಕೆ ಪೊಲೀಸ್ ಠಾಣೆ, ಪಣಂಬೂರು ಪೊಲೀಸ್ ಠಾಣೆ, ಬಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Read More

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಮುಂಡ್ರುಪ್ಪಾಡಿಯಲ್ಲಿ ನಡೆಯುತ್ತಿದ್ದ ಅಕ್ರಮ ಕೆಂಪು ಕಲ್ಲು ಗಣಿಗಾರಿಕೆಗೆ ಗಣಿ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ಕಲ್ಲು ಸಾಗಾಟಕ್ಕೆ ಉಪಯೋಗಿಸುತ್ತಿದ್ದ ಮೂರು ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿಯ ಹಿನ್ನೆಲೆಯಲ್ಲಿ ದಾಳಿ ನಡೆಸಿದ ಅಧಿಕಾರಿಗಳು ಕಲ್ಲಿನ ಕೋರೆಯಿಂದ ಎರಡು ಲಾರಿ ಹಾಗೂ ಒಂದು ವಿಕಪ್ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಘಟನೆಯ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

Read More