ಮಂಗಳೂರು : ಸಾಮಾಜಿಕ ಜಾಲತಾಣದಲ್ಲಿ ಕೋಮು ದ್ವೇಷ ಪ್ರಚೋದಿಸುವ ಉದ್ದೇಶದಿಂದ ತಿರುಚಿದ ವಿಡಿಯೋ ಹಂಚಿದ ಆರೋಪಿಯನ್ನು ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ. 2025ರ ಅಕ್ಟೋಬರ್ ತಿಂಗಳಲ್ಲಿ “ನಝೀರ ಮಂಗಳೂರು” ಎಂಬ ಫೇಸ್‌ಬುಕ್ ಖಾತೆಯಿಂದ AI ತಂತ್ರಜ್ಞಾನದ ಸಹಾಯದಿಂದ ತಿರುಚಿದ ವಿಡಿಯೋವನ್ನು ಶೇರ್ ಮಾಡಲಾಗಿತ್ತು. ಈ ವಿಡಿಯೋ ಮೂಲಕ ಸಮಾಜದಲ್ಲಿ ಕೋಮು ದ್ವೇಷ ಹುಟ್ಟುಹಾಕಲು ಪ್ರಚೋದನೆ ನೀಡಲಾಗಿದೆ ಎಂಬ ಆರೋಪದ ಮೇಲೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS)ಯ ಕಲಂ 196, 353(1), 351(2) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರ ತನಿಖೆ ವೇಳೆ “ನಝೀರ ಮಂಗಳೂರು” ಖಾತೆಯನ್ನು ಬಳಸುತ್ತಿದ್ದ ವ್ಯಕ್ತಿ ಮಹಮ್ಮದ್ ರಫೀಕ್ (38) ಎಂದು ಗುರುತಿಸಲಾಗಿದೆ. ಆತ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಡಗಬೆಳ್ಳೂರು ಗ್ರಾಮದ ನಿವಾಸಿ ಎಂದು ತಿಳಿದುಬಂದಿದೆ.ಆರೋಪಿಯನ್ನು ಮಾರ್ಚ್ 22, 2026ರಂದು ಬೆಂಗಳೂರುನಲ್ಲಿ ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯವು ಆರೋಪಿಗೆ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಮಾಹಿತಿ ಮತ್ತು…
Author: main-admin
ಮಂಗಳೂರು ನಗರದಲ್ಲಿ ನಿಷೇಧಿತ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಲಕ್ಷಾಂತರ ಮೌಲ್ಯದ ಮಾದಕ ವಸ್ತು ಸೇರಿದಂತೆ ವಿವಿಧ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಪಂಪ್‌ವೆಲ್–ಎಕ್ಕೂರು ಪರಿಸರದಲ್ಲಿ ಆಟೋ ರಿಕ್ಷಾದ ಮೂಲಕ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಎಂಡಿಎಂಎ ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ, ಸಿಸಿಬಿ ಪೊಲೀಸರು ಮಾರ್ಚ್ 22ರಂದು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದರು. ಬಂಧಿತರನ್ನು ಹೈದರ್ @ ಹೈದರ್ ಆಲಿ (53), ಮೊಹಮ್ಮದ್ ಸಜಾದ್ (29) ಹಾಗೂ ಜೈಸನ್ ಮೆನೆಜಸ್ (26) ಎಂದು ಗುರುತಿಸಲಾಗಿದೆ. ಬಂಧಿತರಿಂದ 2,50,000 ಮೌಲ್ಯದ 26 ಗ್ರಾಂ ಎಂಡಿಎಂಎ ಮಾದಕ ವಸ್ತು, ರೂ.37,000 ನಗದು, 5 ಮೊಬೈಲ್ ಫೋನ್‌ಗಳು, ತೂಕಮಾಪನ ಯಂತ್ರ ಹಾಗೂ KA-19-AC-2245 ಸಂಖ್ಯೆಯ ಆಟೋ ರಿಕ್ಷಾ ಸೇರಿದಂತೆ ಒಟ್ಟು ರೂ.4,37,500 ಮೌಲ್ಯದ ಸೊತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಕುರಿತು ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಪ್ರಮುಖ…
ಬೆಂಗಳೂರು: ಮಹಿಳೆಯರ ಮೇಲೆ ಮೂಡುಬಿದರೆ ಪೊಲೀಸ್ ಇನ್‌ಸ್ಪೆಕ್ಟರ್ ದೌರ್ಜನ್ಯ ಎಸಗಿರುವ ಆರೋಪ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಸೂಚನೆ ನೀಡಿದ್ದೇನೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ತಿಳಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೂಡುಬಿದರೆ ಘಟನೆಗೆ ಸಂಬಂಧಿಸಿದಂತೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರು ಹಾಗೂ ಸಂತ್ರಸ್ತೆಯ ಭೇಟಿ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅನೇಕ ವಿಚಾರಗಳ ಬಗ್ಗೆ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸುವಂತೆ ಡಿಜಿಪಿ ಅವರಿಗೆ ಸೂಚಿಸಿದ್ದೇನೆ ಎಂದರು. ಮೂಡುಬಿದರೆ ಪೊಲೀಸ್ ಇನ್‌ಸ್ಪೆಕ್ಟರ್ ಮೇಲೆ ಆರೋಪ ಬಂದ ಬಳಿಕ ಅಮಾನತು ಮಾಡುವ ಮೂಲಕ ತಕ್ಷಣದ ಕ್ರಮಕೈಗೊಳ್ಳಲಾಗಿದೆ. ವರದಿ ನೀಡುವಂತೆ ಸೂಚಿಸಲಾಗಿದ್ದು, ಕೊಡುತ್ತಾರೆ. ಇನ್ನೂ ಅನೇಕ ವಿಚಾರಗಳನ್ನು ಕೇಳಿದ ಮೇಲೆ ಹೆಚ್ಚಿನ ತನಿಖೆ ಮಾಡಬೇಕೆಂದು ಸಿಐಡಿ ತನಿಖೆಗೆ ವಹಿಸಲಾಗಿದೆ. ತನಿಖೆ ಬಳಿಕ ಸತ್ಯಾಂಶ ಹೊರಬರುತ್ತದೆ. ಇನ್ನು ಎಷ್ಟು ಜನ ಸಂತ್ರಸ್ತರಿದ್ದಾರೆ ಎಂಬುದು ತನಿಖೆ ವೇಳೆ ಗೊತ್ತಾಗಲಿದೆ. ಇದಕ್ಕಾಗಿಯೇ ಸಿಐಡಿ…
ಪುತ್ತೂರು: ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ನಗರ ಪೊಲೀಸರು ಬಂಧಿಸಿದ್ದು, ಈ ಹಿನ್ನೆಲೆಯಲ್ಲಿ ಮತ್ತೊಂದು ಪ್ರಕರಣವನ್ನು ದಾಖಲಿಸಿದ್ದಾರೆ. ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅ.ಕ್ರ.169/2018ರ ಕಲಂ 323, 504, 506, 406, 424 ಐಪಿಸಿ ಪ್ರಕರಣದಲ್ಲಿ ಆರೋಪಿಯಾಗಿದ್ದ ಕೇರಳದ ಮಲಪ್ಪುರಂ ನಿವಾಸಿ ನಿಖಿಲ್ ಕೆ (36) ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದನು. ಈತನನ್ನು ಪುತ್ತೂರು ನಗರ ಪೊಲೀಸ್ ಠಾಣೆಯ ಉಪನಿರೀಕ್ಷಕರಾದ ಜನಾರ್ದನ ಕೆ.ಎಂ ಹಾಗೂ ಸಿಬ್ಬಂದಿ ತಂಡ ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ ತಾಲೂಕಿನ ಶಿಲುವೈಪುರದಲ್ಲಿ ಮಾ.21ರಂದು ಪತ್ತೆಹಚ್ಚಿ ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದೆ. ಆರೋಪಿ ನ್ಯಾಯಾಲಯದಿಂದ ಷರತ್ತುಬದ್ಧ ಜಾಮೀನು ಪಡೆದ ನಂತರವೂ ವಿಚಾರಣೆಗೆ ಹಾಜರಾಗದೆ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿದ್ದ ಹಿನ್ನೆಲೆಯಲ್ಲಿ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ.34/2026ರಡಿ ಕಲಂ 269 ಬಿಎನ್‌ಎಸ್ 2023ರಂತೆ ಮತ್ತೊಂದು ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಮುಂದುವರಿದಿದೆ.
ಟ್ರೇಡಿಂಗ್ ಆ್ಯಪ್‌ನಲ್ಲಿ ಹೂಡಿಕೆ ಮಾಡುವ ನೆಪದಲ್ಲಿ ಮಹಿಳೆಯೊಬ್ಬರಿಂದ 11.75 ಲಕ್ಷ ರೂಪಾಯಿ ಆನ್‌ಲೈನ್ ಮೂಲಕ ವಂಚನೆ ನಡೆಸಿದ ಪ್ರಕರಣ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಟ್ರೇಡಿಂಗ್ ಕುರಿತು ತಿಳಿದುಕೊಳ್ಳುವ ಉದ್ದೇಶದಿಂದ ಸಹನಾ, ಒಂದು ಆ್ಯಪ್ ಅನ್ನು ಡೌನ್‌ಲೋಡ್ ಮಾಡಿಕೊಂಡಿದ್ದರು. ಸುಮಾರು 15 ದಿನಗಳ ಬಳಿಕ ಅಪರಿಚಿತ ವ್ಯಕ್ತಿ ಕರೆ ಮಾಡಿ ಅವರನ್ನು ವಾಟ್ಸಾಪ್ ಗುಂಪಿಗೆ ಸೇರಿಸಿದ್ದಾನೆ. ಆ ಗುಂಪಿನಲ್ಲಿ ಲಿಂಕ್ ಕಳುಹಿಸಿ, ಕೆವೈಸಿ ವಿವರಗಳನ್ನು ಭರ್ತಿ ಮಾಡಲು ಸೂಚಿಸಲಾಗಿದೆ. ಬಳಿಕ ಟ್ರೆಡಿಂಗ್ ಮೂಲಕ ಲಾಭ ದೊರೆಯುತ್ತದೆ ಎಂದು ನಂಬಿಸಿ, ಆರೋಪಿಗಳು ನೀಡಿದ ವಿವಿಧ ಬ್ಯಾಂಕ್ ಖಾತೆಗಳಿಗೆ ಸಹನಾ ಅವರು ಮಾರ್ಚ್ 6ರಿಂದ 14ರವರೆಗೆ ಹಂತ ಹಂತವಾಗಿ ಒಟ್ಟು 11,75,000 ರೂಪಾಯಿ ಹಣ ವರ್ಗಾವಣೆ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಆದರೆ ಹಣ ವರ್ಗಾವಣೆ ಮಾಡಿದ ಬಳಿಕ ಆರೋಪಿಗಳು ಯಾವುದೇ ಲಾಭಾಂಶ ನೀಡದೇ, ಹೂಡಿಕೆ ಮಾಡಿದ ಹಣವನ್ನೂ ಹಿಂತಿರುಗಿಸದೇ ಮೋಸ ಮಾಡಿರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ಉಡುಪಿ ಸೆನ್…
ಹುಬ್ಬಳ್ಳಿಯಲ್ಲಿ ರಿಲ್ಸ್ ಹುಚ್ಚಾಟಕ್ಕೆ ಬಾಲಕ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಾಲಕನ ಸಾವಿಗೆ ಕಾರಣರಾದ ಇಬ್ಬರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹುಬ್ಬಳ್ಳಿ ವಿದ್ಯಾನಗರ ಠಾಣೆ ಪೋಲಿಸರಿಂದ ನಾಗರಾಜ್ ಎನ್ನುವ ವ್ಯಕ್ತಿಯನ್ನು ಬಂಧಿಸಲಾಗಿದೆ. ಅಪ್ರಾಪ್ತ ಮಗನ ಕೈಯಲ್ಲಿ ಕಾರು ಕೊಟ್ಟು ಇದೀಗ ನಾಗರಾಜ್ ಜೈಲು ಸೇರಿದ್ದಾನೆ. ಕಾರು ಮಾಲಿಕ ನಾಗರಾಜ್ ರಾಯ್ಕರ್ ಸೇರಿ ಇಬ್ಬರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಆಕ್ಷನ್ ರಿಲ್ಸ್ ವೇಳೆ 15 ವರ್ಷದ ನಮಿಷ ಸಂಗಳದ ಮೃತಪಟ್ಟಿದ್ದ. ಆಡಿ ಕಾರು ಡಿಕ್ಕಿಯಾಗಿ ಸ್ಕೂಟಿಯಲ್ಲಿ ಇದ್ದ ನಮಿಷ ಮೃತಪಟ್ಟಿದ್ದ. ಹುಬ್ಬಳ್ಳಿ ನಗರದ ಶೇಜವಾಡಕರ್ ಪ್ಲಾಟ್ ನಲ್ಲಿ ಈ ಒಂದು ಘಟನೆ ನಡೆದಿತ್ತು. ಉತ್ತರ ಪ್ರದೇಶದಲ್ಲಿ ನಾಗರಾಜ ರಾಯ್ಕರ್ ಈ ಒಂದು ಕಾರು ಖರೀದಿಸಿದ್ದ. ವಶಕ್ಕೆ ಪಡೆದಿದ್ದ ಬಾಲಕನನ್ನು ಬಾಲ ಮಂದಿರಕ್ಕೆ ಪೊಲೀಸರು ಕಳುಹಿಸಿದ್ದಾರೆ. ಹುಬ್ಬಳ್ಳಿಯ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿತ್ತು.
ಮಂಗಳೂರು : ಮೂಡುಬಿದಿರೆ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಸಂದೇಶ್ ಬಿ ಜಿ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ ತನಿಖೆ ನಡೆಯುತ್ತಿರುವಾಗಲೇ ಮತ್ತೆ ಸಂಕಷ್ಟ ಶುರುವಾಗಿದೆ. ಮಹಿಳೆ ಜೊತೆ ಅಸಭ್ಯ ರೀತಿಯಲ್ಲಿ ವರ್ತಿಸಿದ ವಿಡಿಯೋ ವೈರಲ್ ಆಗಿದೆ ಈ ವಿಷಯದ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಕೋರಿ ಬೆಂಗಳೂರಿನಲ್ಲಿ ಮೂವರು ಮಹಿಳೆಯರು ಮುಖ್ಯಮಂತ್ರಿ, ಗೃಹ ಸಚಿವರು, ಪೊಲೀಸ್ ಮಹಾನಿರ್ದೇಶಕರು, ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ರಾಜ್ಯ ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಿದ್ದರು.ಇದೀಗ ವೇಣೂರು ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಮೂಡಬಿದ್ರೆ ಠಾಣೆಯ ಪೊಲೀಸ್ ನಿರೀಕ್ಷಕರಾಗಿದ್ದ ಸಂದೇಶ್ ಪಿ.ಜಿ ವಿರುದ್ದ ವೇಣೂರು ಠಾಣಾ ವ್ಯಾಪ್ತಿಯ ಅಳದಂಗಡಿ ನಿವಾಸಿ ಸಂತ್ರಸ್ಥ ಮಹಿಳೆ ಅತ್ಯಾಚಾರ ಆರೋಪದ ಸಂಬಂಧ ವೇಣೂರು ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನನ್ವಯ ಮಾ 22ರಂದು ರಾತ್ರಿ 02-00 ಗಂಟೆಗೆ ವೇಣೂರು ಪೊಲೀಸ್ ಠಾಣಾ ಅಕ್ರ 22/2026 ಕಲಂ 376(2)(a)(1),376(2)(n),384,506 ಐಪಿಸಿ ಪ್ರಕರಣ ದಾಖಲಾಗಿರುವುದು. ಬೆಳ್ತಂಗಡಿ ತಾಲೂಕಿನ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಅಳದಂಗಡಿ ನಿವಾಸಿ…
ಮಂಗಳೂರು: ಚೀನಾಕ್ಕೆ ಹೊರಟಿದ್ದ ರಷ್ಯಾದ ತೈಲ ತುಂಬಿದ ಟ್ಯಾಂಕರ್ ಹಡಗು ಅಂತಾರಾಷ್ಟ್ರೀಯ ಮಟ್ಟದಲ್ಲಿ ನಡೆದ ಮಹತ್ವದ ಬೆಳವಣಿಗೆಯಿಂದ ಯುಟರ್ನ್ ಹೊಡೆದು ಶನಿವಾರ ಮಂಗಳೂರಿಗೆ ಆಗಮಿಸಿದೆ. ರಷ್ಯಾದ ಅಕ್ವಾ ಟೈಟಾನ್ ಹಡಗು ಸುಮಾರು 86 ಸಾವಿರ ಮೆಟ್ರಿಕ್ ಟನ್ ತೈಲ ಹೊತ್ತು ಮಂಗಳೂರಿಗೆ ಆಗಮಿಸಿದೆ. ಚೀನಾಕ್ಕೆ ಹೊರಟ ಈ ಹಡಗಿಗೆ ಜನವರಿಯಲ್ಲಿ ತೈಲ ತುಂಬಲಾಗಿದ್ದು, ಮಾರ್ಚ್ ಮಧ್ಯದಲ್ಲಿ ಆಗ್ನೇಯ ಏಷ್ಯಾದಲ್ಲಿ ಸಂಚರಿಸುತ್ತಿತ್ತು. ಈ ಸಂದರ್ಭ ಚೀನಾದ ರಿಝಾವೊ ಬಂದರು ತನ್ನ ಗಮ್ಯ ಸ್ಥಾನ ಎಂದು ಈ ಟೈಟಾನ್ ತೋರಿಸುತ್ತಿತ್ತು. ಆದರೆ ಈ ಮಧ್ಯೆ ಭಾರತವು ರಷ್ಯಾಕ್ಕೆ ತುರ್ತು ತೈಲ ಪೂರೈಕೆಗೆ ಬೇಡಿಕೆಯಿರಿಸಿದ ಹಿನ್ನೆಲೆಯಲ್ಲಿ ಈ ಹಡಗು ಯೂಟರ್ನ್ ಹೊಡೆದಿದ್ದು ಮಾರ್ಚ್ 21 ರಂದು ರಾತ್ರಿ ಮಂಗಳೂರಿಗೆ ಆಗಮಿಸಿದೆ. ಮಂಗಳೂರು ಸಮುದ್ರ ವ್ಯಾಪ್ತಿಯಲ್ಲಿ ನಿಂತು ತೇಲು ಜೆಟ್ಟಿಯಲ್ಲಿ ತೈಲವನ್ನು ಖಾಲಿ ಮಾಡಿ ಎಂಆರ್‌ಪಿಎಲ್‌ಗೆ ಸರಬರಾಜು ಮಾಡಲಾಗುವುದು ಎಂದು ಮೂಲಗಳು ತಿಳಿಸಿವೆ. ಜಾಗತಿಕ ತೈಲ ಮಾರುಕಟ್ಟೆಯಲ್ಲಿನ ಬದಲಾವಣೆ ಮತ್ತು ಮಧ್ಯಪ್ರಾಚ್ಯದ ಪೂರೈಕೆ ಕೊರತೆಯನ್ನು ನೀಗಿಸಲು ಭಾರತವು…
ಮಂಗಳೂರು: ಹಲವು ಗಂಭೀರ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದು, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸುಮಾರು ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ನಗರ ಪೊಲೀಸ್ ಕಮಿಷನರೇಟ್‌ನ ಸಿಸಿಬಿ (CCB) ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಫರಾಜ್ @ ಮೊಹಮ್ಮದ್ ಫರಾಜ್ (32) ಎಂದು ಗುರುತಿಸಲಾಗಿದೆ. ಈತ ಮಂಗಳೂರು ದೇರಳಕಟ್ಟೆ ಸಮೀಪದ ಮದನಿನಗರದ ನಿವಾಸಿಯಾಗಿದ್ದಾನೆ. ಪೊಲೀಸರ ಮಾಹಿತಿ ಪ್ರಕಾರ, ಆರೋಪಿಯ ವಿರುದ್ಧ ಮಂಗಳೂರು ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ದರೋಡೆ, ಕೊಲೆಯತ್ನ, ಮಾದಕ ವಸ್ತು ಮಾರಾಟ, ಕಳವು ಸೇರಿದಂತೆ ಹಾಗೂ ಕಾರಾಗೃಹದಲ್ಲಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆ ನಡೆಸಿದ ಪ್ರಕರಣಗಳು ಸೇರಿ ಒಟ್ಟು ಸುಮಾರು 10 ಪ್ರಕರಣಗಳು ದಾಖಲಾಗಿವೆ. ನ್ಯಾಯಾಲಯದಿಂದ ಜಾಮೀನಿನ ಮೇಲೆ ಬಿಡುಗಡೆಯಾದ ಬಳಿಕ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದನು. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಕೊಲೆಯತ್ನ, ದರೋಡೆ, ಹಲ್ಲೆ, ಕಳವು ಸೇರಿದಂತೆ 4 ಪ್ರಕರಣಗಳು, ಕೊಣಾಜೆ ಠಾಣೆಯಲ್ಲಿ ಹಲ್ಲೆ, ಬೆದರಿಕೆ, ಕಳವು ಸೇರಿ 2 ಪ್ರಕರಣಗಳು, ಉತ್ತರ ಠಾಣೆಯಲ್ಲಿ ಹಲ್ಲೆ, ಬೆದರಿಕೆ, ಅಪಹರಣ ಮತ್ತು ದರೋಡೆಗೆ…
ಬಂಟ್ವಾಳ: ಇಲ್ಲಿನ ಪಾಣೆಮಂಗಳೂರು ಗ್ರಾಮದ ಮೆಲ್ಕಾರ್ ಬೊಗೋಡಿ ಎಂಬಲ್ಲಿರುವ ಗ್ಯಾಸ್ ಪಂಪ್ ಏಜೆನ್ಸಿಗೆ ನುಗ್ಗಿದ ಅಟೊರಿಕ್ಷಾ ಚಾಲಕ ಸಜಿಪಮೂಡಾ, ಬಂಟ್ವಾಳ ನಿವಾಸಿ ಅಫ್ರೀಝ್ (28) ಎಂಬಾತ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿ, ಕಚೇರಿಯ ಸೊತ್ತುಗಳನ್ನು ಹಾನಿಗೊಳಿಸಿರುವ ಘಟನೆ ಮಾರ್ಚ್ 20ರಂದು ಸಂಜೆ ನಡೆದಿದೆ. ಗ್ಯಾಸ್ ಪಂಪ್ ಏಜೆನ್ಸಿಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿರುವ ಕುನಲ್ ಭುಹ್ನಿಯಾ (27) ಎಂಬವರು ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ. ಶುಕ್ರವಾರ ಸಂಜೆ ಕೆಎ 19 ಎಸಿ 2102 ನೊಂದಾವಣಿ ಸಂಖ್ಯೆಯ ಆಟೋರಿಕ್ಷಾವನ್ನು ಚಲಾಯಿಸಿಕೊಂಡು ಬಂದ ಚಾಲಕನು, ಏಜೆನ್ಸಿಯ ಒಳಗೆ ಪ್ರವೇಶಿಸಿ ಕಚೇರಿ ಸಿಬ್ಬಂದಿ ಅಶ್ವಿನ್ ಎಂಬವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಅಲ್ಲದೆ, ಅಶ್ವಿನ್ ಅವರ ಮೇಲೆ ಹಲ್ಲೆ ನಡೆಸಿರುವ ಆರೋಪಿ, ನಂತರ ಕಚೇರಿಯ ಹೊರಬಂದು ಗ್ಯಾಸ್ ಪಂಪ್ ಏಜೆನ್ಸಿಯ ಸೊತ್ತುಗಳನ್ನು ಜಖಂಗೊಳಿಸಿದ್ದಾನೆ. ಈ ಕೃತ್ಯದಿಂದ ಸುಮಾರು 48,000/- ರೂಪಾಯಿಗಳಷ್ಟು ನಷ್ಟ ಉಂಟಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ದೂರಿನ ಮೇರೆಗೆ ಬಂಟ್ವಾಳ ನಗರ ಠಾಣಾ ಅ.ಕ್ರ…







