ಪುತ್ತೂರು: ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ಆರಕ್ಷಕ ಉಪನಿರೀಕ್ಷಕರನ್ನು ಲೋಕಸಭಾ ಚುನಾವಣೆಯ ಸಂದರ್ಭ ವರ್ಗಾವಣೆ ಮಾಡಿದ್ದು ಇದೀಗ ಚುನಾವಣಾ ಪೂರ್ವದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಠಾಣೆಗಳಿಗೆ ಮರು ನಿಯುಕ್ತಿಗೊಳಿಸಿ ಆದೇಶ ಹೊರಡಿಸಲಾಗಿದೆ. ಆಂಜನೇಯ ರೆಡ್ಡಿ ಪುತ್ತೂರು ನಗರ ಠಾಣೆಗೆ, ಉದಯರವಿ ಎಂ.ವಿ.ಪುತ್ತೂರು ಸಂಚಾರ ಠಾಣೆಗೆ, ಪುತ್ತೂರಿನಿಂದ ನಂದಕುಮಾರ್ ಎಂ.ಪುಂಜಾಲಕಟ್ಟೆ ಠಾಣೆಗೆ, ಸಂಜೀವ ಜೆ.ಬಂಟ್ವಾಳ ಸಂಚಾರ ಠಾಣೆಗೆ, ಸೇಸು ಕೆ.ಎಸ್. ಪುತ್ತೂರು ನಗರ ಠಾಣೆಗೆ, ಕುಟ್ಟಿ ಮೇರ ಪುತ್ತೂರು ಸಂಚಾರ ಠಾಣೆಗೆ, ರುಕ್ಕ ನಾಯ್ಕ ಉಪ್ಪಿನಂಗಡಿ ಠಾಣೆಗೆ, ರತ್ನ ಕುಮಾರ್ ಎಂ.ವಿಟ್ಲ ಠಾಣೆಗೆ ಮರು ನಿಯುಕ್ತಿ ಹೊಂದಿದ್ದಾರೆ.ಉಳಿದಂತೆ.ಎನ್.ಕೆ.ಓಮನ ಪುಂಜಾಲಕಟ್ಟೆಠಾಣೆಗೆ, ಭಾರತಿ ಬಂಟ್ವಾಳ ಗ್ರಾಮಾಂತರ ಠಾಣೆಗೆ, ಲೋಲಾಕ್ಷ ಕೆ, ಬಂಟ್ವಾಳ ಗ್ರಾಮಾಂತರ ಠಾಣೆಗೆ, ಹಬೈಮಾರ್ ಬಂಟ್ವಾಳ ನಗರ ಠಾಣೆಗೆ ಕೃಷ್ಣ ಬಿ, ಸಿಇಎನ್ ಠಾಣೆಗೆ, ಧನರಾಜ್ ಉಳ್ಳಾಲ ಸಂಚಾರ ಉತ್ತರ ಠಾಣೆಗೆ, ನರೇಂದ್ರ ಸಿಸಿಬಿಗೆ, ಕುಮಾರೇಶನ್ ಬಟ್ಟೆಗೆ, ಶೋಭಾ ಸಿಇಎನ್ ಮಂಗಳೂರು ನಗರ, ಹರೀಶ್ ಎಚ್.ವಿ. ಉರ್ಪ ಠಾಣೆಗೆ, ಯೋಗೇಶ್ವರನ್ ಪಿ. ಪೂರ್ವ ಠಾಣೆ ಮಂಗಳೂರು, ಜ್ಞಾನಶೇಖರ್ ಹಣಂಬೂರಿಗೆ,…
Author: main-admin
ಮಂಗಳೂರು: ನಗರದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮತ್ತೆ ಬಾಂಬ್ ಬೆದರಿಕೆಯ ಇ-ಮೇಲ್ ಬಂದಿದೆ. ಜೂ.18ರಂದು ಮಧ್ಯಾಹ್ನ 12:43ಕ್ಕೆ ವಿಮಾನ ನಿಲ್ದಾಣದ ಇ- ಮೇಲ್‌ಗೆ ಬೆದರಿಕೆ ಸಂದೇಶ ರವಾನೆಯಾಗಿದೆ. ಕೆಲವೇ ಕ್ಷಣಗಳಲ್ಲಿ ಬಾಂಬ್ ಸ್ಪೋಟಗೊಳ್ಳಲಿದೆ ಎಂದು ಸಂದೇಶ ರವಾನೆಯಾಗಿತ್ತು. ಆದ್ದರಿಂದ ವಿಮಾನ ನಿಲ್ದಾಣದ ಮುಖ್ಯ ಭದ್ರತಾ ಅಧಿಕಾರಿ ಬಜ್ಪೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ ಎಂದು ತಿಳಿದು ಬಂದಿದೆ. ಅಲ್ಲದೆ ಭದ್ರತಾ ಅಧಿಕಾರಿಗಳು ವಿಮಾನ ನಿಲ್ದಾಣದ ಆವರಣದಲ್ಲಿ ತಪಾಸಣೆ ನಡೆಸಿ, ಯಾವುದೇ ಆತಂಕವಿಲ್ಲ ಎಂದು ದೃಢಪಡಿಸಿದ್ದಾರೆ. ದೇಶದ ಇತರ 41 ವಿಮಾನ ನಿಲ್ದಾಣಗಳಿಗೂ ಇದೇ ರೀತಿಯ ಬೆದರಿಕೆ ಇ-ಮೇಲ್ ಮೂಲಕ ಬಂದಿವೆ ಎಂದು ತಿಳಿದು ಬಂದಿದೆ. ಈ ಹಿಂದೆ ಮಂಗಳೂರು ವಿಮಾನ ನಿಲ್ದಾಣಕ್ಕೆ 2024ರ ಎ. 29 ರಂದು ಮತ್ತು 2023ರ ಡಿ.26 ರಂದು ಬಾಂಬ್ ಬೆದರಿಕೆಯ ಇಮೇಲ್ ಬಂದಿತ್ತು.
ಚಿತ್ರದುರ್ಗ ಜಿಲ್ಲೆಯ 1647 ಬಾಲಕಿಯರು, ಹದಿನೆಂಟು ವರ್ಷದ ಹಿಂದೆ ರಾಜ್ಯದಲ್ಲಿ ಆರಂಭಗೊಂಡಿದ್ದ ಭಾಗ್ಯಲಕ್ಷ್ಮೀ ಯೋಜನೆಯ ತಲಾ ಒಂದು ಲಕ್ಷ ರೂ. ಲಾಭವನ್ನು ಪಡೆಯಲಿದ್ದಾರೆ. ಜಿಲ್ಲೆಯಲ್ಲಿಈ ಯೋಜನೆಯಡಿ ನೋಂದಾಯಿಸಿದ ಹದಿನೆಂಟು ವರ್ಷ ಪೂರ್ಣಗೊಂಡ ಏಪ್ರಿಲ್ ಮತ್ತು ಮೇ ತಿಂಗಳ ಅಂತ್ಯಕ್ಕೆ ಈ ಬಾಲಕಿಯರು ಯೋಜನೆಯ ಮೆಚ್ಯೂರಿಟಿ ಬೆನಿಫಿಷರ್‌ಗೆ ಅರ್ಹರಾಗಿದ್ದು, ಈ ಹಣ ಇನ್ನೆರಡು ತಿಂಗಳಲ್ಲಿಅರ್ಹ ಫಲಾನುಭವಿಗಳ ಖಾತೆಗೆ ಆದ್ಯತೆ ಮೇರೆಗೆ ಜಮೆ ಆಗಲಿದೆ. ಈಗಾಗಲೇ ಅಗತ್ಯ ದಾಖಲೆಗಳನ್ನು ಇಲಾಖೆಯು ಪಡೆಯಲು ಮುಂದಾಗಿದೆ. ಲಿಂಗಾನುಪಾತ ಉತ್ತಮ ಪಡಿಸಲು, ಹೆಣ್ಣು ಭ್ರೂಣ ಹತ್ಯೆ ತಡೆಯಲು, ಬಾಲ್ಯ ವಿವಾಹ ಪದ್ಧತಿಗೆ ಬ್ರೇಕ್ ಹಾಕಲು, ಹೆಣ್ಣು ಮಗುವಿನ ಶಿಕ್ಷಣ, ಆರೋಗ್ಯ ಮಟ್ಟ ಉತ್ತಮ ಪಡಿಸಿ ಸರ್ವಾಂಗೀಣ ಅಭಿವೃದ್ಧಿಯತ್ತ ಕೊಂಡೊಯ್ಯಲು ಬಡತನ ರೇಖೆಗಿಂತ ಕೆಳಗಿರುವ ಕುಟುಂಬದಲ್ಲಿ ಜನಿಸಿದ ಎರಡು ಹೆಣ್ಣು ಮಕ್ಕಳಿಗೆ ಸರಕಾರವು ನಿಶ್ಚಿತ ಠೇವಣಿ ಹೂಡಿ, ಈ ಮಗುವಿಗೆ ಹದಿನೆಂಟು ವರ್ಷ ಪೂರ್ಣಗೊಂಡ ನಂತರ ಬಡ್ಡಿ ಸಹಿತ ಪರಿಪಕ್ವ ಹಣ ನೀಡುವ ಸದುದ್ದೇಶದಿಂದ 2006-07 ರಲ್ಲಿ ಆರಂಭಗೊಂಡಿದ್ದ ಭಾಗ್ಯಲಕ್ಷ್ಮೀ…
ಮಡಿಕೇರಿ : ಹಳೆಯ ಕಟ್ಟಡವೊಂದು ಇದ್ದಕ್ಕಿದ್ದಂತೆ ಕುಸಿದು ಬಿದ್ದ ಪರಿಣಾಮ ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೊಡಗು ಜಿಲ್ಲೆಯ ಗೋಣಿಕೊಪ್ಪ ಪಟ್ಟಣದಲ್ಲಿ ನಡೆದಿದೆ. ಇಂದು ಮಧ್ಯಾಹ್ನ ಕಟ್ಟಡ ನೆಲಸಮಗೊಂಡಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಮೂವರನ್ನು ರಕ್ಷಿಸಿದ್ದಾರೆ. ತೀವ್ರವಾಗಿ ಗಾಯಗೊಂಡಿರುವ ಒಬ್ಬರನ್ನು ಮೈಸೂರು ಆಸ್ಪತೆಗೆ ಸ್ಥಳಾಂತರಿಸಲಾಗಿದೆ. ಇನ್ನೂ ಮೂವರು ಕಟ್ಟಡದ ಅವಶೇಷಗಳಡಿ ಸಿಲುಕಿರುವ ಶಂಕೆ ಇದ್ದು, ಕಾರ್ಯಾಚರಣೆ ಮುಂದುವರೆದಿದೆ. ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಕಟ್ಟಡದಲ್ಲಿದ್ದ ಮಳಿಗೆಯಲ್ಲಿ ಬಿರಿಯಾನಿ ಸೆಂಟರ್ ನಡೆಯುತ್ತಿತ್ತು.
ಮಂಗಳೂರು: ಮಂಗಳೂರು ತಾಲೂಕಿನ ಗಂಜಿಮಠದಲ್ಲಿ ಸ್ಥಾಪಿಸಲು ಉದೇಶಿಸಿರುವ ಪ್ಲಾಸ್ಟಿಕ್ ಪಾರ್ಕ್ ನಿರ್ಮಾಣಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ನಡೆಸುವಂತೆ ದಕ್ಷಿಣ ಕನ್ನಡ ಲೋಕಸಭಾ ಸದಸ್ಯ ಬ್ರ್ರಿಜೇಶ್ ಚೌಟ ಅವರು ಸೂಚಿಸಿದ್ದಾರೆ.ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೇಂದ್ರ ಸರಕಾರದ ಯೋಜನೆಗಳ ಅನುಷ್ಠಾನದ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. 104 ಎಕರೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ಪ್ಲಾಸ್ಟಿಕ್ ಪಾರ್ಕ್ ನಿರ್ಮಾಣ ಕಾಮಗಾರಿಯನ್ನು ಸಣ್ಣಪುಟ್ಟ ಸಮಸ್ಯೆಗಳಿಗಾಗಿ ಇಡೀ ಯೋಜನೆಯನ್ನು ಸ್ಥಗಿತಗೊಳಿಸಿರುವುದು ಸರಿಯಲ್ಲ. ಹಲವು ವರ್ಷಗಳ ಹಿಂದೆ ಕೇಂದ್ರ ರಾಸಾಯನಿಕ ಸಚಿವರಾಗಿದ್ದ ಅನಂತಕುಮಾರ್ ಅವರು ಜಿಲ್ಲೆಗೆ ಪ್ಲಾಸ್ಟಿಕ್ ಪಾರ್ಕ್ ಮಂಜೂರುಗೊಳಿಸಿದ್ದರು. ಪ್ರಸ್ತುತ 32 ಕೋಟಿ ರೂ. ಅನುದಾನ ಇದ್ದರೂ, ಕಾಮಗಾರಿ ಸ್ಥಗಿತಗೊಂಡಿರುವುದಕ್ಕೆ ಸಂಸದರು ಅತೃಪ್ತಿ ವ್ಯಕ್ತಪಡಿಸಿದರು.ಪ್ಲಾಸ್ಟಿಕ್ ಪಾರ್ಕ್ ನಿರ್ಮಾಣ ಜಿಲ್ಲೆಯ ಅಭಿವೃದ್ಧಿಗೆ ಮಹತ್ವದ ಯೋಜನೆಯಾಗಿದ್ದು, ನಿರ್ಮಾಣಗೊಂಡರೆ ಸಾವಿರಾರು ಮಂದಿಗೆ ಉದ್ಯೋಗ ದೊರಕಲಿದೆ. ಈ ನಿಟ್ಟಿನಲ್ಲಿ ಕ್ರಿಯಾಯೋಜನೆ ರಚಿಸಿ ಕಾಮಗಾರಿ ಮುಂದುವರಿಸುವಂತೆ ಸಂಸದರು ಸೂಚಿಸಿದರು.ಜಲಜೀವನ ಯೋಜನೆ: ಜಲಜೀವನ ಯೋಜನೆಯಡಿ ಮನೆ ಮನೆಗೆ ನೀರು ಸರಬರಾಜು ಮಾಡುವ ಯೋಜನೆಯ ಕಾಮಗಾರಿ ಪರಿಶೀಲಿಸಿದ ಅವರು, ಯೋಜನೆಯ…
ಉಪ್ಪಿನಂಗಡಿ: ಇಲ್ಲಿಗೆ ಸಮೀಪದ ಪೆರ್ನೆ ಗ್ರಾಮದ ಬಿಳಿಯೂರಿನ ದರ್ಖಾಸು ನಿವಾಸಿ ಹೇಮಾವತಿ (37) ಭಾನುವಾರ ತಡರಾತ್ರಿ ಕುತ್ತಿಗೆ ಹಿಸುಕಿ ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಅಪ್ರಾಪ್ತ ವಯಸ್ಕ ಬಾಲಕನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು 15 ದಿನಗಳಾವಧಿಗೆ ರಿಮಾಂಡ್ ಹೋಮ್ ಗೆ ಕಳುಹಿಸಿದೆ. ಹೇಮಾವತಿ ಅವರ ಮನೆಯಲ್ಲಿ ಘಟನೆಯ ರಾತ್ರಿ ತಂಗಿದ್ದ ಅಕ್ಕನ ಮಗ, ಹತ್ತನೇ ತರಗತಿ ವಿದ್ಯಾರ್ಥಿ, ಅಪ್ರಾಪ್ತ ಬಾಲಕ ಹೇಮಾವತಿ ಮಲಗಿದಲ್ಲಿಗೆ ಹೋಗಿ ದೇಹ ಸುಖ ಬಯಸಿದ್ದು, ಇದಕ್ಕೆ ಹೇಮಾವತಿಯವರು ಪ್ರತಿರೋಧ ವ್ಯಕ್ತಪಡಿಸಿದ್ದರೆನ್ನಲಾಗಿದೆ. ನಾಳೆ ತನ್ನ ಕೃತ್ಯವನ್ನು ನೆರೆಹೊರೆಯವರಿಗೆ ತಿಳಿಸಿದರೆ ತಾನು ಅವಮಾನಿತನಾಗುವ ಸಾಧ್ಯತೆ ಇದೆ ಎಂದು ಅಂಜಿಕೆಯಿಂದ ಈ ಬಾಲಕ ಆಕೆಯನ್ನು ಕೊಲ್ಲುವ ನಿರ್ಧಾರ ತಾಳಿದ್ದ. ಸುಮಾರು ಅರ್ಧ ಗಂಟೆಯ ಬಳಿಕ ನಿದ್ರೆಗೆ ಜಾರಿದ್ದ ಚಿಕ್ಕಮ್ಮನ ಕುತ್ತಿಗೆ ಹಿಸುಕಿ ಉಸಿರುಗಟ್ಟಿಸಿ ಕೊಲೆಗೈದಿದ್ದ. ಚಿಕ್ಕಮ್ಮ ಮೃತಪಟ್ಟಿರುವುದು ದೃಢವಾದೊಡನೆ ಆಕೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆಂದು ತಾನೇ ಮೊದಲಾಗಿ ತನ್ನ ತಂದೆಗೆ ತಿಳಿಸಿ ಪಾರಾಗಲು ಯತ್ನಿಸಿದ್ದ. ಆದರೆ ಕುತ್ತಿಗೆ ಹಿಸುಕಿದ ವೇಳೆ ಆಕೆ ಪ್ರಾಣ ರಕ್ಷಣೆಗಾಗಿ…
ಬೆಂಗಳೂರು: ನಟ ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳಿಗೆ ಪೊಲೀಸರು ಡಿಎನ್‌ಎ ಪರೀಕ್ಷೆಗೆ ಒಳಪಡಿಸಿದ್ದಾರೆ. ಅವರ ಮಾದರಿಯನ್ನು ವೈದ್ಯರು ಸಂಗ್ರಹಿಸಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿ ಪವಿತ್ರಾ ಗೌಡ, ಎ2 ಆರೋಪಿ ನಟ ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ಅನ್ನಪೂರ್ಣೇಶ್ವರಿ ನಗರ ಠಾಣೆಯ ಪೊಲೀಸರು ಕರೆದೊಯ್ದಿದ್ದಾರೆ. ಅಲ್ಲಿನ ವೈದ್ಯರು ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಎಲ್ಲಾ ಆರೋಪಿಗಳ ರಕ್ತ, ಕೂಲದಿನ ಮಾದರಿಯನ್ನು ಸಂಗ್ರಹಿಸುತ್ತಿದ್ದಾರೆ.
ಮುಂಬೈ: ಅಪ್ಪಂದಿರ ದಿನದ ಕಾರ್ಯಕ್ರಮದಲ್ಲಿ ಬಾಲಿವುಡ್ ನಟ ಸುನೀಲ್ ಶೆಟ್ಟಿಯವರು ತಮ್ಮ ತಂದೆ ವೀರಪ್ಪ ಶೆಟ್ಟಿಯವರ ಬಗ್ಗೆ ಭಾವನಾತ್ಮಕ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ’ಆಗ ಅವರ ವಯಸ್ಸು 9, ಚಿಕ್ಕ ವಯಸ್ಸಿನಲ್ಲೇ ಮಂಗಳೂರು ಬಿಟ್ಟು ಮುಂಬೈಗೆ ಓಡಿ ಬಂದ ನನ್ನ ಅಪ್ಪ ದಕ್ಷಿಣ ಭಾರತದ ಹೋಟೆಲ್ ವೊಂದರಲ್ಲಿ ಟೇಬಲ್ ಕ್ಲೀನರ್ ಆಗಿ ಕೆಲಸ ಆರಂಭಿಸಿದ್ದರು. ಆಗ ಅಪ್ಪ ಕೆಲಸ ಮಾಡ್ತಿದ್ದ ಮೂರು ಹೋಟೆಲ್‌ಗಳಿಗೆ ಇಂದು ನಾನು ಮಾಲೀಕನಾಗಿದ್ದೇನೆ ಮಂಗಳೂರು ಮೂಲದ ಖ್ಯಾತ ಬಾಲಿವುಡ್ ನಟ ಸುನೀಲ್ ಶೆಟ್ಟಿ ತಮ್ಮ ತಂದೆಯ ಬಗ್ಗೆ ಹಂಚಿಕೊಂಡಿದ್ದಾರೆ. ಚಿಕ್ಕವಯಸ್ಸಿನಲ್ಲೇ ನನ್ನ ಅಪ್ಪನ ತಂದೆ ಮರೆಯಾಗಿದ್ದು, ಕುಟುಂಬಕ್ಕೆ ಆಸರೆಯಾಗಿದ್ದರು. 9ನೇ ವಯಸ್ಸಿನಲ್ಲೇ ಮುಂಬೈಗೆ ಓಡಿ ಬಂದ ನನ್ನ ತಂದೆ ಮೊದಲಿಗೆ ದಕ್ಷಿಣ ಭಾರತದ ಹೋಟೆಲ್‌ವೊಂದರಲ್ಲಿ ಟೇಬಲ್ ಕ್ಲೀನರ್ ಆಗಿ ಕೆಲಸಕ್ಕೆ ಸೇರಿಕೊಂಡರು. ನಮ್ಮ ಸಮುದಾಯದಲ್ಲಿ ಆಗ ಪರಸ್ಪರ ಒಬ್ಬರಿಗೊಬ್ಬರು ಸಹಾಯ ಮಾಡ್ತಾ ಇದ್ದರು. ಹೀಗಾಗಿ ಹೋಟೆಲ್‌ನಲ್ಲಿ ಕ್ಲೀನರ್ ಆಗಿ ಕೆಲಸ ಸಿಕ್ಕಿತ್ತು. ಹೋಟೆಲ್ ಕೆಲಸ ಅಲ್ಲೇ ಕೆಲಸ ಮುಗಿಸಿ…
ಉಪ್ಪಿನಂಗಡಿ : ಸಮೀಪದ ಪೆರ್ನೆ ಗ್ರಾಮದ ಬಿಳಿಯೂರಿನ ದರ್ಖಾಸು ನಿವಾಸಿ ಹೇಮಾವತಿ (37) ಎಂಬವರು ರವಿವಾರ ತಡರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದರು. ಪ್ರಕರಣದ ಬೆನ್ನು ಹತ್ತಿದ ಪೊಲೀಸರು ಇದೀಗ ಮೃತ ಮಹಿಳೆಯ ಸಂಬಂಧಿ ಎಸ್ಎಸ್ಎಲ್‌ಸಿ ವಿದ್ಯಾರ್ಥಿಯನ್ನು ಬಂಧಿಸಿದ್ದಾರೆ. ಹೇಮಾವತಿ ಅವರ ಮನೆಗೆ ಬಂದಿದ್ದ ಅವರ ಸಹೋದರಿಯ ಪುತ್ರ, ಎಸ್ಎಸ್ಎಲ್‌ಸಿ ವಿದ್ಯಾರ್ಥಿ ರವಿವಾರ ರಾತ್ರಿ ತಂಗಿದ್ದ. ತಡರಾತ್ರಿ ವೇಳೆ ಈ ಅಪ್ರಾಪ್ತ ಹೇಮಾವತಿ ಮಲಗಿದಲ್ಲಿಗೆ ಹೋಗಿ ದೇಹಸುಖ ಬಯಸಿದ್ದಾನೆ. ಇದಕ್ಕೆ ಹೇಮಾವತಿ ಪ್ರತಿರೋಧ ವ್ಯಕ್ತಪಡಿಸಿದ್ದಾರೆ. ಈ ವೇಳೆ ಆರೋಪಿ ಬಾಲಕ ಅವರ ಕತ್ತು ಹಿಸುಕಿ ಕೊಲೆ ಮಾಡಿರುವುದಾಗಿ ತನಿಖೆ ವೇಳೆ ಬಾಲಕ ಬಾಯಿ ಬಿಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಘಟನೆ ಬಗ್ಗೆ ಹೇಮಾವತಿಯವರ ಪತಿ ವಿಠಲ ಪೈ ಉಪ್ಪಿನಂಗಡಿ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ. “ನನ್ನ ಪತ್ನಿ ಹೇಮಾವತಿ ಆಕೆಯ ತವರು ಮನೆಯಲ್ಲಿ ವಾಸ್ತವ್ಯವಿದ್ದಾಳೆ. ಆಕೆ ಮಲಗಿದಲ್ಲಿಯೇ ಮೃತಪಟ್ಟಿದ್ದಾಳೆ ಎಂದು ತನಗೆ ಮಾಹಿತಿ ಬಂದಿತ್ತು. ಆದರೆ ಪತ್ನಿಯ ಮೃತ ದೇಹದಲ್ಲಿ ಗಾಯದ ಗುರುತು ಬಗ್ಗೆ ಸಂಶಯ…
ಉತ್ತರ ಪ್ರದೇಶ: ಅಯೋಧ್ಯೆಯಲ್ಲಿ ರಾಮ ಮಂದಿರದ ಭದ್ರತೆಗೆ ನಿಯೋಜನೆಗೊಂಡಿದ್ದ ಎಸ್‌ಎಸ್‌ಎಫ್ ಯೋಧ ಗುಂಡಿನ ದಾಳಿಗೆ ಬಲಿಯಾಗಿರುವ ಘಟನೆ ಇಂದು ಬೆಳಗ್ಗೆ 5.25ಕ್ಕೆ ನಡೆದಿದೆ. ಶತ್ರುಘ್ನ ವಿಶ್ವಕರ್ಮ (25) ಮೃತಪಟ್ಟ ಸೈನಿಕ. ಅಂಬೇಡ್ಕರ್ ನಗರದ ನಿವಾಸಿ, ಗುಂಡಿನ ಸದ್ದು ಕೇಳಿದ ಬಳಿಕ ಸಹ ಸಿಬ್ಬಂದಿ ಅಲ್ಲಿಗೆ ಓಡೋಡಿ ಬಂದಿದ್ದಾರೆ, ಅಷ್ಟರಲ್ಲಾಗಲೆ ಯೋಧ ರಕ್ತದ ಮಡುವಿನಲ್ಲಿ ಬಿದ್ದಿದ್ದರು. ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದರು. ಯೋಧನ ಸಾವು ಅಯೋಧ್ಯೆ ದೇಗುಲ ಸಂಕೀರ್ಣದಲ್ಲಿ ಸಂಚಲನ ಮೂಡಿಸಿದೆ. ಘಟನಾ ಸ್ಥಳಕ್ಕೆ ಐಜಿ ಮತ್ತು ಎಸ್‌ಪಿ ಆಗಮಿಸಿದರು. ಅವರೇ ಘಟನಾ ಸ್ಥಳದಲ್ಲಿ ಪರಿಶೀಲನೆ ನಡೆಸಿದರು. ಫೋರೆನ್ಸಿಕ್ ತಂಡ ಕೂಡ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿತು. ಪ್ರಾಥಮಿಕ ತನಿಖೆಯಲ್ಲಿ ಇದನ್ನು ಆತ್ಮಹತ್ಯೆ ಎಂದು ಪರಿಗಣಿಸಲಾಗಿದೆ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ವರದಿ ಬಂದ ನಂತರ ಸಾವಿಗೆ ನಿಜವಾದ ಕಾರಣ ತಿಳಿಯಲಿದೆ. ಶತ್ರುಘ್ನ ವಿಶ್ವಕರ್ಮ 2019 ರ ಬ್ಯಾಚ್‌ನವರು. ಅವರು ಅಂಬೇಡ್ಕರ್ ನಗರದ ಸಮ್ಮನಪುರ ಪೊಲೀಸ್ ಠಾಣೆಯ…