ಸುಳ್ಯ : ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಕಾಂತಮಂಗಲ ಶಾಲಾ ಜಗಲಿಯಲ್ಲಿ ವ್ಯಕ್ತಿಯ ಕೊಲೆ ಪ್ರಕರಣವನ್ನು ಸುಳ್ಯ ಪೊಲೀಸರು ಭೇದಿಸಿದ್ದಾರೆ. ಕೃತ್ಯ ಎಸಗಿದ ಕಡಬ ತಾಲೂಕಿನ ಎಡಮಂಗಲದ ಉದಯ ಕುಮಾರ್ ನಾಯ್ಕ್ ಎಂಬ ಆರೋಪಿಯನ್ನು ಬಂಧಿಸಿದ್ದಾರೆ. ರವಿವಾರ ರಾತ್ರಿ ವಿರಾಜಪೇಟೆಯ ವಸಂತ (45) ಎಂಬ ವ್ಯಕ್ತಿಯ ತಲೆಗೆ ಕಲ್ಲು ಎತ್ತಿ ಹಾಕಿ ಕೊಲೆಗೈಯಲಾಗಿತ್ತು. ರವಿವಾರ ರಾತ್ರಿ ಕಾಂತಮಂಗಲಕ್ಕೆ ಆಟೋದಲ್ಲಿ ಬಂದು ಶಾಲಾ ಜಗಲಿಯಲ್ಲಿ ವಸಂತ ಮಲಗಿದ್ದ. ವಸಂತ ಬಳಿ 800 ರೂ. ಹಣ ಇರುವುದನ್ನು ಗಮನಿಸಿದ್ದ ಉದಯ, ಆತನ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿ ಹಣ ಹಾಗೂ ಮೊಬೈಲ್‌ನೊಂದಿಗೆ ಪರಾರಿಯಾಗಿದ್ದನು. ತನಿಖೆಗಿಳಿದ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಎಸ್.ಪಿ.ರಿಷ್ಯಂತ್ ಸಿ.ಬಿ., ಎ.ಎಸ್.ಪಿ. ರಾಜೇಂದ್ರ ಡಿ.ಎಸ್., ಪುತ್ತೂರು ಡಿವೈಎಸ್ಪಿ ಅರುಣ್ ನಾಗೇಗೌಡ ಮಾರ್ಗದರ್ಶನದಲ್ಲಿ ಸುಳ್ಯ ವೃತ್ತ ನಿರೀಕ್ಷಕ ಸತ್ಯನಾರಾಯಣ ನೇತೃತ್ವದಲ್ಲಿ ಕೊಲೆ ಪ್ರಕರಣ ಭೇದಿಸಲಾಗಿದೆ.
Author: main-admin
ಪುತ್ತೂರು : ನಗರದ ಹೊರವಲಯದ ಜಿಡೆಕಲ್ಲು ಕಾಲೇಜು ಸಮೀಪದ ಮನೆಯೊಂದರಲ್ಲಿ ರೆಫ್ರಿಜರೇಟರ್ ಸ್ಪೋಟಗೊಂಡ ಘಟನೆ ಸಂಭವಿಸಿದೆ. ಜಿಡೆಕಲ್ಲು ಕಾಲೇಜು ಸಮೀಪದ ಮೋನಪ್ಪ ಅವರ ಮನೆಯಲ್ಲಿ ಘಟನೆ ನಡೆದಿದೆ. ರೆಫ್ರಿಜರೇಟರ್ ಸ್ಫೋಟಗೊಂಡ ಹಿನ್ನೆಲೆ ಅಗ್ನಿ ಅವಘಡ ಸಂಭವಿಸಿದ್ದು, ಮನೆಯಲ್ಲಿ ಯಾರು ಇಲ್ಲದ ಕಾರಣ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.ಕಾಲೇಜು ವಿದ್ಯಾರ್ಥಿಗಳು ಹಾಗೂ ಸ್ಥಳೀಯರು ಬೆಂಕಿ ನಂದಿಸಲು ಯತ್ನಿಸಿದ್ದಾರೆ. ಅಗ್ನಿಶಾಮಕ ದಳದವರೂ ಸ್ಥಳಕ್ಕೆ ಆಗಮಿಸಿ ಕಾರ್ಯಾಚರಣೆ ನಡೆಸಿದ್ದಾರೆ.
ಸ್ನೇಹಿತೆ ಪವಿತ್ರಾ ಗೌಡ ಅವರಿಗೆ ರೇಣುಕಸ್ವಾಮಿ ಎನ್ನುವ ವ್ಯಕ್ತಿಯೊರ್ವ ಅಶ್ಲೀಲ ಸಂದೇಶ ಕಳಿಸಿದ್ದಾನೆ ಎಂದು ಹತ್ಯೆ ಮಾಡಿದ ಆರೋಪ ನಟ ದರ್ಶನ್ ಮತ್ತು ಅವರ ಗ್ಯಾಂಗ್ ಮೇಲಿದೆ. ಸದ್ಯ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. ಆದರೆ ಈ ಪ್ರಕರಣದ ಬೆನ್ನಲ್ಲೆ ದರ್ಶನ್ ಅವರ ಸುತ್ತ ಮತ್ತೊಂದು ಪ್ರಕರಣವು ಸುತ್ತಿಕೊಂಡಿದೆ ಎನ್ನಲಾಗಿದೆ. ನಟ ದರ್ಶನ್ ಅವರಿಗೆ ಸೇರಿದ್ದೆನ್ನಲಾದ ಫಾರ್ಮ್ ಹೌಸ್ ನಲ್ಲಿ ಮ್ಯಾನೇಜರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ದರ್ಶನ್ರ ಮ್ಯಾನೇಜರ್ ಆಗಿ ಕೆಲಸ ಮಾಡಿದ್ದ, ದರ್ಶನ್ರ ಆಪ್ತವಲಯದಲ್ಲಿ ಗುರುತಿಸಿಕೊಂಡಿದ್ದ ಶ್ರೀಧರ್ ಎಂಬುವರು ಏಪ್ರಿಲ್ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. ಮೃತ ಮ್ಯಾನೇಜರ್ ಶ್ರೀಧರ್ ಆಗಿದ್ದಾರೆ. ಕಳೆದ ಏಪ್ರಿಲ್ ತಿಂಗಳಿನಲ್ಲಿ ಮ್ಯಾನೇಜರ್ ಶ್ರೀಧರ್ ಆತ್ಮಹತ್ಯೆಗೆ ಶರಣಾಗಿದ್ದ. ಬಗ್ಗನದೊಡ್ಡಿಯಲ್ಲಿನ ದುರ್ಗ ಫಾರ್ಮ್ ಹೌಸ್‌ನಲ್ಲಿ ಶ್ರೀಧರ್ ಮ್ಯಾನೇಜರ್ ಆಗಿ ಕೆಲಸ ಮಾಡಿಕೊಂಡಿದ್ದನು. ಆತ, ಡೆತ್ ನೋಟ್ ಬರೆದಿಟ್ಟು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದನು. ಇನ್ನು ಶ್ರೀಧರ್ ಮೃತ ದೇಹವನ್ನು ನೋಡಿದ್ದ ಆತನ ಶ್ನೇಹಿತ ಪೊಲೀಸರಿಗೆ ಮಾಹಿತಿ ನೀಡಿದ್ದನು.…
ಉಡುಪಿಯಲ್ಲಿ ಮತ್ತೊಂದು ಗ್ಯಾಂಗ್ ವಾರ್ ಪ್ರಕರಣ ಬೆಳಕಿಗೆ ಬಂದಿದ್ದು, ಉಡುಪಿಯ ಪುತ್ತೂರಿನ ಬಿರಿಯಾನಿ ಪಾಯಿಂಟ್ ಬಳಿ ಎರಡು ಗುಂಡುಪುಗಳ ನಡುವೆ ಮಾರಾಮಾರಿ ನಡೆದಿದೆ. ಪುತ್ತೂರು ಸಲೂನ್ ನೌಕರ ಚರಣ್, ಶಬರಿ ಎಂಬಾತನಿಗೆ ಬೈದ ಹಿನ್ನೆಲೆಯಲ್ಲಿ ಇದೇ ವಿಚಾರವಾಗಿ ಪ್ರವೀನ್ ಹಾಗೂ ಗ್ಯಾಂಗ್ ಚರಣ್ ನನ್ನು ಮಾತುಕತೆಗೆಂದು ಪುತ್ತೂರಿನ ಬಿರಿಯಾನಿ ಪಾಯಿಂಟ್ ಬಳಿ ಕರೆದಿದೆ. ಈ ವೇಳೆ ಚರಣ್ ತನ್ನ ಮೂವರು ಸ್ನೇಹಿತರೊಂದಿಗೆ ಬಂದಿದ್ದ. ಇದೇ ವೇಳೆ ಪ್ರವೀಣ್ ಹಾಗೂ ಗ್ಯಾಂಗ್ ಚರಣ್ & ಸ್ನೇಹಿತರ ಮೇಲೆ ತಲವಾರಿನಿಂದ ದಾಳಿ ನಡೆಸಿದೆ. ಘಟನೆ ಸಂಬಂಧ ಉಡುಪಿ ನಗರ ಠಾಣೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳ ಪತ್ತೆಗಾಗಿ ಪೊಲೀಶರು ಬಲೆ ಬೀಸಿದ್ದಾರೆ.
ಕಾಸರಗೋಡು: ಅವಳಿ ಸಹೋದರರಿಬ್ಬರು ಕಲ್ಲಿನ ಕ್ವಾರಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಸೋಮವಾರ ಸಂಜೆ ಚೀಮೇನಿ ಕನಿಯಾಂದಲದಲ್ಲಿ ನಡೆದಿದೆ.ಚೀಮೇನಿ ಕನಿಯಾಂದಲದಲ್ಲಿ ರಾಧಾಕೃಷ್ಣ ರವರ ಮಕ್ಕಳಾದ ಸುದೇವ್ ( 10) ಮತ್ತು ಶ್ರೀದೇವಿ ( 10) ಮೃತಪಟ್ಟವರು. ಚೀಮೇನಿ ಸರಕಾರಿ ಹಯರ್ ಸೆಕಂಡರಿ ಶಾಲೆಯ ಐದನೇ ತರಗತಿ ಯ ವಿದ್ಯಾರ್ಥಿಗಳಾಗಿದ್ದರು. ‘ಸಂಜೆ ಸುಮಾರು ಆರು ಗಂಟೆ ಸುಮಾರಿಗೆ ಘಟನೆ ಬೆಳಕಿಗೆ ಬಂದಿದೆ.ಮಧ್ಯಾಹ್ನ ಇಬ್ಬರೂ ಸೈಕಲ್ ನಲ್ಲಿ ಆಟವಾಡಲು ತೆರಳಿದ್ದು , ತಡವಾದರೂ ಆಗಮಿಸದ ಹಿನ್ನಲೆಯಲ್ಲಿ ಮನೆಯವರು ಹುಡುಕಾಟ ನಡೆಸಿದಾಗ ಕ್ವಾರಿಯ ಸಮೀಪ ಸೈಕಲ್ ಪತ್ತೆಯಾಗಿದೆ. ಸಂಶಯಗೊಂಡು ಮನೆಯವರು ಹಾಗೂ ಪರಿಸರವಾಸಿಗಳು ಶೋಧ ನಡೆಸಿದಾಗ ಕ್ವಾರಿಗೆ ಬಿದ್ದಿರುವುದು ಕಂಡುಬಂದಿದೆ.ಇಬ್ಬರನ್ನು ಮೇಲಕ್ಕೆತ್ತಿ ಸಮೀಪದ ಆಸ್ಪತ್ರೆಗೆ ತಲಪಿಸಿದರೂ ಇಬ್ಬರೂ ಮೃತಪಟ್ಟಿದ್ದರು.ಮೃತದೇಹವನ್ನು ಕಣ್ಣೂರು ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ
ಅಸ್ಸಾಂನ ಸಿಲ್ಚಾರ್ನಲ್ಲಿ ಮಹಿಳೆಯೊಬ್ಬಳು ತನ್ನ 20 ತಿಂಗಳ ಮಗುವಿಗೆ ಸಿಗರೇಟ್ ಸೇದಲು ಮತ್ತು ಮದ್ಯಪಾನ ಮಾಡಲು ಒತ್ತಾಯಿಸಿದ ಘಟನೆ ನಡೆದಿದೆ. ವರದಿಗಳ ಪ್ರಕಾರ, ಬುಧವಾರ ರಾತ್ರಿ ಸಿಲ್ಚಾರ್ನ ಚೆಂಗ್ಕುರಿಯಲ್ಲಿ ಆಘಾತಕಾರಿ ಘಟನೆ ನಡೆದಿದೆ. ವರದಿಗಳ ಪ್ರಕಾರ, ಸ್ಥಳೀಯ ಮಕ್ಕಳ ಸಹಾಯವಾಣಿ ಕೋಶವು ಮಹಿಳೆಯ ಬಗ್ಗೆ ದೂರು ಮತ್ತು ಛಾಯಾಚಿತ್ರಗಳನ್ನು ಸ್ವೀಕರಿಸಿದೆ. ದೂರಿನ ನಂತರ, ಪೊಲೀಸರು ಮಹಿಳೆಯ ನಿವಾಸಕ್ಕೆ ತಲುಪಿ, ಮಗುವನ್ನು ರಕ್ಷಿಸಿ, ತಾಯಿಯನ್ನು ವಿಚಾರಣೆಗಾಗಿ ವಶಕ್ಕೆ ತೆಗೆದುಕೊಂಡಿದ್ದಾರೆ. ಮಾಧ್ಯಮಗಳಿಗೆ ನೀಡಿದ ಹೇಳಿಕೆಯಲ್ಲಿ, ಮಕ್ಕಳ ಸಹಾಯವಾಣಿ ಅಧಿಕಾರಿಗಳು ಬುಧವಾರ ರಾತ್ರಿ ಸಿಲ್ಚಾರ್ನ ಚೆಂಗ್ಕುರಿಯಲ್ಲಿ ತಾಯಿಯೊಬ್ಬಳು ತನ್ನ ಮಗುವನ್ನು ಧೂಮಪಾನ ಮತ್ತು ಮದ್ಯಪಾನ ಮಾಡುವಂತೆ ಮಾಡುವ ಮೂಲಕ ನಿಂದಿಸುತ್ತಿರುವ ಬಗ್ಗೆ ತಿಳಿದ ನಂತರ, ಪೊಲೀಸರಿಗೆ ಮಾಹಿತಿ ನೀಡಲಾಯಿತು, ಅವರು ಸೂಕ್ತ ಕ್ರಮ ಕೈಗೊಂಡು ತಾಯಿಯನ್ನು ವಶಕ್ಕೆ ತೆಗೆದುಕೊಂಡು ಮಗುವನ್ನು ರಕ್ಷಿಸಿದ್ದಾರೆ ಎಂದು ಹೇಳಿದರು. ಪ್ರಸ್ತುತ, ತಾಯಿ ಮತ್ತು ಮಗು ಮಕ್ಕಳ ಕಲ್ಯಾಣ ಸಮಿತಿಯ (ಸಿಡಬ್ಲ್ಯೂಸಿ) ವಶದಲ್ಲಿದ್ದಾರೆ ಮತ್ತು ಸಮಗ್ರ ತನಿಖೆಯ ನಂತರ, ದೃಶ್ಯ ಪುರಾವೆಗಳನ್ನು…
ಪುತ್ತೂರು : ವಿದ್ಯುತ್ ತಗುಲಿ ಯುವಕನೊಬ್ಬ ಸಾವನಪ್ಪಿದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಕಡಬ ತಾಲೂಕಿನ ಪಂಜದಲ್ಲಿ ನಡೆದಿದೆ. ಮೃತರನ್ನು ಬೆಳ್ತಂಗಡಿಯ ಮೊಗ್ರು ಸಮೀಪದ ನಡುಎರ್ಮಲ್ ನ ಪ್ರಕಾಶ್(29) ಎಂದು ಗುರುತಿಸಲಾಗಿದೆ. ಅಲೆಕ್ಕಾಡಿ ಸಮೀಪದ ಪಿಜಾವ್ ನಲ್ಲಿ ವಿದ್ಯುತ್ ಕಂಬ ಏರಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಸಾವನಪ್ಪಿದ್ದಾರೆ. ಇವರು ಗುತ್ತಿಗೆದಾರರ ಅಡಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು: ರಾಜ್ಯ ಸರಕಾರದ ತೈಲ ಬೆಲೆಯೇರಿಕೆಯನ್ನು ಖಂಡಿಸಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಪೆಟ್ರೋಲ್ ಬಂಕ್‌ವರೆಗೆ ಸ್ಕೂಟರ್, ಕಾರನ್ನು ತಳ್ಳಿಕೊಂಡು ಹೋಗಿ ಭಿಕ್ಷೆಯೆತ್ತಿ ವಿನೂತನ ಪ್ರತಿಭಟನೆ ನಡೆಸಿತು. ನಗರದ ಕೊಡಿಯಾಲಬೈಲ್‌ನಲ್ಲಿರುವ ಬಿಜೆಪಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ “ಚೊಂಬು, ಗೆರಟೆ” ಪ್ರದರ್ಶಿಸಿ ರಾಜ್ಯ ಕಾಂಗ್ರೆಸ್ ಸರಕಾರದ ಬೆಲೆಯೇರಿಕೆಯನ್ನು ಖಂಡಿಸಲಾಯಿತು. ಈ ವೇಳೆ “ಚೊಂಬು ಚೊಂಬು ಪಂಡೆರ್ ಒಟ್ಟೆ ತಿಪ್ಪಿ ಕೊರಿಯೆರ್, ಟಕಾ ಟಕ್ ಟಕಾ ಟಕ್ ಪಂಡೆರ್ ಖಾಲಿ ಚೊಂಬು ಕೊರಿಯೆರ್” ಎಂಬ ಘೋಷಣೆಗಳು ಕೇಳಿ ಬಂತು. ಬಳಿಕ ಬಿಜೆಪಿ ಕಚೇರಿ ಮುಂಭಾಗದಿಂದ ಅರ್ಧ ಕಿ.ಮೀ. ದೂರದ ಪೆಟ್ರೋಲ್ ಬಂಕ್ ಗೆ ಸ್ಕೂಟರ್ ಗಳನ್ನು ತಳ್ಳಿಕೊಂಡು, ಕಾರನ್ನು ಹಗ್ಗ ಕಟ್ಟಿ ಎಳೆದುಕೊಂಡು ತರಲಾಯಿತು. ಅಲ್ಲಿ ಭಿಕ್ಷೆಯೆತ್ತಿ ಹಣ ಸಂಗ್ರಹಿಸಲಾಯಿತು. ಬಳಿಕ ಗೆರಟೆಯಲ್ಲಿ, ಚೊಂಬುವಿನಲ್ಲಿ ಪೆಟ್ರೋಲ್ ಹಾಕಿಸಿ ಕಾರು, ಸ್ಕೂಟರ್ ಗೆ ತುಂಬಿಸಲಾಯಿತು. ಪ್ರತಿಭಟನೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸಂಸದ ಬ್ರಿಜೇಶ್ ಚೌಟ, ದ.ಕ.ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಶಾಸಕರಾದ ವೇದವ್ಯಾಸ ಕಾಮತ್,…
ಸುಳ್ಯ: ಯುವಕನೊಬ್ಬನ ತಲೆಗೆ ಕಲ್ಲು ಹೊತ್ತು ಹಾಕಿ ಕೊಲೆ ಮಾಡಿರುವ ರೀತಿಯಲ್ಲಿ ಶವ ಪತ್ತೆಯಾದ ಘಟನೆ ಸುಳ್ಯ ತಾಲೂಕಿನ ಅಜ್ಞಾವರ ಗ್ರಾಮದ ಕಾಂತಮಂಗಲದಲ್ಲಿ ನಡೆದಿದೆ. ಮೃತ ವ್ಯಕ್ತಿಯ ವಯಸ್ಸು ಸುಮಾರು 25-30 ವರ್ಷ ಎಂದು ಅಂದಾಜಿಸಲಾಗಿದ್ದು ಸುಳ್ಯ ಪೊಲೀಸರು ಸ್ಥಳಕ್ಕೆ ತೆರಳಿ ಮಹಜರು ನಡೆಸುತಿದ್ದಾರೆ. ಕೆಲವು ದಿನಗಳ ಹಿಂದೆಯಷ್ಟೇ ಬೆಳ್ಳಾರೆಯಲ್ಲಿಯೂ ಕೂಡ ಇದೇ ರೀತಿ ಮಹಿಳೆಯನ್ನು ಕಲ್ಲು ಹೊತ್ತು ಹಾಕಿ ಕೊಲೆ ಮಾಡಿದ್ದ ಘಟನೆ ನಡೆದಿದ್ದು ಇದಕ್ಕೆ ಸಂಬಂಧಪಟ್ಟ ಆರೋಪಿಯನ್ನು ಈಗಾಗಲೇ ಪೊಲೀಸರು ಬಂಧಿಸಿದ್ದು, ಇದೀಗ ಮತ್ತೆ ಅದೇ ರೀತಿಯ ಘಟನೆ ನಡೆದಿದ್ದು ಸ್ಥಳೀಯರಲ್ಲಿ ಆತಂಕ ಹೆಚ್ಚಾಗಿದೆ. ಪೊಲೀಸರ ತನಿಖೆಯಿಂದ ಘಟನೆಯ ಪೂರ್ಣ ಮಾಹಿತಿ ತಿಳಿಯಲಿದ್ದು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಮಂಗಳೂರು: ಬಸ್ ಚಾಲಕನ ಚಾಣಾಕ್ಷತನ, ಧೈರ್ಯದ ನಿರ್ಧಾರದಿಂದಾಗಿ ದುರಂತವೊಂದು ತಪ್ಪಿ ಹತ್ತಾರಿ ಮಂದಿ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಕಂಕನಾಡಿಯಿಂದ ಆಕಾಶಭವನಕ್ಕೆ ತೆರಳುವ 60 ಸಂಖ್ಯೆಯ ಸಿಟಿ ಬಸ್ ಶನಿವಾರ ಬೆಳಗ್ಗೆ 8.45ರ ಸುಮಾರಿಗೆ ಕೊಂಚಾಡಿ ವಿದ್ಯಾ ಶಾಲೆ ಬಳಿಯ ತಗ್ಗಾದ ರಸ್ತೆ ತಲುಪುವ ಕೆಲವೇ ಕ್ಷಣಗಳ ಮೊದಲು ಬಸ್‌ನ ಬ್ರೇಕ್‌ನಲ್ಲಿ ಸಮಸ್ಯೆ ಉಂಟಾಯಿತು. ಚಾಲಕ ಗ್ಲೆನ್ ಸಿಕ್ವೇರಾ ಬ್ರೇಕ್ ಪೆಡಲ್ ಅನ್ನು ಎಷ್ಟು ಬಲವಾಗಿ ತುಳಿದರೂ ಬ್ರೇಕ್ ಹಿಡಿಯಲಿಲ್ಲ. ಕೂಡಲೇ ಹೇಗಾದರೂ ಬಸ್ ಅನ್ನು ನಿಲ್ಲಿಸಲೇಬೇಕೆಂದು ಧೈರ್ಯ ಮಾಡಿದ ಅವರು ರಸ್ತೆ ಬದಿ ಪಾರ್ಕ್ ಮಾಡಿದ್ದಸ್ಕೂಟರ್‌ಗೆ ಢಿಕ್ಕಿ ಹೊಡೆಸಿ ನಿಲ್ಲಿಸುವ ಯತ್ನ ನಡೆ ಸಿದರು. ಆದರೂ ಬಸ್ ನಿಲ್ಲಲಿಲ್ಲ. ಅಷ್ಟರಲ್ಲೇ ಬಸ್‌ನಲ್ಲಿದ್ದ ಪ್ರಯಾಣಿಕರು ಆತಂಕದಿಂದ ಬೊಬ್ಬೆ ಹಾಕಲು ಆರಂಭಿಸಿದರು. ಧೈರ್ಯ ಕಳೆದುಕೊಳ್ಳದ ಗ್ಲೆನ್ ಬಸ್ ಅನ್ನು ಮತ್ತೆ ಬಲಕ್ಕೆ ತಿರುಗಿಸಿ ಡಿವೈಡರ್‌ಗೆ ಢಿಕ್ಕಿ ಹೊಡೆದು ನಿಲ್ಲಿಸಲು ಯತ್ನಿಸಿದರು. ಈ ನಡುವೆ ಹಂಪ್ಸ್ ಮೇಲೆಯೂ ಬಸ್ ಹಾಯಿಸಿದರು. ಕೊನೆಗೆ ಬಸ್ ಡಿವೈಡರ್‌ಗೆ ಢಿಕ್ಕಿ ಹೊಡೆದು ನಿಂತಿತು.…